ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ಹಿರಿಯ ಅಧಿಕಾರಿ ಎಂದು ಹೇಳಿಕೊಂಡು ಕೋಟ್ಯಂತರ ರೂಪಾಯಿ ಸುಲಿಗೆ ಹಾಗೂ ವಂಚನೆ ನಡೆಸುತ್ತಿದ್ದ ಕುಖ್ಯಾತ ಅಂತರರಾಜ್ಯ ವಂಚಕ, ಇಂಟರ್‌ಪೋಲ್ ರೆಡ್ ಕಾರ್ನರ್ ನೋಟಿಸ್‌ದಾರ ಸ್ಯಾಮ್ ಪೀಟರ್‌ನನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ.ಜಾಮೀನು ಪಡೆದು ಕಳೆದ 3 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳ ಮೂಲದ 64 ವರ್ಷದ ಸ್ಯಾಮ್ ಪೀಟರ್ ಅಲಿಯಾಸ್ ಡ್ಯಾನಿ ತಾರಕನ್ ಎಂಬಾತನನ್ನು ಕೇರಳದ ಕಣ್ಣೂರಿನಲ್ಲಿ ಪತ್ತೆ ಹಚ್ಚಿ ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ಸ್ಯಾಮ್ ಪೀಟರ್ ತನ್ನದೇ ಆದ ಗ್ಯಾಂಗ್ ರಚಿಸಿಕೊಂಡು, ರಾಷ್ಟ್ರೀಯ ತನಿಖಾ ಸಂಸ್ಥೆಗಳ ಅಧಿಕಾರಿಗಳಂತೆ ನಟಿಸುತ್ತಿದ್ದ. ಹಣಕಾಸು ವಿವಾದಗಳು, ಬ್ಯಾಂಕ್ ವಂಚನೆ ಹಾಗೂ ತೆರಿಗೆ ವಂಚನೆ ಪ್ರಕರಣಗಳಲ್ಲಿ ಸಿಲುಕಿರುವ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು, ತಾನು ಪ್ರಭಾವಿ ಅಧಿಕಾರಿಯೆಂದು ನಂಬಿಸಿ ಹಣ ಪಡೆದು ಸುಲಿಗೆ ನಡೆಸುತ್ತಿದ್ದ. ಈ ಸಂಬಂಧ 2019ರ ಆಗಸ್ಟ್ 16 ರಂದು ಮಂಗಳೂರಿನ ಪಂಪ್‌ವೆಲ್‌ನಲ್ಲಿರುವ ಲಾಡ್ಜ್ ಒಂದರ ಮೇಲೆ ದಾಳಿ…
Author: main-admin
ಬೆಳ್ತಂಗಡಿ: ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಒಂದು ವರ್ಷದಿಂದ ಬೆಳ್ತಂಗಡಿಯಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ)ದಲ್ಲಿ ಸೇವೆ ಸಲ್ಲಿಸುತ್ತಿದ್ದ ಸಬ್ ಇನ್ಸ್‌ಪೆಕ್ಟರ್ ವಿನೋದ್ ರೆಡ್ಡಿ ಅವರನ್ನು ಆಗಸ್ಟ್ 31 ರಂದು ಭ್ರಷ್ಟಾಚಾರ ಪ್ರಕರಣದಲ್ಲಿ ಅಮಾನತುಗೊಳಿಸಲಾಗಿದೆ. ರೆಡ್ಡಿ ಈ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದರು ಮತ್ತು ನಂತರ ಅವರನ್ನು ಮುಂಡಗೋಡ ಪೊಲೀಸ್ ಠಾಣೆಗೆ ವರ್ಗಾಯಿಸಲಾಯಿತು. ವರ್ಗಾವಣೆ ಮತ್ತು ಮಾಸಿಕ ವಸೂಲಿಗಳಿಗೆ ಸಂಬಂಧಿಸಿದ ವ್ಯವಹಾರಗಳ ಕುರಿತು ಚರ್ಚೆಗಳು ನಡೆದಿವೆ ಎನ್ನಲಾದ ಆಡಿಯೋ ರೆಕಾರ್ಡಿಂಗ್ ವೈರಲ್ ಆದ ನಂತರ, ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂಎನ್ ಆಗಸ್ಟ್ 31 ರಂದು ಪ್ರಾಥಮಿಕ ವಿಚಾರಣೆ ನಡೆಸಿ ಪಿಎಸ್ಐ ಕಿರಣ್ ಪಾಟೀಲ್, ಪಿಎಸ್ಐ ಕೃಷ್ಣ ಅರಿಕೆರೆ ಮತ್ತು ಪಿಎಸ್ಐ ವಿನೋದ್ ರೆಡ್ಡಿ ಸೇರಿ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿದರು. ವಿನೋದ್ ರೆಡ್ಡಿ ಅವರನ್ನು ಹಳಿಯಾಳ ಪೊಲೀಸ್ ಠಾಣೆಯಿಂದ ಮುಂಡಗೋಡ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದ್ದರೂ, ರಾಜ್ಯ ಸರ್ಕಾರ…
ಮಂಗಳೂರಿನಲ್ಲಿ ಆಟೋರಿಕ್ಷಾ ಪ್ರಯಾಣ ದರವನ್ನು ಪರಿಷ್ಕರಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ (RTA) ಅಧ್ಯಕ್ಷರಾದ ದರ್ಶನ್ ಎಚ್.ವಿ. ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಹೊಸ ದರದ ಅನ್ವಯ, ಇನ್ನು ಮುಂದೆ ಗರಿಷ್ಠ ಮೂವರು ಪ್ರಯಾಣಿಕರಿಗೆ ಅನ್ವಯಿಸುವಂತೆ ಕನಿಷ್ಠ 1.5 ಕಿಲೋಮೀಟರ್ ಪ್ರಯಾಣಕ್ಕೆ ₹40 ದರವನ್ನು ನಿಗದಿಪಡಿಸಲಾಗಿದ್ದು, ನಂತರದ ಪ್ರತಿ ಹೆಚ್ಚುವರಿ ಕಿಲೋಮೀಟರ್‌ಗೆ ₹20 ಶುಲ್ಕ ವಿಧಿಸಲು ಅವಕಾಶ ನೀಡಲಾಗಿದೆ. ಈ ಮೊದಲು ಮಂಗಳೂರಿನಲ್ಲಿ ಆಟೋಗಳ ಕನಿಷ್ಠ ಪ್ರಯಾಣ ದರ ₹35 ಹಾಗೂ ನಂತರದ ಪ್ರತಿ ಕಿಲೋಮೀಟರ್‌ಗೆ ₹17 ಆಗಿತ್ತು. ಕಳೆದ ನಾಲ್ಕು ವರ್ಷಗಳಿಂದ ದರ ಪರಿಷ್ಕರಣೆಯಾಗದ ಹಿನ್ನೆಲೆಯಲ್ಲಿ ಮತ್ತು ಇತ್ತೀಚಿನ ದಿನಗಳಲ್ಲಿ ಎಲ್.ಪಿ.ಜಿ, ಸಿ.ಎನ್.ಜಿ, ಇಂಧನ ದರ ಹಾಗೂ ಬಿಡಿಭಾಗಗಳ ವೆಚ್ಚ ಗಣನೀಯವಾಗಿ ಹೆಚ್ಚಿರುವುದರಿಂದ ದರ ಏರಿಕೆ ಮಾಡುವಂತೆ ಆಟೋ ಚಾಲಕ-ಮಾಲಕರ ಸಂಘಟನೆಗಳು ನಿರಂತರವಾಗಿ ಮನವಿ ಸಲ್ಲಿಸಿದ್ದವು. ಈ ಕುರಿತು ಆಟೋ ಚಾಲಕರ ಬೇಡಿಕೆ ಮತ್ತು ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು RTA ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಿ,…
ಮಂಗಳೂರು: ಪಶ್ಚಿಮ ವಲಯದ ನೂತನ ಪೊಲೀಸ್ ಉಪ ಮಹಾನಿರೀಕ್ಷಕರಾಗಿ ಡಿ.ಐ.ಜಿ.ಪಿ ಚೇತನ್ ಆರ್, ಐ.ಪಿ.ಎಸ್ ಅವರು ಸೋಮವಾರ ಅಧಿಕಾರ ವಹಿಸಿಕೊಂಡರು. ನಿರ್ಗಮನ ಐಜಿಪಿ ಅಮಿತ್ ಸಿಂಗ್ ಅವರು ಪೊಲೀಸ್ ದಂಡವನ್ನು ನೀಡುವ ಮೂಲಕ ಚೇತನ್ ಆರ್ ಅವರಿಗೆ ಅಧಿಕಾರವನ್ನು ಹಸ್ತಾಂತರಿಸಿದರು. 2010ರ ಐಪಿಎಸ್ ಬ್ಯಾಚ್ನ ಕರ್ನಾಟಕ ಕೇಡರ್ ಅಧಿಕಾರಿ ಆರ್.ಚೇತನ್ ಅವರು ಈ ಹಿಂದೆ ಕರಾವಳಿ ಕಾವಲು ಪಡೆ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ನಿರ್ಗಮನ ಐಜಿಪಿ ಅಮಿತ್ ಸಿಂಗ್ ಅವರಿಗೆ ಕರ್ನಾಟಕ ಸ್ಟೇಟ್ ರಿಸರ್ವ್ ಪೊಲೀಸ್ ಇದರ ಐಜಿಪಿ ಆಗಿ ವರ್ಗಾವಣೆಯಾಗಿದೆ.
ಬಂಟ್ವಾಳ : ಆಟೋ ರಿಕ್ಷಾ ಢಿಕ್ಕಿ ಹೊಡೆದು ಬೈಕ್ ಸವಾರನೋರ್ವ ಮೃತಪಟ್ಟ ಘಟನೆ ಮಾರ್ನಬೈಲು ಸಮೀಪದ ಸಜಿಪ ಮೂಡ ಗ್ರಾಮದ ಕಂದೂರು-ಪೆಲತ್ತಕಟ್ಟೆ ಬಸ್ ನಿಲ್ದಾಣದ ಬಳಿ ರವಿವಾರ ರಾತ್ರಿ ನಡೆದಿದೆ. ಮೃತ ಯುವಕನನ್ನು ನಂದಾವರ-ಸುನ್ನೀ ನಗರ ನಿವಾಸಿ ಮುಹಮ್ಮದ್ ರಶೀಕ್ (25) ಎಂದು ಗುರುತಿಸಲಾಗಿದೆ. ನಂದಾವರ ಶಾಲಾ ಸಮೀಪ ಗ್ಯಾರೇಜ್ ನಡೆಸುತ್ತಿದ್ದ ಈತ ರವಿವಾರ ರಾತ್ರಿ ಸಜಿಪಕ್ಕೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ಪೆಲತ್ತಕಟ್ಟೆಯಲ್ಲಿ ಶಿವಾಜಿ ಕುಮಾರ್ ಎಂಬವರು ಚಲಾಯಿಸುತ್ತಿದ್ದ ಆಟೋ ರಿಕ್ಷಾ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ತಕ್ಷಣ ಸ್ಥಳೀಯರು ಆತನನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸಾಗಿಸಿದರಾದರೂ ತಲೆಗೆ ಗಂಭೀರ ಗಾಯಗೊಂಡಿದ್ದ ಆತ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂದಾವರ ನಿವಾಸಿ ಝೈನುಲ್ ಆಬಿದೀನ್ ಎಂಬವರು ನೀಡಿರುವ ದೂರಿನಂತೆ ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ರಶೀಕ್ ತಂದೆ, ತಾಯಿ,…
ಮಂಗಳೂರು: ಮೊಬೈಲ್ ಫೋನ್ ವಿಚಾರವಾಗಿ ಅಣ್ಣ-ತಮ್ಮನ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಅಣ್ಣನನ್ನು ತಮ್ಮನೇ ಚಾಕುವಿನಿಂದ ಇರಿದು ಕೊಂದ ಘಟನೆ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ ಕೊಟ್ಟಾರ ಕ್ರಾಸ್ ಬಳಿ ಭಾನುವಾರ(ಆ.30) ರಾತ್ರಿ ನಡೆದಿದೆ. ಕೊಲೆಯಾದವರನ್ನು ಅಡಿವೆಪ್ಪ (40) ಎಂದು ಗುರುತಿಸಲಾಗಿದ್ದು, ರಾಜು (36) ಕೊಲೆ ಆರೋಪಿ ತಮ್ಮ. ಮೂಲತಃ ಬೆಳಗಾವಿ ಜಿಲ್ಲೆಯ ಬೈಲಹೊಂಗಲದವರಾದ ಅಣ್ಣ-ತಮ್ಮ ಇಬ್ಬರು ತಾಯಿಯೊಂದಿಗೆ ಕೊಟ್ಟಾರ ಕ್ರಾಸ್ ಬಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ತಾಯಿ ಗೂಡಂಗಡಿ ನಡೆಸುತ್ತಿದ್ದು, ಇಬ್ಬರೂ ಕೂಲಿ ಕೆಲಸ ಮಾಡುತ್ತಿದ್ದರು. ಇಬ್ಬರಿಗೂ ಮದ್ಯಪಾನದ ಚಟವಿತ್ತು ಎಂದು ತಿಳಿದುಬಂದಿದೆ. ಭಾನುವಾರ ರಾತ್ರಿ 10:30 ರಿಂದ 11 ಗಂಟೆಯ ನಡುವೆ ಮೊಬೈಲ್ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿದ್ದು, ಈ ವೇಳೆ ರಾಜು ಚಾಕುವಿನಿಂದ ಅಡಿವೆಪ್ಪನಿಗೆ ಇರಿದಿದ್ದಾನೆ ಎಂದು ಆರೋಪಿಸಲಾಗಿದೆ. ತಾಯಿ ಅಂಗಡಿ ಮುಚ್ಚಿ ಮನೆಗೆ ಬಂದಾಗ ಅಡಿವೆಪ್ಪ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟರಲ್ಲಾಗಲೇ ಅವರು…
ಮಂಡ್ಯ: ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯೊಬ್ಬನಿಗೆ ರಾಜಾತಿಥ್ಯ ನೀಡಿದ ಹಾಗೂ ಜೈಲಿನ ಕೊಠಡಿಗಳಿಗೆ ಹಣ ನಿಗದಿಪಡಿಸಿದ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ, ಕಾರಾಗೃಹ ಅಧೀಕ್ಷಕಿ ಶಾಂತಮ್ಮ ಅವರನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡಿ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಪ್ರಕರಣದ ಹಿನ್ನೆಲೆ: ಭೂ ಅಕ್ರಮ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಎಡಿಎಲ್‌ಆರ್ (ADLR) ಅಧಿಕಾರಿ ಮಹಮದ್ ಹುಸೇನ್ ಮಂಡ್ಯ ಜಿಲ್ಲಾ ಕಾರಾಗೃಹದಲ್ಲಿದ್ದನು. ಯಾವುದೇ ಗಂಭೀರ ಕಾಯಿಲೆ ಇಲ್ಲದಿದ್ದರೂ ಬೆನ್ನು ನೋವಿನ ನೆಪವೊಡ್ಡಿ ಆತನನ್ನು ಮಂಡ್ಯದ ಮಿಮ್ಸ್ (MIMS) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿದ್ದ ವೇಳೆ ಹುಸೇನ್ ತನ್ನ ಗೆಳತಿಯೊಂದಿಗೆ ರಾಜಾರೋಷವಾಗಿ ಕಾಲ ಕಳೆಯುತ್ತಿದ್ದ ವಿಷಯ ಬೆಳಕಿಗೆ ಬಂದಿತ್ತು. ನ್ಯಾಯಾಧೀಶರ ಭೇಟಿ ವೇಳೆ ಬಂಡವಾಳ ಬಯಲು: ನ್ಯಾಯಾಲಯಕ್ಕೆ ಯಾವುದೇ ಮಾಹಿತಿ ನೀಡದೆ ಕೈದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಡ್ಯ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಿ. ಚಂದ್ರಶೇಖರ್ ಅವರು ಮಿಮ್ಸ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದಾಗ ಈ ಕರ್ಮಕಾಂಡ ಬಯಲಾಗಿತ್ತು. ವಿಚಾರಣೆ ನಡೆಸದೆ ಕೈದಿಗೆ ಆಸ್ಪತ್ರೆಯಲ್ಲಿ…
ಬೆಳ್ತಂಗಡಿ: ಮಾನ್ಯ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಕೇರಳದ ಕಣ್ಣೂರಿನಲ್ಲಿ ಬಂಧಿಸಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 2014ರಲ್ಲಿ ದಾಖಲಾಗಿದ್ದ ಅ.ಕ್ರ. 172/2014 ಪ್ರಕರಣದಲ್ಲಿ ಡೆನ್ನಿ ಜೋಸೆಫ್ ಅಲಿಯಾಸ್ ಆಂಟೋನಿ ಆರೋಪಿಯಾಗಿದ್ದ. ಈತನ ವಿರುದ್ಧ ಐಪಿಸಿ ಕಲಂ 354(B), 323, 324, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಈತನ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಆಗಸ್ಟ್ 29ರಂದು ಕೇರಳದ ಕಣ್ಣೂರಿನಲ್ಲಿ ದಸ್ತಗಿರಿ ಮಾಡಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಪಿಸಿ ಮುನಿಯ ನಾಯ್ಕ ಹಾಗೂ ಪಿಸಿ ಮನು ನಾಯ್ಕ ಅವರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.ಬಳಿಕ ಆರೋಪಿಯನ್ನು ಮಾನ್ಯ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೆಪಿಎಸ್‌ಸಿ (KPSC) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅವರನ್ನು ಸಿಐಡಿ (CID) ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ತನಿಖೆಗೆ ಸೂಕ್ತ ಸಹಕಾರ ನೀಡದ ಹಿನ್ನೆಲೆಯಲ್ಲಿ ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷಾ ನಿಯಂತ್ರಕರಾಗಿದ್ದ (Controller of Examinations) ಅವಧಿಯಲ್ಲಿ ನಡೆದಿದೆ ಎನ್ನಲಾದ ಪ್ರಶ್ನೆಪತ್ರಿಕೆ ಸೋರಿಕೆ, ಅಂಕ ತಿದ್ದುಪಡಿ ಹಾಗೂ ನೇಮಕಾತಿಯಲ್ಲಿನ ಅಕ್ರಮಗಳ ಕುರಿತಂತೆ ಸಿಐಡಿ ವಿಶೇಷ ತನಿಖಾ ತಂಡ ತೀವ್ರ ತನಿಖೆ ನಡೆಸುತ್ತಿದೆ. ಪ್ರಕರಣದ ತನಿಖೆಯ ಭಾಗವಾಗಿ ಸಿಐಡಿ ಅಧಿಕಾರಿಗಳು ನಿನ್ನೆ ಸತತ 11 ಗಂಟೆಗಳ ಕಾಲ ಗ್ಯಾನೇಂದ್ರ ಕುಮಾರ್ ಅವರನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಿದ್ದರು. ಬಳಿಕ ಇಂದು ಮಧ್ಯಾಹ್ನ 12 ಗಂಟೆಯಿಂದ ಮತ್ತೆ ವಿಚಾರಣೆ ಮುಂದುವರಿಸಿದ ತನಿಖಾಧಿಕಾರಿಗಳು, ಅವರು ನೀಡಿದ ಹೇಳಿಕೆಗಳಲ್ಲಿನ ಅಸಮಂಜಸತೆ ಹಾಗೂ ತನಿಖಾ ಪ್ರಕ್ರಿಯೆಗೆ ಸರಿಯಾಗಿ ಸ್ಪಂದಿಸದ ಕಾರಣ ಅಂತಿಮವಾಗಿ ಅವರನ್ನು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತ ಅಧಿಕಾರಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ…
ಮಂಗಳೂರು: ರಾಜ್ಯದಲ್ಲಿ ಪ್ರಮುಖ ಐಪಿಎಸ್ ಅಧಿಕಾರಿಗಳ ವರ್ಗಾವಣೆಯಾಗಿದ್ದು ಪಶ್ಚಿಮ ವಲಯ ಐಜಿಪಿಯಾಗಿದ್ದ ಅಮಿತ್ ಸಿಂಗ್ ಕೆಎಸ್‌ಆರ್‌ಪಿ ಪಡೆಯ ಐಜಿಪಿಯಾಗಿ ವರ್ಗಾವಣೆ ಆಗಿದ್ದಾರೆ. ಅವರ ಜಾಗಕ್ಕೆ 2010ರ ಬ್ಯಾಚ್ ಐಪಿಎಸ್ ಅಧಿಕಾರಿ ಆರ್.ಚೇತನ್ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ, ಮಂಗಳೂರು ಕಮಿಷನರೇಟ್ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿದ್ದ ಮಿಥುನ್ ಎಚ್.ಎನ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರನ್ನು ಗದಗ ಜಿಲ್ಲೆಯ ಎಸ್ಪಿಯಾಗಿ ನೇಮಕ ಮಾಡಲಾಗಿದೆ. ಅಮಿತ್ ಸಿಂಗ್ ಅವರು 2024ರ ಜನವರಿ 1ರಂದು ಮಂಗಳೂರಿನ ಪಶ್ಚಿಮ ವಲಯ ಐಜಿಪಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಬೆಳಗಾವಿ ಕಮಿಷನರ್ ಆಗಿದ್ದ ಭೂಷಣರಾವ್ ಬೋರಸೆ ಅವರನ್ನೂ ವರ್ಗಾವಣೆ ಮಾಡಲಾಗಿದ್ದು, ಹುಬ್ಬಳ್ಳಿ–ಧಾರವಾಡ ಕಮಿಷನರ್ ಆಗಿ ನೇಮಿಸಲಾಗಿದೆ.










