ಮಂಗಳೂರು: ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ಅವರು ಶುಕ್ರವಾರ ಹೃದಯಘಾತದಿಂದ ನಿಧನ ಹೊಂದಿದರು. ಇರಾ (ಕುಂಡಾವು), ಕೂಡ್ಲು, ಮೂಲ್ಕಿ, ಕರ್ನಾಟಕ ಮೇಳ ಮತ್ತು ಧರ್ಮಸ್ಥಳ ಮೇಳದಲ್ಲಿ ಯಕ್ಷ ವ್ಯವಸಾಯ ಮಾಡಿದವರು ಕುಂಬಳೆ ಶ್ರೀಧರ್ ರಾವ್ ಅವರು. ತೆಂಕುತಿಟ್ಟಿನ ಅಪ್ರತಿಮ ಸ್ತ್ರೀವೇಷಧಾರಿಯಾಗಿ ಕಲಾಸೇವೆ ಮಾಡಿರುವ ಅವರು ದಮಯಂತಿ, ದಾಕ್ಷಾಯಿಣಿ, ಅಮ್ಮು ಬಲ್ಲಾಳ್ತಿ, ಲಕ್ಷ್ಮಿ, ಸುಭದ್ರೆ, ಸತ್ಯಭಾಮೆ ಅಲ್ಲದೆ ಪ್ರಮೀಳೆ, ಶಶಿಪ್ರಭೆ ಮುಂತಾದ ಪಾತ್ರಗಳಿಂದ ದೊಡ್ಡ ಹೆಸರು ಮಾಡಿದವರು. ಮಾಲಿಂಗ ಮುಕಾರಿ ಮತ್ತು ಕಾವೇರಿ ದಂಪತಿಗಳಿಗೆ ಪುತ್ರನಾಗಿ ಶ್ರೀಧರ ರಾಯರು 1948ರ ಜುಲೈ 23ರಂದು ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ನಾಯ್ಕಾಪುವಿನಲ್ಲಿ ಜನಿಸಿದರು. 1962ರಲ್ಲಿ ಕಲ್ಲಾಡಿ ಕೊರಗ ಶೆಟ್ಟರ ಯಜಮಾನಿಕೆಯ ಕುಂಡಾವು ಮೇಳಕ್ಕೆ ಶ್ರೀಧರ ರಾಯರು ಬಾಲಕಲಾವಿದನಾಗಿ ಸೇರ್ಪಡೆಗೊಂಡರು. ಬಳಿಕ ಕೂಡ್ಲು, ಮೂಲ್ಕಿ, ಕರ್ನಾಟಕ ಮೇಳ ಮತ್ತು ಧರ್ಮಸ್ಥಳ ಮೇಳಗಳಲ್ಲಿ ಕುಂಬಳೆ ಶ್ರೀಧರ ರಾಯರು ಕಲಾಸೇವೆ ಮಾಡಿದವರು. ಧರ್ಮಸ್ಥಳ ಮೇಳದಲ್ಲಿ ಸುಮಾರು ನಾಲ್ಕು ದಶಕಗಳ ಕಾಲ ತಿರುಗಾಟ ಮಾಡಿದ್ದರು.
Author: main-admin
ಮಂಗಳೂರು: ವ್ಯಕ್ತಿಯೋರ್ವರು ಅನಾರೋಗ್ಯದಿಂದ ಆಸ್ಪತ್ರೆಯಲ್ಲಿದ್ದಾಗ ಆತನ ಸ್ನೇಹಿತನಾದ ವಕೀಲ ಇತರರೊಂದಿಗೆ ಸೇರಿಕೊಂಡು ಜಾಗ ಮಾರಾಟ ಮಾಡಿ 88.35 ಲಕ್ಷ ರೂ. ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ವಕೀಲ ಗಂಗಾಧರ ಎಚ್., ಕುಸುಮ ಕೆ. ಸುವರ್ಣ, ನೀರಜಾಕ್ಷಿ ಅಗಾಲ್ ಮತ್ತು ಇತರ 11 ಮಂದಿ ಎಂದು ಗುರುತಿಸಲಾಗಿದೆ. ಸುರತ್ಕಲ್ ಮುಂಚೂರಿನ ಕೆ.ರುಕ್ಕಯ್ಯ ಶೆಟ್ಟಿ ನೀಡಿದ ದೂರಿನಂತೆ, ಕೆ.ರುಕ್ಕಯ್ಯ ಶೆಟ್ಟಿ ಕಟ್ಟಡ ನಿರ್ಮಾಣ ಮತ್ತು ಜಾಗದ ವ್ಯವಹಾರ ಮಾಡುತ್ತಿದ್ದರು. ಈ ಜಾಗದ ವ್ಯವಹಾರವನ್ನು ಆಪ್ತಸ್ನೇಹಿತನಾದ ಗಂಗಾಧರ ಎಚ್. ಮೂಲಕ ಮಾಡಿಸುತ್ತಿದ್ದರು. ರುಕ್ಕಯ್ಯ ಶೆಟ್ಟಿ 2018ರಲ್ಲಿ ಕುಸುಮ, ವಾರಿಜಾ (ಈಗ ಮೃತರು) ಮತ್ತು ಆಕೆಯ ಪುತ್ರಿ ನೀರಜಾಕ್ಷಿ ಅಗರ್‌ವಾಲ್ ಅವರಿಂದ ಹೊಸಬೆಟ್ಟು ಗ್ರಾಮದಲ್ಲಿ 60.45 ಲಕ್ಷ ರೂ.ಗಳಿಗೆ ಜಾಗ ಖರೀದಿಸುವ ಬಗ್ಗೆ ಒಪ್ಪಂದ ಮಾಡಿಕೊಂಡು 20 ಲಕ್ಷ ರೂ ಮುಂಗಡ ಹಣ ಪಾವತಿಸಿದ್ದರು. ಆ ಜಾಗದಲ್ಲಿ ಕೆಲವು ಸೆಂಟ್‌ಗಳನ್ನು ನವೀನ್ ಸಾಲ್ಯಾನ್ ಮತ್ತು ಕೇತನ್ ಕುಮಾರ್ ಅವರಿಗೆ ಮಾರಾಟ…
ಮಂಗಳೂರು: ಬಜಪೆಯ ಮಾರುಕಟ್ಟೆ ಸಮೀಪದ ಖಾಸಗಿ ಫೈನಾನ್ಸ್ ಒಂದಕ್ಕೆ ಮೂವರು ಅಪರಿಚಿತ ವ್ಯಕ್ತಿಗಳು ಗುರುವಾರ ದಿಢೀರ್ ನುಗ್ಗಿ ಕ್ಲೋರೋಫಾರ್ಮ್ ಬಳಸಿ ದರೋಡೆಗೆ ಯತ್ನಿಸಿ ಪರಾರಿಯಾಗಿರುವ ಕುರಿತು ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.ಆಕ್ಟಿವಾದಲ್ಲಿ ಆಗಮಿಸಿದ ಆರೋಪಿಗಳು ಬಜಪೆಯ ಮಸೀದಿ ಕಡೆಯಿಂದ ಆಗಮಿಸಿ ಹೂವಿನ ಮಾರುಕಟ್ಟೆ ಬಳಿಗೆ ಹೋಗಿ ವಾಪಾಸ್ಸು ಬಂದು ಮಾರುಕಟ್ಟೆ ಸಮೀಪದ ಖಾಸಗಿ ಫೈನಾನ್ಸ್ ಗೆ ನುಗ್ಗಿದ್ದಾರೆ. ಆರೋಪಿಗಳು ಚಿಕ್ಕ ಆಸಿಡ್ ತುಂಬಿದಡಬ್ಬವೊಂದರ ಮುಚ್ಚಳ ತೆಗೆದು ಟೇಬಲ್ ಮೇಲಿಟ್ಟು ಕ್ಯಾಶ್‌ಗೆ ಬಲಾತ್ಕಾರವಾಗಿ ಕೈ ಹಾಕಲು ಪ್ರಯತ್ನಿಸಿದ್ದಾರೆ. ಈ ವೇಳೆ ತಡೆಯಲು ಯತ್ನಿಸಿದ ಫೈನಾನ್ಸ್ನ ಇಬ್ಬರು ಮಹಿಳಾ ಸಿಬ್ಬಂದಿಗಳನ್ನು ದೂಡಿ ಹಾಕಿದ್ದು, ಮಹಿಳಾ ಸಿಬ್ಬಂದಿ ಜೋರಾಗಿ ಕಿರುಚಿದ ಸಂದರ್ಭ ಆರೋಪಿಗಳು ಪರಾರಿಯಾಗಿರುತ್ತಾರೆ.ಮೂವರು ಆರೋಪಿಗಳ ಪೈಕಿ ಒಬ್ಬ ಹೆಲೈಟ್ ಧಾರಿ ಸ್ಕೂಟರನ್ನು ಸ್ಟಾರ್ಟಿಂಗ್‌ನಲ್ಲಿಯೇ ನಿಲ್ಲಿಸಿ ಕಾಯುತ್ತಿದ್ದು, ಇನ್ನಿಬ್ಬರ ಪೈಕಿ ಒಬ್ಬ ಬುರ್ಖಾಧಾರಿಯಾಗಿದ್ದು ಸವಾರನ ಹಿಂಬದಿಯಲ್ಲಿ ಕುಳಿತಿದ್ದ ಚಲನವಲನಗಳನ್ನು ಪ್ರತ್ಯಕ್ಷದರ್ಶಿಗಳು ಗಮನಿಸಿರುತ್ತಾರೆ. ಈತ ಬುರ್ಖಾ ಧರಿಸಿದ್ದರೂ ಗಂಡಸ್ಸೇ ಕುಳಿತಿದ್ದುದು ಹಲವರ ಗಮನಕ್ಕೆ ಬಂದಿದೆ.ಫೈನಾನ್ಸ್ಗೆ ನುಗ್ಗಿದ ಇಬ್ಬರಲ್ಲಿ…
ಮಂಗಳೂರು: ನಗರದ ಬಲ್ಮಠ ಬಳಿ ನಿರ್ಮಾಣ ಹಂತದ ಕಟ್ಟಡದ ಬಳಿ ಬುಧವಾರ ಸಂಭವಿಸಿರುವ ಮಣ್ಣು ಕುಸಿತಗೊಂಡು ನಡೆದ ದುರಂತಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಕಟ್ಟಡ ಕಾಮಗಾರಿಯ ಗುತ್ತಿಗೆದಾರ ವೇಣುಗೋಪಾಲ್, ಸೂಪರ್‌ವೈಸರ್ ಸಹಿತ ಮೂವರ ವಿರುದ್ಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಘಟನೆಯಲ್ಲಿ ಉತ್ತರಪ್ರದೇಶ ಮೂಲದ ಕಾರ್ಮಿಕ ಚಂದನ್ ಕುಮಾರ್ ಮೃತಪಟ್ಟಿದ್ದಾದೆ. ಬಿಹಾರ ಮೂಲದ ಕಾರ್ಮಿಕ ರಾಜ್‌ಕುಮಾರ್‌ನನ್ನು ರಕ್ಷಿಸಲಾಗಿತ್ತು.
ಮಂಗಳೂರು : ಮನಪಾ ನೂತನ ಆಯುಕ್ತರಾಗಿ ರವಿಚಂದ್ರ ನಾಯಕ್ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿ ತಕ್ಷಣ ಜಾರಿಗೆ ಬರುವಂತೆ ಆದೇಶಿಸಿದೆ. ಈವರೆಗೆ ಮಂಗಳೂರು ಮನಪಾ ಆಯುಕ್ತರಾಗಿದ್ದ ಸಿ.ಎಲ್.ಆನಂದ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶಿಸಿದೆ. ಅವರಿಂದ ತೆರವಾಗಿರುವ ಸ್ಥಾನಕ್ಕೆ ಶಿವಮೊಗ್ಗ ಜಿಲ್ಲೆಯ ತುಂಗಾ ಮೇಲ್ದಂಡೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿ, ಹಿರಿಯ ಕೆಎಎಸ್ ಅಧಿಕಾರಿ ರವಿಚಂದ್ರ ನಾಯಕ್‌ರನ್ನು ನೇಮಕ ಮಾಡಿದೆ.
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಜೈಲು ಪಾಲಾಗಿರುವಂತ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳಿಗೆ ಕೋರ್ಟ್ ಜುಲೈ.18ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಇಂದು ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿಗಳಾದ ನಟ ದರ್ಶನ್ ಅವರ ಗೆಳತಿ ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳ ಪ್ರಕರಣದ ವಿಚಾರಣೆ ನಡೆಸಿದಂತ ನ್ಯಾಯಪೀಠವು, ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಿ ಆದೇಶಿಸಿದೆ. ಈ ಹಿಂದೆ ವಿಧಿಸಿದ್ದ 14 ದಿನಗಳ ನ್ಯಾಯಾಂಗ ಬಂಧನ ಅವಧಿ ಜುಲೈ 4 ಕ್ಕೆ ಮುಕ್ತಾಯವಾಗಿತ್ತು. ಈ ಹಿನ್ನೆಲೆ ಬೆಂಗಳೂರಿನ ಕೋರ್ಟ್‌ನಲ್ಲಿ ಗುರುವಾರ ಕೇಸ್ ವಿಚಾರಣೆ ನಡೆದಿದ್ದು, ನ್ಯಾಯಾಂಗ ಬಂಧನವನ್ನು ಮತ್ತೆ 14 ದಿನ ವಿಸ್ತರಣೆ ಮಾಡಲಾಗಿದೆ. ಅಂದರೆ, ಜುಲೈ 18 ವರೆಗೂ ನಟ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಜೈಲೇ ಗತಿ ಆದಂತೆ ಆಗಿದೆ.
ಬಾರ್ಬಡೋಸ್‌ನಲ್ಲಿ ಟಿ20 ವಿಶ್ವಕಪ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ ಟೀಮ್ ಇಂಡಿಯಾ, ನಾಲ್ಕು ದಿನಗಳ ಬಳಿಕ ತವರಿಗೆ ಮರಳಿದೆ. ಚಾಂಪಿಯನ್ ತಂಡಕ್ಕೆ ಏರ್ ಪೋರ್ಟ್‌ನಲ್ಲಿ ಹೃದಯ ಸ್ವರ್ಪಿ ಸ್ವಾಗತ ನೀಡಲಾಗಿದೆ. ಟೀಮ್ ಇಂಡಿಯಾ ಆಟಗಾರರು ಅಭಿಮಾನಿಗಳತ್ತ ಕೈ ಬಿಸಿ, ನವದೆಹಲಿಯ ಮೌರ್ಯ ಹೊಟೇಲ್‌ಗೆ ತೆರಳಿದೆ. ಮೌರ್ಯದಲ್ಲಿ ಟೀಮ್ ಇಂಡಿಯಾ ಆಟಗಾರರಿಗೆ ವಿಶೇಷ ಸ್ವಾಗತವನ್ನು ನೀಡಲಾಯಿತು. ಈ ವೇಳೆ ಹೊಟೇಲ್ ವಿಶೇಷ ರೀತಿಯಲ್ಲಿ ಕೇಕ್ ಅನ್ನು ಸಿದ್ಧ ಪಡಿಸಿತ್ತು. ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೇಕ್ ಕತ್ತರಿಸಿ ಖುಷಿ ಪಟ್ಟರು. ಹೊಟೇಲ್‌ನಲ್ಲಿ ಕೆಲ ಕಾಲ ವಿಶ್ರಮಿಸಿದ ಬಳಿಕ ರೋಹಿತ್ ಪಡೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಪ್ರಯಾಣ ಬೆಳೆಸಿತು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಬೆಳಿಗ್ಗೆ 11 ಗಂಟೆಗೆ ಪ್ರಧಾನಿ ನಿವಾಸಕ್ಕೆ ತಲುಪಿತು. ಈ ಸಭೆ ಮುಗಿದ ನಂತರ ಮುಂಬೈನಲ್ಲಿ ನಡೆಯಲಿರುವ ವಿಜಯೋತ್ಸವ ಪರೇಡ್‌ನಲ್ಲಿ ಭಾಗವಹಿಸಲು ಭಾರತ ತಂಡದ ಆಟಗಾರರು ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ.
ಬಂಟ್ವಾಳ: ರಾ.ಹೆ.75ರ ತುಂಬೆ ರಾಮಲಕಟ್ಟೆ ಬಳಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿಯಾದ ಘಟನೆ ನಡೆದಿದೆ. ಪ್ರಯಾಣಿಕರು ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ. ಬಸ್ ಬಿ.ಸಿ.ರೋಡು ಭಾಗದಿಂದ ಮಂಗಳೂರಿಗೆ ತೆರಳುತ್ತಿದ್ದು, ಚಾಲಕನ ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನೆಯಿಂದ ಕೆಲ ಹೊತ್ತು ಸಂಚಾರಕ್ಕೆ ತೊಡಕು ಉಂಟಾಗಿದ್ದು, ಬಳಿಕ ಬಸ್ ತೆರವು ಮಾಡಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ: ವಿಷ ಸೇವನೆ ಮಾಡಿ ಕಾಲೇಜ್ ವಿದ್ಯಾರ್ಥೀನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಪುದುವೆಟ್ಟು ಗ್ರಾಮದ ಕಲ್ಲಾಜೆ ನಿವಾಸಿ ವೆಂಕಟೇಶ್ ಅವರ ಪುತ್ರಿ ಅನಿತಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ನಾಲ್ಕು ದಿನದ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿ ತೀವ್ರ ಅಸ್ವಸ್ಥಗೊಂಡಿದ್ದಳು. ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ 3 ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ ಅನಿತಾ ಬುಧವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಈಕೆ ಪ್ರಸ್ತುತ ಬೆಳ್ತಂಗಡಿಯ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಎಸೆಸೆಲ್ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದು, ಮನೆಯವರಿಗೆ ಕಷ್ಟ ಕೊಡಲು ನನ್ನಿಂದ ಆಗಲ್ಲ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿರುವುದಾಗಿ ತಿಳಿದುಬಂದಿದ್ದು ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಮಂಗಳೂರು: ನಗರದ ಬಲ್ಮಠದಲ್ಲಿ ಕಟ್ಟಡ ಕಾಮಗಾರಿ ಅವಘಡದ ಬೆನ್ನಲ್ಲೇ ಎಚ್ಚೆತ್ತ ಮಂಗಳೂರು ಮಹಾನಗರ ಪಾಲಿಕೆ ಮಳೆಗಾಲ ಮುಗಿಯುವವರೆಗೆ ಎಲ್ಲಾ ಕಟ್ಟಡದ ಕಾಮಗಾರಿ ಸ್ಥಗಿತಕ್ಕೆ ಆದೇಶಿಸಿದೆ. ಇಂದಿನಿಂದ ಯಾವುದೇ ಕಟ್ಟಡದ ಕಾಮಗಾರಿಯನ್ನು ನಡೆಸದಂತೆ ಹಾಗೂ ಈಗಾಗಲೇ ಪ್ರಾರಂಭಿಸಿರುವ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ನಿಲ್ಲಿಸುವಂತೆ ಸೂಚನೆ ನೀಡಿದೆ. ಅಗತ್ಯ ಮುನ್ನೆಚ್ಚರಿಕೆ ಕ್ರಮ ಅಳವಡಿಸಿಕೊಂಡು ಕಾಮಗಾರಿಯನ್ನು ಸ್ಥಗಿತಗೊಳಿಸಲು ಸೂಚನೆ ನೀಡಿದೆ. ಅವೈಜ್ಞಾನಿಕವಾಗಿ ಭೂಮಿಯನ್ನು ಅಗೆದು ಹಾಕದಂತೆ ಸೂಚನೆ ನೀಡಿದೆ. ಆದೇಶ ಉಲ್ಲಂಘನೆ ಕಂಡುಬಂದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮದ ಎಚ್ಚರಿಕೆ ನೀಡಿ ಮನಾಪ ಆಯುಕ್ತರು ಕಟ್ಟುನಿಟ್ಟಾಗಿ ಆದೇಶಿಸಿದ್ದಾರೆ.









