ಮಂಗಳೂರು: ಅಧಿಕ ಲಾಭಾಂಶದ ಆಸೆಯೊಡ್ಡಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿಸಿ ಅಪರಿಚಿತರು ತನಗೆ 21 ಲಕ್ಷ ರೂ.ಗೂ ಅಧಿಕ ಹಣ ವಂಚನೆ ಮಾಡಿರುವ ಬಗ್ಗೆ ವ್ಯಕ್ತಿಯೊಬ್ಬರು ನೀಡಿದ ದೂರಿನಂತೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪರಿಚಿತರು ತನ್ನನ್ನು ವಾಟ್ಸ್ಆ್ಯಪ್ ಗ್ರೂಪ್‌ಗೆ ಸೇರ್ಪಡೆಗೊಳಿಸಿ ಹೆಚ್ಚಿನ ಲಾಭ ಬರುವ ಹೂಡಿಕೆಯ ಬಗ್ಗೆ ಮಾಹಿತಿ ನೀಡಿದ್ದರು. ಅದನ್ನು ನಂಬಿದ ತಾನು ಹಣವನ್ನು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ದೆ. ತನಗೆ ಕಳುಹಿಸಲಾಗಿದ್ದ ಆ್ಯಪ್‌ನಲ್ಲಿ ಹೂಡಿಕೆಯ ವ್ಯವಹಾರ, ಲಾಭಾಂಶದ ವಿವರಗಳು ಗೋಚರಿಸುತ್ತಿತ್ತು. ಅದನ್ನು ನಂಬಿದ ತಾನು ಹಂತ ಹಂತವಾಗಿ ತನ್ನ ಮತ್ತು ಮಗಳ ಹಾಗೂ ಅಳಿಯನ ಖಾತೆಯಿಂದ 21 ಲ.ರೂ.ಗಳಿಗೂ ಅಧಿಕ ಹಣವನ್ನು ಹೂಡಿಕೆ ಮಾಡಿದ್ದೆ. ನ.7ರಂದು ಹೂಡಿಕೆ ಮಾಡಿದ ಮೊತ್ತ ಹಾಗೂ ಲಾಭಾಂಶವನ್ನು ನಗದೀಕರಿಸಲು ಯತ್ನಿಸಿದಾಗ ಇನ್ನಷ್ಟು ಹೂಡಿಕೆ ಮಾಡಿದರೆ ಮಾತ್ರ ಹಣ ಪಡೆಯಲು ಸಾಧ್ಯವಿದೆ ಎಂದು ಸೂಚಿಸಿದರು. ಆವಾಗ ತನಗೆ ಇದೊಂದು ವಂಚನೆಯ ಜಾಲವೆಂಬುದು ಗೊತ್ತಾಯಿತು ಎಂದು ವಂಚನೆಗೊಳಗಾದ ವ್ಯಕ್ತಿ ದೂರಿನಲ್ಲಿ ತಿಳಿಸಿದ್ದಾರೆ.
Author: main-admin
ಉಡುಪಿ : 13 ವರ್ಷಗಳ ಬಳಿಕ ಕರಾವಳಿಯಲ್ಲಿ ಗುಂಡಿನ ಮೊರೆತ ಕೇಳಿಬಂದಿದ್ದು ನಕ್ಸಲ್ ಎನ್ಕೌಂಟರ್ ನಡೆದಿದ್ದು ಉಡುಪಿಯ ಹೆಬ್ರಿಯಲ್ಲಿ ANF ಗೆ ನಕ್ಸಲ್ ನಾಯಕ ವಿಕ್ರಂ ಗೌಡ ಬಲಿಯಾಗಿದ್ದಾನೆ. ಕರ್ನಾಟಕದ ಪಶ್ಚಿಮ ಘಟ್ಟ ತಪ್ಪಲಿನ ಅರಣ್ಯದಂಚಿನ ಪ್ರದೇಶಗಳಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆ ತೀವ್ರಗೊಂಡಿದ್ದು, ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆಯಲ್ಲಿ ಎನ್ಕೌಂಟರ್ ನಡೆದಿದೆ.ಕಬ್ಬಿನಾಲೆ ಅರಣ್ಯದಲ್ಲಿ ನಡೆದ ಎನ್ಕೌಂಟರ್ನೊಂದಿಗೆ ಉಡುಪಿ ಭಾಗದಲ್ಲಿ 13 ವರ್ಷಗಳ ನಂತರ ಗುಂಡಿನ ಮೊರತೆ ಕೇಳಿದಂತಾಗಿದೆ. ಸೋಮವಾರ ರಾತ್ರಿ ಐದು ಮಂದಿ ಇದ್ದ ನಕ್ಸಲರ ತಂಡ ಗ್ರಾಮಕ್ಕೆ ದಿನಸಿ ಸಾಮಗ್ರಿ ಖರೀದಿಗೆಂದು ಬಂದಿದ್ದಾಗ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ನಡೆಸಿದೆ. ಅಷ್ಟರಲ್ಲಿ ನಕ್ಸಲರು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ನಡೆದ ಎನ್ಕೌಂಟರ್ನಲ್ಲಿ ವಿಕ್ರಂ ಗೌಡ ಹತನಾದರೆ, ಉಳಿದ ನಕ್ಸಲರು ಪರಾರಿಯಾಗಿದ್ದಾರೆ. ನಕ್ಸಲ್ ನಾಯಕ ವಿಕ್ರಂ ಗೌಡ ಎಂಬಾತನನ್ನು ನಕ್ಸಲ್ ನಿಗ್ರಹ ಪಡೆ ಹತ್ಯೆ ಮಾಡಿದೆ. ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯ ದಟ್ಟಾರಣ್ಯದಲ್ಲಿ, ಅರಣ್ಯದಂಚಿನ…
ಪುತ್ತೂರು : ಕಾರ್ಯನಿರ್ವಹಿಸುತ್ತಿದ್ದ ಸ್ಥಳದಲ್ಲಿ ಕುಸಿದು ಬಿದ್ದು ಮೃತಪಟ್ಟ ಕಾರ್ಮಿಕನ ಮೃತದೇಹವನ್ನು ಪಿಕಪ್ ವಾಹನದಲ್ಲಿ ತಂದು, ಆತನ ಮನೆಯ ಹತ್ತಿರದ ರಸ್ತೆಯ ಬದಿಯಲ್ಲಿ ಇಟ್ಟುಹೋದ ಅಮಾನುಷ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಚಿಕ್ಕಮುಡ್ನೂರು ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯು ಸಾಲ್ಮರ ತಾರಿಗುಡ್ಡೆಯ ನಿವಾಸಿಯಾದ ಶಿವಪ್ಪ (69) ಎಂದು ತಿಳಿದುಬಂದಿದೆ, ಇವರು ಸಾಲ್ಮರ ಕೆರೆಮೂಲೆಯ ನಿವಾಸಿಯಾದ ವುಡ್ ಸಂಸ್ಥೆಯೊಂದರ ಮಾಲೀಕನಾದ ಹೆನ್ರಿ ತಾವ್ರೋ ಎಂಬುವರ ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದರು. ಶಿವಪ್ಪರನ್ನು ಶನಿವಾರ ಬೆಳಗ್ಗೆ ಸ್ಟಾನಿ ಎಂಬುವವರು ಕರೆದುಕೊಂಡು ಹೋಗಿದ್ದರು. ಆದರೆ ಸಂಜೆಯ ವೇಳೆ ಶಿವಪ್ಪ ಅವರ ಮೃತದೇಹವನ್ನು ಪಿಕಪ್ ವಾಹನದಲ್ಲಿ ತಂದು ಮನೆ ಮುಂಭಾಗದ ರಸ್ತೆಯಲ್ಲಿ ಬಿಟ್ಟು ಹೋಗಿದ್ದಾರೆಂದು ಮನೆ ಮಂದಿ ಮತ್ತು ಸ್ಥಳೀಯರು ಆರೋಪಿಸಿದ್ದಾರೆ.
ಮಂಗಳೂರು : ಅಕ್ರಮವಾಗಿ, ಅಬಕಾರಿ ಕಾಯ್ದೆಯ ವಿರುದ್ಧ ವಿವಿಧ ಬ್ರಾಂಡಿನ 11.50 ಲೀ. ಡಿಫೆನ್ಸ್ ಲಿಕ್ಕರ್ ಅನ್ನು ಮಾರಾಟ ಮಾಡಲು ದಾಸ್ತಾನು ಮಾಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಶ್ಯಾಮ್ ಸುಂದರ್ ಬಿನ್ ಬಿ ವಿ ಕೃಷ್ಣನ್ ನಂಬಿಯಾರ್ ಎಂಬವನನ್ನು ಬಂಧಿಸಲಾಗಿದೆ.ನ. 17 ರಂದು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವೆಲೆನ್ಸಿಯದಲ್ಲಿರುವ ರೋಶನಿ ನಿಲಯ ಪ್ರದೇಶದ ಅಪಾರ್ಟೆಂಟ್ ವೊಂದರ ಮುಂಭಾಗದ ರಸ್ತೆಯಲ್ಲಿ ಯಾವುದೇ ದಾಖಲಾತಿಗಳಿಲ್ಲದೆ ಮಾರಾಟ ಮಾಡುವ ಉದ್ದೇಶದಿಂದ 11.50 ಲೀ. ಮದ್ಯದ ಬಾಟೆಲ್ ನ್ನು ಆರೋಪಿ ಸಂಗ್ರಹಿಸಿದ್ದ. ಮಾಹಿತಿ ಪಡೆದ ಅಧಿಕಾರಿಗಳು ಕರ್ನಾಟಕ ಅಬಕಾರಿ ಕಾಯ್ದೆ 1965 ರ ನಿಯಮ 11, 14, 15 ರಂತೆ ಅಪರಾಧವಾದ ಕಲಂ 32(1) ಮತ್ತು 38(ಎ) ರಂತೆ ಆರೋಪಿ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ.
ಪುತ್ತೂರು: ಕೆದಂಬಾಡಿ ಗ್ರಾಮದ ತಿಂಗಳಾಡಿಯಲ್ಲಿ ಅಂಗಡಿಯೊಂದಕ್ಕೆ ಬಂದಿದ್ದ ಮಹಿಳೆಯೋರ್ವರ ಮಾನಭಂಗಕ್ಕೆ ಯತ್ನಿಸಿದ್ದ ಪ್ರಕರಣದ ಆರೋಪ ಸಾಬೀತಾಗಿದ್ದು, ಆರೋಪಿಗೆ 2 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಪುತ್ತೂರು ಹೆಚ್ಚುವರಿ ಹಿರಿಯ ಪ್ರಧಾನ ವ್ಯವಹಾರಿಕ ನ್ಯಾಯಾಧೀಶ ದೇವರಾಜ್ ಅರಸ್ ವೈ.ಎಚ್. ಅವರ ಪೀಠ ತೀರ್ಪು ಪ್ರಕಟಿಸಿದೆ. ಬದ್ರುದ್ದೀನ್ ಯಾನೆ ಬದ್ರು ಶಿಕ್ಷೆಗೆ ಒಳಗಾದ ಅಪರಾಧಿ.2022ರ ಸೆ. 14ರಂದು ತಿಂಗಳಾಡಿಯ ನ್ಯೂ ಸೂಪರ್ ಬಜಾರ್ ಜನರಲ್ ಸ್ಟೋರ್ ಸ್ವೀಟ್ ಸ್ಟಾಲ್ ಎಂಬ ಅಂಗಡಿಗೆ ತನ್ನ 7 ವರ್ಷದ ಮಗನೊಂದಿಗೆ ಬಂದಿದ್ದ ಮಹಿಳೆ ತಿಂಡಿ ಖರೀದಿಸಿ ಅಂಗಡಿಯವರಿಗೆ ಹಣವನ್ನು ನೀಡುತ್ತಿದ್ದ ವೇಳೆ ಆರೋಪಿ ಬದ್ರು ಅಂಗಡಿಯೊಳಗೆ ಬಂದು ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದ. ಈ ಕುರಿತು ಮಹಿಳೆ ನೀಡಿದ್ದ ದೂರಿನಂತೆ ಪುತ್ತೂರು ಗ್ರಾಮಾಂತರ ಪೊಲೀಸರು ಆರೋಪಿ ಬದ್ರು ವಿರುದ್ಧ ಕಲಂ 354 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.ಸಂಪ್ಯ ಪೊಲೀಸ್ ಠಾಣೆಯ ಆಗಿನ ಎಸ್.ಐ. ರಾಮಕೃಷ್ಣ ಅವರು ಪ್ರಕರಣದ ತನಿಖೆ ನಡೆಸಿ ಆರೋಪಿ ವಿರುದ್ಧ ಕೋರ್ಟ್ ಗೆ…
ಉಡುಪಿ: ಮಲ್ಪೆ ಪೋಲೀಸ್ ಠಾಣೆ ವ್ಯಾಪ್ತಿಯ ಲಕ್ಷ್ಮೀ ನಗರದ ಪಾಳೆಕಟ್ಟೆ ನಿವಾಸಿ ಪ್ರಸಾದ್ (40) ರವರ ಸಾವು ಹಲವು ಸಂಶಯಕ್ಕೆ ಎಡೆಮಾಡಿದ್ದು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ತಕ್ಷಣ ಉನ್ನತ ಮಟ್ಟದ ತನಿಖೆ ನಡೆಸುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿ ಸದಸ್ಯ ಜಯನ್ ಮಲ್ಪೆ ಆಗ್ರಹಿಸಿದ್ದಾರೆ. ನೀರಿನ ಡ್ರಮ್‌ನ ಒಳಗಿನಿಂದ ದೇಹದ ಕಾಲು ಇದ್ದು, ಮೇಲ್ಬಾಗದಲ್ಲಿ ಅರ್ಧ ತಲೆಕೆಳಗೆ ಹಾಕಿದ ರೀತಿಯಲ್ಲಿ ಮೃ*ತದೇಹ ಪತ್ತೆಯಾಗಿದ್ದು, ದೇಹದ ಹಲವು ಭಾಗಗಳಲ್ಲಿ ಗಾ*ಯಗಳಿದ್ದು ಸಂಶಯಕ್ಕೆ ಎಡೆಮಾಡಿದೆ. ಆತ್ಮಹತ್ಯೆ ಎಂದು ಬಿಂಬಿಸಿರುವ ಈ ಘಟನೆ ಹಲವು ಸಂಶಯಾಸ್ಪದ ರೀತಿಯಲ್ಲಿ ಮೃ*ತದೇಹ ಪತ್ತೆಯಾಗಿರುವುದರಿಂದ ಊರಿನ ಸುತ್ತುಮುತ್ತ ಭಯದ ವಾತಾವರಣ ನಿರ್ಮಾಣವಾಗಿದ್ದು, ಮೃ*ತನ ಮನೆಯವರನ್ನು ಸೂಕ್ತ ತನಿಖೆ ನಡೆಸಿ ನ್ಯಾಯ ನೀಡುವಂತೆ ಜಿಲ್ಲಾ ಪೋಲೀಸ್ ಆಧೀಕ್ಷಕರಿಗೆ ದಲಿತ ಮುಖಂಡರಾದ ವಾಸುದೇವ ಮುದ್ದೂರು, ಗಣೇಶ್ ನೆರ್ಗಿ, ಹರೀಶ್ ಸಲ್ಯಾನ್, ರವಿ ಲಕ್ಷ್ಮೀನಗರ ಆಗ್ರಹಿಸಿದ್ದಾರೆ.
ಬಂಟ್ವಾಳ: ನಿನ್ನೆ ಸಂಜೆ ಸುರಿದ ಭಾರಿ ಮಳೆಗೆ ಸಿಡಿಲು ಬಡಿದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬಂಟ್ವಾಳ ತಾಲೂಕು ಕೆದಿಲ ಪೇರಮುಗೇರು ನಿವಾಸಿ ಶ್ರೀ ರಾಮ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ಸುಬೋದ್ (13) ಎಂದು ಗುರುತಿಸಲಾಗಿದೆ. ಸಂಜೆ 5 ಗಂಟೆ ಸುಮಾರಿಗೆ ಸುರಿದ ಭಾರಿ ಮಳೆಯ ವೇಳೆ ಕೆದಿಲ ಗ್ರಾಮದ ಗಡಿಯಾರ ನಿವಾಸಿ, ವಿದ್ಯಾರ್ಥಿ ಸುಭೋದ್ ಮನೆಯಂಗಳದಲ್ಲಿ ನಿಂತಿದ್ದ ವೇಳೆ ಸಿಡಿಲು ಬಡಿದು ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿರುವ ಬಗ್ಗೆ ವರದಿಯಾಗಿದೆ.
ಉಳ್ಳಾಲ: ಈಜುಕೊಳದಲ್ಲಿ ಉಸಿರುಗಟ್ಟಿ ಮೂವರು ಯುವತಿಯರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮೇಶ್ವರದ ವಾಝ್ಕೋ ಬೀಚ್ ರೆಸಾರ್ಟ್‌ಗೆ ಅಧಿಕಾರಿಗಳು ಬೀಗಮುದ್ರೆ ಜಡಿದಿದ್ದಾರೆ. ಅಲ್ಲದೆ ಈ ರೆಸಾರ್ಟ್‌ನ ಟ್ರೇಡ್ ಲೈಸನ್ಸ್ ಹಾಗೂ ಟೂರಿಸಂ ಪರವಾನಿಗೆಯನ್ನು ಅಮಾನತ್ತಿನಲ್ಲಿಡಲಾಗಿದೆ ಎಂದು ಮಂಗಳೂರು ಉಪವಿಭಾಗಾಧಿಕಾರಿಗಳು ತಿಳಿಸಿದ್ದಾರೆ. ಏನಿದು ಪ್ರಕರಣ: ಮೈಸೂರು ಕುರುಬರ ಹಳ್ಳಿ 4ನೇ ಕ್ರಾಸ್ ನಿವಾಸಿ ನಿಶಿತಾ ಎಂ.ಡಿ.(21), ಮೈಸೂರು ರಾಮಾನುಜ ರಸ್ತೆಯ ಕೆ.ಆರ್ ಮೊಹಲ್ಲಾ ನಿವಾಸಿ ಪಾರ್ವತಿ ಎಸ್.(20), ಮೈಸೂರು ವಿಜಯನಗರ ದೇವರಾಜ ಮೊಹಲ್ಲಾ ನಿವಾಸಿ ಕೀರ್ತನಾ ಎನ್(21) ಎಂಬ ಮೂವರು ಶನಿವಾರ ಬೆಳಗ್ಗೆ ವಾಝ್ಕೋ ಬೀಚ್ ರೆಸಾರ್ಟ್‌ಗೆ ಬಂದು ತಂಗಿದ್ದರು. ರವಿವಾರ ಬೆಳಗ್ಗೆ 10ಗಂಟೆ ಸುಮಾರಿಗೆ ಮೂವರೂ ರೆಸಾರ್ಟ್ ಮುಂಭಾಗದಲ್ಲಿ ಸ್ವಿಮ್ಮಿಂಗ್ ಪೂಲ್‌ಗೆ ಇಳಿದು ನೀರಾಟ ಆಡುತ್ತಿದ್ದರು. ಆದರೆ ಇವರಲ್ಲೊಬ್ಬಳು ಯುವತಿ ಈಜುಕೊಳದ ಮಧ್ಯದ ಆಳ ಇದ್ದ ಕಡೆ ಹೋಗಿ ಸಿಲುಕಿಕೊಂಡಿದ್ದಳು. ಆಕೆ ಒದ್ದಾಡುತ್ತಿರುವುದನ್ನು ಗಮನಿಸಿ ಮತ್ತಿಬ್ಬರು ರಕ್ಷಣೆಗೆ ಧಾವಿಸಿದ್ದರು. ಆದರೆ ಮೂವರಿಗೂ ಈಜು ಬಾರದ ಕಾರಣ ಈ ಸಾವು ಸಂಭವಿಸಿದೆ ಎನ್ನಲಾಗಿದೆ. ರೆಸಾರ್ಟ್…
ಮಂಗಳೂರು: ಕೇರಳದ ಕಣ್ಣೂರು ಜಿಲ್ಲೆಯ ಕೆಳಕಂ ಪಂಚಾಯತ್ ವ್ಯಾಪ್ತಿಯ ಮಲಯಂಪಾಡಿ ಎಸ್ ತಿರುವಿನಲ್ಲಿ ಶುಕ್ರವಾರ ಮುಂಜಾನೆ ರಂಗಭೂಮಿ ಕಲಾವಿದರು ಸಂಚರಿಸುತ್ತಿದ್ದ ಮಿನಿ ಬನ್ನೊಂದು ರಬ್ಬರ್ ತೋಟಕ್ಕೆ ಮಗುಚಿ ಬಿದ್ದು ಇಬ್ಬರು ನಟಿಯರು ಸಾವಿಗೀಡಾಗಿ, 12 ಮಂದಿ ಗಾಯಗೊಂಡ ಘಟನೆ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರ ಸ್ಥಿತಿ ಗಂಭೀರವಿದೆ. ಬಸ್‌ನ ಮುಂಭಾಗದಲ್ಲಿ ಕುಳಿತಿದ್ದ ಕಾಯಂಕುಳಂ ನಿವಾಸಿ ಅಂಜಲಿ (32) ಮತ್ತು ಕರುನಾಗಪಳ್ಳಿ ನಿವಾಸಿ ಜೆಸ್ಸಿ ಮೋಹನ್ (58) ಸಾವಿಗೀಡಾದರು. ಕೇಳಕಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗೂಗಲ್ ಮ್ಯಾಪ್ ನೋಡಿಕೊಂಡು ಚಾಲಕ ಮಿನಿ ಬಸ್ ಚಲಾಯಿಸಿದ್ದಾರೆ. ಸಣ್ಣವಾಹನಗಳಿಗೆ ಮಾತ್ರ ಸುಗಮವಾಗಿ ಸಂಚರಿಸಲು ಸಾಧ್ಯವಿರುವ ಏರಿಳಿತದಿಂದ ಕೂಡಿದ ಈ ರಸ್ತೆಯಲ್ಲಿ ಸಾಗಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಮಂಗಳೂರು : ಖಾಸಗಿ ಬೀಚ್ ರೆಸಾರ್ಟ್ ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವನಪ್ಪಿದ ಘಟನೆ ಮಂಗಳೂರು ಹೊರವಲಯದ ಸೋಮೇಶ್ವರ ಉಚ್ಚಿಲದ ವಾಝ್ಕೊ ಬೀಚ್ ರೆಸಾರ್ಟ್ ಈಜುಕೊಳದಲ್ಲಿ ನಡೆದಿದೆ. ಮೃತರನ್ನು ಮೈಸೂರು ಕುರುಬಾರಹಳ್ಳಿ ನಾಲ್ಕನೇ ಕ್ರಾಸ್ ನಿವಾಸಿ ನಿಶಿತ ಎಂ.ಡಿ. (21), ಮೈಸೂರು ರಾಮಾನುಜ ರಸ್ತೆ, ಕೆ.ಆರ್ ಮೊಹಲ್ಲಾ ನಿವಾಸಿ ಪಾರ್ವತಿ ಎಸ್ (20), ಮೈಸೂರು ವಿಜಯ ನಗರ ದೇವರಾಜ ಮೊಹಲ್ಲ ನಿವಾಸಿ ಕೀರ್ತನ ಎನ್(21) ಎಂದು ಗುರುತಿಸಲಾಗಿದೆ. ಮೂವರು ಗೆಳೆತಿಯರು ನಿನ್ನೆ ಬೆಳಗ್ಗೆ ಬೀಚ್ ರೆಸಾರ್ಟ್ ಗೆ ಆಗಮಿಸಿ ಕೊಠಡಿ ಪಡೆದಿದ್ದರು. ಇಂದು ಬೆಳಿಗ್ಗೆ 8.30ರ ಸುಮಾರಿಗೆ ಸ್ವಿಮ್ಮಿಂಗ್ ಫೂಲ್ ನಲ್ಲಿ ಈಜಲು ತೆರಳಿದ್ದರು, ಮೂವರೇ ಪೂಲ್ ನಲ್ಲಿ ಆಟವಾಡುತ್ತಿದ್ದ ವೇಳೆ ನಡೆದ ಘಟನೆ. ಸ್ವಿಮ್ಮಿಂಗ್ ಫೂಲ್ ನಲ್ಲಿ ಒಂದು ಬದಿ ಆರು ಅಡಿಯಷ್ಟು ಆಳವಿತ್ತು, ಈ ವೇಳೆ ಆಯಾತಪ್ಪಿ ಓರ್ವ ಯುವತಿ ಮುಳುಗಿರುವ ಸಾಧ್ಯತೆ ಇದೆ. ರ ಕ್ಷಣೆಗೆ ಮುಂದಾಗಿದ ಮತ್ತೊಬ್ಬಾಕೆಯೂ ಮುಳುಗಿದ್ದ ಕಾರಣ ಮೂರನೇ ಯುವತಿಯೂ ನೀರಿಗೆ…