ಪುತ್ತೂರು: ಸಿಡಿಲು ಬಡಿದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ಕೆಯ್ಯೂರು ನಿವಾಸಿ ನಾರಾಯಣ (45) ಮೃತ ವ್ಯಕ್ತಿ. ಮನೆಯ ಮುಂಭಾಗದ ಶೀಟ್ ನಲ್ಲಿ ಬಲ್ಬ್ ಹೊತ್ತುತ್ತಿಲ್ಲ ಎಂದು ಸರಿಪಡಿಸುತ್ತಿದ್ದ ಸಂದರ್ಭ ಸಿಡಿಲು ಬಡಿದು ನೆಲಕ್ಕೆ ಕುಸಿದು ಬಿದ್ದ ನಾರಾಯಣ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆತರಾಯಲಿತಾದರೂ ಅವರು ದಾರಿ ಮದ್ಯೆ ಮೃತಪಟ್ಟಿದ್ದರು. ಮೃತರು ಕುಟುಂಬಸ್ಥರನ್ನು ಅಗಲಿದ್ದಾರೆ.
Author: main-admin
ಮಂಗಳೂರು: ಫೆಂಗಲ್ ಚಂಡಮಾರುತದಿಂದಾಗಿ ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ ನಾಳೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು (12ನೇ ತರಗತಿವರೆಗೆ)ಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟನೆ ಹೊರಡಿಸಿದ್ದಾರೆ.ತಮಿಳುನಾಡು ಮತ್ತು ಪುದುಚೇರಿಯಲ್ಲಿ ಕಾಣಿಸಿಕೊಂಡಿರುವ ಫೆಂಗಲ್ ಚಂಡಮಾರುತದ ಪರಿಣಾಮ ದ.ಕ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಪ್ರಕಟನೆಯಲ್ಲಿ ತಿಳಿಸಿದೆ.ಭಾರೀ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾಡಳಿತವು ಹೊರಡಿಸಿದ ಪ್ರಕಟನೆಯಲ್ಲಿ ಸೋಮವಾರ ಮತ್ತು ಮಂಗಳವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ ಮೀನುಗಾರರಿಕೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ.
ಬೆಂಗಳೂರು :ಪ್ರಸಕ್ತ ಸಾಲಿನ (2024-25) ದ್ವೀತಿಯ ಪಿಯುಸಿ ಮತ್ತು ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟ ಮಾಡಿದೆ. ಮಾರ್ಚ್ 1 ರಿಂದ 19ರ ವರೆಗೆ ದ್ವೀತಿಯ ಪಿಯುಸಿ ಪರೀಕ್ಷೆಗಳು ನಡೆದರೆ, ಮಾರ್ಚ್ 20 ರಿಂದ ಏಪ್ರಿಲ್ 2ರ ವರೆಗೆ ಎಸ್ಎಸ್ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು, ಬಹುತೇಕ ತಾತ್ಕಾಲಿಕ ವೇಳಾಪಟ್ಟಿಯೇ ಅಂತಿಮವಾಗಲಿದೆ. ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು 15 ದಿನ ಕಾಲಾವಕಾಶ ನೀಡಿಲಾಗಿದ್ದು, ಡಿ.16ರ ಒಳಗೆ ಆಕ್ಷೇಪಣೆಯಲ್ಲಿ ಬೋರ್ಡ್ ಸಲ್ಲಿಕೆ ಮಾಡಬಹುದಾಗಿದೆ. ತಾತ್ಕಾಲಿಕ ವೇಳಾಪಟ್ಟಿ : ದ್ವೀತಿಯ ಪಿಯುಸಿ ಪರೀಕ್ಷೆ- ವೇಳಾಪಟ್ಟಿ ಮಾರ್ಚ್ 1- ಕನ್ನಡ, ಅರೇಬಿಕ್.ಮಾರ್ಚ್ 3- ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನಮಾರ್ಚ್ 4- ತಮಿಳು, ತೆಲುಗು, ಮಲಯಾಳಂ,ಮರಾಠಿ, ಉರ್ದು,ಸಂಸ್ಕೃತ,ಫ್ರೆಂಚ್.ಮಾರ್ಚ್ 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ.ಮಾರ್ಚ್ 7- ಇತಿಹಾಸ, ಭೌತಶಾಸ್ತ್ರಮಾರ್ಚ್ 8- ಹಿಂದಿ.ಮಾರ್ಚ್ 10- ಐಚಿಕ ಕನ್ನಡ, ಲೆಕ್ಕಶಾಸ್ತ್ರ,ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ.ಮಾರ್ಚ್ 12- ಮನಃಶಾಸ್ತ್ರ, ರಸಾಯನಶಾಸ್ತ್ರ,ಮೂಲ ಗಣಿತ.ಮಾರ್ಚ್…
ಮಂಡ್ಯ: ಸರ್ಕಾರಿ ಕೆಲಸ ಬಿಟ್ಟು ಸನ್ಯಾಸತ್ವ ಸ್ವೀಕರಿಸಲು ಮಂಡ್ಯ ಅಪರ ಜಿಲ್ಲಾಧಿಕಾರಿ ನಿರ್ಧರಿಸಿದ್ದಾರೆ. ಎಡಿಸಿಯ ಈ ನಡೆ ಜನರಲ್ಲಿ ಅಚ್ಚರಿ ಮೂಡಿಸಿದೆ. ಮಂಡ್ಯ ಅಪರ ಜಿಲ್ಲಾಧಿಕಾರಿ ಹೆಚ್.ಎಲ್.ನಾಗರಾಜು ಅವರು ಕೆಲವೇ ದಿನಗಳಲ್ಲಿ ಕೆಲಸ ಬಿಟ್ಟು ನಿವೃತ್ತಿ ಪಡೆದು ಸನ್ಯಾಸ ದೀಕ್ಷೆ ಸ್ವೀಕರಿಸಲಿದ್ದಾರೆ. ಈ ನಿಟ್ಟಿನಲ್ಲಿ ಶೀಘ್ರದಲ್ಲೇ ಕೆಲಸಕ್ಕೆ ರಾಜೀನಾಮೆ ನೀಡಲಿದ್ದಾರೆ. ಬಳಿಕ ವಿಶ್ವ ಒಕ್ಕಲಿಗರ ಸಂಸ್ಥಾನ ಮಠದಲ್ಲಿ ಸನ್ಯಾಸ ದೀಕ್ಷೆ ಸ್ವೀಕಾರ ಮಾಡಲಿದ್ದಾರೆ. ಚಂದ್ರಶೇಖರನಾಥಶ್ರೀ ಶಿಷ್ಯರಾಗಿ ಮುಂದುವರೆಯಲಿದ್ದಾರೆ. ಈ ಹಿಂದೆಯೂ ಹೆಚ್.ಎಲ್.ನಾಗರಾಜು ಸನ್ಯಾಸತ್ವ ಸ್ವೀಕರಿಸಿದ್ದರು. 2011ರಲ್ಲಿ ಆದಿಚುಂಚನಗಿರಿ ಮಠದಲ್ಲಿ ಸ್ವಾಮೀಜಿಯಾಗಿ ದೀಕ್ಷೆ ಪಡೆದಿದ್ದರು. ‘ನಿಶ್ಚಲಾನಂದನಾಥ’ ಎಂದು ಹೆಸರು ಬದಲಾವಣೆ ಮಾಡಿಕೊಂಡಿದ್ದರು. ತಹಶೀಲ್ದಾರ್ ಹುದ್ದೆ ತ್ಯಜಿಸಿ ಸನ್ಯಾಸತ್ವ ಸ್ವೀಕರಿಸಿದ್ದರು. ಆದರೆ ಹಿತೈಷಿಗಳು, ಸಾರ್ವಜನಿಕರ ಒತ್ತಾಯಕ್ಕೆ ಮಣಿದು ಸನ್ಯಾಸತ್ವ ತ್ಯಜಿಸಿ ಅಧಿಕಾರಿಯಾಗಿದ್ದರು. ಇದೀಗ ಮತ್ತೆ ಕಾವಿ ಧರಿಸಲು ನಿರ್ಧರಿಸಿರುವ ಹೆಚ್.ಎಲ್ ನಗರಾಜು, ಮತ್ತೆ ಸನ್ಯಾಸತ್ವ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.
ಬಂಟ್ವಾಳ : ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಕಾವಳಪಡೂರು ಗ್ರಾಮದ ಮಧ್ವ ನಿವಾಸಿ ಮೊಹಮ್ಮದ್ ಅನ್ಸಾರ್ ಬಂಧಿತ ಆರೋಪಿ.ಆರೋಪಿಯು 2012ರಲ್ಲಿ ಕಾವಳಕಟ್ಟೆಯ ಮನೆಯೊಂದರಲ್ಲಿ ನಡೆಯುತ್ತಿದ್ದ ಜ್ಯೋತಿಷ್ಯಶಾಸ್ತ್ರದ ವಿಚಾರದಲ್ಲಿ ವಿವಾದದ ಹಿನ್ನೆಲೆ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದನು. ಈ ಬಗ್ಗೆ ಅನ್ಸಾರ್ ಮೇಲೆ ಪ್ರಕರಣ ದಾಖಲಾಗಿತ್ತು. ಆದರೆ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.ಇದೀಗ ಬಂಟ್ವಾಳ ಡಿವೈಎಸ್‌ಪಿ ಎಸ್.ವಿಜಯಪ್ರಸಾದ್ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ಇನ್‌ಸ್ಪೆಕ್ಟರ್ ಶಿವಕುಮಾರ್ ಹಾಗೂ ಪಿಎಸ್‌ಐಗಳಾದ ಹರೀಶ್ ಎಂ.ಆರ್. ಮೂರ್ತಿ, ಲೋಲಾಕ್ಷ ಅವರ ನೇತೃತ್ವದಲ್ಲಿ ಹೆಡ್‌ಕಾನ್ಸ್‌ಟೆಬಲ್ ಗಣೇಶ್‌ಪ್ರಸಾದ್, ಕಾನ್ಸ್‌ಟೆಬಲ್‌ಗಳಾದ ಪ್ರವೀಣ್, ಶಿದ್ದಪ್ಪ, ಶಿವಾನಂದ ಮಡ್ಡಿ, ನಾಗರಾಜ್ ಅವರು ಆರೋಪಿಯನ್ನು ಬೆಳ್ತಂಗಡಿಯಲ್ಲಿ ಬಂಧಿಸಿದ್ದಾರೆ. ಬಳಿಕ ಆತನನ್ನು ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಹಾಸನ: ಇಂದು ಡಿವೈಎಸ್‌ಪಿಯಾಗಿ ಅಧಿಕಾರ ಸ್ವೀಕರಿಸಬೇಕಿತ್ತು. ಇಂತಹ ಹೊತ್ತಿನಲ್ಲೇ ಅಧಿಕಾರಿ ಬಾಳಲ್ಲಿ ವಿಧಿಯಾಟವಾಡಿದೆ. ಡ್ಯೂಟಿ ರಿಪೋರ್ಟ್‌ಗೆ ಬಂದ ದಿನವೇ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಹರ್ಷವರ್ಧನ್, ಹಾಸನ ಬಳಿ ಭೀಕರ ರಸ್ತೆ ಅಪಘಾತದಲ್ಲಿ ದುರಂತ ಅಂತ್ಯ ಕಂಡಿದ್ದಾರೆ. ಹಾಸನದ ಎಸ್‌ಪಿ ಕಚೇರಿಯಲ್ಲಿ ಅಧಿಕಾರ ಸ್ವೀಕಾರಕ್ಕೆ ಆಗಮಿಸುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಮೈಸೂರಿನ ಪೊಲೀಸ್ ಅಕಾಡಮೆಯಿಂದ ಹಾಸನದ ಕಡೆ ಬರುತ್ತಿದ್ದ ವೇಳೆ ಪೊಲೀಸ್ ಜೀಪು ಅಪಘಾತಕ್ಕೀಡಾಗಿದೆ. ಐಪಿಎಸ್ ವೃತ್ತಿ ಜೀವನ ಆರಂಭಿಸಿದ ಮೊದಲ ದಿನವೇ ಹರ್ಷಬರ್ಧನ್ ದುರಂತ ಅಂತ್ಯ ಕಂಡಿದ್ದಾರೆ. ಪೊಲೀಸ್ ವಾಹನದ ಟೈಯರ್ ಸ್ಪೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಾಹನ ಅಪಘಾತವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮೈಸೂರಿನ ಐಜಿಪಿ ಕಚೇರಿಗೆ ತೆರಳಿ ಅಧಿಕಾರಿ ಭೇಟಿಯಾಗಿದ್ದ ಹರ್ಷಬರ್ಧನ್ ಮಹತ್ವದ ಮಾತುಕತೆ ನಡೆಸಿದ್ದರು. ಈ ವೇಳೆ ಹರ್ಷಬರ್ಧನ್‌ಗೆ ಶುಭಕೋರಿ ಕಳುಹಿಸಲಾಗಿತ್ತು. ಮಧ್ಯ ಪ್ರದೇಶ ಮೂಲದ ಹರ್ಷಬರ್ಧನ್ ಅಧಿಕಾರ ಸ್ವೀಕಾರಕ್ಕಾಗಿ ಮೈಸೂರಿನಿಂದ ಮಾರ್ಗದ ಮೂಲಕ ಹಾಸನಕ್ಕೆ ಆಗಮಿಸಿದ್ದಾರೆ. ಹರ್ಷಬರ್ಧನ್ ಸಾವಿನ ಸುದ್ದಿಯನ್ನು ಆಸ್ಪತ್ರೆ ಮುಖ್ಯಸ್ಥ…
ಬೆಂಗಳೂರು : ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಲು ನೀಡಿದ್ದ ಗಡುವನ್ನು ಸರ್ಕಾರ ಮತ್ತೆ ವಿಸ್ತರಿಸಿದ್ದು, ಡಿಸೆಂಬರ್ 31 ಕೊನೆಯ ದಿನವಾಗಿದೆ. ಈ ಮೊದಲು ಹೆಚ್‌ಎಸ್‌ಆರ್‌ಪಿ ಅಳವಡಿಕೆಗೆ ಡಿಸೆಂಬರ್ 4 ಕೊನೆ ದಿನವಾಗಿತ್ತು. ಆದರೆ ಇದೀಗ ಡಿ. 31 ರ ವರೆಗೆ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಸಾರಿಗೆ ಇಲಾಖೆ ಈ ವರ್ಷದ ಕೊನೆಯ ದಿನದವರೆಗೆ ಹೆಚ್‌ಎಸ್‌ಆರ್‌ಪಿ ಅಳವಡಿಕೆ ನೀಡಿದ್ದ ಗಡುವು ವಿಸ್ತರಣೆ ಮಾಡಿದೆ. ರಾಜ್ಯದಲ್ಲಿ ಸುಮಾರು 2 ಕೋಟಿಯಷ್ಟು ವಾಹನಗಳು ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕಿತ್ತು. ಆದರೆ ಸದ್ಯ 55 ಲಕ್ಷ ವಾಹನಗಳಿಗೆ ಮಾತ್ರ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಯಾಗಿದೆ. ಹೀಗಾಗಿ ಸತತ 5ನೇ ಬಾರಿಗೆ ಹೆಚ್‌ಎಸ್‌ಆರ್‌ಪಿ ಅಳವಡಿಕೆಗೆ ಸಾರಿಗೆ ಇಲಾಖೆ ಗಡುವು ವಿಸ್ತರಿಸಿದೆ.
ಮಂಗಳೂರು: ನಗರದ ದಕ್ಷಿಣ ಉಪವಿಭಾಗದ ಆ್ಯಂಟಿ ಡ್ರಗ್ ಟೀಮ್‌ನವರು ನಿಷೇಧಿತ ಎಂಡಿಎಂಎಯನ್ನು ಪೂರೈಕೆ ಮಾಡುತ್ತಿದ್ದ ಪ್ರಮುಖ ಆರೋಪಿಯನ್ನು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಡಿಪುವಿನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕು ಇಂದಬೆಟ್ಟು ಗ್ರಾಮದ ಮೊಹಮ್ಮದ್ ಅಲ್ಫಾಝ್ (24) ಎಂದು ಗುರುತಿಸಲಾಗಿದೆ. ಆತನಿಂದ 53 ಗ್ರಾಂ ಎಂಡಿಎಂಎ ಮಾದಕ ವಸ್ತು, ಸ್ಮೋಕ್ ಪಾಟ್, ಸಾಗಾಟಕ್ಕೆ ಬಳಸಿದ್ದ ಕಾರು, 2 ಮೊಬೈಲ್ ಸಹಿತ ಒಟ್ಟು 7,76,980 ಮೌಲ್ಯದ ಸೊತ್ತನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಣಾಜೆ ಪೊಲೀಸರು ಮುಡಿಪುವಿನಲ್ಲಿ ಕರ್ತವ್ಯದಲ್ಲಿದ್ದ ವೇಳೆ ಮಾಹಿತಿ ಲಭ್ಯವಾಗಿದ್ದು ಕೂಡಲೇ ಕಾರ್ಯಷಕಿತರಾದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಉಪ್ಪಿನಂಗಡಿ: ಮಾದಕ ವಸ್ತು ಸೇವನೆ ಮತ್ತು ಮಾರಾಟಕ್ಕೆ ಯತ್ನಿಸಿದ ವ್ಯಕ್ತಿಯನ್ನುಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ ಘಟನೆ ಪೆರ್ನೆಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಕೌಕ್ರಾಡಿ ಗ್ರಾಮದ ದೋಂತಿಲ್ಲ ಮನೆ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಮಹಮ್ಮದ್ ತೌಫೀಕ್ (22) ಎಂದು ಗುರುತಿಸಲಾಗಿದೆ. ಗಸ್ತು ನಿರತ ಪೊಲೀಸರು ಶನಿವಾರ ಪೂರ್ವಾಹ್ನ 11 ಗಂಟೆ ಸುಮಾರಿಗೆ ಪೆರ್ನೆ ಗ್ರಾಮದ ಕಡಂಬು ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿದ್ದಾಗ ಆಟೋ ರಿಕ್ಷಾವೊಂದು ನಿಲ್ಲಿಸಲು ಸೂಚಿಸಿದರು. ರಿಕ್ಷಾ ಚಾಲಕ ಸೂಚನೆಯನ್ನು ಪರಗಣಿಸದೆ ಮುಂದಕ್ಕೆ ಚಲಿಸಿದಾಗ ಪೊಲೀಸರು ಬೆನ್ನಟ್ಟಿ ರಿಕ್ಷಾ ಚಾಲಕ ಮಹಮ್ಮದ್ ತೌಫೀಕ್‌ನನ್ನು ವಿಚಾರಣೆಗೊಳಪಡಿಸಿದಾಗ ತಾನು ಮಾದಕ ವಸ್ತು ಎಂಡಿಎಂಎ ನ್ನು ಸೇವಿಸಿದ್ದಾಗಿ, ತನ್ನ ಸೇವನೆ ಹಾಗೂ ಮಾರಾಟಕ್ಕಾಗಿ ಪೆರ್ನೆಯ ಸಲಿಂ ಎಂಬಾತ ಮಾದಕ ವಸ್ತುವನ್ನು ತನಗೆ ನೀಡಿದ್ದಾನೆಂದು ಪೊಲೀಸರ ವಿಚಾರಣೆ ವೇಳೆ ತಿಳಿಸಿರುತ್ತಾನೆ. ಉಪ್ಪಿನಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಮಲ್ಪೆ: ಸೈಂಟ್‌ಮೇರಿಸ್ ಐಲ್ಯಾಂಡಿಗೆ ಬಂದಿದ್ದ ಮಂಡ್ಯ ಮೂಲದ ಶಾಲಾ ವಿದ್ಯಾರ್ಥಿಗೆ ರಕ್ತದೊತ್ತಡ ಕಡಿಮೆಯಾಗಿ ತೀವ್ರ ಅಸ್ವಸ್ಥಗೊಂಡಿದ್ದು, ಅವರನ್ನು ಪ್ರವಾಸಿ ಬೋಟ್ ನಿರ್ವಾಹಕರು ತತ್‌ಕ್ಷಣ ಸ್ಪೀಡ್‌ಬೋಟ್ ಮೂಲಕ ದಡ ಸೇರಿಸಿ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಸಮಯ ಪ್ರಜ್ಞೆ ಮೆರೆದಿದ್ದಾರೆ. ಮಂಡ್ಯ ಜಿಲ್ಲೆ ಶಿವಳ್ಳಿ ತಾಲೂಕಿನ ಸರ್ ವಿಶ್ವೇಶ್ವರಯ್ಯ ಪ್ರೌಢಶಾಲೆಯ 10ನೇ ತರಗತಿಯ ಜಗದೀಶ್ವರಿ ಅಸ್ವಸ್ಥಗೊಂಡವರು. ಪ್ರವಾಸಿ ಬೋಟಿನ ನಿರ್ವಾಹಕರಾದ ಪ್ರವೀಣ್ ಮಲ್ಪೆ ಮತ್ತು ಶಾನ್‌ರಾಜ್ ಕೋಟ್ಯಾನ್ ಸಕಾಲದಲ್ಲಿ ನೆರವಿಗೆ ಬಂದವರು. ಶಾಲಾ ಆಡಳಿತ ಮಂಡಳಿ 3 ದಿನದ ಶೈಕ್ಷಣಿಕ ಪ್ರವಾಸ ಕೈಗೊಂಡಿತ್ತು. ಶನಿವಾರ ಮಲ್ಪೆ ಸೈಂಟ್‌ಮೇರಿಸ್ ದ್ವೀಪಕ್ಕೆ ಬಂದಿದ್ದ ವಿದ್ಯಾರ್ಥಿಗಳಲ್ಲಿ ಜಗದೀಶ್ವರಿಗೆ ಬಿಸಿಲಿನ ಝಳಕ್ಕೆ ಒಮ್ಮೆಲೆ ತಲೆತಿರುಗಿ ಬಂದು ವಾಂತಿ ಮಾಡಲು ಆರಂಭಿಸಿದಳು. ಬಳಿಕ ರಕ್ತದೊತ್ತಡವೂ ಕಡಿಮೆಯಾಗಿ ಕುಸಿದು ಬಿದ್ದಳು. ಗಂಭೀರ ಸ್ಥಿತಿಯಲ್ಲಿದ್ದ ಬಾಲಕಿಯನ್ನು ತಕ್ಷಣ ಅಲ್ಲೇ ಇದ್ದ ಬೋಟ್ ನಿರ್ವಾಹಕ ಪ್ರವೀಣ್ ಮಲ್ಪೆ ಅವರು ಪ್ರಾಥಮಿಕ ಚಿಕ್ಸಿತೆ ನೀಡಿ ಬಳಿಕ ಶಾನ್‌ರಾಜ್ ಕೋಟ್ಯಾನ್ ಅವರ ಸಹಕಾರದೊಂದಿಗೆ ಸ್ಪೀಡ್‌ಬೋಟ್‌ನಲ್ಲಿ…










