ಬೆಂಗಳೂರು: ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಸದ ವಾಹನ ಸವಾರರಿಗೆ ಕೊಂಚ ರಿಲೀಫ್ ಸಿಕ್ಕಿದೆ. ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನ.20 ರವರೆಗೆ ಅವಧಿ ವಿಸ್ತರಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ಕೋರಿ ಹಿರಿಯ ವಕೀಲ ದೇವದತ್ ಕಾಮತ್ ಅವರು ಹೈಕೋರ್ಟ್ ಮನವಿ ಸಲ್ಲಿಸಿದ್ದರು. ಮನವಿ ಪರಿಗಣಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿಕೆ ಮಾಡಿದೆ. ನವೆಂಬರ್ 20 ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಲಾಗಿದೆ. ಇದರಿಂದ ವಾಹನ ಸವಾರರಿಗೆ ಸದ್ಯಕ್ಕೆ ದಂಡದ ಟೆನ್ಷನ್ ತಪ್ಪಿದೆ.
Author: main-admin
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ `ಒಂದು ದೇಶ, ಒಂದು ಚುನಾವಣೆ ವರದಿಗೆ ಅನುಮೋದನೆ ಸಿಕ್ಕಿದೆ. ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದ ಒಂದು ದೇಶ, ಒಂದು ಚುನಾವಣೆ’ ವರದಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಏಕಕಾಲದಲ್ಲಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಸಂಪುಟ ಬುಧವಾರ ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾಪಕ್ಕೆ ಅನುಮೋದನೆ ನೀಡಿದೆ.
ಬಂಟ್ವಾಳ ಸಮೀಪ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಚಿಯಲ್ಲಿ ಸಂಭವಿಸಿದೆ. ಮಂಚಿ ಗ್ರಾಮದ ಮೋಂತಿಮಾರು ನಿವಾಸಿ ಆಸ್ಮ ಎಂಬವರ ಮನೆಯಿಂದ ಕಳವು ನಡೆದಿದೆ. ಸೆ.16ರ ಸೋಮವಾರ ಬೆಳಿಗ್ಗೆ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನೋಡಲು ಮನೆಗೆ ಬೀಗ ಹಾಕಿ ಮಸೀದಿಗೆ ತೆರಳಿದ್ದ ವೇಳೆ ಈ ಕಳ್ಳತನ ನಡೆದಿದೆ ಎನ್ನಲಾಗಿದೆ. ರಾತ್ರಿ 12.45 ಗಂಟೆಗೆ ಮಸೀದಿಯಿಂದ ವಾಪಸು ಮನೆಗೆ ಬಂದು ನೋಡಿದಾಗ ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ತುಂಡು ಮಾಡಿ ಮನೆಯ ಒಳಗೆ ಪ್ರವೇಶ ಮಾಡಿ, ಬೆಡ್ ರೂಮಿನಲ್ಲಿರುವ ಕಪಾಟು ಬೀಗ ತೆಗೆದು ಅದರೊಳಗೆ ಇರಿಸಿಲಾಗಿದ್ದ ಸುಮಾರು1 ಲಕ್ಷ 33 ಸಾವಿರ ರೂ ಮೌಲ್ಯದ ಚಿನ್ನ ಹಾಗೂ ನಗದು ಕಳವು ಮಾಡಲಾಗಿದೆ. ರೂ.72 ಸಾವಿರ ಮೌಲ್ಯದ ಅರ್ಧ ಪವನ್ ತೂಕದ ಚಿನ್ನದ ಸರ,…
ಮಂಗಳೂರು: ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಜೆಬಿಎಫ್‌ಪಿಎಲ್ ಕಂಪೆನಿ ಸ್ಥಾಪನೆಗೆ ಜಮೀನು ಬಿಟ್ಟುಕೊಟ್ಟು ಪಿಡಿಎಫ್ (ಭೂಮಿ ಕಳೆದುಕೊಂಡ ಕುಟುಂಬಸ್ಥರು) ಆಧಾರದಲ್ಲಿ ಉದ್ಯೋಗ ಪಡೆದಿದ್ದ 115 ಮಂದಿ ಜಿಎಂಪಿಎಲ್ (ಗೈಲ್ ಇಂಡಿಯಾ) ಕಂಪೆನಿಯಲ್ಲಿ ಉದ್ಯೋಗ ಮುಂದುವರಿಸುವುದಕ್ಕೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಸೂಚನೆ ಮೇರೆಗೆ ಜಿಎಂಪಿಎಲ್ ಕಂಪೆನಿ ಇದೀಗ ಒಪ್ಪಿಗೆ ನೀಡಿದೆ. ಇದರೊಂದಿಗೆ ಬಹುದಿನಗಳಿಂದ ಬಾಕಿಯಾಗಿದ್ದ ಜೆಬಿಎಫ್ ಪಿಡಿಎಫ್ ಉದ್ಯೋಗಸ್ಥರ ಈ ಗಂಭೀರ ಸಮಸ್ಯೆಯನ್ನು ದ.ಕ. ಸಂಸದ ಬ್ರಿಜೇಶ್ ಚೌಟ ಅವರು ಬಗೆಹರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಬ್ರಿಜೇಶ್ ಚೌಟ ಅವರಿಗೆ ಅಧಿಕೃತವಾಗಿ ಪತ್ರ ಬರೆದಿರುವ ಗೈಲ್ ಇಂಡಿಯಾದ ನಿರ್ದೇಶಕ ಹಾಗೂ ಜಿಎಂಪಿಎಲ್ ಅಧ್ಯಕ್ಷ ಆಯುಶ್ ಗುಪ್ತಾ ಅವರು, ‘‘ಜಿಎಂಪಿಎಲ್‌ಗೆ ಜೆಬಿಎಫ್‌ಪಿಎಲ್ ಪಿಡಿಎಫ್ ಸಮಸ್ಯೆ ಬಗ್ಗೆ ಮನವಿ ಬಂದಿದ್ದು ಅದನ್ನು ಆದ್ಯತೆ ಮೇರೆಗೆ ಬಗೆಹರಿಸಲಾಗುತ್ತಿದ್ದು, ಸೆ.30ರೊಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸುವುದಾಗಿ’’ ಭರವಸೆ ನೀಡಿದ್ದಾರೆ. ಪೆಟ್ರೋಲಿಯಂ ಸಚಿವಾಲಯ ತಮ್ಮ ಮನವಿ ಪರಿಗಣಿಸಿ ಈ ಕಠಿಣ ಸಮಸ್ಯೆಗೆ ತುರ್ತಾಗಿ ಸ್ಪಂದಿಸಿರುವುದಕ್ಕೆ ಚೌಟ ಅವರು ಹರ್ಷ ವ್ಯಕ್ತಪಡಿಸಿದ್ದು, ಪೆಟ್ರೋಲಿಯಂ…
ಬೆಂಗಳೂರು: ನಗರದ ಡಿಸಿಪಿ ರ‍್ಯಾಂಕ್ ಐಪಿಎಸ್ ಅಧಿಕಾರಿಯೊಬ್ಬರು ನಿನ್ನೆ ಡ್ಯೂಟಿಯನ್ನ ಅರ್ಧಕ್ಕೆ ಬಿಟ್ಟು ಆಧ್ಯಾತ್ಮತ್ತ ಹೋಗಿದ್ದಾರೆ ಎನ್ನಲಾಗ್ತಿದೆ. ನಿನ್ನೆ ಕಮಿಷನರ್ ವಾರದ ಸಭೆಯಲ್ಲಿ ಭಾಗಿಯಾಗಿದ್ದ ಆ ಅಧಿಕಾರಿ ಮಧ್ಯಾಹ್ನ ಸಭೆ ಮುಗಿಸಿ ನೇರವಾಗಿ ಮನೆಗೆ ತೆರಳಿದ್ರಂತೆ. ಮನೆಯಲ್ಲಿ ಫಾರ್ಮಲ್ ಬಟ್ಟೆ ಬದಲಿಸಿ ಪಂಚೆ ಶರ್ಟ್ ಧರಿಸಿದ ಆ ಅಧಿಕಾರಿ ಸರ್ಕಾರಿ ವಾಹನದಲ್ಲೆ ನೇರವಾಗಿ ಏರ್‌ಪೋರ್ಟ್ ಬಳಿಗೆ ಡ್ರಾಪ್ ತೆಗೆದುಕೊಂಡಿದ್ದಾರೆ. ಇಲ್ಲಿ ತಮ್ಮ ಸಿಬ್ಬಂದಿಗೆ ಇಲಾಖೆಯ ಐಡಿ ಕಾರ್ಡ್ ಮೊಬೈಲ್ ನೀಡಿ ನನಗೆ ಈ ಲೌಕಿಕ ಜೀವನ ಸಾಕು ನಾನು ಬೇರೆ ಜೀವನ ನಡೆಸಬೇಕು ಅಂತ ಹೇಳಿಕೊಂಡು ತಾವು ಅಲ್ಲೆ ಉಳಿದುಕೊಂಡು ಸಿಬ್ಬಂದಿ ವಾಪಸ್ ಕಳುಹಿಸಿದ್ದಾರಂತೆ. ಆ ಅಧಿಕಾರಿ ಕುರಿತಂತೆ ಪೊಲೀಸರು ಕೂಡ ಹುಡುಕಾಟ ನಡೆಸಿದ್ದರು. ಸದ್ಯ ಆ ಅಧಿಕಾರಿ ಕೆಲವರ ಸಂಪರ್ಕಕ್ಕೆ ಸಿಕ್ಕಿದ್ದು, ಮೌನವೃತಕ್ಕೆ ಜಾರಿ ಧ್ಯಾನಮಗ್ನರಾಗಿದ್ರು ಎಂದು ತಿಳಿದು ಬಂದಿದೆ.
ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಒಂದೇ ಕುಟುಂಬದ ಐವರು ಸಾವನಪ್ಪಿದ ಘಟನೆ ಇಲ್ಲಿನ ಭದ್ರಾಪುರ ಬಳಿ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರಲ್ಲಿ ಮೂವರು ಮಹಿಳೆಯರು ಮತ್ತು ಇಬ್ಬರು ಪುರುಷರಿದ್ದು, ಎಲ್ಲರೂ ಮಾಗಡಿಯವರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಶವಗಳನ್ನು ನೆಲಮಂಗಲದ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಮೃತರೆಲ್ಲರೂ ಹುಲಿಯೂರು ದುರ್ಗ ಸಮೀಪದ ಹುಲಿವಾಹನ ಎಂಬ ಗ್ರಾಮದವರಾಗಿದ್ದು, ಬೆಂಗಳೂರಿನ ಬಾಗಲಗುಂಟೆಯಲ್ಲಿ ನೆಲೆಸಿದ್ದರು. ಪೂಜಾ ಕಾರ್ಯ ನಿಮಿತ್ತ ಗ್ರಾಮಕ್ಕೆ ಕಾರಿನಲ್ಲಿ ಬಂದಿದ್ದ ಕುಟುಂಬದವರು, ವಾಪಸ್ ಹೋಗುವಾಗ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳೂರು: ಧರ್ಮ ನಿಂದನೆ ಪ್ರಚೋದನಕಾರಿ ಭಾಷಣ ಹಾಗೂ ಸಮಾಜದಲ್ಲಿ ಶಾಂತಿ, ನೆಮ್ಮದಿ ಕದಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶರಣ್ ಪಂಪ್ವೆಲ್ ಮತ್ತು ಭರತ್ ಕುಮ್ಡೇಲು ಅವರ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಹೌದು ಸೆಪ್ಟೆಂಬರ್ 16ರಂದು ಬಿಸಿ ರೋಡಿನ ದೇವಸ್ಥಾನ ಒಂದರ ಮುಂಭಾಗದಲ್ಲಿ ಶರಣ್ ಪಂಪ್ವೆಲ್, ಭಾರತ್ ಕುಮ್ದೇಲು ಪ್ರಚೋದನಕಾರಿಯಾದಂತಹ ಭಾಷಣ ಮಾಡಿದ್ದು ಅಲ್ಲದೆ ತಾವು ಮಾತನಾಡಿರುವ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಸಮಾಜದಲ್ಲಿ ಶಾಂತಿ ನೆಮ್ಮದಿ ಕದಡುವಂತಹ ಕೆಲಸ ಮಾಡಿದ ಕಾಗೆ ಇದೀಗ ಅವರ ವಿರುದ್ಧ ದೂರು ದಾಖಲಾಗಿದೆ. ಹಿಂದೂ ಮತ್ತು ಮುಸ್ಲಿಂ ಸಮುದಾಯದ ನಡುವೆ ದ್ವೇಷ ಸಂಘರ್ಷ ಉಂಟಾಗುವ ರೀತಿಯಲ್ಲಿ ಮಾತನಾಡಿದ್ದಲ್ಲದೆ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ ಎಂದು ಬಿ.ಮೂಡ ಗ್ರಾಮದ ಬಂಟ್ವಾಳ ಕೆಳಗಿನ ಪೇಟೆ ನಿವಾಸಿ ಮಹಮ್ಮದ್ ರಫೀಕ್ ಎಂಬವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಇನ್ನೂ ಮುಸ್ಲಿಂ ಧರ್ಮವನ್ನು ನಿಂದಿಸಿ ಕೊಲೆ ಬೆದರಿಕೆ ಹಾಕಿದ ಯಶೋಧರ ಕರ್ಬೆಟ್ಟು ಎಂಬಾತನ ಮೇಲೆ…
ದೆಹಲಿಯ ನೂತನ ಮುಖ್ಯ ಮಂತ್ರಿ ಆಗಿ ಅತಿಶಿ ಆಯ್ಕೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ದೆಹಲಿಯ ಕಲ್ಕಾಜಿ ಕ್ಷೇತ್ರದ ಶಾಸಕಿ ಅತಿಥಿ ಅತಿಶಿ ದೆಹಲಿಯ ನೂತನ ಸಿಎಂ ಆಗಿ ಆಯ್ಕೆಗೊಂಡಿದ್ದು, ಸಿಎಂ ಕೇಜ್ರಿವಾಲ್ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಆಪ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಅತಿಶಿ ಅವರನ್ನು ಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಅತಿಶಿ ಮರ್ಲೆನಾ ಸಿಂಗ್ ಭಾರತೀಯ ರಾಜಕಾರಣಿ , ರಾಜಕೀಯ ಕಾರ್ಯಕರ್ತೆ ಮತ್ತು ದೆಹಲಿಯ ಕಲ್ಕಾಜಿಯಿಂದ ಶಾಸಕರಾಗಿದ್ದಾರೆ . ಅವರು ಆಮ್ ಆದ್ಮಿ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯ ಸದಸ್ಯರಾಗಿದ್ದಾರೆ ಮತ್ತು ಪ್ರಸ್ತುತ ದೆಹಲಿ ಸರ್ಕಾರದಲ್ಲಿ ಶಿಕ್ಷಣ , PWD, ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ . ಅವರು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಪ್ರಾಥಮಿಕವಾಗಿ ಶಿಕ್ಷಣದ ಸಲಹೆಗಾರರಾಗಿ ಜುಲೈ 2015 ರಿಂದ 17 ಏಪ್ರಿಲ್ 2018 ರವರೆಗೆ ಸೇವೆ ಸಲ್ಲಿಸಿದರು.
ಉಡುಪಿ ಪೊಲೀಸ್ ವೈರ್‌ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ನಿತ್ಯಾನಂದ ಶೆಟ್ಟಿ ಅವರಿಗೆ 52 ವರ್ಷ.ಕಳೆದ ನಾಲ್ಕು ವರ್ಷಗಳಿಂದ ಉಡುಪಿ ಜಿಲ್ಲಾ ಪೊಲೀಸ್‌ನ ವೈರ್‌ಲೆಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಈ ಹಿಂದೆ ಅವರು ಮಲ್ಪೆಯ ಕರಾವಳಿ ಭದ್ರತಾ ಪೊಲೀಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ನಿತ್ಯಾನಂದ ಶೆಟ್ಟಿ ರಾತ್ರಿ ಪಾಳಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದು, ಪಾಳಿ ಮುಗಿಸಿ ಮನೆಗೆ ಮರಳಿದ್ದರು.
ಮಂಗಳೂರು: ಸುರತ್ಕಲ್‌ನ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯೊಬ್ಬ ಸುರತ್ಕಲ್‌ನ ಪ್ರಗತಿನಗರದಲ್ಲಿರುವ ತನ್ನ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಅವರ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮೃತ ಯುವಕನನ್ನು ಚಿಕ್ಕಬಳ್ಳಾಪುರ ಮೂಲದ ಮೋಹನ್ ಕುಮಾರ್ ಮೇಟಿ (22) ಎಂದು ಗುರುತಿಸಲಾಗಿದೆ. ಸೆ. 12ರಂದು ಮೋಹನ್ ಕುಮಾರ್ ಮೇಟಿ ಅವರ ತಾಯಿ ಆತನಿಗೆ ಕರೆ ಮಾಡಿದ್ದರು. ಮೋಹನ್ ಅವರನ್ನು ಸಂಪರ್ಕಿಸಲು ಹಲವು ಬಾರಿ ಪ್ರಯತ್ನಿಸಿದರೂ ಮೋಹನ್ ಕರೆ ಸ್ವೀಕರಿಸದ ಕಾರಣ, ಅವರ ತಾಯಿ ಗಾಬರಿಗೊಂಡು, ಆತ ವಾಸಿಸುತ್ತಿದ್ದ ನಿವಾಸವನ್ನು ಪರಿಶೀಲಿಸಲು ಮನೆಯ ಮಾಲೀಕರ ಬಳಿ ಕೇಳಿಕೊಂಡಿದ್ದಾರೆ. ಅದರಂತೆ ಮನೆ ಮಾಲೀಕರು ಬಾಡಿಗೆ ಮನೆ ಬಳಿ ಹೋಗಿ ನೋಡಿದಾಗ ಮೋಹನ್ ಕೋಣೆಯಲ್ಲಿ ನೇಣು ಬಿಗಿದುಕೊಂಡಿದ್ದು, ದೇಹ ಬಹುತೇಕ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ. ಮೃತ ಯುವಕನ ಪೋಷಕರು ಸೆ. 16ರಂದು ನಗರಕ್ಕೆ ಆಗಮಿಸಿ ಅಂತಿಮ ವಿಧಿವಿಧಾನಕ್ಕಾಗಿ ಅವರ ಪಾರ್ಥೀವ ಶರೀರವನ್ನು ಸ್ವಗ್ರಾಮಕ್ಕೆ ಕೊಂಡೊಯ್ದಿದ್ದಾರೆ. ಈ ಘಟನೆ ಬಗ್ಗೆ ಸುರತ್ಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.