ಮಂಗಳೂರು: ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯೊಬ್ಬರನ್ನು ನಾಯಿ ರಕ್ಷಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿ ನಡೆದಿದೆ. ಪತಿಯೊಂದಿಗೆ ಜಗಳವಾಡಿದ ಮಹಿಳೆ ಆತ್ಮಹತ್ಯೆ ಮಾಡಿಕೊಳ್ಳಲು ನಾಲ್ಕು ಕಿ.ಮೀ. ದೂರದ ಉಪ್ಪಿನಂಗಡಿಗೆ ರಾತ್ರಿ ವೇಳೆ ನಡೆದುಕೊಂಡು ಬಂದಿದ್ದಾರೆ. ಅವರನ್ನು ಸಾಕು ನಾಯಿ ಹಿಂಬಾಲಿಸಿಕೊಂಡು ಬಂದಿದ್ದು, ನದಿಗೆ ಹಾರಲು ಸೇತುವೆ ಬಳಿ ಹೋಗುವಾಗ ಚೂಡಿದಾರ ಹಿಡಿದಿಳೆದು ನಿರಂತರವಾಗಿ ಬೊಗಳಿದೆ. ನಾಯಿ ನಿರಂತರವಾಗಿ ಬೊಗಳುಗುವುದನ್ನು ಗಮನಿಸಿದ ಬೈಕ್ ಸವಾರ ಹಾಗೂ ಸ್ಥಳೀಯರು ಮಹಿಳೆಯನ್ನು ರಕ್ಷಿಸಿದ್ದಾರೆ. 16 ವರ್ಷದ ಹಿಂದೆ ದಂಪತಿ ಪ್ರೀತಿಸಿ ಮದುವೆಯಾಗಿದ್ದು, ಕೆಲವು ವರ್ಷಗಳಿಂದ ವಿರಸವಾಗಿತ್ತು. ಗುರುವಾರ ರಾತ್ರಿ ಇಬ್ಬರ ನಡುವೆ ಜಗಳವಾಗಿದ್ದು, ಬೇಸರಗೊಂಡ ಪತ್ನಿ ನೇತ್ರಾವತಿ ನದಿ ಸೇತುವೆಯಿಂದ ನದಿಗೆ ಹಾರಲು ಬಂದಿದ್ದಾರೆ. ಆಕೆಯನ್ನು ಹಿಂಬಾಲಿಸಿ ಬಂದ ನಾಯಿ ಚೂಡಿದಾರ ಹಿಡಿದೆಳೆದು ನಿರಂತರವಾಗಿ ಬೊಗಳಿದೆ. ಇದನ್ನು ಗಮನಿಸಿದ ಬೈಕ್ ಸವಾರರೊಬ್ಬರು ಸ್ಥಳೀಯರಾದ ಯು.ಟಿ. ಫಯಾಜ್ ಅವರಿಗೆ ವಿಷಯ ತಿಳಿಸಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿ ಬಂದ ಅವರು ಮಹಿಳೆಯನ್ನು ರಕ್ಷಿಸಿದ್ದು, ಸ್ಥಳೀಯರ ಸಹಕಾರದೊಂದಿಗೆ…
Author: main-admin
ಹೊಸ ರೇಷನ್ ಕಾರ್ಡ್ ಪಡೆಯಲು ಇಚ್ಚಿಸುವವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಿಹಿಸುದ್ದಿ ನೀಡಿದೆ. ಜುಲೈ ಮೊದಲ ವಾರದಲ್ಲಿ ಹೊರ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಹರು ರಾಜ್ಯದ ನಾಗರೀಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ahara.kar.nic.in ಜಾಲತಾಣದ ಮೂಲಕ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.ಕರ್ನಾಟಕ ಪಡಿತರ ಚೀಟಿ ಪಟ್ಟಿ ಯಲ್ಲಿ ಹೆಸರು ಇಲ್ಲದ ಎಲ್ಲಾ ಜನರು ಈಗ ಅಗತ್ಯವಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು, ಜೊತೆಗೆ ಅರ್ಜಿಯ ಸ್ಥಿತಿಗತಿಯನ್ನು ಪರಿಶೀಲಿಸಬಹುದು. ಪಡಿತರಚೀಟಿಗಾಗಿಅರ್ಜಿಸಲ್ಲಿಸಲುಬೇಕಿರುವಅಗತ್ಯದಾಖಲೆಗಳು ವೋಟರ್ ಐಡಿ ಆಧಾರ್ ಕಾರ್ಡ್ ವಯಸ್ಸಿನ ಪ್ರಮಾಣ ಪತ್ರ ಡ್ರೈವಿಂಗ್ ಲೈಸೆನ್ಸ್ ಇತ್ತೀಚಿನ ಪಾರ್ಸ್ ಪೋರ್ಟ್ ಅಳತೆಯ ಭಾವಚಿತ್ರ ಮೊಬೈಲ್ ಸಂಖ್ಯೆ ಸ್ವಯಂ ಘೋಷಿತ ಪ್ರಮಾಣ ಪತ್ರ ಈ ಮೇಲ್ಕಂಡ ದಾಖಲೆಗಳಿದ್ದಲೇ, ಆನ್ ಲೈನ್ ಮೂಲಕ ಹೊಸ ಪಡಿತರ ಚೀಟಿಗಾಗಿ ನೀವು ಅರ್ಜಿಯನ್ನು ಸಲ್ಲಿಸಬಹುದು. ಹಾಗಾದ್ರೇ ಅರ್ಜಿ ಸಲ್ಲಿಸೋದು ಹೇಗೆ ಎನ್ನುವ ಹಂತ ಈ ಕೆಳಗಿದೆ. ಹೊಸಪಡಿತರಚೀಟಿಗಾಗಿಈಹಂತಗಳನ್ನುಅನುಸರಿಸಿ, ಅರ್ಜಿಸಲ್ಲಿಸಿ kar.nic.in ಈ…
ಮಂಗಳೂರು: ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಯುವ ಉದ್ಯಮಿಯೋರ್ವರು ಮೃತಪಟ್ಟ ಘಟನೆ ಶನಿವಾರ ಬೆಳಗ್ಗಿನ ಜಾವ ಉಜಿರೆಯಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ (35) ಎಂದು ಗುರುತಿಸಲಾಗಿದೆ. ಶನಿವಾರ ಮುಂಜಾನೆ 4 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಕಾಲೇಜು ರಸ್ತೆಯಿಂದ ಬೆಳ್ತಂಗಡಿ ಸಾಗುವ ಮಧ್ಯೆ ಡಿವೈಡರ್ ನ ಬೀದಿ ದೀಪದ ಕಂಬಗಳಿಗೆ ಕಾರು ಢಿಕ್ಕಿ ಹೊಡೆದಿದೆ.ಢಿಕ್ಕಿ ರಭಸಕ್ಕೆ ಕಾರು ಮುಂಭಾಗ ನಜ್ಜು ಗುಜ್ಜಾದರೆ, ಒಂದು ವಿದ್ಯುತ್ ಕಂಬ ಬುಡ ಸಮೇತ ಕಿತ್ತು ಬಿದ್ದಿದೆ. ಅಪಘಾತ ರಭಸಕ್ಕೆ ಚಾಲಕ ಪ್ರಜ್ವಲ್ ತಲೆಗೆ ಗಂಭೀರ ಗಾಯವಾಗಿದ್ದು, ಆತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಅಪಘಾತದಲ್ಲಿ ನಿಧನ ಹೊಂದಿದ ಪ್ರಜ್ವಲ್ ನಾಯಕ್ ಅವರು ಬೆಳ್ತಂಗಡಿ ಸಂತೆಕಟ್ಟೆ ನಿವಾಸಿ ಹೆಸರಾಂತ ಉದ್ಯಮಿ, ಸಂಘ ಸಂಸ್ಥೆಯಲ್ಲಿ ಸಕ್ರಿಯರಾಗಿದ್ದ, ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕ ಪ್ರಮೋದ್ ಆರ್. ನಾಯಕ್ ಅವರ ಪುತ್ರ. ಉದ್ಯಮಿ ಪ್ರಜ್ವಲ್ ಉಜಿರೆಯ…
ಮಂಗಳೂರು: ಗೂಗಲ್ ಟ್ರಾನ್ಸ್‌ಲೇಟರ್‌ನಲ್ಲಿ ಇಂದು ಹಲವಾರು ಭಾಷೆಗಳು ನೂತನವಾಗಿ ಸೇರ್ಪಡೆಗೊಂಡಿದೆ. ಜಗತ್ತಿನಾದ್ಯಂತ ಹಲವಾರು ಭಾಷೆಗಳ ಸೇರ್ಪಡೆಯ ನಡುವೆ ಕರಾವಳಿ ಕರ್ನಾಟಕದ ತುಳುಭಾಷೆಗೂ ಮಾನ್ಯತೆ ದೊರಕಿರುವುದು ತುಳುವರಿಗೆ ಹೆಮ್ಮೆಯ ವಿಚಾರವಾಗಿದೆ. ಗೂಗಲ್ ಟ್ರಾನ್ಸ್‌ಲೆಟರ್ ಆ್ಯಪ್‌ನಲ್ಲಿ ಅಪ್ಡೇಟ್ ಮಾಡಿದರೆ, ಅಥವಾ ವೆಬ್‌ಸೈಟ್‌ನಲ್ಲಿ ಸರ್ಚ್ ಮಾಡಿದ್ದಲ್ಲಿ ತುಳು ಭಾಷೆ ಸೇರ್ಪಡೆಯಾಗಿದ್ದು ಗೊತ್ತಾಗುತ್ತದೆ. ತುಳು ಭಾಷೆಗೆ ಪ್ರತ್ಯೇಕ ಲಿಪಿಯಿದ್ದರೂ, ಈ ಲಿಪಿ ಬಗ್ಗೆ ಹೆಚ್ಚಿನ ತುಳುವರಿಗೆ ಜ್ಞಾನವಿಲ್ಲ. ಸದ್ಯ ಗೂಗಲ್ ಟ್ರಾನ್ಸ್‌ಲೇಟರ್ ತುಳು ಲಿಪಿಯ ಬದಲು ಕನ್ನಡಲಿಪಿಯಲ್ಲಿ ತುಳು ಭಾಷೆಗೆ ಭಾಷಾಂತರವಾಗುತ್ತದೆ. ಇದರಿಂದ ಜಗತ್ತಿನ ಯಾವುದೇ ಭಾಷೆಯಿಂದ ತುಳು ಭಾಷೆಗೆ ನೇರವಾಗಿ ಭಾಷಾಂತರಿಸಲು ಸಾಧ್ಯವಾಗಲಿದೆ. ಈ ಬಗ್ಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ ಕಾಪಿಕಾಡ್ ಪ್ರತಿಕ್ರಿಯಿಸಿ, ಗೂಗಲ್ ಟ್ರಾನ್ಸ್‌ಲೇಟರ್‌ನಲ್ಲಿ ತುಳು ಭಾಷೆ ಸೇರ್ಪಡೆ ಆಗಿರುವುದು ತುಳುಭಾಷೆಗೆ ಜಾಗತಿಕವಾಗಿ ಸಂದ ಗೌರವವಾಗಿದೆ. ಇದು ತುಳುವರು ಸಂಭ್ರಮಪಡುವ ವಿಚಾರ. ಗೂಗಲ್ ಟ್ರಾನ್ಸ್‌ಲೇಟರ್‌ನಲ್ಲಿ ಕೆಲವು ಸಂದರ್ಭ ಶಬ್ದಗಳು ತಪ್ಪಾಗಿ ಉಲ್ಲೇಖವಾಗುವುದು ಸಾಮಾನ್ಯ ವಿಚಾರ. ಇಂತಹ ಸಂದರ್ಭಗಳಲ್ಲಿ ಅಲ್ಲೇ…
ಉಡುಪಿ: ನೋಡು ನೋಡುತ್ತಿದ್ದಂತೆ ಮನೆಯ ಬಾವಿಯೊಂದು ಭೂಕುಸಿತಕ್ಕೊಳಗಾದ ಘಟನೆ ಕಾರ್ಕಳ ತಾಲೂಕಿನ ನೆಲ್ಲಿಕಟ್ಟೆಯ ಸರ್ವಿಸ್ ಸ್ಟೇಶನ್ ಸಮೀಪ ನಡೆದಿದೆ. ಬಾವಿ ಕುಸಿಯುತ್ತಿರುವ ದೃಶ್ಯ ಇದೀಗ ಸಾಕಷ್ಟು ವೈರಲ್ ಆಗಿದೆ. ಮನೆಯಂಗಳದಲ್ಲೇ ಇದ್ದ ಬಾವಿ ಮನೆಯವರ ಕಣ್ಣೆದುರೇ ಭೂಕುಸಿತಕ್ಕೊಳಗಾಗಿ ಧಾರಾಶಾಹಿಯಾಗಿದೆ. ಇದೀಗ ಮನೆ ಕೂಡ ಅಪಾಯವನ್ನು ಎದುರಿಸುತ್ತಿದ್ದು, ಮನೆಯವರು ಆಂತಕಕ್ಕೀಡಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತ ಉಂಟಾಗಿದೆ.
ಜಿಯೋ ಬೆನ್ನಲ್ಲೇ ಏರ್‌ಟೆಲ್ ಕೂಡ ನಾನಾ ಪ್ಲಾನ್ ಮೇಲೆ 11%-21%ರಷ್ಟು ದರ ಜಾಸ್ತಿ ಮಾಡಿದ್ದು ಜು.3ರಿಂದ ಜಾರಿಗೆ ಬರಲಿದೆ. ಅನ್‌ಲಿಮಿಟೆಡ್ ಪ್ರೀಪೇಯ್ಡ್ ಪ್ಲಾನ್ 179ರಿಂದ 199ರೂ.ಗೆ ಏರಿಕೆ(28ದಿನ ವ್ಯಾಲಿಡಿಟಿ), 455ರಿಂದ 509ರೂ.ಗೆ ಏರಿಕೆ(84 ದಿನ), 1799ರೂ.ನಿಂದ 1,999ರೂ.ಗೆ ಏರಿಕೆ(365). ಡೇಟಾ ಪ್ಲಾನ್-265 ರೂನಿಂದ 299ರೂಗೆಹೆಚ್ಚಳ (28ದಿನ), 299ರೂನಿಂದ 349ರೂಗೆ ಹೆಚ್ಚಳ (28ದಿನ), 359ರೂನಿಂದ 409ರೂಗೆ ಹೆಚ್ಚಳ, 399ರೂನಿಂದ 4.49ರೂಗೆ ಹೆಚ್ಚಳ. ಪೋಸ್ಟ್‌ಪೇಯ್ಡ್_399ರೂ ಪ್ಲಾನ್ 449ರೂಗೆ ಏರಿಕೆ, 499ರೂ ಪ್ಲಾನ್ 549ರೂಗೆ ಏರಿಕೆ.
ಆಗುಂಬೆ: ನಿರಂತರ ಮಳೆಯ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ಸೆ.15ರವರೆಗೆ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಿದ್ದಾರೆ. ಆಗುಂಬೆ ಘಾಟಿಯಲ್ಲಿ ಮಳೆಗಾಲದ ಅವಧಿಯಲ್ಲಿ ಭೂಕುಸಿತವಾಗುವ ಸಂಭವ ಇರುವುದರಿಂದ ಜೂ.27ರಿಂದ ಸೆ.15ರವರೆಗೆ ಭಾರೀ ವಾಹನ ಸಂಚರಿಸದಂತೆ ಆದೇಶಿಸಲಾಗಿದೆ. ತೀರ್ಥಹಳ್ಳಿಯಿಂದ ಉಡುಪಿಗೆ ಹೋಗುವ ಭಾರೀ ವಾಹನಗಳು ತೀರ್ಥಹಳ್ಳಿ -ಮಾಸ್ತಿಕಟ್ಟೆ- ಸಿದ್ದಾಪುರ-ಕುಂದಾಪುರ ಮೂಲಕ ಉಡುಪಿ ತಲುಪಬಹುದು. ಉಡುಪಿಯಿಂದ ತೀರ್ಥಹಳ್ಳಿ ಬರುವವರು ಉಡುಪಿ- ಕುಂದಾಪುರ- ಸಿದ್ದಾಪುರ- ಮಾಸ್ತಿಕಟ್ಟೆ ಮೂಲಕ ತೀರ್ಥಹಳ್ಳಿಗೆ ಸಂಚರಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು: ನಗರದ ಕಾವೂರು ಸೂಜಿಕಲ್ ಗುಡ್ಡೆ ಎಂಬಲ್ಲಿ ಭೂಕುಸಿತದಿಂದ ಕೆಲವು ಮನೆಗಳು ಅಪಾಯಕಾರಿ ಸ್ಥಿತಿಯಲ್ಲಿದ್ದು, ತಕ್ಷಣವೇ ಅಲ್ಲಿನ ನಿವಾಸಿಗಳ ಸ್ಥಳಾಂತರಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೂಚಿಸಿದ್ದಾರೆ. ಮಂಗಳೂರು ತಾಲೂಕಿನ ವಿವಿಧ ಮಳೆ ಹಾನಿ ಪ್ರದೇಶಗಳಿಗೆ ಮುಲ್ಲೈ ಮುಹಿಲನ್ ಅವರು ಗುರುವಾರ ಭೇಟಿ ನೀಡಿ ಪರಿಶೀಲಿಸಿದರು. ಕಾವೂರು ಸೂಜಿಕಲ್ ಗುಡ್ಡೆಯಲ್ಲಿ ಖಾಸಗಿ ಮನೆ ಕಟ್ಟಡ ನಿರ್ಮಿಸಲು ಅಗೆಯಲಾದ ಮಣ್ಣಿನಿಂದ ಎತ್ತರದ ಪ್ರದೇಶದಲ್ಲಿರುವ ಮನೆಗಳು ಕೆಳಗೆ ಬೀಳುವ ಸ್ಥಿತಿಯಲ್ಲಿವೆ. ಈ ನಿಟ್ಟಿನಲ್ಲಿ ಇಲ್ಲಿನ ನಿವಾಸಿಗಳನ್ನು ಬೇರೆಡೆ ಬಾಡಿಗೆ ಮನೆಗಳಿಗೆ ಸ್ಥಳಾಂತರಿಸಲು ಮಂಗಳೂರು ಮಹಾನಗರಪಾಲಿಕೆ ಆಯುಕ್ತರಿಗೆ ಅವರು ನಿರ್ದೇಶಿಸಿದ್ದಾರೆ. ಅಲ್ಲದೇ, ಘಟನೆಗೆ ಕಾರಣರಾದ ಖಾಸಗಿ ಮನೆಯ ನಿರ್ಮಾಣ ಕಾಮಗಾರಿಯನ್ನು ನಿಲ್ಲಿಸಲು ಸೂಚನೆ ನೀಡಿದ್ದಾರೆ.ಬಳಿಕ ಕೆಂಜಾರು ಶ್ರೀ ದೇವಿ ಕಾಲೇಜು ಆವರಣದಲ್ಲಿ ಉಂಟಾದ ಭೂಕುಸಿತ, ಮರವೂರು ಅಂತೋನಿಕಟ್ಟೆ ಎಂಬಲ್ಲಿ ಕಾಂಕ್ರೀಟ್ ತಡೆಗೋಡೆ ಕುಸಿದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ನಂತರ ಸುರತ್ಕಲ್ ಬಾಳ ಸಮೀಪ ಐ.ಎಸ್.ಪಿ.ಆರ್.ಎಲ್. ಗೆ ಸೇರಿದ ಪೈಪ್ ಲೈನ್ ಹಾದುಹೋದ ಪ್ರದೇಶದಲ್ಲಿ ಭೂಕುಸಿತ…
ಉಡುಪಿ: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದಲ್ಲಿ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಜಾಮೀನು ಅರ್ಜಿ ಹೈಕೋರ್ಟ್ ನಲ್ಲಿ ವಜಾಗೊಂಡಿದೆ. ಉಡುಪಿ ಜಿಲ್ಲೆಯ ಮಲ್ಪೆ ಠಾಣೆಯ ನೇಜಾರ್ ಎಂಬಲ್ಲಿ 2023ರ ನವೆಂಬರ್ 12ರಂದು ಪ್ರವೀಣ್ ಅರುಣ್ ಚೌಗುಲೆ ಒಂದೇ ಕುಟುಂಬದ ಐನಾಜ್, ಹಸೀನಾ, ಅಫ್ನಾನ್, ಅಸೀಮ್ ಎಂಬುವರ ಹತ್ಯೆ ನಡೆಸಿದ್ದ.ಸಾಂದರ್ಭಿಕ ಸಾಕ್ಷಿ, ಸಿಸಿಟಿವಿ ದೃಶ್ಯಾವಳಿ, ಆರೋಪಿಯ ಕೂದಲಿನ ಡಿಎನ್ಎ ಆಧರಿಸಿ ಹೆಚ್ಚುವರಿ ಎಸ್ ಪಿಪಿ ಬಿ.ಎನ್.ಜಗದೀಶ್ ವಾದ ಮಾಡಿದರು. ವಿಚಾರಣೆ ನಡೆಸಿದ ನ್ಯಾ.ಎಂ.ಜಿ.ಉಮಾ ಅವರಿದ್ದ ಹೈಕೋರ್ಟ್ ಪೀಠ ಜಾಮೀನು ಅರ್ಜಿ ತಿರಸ್ಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಕಳೆದ ಫೆಬ್ರವರಿಯಲ್ಲಿ 15 ಸಂಪುಟಗಳ 2,202 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಸಕಲೇಶಪುರ : ಹಾಸನ-ಬಂಟ್ವಾಳ ನಡುವೆ ನಡೆಯುತ್ತಿರುವ ಬೆಂಗಳೂರು-ಮಂಗಳೂರು ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ತಾಲ್ಲೂಕಿನ ಆನೆಮಹಲ್ ಗ್ರಾಮದಲ್ಲಿ ಗುರುವಾರ ಸುರಿದ ಒಂದೇ ಮಳೆಗೆ ಕುಸಿದಿದೆ. ಸಕಲೇಶಪುರ ಬೈಪಾಸ್ ಟೋಲ್‌ಗೇಟ್‌ನಿಂದ ಮಾರನಹಳ್ಳಿವರೆಗೆ ಚತುಷ್ಪಥ ಕಾಮಗಾರಿ ಪ್ರಗತಿಯಲ್ಲಿದ್ದು, ಗ್ರಾಮದಲ್ಲಿ ಕಾಂಕ್ರಿಟ್ ರಸ್ತೆಯ ಕೆಳಗೆ ಅಳವಡಿಸಿರುವ ಮೋರಿಯ ಪೈಪ್ ತುಂಡಾಗಿ ರಸ್ತೆಯ ಒಂದು ಬದಿ ಕುಸಿದಿದೆ. ‘ರಸ್ತೆಯ ಕೆಳಭಾಗದಲ್ಲಿ ಅಳವಡಿಸಿರುವ ಚರಂಡಿಯ ಪೈಪುಗಳು ಉತ್ತಮ ಗುಣಮಟ್ಟದಿಂದ ಕೂಡಿಲ್ಲ’ ಎಂದು ಗ್ರಾಮದ ಭಾಸ್ಕರ್, ಹಸೈನಾರ್ ಅವರು ಕಾಮಗಾರಿ ಸಂದರ್ಭದಲ್ಲೇ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ, ಗುತ್ತಿಗೆದಾರರು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎಂಜಿನಿಯರ್‌ಗಳು ಅದನ್ನುಗಂಭೀರವಾಗಿ ಪರಿಗಣಿಸದೆ ಕಳಪೆ ಕಾಮಗಾರಿ ಮಾಡಿದ್ದೇ ಕುಸಿಯಲು ಕಾರಣ’ ಎಂದು ಗ್ರಾಮಸ್ಥರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು. ಶಾಸಕ ಭೇಟಿ: ಸ್ಥಳಕ್ಕೆ ಗುರುವಾರ ಸಂಜೆ ಶಾಸಕ ಸಿಮೆಂಟ್ ಮಂಜು ಭೇಟಿ ನೀಡಿ ಪರಿಶೀಲಿಸಿದರು. ‘ಹಾಸನದಿಂದ ಮಾರನಹಳ್ಳಿವರೆಗೆ ಹೆದ್ದಾರಿ ಕಾಮಗಾರಿ ಉತ್ತಮ ಗುಣಮಟ್ಟದಿಂದ ಕೂಡಿಲ್ಲ ಎಂದು ಗುತ್ತಿಗೆದಾರರಿಗೆ ಹಾಗೂ ಎಂಜಿನಿಯರ್‌ಗಳಿಗೆ ಹಲವು ಬಾರಿ ಹೇಳಿದ್ದೆ. ನಿತ್ಯ 30 ಸಾವಿರಕ್ಕೂ ಹೆಚ್ಚು…










