ಮಂಗಳೂರು: ಷೇರು ಟ್ರೇಡಿಂಗ್‌ನಲ್ಲಿ ಹಣ ತೊಡಗಿಸಿದರೆ 500% ಲಾಭಾಂಶ ಬರುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ 46 ಲಕ್ಷ ರೂ. ವಂಚಿಸಿರುವ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತ ವ್ಯಕ್ತಿಯ ವಾಟ್ಸ್‌ಆ್ಯಪ್‌ಗೆ ಶ್ರದ್ಧಾ ಬೆಲಾನಿ ಎಂಬ ಅಪರಿಚಿತಳು ARES MANAGEMENT CORPORATION ಪರವಾಗಿ ಷೇರು ಟ್ರೇಡಿಂಗ್‌ನಲ್ಲಿ ಹಣ ತೊಡಗಿಸಿದರೆ 500% ಲಾಭಾಂಶ ಬರುವುದಾಗಿ ನಂಬಿಸಿದ್ದಳು. ಅದರಂತೆ https://play.google.someco.shop/com.rehvu.dqlgdf/install.html ಎಂಬ ಲಿಂಕ್ ಒತ್ತಿ ರಿಜಿಸ್ಟ್ರೇಷನ್ ಮಾಡಿಕೊಂಡಿದ್ದರು. ಬಳಿಕ ಅವರು H 777 ARES Stock Exchange Group ಎಂಬ ವಾಟ್ಸಾಪ್ ಗ್ರೂಪ್‌ಗೆ ಸೇರಿಸಿದ್ದರು. ಗ್ರೂಪ್‌ನಲ್ಲಿ ಶ್ರದ್ಧಾ ಬೆಲಾನಿ ಗ್ರೂಪ್ ಅಡ್ಮಿನ್ ಆಗಿದ್ದು, ಈ ಟ್ರೇಡ್‌ನಲ್ಲಿ ಅಭಿಷೇಕ್ ರಾಮ್ ಜೀ ಚೀಫ್ ಆಗಿರುತ್ತಾರೆ. ಮೊದಲಿಗೆ ಸ್ಟಾಕ್ ಪರ್ಚೇಸ್ ಮಾಡಲು ತನ್ನ ಬ್ಯಾಂಕ್‌ನಿಂದ 2 ಲಕ್ಷ ಹಣವನ್ನು ಆರ್‌ಟಿಜಿಎಸ್ ಮಾಡಿದ್ದರು. ಮರುದಿನ ಆ ಸ್ಟಾಕ್‌ನ್ನು ಸೇಲ್ ಮಾಡಿದ್ದು, ಇದರಿಂದ 50,000 ರೂ. ಲಾಭವಾಗಿ ಬಂದಿರುತ್ತದೆ. ಇದನ್ನು ನಂಬಿದ ಇವರು ಇನ್ನು ಹೆಚ್ಚಿನ ಲಾಭ ಪಡೆಯುವ…
Author: main-admin
ಉಳ್ಳಾಲ: ಮನೆಯೊಳಗಡೆ ಭಾರೀ ಸ್ಫೋಟವುಂಟಾಗಿ ತಾಯಿ ಹಾಗೂ ಮೂವರು ಹೆಣ್ಮಕ್ಕಳು ಗಂಭೀರ ಸುಟ್ಟ ಗಾಯಗಳಿಂದ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ಅಡುಗೆ ಗ್ಯಾಸ್ ಸಿಲಿಂಡರ್ ಸ್ಫೋಟಿಸಿ ಘಟನೆ ಸಂಭವಿಸಿದೆ ಎನ್ನಲಾಗಿದೆ. ಶನಿವಾರ ಮಧ್ಯರಾತ್ರಿ ನಾಟೆಕಲ್ ಮಂಜನಾಡಿ ಎಂಬಲ್ಲಿ ಘಟನೆ ಸಂಭವಿಸಿದೆ. ಮಂಜನಾಡಿಯ ಖಂಡಿಕ ನಿವಾಸಿ ವಿದೇಶದಲ್ಲಿರುವ ಮುತ್ತಲಿಬ್ ಎಂಬವರ ಮನೆಯಲ್ಲಿ ಸ್ಫೋಟ ನಡೆದಿದೆ. ಮುತ್ತಲಿಬ್ ಪತ್ನಿ ಖುಬ್ರಾ ಮತ್ತು ಮೂವರು ಮಕ್ಕಳಾದ ಮೆಅದಿಯಾ, ಮಝಿಯಾ, ಮಾಯಿದಾ ಅವರು ಒಂದೇ ಕೊಠಡಿಯಲ್ಲಿ ಮಲಗಿದ್ದರು. ಮಧ್ಯರಾತ್ರಿ ವೇಳೆ ಮನೆಯೊಳಗಡೆ ಭಾರೀ ಸ್ಫೋಟದ ಸದ್ದು ಕೇಳಿಸಿದೆ. ಸ್ಫೋಟದ ತೀವ್ರತೆಗೆ ತಾರಸಿ ಮನೆಯ ಮೇಲ್ಭಾಗದ ಸಿಮೆಂಟ್ ಶೀಟ್ ಮೇಲ್ಛಾವಣಿ ಸಂಪೂರ್ಣ ಹಾರಿ ಹೋಗಿದೆ. ತಾಯಿ ,ಮಕ್ಕಳು ಮಲಗಿದ್ದ ಕೊಠಡಿ, ಮಂಚ, ಕಿಟಕಿ ಸಂಪೂರ್ಣ ಛಿಧ್ರಗೊಂಡು ಸುಟ್ಟು ಕರಕಲಾಗಿದೆ. ಈ ಸಂದರ್ಭ ತಾಯಿ ಜೊತೆ ಮಲಗಿದ್ದ ಹಿರಿ ಮಗಳು ಬಾಗಿಲು ತೆರೆದಿದ್ದಾಳೆ. ತಕ್ಷಣ ನೆರವಿಗೆ ಧಾವಿಸಿದ ಸ್ಥಳೀಯರು ಬೆಂಕಿ ನಂದಿಸಿ, ಗಂಭೀರ ಸ್ಥಿತಿಯಲ್ಲಿದ್ದ…
ಮಂಗಳೂರು: ನಗರದ ಕೆಂಜಾರಿನಲ್ಲಿರುವ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಸಾಗಾಟದ 50 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು ಇ-ಸಿಗರೇಟ್ ಅನ್ನು ಕಸ್ಟಮ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಡಿಸೆಂಬರ್ 1ರಂದು IX832/IX814 ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಮೂಲಕ ದುಬೈನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಕೇರಳದ ಕಾಸರಗೋಡಿನ ನಿವಾಸಿಗಳಾದ ಇಬ್ಬರು ಪ್ರಯಾಣಿಕರು ಅನುಮಾನಾಸ್ಪದವಾಗಿ ವಿಮಾನ ನಿಲ್ದಾಣದಲ್ಲಿ ವರ್ತಿಸಿದ್ದರು. ಇವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸ್ಮಗ್ಲಿಂಗ್ ಬೆಳಕಿಗೆ ಬಂದಿದೆ. ಇಬ್ಬರಿಂದ ಅಕ್ರಮ ಸಾಗಾಟದ ಚಿನ್ನ ಮತ್ತು ಇ-ಸಿಗರೇಟ್ ವಶಪಡಿಸಲಾಗಿದೆ. ಓರ್ವ ಪ್ರಯಾಣಿಕನಿಂದ 24ಕ್ಯಾರಟ್ ಶುದ್ಧತೆಯ ಚಿನ್ನವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಈತನಿಂದ 625ಗ್ರಾಂ ತೂಕದ 48,75,000 ರೂಪಾಯಿ ಮೌಲ್ಯದ ಚಿನ್ನ ವಶಪಡಿಸಲಾಗಿದೆ. ಇನ್ನೊರ್ವ ಪ್ರಯಾಣಿಕನಿಂದ 1,41,134 ರೂಪಾಯಿ ಮೌಲ್ಯದ ಇ-ಸಿಗರೇಟ್‌ಗಳನ್ನು ವಶಪಡಿಸಲಾಗಿದೆ.
ಕುಕ್ಕೆ ಸುಬ್ರಹ್ಮಣ್ಯದಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್‌ನ ಚಾಲಕ ಎದೆನೋವಿನಿಂದ ಅಸ್ವಸ್ಥಗೊಂಡ ಘಟನೆ ನಡೆದಿದೆ.ಕಡಬ ತಾಲೂಕಿನ ಆತೂರು ಎಂಬಲ್ಲಿ ಈ ಘಟನೆ ನಡೆದಿದ್ದು, ವೇಗವಾಗಿ ಬರುತ್ತಿದ್ದ ಬಸ್ ಇದ್ದಕ್ಕಿದ್ದಂತೆ ನಿಧಾನಗೊಂಡಿದೆ. ಈ ವೇಳೆ ಜಾಗೃತಗೊಂಡ ನಿರ್ವಾಹಕ ಚಾಲಕನತ್ತ ಗಮನಿಸಿದ್ದು, ಚಾಲಕ ಎದೆನೋವಿನಲ್ಲಿ ಒದ್ದಾಡುವುದು ಕಂಡಿದೆ. ತಕ್ಷಣ ಕಾರ್ಯಪ್ರವೃತ್ತರಾದ ನಿರ್ವಾಹಕ ಚಾಲಕನ ಮೂಲಕ ಬಸ್ ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಅವರನ್ನು ಸೀಟೊಂದರಲ್ಲಿ ಮಲಗಿಸಿ ತಾನೇ ಬಸ್ ಚಲಾಯಿಸಿಕೊಂಡು ಉಪ್ಪಿನಂಗಡಿ ತನಕ ಕರೆ ತಂದಿದ್ದಾರೆ. ಉಪ್ಪಿನಂಗಡಿಯಲ್ಲಿ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆ ತರಲಾಗಿದೆ. ಬಸ್ ನಲ್ಲಿ ಮೂವತ್ತು ಜನ ಪ್ರಯಾಣಿಕರಿದ್ದು, ಬಸ್ ನಿರ್ವಾಹಕನ ಸಮಯಪ್ರಜ್ಞೆಯನ್ನು ಮೆಚ್ಚಿಕೊಂಡಿದ್ದಾರೆ. ಬಸ್ ಚಾಲಕ ಗಣಪತಿ ಅವರು ಸದ್ಯ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಪೂರ್ಣವಾಗಿಗಾಂಜಾ ದಂಧೆಯನ್ನು ನಿಷೇಧಿಸಲು ಇಲಾಖೆಗಳು ಜಂಟಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಎಂ.ಪಿ. ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಸೂಚನೆ ನೀಡಿದ್ದಾರೆ.ಶಿಕ್ಷಣ ಸಂಸ್ಥೆಗಳಲ್ಲಿ ಸಂಪೂರ್ಣವಾಗಿ ಡ್ರಗ್ಸ್ ಜಾಲವನ್ನು ನಿಷೇಧಿಸಲು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಡ್ರಗ್ಸ್ ಚಟದಲ್ಲಿ ಭಾಗಿಯಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ವಿದ್ಯಾರ್ಥಿಗಳ ಚಲನವಲನಗಳನ್ನು ಆಪ್ತ ಸಮಾಲೋಚಕರನ್ನಿಟ್ಟುಕೊಂಡು ಗಮನಿಸಿ, ವಿದ್ಯಾರ್ಥಿಗಳ ಮನಃಪರಿವರ್ತನೆ ಹಾಗೂ ಅವರಿಗೆ ಎಲ್ಲಿಂದ ಡ್ರಗ್ಸ್ ಲಭ್ಯವಾಗುತ್ತಿದೆ ಎಂಬುವುದರ ಬಗ್ಗೆ ಮಾಹಿತಿ ತಿಳಿದುಕೊಳ್ಳಬೇಕು. ಇದರಿಂದ ಪೊಲೀಸರ ಕಾರ್ಯಾಚರಣೆಯು ಸುಲಭ ಎಂದು ಅವರು ತಿಳಿಸಿದರು.
ಮಂಗಳೂರು: ಹಲ್ಲೆಗೆ ಪ್ರತೀಕಾರಕ್ಕೆ ನಡೆದ ತಲವಾರ ದಾಳಿ ನಡೆಸಿದ್ದರೆನ್ನಲಾದ ಪ್ರಕರಣದಲ್ಲಿ ಬಜರಂಗದಳದ ಸಂಯೋಜಕ ಅರ್ಜುನ್ ಮಾಡೂರುನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ತೊಕ್ಕೊಟ್ಟುವಿನ ಮೇಲ್ಸೇತುವೆಯಲ್ಲಿ ಅ.16ರಂದು ರಾತ್ರಿ ಕುಂಪಲದ ಶರತ್, ಕೇರಳದ ಇಬ್ರಾಹಿಂ ಖಲೀಲ್ ಅವರ ಕಾರುಗಳ ನಡುವೆ ನಡೆದಿದ್ದ ಸಣ್ಣ ಅಪಘಾತ ಪ್ರಕರಣವು ಉಳ್ಳಾಲ ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತು. ಶರತ್ ಸ್ನೇಹಿತ ಅರ್ಜುನ್ ಮಾಡೂರು ಉಳ್ಳಾಲ ಪೊಲೀಸ್ ಠಾಣೆಗೆ ಭೇಟಿ ನೀಡಿ ಇನ್‌ಸ್ಪೆಕ್ಟರ್ ಕೊಠಡಿಯೊಳಗೆ ಕಾರು ಚಾಲಕರಾದ ಶರತ್, ಖಲೀಲ್‌ರೊಂದಿ ಸಂಧಾನ ನಡೆಸುತ್ತಿದ್ದ ವೇಳೆ ಖಲೀಲ್ ಸಹೋದರ ಹೊಸಂಗಡಿ ಕಡಂಬಾರು ನಿವಾಸಿ ಮಹಮ್ಮದ್ ಆಸಿಫ್ ಎಂಬಾತ ಅರ್ಜುನ್ ಮಾಡೂರಿಗೆ ಏಕಾಏಕಿ ಹಲ್ಲೆ ನಡೆಸಿದ್ದ. ಅರ್ಜುನ್ ಮಾಡೂರು ಹಲ್ಲೆಗೈದಿದ್ದ ಆರೋಪಿ ಮಹಮ್ಮದ್ ಆಸಿಫ್ ಜಾಮೀನಿನಲ್ಲಿ ಜೈಲಿನಿಂದ ಹೊರಬರುತ್ತಲೇ ಪ್ರತೀಕಾರ ತೀರಿಸಲು ಆತನ ಮೇಲೆ ತಲವಾರು ದಾಳಿಗೆ ಯತ್ನಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು. ಇದೀಗ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿ ಅರ್ಜುನ್ ಮಾಡೂರುನನ್ನು ಉಳ್ಳಾಲ ಪೊಲೀಸರು…
ಮಂಗಳೂರು: ಹಿಂದೂ ಯುವತಿ ಮತ್ತು ಮಹಿಳೆ ಇರುವ ಮನೆಗೆ ಅನ್ಯ ಕೋಮಿನ ಯುವಕನೋರ್ವ ಬಂದು ಕಿಟಾಲೆ ಮತ್ತು ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಕುಲಶೇಖರದಲ್ಲಿ ನಡೆದಿದೆ. ಮಾಹಿತಿ ಪಡೆದ ಸ್ಥಳೀಯರು ಯುವಕಕನ್ನು ಹಿಡಿದು ಧರ್ಮದೇಟು ನೀಡಿ ಪೋಲಿಸರಿಗೆ ಒಪ್ಪಿಸಿದ್ದಾರೆ. ಈತ ಮಹಿಳೆಗೆ ರವಿ ಎಂಬ ಹೆಸರಿನಲ್ಲಿ ಒಂದು ವರ್ಷದ ಹಿಂದೆ ಪರಿಚಯವಾಗಿದ್ದು ಆಗಾಗ ಮಹಿಳೆ ಮನೆಗೆ ಬರುತ್ತಿದ್ದ ಎನ್ನಲಾಗಿದೆ. ಇವರಿಬ್ಬರ ಮಧ್ಯೆ ಹಣಕಾಸಿನ ವ್ಯವಹಾರವೂ ಇತ್ತೆಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಶುಕ್ರವಾರ ಬೆಳಿಗ್ಗೆ ಬಂದಿದ್ದ ಯುವಕ ಮಹಿಳೆ ಮತ್ತು ಮಹಿಳೆಯ ಅಕ್ಕನ ಮಗಳೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಇದರಿಂದ ಮಹಿಳೆ ಮತ್ತು ಯುವಕನ ಮಧ್ಯೆ ಗಲಾಟೆ ನಡೆದಿದೆ. ಮಾಹಿತಿ ಪಡೆದ ಸ್ಥಳಿಯರು ಬಂದು ಯುವಕಕನ್ನು ಹಿಡಿದು ಧರ್ಮದೇಟು ನೀಡಿ ವಿಚಾರಿಸಿದ್ದಾರೆ. ಈ ವೇಳೆ ತಾನು ಮುಸ್ಲಿಂ ಸಮುದಾಯಕ್ಕೆ ಸೇರಿದವನಾಗಿದ್ದು, ತನ್ನ ಹೆಸರು ಸೈಯದ್ ನಹೀಮ್ (25) ಎಂದು ಬಾಯ್ಬಿಟ್ಟಿದ್ದಾನೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ಯುವಕಕನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಂಕನಾಡಿ ನಗರ ಠಾಣಾ…
ಮಂಗಳೂರು : ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ನಿಷೇಧಿತ ಮಾದಕದ್ರವ್ಯ ಎಂಡಿಎಂಎಯನ್ನು ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಸೇರಿ ಇಬ್ಬರು ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು 200 ಗ್ರಾಂ ಎಂಡಿಎಂಎಯನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ಅಂದ್ರಹಳ್ಳಿ ನಿವಾಸಿ ದರ್ಶನ್ ಕೆ.ಜಿ.(25), ನೈಜೀರಿಯಾ ಪ್ರಜೆ, ಹಾಲಿ ಬೆಂಗಳೂರಿನ ಬೆಟ್ಟಹಲ್ಸೂರ್ ನಲ್ಲಿ ವಾಸ್ತವ್ಯವಿರುವ ಚಿಕ ಜೋಸೇಫ್ ಇಝಿ(26) ಬಂಧಿತ ಆರೋಪಿಗಳು. ಇತ್ತೀಚೆಗೆ ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಇಕ್ಬಾಲ್ ಎಂಬಾತನನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಗಳಿಗೆ ಎಂಡಿಎಂಎಯನ್ನು ಪೂರೈಕೆ ಮಾಡುತ್ತಿದ್ದ ಡ್ರಗ್ ಪೆಡ್ಲರ್‌ಗಳ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿದ್ದಾರೆ. ಆದ್ದರಿಂದ ಮಂಗಳೂರಿನಿಂದ ಹಾಗೂ ಬೆಂಗಳೂರಿನಿಂದ ಮಾದಕ ವಸ್ತುವಾದ ಎಂಡಿಎಂಎಯನ್ನು ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಸೇರಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 10,00,000 ರೂ. ಮೌಲ್ಯದ 200 ಗ್ರಾಂ ನಿಷೇಧಿತ ಮಾದಕದ್ರವ್ಯ ಎಂಡಿಎಂಎ, ಮಾರುತಿ ಬಲೆನೋ ಕಾರು, 5…
ಮಂಗಳೂರು: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ತುಳುನಾಡಿನ ಸಂಸ್ಕೃತಿ ಬಿಂಬಿಸುವ ಹಾಡೊಂದನ್ನು ಹಾಡುವ ಮೂಲಕ ಜನರ ಮನ ಗೆದ್ದಿದ್ದಾರೆ. ಗುರುವಾರ ಸಂಜೆ ನಗರದ ಕಮಿಷನರ್ ಕಚೇರಿ ಸಭಾಂಗಣದಲ್ಲಿ ದ.ಕ. ಜಿಲ್ಲಾ ಪೊಲೀಸ್ ಹಾಗೂ ಮಂಗಳೂರು ಕಮಿಷನರೆಟ್ ಘಟಕದ ವತಿಯಿಂದ ಆಯೋಜಿಸಿದ್ದ ಸ್ನೇಹ ಸೌಹಾರ್ದ ಸಮ್ಮಿಲನದಲ್ಲಿ ಜಿಲ್ಲಾಧಿಕಾರಿ ಹಾಡಿದ ಹಾಡು ವೈರಲ್ ಆಗಿದ್ದು, ಕರಾವಳಿ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಮೂಲತಃ ತಮಿಳುನಾಡಿನ ವರಾಗಿರುವ ಜಿಲ್ಲಾಧಿಕಾರಿಯವರು ಮಂಗಳೂರಿನಲ್ಲಿ ತಮ್ಮ ಸೇವೆ ಸಲ್ಲಿಸುತ್ತಿದ್ದಾರೆ. ತುಳು ಸಂಪ್ರದಾಯ, ಆಚಾರ ವಿಚಾರಗಳ ಬಗ್ಗೆ ಅರಿತುಕೊಂಡಿರುವ ಅವರು ತುಳುನಾಡಿನ ಬಗ್ಗೆ ಅಪಾರ ಗೌರವ ಹೊಂದಿದ್ದಾರೆ. ಇದೀಗ ಅವರು ಹಾಡಿದ ತೌಲವ ಸಂಸ್ಕೃತಿ ಬಿಂಬಿಸುವ ಹಾಡಿಗೆ ಕರಾವಳಿ ಜನ ಫಿದಾ ಆಗಿದ್ದಾರೆ. ಜಿಲ್ಲಾಧಿಕಾರಿಗಳು ಕಳೆದ ಲೋಕಸಭೆ ಚುನಾವಣೆ ವೇಳೆ ತುಳು ಭಾಷೆಯಲ್ಲೇ ಮತದಾನ ಜಾಗೃತಿ ಮಾಡಿದ್ದರು.
ಮಂಗಳೂರು: ಸಂಚಾರಿ ನಿಯಮ ಉಲ್ಲಂಘನೆ ಮಾಡಲಾಗಿದೆ ಎಂಬ ಎಪಿಕೆ ಫೈಲ್ ಅನ್ನು ವಾಟ್ಸ್ಆ್ಯಪ್‌ಗೆ ಕಳುಹಿಸಿ ಮಂಗಳೂರಿನ ಯುವಕನೊಬ್ಬನಿಗೆ 1.31 ಲಕ್ಷ ರೂ. ವಂಚಿಸಿದ ಆರೋಪಿಯನ್ನು ಮಂಗಳೂರು ಸೆನ್ ಕ್ರೈಂ ಪೊಲೀಸರು ದೆಹಲಿಯಲ್ಲಿ ಬಂಧಿಸಿದ್ದಾರೆ. ದೆಹಲಿಯ ಮಾಳವೀಯಾ ನಗರದ ಪಂಚಶೀಲ ವಿಹಾರದ ಗೌರವ್ ಮಕ್ವಾನ್(25) ಬಂಧಿತ ಆರೋಪಿ. ಮಂಗಳೂರಿನ ಕೊಟ್ಟಾರದ ಯದುನಂದನ್ ಆಚಾರ್ಯ ಎಂಬವರ ವಾಟ್ಸ್ಆ್ಯಪ್‌ಗೆ VAHAN PARIVAHAN.apk ಫೈಲ್ ಬಂದಿತ್ತು. ಆ ಫೈಲ್ ಅನ್ನು ಡೌನ್‌ಲೋಡ್ ಮಾಡುತ್ತಿದ್ದಂತೆ ಅವರ ಫ್ಲಿಪ್‌ಕಾರ್ಟ್ ಖಾತೆ ಹ್ಯಾಕ್ ಆಗಿದೆ. ಸೈಬರ್ ವಂಚಕರು ಈ ಖಾತೆಯನ್ನು ಬಳಸಿಕೊಂಡು ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್‌ಗಳಿಂದ 1,31,000 ರೂ. ಮೌಲ್ಯದ 2 ಮೊಬೈಲ್ ಪೋನ್ 1 ಏರ್ ಪ್ಯಾಡ್ ಹಾಗೂ ಗಿಫ್ಟ್ ವೋಚರ್ ಗಳನ್ನು ಖರೀದಿ ಮಾಡಿದ್ದಾರೆ. ಈ ಬಗ್ಗೆ ತನಿಖೆ ಕೈಗೊಂಡಿದ್ದು, ಫ್ಲಿಪ್ ಕಾರ್ಟ್ ಕಂಪೆನಿಯಿಂದ ಮಾಹಿತಿಯನ್ನು ಪಡೆದುಕೊಂಡು, ಪ್ರಕರಣ ದಾಖಲಿಸಲಾಗಿತ್ತು. ತಕ್ಷಣ ಸೆನ್ ಕ್ರೈಂ ಪೊಲೀಸ್ ಠಾಣಾ ಪಿಎಸ್ಐ ಗುರಪ್ಪ ಕಾಂತಿ ಹಾಗೂ ಪಿಸಿ ತಿಪ್ಪಾರೆಡ್ಡಿಯವರು ದೆಹಲಿಗೆ…










