ಮಂಗಳೂರು : ಕಳೆದೆರಡು ದಿನಗಳಿಂದ ಕರಾವಳಿಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಯ ಆರ್ಭಟಕ್ಕೆ ತಾಲೂಕಿನ ಕೆರೆಬೈಲ್ ಗುಡ್ಡೆ ಪ್ರದೇಶದಲ್ಲಿ ಬುಧವಾರ (ಜುಲೈ 01) ಭೀಕರ ಅವಘಡವೊಂದು ಸಂಭವಿಸಿದೆ. ಗುಡ್ಡದ ತುತ್ತ ತುದಿಯಲ್ಲಿದ್ದ ಖಾಸಗಿ ಗೆಸ್ಟ್ ಹೌಸ್‌ನ ಬೃಹತ್ ಆವರಣ ಗೋಡೆ (ಕಾಂಪೌಂಡ್ ವಾಲ್) ತಳಭಾಗದಲ್ಲಿದ್ದ ವಾಸದ ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ಮನೆ ಸಂಪೂರ್ಣವಾಗಿ ಧ್ವಂಸಗೊಂಡಿದೆ. ಆದರೆ, ಮನೆಯಲ್ಲಿದ್ದ ಕುಟುಂಬಸ್ಥರು ವಾರದ ಹಿಂದಷ್ಟೇ ಸುರಕ್ಷಿತ ಸ್ಥಳಕ್ಕೆ ವಲಸೆ ಹೋಗಿದ್ದರಿಂದ ದೊಡ್ಡದೊಂದು ದುರಂತ ತಪ್ಪಿದೆ ಇಲ್ಲಿನ ನಿವಾಸಿ ಕಿಶೋರ್ ಅವರಿಗೆ ಸೇರಿದ ಮನೆ ಸಂಪೂರ್ಣವಾಗಿ ಹಾನಿಗೀಡಾದ ಕಟ್ಟಡವಾಗಿದೆ. ಕೆರೆಬೈಲು ಗುಡ್ಡೆ ಪ್ರದೇಶದಲ್ಲಿ ಸುಮಾರು 40ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದು, ಗುಡ್ಡದ ತುದಿಯಲ್ಲಿ ಮಂಗಳೂರು ಮೂಲದ ಪ್ರತಿಷ್ಠಿತ ಸಂಸ್ಥೆಯೊಂದಕ್ಕೆ ಸೇರಿದ ಗೆಸ್ಟ್ ಹೌಸ್ ಇದೆ. ಇದರ ಅವೈಜ್ಞಾನಿಕ ಆವರಣ ಗೋಡೆಯೇ ಇಂದಿನ ದುರಂತಕ್ಕೆ ಕಾರಣ ಎನ್ನಲಾಗಿದೆ
Author: main-admin
ನ್ಯಾಯಾಲಯಗಳಿಗೆ ಪದೇಪದೇ ನಕಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬರುತ್ತಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಕಾರ್ಯಕ್ಕೆ ಯಾವುದೇ ಅಡ್ಡಿ ಉಂಟಾಗದಂತೆ ಹೊಸ ಭದ್ರತಾ ಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ. ಇನ್ನು ಮುಂದೆ ಪ್ರತಿದಿನ ಬೆಳಿಗ್ಗೆ ನ್ಯಾಯಾಲಯ ಆರಂಭವಾಗುವ ಮೊದಲು ನ್ಯಾಯಾಲಯದ ಆವರಣ ಹಾಗೂ ಕಟ್ಟಡವನ್ನು ಪೊಲೀಸರು ಸಂಪೂರ್ಣವಾಗಿ ಪರಿಶೀಲಿಸಲಿದ್ದಾರೆ. ಯಾವುದೇ ಅನುಮಾನಾಸ್ಪದ ವಸ್ತುಗಳು ಅಥವಾ ಸಾಮಗ್ರಿಗಳು ಇಲ್ಲ ಎಂಬುದನ್ನು ಖಚಿತಪಡಿಸಿಕೊಂಡ ಬಳಿಕವೇ ನ್ಯಾಯಾಲಯದ ಕಾರ್ಯಾರಂಭಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಹೇಳಿದರು. ಈ ಕ್ರಮದಿಂದ ಭವಿಷ್ಯದಲ್ಲಿ ನಕಲಿ ಬೆದರಿಕೆ ಇ-ಮೇಲ್‌ಗಳು ಬಂದರೂ ನ್ಯಾಯಾಲಯದ ಕಲಾಪ ಹಾಗೂ ದೈನಂದಿನ ಆಡಳಿತಾತ್ಮಕ ಕಾರ್ಯಚಟುವಟಿಕೆಗಳಿಗೆ ಯಾವುದೇ ಅಡ್ಡಿಯಾಗದಂತೆ ನೋಡಿಕೊಳ್ಳಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರೊಂದಿಗೆ ನಡೆದ ಚರ್ಚೆಯ ಆಧಾರದ ಮೇಲೆ, ಲಭ್ಯವಿರುವ ಸಿಬ್ಬಂದಿ ಹಾಗೂ ಸಂಪನ್ಮೂಲಗಳನ್ನು ಪರಿಗಣಿಸಿ ತಾತ್ಕಾಲಿಕವಾಗಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಅಗತ್ಯವಿರುವ ಸ್ಥಳಗಳಲ್ಲಿ ಡೋರ್ ಫ್ರೇಮ್ ಮೆಟಲ್ ಡಿಟೆಕ್ಟರ್‌ಗಳನ್ನು ಅಳವಡಿಸಿ ನ್ಯಾಯಾಲಯಗಳ…
ಮಂಗಳೂರು: ಬೈಕಂಪಾಡಿ ಬಳಿ ಸೋಮವಾರ ಬೆಳಗಿನ ಜಾವ ನಡೆದ ಆಭರಣ ವ್ಯಾಪಾರಿಯ ದರೋಡೆ ಪ್ರಕರಣದ ತನಿಖೆ ಹೊಸ ತಿರುವು ಪಡೆದುಕೊಂಡಿದ್ದು, ಕದ್ದ ಕಾರನ್ನು ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಜನಪದವಿನಲ್ಲಿ ಪತ್ತೆಯಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಆರೋಪಿಗಳು ವಾಹನವನ್ನು ಬಿಟ್ಟು ಪರಾರಿಯಾಗಿದ್ದಾರೆ. ದರೋಡೆಕೋರರು ಕಾರಿನ ಸೀಟ್ ಕವರ್‌ಗಳನ್ನು ಹರಿದು ವಾಹನವನ್ನು ಸಂಪೂರ್ಣವಾಗಿ ಪರಿಶೀಲಿಸಿದ್ದಾರೆ ಎಂದು ಪೊಲೀಸರು ಕಂಡುಬಂದಿದೆ. ಸೀಟುಗಳ ಒಳಗೆ ಬೆಲೆಬಾಳುವ ವಸ್ತುಗಳು ಅಥವಾ ಚಿನ್ನವನ್ನು ಬಚ್ಚಿಟ್ಟಿರಬಹುದು ಎಂಬ ಶಂಕೆಯಿಂದ ಸಿಟುಗಲನ್ನು ಹರಿದು ಹಾಕಿದ್ದಾರೆ ಎಂದು ಪೋಲೀಸರು ಶಂಕಿಸಿದ್ದಾರೆ. ವ್ಯಾಪಾರಿ ಕದ್ದ ಕಾರು ಪತ್ತೆಯಾಗಿದ್ದರೂ, ದರೋಡೆಕೋರರು ಕದ್ದ ಮೊಬೈಲ್ ಫೋನ್ ಇನ್ನೂ ಪತ್ತೆಯಾಗಿಲ್ಲ. ಫೋನ್ ಸ್ವಿಚ್ ಆಫ್ ಆಗಿರುವುದರಿಂದ, ಆರೋಪಿಗಳು ಅದನ್ನು ನಾಶಪಡಿಸಿರಬಹುದು ಅಥವಾ ಎಸೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮೊಬೈಲ್ ಟವರ್ ಡಂಪ್ ಆಧರಿಸಿ ಸ್ಥಳವನ್ನು ಪತ್ತೆಹಚ್ಚುವ ಪ್ರಯತ್ನಗಳು ನಡೆಯುತ್ತಿವೆ. ದರೋಡೆಕೋರರು ಬಳಸಿದ ಮೂರು ಕಾರುಗಳು ಅಪರಾಧದ ಮೊದಲು ಮತ್ತು ನಂತರ ಒಂದೇ ಮಾರ್ಗದಲ್ಲಿ ಪ್ರಯಾಣಿಸಿರಬಹುದು ಎಂದು…
ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭೀಕರ ದುರಂತವೊಂದು ಸಂಭವಿಸಿದ್ದು. ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗುರಿ ಬಳಿಯ ಗರೋಡಿಯಲ್ಲಿ ತಡೆಗೋಡೆಯೊಂದು ಮನೆಗಳ ಮೇಲೆ ಕುಸಿದು ಬಿದ್ದಿದೆ. ಈ ಘಟನೆಯಲ್ಲಿ ಹೆಂಚಿನ ಛಾವಣಿಯ ಮನೆಗಳು ಕುಸಿದು ಬಿದ್ದು. ಮಹಿಳೆಯೊಬ್ಬರು ಹಾಗೂ ಇಬ್ಬರು ಬಾಲಕಿಯರು ಮೃತಪಟ್ಟಿದ್ದಾರೆ ಬುಧವಾರ ಮುಂಜಾನೆ ಸುಮಾರು 4:45 ರಿಂದ 5:00 ಗಂಟೆಯ ಅವಧಿಯಲ್ಲಿ ಗರೋಡಿಯ ‘ಮರಿಯಲ್ ಹೌಸ್” ಎಂಬಲ್ಲಿ ಈ ಘಟನೆ ನಡೆದಿದೆ. ಅವಶೇಷಗಳಡಿ ಸಿಲುಕಿದ್ದ ಆರು ಮಂದಿ ದುರಂತ ಸಂಭವಿಸಿದ ಜಾಗದಲ್ಲಿ ತಡೆಗೋಡೆಯ ಕೆಳಭಾಗದಲ್ಲಿದ್ದ ಬಾಡಿಗೆ ಮನೆಗಳಲ್ಲಿ ಒಟ್ಟು ನಾಲ್ಕು ಕುಟುಂಬಗಳು ವಾಸವಾಗಿದ್ದವು. ತಡೆಗೋಡೆ ಕುಸಿದ ರಭಸಕ್ಕೆ ನಾಲ್ಕೂ ಮನೆಗಳ ಹಿಂಭಾಗದ ಗೋಡೆಗಳು ಕುಸಿದು ಬಿದ್ದಿದ್ದು, ಈ ಪೈಕಿ ಎರಡು ಕುಟುಂಬಗಳಿಗೆ ತೀವ್ರ ಹಾನಿಯಾಗಿದೆ. ಮನೆಗಳು ಕುಸಿದ ಸಂದರ್ಭದಲ್ಲಿ ಒಟ್ಟು ಆರು ಮಂದಿ ಅವಶೇಷಗಳಡಿ ಸಿಲುಕಿಕೊಂಡಿದ್ದರು. ಘಟನೆ ನಡೆದ ತಕ್ಷಣವೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದ್ದು, ಒಬ್ಬ ಪುರುಷ ಹಾಗೂ ಇಬ್ಬರು ಬಾಲಕಿಯರನ್ನು ಸುರಕ್ಷಿತವಾಗಿ ಹೊರತೆಗೆದು ಚಿಕಿತ್ಸೆಗಾಗಿ ಫಾದರ್…
ಬೆಂಗಳೂರು: ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು (DP&AR) ಮಂಗಳವಾರ (ಜೂನ್ 30) ಮಹತ್ವದ ಆದೇಶ ಹೊರಡಿಸಿದ್ದು, ಹುದ್ದೆಯ ನಿರೀಕ್ಷೆಯಲ್ಲಿದ್ದ ನಾಲ್ವರು ಹಿರಿಯ ಐಎಎಸ್ (IAS) ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿವಿಧ ಇಲಾಖೆಗಳಿಗೆ ನಿಯೋಜಿಸಿ ಆದೇಶಿಸಿದೆ. ವಿಧಾನಸೌಧದಲ್ಲಿ ಹೊರಡಿಸಲಾದ ಈ ಅಧಿಕೃತ ಅಧಿಸೂಚನೆಯ ಸಂಪೂರ್ಣ ವಿವರಗಳು ಇಲ್ಲಿವೆ: ಅಭಿರಾಮ್ ಜಿ. ಶಂಕರ್ ಬಿಎಂಇಆರ್‌ಸಿ ಎಂಡಿಯಾಗಿ ನೇಮಕ ಹುದ್ದೆಯ ನಿರೀಕ್ಷೆಯಲ್ಲಿದ್ದ 2011ರ ಬ್ಯಾಚ್‌ನ ಐಎಎಸ್ ಅಧಿಕಾರಿ ಅಭಿರಾಮ್ ಜಿ. ಶಂಕರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ‘ಕರ್ನಾಟಕ ಮೈನಿಂಗ್ ಎನ್ವಿರಾನ್‌ಮೆಂಟ್ ರಿಸ್ಟೋರೇಶನ್ ಕಾರ್ಪೊರೇಷನ್’ (KMERC) ವ್ಯವಸ್ಥಾಪಕ ನಿರ್ದೇಶಕರನ್ನಾಗಿ (MD) ನೇಮಿಸಲಾಗಿದೆ. ಜೂನ್ 30 ರಂದು ವಯೋನಿವೃತ್ತಿ ಹೊಂದುತ್ತಿರುವ ಐಎಫ್‌ಎಸ್ ಅಧಿಕಾರಿ ಡಾ. ಸಂಜಯ್ ಎಸ್. ಬಿಜ್ಜೂರ್ ಅವರ ಜಾಗಕ್ಕೆ ಅಭಿರಾಮ್ ಅವರನ್ನು ನಿಯೋಜಿಸಲಾಗಿದೆ. ಕೆಲೋನಿಕ್ಸ್‌ನ ಹೆಚ್ಚುವರಿ ಜವಾಬ್ದಾರಿ ಹೊತ್ತ ಡಾ. ಅವಿನಾಶ್ ಮೆನನ್ ರಾಜೇಂದ್ರನ್ 2013ರ ಬ್ಯಾಚ್‌ನ ಐಎಎಸ್ ಅಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರನ್ನು ಬೆಂಗಳೂರಿನ…
ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಸಿನಿಮೀಯ ಮಾದರಿಯಲ್ಲಿ ಕಾರು ಸಹಿತ ಚಿನ್ನಾಭರಣ ದೋಚಿದ ಘಟನೆ ಸೋಮವಾರ(ಜೂ.29) ಬೆಳಗ್ಗಿನ ಜಾವ 2:15ರ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ 66ರ ಬೈಕಂಪಾಡಿಯಲ್ಲಿ ನಡೆದಿದೆ. ಮೂಲತಃ ಮಹಾರಾಷ್ಟ್ರ ನಿವಾಸಿ ಕಳೆದ 12 ವರ್ಷಗಳಿಂದ ಕೇರಳದ ಪಯ್ಯನ್ನೂರಿನಲ್ಲಿ ವಾಸವಿರುವ ವಿಕಾಸ್ ಸುಬ್ಬರಾವ್ ಧನವಾಡೆ(44), ಅವರ ಪತ್ನಿ ರೂಪಾಲಿ(38), ಪುತ್ರ ವಿಫುಲ್ (14) ಕಾರಿನಲ್ಲಿದ್ದು, ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಕೇರಳದ ಪಯ್ಯನ್ನೂರಿಗೆ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಬೆಳಗ್ಗಿನ ಜಾವ 2:15ರ ಸುಮಾರಿಗೆ ಇವರು ಸಂಚರಿಸುತ್ತಿದ್ದ ಕಾರು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66ರ ಬೈಕಂಪಾಡಿ ದ್ವಾರಾ ಹೋಟೆಲ್ ಮುಂಭಾಗ ತಲುಪಿದಾಗ ಮೂರು ಕಾರುಗಳು ಅವ ರನ್ನು ಅಡ್ಡಗಟ್ಟಿವೆ. ಆ ಕಾರುಗಳಲ್ಲಿದ್ದ ಸುಮಾರು ಏಳು ಮಂದಿ ಮುಸುಕುಧಾರಿಗಳು ಮಾರಕಾಯುಧ ಗಳೊಂದಿಗೆ ಆಗಮಿಸಿ ವಿಕಾಸ್‌ರಿಗೆ ಹಲ್ಲೆ ನಡೆಸಿದ್ದಾರೆ. ಬಳಿಕ ಅವರನ್ನು ಕಾರಿನಿಂದ ಎಳೆದು ಹೊರಗೆ ಹಾಕಿ ಅವರ ಪತ್ನಿ ಮತ್ತು…
ಕಾರ್ಕಳ: ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಕಾರ್ಕಳ ನಗರ ಪೊಲೀಸರು ವಶಕ್ಕೆ ಪಡೆದು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಜೂನ್ 29ರಂದು ಬೆಳಿಗ್ಗೆ ಸುಮಾರು 9:30ಕ್ಕೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಬಾರಾಡಿ ಕ್ರಾಸ್ ಬಳಿ ಚೆಕ್‌ಪೋಸ್ಟ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ್ಟೇಬಲ್ ನಾಗರಾಜ ಅವರು ಮೂಡಬಿದ್ರಿ ಕಡೆಯಿಂದ ಕಾರ್ಕಳದತ್ತ ಬರುತ್ತಿದ್ದ KA-19-AD-8314 ಸಂಖ್ಯೆಯ ಲಾರಿಯನ್ನು ತಪಾಸಣೆ ನಡೆಸಿದರು. ಪರಿಶೀಲನೆ ವೇಳೆ ಲಾರಿಯಲ್ಲಿ ಸುಮಾರು 300 ಕೆಂಪು ಕಲ್ಲುಗಳು ತುಂಬಿರುವುದು ಕಂಡುಬಂದಿದೆ. ಈ ಕುರಿತು ಚಾಲಕ ಅಭಿಲಾಶ್ ಶೆಟ್ಟಿಯನ್ನು ವಿಚಾರಿಸಿದಾಗ, ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರಿ ತಾಲೂಕಿನ ಕೊಡ್ಯಡ್ಕ ಪ್ರದೇಶದ ಸರ್ಕಾರಿ ಸ್ಥಳವೊಂದರಿಂದ ಕಳವು ಮಾಡಿ ತೆಗೆದಿದ್ದ ಕೆಂಪು ಕಲ್ಲುಗಳನ್ನು ಯಾವುದೇ ಪರವಾನಗಿ ಇಲ್ಲದೆ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಲಂ 303(2) ಹಾಗೂ ಐಎಂವಿ ಕಾಯ್ದೆಯ ಕಲಂ 66 ಮತ್ತು…
ಉಡುಪಿ: ಒತ್ತಾಯಪೂರ್ವಕವಾಗಿ ಮನೆಯನ್ನು ತನ್ನ ಹೆಸರಿಗೆ ಮಾಡಿಕೊಂಡ ಮಗ, ತಂದೆ-ತಾಯಿಯನ್ನು ಮನೆಯಿಂದ ಹೊರಹಾಕಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಡಾನಿಡಿಯೂರು ಗ್ರಾಮದ ಸರಸು ಸುವರ್ಣ(69) ಎಂಬವರು ತನ್ನ ಎರಡನೇ ಮಗ ವಿನೋದ ಸುವರ್ಣ ಜೊತೆ ವಾಸವಾಗಿದ್ದು, ಮನೆ ಸರಸು ಸುವರ್ಣ ಅವರ ಹೆಸರಿನಲ್ಲಿತ್ತು. ಈ ಮನೆಯನ್ನು ವಿನೋದ ಸುವರ್ಣ ತನ್ನ ಹೆಸರಿಗೆ ಮಾಡಿಕೊಡಿ ಎಂದು ಹೇಳಿದಾಗ ಸರಸು ಸುವರ್ಣ ಮಾಡಿಕೊಡುವುದಿಲ್ಲ ಎಂದು ಹೇಳಿದ್ದು, ಅದಕ್ಕೆ ಸರಸು ಸುವರ್ಣ ಮತ್ತು ಅವರ ಗಂಡನಿಗೂ ವಿನೋದ್ ಸುವರ್ಣ ಕೈಯಿಂದ ಹೊಡೆದು ಹಲ್ಲೆ ಮಾಡಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದನು.ನಂತರ ಒತ್ತಾಯಪೂರ್ವಕವಾಗಿ ರಿಜಿಸ್ಟರ್ ಕಚೇರಿಗೆ ಕರೆದುಕೊಂಡು ಹೋಗಿ ಸರಸು ಸುವರ್ಣರ ಹೆಸರಿನಲ್ಲಿದ್ದ 11 ಸೆಂಟ್ಸ್ ಜಾಗ ಮತ್ತು ಮನೆಯನ್ನು ವಿನೋದ ಸುವರ್ಣ ತನ್ನ ಹೆಸರಿಗೆ ಮಾಡಿಕೊಂಡಿದ್ದು ನಂತರ ಈ ವಿಷಯ ವನ್ನು ಯಾರಿಗೂ ಹೇಳಿಬಾರದಾಗಿ ಬೆದರಿಕೆ ಹಾಕಿದ್ದನು. ಈ ವಿಚಾರವಾಗಿ ಸರಸು ಸುವರ್ಣ ಕುಂದಾಪುರ ಉಪ ವಿಭಾಗಾಧಿಕಾರಿಗಳ ಕೋರ್ಟ್‌ನಲ್ಲಿ ಕೇಸು ದಾಖಲಿಸಿದ್ದು, ಈ ವಿಚಾರ…
ಚಿಕ್ಕಬಳ್ಳಾಪುರ: ಜಿಲ್ಲೆಯ ಪ್ರಸಿದ್ಧ ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯ ಮುದ್ದೇನಹಳ್ಳಿ ಬಳಿಯ ಹೋಂ ಸ್ಟೇ ಒಂದರಲ್ಲಿ ಬೆಂಗಳೂರು ಮೂಲದ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮತ್ತೊಂದೆಡೆ ಆಕೆಯ ಪ್ರಿಯಕರ ಎನ್ನಲಾದ ಕೇರಳ ಮೂಲದ ಯುವಕ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪ್ರಕರಣ ತೀವ್ರ ನಿಗೂಢತೆ ಹಾಗೂ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಹೋಂ ಸ್ಟೇನಲ್ಲಿ ದಾರುಣ ಅಂತ್ಯ ಬೆಂಗಳೂರು ನಿವಾಸಿಯಾದ ಸಾಯಿ ಸುರಭಿ (Sai Surabhi) ಮೃತಪಟ್ಟ ದುರ್ದೈವಿ. ಈಕೆಯೊಂದಿಗೆ ಹೋಂ ಸ್ಟೇಗೆ ಬಂದಿದ್ದ ಕೇರಳದ ಕೋಝಿಕ್ಕೋಡ್ ಮೂಲದ ಕ್ಯಾಬ್ ಚಾಲಕ ಸಂಜೀತ್ ಅಲಿ ತೀವ್ರ ಅಸ್ವಸ್ಥಗೊಂಡು ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಶನಿವಾರದಂದು ಮುದ್ದೇನಹಳ್ಳಿ ಸಮೀಪದ ಹೋಂ ಸ್ಟೇಗೆ ಬಂದು ಇವರಿಬ್ಬರು ತಂಗಿದ್ದರು. ಸೋಮವಾರದಂದು ರೂಮ್ ಖಾಲಿ ಮಾಡುವ (ಚೆಕ್-ಔಟ್) ಸಮಯ ಕಳೆದರೂ ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ ಅನುಮಾನಗೊಂಡ ಹೋಂ ಸ್ಟೇ ಸಿಬ್ಬಂದಿ ಒಳಗೆ ಹೋಗಿ ನೋಡಿದಾಗ ಈ ಘಟನೆ ಬೆಳಕಿಗೆ…
ಸಿಸಿಬಿ (CCB) ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 21 ಕೋಟಿ ರೂಪಾಯಿ ಮೌಲ್ಯದ ಭಾರಿ ಪ್ರಮಾಣದ ಡ್ರಗ್ಸ್ ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ನಗರದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬೈಲಕೊನೆಹಳ್ಳಿಯಲ್ಲಿ ಈ ದಾಳಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರರಾಷ್ಟ್ರೀಯ ಮಟ್ಟದ ಮೂವರು ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್‌ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 21 ಕೋಟಿ ರೂ. ಮೌಲ್ಯದ 10 ಕೆಜಿ 270 ಗ್ರಾಂ ತೂಕದ ಎಂಡಿಎಂಎ (MDMA) ಕ್ರಿಸ್ಟಲ್ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಈ ಡ್ರಗ್ಸ್ ಅನ್ನು ಎಲ್ಲಿಂದ ತಂದಿದ್ದರು ಮತ್ತು ಬೆಂಗಳೂರಿನಲ್ಲಿ ಯಾರಿಗೆಲ್ಲ ಮಾರಾಟ ಮಾಡಲು ಸಂಚು ರೂಪಿಸಿದ್ದರು ಎಂಬ ಬಗ್ಗೆ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.










