Author: main-admin

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಯಾವುದೇ ಹಂತದ ಅಧಿಕಾರಿ ಅಥವಾ ಸಿಬ್ಬಂದಿ ಅಶಿಸ್ತು ಮತ್ತು ಬೇಜವಾಬ್ದಾರಿತನ ತೋರಿದರೆ ಮುಲಾಜಿಲ್ಲದೆ ಸೇವೆಯಿಂದ ವಜಾಗೊಳಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಕಡಕ್ ಎಚ್ಚರಿಕೆ ನೀಡಿದ್ದಾರೆ. ಆಡುಗೋಡಿಯ ಸಿಎಆರ್ ದಕ್ಷಿಣ ಮೈದಾನದಲ್ಲಿ ನಡೆದ ಮಾಸಿಕ ಪರೇಡ್ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಕರ್ತವ್ಯ ಲೋಪವೆಸಗುವವರನ್ನು ತಕ್ಷಣವೇ ಅಮಾನತು ಮಾಡಲಾಗುವುದು. ಈಗಾಗಲೇ ನಿಯಮ ಉಲ್ಲಂಘಿಸಿರುವ ಹಲವರ ವಿರುದ್ಧ ಕಠಿಣ ಶಿಸ್ತುಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು. “ಹಿಂದೆ ಸಾರ್ವಜನಿಕರು ಕರೆ ಮಾಡಿದಾಗ ಪೊಲೀಸರು ಘಟನಾ ಸ್ಥಳಕ್ಕೆ ತಲುಪಲು ಸರಾಸರಿ 13 ನಿಮಿಷ ತಗಲುತ್ತಿತ್ತು. ಆದರೆ ಈಗ ಕೇವಲ 6 ನಿಮಿಷ 30 ಸೆಕೆಂಡ್‌ಗಳಲ್ಲಿ ಪೊಲೀಸರು ಸ್ಥಳಕ್ಕೆ ಧಾವಿಸುತ್ತಿದ್ದಾರೆ. ಬೆಂಗಳೂರಿನಂತಹ ಬೃಹತ್ ಮಹಾನಗರದಲ್ಲಿ ಸಂಕಷ್ಟದಲ್ಲಿರುವವರಿಗೆ ಸಕಾಲದಲ್ಲಿ ಸ್ಪಂದಿಸುತ್ತಿರುವುದು ಇಲಾಖೆಗೆ ಹೆಮ್ಮೆಯ ವಿಚಾರ,” ಎಂದರು. ಮಾದಕ ಮುಕ್ತ ನಗರಕ್ಕಾಗಿ ‘ರೈಸ್’ ಹಾಗೂ ‘ಬೇಡ ಬ್ರೋ’ ಆಂದೋಲನ ಮಾದಕ ವಸ್ತು ವಿರೋಧಿ ದಿನದ ಅಂಗವಾಗಿ ಕಂಠೀರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಗಳು ಹಾಗೂ…

Read More

ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಂಡಿದ್ದು, ಆಗಾಗ ನಡೆಸುವ ಆಡಳಿತಾತ್ಮಕ ಸರ್ಜರಿಯ ಭಾಗವಾಗಿ ಇದೀಗ ಐದು ಮಂದಿ ಐಎಎಸ್ (IAS) ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಆಡಳಿತಾತ್ಮಕ ಹಿತದೃಷ್ಟಿಯಿಂದ ಕೈಗೊಳ್ಳಲಾಗಿರುವ ಈ ವರ್ಗಾವಣೆ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಪ್ರಕಟಣೆ ತಿಳಿಸಿದೆ. ಹಿರಿಯ ಐಎಎಸ್ ಅಧಿಕಾರಿ ಹರ್ಷ ಗುಪ್ತ ಅವರಿಗೆ ಸರ್ಕಾರವು ಮಹತ್ವದ ಹೊಸ ಜವಾಬ್ದಾರಿಯನ್ನು ನೀಡಿದೆ. ಸರ್ಕಾರ ಹೊಸದಾಗಿ ಆರಂಭಿಸಿರುವ ‘ಪ್ರಜಾ ಸೇವಾ ಇಲಾಖೆ’ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಹರ್ಷ ಗುಪ್ತ ಅವರನ್ನು ನೇಮಕ ಮಾಡಲಾಗಿದೆ. ಇದರೊಂದಿಗೆ, ಅವರು ಈ ಹಿಂದೆ ನಿರ್ವಹಿಸುತ್ತಿದ್ದ ಕರ್ನಾಟಕ ಮೇಲ್ಮನವಿ ನ್ಯಾಯಮಂಡಳಿಯ ಅಧ್ಯಕ್ಷ ಸ್ಥಾನದ ಹೆಚ್ಚುವರಿ ಜವಾಬ್ದಾರಿಯನ್ನೂ ಸಹ ಅವರ ಬಳಿಯೇ ಉಳಿಸಿಕೊಳ್ಳಲು ಸರ್ಕಾರ ನಿರ್ಧರಿಸಿದೆ. ವರ್ಗಾವಣೆಗೊಂಡ ಅಧಿಕಾರಿಗಳು ಮತ್ತು ಅವರ ನೂತನ ಹುದ್ದೆಗಳ ವಿವರ ಹೀಗಿದೆ: ಅಧಿಕಾರಿಯ ಹೆಸರುನೂತನ ಹುದ್ದೆ / ಜವಾಬ್ದಾರಿಹರ್ಷ ಗುಪ್ತಪ್ರಧಾನ ಕಾರ್ಯದರ್ಶಿ, ಪ್ರಜಾಸೇವಾ ಇಲಾಖೆ (ಕರ್ನಾಟಕ ಮೇಲ್ಮನವಿ ನ್ಯಾಯಮಂಡಳಿಯ…

Read More

ಮಂಗಳೂರು: ನಗರದ ಕೋಡಿಯಾಲ್‌ನಲ್ಲಿರುವ ಜೈಲಿನೊಳಗೆ ಗಾಂಜಾ ಎಸೆದ ಆರೋಪಿಯನ್ನು ಕೆಎಸ್‌ಐಎಸ್‌ಎಫ್ ಸಿಬ್ಬಂದಿ ಬೆನ್ನಟ್ಟಿ ಹಿಡಿದ ಘಟನೆ ಗುರುವಾರ ಮುಂಜಾನೆ ನಡೆದಿದೆ. ಮೂಲತಃ ಬಂಟ್ವಾಳ ಕೊಳತ್ತಮಜಲು ಕೋಳಕೇರಿಯ ಪ್ರಸಕ್ತ ಉರ್ವದಲ್ಲಿ ವಾಸವಾಗಿರುವ ತಿಲಕ್‌ರಾಜ್ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.ಗುರುವಾರ ಮುಂಜಾನೆ ಸುಮಾರು 4:20ರ ವೇಳೆಗೆ ಕಾರಾಗೃಹದ ಒಳಗಿರುವ ಅಡುಗೆ ಮನೆ ಪ್ರದೇಶಕ್ಕೆ ಅನುಮಾನಾಸ್ಪದ ವಸ್ತುವನ್ನು ಅಪರಿಚಿತ ವ್ಯಕ್ತಿಯೊಬ್ಬ ಎಸೆದಿರುವುದನ್ನು ಕರ್ತವ್ಯನಿರತ ಕೆಎಸ್‌ಐಎಸ್‌ಎಫ್‌ ಆರ್‌ಪಿಸಿ ಕಿರಣ್ ಎಂಬವರು ಗಮನಿಸಿದರು. ಹಾಗೇ ಎಎಸ್ಸೆಗೆ ಮಾಹಿತಿ ನೀಡಿ ಸುಮಾರು 500 ಮೀಟರ್ ದೂರದವರೆಗೆ ಬೆನ್ನಟ್ಟಿಕೊಂಡು ಹೋಗಿ ಆರೋಪಿಯನ್ನು ಹಿಡಿದರು. ಬಳಿಕ ಪೊಲೀಸ್ ನಿರೀಕ್ಷಕ ಸುಭಾಷ್‌ರಿಗೆ ಮಾಹಿತಿ ನೀಡಿದ್ದು, ಅವರು ಬಂದು ವಿಚಾರಣೆ ನಡೆಸಿದಾಗ ಆರೋಪಿ ಸತ್ಯ ಬಾಯ್ದಿಟ್ಟಿದ್ದಾನೆ ಎಂದು ತಿಳಿದು ಬಂದಿದೆ.ಮೂಡುಶೆಡ್ಡೆ ನಿವಾಸಿಯೊಬ್ಬ ಗಾಂಜಾ, ಲೈಟರ್, ಗಾಂಜಾ ಸೇದುವ ಪೇಪರ್‌ಗಳನ್ನು ಕೊಟ್ಟು ಈ ವಸ್ತುಗಳನ್ನು ಕಾರಾಗೃಹದ ಒಳಗೆ ಎಸೆಯಬೇಕು ಎಂದು ಹೇಳಿ ಈ ಕೃತ್ಯ ಎಸಗಲು 2 ಸಾವಿರ ರೂ.ನೀಡಿರುತ್ತಾನೆ. ಅಲ್ಲದೆ ಕಾರಾಗೃಹದಲ್ಲಿ ಬಂಧಿಯಾಗಿರುವ ಲಾಯ್ ವೇಗಸ್…

Read More

ಉಡುಪಿ: ಅಪ್ರಾಪ್ತ ವಯಸ್ಸಿನ ಬಾಲಕನನ್ನು ಬ್ರಹ್ಮಾವರ ಬಸ್ ನಿಲ್ದಾಣದಿಂದ ಅಪಹರಿಸಿಕೊಂಡು ಕೇರಳಕ್ಕೆ ಕೊಂಡೊಯ್ದು ಅಲ್ಲಿ ಬಲವಂತವಾಗಿ ಕೆಲಸಕ್ಕೆ ಸೇರಿಸಿ ದೌರ್ಜನ್ಯ ಎಸಗಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಾರಂಬಳ್ಳಿ ಗ್ರಾಮ ಸಾಲಿಕೇರಿಯ ವಿಖ್ಯಾತ್ ಆಚಾರ್ಯ (19) ಆಗೂ ಮಟಪಾಡಿ ಗ್ರಾಮದ ನಿವಾಸಿ ಸುಚಿತ್ ನಾಯಕ್ (20) ಎಂದು ಗುರುತಿಸಲಾಗಿದೆ. ಇವರಿಬ್ಬರು ಜೂನ್ 1ರಂದು ಮುಂಜಾನೆ 8:30ರ ಸುಮಾರಿಗೆ ಬ್ರಹ್ಮಾವರ ಬಸ್‌ ನಿಲ್ದಾಣದ ಬಳಿಯಿಂದ ಅಪ್ರಾಪ್ತ ಬಾಲಕನನ್ನು ಬಲವಂತವಾಗಿ ಅಪಹರಿಸಿಕೊಂಡು ಕೇರಳದ ತಲಪಾಡಿ ಕುಂಜತ್ತೂರು ಪದವು ಎಂಬಲ್ಲಿಗೆ ಕರೆದೊಯ್ದಿದ್ದರು.ಅಲ್ಲಿ ಆರೋಪಿಗಳು ಬಾಲಕನನ್ನು ಬಲಾತ್ಕಾರವಾಗಿ ವುಡ್ ಕಂಪೆನಿಗೆ ಕೆಲಸಕ್ಕೆ ಸೇರಿಸಿದ್ದರು. ಬಾಲಕ ತನಗೆ ಮನೆಗೆ ಹೋಗಬೇಕೆಂದು ಹಠ ಹಿಡಿದಾಗ, ಜೂ.9ರಂದು ಸುಚಿತ್ ತಾವಿದ್ದ ರೂಮಿನಲ್ಲಿ ಬಾಲಕನಿಗೆ ಹಲ್ಲೆ ನಡೆಸಿದ್ದು, ವಿಖ್ಯಾತ್ ಚೂರಿ ತೋರಿಸಿ ಕೊಲೆ ಬೆದರಿಕೆ ಹಾಕಿ ನಿಂದಿಸಿದ್ದ. ಈ ಕೃತ್ಯವನ್ನು ಇನ್ನೊಬ್ಬ ಮೊಬೈಲ್‌ನಲ್ಲಿ ವಿಡಿಯೋ ಮಾಡಿರುವುದಾಗಿ ಬಾಲಕನ ತಂದೆ ಬ್ರಹ್ಮಾವರ ಠಾಣೆಯಲ್ಲಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಅಪಹರಿಸಲ್ಪಟ್ಟ ಅಪ್ರಾಪ್ತ ಬಾಲಕ ಬ್ರಹ್ಮಾವರದ…

Read More

ಉಡುಪಿ: ಕಾರಿಗೆ ಫುಲ್ ಟ್ಯಾಂಕ್ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿಯಾಗಿದ್ದ ಪ್ರಕರಣವನ್ನು ಶಿರ್ವ ಪೊಲೀಸರು ಭೇದಿಸಿ, ಮೂವರು ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಿ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಮಹಮ್ಮದ್ ರಿಯಾಜ್ (26), ಕೋಟೆಕಾರ್ ನಿವಾಸಿ, ಮಹಮ್ಮದ್ ಅಫ್ರಾಜ್ (23), ಶಿರ್ವ ನಿವಾಸಿ ಹಾಗೂ ಆಶಿಲ್ (21), ಅಂಬಾಗಿಲು ನಿವಾಸಿ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಫೋರ್ಡ್ ಇಕೋಸ್ಪೋರ್ಟ್ ಕಾರು (KA-14-MB-8452) ವಶಪಡಿಸಿಕೊಳ್ಳಲಾಗಿದೆ. ಜೂನ್ 27ರಂದು ರಾತ್ರಿ 9.10ರ ಸುಮಾರಿಗೆ ಕಾರ್ಕಳ ತಾಲೂಕಿನ ಕುರ್ಕಾಲು ಗ್ರಾಮದ ಸುಭಾಸ್ ನಗರದಲ್ಲಿರುವ ಫಿಲ್ಲಿಂಗ್ ಸ್ಟೇಷನ್ ಫ್ಯೂಯೆಲ್ ಬಂಕ್‌ಗೆ KA-14-MB-8452 ನೋಂದಣಿ ಸಂಖ್ಯೆಯ ಬಿಳಿ ಬಣ್ಣದ ಫೋರ್ಡ್ ಇಕೋಸ್ಪೋರ್ಟ್ ಕಾರಿನಲ್ಲಿ ಮೂವರು ಬಂದಿದ್ದರು. ಕಾರಿನಲ್ಲಿದ್ದ ವ್ಯಕ್ತಿಯೊಬ್ಬರು ಸಿಬ್ಬಂದಿ ಶಶಾಂಕ್ ಅವರಿಗೆ ಫುಲ್ ಟ್ಯಾಂಕ್ ಡೀಸೆಲ್ ತುಂಬಿಸುವಂತೆ ಸೂಚಿಸಿದ್ದು, ₹4,711.09 ಮೌಲ್ಯದ ಡೀಸೆಲ್ ತುಂಬಿಸಲಾಗಿದೆ. ಬಳಿಕ ಕ್ಯೂಆರ್ ಕೋಡ್ ಮೂಲಕ ಹಣ ಪಾವತಿಸುವುದಾಗಿ ಹೇಳಿ, ಬಿಲ್ ನೀಡುವಂತೆ ಸಿಬ್ಬಂದಿಗೆ ಸೂಚಿಸಿದ್ದರು. ಸಿಬ್ಬಂದಿ ಬಿಲ್ ತೆಗೆಯುವಷ್ಟರಲ್ಲಿ…

Read More

ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಡಗದಾಲು ಗ್ರಾಮದಲ್ಲಿ ಸರ್ಕಾರದ ಪರವಾನಗಿಯಿಲ್ಲದೆ ಹಣವನ್ನು ಪಣವಾಗಿಟ್ಟುಕೊಂಡು ಅಕ್ರಮವಾಗಿ ಜೂಜಾಟ ನಡೆಸುತ್ತಿದ್ದ 28 ಮಂದಿಯನ್ನು ಕೊಡಗು ಜಿಲ್ಲಾ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಜುಲೈ 1ರಂದು ಮಂಡ್ಯ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲಾ ಮೂಲದ 28 ಆರೋಪಿಗಳನ್ನು ವಶಕ್ಕೆ ಪಡೆದು, ಅವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಬಂಧಿತರಿಂದ ₹11,08,130 ನಗದು, 5 ಕಾರುಗಳು, 1 ದ್ವಿಚಕ್ರ ವಾಹನ ಹಾಗೂ 35 ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಡಿ.ಎಸ್.ಪಿ. ಸೂರಜ್ ಪಿ.ಎಂ., ಪಿ.ಐ. ಚಂದ್ರಶೇಖರ್ ಎಚ್.ಎಂ. ಹಾಗೂ ಮಡಿಕೇರಿ ಉಪವಿಭಾಗದ ಅಪರಾಧ ತನಿಖೆ/ಪತ್ತೆ ಅಧಿಕಾರಿಗಳ ತಂಡ ಈ ಕಾರ್ಯಾಚರಣೆ ನಡೆಸಿತು.

Read More

ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಸಮೀಪ ಅನುಮಾನಾಸ್ಪದ ರೀತಿಯಲ್ಲಿ 27 ವರ್ಷದ ಯುವಕನ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರ ಸಮೀಪ ಇರುವ ಯನೋಪೊಯೋ ಖಾಸಗಿ ವಿದ್ಯುತ್ ಸಬ್‌ಸ್ಟೇಷನ್ ಜಾಗದಲ್ಲಿ ಮೃತದೇಹ ಪತ್ತೆಯಾಗಿದೆ. ಮೃತನನ್ನು ತಣ್ಣೀರುಪಂತ ಗ್ರಾಮದ ಕಲ್ಲೇರಿ ಜನತಾ ಕಾಲೋನಿ ನಿವಾಸಿ ಶರೀಫ್ ಕೆ. ಅವರ ಪುತ್ರ ಮುಸ್ತಾಕ್ (27) ಎಂದು ಗುರುತಿಸಲಾಗಿದೆ. ಮುಸ್ತಾಕ್ ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಮಗನನ್ನು ಕೊಲೆ ಮಾಡಲಾಗಿದೆ ಎಂದು ಮೃತನ ತಂದೆ ಶರೀಫ್ ಶಂಕೆ ವ್ಯಕ್ತಪಡಿಸಿದ್ದು, ಪ್ರಕರಣದ ಕುರಿತು ಸಮಗ್ರ ಹಾಗೂ ಕೂಲಂಕುಶ ತನಿಖೆ ನಡೆಸುವಂತೆ ಪೊಲೀಸರನ್ನು ಆಗ್ರಹಿಸಿದ್ದಾರೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚಲು ವಿವಿಧ ಆಯಾಮಗಳಲ್ಲಿ ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ತನಿಖೆ ಪೂರ್ಣಗೊಂಡ ಬಳಿಕವೇ ಸಾವಿನ ಹಿಂದಿನ ನಿಖರ ಕಾರಣ ಹಾಗೂ ಕೊಲೆ ನಡೆದಿದೆಯೇ…

Read More

ಉಡುಪಿ: ಖಾಸಗಿ ಬಸ್ಸೊಂದರ ಹಿಂಬದಿಯ ಏಣಿಗೆ ನೇತಾಡಿಕೊಂಡು ವಿದ್ಯಾರ್ಥಿಗಳು ಅಪಾಯಕಾರಿ ಪ್ರಯಾಣ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪ್ರಯಾಣಿಕರ ಸುರಕ್ಷತೆಯ ಬಗ್ಗೆ ತೀವ್ರ ಆತಂಕ ವ್ಯಕ್ತವಾಗಿದೆ. ಉಡುಪಿ ಜಿಲ್ಲೆಯ ಹರಿಕಂಡಿಗೆ-ಪೆರ್ಡೂರು ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್ಸೊಂದರ ಏಣಿಯಲ್ಲಿ ವಿದ್ಯಾರ್ಥಿಗಳು ಅಪಾಯಕಾರಿಯಾಗಿ ನೇತಾಡಿಕೊಂಡು ಪ್ರಯಾಣಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಸ್ಸಿನಲ್ಲಿ ವಿಪರೀತ ಜನಸಂದಣಿ ಇದ್ದ ಹಿನ್ನಲೆಯಲ್ಲಿ ಅನಿವಾರ್ಯವಾಗಿ ವಿದ್ಯಾರ್ಥಿಗಳು ಪ್ರಾಣದ ಹಂಗು ತೊರೆದು ಬಸ್ಸಿನ ಹಿಂಬದಿಯ ಏಣಿಯನ್ನು ಹಿಡಿದು ನೇತಾಡುತ್ತಾ ಪ್ರಯಾಣಿಸುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.ಈ ಘಟನೆಯು ಸಾರ್ವಜನಿಕರಲ್ಲಿ ತೀವ್ರ ಕಳವಳ ಮೂಡಿಸಿದೆ. ಈ ಹಿನ್ನೆಲೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಾರಿಗೆ ಇಲಾಖೆಯು ತಕ್ಷಣವೇ ಸೂಕ್ತ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Read More

ಧರ್ಮಸ್ಥಳ: ಸುಮಾರು 09 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಬಂಧಿಸಿದ್ದಾರೆ.ಧರ್ಮಸ್ಥಳ ಪೊಲೀಸ್ ಠಾಣೆಯ 2016ರ (ಅ.ಕ್ರ.169/2016) ಕಳವು ಹಾಗೂ ಸಾಕ್ಷ್ಯ ನಾಶ (ಐಪಿಸಿ ಕಲಂ 379, 201) ಪ್ರಕರಣದ ಆರೋಪಿ ಆಂಧ್ರಪ್ರದೇಶದ ಚಿತ್ತೂರು ನಿವಾಸಿ ಶ್ರೀನಿವಾಸಲು ವಿ. ಕಳೆದ 09 ವರ್ಷಗಳಿಂದ ತಲೆಮರೆಸಿಕೊಂಡು ವಿಚಾರಣೆಗೆ ಹಾಜರಾಗುತ್ತಿರಲಿಲ್ಲ. ಧರ್ಮಸ್ಥಳ ಠಾಣೆಯ ಸಿಬ್ಬಂದಿಗಳಾದ ವೃಷಭ ಹಾಗೂ ಚರಣ್ ರಾಜ್ ಅವರು ಜೂನ್ 30ರಂದು ಚಿತ್ತೂರಿನಲ್ಲಿ ಆರೋಪಿಯನ್ನು ಬಂಧಿಸಿ, ಜುಲೈ 1ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Read More

ಉಡುಪಿ: ಮಾಜಿ ಸಚಿವ ಮತ್ತು ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಸಂದೀಪ್ ಸಾಲಿಯನ್ (40) ಮಂಗಳವಾರ ಗೋವಾದ ಕಲ್ಲಂಗೂಟ್‌ ಬೀಚ್ ಬಳಿಯ ಅತಿಥಿ ಗೃಹದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಸಂದೀಪ್ ಉಡುಪಿ ಜಿಲ್ಲೆಯ ಮಲ್ಪೆ ಮೂಲದವರು. ಸಂದೀಪ್ ಹಲವು ವರ್ಷಗಳ ಹಿಂದೆ ಪ್ರಮೋದ್ ಮಧ್ವರಾಜ್ ಅವರ ಆಪ್ತ ಸಹಾಯಕ ಕೆಲಸವನ್ನು ತೊರೆದಿದ್ದರು. ಪ್ರಸ್ತುತ ಅವರು ಪ್ರವಾಸೋದ್ಯಮ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದರು ಮತ್ತು ಮಲ್ಪೆಯಲ್ಲಿ ಪ್ರವಾಸಿ ದೋಣಿಯನ್ನು ಹೊಂದಿದ್ದರು ಎಂದು ವರದಿಯಾಗಿದೆ. ಅವರು ಮೂರು ದಿನಗಳ ಹಿಂದೆ ಪ್ರವಾಸಕ್ಕೆಂದು ಗೋವಾಕ್ಕೆ ತೆರಳಿದ್ದರು. ಅವರ ಹಠಾತ್ ಸಾವು ಹೃದಯಾಘಾತದಿಂದ ಉಂಟಾಗಿದೆಯೇ ಅಥವಾ ಕೊಲೆ ನಡೆದಿವೆಯೇ ಎಂಬ ಬಗ್ಗೆ ಸಂಶಯ ವ್ಯಕ್ತವಾಗಿದ್ದು, ಕಳವಳ ವ್ಯಕ್ತವಾಗಿದೆ. ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

Read More