Author: main-admin

ಮಂಗಳೂರು: ಮದುವೆಗೆ ಹೋಗಿ ಹಿಂದಿರುಗುತ್ತಿದ್ದ ಕೇರಳ ಮೂಲಕ ಉದ್ಯಮಿಯೊಬ್ಬರ ಕಾರಿಗೆ ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದೋಚಿದ ಘಟನೆ ಬೆಳಗ್ಗಿನ ಜಾವ ಬೈಕಂಪಾಡಿ ದ್ವಾರ ಹೊಟೆಲ್ ಬಳಿ ನಡೆದಿದೆ. ಕೇರಳದ ಪಯ್ಯನ್ನೂರು ನಿವಾಸಿ ವಿಕಾಸ್ ತನ್ನ ಪತ್ನಿ ಮತ್ತು ಮಗನೊಂದಿಗೆ ಮುಂಬೈಯ ತನ್ನ ಸ್ನೇಹಿತರೊಬ್ಬರ ಮದುವೆ ಹೋಗಿ ಹಿಂದಿರುಗುತ್ತಿದ್ದರು. ಬೆಳಗ್ಗಿನ ಜಾವ 2:30 ಸುಮಾರಿಗೆ ಉದ್ಯಮಿಯ ಕಾರು ರಾಷ್ಟ್ರೀಯ ಹೆದ್ದಾರಿ 66ರ ಬೈಕಂಪಾಡಿ ದ್ವಾರ ಹೋಟೆಲ್ ಬಳಿ ತಲುಪುತ್ತಿದ್ದಂತೆ ಎರಡು ಇನ್ನೋವಾ ಮತ್ತು ಒಂದು ಸ್ವಿಫ್ಟ್ ಕಾರಿನಲ್ಲಿ ಬಂದ ಸುಮಾರು 7-8 ಮಂದಿ ದರೋಡೆಕೋರರು ವಿಕಾಸ್ ಅವರನ್ನು ಕಾರಿನಿಂದ ಇಳಿಸಿ ಪತ್ನಿ ಮತ್ತು ಮಗು ಸಹಿತ ಕಾರನ್ನು ಅಪಹರಿಸಿದ್ದರು. ಬಳಿಕ ಪಣಂಬೂರು ಬೀಚ್ ರಸ್ತೆ ಬಳಿ ಉದ್ಯಮಿ ವಿಕಾಸ್ ಅವರ ಪತ್ನಿ ಮತ್ತು ಮಗನ ಬಳಿಯಿದ್ದ ಚಿನ್ನಾಭರಣ, ಬೆಲೆಬಾಳುವ ವಸ್ತುಗಳು ಹಾಗೂ ಕಾರನ್ನು ದೋಚಿ ಸಂತ್ರಸ್ತರನ್ನು ರಸ್ತೆಯಲ್ಲೆ ಬಿಟ್ಟು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸಂಬಂಧ ಉದ್ಯಮಿ ವಿಕಾಸ್ ಅವರು…

Read More

ಕುಂಬಳೆ: ಕುಂಬಳೆ ಸಮೀಪದ ಬಂಬ್ರಾಣದ ಖಾಸಗಿ ಶಾಲೆಯ ಆವರಣದಲ್ಲಿ ಗಾಂಜಾ ಗಿಡವೊಂದು ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.ಶಾಲೆಯ ಮೈದಾನದಲ್ಲಿ ಆಟವಾಡಲು ಬಂದಿದ್ದ ಸ್ಥಳೀಯ ಕೆಲ ಯುವಕರು ಅನುಮಾನಾಸ್ಪದ ಗಿಡವನ್ನು ಗಮನಿಸಿ ಅಬಕಾರಿ ಇಲಾಖೆಗೆ ಮಾಹಿತಿ ನೀಡಿದರು. ಮಾಹಿತಿ ಪಡೆದ ಅಬಕಾರಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದಾಗ ಸುಮಾರು 50 ಸೆ.ಮೀ. ಎತ್ತರದ ಗಾಂಜಾ ಗಿಡ ಪತ್ತೆಯಾಗಿದೆ. ಅಧಿಕಾರಿಗಳು ಗಿಡವನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಗಿಡವು ಸ್ವಯಂ ಬೆಳೆದಿದೆಯೇ ಅಥವಾ ಯಾರಾದರೂ ಉದ್ದೇಶಪೂರ್ವಕವಾಗಿ ನೆಟ್ಟಿದ್ದಾರೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.ಅಬಕಾರಿ ಇಲಾಖೆ ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆಯ ಕುರಿತು ಹೆಚ್ಚಿನ ಮಾಹಿತಿ ತನಿಖೆಯ ಬಳಿಕವೇ ತಿಳಿದುಬರಲಿದೆ

Read More

ಬೆಂಗಳೂರು: ರಾಮಂದಿರದ ದೇಣಿಗೆಯಲ್ಲಿ ಕೋಟಿ ಕೋಟಿ ಲೂಟಿ ಕೇಸ್​ನ ತನಿಖೆ ಚುರುಕುಗೊಂಡಿದೆ. ಎಸ್​ಐಟಿ (SIT) ಅಧಿಕಾರಿಗಳು ಎರಡು ಹಂತಗಳಲ್ಲಿ ಇಡೀ ಘಟನೆಯ ಬಗ್ಗೆ ಕೂಲಂಕಷ ತನಿಖೆ ಮುಂದುವರಿಸಿದ್ದಾರೆ. ಎಸ್​ಐಟಿ ಪ್ರಾಥಮಿಕ ವರದಿಯ ಇನ್​ಸೈಡ್ ಮಾಹಿತಿ ಟಿವಿ9ಗೆ ಲಭ್ಯವಾಗಿದೆ. ಭದ್ರತಾ ವ್ಯವಸ್ಥೆಯಲ್ಲಿ ಗಂಭೀರ ದೋಷಗಳಿರುವ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಎಸ್​​ಐಟಿ ವರದಿಯಲ್ಲಿ ಸ್ಫೋಟಕ ಅಂಶ ಬೆಳಕಿಗೆ ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣದ ತನಿಖೆ ಮತ್ತಷ್ಟು ತೀವ್ರಗೊಂಡಿದೆ. ಎಸ್​​ಐಟಿ ವರದಿಯಲ್ಲಿ ಭದ್ರತಾ ವ್ಯವಸ್ಥೆ ಬಗ್ಗೆ ಗಂಭೀರ ಆರೋಪ ಮಾಡಲಾಗಿದೆ. ನಿಯಂತ್ರಣ ಕೊಠಡಿಯ ಉಸ್ತುವಾರಿ ಸೇರಿದಂತೆ 40 ಜನರು ತಪ್ಪಿತಸ್ಥರೆಂದು ಎಸ್‌ಐಟಿ ತನಿಖೆಯಲ್ಲಿ ಕಂಡುಬಂದಿದೆ. ನಿಯಂತ್ರಣ ಕೊಠಡಿಯ ಉಸ್ತುವಾರಿ, ನಿಯಂತ್ರಣ ಕೊಠಡಿಯೊಳಗೆ ನಿಯೋಜಿಸಲಾದ ಸಿಬ್ಬಂದಿ, ಎಣಿಕೆ ಕೊಠಡಿಯ ಹೊರಗೆ ನಿಯೋಜಿಸಲಾದ ಖಾಸಗಿ ಭದ್ರತಾ ಸಿಬ್ಬಂದಿ, ಪೊಲೀಸ್ ಮತ್ತು ಪಿಎಸಿ ಸಿಬ್ಬಂದಿ ಸೇರಿದ್ದಾರೆ. ಜವಾಬ್ದಾರಿಗಳನ್ನು ಸ್ಪಷ್ಟವಾಗಿ ವ್ಯಾಖ್ಯಾನಿಸಲಾಗಿದೆ. ಸಿಸಿಟಿವಿ ಮತ್ತು ಭದ್ರತಾ ವ್ಯವಸ್ಥೆಯಲ್ಲಿ ಬಹು ಹಂತಗಳಲ್ಲಿ ಭದ್ರತಾ ವ್ಯವಸ್ಥೆಯಲ್ಲಿ ಲೋಪವಾದ ಹಿನ್ನೆಲೆ ಭಾರೀ ಅಕ್ರಮ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಸದ್ಯ ಪ್ರತಿಯೊಬ್ಬ…

Read More

ಚಿಕ್ಕಬಳ್ಳಾಪುರ: ನಗರದಲ್ಲಿ ಶನಿವಾರ (ಜೂ.27) ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಮಹೋತ್ಸವದ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ನಡೆದ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇಂದು ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ನಿನ್ನೆ ನಡೆದ ಈ ಆಘಾತಕಾರಿ ಘಟನೆಯನ್ನು ಬೆನ್ನಟ್ಟಿ ಇಡೀ ರಾತ್ರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ಸದ್ಯ ನಾಲ್ವರನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ನಗರ ಠಾಣೆಯ ಪಿಎಸ್‌ಐ ಅಮರ್ ಅವರು ಸ್ವಯಂಪ್ರೇರಿತ (Suo Moto) ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಶಾಸಕರ ಮೇಲೆ ಚಪ್ಪಲಿ ಎಸೆದು, ಅವಾಚ್ಯ ಪದಗಳಿಂದ ನಿಂದಿಸಿ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಕೇಸ್ ದಾಖಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರಾದ ಅಖಿಲ್ ರೆಡ್ಡಿ, ಪ್ರಕಾಶ್, ಮೋಹನ್ ರಾಜ್ ಮತ್ತು ಮಹೇಂದ್ರ ಎಂಬುವವರನ್ನು ಬಂಧಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನಗರ ಪೊಲೀಸ್ ಠಾಣೆ ಸುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಹಿರಿಯ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಚಿಕ್ಕಬಳ್ಳಾಪುರದ ಕನ್ನಡ ಭವನದಲ್ಲಿ…

Read More

ಬೆಂಗಳೂರು: ನಗರದಲ್ಲಿ ನಡೆಯುತ್ತಿದ್ದ ಭಾರಿ ವಾಹನ ನೋಂದಣಿ ವಂಚನೆ ಜಾಲವೊಂದು ಬಯಲಾಗಿದೆ. ಒಂದೇ ನೋಂದಣಿ ಸಂಖ್ಯೆ ಹೊಂದಿದ್ದ ಎರಡು ಸ್ವರಾಜ್ ಮಜ್ದಾ ಮಿನಿಬಸ್‌ಗಳು ರಸ್ತೆಯಲ್ಲಿ ಚಲಿಸುತ್ತಿರುವುದನ್ನು ಗಮನಿಸಿದ ಪೊಲೀಸರು, ಈ ವಂಚನೆ ಜಾಲವನ್ನು ಪತ್ತೆ ಹಚ್ಚಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, 12 ಮಿನಿಬಸ್‌ಗಳನ್ನು ಜಪ್ತಿ ಮಾಡಿದ್ದಾರೆ. ಸರ್ಕಾರಕ್ಕೆ ಪಾವತಿಸಬೇಕಾದ ರಸ್ತೆ ತೆರಿಗೆ (Road Tax) ಮತ್ತು ಇತರ ಶುಲ್ಕಗಳನ್ನು ವಂಚಿಸುವ ಉದ್ದೇಶದಿಂದ ಆರೋಪಿಗಳು ನಕಲಿ ನಂಬರ್ ಪ್ಲೇಟ್‌ಗಳನ್ನು ಬಳಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ಎಲೆಕ್ಟ್ರಾನಿಕ್ಸ್ ಸಿಟಿಯ ಸುಭಾಷ್‌ನಗರ ನಿವಾಸಿ ಸೈಯದ್ ನಜೀರ್ (40) ಮತ್ತು ತಮಿಳುನಾಡು ಮೂಲದ, ಪ್ರಸ್ತುತ ಆನೇಕಲ್‌ನಲ್ಲಿ ನೆಲೆಸಿರುವ ಸಾರಿಗೆ ಆಪರೇಟರ್ ನಾಗರಾಜ್ (52) ಎಂದು ಗುರುತಿಸಲಾಗಿದೆ. ಪೊಲೀಸರ ಕೈಗೆ ಸಿಕ್ಕಿಬಿದ್ದದ್ದು ಹೇಗೆ? ಜೂನ್ 23 ರಂದು ಹೆಡ್ ಕಾನ್‌ಸ್ಟೆಬಲ್ ಕೇದಾರಲಿಂಗ ತಾಂಬೆ ಮತ್ತು ಕಾನ್‌ಸ್ಟೆಬಲ್ ಕೇಶವಮೂರ್ತಿ ಅವರು ಮಣಿಪಾಲ್ ಕೌಂಟಿ ರಸ್ತೆಯಲ್ಲಿ ಬೈಕ್‌ನಲ್ಲಿ ಗಸ್ತು ತಿರುಗುತ್ತಿದ್ದರು. ಈ ವೇಳೆ…

Read More

ಮಂಗಳೂರು: 2005 ರ ಕಳ್ಳತನ ಪ್ರಕರಣದಲ್ಲಿ ಸುಮಾರು 16 ವರ್ಷಗಳಿಂದ ತಲೆಮರೆಸಿಕೊಂಡು ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯನ್ನು ತಮಿಳುನಾಡಿನ ತಿರುನಲ್ವೇಲಿ ನಿವಾಸಿ ಮಾದ ಸ್ವಾಮಿ ಎಂದು ಗುರುತಿಸಲಾಗಿದೆ.ಅವರು ಉಪ್ಪಿನಂಗಡಿ ಪೊಲೀಸ್ ಠಾಣೆ ಅಪರಾಧ ಸಂಖ್ಯೆ 09/2005 ರಲ್ಲಿ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 457 ಮತ್ತು 380 ರ ಅಡಿಯಲ್ಲಿ ಸೆಕ್ಷನ್ 34 ರ ಅಡಿಯಲ್ಲಿ ದಾಖಲಾಗಿದ್ದ ಆರೋಪಿಯಾಗಿದ್ದರು.ಪೊಲೀಸರ ಪ್ರಕಾರ, ಆರೋಪಿಯು ಸುಮಾರು 16 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದವಿಶ್ವಾಸಾರ್ಹ ಮಾಹಿತಿಯ ಮೇರೆಗೆ ಕಾರ್ಯನಿರ್ವಹಿಸಿದ ಉಪ್ಪಿನಂಗಡಿ ಪೊಲೀಸ್ ಸಿಬ್ಬಂದಿ HC 826 ಮತ್ತು HC 331 ಕೃಷ್ಣನಗರದಲ್ಲಿ ಆತನನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ನಂತರ ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Read More

ಕಾಸರಗೋಡು: ಕುಂಬಳೆ ಸಮೀಪದ ಬಂಬ್ರಾಣದ ಶಾಲೆಯೊಂದರ ಆವರಣದಲ್ಲಿ ಗಾಂಜಾ ಗಿಡವೊಂದು ಪತ್ತೆಯಾಗಿದೆ. ಮೈದಾನಕ್ಕೆ ಆಟವಾಡಲು ಬಂದಿದ್ದ ಸ್ಥಳೀಯ ಕೆಲ ಯುವಕರು ಗಮನಿಸಿ ಅಬಕಾರಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, 50 ಸೆ. ಮೀಟರ್ ಉದ್ದದ ಗಾಂಜಾ ಗಿಡ ಪತ್ತೆಯಾಗಿದೆ. ಅಬಕಾರಿ ಅಧಿಕಾರಿಗಳು ಗಾಂಜಾ ಗಿಡವನ್ನು ಅಬಕಾರಿ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ.

Read More

ರಾಯಚೂರು: ಜಿಲ್ಲೆಯ ಅರಕೇರಾ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೋಹರಂ ಬಂದೋಬಸ್ತ್‌ಗಾಗಿ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್‌ಟೇಬಲ್, ಎದೆನೋವು ಕಾಣಿಸಿಕೊಂಡ ಬಳಿಕ ಆಸ್ಪತ್ರೆಗೆ ತಲುಪಿದ ಕೆಲವೇ ಕ್ಷಣಗಳಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮೃತ ಪೊಲೀಸ್‌ ಕಾನ್ಸ್‌ಟೇಬಲ್‌ರನ್ನು ರೇಣುಕಾರಾಜ್ (38) ಎಂದು ಗುರುತಿಸಲಾಗಿದೆ. ಅವರು ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಕಾನ್ಸ್‌ಟೇಬಲ್ ಆಗಿದ್ದು, ದೇವದುರ್ಗ ಸಿಪಿಐ ಅವರ ವಾಹನ ಚಾಲಕರಾಗಿಯೂ ಕರ್ತವ್ಯ ನಿರ್ವಹಿಸುತ್ತಿದ್ದರು. ಮೋಹರಂ ಹಬ್ಬದ ಭದ್ರತೆ ಹಿನ್ನೆಲೆಯಲ್ಲಿ ಮದರಕಲ್ ಪ್ರದೇಶದಲ್ಲಿ ಬಂದೋಬಸ್ತ್ ಕರ್ತವ್ಯದಲ್ಲಿದ್ದ ವೇಳೆ ರೇಣುಕಾರಾಜ್ ಅವರಿಗೆ ಜೀಪ್ ಚಾಲನೆ ಮಾಡುತ್ತಿದ್ದಾಗಲೇ ತೀವ್ರ ಎದೆನೋವು ಕಾಣಿಸಿಕೊಂಡಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಸಹೋದ್ಯೋಗಿಗಳು ಕೂಡಲೇ ಖಾಸಗಿ ಕಾರಿನಲ್ಲಿ ಅರಕೇರಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ. ರಾತ್ರಿ ಸುಮಾರು 10.30 ಗಂಟೆ ವೇಳೆಗೆ ಆಸ್ಪತ್ರೆಗೆ ಕರೆತರಲಾಯಿತಾದರೂ, ಪ್ರಾಥಮಿಕ ಚಿಕಿತ್ಸೆ ನೀಡುವ ಪ್ರಯತ್ನ ನಡೆಯುವಷ್ಟರಲ್ಲಿ ರೇಣುಕಾರಾಜ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಬಳಿಕ ಆಸ್ಪತ್ರೆಯಲ್ಲಿ…

Read More

ಬೆಳ್ತಂಗಡಿ: ಪರಿಶ್ರಮ ಹಾಗೂ ಪರಿವರ್ತನೆಯಿಂದ ನೀವು ಅಂದುಕೊಂಡ ಗುರಿ ನಿಮ್ಮೆಡೆಗೇ ಸಾಗಿ ಬರಬಹುದು. ಸಿಎ ಓದುವ ಹಂತದಲ್ಲಿ ನಿಖರ ಹಾಗೂ ನಿರಂತರ ಅಭ್ಯಾಸ ಬಹಳ ಮುಖ್ಯವಾಗಿದೆ. ಪಠ್ಯ ಅಧ್ಯಯನ, ಸೂಕ್ತ ಮಾರ್ಗದರ್ಶನ, ಅವೆಲ್ಲಕ್ಕಿಂತ ಮಿಗಿಲಾಗಿ ಸಂಶೋಧನಾತ್ಮಕ ಅಭ್ಯಾಸ ಅತ್ಯಗತ್ಯವಾಗಿದೆ ಎಂದು ಯುವ ಲೆಕ್ಕ ಪರಿಶೋಧಕಿ (ಸಿಎ) ನಿರೀಕ್ಷಾ ನಾವರ ಅಭಿಪ್ರಾಯ ಪಟ್ಟರು. ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ಸಿಎ ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳಿಗೆ ಜೂ.25 ರಂದು ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಂಡ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಎಲ್ಲರೂ ಸಿಎ ಪರೀಕ್ಷೆ ಅತ್ಯಂತ ಕ್ಲಿಷ್ಟಕರ ಎಂಬ ಮಾತು ಹೇಳುತ್ತಾರೆ. ಆದರೆ ನಾನು ಕಂಡುಕೊಂಡಂತೆ ಸಿಎ ಪರೀಕ್ಷೆ ಕುರಿತು ಸುಧೀರ್ಘ ತಯಾರಿ ನಡೆಸಿದಲ್ಲಿ ಭವಿಷ್ಯದಲ್ಲಿ ನೀವು ಅಂದುಕೊಂಡ ಹಾದಿ ಸುಗಮವಾಗಿಸಬಹುದು. ಈ ನೆಲೆಯಲ್ಲಿ ನಮ್ಮ ಸುತ್ತಮುತ್ತ ಸೂಕ್ತ ಮನಸ್ಥಿತಿ, ಸಮರ್ಪಕ ಸಿದ್ಧತೆ ಹಾಗೂ ಸರಿಯಾದ ವ್ಯಕ್ತಿಗಳು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಅಧ್ಯಕ್ಷರಾದ…

Read More

ಕೊಪ್ಪಳ: ಕುಕನೂರು ತಾಲೂಕಿನ ಭಾನಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿ-63ರಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಕೆಂಚಮ್ಮ ಬಾಳೆಕಾಯಿ (35), ಅಮೃತಾ ಕೋಟ್ಯಾಳ್ (25), ರಮೇಶ್ ಬಳ್ಳಾರಿ (45) ಹಾಗೂ ಪ್ರವೀಣ್ (23) ಮೃತಪಟ್ಟ ದುರ್ದೈವಿಗಳು. ಇವರೆಲ್ಲರೂ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನಕ್ಕಾಗಿ ಓಮಿನಿ ವಾಹನದಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮಂತ್ರಾಲಯಕ್ಕೆ ಭಾನಾಪುರ ಸಮೀಪದ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ, ಪಕ್ಕದ ರಸ್ತೆಯಿಂದ ಅತಿ ವೇಗವಾಗಿ ಬಂದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿದೆ. ರಸ್ತೆ ಮಧ್ಯದಲ್ಲಿದ್ದ ಡಿವೈಡರ್ ದಾಟಿದ ಲಾರಿ, ಎದುರು ದಿಕ್ಕಿನಿಂದ ಬರುತ್ತಿದ್ದ ಓಮಿನಿ ವಾಹನಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಭೀಕರತೆಗೆ ಓಮಿನಿ ವಾಹನ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ನಾಲ್ವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತದ ಭೀಕರತೆ ಕಂಡು ಸ್ಥಳೀಯರು ಕಂಗಾಲಾಗಿದ್ದರು. ಮಾಹಿತಿ ತಿಳಿಯುತ್ತಿದ್ದಂತೆ ಕುಕನೂರು ಪೊಲೀಸ್ ಠಾಣೆಯ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಧಾವಿಸಿ, ಸಾರ್ವಜನಿಕರ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ…

Read More