ಮಂಗಳೂರು: ಲಾರಿ ಬೈಕ್‌ಗೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಬಿಬಿಎ ವಿದ್ಯಾರ್ಥಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಘಟನೆಯಲ್ಲಿ ಮತ್ತೋರ್ವ ಬೈಕ್ ಸವಾರ ಗಾಯಗೊಂಡಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಿ.ಸಿ.ರೋಡ್ ಮೆಲ್ಕಾರ್ ನಿವಾಸಿ, ಕೂಳೂರು ಯೆನೆಪೊಯ ಕಾಲೇಜಿನ ಬಿಬಿಎ ಎರಡನೇ ವರ್ಷದ ವಿದ್ಯಾರ್ಥಿ ಮೊಹಮ್ಮದ್ ಜಾಸಿಂ (18) ಮೃತಪಟ್ಟ ಯುವಕ. ಶಾಹಿದ್ ಸುಲೇಮಾನ್(20) ಎಂಬ ಗಾಯಾಳು ವಿದ್ಯಾರ್ಥಿ. ಶುಕ್ರವಾರ ಎಂದಿನಂತೆ ಕಾಲೇಜು ಮುಗಿಸಿಕೊಂಡು ಶಾಹಿದ್ ಸುಲೇಮಾನ್ ತಮ್ಮ ಸ್ನೇಹಿತ ಮೊಹಮ್ಮದ್ ಜಾಸಿಂನೊಂದಿಗೆ ಬೈಕ್‌ನಲ್ಲಿ ಕೂಳೂರಿನಿಂದ ಕೆಪಿಟಿ ಕಡೆಗೆ ಸಂಚರಿಸುತ್ತಿದ್ದರು. ಸಂಜೆ 4ಗಂಟೆ ಸುಮಾರಿಗೆ ಕುಂಟಿಕಾನ ಪ್ಲೈಓವರ್ ಬಳಿ ಬರುತ್ತಿದಂತೆ ಅದೇ ಬದಿಯಲ್ಲಿ ಬರುತ್ತಿದ್ದ ಲಾರಿ ನಿರ್ಲಕ್ಷತನ ಮತ್ತು ಅಜಾಗರೂಕತೆಯಿಂದ ಬಂದು ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಸಹಿತ ರಸ್ತೆಗೆ ಬಿದ್ದ ಮೊಹಮ್ಮದ್ ಜಾಸಿಂರವರಿಗೆ ತಲೆಗೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಶಾಹಿದ್ ಸುಲೇಮಾನ್‌ರವರಿಗೆ ಬಲಗಾಲಿನ ಮೂಳೆ ಮುರಿತಗೊಂಡು ಗಾಯಗೊಂಡಿದ್ದಾನೆ. ಈ ಬಗ್ಗೆ ಸಂಚಾರ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
Author: main-admin
ಮಂಗಳೂರು: ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ವಿಧಾನ ಪರಿಷತ್ ಸ್ಥಾನಕ್ಕೆ ಅಕ್ಟೋಬರ್ 21ರಂದು ಉಪ ಚುನಾವಣೆ ನಡೆಯಲಿದೆ. ಈ ಬಗ್ಗೆ ಮಾತನಾಡಿ, ವಿಧಾನ ಪರಿಷತ್ ಸ್ಥಾನಕ್ಕೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ 392 ಸ್ಥಳೀಯಾಡಳಿತಗಳ 6,037 ಮಂದಿ ಮತ ಚಲಾಯಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೆ ಸೆಪ್ಟೆಂಬರ್ 26ರಿಂದ ಅಕ್ಟೋಬರ್ 3ರವರೆಗೆ ಅವಕಾಶವಿದೆ. ಅಕ್ಟೋಬರ್ 4ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಅಅಕ್ಟೋಬರ್ 7ರಂದು ನಾಮಪತ್ರ ವಾಪಸ್‌ಗೆ ಕೊನೆ ದಿನ. ಅಕ್ಟೋಬರ್ 21ರಂದು ಬೆಳಗ್ಗೆ 8ರಿಂದ ಸಂಜೆ 4 ಗಂಟೆವರೆಗೆ ಮತದಾನ ಹಾಗೂ ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದೆ ಎಂದರು. ಆದ್ದರಿಂದ ಸೆಪ್ಟೆಂಬರ್ 19ರಿಂದಲೇ ಮಾದರಿ ನೀತಿಸಂಹಿತೆ ಜಾರಿಗೊಂಡಿದ್ದು, ಅಕ್ಟೋಬರ್ 28ರವರೆಗೆ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಇರಲಿದೆ. ಈ ಅವಧಿಯಲ್ಲಿ ಸರಕಾರದ ಯಾವುದೇ ಅಭಿವೃದ್ಧಿಪರ ಕಾರ್ಯಗಳ ಘೋಷಣೆ ಮಾಡುವಂತಿಲ್ಲ. ಗುದ್ದಲಿ ಪೂಜೆ, ಶಿಲಾನ್ಯಾಸ ನಡೆಸುವಂತಿಲ್ಲ. ಶುಭಾಶಯ ಕೋರಿ ರಾಜಕೀಯ ನಾಯಕರ, ಅಭ್ಯರ್ಥಿಗಳ ಬ್ಯಾನರ್ ಅಳವಡಿಸುವಂತಿಲ್ಲ. ಅಧಿಕಾರಿಗಳು ಕಾರ್ಯಕ್ರಮ ಯಾವುದೇ ಸರ್ಕಾರಿ ಹಾಗೂ…
ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಜೂನಿಯರ್ ಇಂಜಿನಿಯರ್ ಮತ್ತು ಮುಖ್ಯಾಧಿಕಾರಿ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದ ಘಟನೆ ನಡೆದಿದೆ. ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರೊಬ್ಬರಿಂದ ಬಿಲ್ ಪಾಸ್ ಮಾಡುವ ಸಲುವಾಗಿ ಹಣದ ಬೇಡಿಕೆ ಇಟ್ಟು ಲಂಚ ಸ್ವೀಕರಿಸುತ್ತಿದ್ದಾಗ ಇಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ದೂರು ನೀಡಿದ ಗುತ್ತಿಗೆದಾರ 2022-23ನೇ ಸಾಲಿನ 5ನೇ ಹಣಕಾಸು ಯೋಜನೆಯಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಸ್ ಕೋಡಿ ಸರಕಾರಿ ಕೆರೆ ಅಭಿವೃದ್ಧಿಪಡಿಸುವ ಕಾಮಗಾರಿ ಕಾಂಟ್ರಕ್ಟ್ ಕೆಲಸವನ್ನು ನಿರ್ವಹಿಸಿದ್ದರು. ಈ ಕಾಮಗಾರಿಯ ರೂ 9,77,154 ಮೊತ್ತದ ಬಿಲ್ಲು ಮಂಜೂರಾತಿಯ ಬಗ್ಗೆ ಕಿನ್ನಿಗೊಳಿ ಪಟ್ಟಣ ಪಂಚಾಯತ್‌ನ ಜೂನಿಯರ್ ಇಂಜಿನಿಯರ್ ನಾಗರಾಜು ರವರಲ್ಲಿ ವಿಚಾರಿಸಿದಾಗ ಬಿಲ್ಲು ಪಾಸ್ ಮಾಡಲು ತನಗೆ ರೂ 37,000 ಲಂಚವನ್ನು ನೀಡುವಂತೆ ಮತ್ತು ಕಿನ್ನಿಗೊಳಿ ಪಟ್ಟಣ ಪಂಚಾಯತ್‌ನ ಮುಖ್ಯಾಧಿಕಾರಿಯವರಿಗೆ ರೂ 15,000 ಲಂಚವನ್ನು ನೀಡಬೇಕೆಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಅಲ್ಲದೆ ಜೂನಿಯರ್ ಇಂಜಿನಿಯರ್ ನಾಗರಾಜು…
ಸುಳ್ಯ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪೋಕ್ಸೊ ಪ್ರಕರಣದಲ್ಲಿ ಕಾಣಿಯೂರು ಸಮೀಪದ ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯ ಎಂಬಾತನನ್ನು ಬೆಳ್ಳಾರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನಲ್ಲಿ ಕೌನ್ಸಿಲಿಂಗ್ ಸಂದರ್ಭ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಪ್ರಕರಣ ದಾಖಲಾಗಿದ್ದು, ಬೆಳ್ಳಾರೆ ಪೊಲೀಸರು ಸೆ.19ರ ಮುಂಜಾನೆ ಜಾವ ಪ್ರಸಾದ್ ಪಂಗಣ್ಣಾಯನನ್ನು ಅವರ ಮನೆಯಲ್ಲಿ ಬಂಧಿಸಿದ್ದಾರೆ ಎಂಬ ಮಾಹಿತಿ ಲಭಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಡುವ ಪ್ರಸಾದ್ ಪಾಂಗಣ್ಣಾಯ ಕಾಣಿಯೂರು ಸಮೀಪದ ಬೆಳಂದೂರು ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ.
ಮೂಲ್ಕಿ: ಇಲ್ಲಿ ಹಸುವೊಂದು ಎರಡು ತಲೆಯ ಕರುವಿಗೆ ಜನ್ಮ ನೀಡಿದೆ. ಈ ವಿಶಿಷ್ಟ ನೋಟವು ಇಡೀ ಹಳ್ಳಿಯನ್ನು ಬೆಚ್ಚಿಬೀಳಿಸಿದೆ. ಗ್ರಾಮಸ್ಥರು ಇದನ್ನು ದೇವರ ಪವಾಡವೆಂದು ಪರಿಗಣಿಸುತ್ತಿದ್ದಾರೆ. ಎರಡು ತಲೆಯ ಕರುಗಳ ಆಘಾತಕಾರಿ ಘಟನೆಯೊಂದು ಮೂಲ್ಕಿ ತಾಲೂಕಿನ ಕಿನ್ನಿಗೋಳಿ ಗ್ರಾಮದ ಗ್ರಾಮವೊಂದರಲ್ಲಿ ನಡೆದಿದೆ. ಈ ಕರುವಿಗೆ ಎರಡು ತಲೆಗಳು, ಒಂದು ದೇಹ, ಒಟ್ಟು ನಾಲ್ಕು ಕಣ್ಣುಗಳಿವೆ, ಅವುಗಳಲ್ಲಿ ಮಧ್ಯದ ಎರಡು ಕಣ್ಣುಗಳು ಕೆಲಸ ಮಾಡುತ್ತಿಲ್ಲ. ಉಳಿದ ಎರಡು ಕಣ್ಣುಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿವೆ. ಕರುವಿಗೆ ಈಗ ನಿಲ್ಲಲು ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ. ಪಶುವೈದ್ಯರು ಏನು ಹೇಳುತ್ತಾರೆ: ಈ ಸಂದರ್ಭದಲ್ಲಿ, ಇದು ಅಪರೂಪದ ಘಟನೆ ಎಂದು ಪಶುವೈದ್ಯರು ಹೇಳುತ್ತಾರೆ. ಇದು ಸಾಮಾನ್ಯವಾಗಿ ಜನ್ಮಜಾತ ಅಸ್ವಸ್ಥತೆಯಿಂದ ಉಂಟಾಗುತ್ತದೆ. ಆದಾಗ್ಯೂ, ಈ ಕರು ಬದುಕುಳಿಯುವ ಸಾಧ್ಯತೆಗಳು ತುಂಬಾ ಕಡಿಮೆ. ಗ್ರಾಮಸ್ಥರು ಈ ಘಟನೆಯನ್ನು ದೇವರ ಪವಾಡವೆಂದು ಪರಿಗಣಿಸುತ್ತಿದ್ದಾರೆ. ಅವರು ಈ ಕರುವನ್ನು ಪೂಜಿಸುತ್ತಿದ್ದಾರೆ ಮತ್ತು ಅದಕ್ಕೆ ದೀರ್ಘಾಯುಷ್ಯವನ್ನು ಹಾರೈಸುತ್ತಿದ್ದಾರೆ. ಇದು ಮಾತ್ರವಲ್ಲ, ಹತ್ತಿರದ ಹಳ್ಳಿಗಳ ಜನರು ಸಹ ಈ ಕರುವನ್ನು ನೋಡಲು…
ಬೆಳ್ತಂಗಡಿ: ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಶಿಪಟ್ನ ಗ್ರಾಮದ ಉರ್ದುಗುಡ್ಡೆ ಎಂಬಲ್ಲಿ ಸಂಭವಿಸಿದೆ. ಸ್ಥಳೀಯ ನಿವಾಸಿಗಳಾದ ನೊಣಯ್ಯ ಪೂಜಾರಿ (63) ಹಾಗೂ ಅವರ ಪತ್ನಿ ಬೇಬಿ (46) ಆತ್ಮಹತ್ಯೆ ಮಾಡಿಕೊಂಡವರು. ತಮ್ಮ ಮನೆಯ ಸಮೀಪದ ಕಾಡಿನಲ್ಲಿ ಇವರಿಬ್ಬರೂ ಅತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ನೊಣಯ್ಯ ಪೂಜಾರಿ ಕಳೆದ ಐದು ವರ್ಷಗಳಿಂದ ತಲೆನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಪತ್ನಿ ಬೇಬಿ ಮಕ್ಕಳಿಲ್ಲದ ಕೊರಗಲ್ಲಿದ್ದರು. ಇದುವೇ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಅನುಮಾನಿಸಲಾಗಿದೆ. ನೋಣಯ್ಯ ಪೂಜಾರಿಗೆ ಇದು ಎರಡನೇ ಮದುವೆಯಾಗಿದ್ದು, ಅವರ ಮೊದಲ ಪತ್ನಿ ಹತ್ತು ವರ್ಷದ ಹಿಂದೆ ಮೃತಪಟ್ಟಿದ್ದರು. ಕೆಲವು ವರ್ಷಗಳ ಹಿಂದೆ ಅವರು ಬೇಬಿಯನ್ನು ವಿವಾಹವಾಗಿದ್ದರು. ಮೊದಲನೆ ಪತ್ನಿಗೆ ಐವರು ಪುತ್ರರು, ಓರ್ವ ಪುತ್ರಿ ಇದ್ದಾರೆ ಎಂದು ತಿಳಿದು ಬಂದಿದೆ.ವೇಣೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಡುಪಿ : ವಿದ್ಯುತ್ ಕಂಬಕ್ಕೆ ಶಾಲಾ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ವಾಹನದ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಚಾಲಕನ ತಲೆಗೆ ಗಂಭೀರ ಗಾಯವಾದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತೆಕ್ಕಟ್ಟೆ ಬಸ್ ನಿಲ್ದಾಣದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ಶಾಲಾ ವಾಹನ ಇದಾಗಿದ್ದು, ಚಾಲಕನ ಅತೀ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಹೆದ್ದಾರಿಯಲ್ಲಿ ಬೈಕೊಂದಕ್ಕೆ ಢಿಕ್ಕಿ ತಪ್ಪಿಸುವ ಭರದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ವಾಹನ ಹೆದ್ದಾರಿ ಪಕ್ಕದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಹೈಮಾಸ್ಟ್ ವಿದ್ಯುತ್ ಕಂಬ ಮುರಿದುಬಿದ್ದಿದೆ. ಶಾಲಾ ವಾಹನದಲ್ಲಿ ವಿದ್ಯಾರ್ಥಿಗಳು ಇಲ್ಲದೇ ಇದ್ದುದರಿಂದ ಸಂಭವಿಸಬಹುದಾಗಿದ್ದ ಅನಾಹುತ ತಪ್ಪಿದೆ. ಕೋಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲು ಮಾಡಿದ್ದಾರೆ.
ಮಂಗಳೂರು : ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕಾವೂರು ಪೊಲೀಸರು ಮೂವರನ್ನು ಮಂಗಳವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಕಾಸರಗೋಡಿನ ಮೇಘನಾಥ ಟಿ. (19), ಕೇರಳ ಕಯ್ಯೂರಿನ ಶ್ರೀಶಾಂತ್(18) ಮತ್ತು ಸಯೂಜ್ ಎಂ(20) ಎಂದು ಗುರುತಿಸಲಾಗಿದೆ. ಇವರಿಂದ ಮಾದಕ ವಸ್ತು ವಶಪಡಿಸಲಾಗಿದೆ. ಪೊಲೀಸರು ಮಾಲಾಡಿ ಕೋರ್ಟ್ ರಸ್ತೆ ಕಡೆಯಿಂದ ಗೋಲ್ಡ್‌ಫಿಂಚ್ ಮೈದಾನದ ಕಡೆಗೆ ಹೋಗುತ್ತಿದ್ದಾಗ ಅನುಮಾನಾಸ್ಪದವಾಗಿ ನಿಂತಿದ್ದ ಮೂವರನ್ನು ವಶಕ್ಕೆ ಪಡೆದು ವಿಚಾರಿಸಿದರು. ಈ ವೇಳೆ ಆರೋಪಿಗಳು ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 25ನೇ ಅವಧಿಯ ಮೇಯರ್ ಆಗಿ ಮನೋಜ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಮೇಯರ್ ಆಗಿ ಭಾನುಮತಿ ಆಯ್ಕೆಯಾಗಿದ್ದಾರೆ. ಮೇಯರ್ ಸ್ಥಾನಕ್ಕೆ ಪರಿಶಿಷ್ಟ ಜಾತಿ(ಎಸ್‌ಸಿ) ಹಾಗೂ ಉಪ ಮೇಯರ್ ಸ್ಥಾನಕ್ಕೆ ಹಿಂದುಳಿದ ವರ್ಗ ‘ಎ’ ನಿಗದಿಯಾಗಿತ್ತು. ಬಿಜೆಪಿ ಬಹುಮತ ಹೊಂದಿದ್ದರೂ ವಿರೋಧ ಪಕ್ಷ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವುದು ವಾಡಿಕೆ. ಆದರೆ, ಕಾಂಗ್ರೆಸ್‌ನಲ್ಲಿ ಪರಿಶಿಷ್ಟ ಜಾತಿ(ಎಸ್‌ಸಿ) ಮೀಸಲು ಅಭ್ಯರ್ಥಿ ಇಲ್ಲದ ಹಿನ್ನೆಲೆಯಲ್ಲಿ ಮೇಯರ್ ಆಗಿ ಮನೋಜ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮನೋಜ್ ಕುಮಾರ್ 2 ಉಮೇದುವಾರಿಕೆ ಸಲ್ಲಿಸಿದ್ದು, ಎರಡೂ ಸ್ವೀಕೃತಗೊಂಡಿದೆ. ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಭಾನುಮತಿ ಹಾಗೂ ವನಿತಾ ಪ್ರಸಾದ್, ಕಾಂಗ್ರೆಸ್‌ನಿಂದ ಜೀನತ್ ಸಂಶುದ್ದೀನ್ ಸ್ಪರ್ಧಾ ಕಣದಲ್ಲಿದ್ದರು. ಭಾನುಮತಿಯವರು ಎರಡು ಉಮೇದುವಾರಿಕೆ ಸಲ್ಲಿಸಿದ್ದು, ಜಾತಿ ಪ್ರಮಾಣ ಪತ್ರ ಸಲ್ಲಿಸದ ಕಾರಣ ಒಂದು ನಾಮಪತ್ರ ತಿರಸ್ಕೃತಗೊಂಡಿತು. ಚುನಾವಣಾ ಅಧಿಕಾರಿ ಉಮೇದುವಾರಿಕೆ ಹಿಂದೆಗೆದುಕೊಳ್ಳಲು 5 ನಿಮಿಷ ಅವಕಾಶ ನೀಡಿದ್ದು, ವನಿತಾ ಪ್ರಸಾದ್ ನಾಮಪತ್ರ ಹಿಂದೆಗೆದುಕೊಂಡರು. ಈ ಹಿನ್ನೆಲೆಯಲ್ಲಿ ಜೀನತ್ ಸಂಶುದ್ದೀನ್ ಹಾಗೂ…
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮುಂದಿನ ಅವಧಿಗೆ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಮೇಯರ ಸ್ಥಾನಕ್ಕೆ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 17 ಮನಪಾ ಸದಸ್ಯರಾಗಿರುವ ಮನೋಜ್ ಹಾಗೂ ಉಪಮೇಯರ್ ಅಭ್ಯರ್ಥಿತನಕ್ಕೆ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 58ರ ಮನಪಾ ಸದಸ್ಯರಾಗಿರುವ ಶ್ರೀಮತಿ ಭಾನುಮತಿ ಪಿ.ಎಸ್. ಅವರನ್ನು ಭಾರತೀಯ ಜನತಾ ಪಾರ್ಟಿಯ ಕಡೆಯಿಂದ ಆಯ್ಕೆಮಾಡಲಾಗಿದೆ. ಈ ಆಯ್ಕೆ ಪ್ರಕ್ರಿಯೆಯು ದ.ಕ. ಜಿಲ್ಲಾ ಕಛೇರಿಯಲ್ಲಿ ಸಭೆಯಲ್ಲಿ ನಡೆಯಿತು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.