Author: main-admin

ಮಂಗಳೂರು : ‘Fact Vid’ ಹೆಸರಿನ ಫೇಸ್ಬುಕ್ ಪೇಜ್ ಒಂದರಲ್ಲಿ ಅನೇಕ ದಿನಗಳಿಂದ AI (Artificial Intelligence) ತಾಂತ್ರಿಕ ಸಹಾಯದಿಂದ ಹಿಂದೂ ದೇವತೆಗಳ ಅಪಮಾನಾತ್ಮಕ ಮತ್ತು ಅಶ್ಲೀಲ ಫೋಟೋಗಳನ್ನು ನಿರಂತರವಾಗಿ ಫೇಸ್ಬುಕ್ ಜಾಲತಾಣದ ಮುಖಾಂತರ ಪ್ರಸಾರ ಮಾಡಲಾಗುತ್ತಿದೆ. ಈ Al ಆಧಾರಿತ ಚಿತ್ರಗಳಿಂದ ಕೋಟ್ಯಂತರ ಹಿಂದೂ ಬಾಂಧವರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ಸಂಬಂಧಿತ ಸೈಬರ್ ಕ್ರೈಮ್ ವಿಭಾಗವು ಇದರ ಬಗ್ಗೆ ಕೂಡಲೇ ಎಚ್ಚೆತ್ತುಕೊಂಡು ಪೇಜ್ ನ ಅಡ್ಮಿನ್ ಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿಯ ದಕ್ಷಿಣ ಕನ್ನಡ ಜಿಲ್ಲಾ ಸಮನ್ವಯಕರಾದ ಶ್ರೀ. ವಿಜಯ ಕುಮಾರ ಇವರು ಆಗ್ರಹಿಸಿದ್ದಾರೆ. ಈ ಕುರಿತು 10 ಸೆಪ್ಟೆಂಬರ್ 2024 ಮಂಗಳವಾರದಂದು ಮಂಗಳೂರಿನ ಸೈಬರ್ ಕ್ರೈಮ್ ವಿಭಾಗಕ್ಕೆ ಸಮಿತಿಯ ಸಮನ್ವಯಕರು ಮತ್ತು ಧರ್ಮಪ್ರೇಮಿ ನ್ಯಾಯವಾದಿಗಳ ಒಕ್ಕೂಟವು ಸೇರಿ ದೂರು ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಉರ್ವ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅಭಿವ್ಯಕ್ತಿ ಸ್ವಾತಂತ್ರ‍್ಯ ಎಂದು ತಮ್ಮ ಬಗ್ಗೆ ಬರೆದುಕೊಂಡ ‘Fact Vid’ ಫೇಸ್ಬುಕ್…

Read More

ಬೆಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆಯನ್ನು ನಡೆಸಿದ್ದು, ಐವರು ಕೇಂದ್ರದ ಜಿಎಸ್ಟಿ ಅಧಿಕಾರಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಉದ್ಯಮಿಯೊಬ್ಬರ ವಿರುದ್ಧದ ಕೇಸ್ ಮುಚ್ಚಿ ಹಾಕಲು 1.50 ಕೋಟಿ ಹಣವನ್ನು ಪಡೆದಿದ್ದಂತ ಐವರು ಜಿಎಸ್ಟಿ ಅಧಿಕಾರಿಗಳು ನಾಪತ್ತೆಯಾಗಿದ್ದರು. ಈ ಸಂಬಂಧ ಬೈಯಪ್ಪನಹಳ್ಳಿ ಠಾಣೆಯ ಪೊಲೀಸರಿಗೆ ಉದ್ಯಮಿ ದೂರು ನೀಡಿದ್ದರು. ಈ ದೂರು ಆಧರಿಸಿ ಕಾರ್ಯಾಚರಣೆಗೆ ಇಳಿದಂತ ಪೊಲೀಸರು ಮಹಿಳಾ ಅಧಿಕಾರಿ ಸೇರಿದಂತೆ ಐವರು ಕೇಂದ್ರದ ಜಿಎಸ್ಟಿ ಅಧಿಕಾರಿಗಳನ್ನು ಬಂಧಿಸಿದ್ದಾರೆ. ಈ ಮೂಲಕ ಬೈಯ್ಯಪ್ಪನಹಳ್ಳಿ ಠಾಣೆಯ ಪೊಲೀಸರು 1.50 ಕೋಟಿ ಹಣ ಪಡೆದು ಪರಾರಿಯಾಗಿದ್ದಂತ ಐವರು ಅಧಿಕಾರಿಗಳನ್ನು ಅರೆಸ್ಟ್ ಮಾಡಿದೆ. ಅಂದಹಾಗೇ ಉದ್ಯಮಿಯ ವಿರುದ್ಧ ಏನಿತ್ತು ಕೇಸ್? ಅವರು ಅಷ್ಟೊಂದು ಹಣ ಕೊಟ್ಟಿದ್ದೇಕೆ? ಸೇರಿದಂತೆ ಇತರೆ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. ಈ ಸಂಬಂಧ ಪೊಲೀಸರಿಂದ ತನಿಖೆ ನಡೆಯುತ್ತಿದ್ದು, ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.

Read More

ಮಂಗಳೂರು:ಹತ್ತು ದಿನಗಳ ಹಿಂದೆ ಗಡಿ ಭಾಗದ ಕಾಸರಗೋಡು ಜಿಲ್ಲೆಯ ಕಿಯೂರು ಅಳಿವೆಬಾಗಿಲಿನಲ್ಲಿ ಸಮುದ್ರ ಪಾಲಾಗಿದ್ದ ಚೆಮ್ನಾಡ್ ನಿವಾಸಿಯ ಮೃತದೇಹ ತ್ರಿಶೂರು ಸಮೀಪದ ಅಝಿಕ್ಕೋಡ್ ಸಮುದ್ರ ಕಿನಾರೆಯಲ್ಲಿ ಪತ್ತೆಯಾಗಿದೆ. ಚೆಮ್ನಾಡ್ ಕಲ್ಲುವಳಪ್ಪುವಿನ ಮುಹಮ್ಮದ್ ರಿಯಾಝ್(37) ಮೃತಪಟ್ಟವರು. ಆ.31ರಂದು ಮುಂಜಾನೆ 5:30ರ ಸುಮಾರಿಗೆ ಘಟನೆ ನಡೆದಿತ್ತು. ಕಿಯೂರು ಅಳಿವೆಬಾಗಿಲಿನಲ್ಲಿ ಗಾಳ ಹಾಕಿ ಮೀನು ಹಿಡಿಯಲು ತೆರಳಿದ್ದ ರಿಯಾಝ್ ನಾಪತ್ತೆಯಾಗಿದ್ದರು. ಬೆಳಗ್ಗೆ 9 ಗಂಟೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಮೊಬೈಲ್‌ಗೆ ಕರೆ ಮಾಡಿದರೂ ಕರೆ ಸ್ವೀಕರಿಸುತ್ತಿರಲಿಲ್ಲ. ಈ ಮಧ್ಯೆ ಕಿಯೂರು ಅಳಿವೆಬಾಗಿಲಿನಲ್ಲಿ ರಿಯಾಝ್ ನ ಸ್ಕೂಟರ್ ಹಾಗೂ ಗಾಳ ಹಾಕುವ ವಸ್ತುಗಳನ್ನು ಒಳಗೊಂಡ ಬ್ಯಾಗ್ ಪತ್ತೆಯಾಗಿತ್ತು. ಬಳಿಕ ಕುಟುಂಬಸ್ಥರು ಮೇಲ್ಪರಂಬ ಪೊಲೀಸರಿಗೆ ಮಾಹಿತಿ ನೀಡಿದ್ದು, ಅದರಂತೆ ಪೊಲೀಸರು, ಅಗ್ನಿ ಪೊಲೀಸ್, ಮೀನುಗಾರಿಕಾ ಇಲಾಖೆ ಹಾಗೂ ಮೀನುಗಾರರರು ರಿಯಾಝ್ ಅವರಿಗಾಗಿ ಶೋಧ ನಡೆಸಿದ್ದರು. ಆದರೆ ಅವರು ಪತ್ತೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಮುಳುಗುತಜ್ಞ ಈಶ್ವರ್ ಮಲ್ಪೆಯವರನ್ನು ಕರೆಸಿ ಗಂಟೆಗಳ ಕಾಲ ಶೋಧ ನಡೆಸಿದರೂ ಪ್ರಯೋಜವಾಗಲಿಲ್ಲ. ಬಳಿಕ ಎರಡು…

Read More

ಪುತ್ತೂರು : ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಬೆಳಗ್ಗಿನ ಜಾವ ಬೆಂ*ಕಿ ಕಾಣಿಸಿಕೊಂಡಿದ್ದು, ಅ*ಗ್ನಿಶಾಮಕ ದಳದವರು ಬೆಂ*ಕಿ ನಂದಿಸುವಲ್ಲಿ ಯಶಸ್ಸಿಯಾಗಿದ್ದಾರೆ. ಬೊಳುವಾರಿನ ಮುಖ್ಯ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗಿನ ಜಾವ 5 ಗಂಟೆ ಸುಮಾರಿಗೆ ವಿದ್ಯುತ್ ಮೀಟರ್ ಬೋರ್ಡ್‌ನ ಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದೆ. ಜಂಕ್ಷನ್ ಬಾಕ್ಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಆಸ್ಪತ್ರೆಯ ತುಂಬಾ ಹೊಗೆ ತುಂಬಿಕೊಂಡಿದ್ದು, ತಕ್ಷಣ ಆಗ್ನಿಶಾಮಕ ದಳದವರು ಆಗಮಿಸಿ ಮುನ್ನೆಚ್ಚರಿಕೆಯನ್ನು ತೆಗೆದುಕೊಂಡಿದ್ದಾರೆ. ರೋಗಿಗಳಿಗೆ ಯಾವುದೇ ಸಮಸ್ಯೆಯಾಗಿಲ್ಲ ಎಂದು ಹೇಳಲಾಗಿದೆ.

Read More

ಮಂಗಳೂರು :- ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ತಾಯಿಗೆ ರಿಕ್ಷಾ ಡಿಕ್ಕಿ ಆಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತಕ್ಷಣವೇ ಧಾವಿಸಿ ಬಂದು ರಕ್ಷಿಸಿದ ಬಾಲಕಿ ವೈಭವಿಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಮಂಗಳವಾರ ತಮ್ಮ ಕಚೇರಿಗೆ ಕರೆಸಿ ಸನ್ಮಾನಿಸಿದರು.7ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ವೈಭವಿ ಅವರಿಗೆ ಜಿಲ್ಲಾಧಿಕಾರಿ ಕಚೇರಿಯ ತಮ್ಮ ಕೊಠಡಿಯಲ್ಲಿ ಪೇಟ, ಹಾರ ತೊಡಿಸಿ ಸನ್ಮಾನಿಸಿದ ಜಿಲ್ಲಾಧಿಕಾರಿಗಳು ಬಾಲಕಿಯ ಸಮಯ ಪ್ರಜ್ಞೆ ಮತ್ತು ಧೈರ್ಯವನ್ನು ಶ್ಲಾಘಿಸಿದರು. ವೈಭವಿಯ ಈ ಪ್ರಜ್ಞೆ ಎಲ್ಲರಿಗೂ ಮಾದರಿಯಾಗಿದೆ. ಶಾಲಾ ಹಂತದಲ್ಲಿ ಮಕ್ಕಳಿಗೆ ಇಂತಹ ಸಮಯ ಪ್ರಜ್ಞೆ ಮತ್ತು ಧೈರ್ಯ ಮೂಡಿ ಬರಬೇಕಿದೆ ಎಂದು ಅವರು ಹೇಳಿದರುವೈಭವಿಯ ಧೈರ್ಯವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೂ ಸಾಮಾಜಿಕ ಜಾಲತಾಣದಲ್ಲಿ ಶ್ಲಾಘಿಸಿದ್ದರು.

Read More

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯ ಪೊಲೀಸ್ ಕಾನ್ಸ್‌ ಟೇಬಲ್ ಸುನೀಲ್ (50) ಅವರು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕರಿಯಾಗದೇ ನಗರ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೂಲತಃ ಕಾಸರಗೋಡಿನವರಾದ ಸುನೀಲ್ ಅವರು 1996 ರಲ್ಲಿ ಪೊಲೀಸ್ ಸೇವೆಗೆ ಭರ್ತಿಯಾಗಿದ್ದರು ಬಳಿಕ ಉಡುಪಿ ಹಾಗೂ ಮಂಗಳೂರಿನ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಪ್ರಸ್ತುತ ಮಂಗಳೂರು ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್‌ ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಸುನೀಲ್ ಅವರ ನಿಧನಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು, ಸಹೋದ್ಯೋಗಿಗಳು ಸಂತಾಪ ಸೂಚಿಸಿದ್ದಾರೆ.

Read More

ಮಂಗಳೂರು: ಉಳ್ಳಾಲ ಠಾಣಾ ಕಾನ್‌ಸ್ಟೇಬಲ್‌ ಒಬ್ಬರನ್ನು ಕೊಲೆಗೆ ಯತ್ನಿಸಿದ್ದ ಇಬ್ಬರು ಅಪರಾಧಿಗಳಿಗೆ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10ವರ್ಷ ಜೈಲು ಶಿಕ್ಷೆ ಮತ್ತು ತಲಾ 16ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. ಉಳ್ಳಾಲದ ನಿವಾಸಿಗಳಾದ ಮುಸ್ತಾಕ್ (32) ಮತ್ತು ಜಾಕೀರ್ (36) ಶಿಕ್ಷೆಗೊಳಗಾದ ಅಪರಾಧಿಗಳು. ಪ್ರಕರಣದ 2ನೇ ಆರೋಪಿ ಯಾಸೀನ್ ಮತ್ತು 3ನೇ ಆರೋಪಿ ಅಶ್ರಫ್(50) ತಲೆಮರೆಸಿಕೊಂಡಿದ್ದಾರೆ. 2015ರ ಡಿ.17ರಂದು ರಾತ್ರಿ ನಾಲ್ವರು ಅಪರಾಧಿಗಳು ಉಳ್ಳಾಲದ ಸಾರ್ವಜನಿಕ ಸ್ಥಳದಲ್ಲಿ ಬಾಟಲಿಗಳನ್ನು ಎಸೆದು ಗಲಾಟೆ ಮಾಡುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ಉಳ್ಳಾಲ ಠಾಣೆಯ ಆಗಿನ ಹೆಡ್‌ಕಾನ್‌ಸ್ಟೇಬಲ್ ಉಮೇಶ್‌ ಮತ್ತು ಕಾನ್‌ಸ್ಟೇಬಲ್ ರವೀಂದ್ರ ಸ್ಥಳಕ್ಕೆ ತೆರಳಿ ಗಲಾಟೆ ಮಾಡುತ್ತಿದ್ದ ಬಗ್ಗೆ ಪ್ರಶ್ನಿಸಿದ್ದಾರೆ. ಇದರಿಂದ ಕುಪಿತಗೊಂಡ ದುಷ್ಕರ್ಮಿಗಳು ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಂದರ್ಭ ಮೊದಲ ಆರೋಪಿ ಮುಸ್ತಾಕ್ ನಿಮ್ಮಲ್ಲೊಬ್ಬರನ್ನು ಕೊಲೆ ಮಾಡಿದರೆ ಬುದ್ಧಿ ಬರುತ್ತದೆ ಎಂದು ತನ್ನ ಕೈಯಲ್ಲಿದ್ದ ಚಾಕುವಿನಿಂದ ರವೀಂದ್ರರಿಗೆ ಇರಿದು ಕೊಲೆಗೆ ಯತ್ನಿಸಿದ್ದ.…

Read More

ಬೆಂಗಳೂರು : ಭಾಗ್ಯಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಬಿ.ಎಸ್. ಯಡಿಯೂರಪ್ಪನವರ ಕನಸಿನ ಕೂಸು ಭಾಗ್ಯಲಕ್ಷ್ಮಿ ಯೋಜನೆಗೆ 18 ವರ್ಷ ತುಂಬಿದ್ದು, ಶೀಘ್ರವೇ ನೋಂದಾಯಿತಿ 2.30 ಲಕ್ಷ ಫಲಾನುಭವಿಗಳಿಗೆ ಮೆಚ್ಯುರಿಟಿ ಹಣ ಸಿಗಲಿದೆ. 18 ವರ್ಷಗಳ ಹಿಂದೆ ಭಾಗ್ಯಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಸಿದವರಿಗೆ ಏಪ್ರಿಲ್ ಮತ್ತು ಮೇ ತಿಂಗಳ ಅಂತ್ಯಕ್ಕೆ ಮೆಚ್ಯುರಿಟಿಗೆ ಅರ್ಹರಾಗಿದ್ದಾರೆ. ಹೀಗಾಗಿ ಶೀಘ್ರವೇ ನೋಂದಾಯಿತ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿದ್ಧತೆ ನಡೆಸಿದೆ. ಭಾಗ್ಯಲಕ್ಷ್ಮಿ ಯೋಜನೆಯ ಹಣ ಪಡೆಯಲು ಫಲಾನುಭವಿಗಳು ಬಿಪಿಎಲ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು. ಶಾಶ್ವತ ಕುಟುಂಬ ಯೋಜನೆ ಅಳವಡಿಸಿಕೊಂಡು ಮೂರು ಮಕ್ಕಳು ಮೀರದಂತಿರಬೇಕು. ಫಲಾನುಭವಿ ಮಗು ಕಡ್ಡಾಯವಾಗಿ 8 ನೇ ತರಗತಿ ವಿದ್ಯಾಭ್ಯಾಸ ಮಾಡಿದ ದೃಢೀಕರಣ, ಬಾಲ ಕಾರ್ಮಿಕ, ಬಾಲ್ಯ ವಿವಾಹಕ್ಕೆ ಒಳಗಾಗಿರಬಾರದು ಎನ್ನುವ ನಿಯಮ ಕಡ್ಡಾಯಗೊಳಿಸಲಾಗಿದೆ. ಬಡತನ ರೇಖೆಗಿಂದ ಕೆಳಗಿರುವ ಕುಟುಂಬಗಳಲ್ಲಿ ಜನಿಸಿದ ಹೆಣ್ಣು ಮಕ್ಕಳ ಭವಿಷ್ಯಕ್ಕೆ ನೆರವಾಗುವಂತೆ 2006-07 ರಲ್ಲಿ ಅಂದಿನ…

Read More

ಉಡುಪಿ : ಪ್ರಾಂಶುಪಾಲ ರಾಮಕೃಷ್ಣ ಬಿಜಿ ಅವರಿಗೆ ಘೋಷಿಸಿದ್ದ ರಾಜ್ಯಮಟ್ಟದ ಉತ್ತಮ ಪ್ರಾಂಶುಪಾಲ ಪ್ರಶಸ್ತಿಯನ್ನು ತಡೆದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ವೇಳೆ ಸಿಎಂ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದಿದ್ದಕ್ಕೆ ಶಾಸಕ ಯಶ್​ಪಾಲ್​ ಸುವರ್ಣ ವಿರುದ್ಧ ಪ್ರಕರಣ ದಾಖಲಾಗಿದೆ. ಹೌದು ಕಳೆದ 2 ದಿನಗಳ ಹಿಂದೆ ಉಡುಪಿಯಲ್ಲಿ ಪ್ರಾಂಶುಪಾಲರಿಗೆ ಘೋಷಿಸಿದ್ದ ಪ್ರಶಸ್ತಿ ತಡೆ ಹಿಡಿದಿದ್ದಕ್ಕೆ ಬಿಜೆಪಿ ನಾಯಕರು ಮಣಿಪಾಲದ ಸಿಂಡಿಕೇಟ್ ಸರ್ಕಲ್​ನಲ್ಲಿ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ವೇಳೆ ರಸ್ತೆ ತಡೆದು ಮುಖ್ಯಮಂತ್ರಿಗಳ ಪ್ರತಿಕೃತಿ ಚಪ್ಪಲಿಯಿಂದ ಹೊಡೆದು ಬೆಂಕಿ ಹಚ್ಚಿದ್ದರು. ಹಿಂದೂ ವಿರೋಧಿ ಸಿದ್ದರಾಮಯ್ಯರನ್ನು ತೊಲಗಿಸಿ ಎಂದು ಘೋಷಣೆ ಕೂಗಿದ್ದರು. ಶಾಂತಿಗೆ ಭಂಗ ತರುವ ಉದ್ದೇಶದಿಂದ ಕೃತ್ಯ ಎಸಗಿದ್ದಾರೆ ಎಂದು ಎನ್​ಎಸ್​ಯುಐ ಮುಖಂಡ ಸೌರಭ್ ಬಲ್ಲಾಳ್ ಮಣಿಪಾಲ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದರು. ದೂರು ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಯಶ್​​ಪಾಲ್ ಸುವರ್ಣ, ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಸದಸ್ಯರಾದ ಗಿರೀಶ್ ಅಂಚನ್, ವಿಜಯ ಕೊಡವೂರು, ಬಾಲಕೃಷ್ಣ ಶೆಟ್ಟಿ ವಿರುದ್ಧ ಮಣಿಪಾಲ ಪೊಲೀಸ್​ ಠಾಣೆಯಲ್ಲಿ…

Read More

ಉಡುಪಿ: ಕಡಿಯಾಳಿಯ ಕೋಚಿಂಗ್ ಸೆಂಟರ್‌ ವೊಂದಕ್ಕೆ ಹೋಗಿದ್ದ ವೇಳೆ ನಾಪತ್ತೆಯಾಗಿದ್ದ ಬ್ರಹ್ಮಾವರ ಹಂದಾಡಿ ಬಾರಕೂರು ರಸ್ತೆಯ ನಿವಾಸಿ ಪ್ರಕಾಶ್ ಎಂಬುವರ ಪುತ್ರ ಆರ್ಯ (13) ಇಂದು ಬೆಳಗ್ಗೆ ಕೇರಳದ ಪಾಲ್ಘಾಟ್ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿರುವುದಾಗಿ ವರದಿಯಾಗಿದೆ. ಭಾನುವಾರ ಬೆಳಗ್ಗೆ ಉಡುಪಿ ಕಡಿಯಾಳಿಯಲ್ಲಿರುವ ಕೋಚಿಂಗ್ ಇನ್‌ಸ್ಟಿಟ್ಯೂಟ್ ಗೆಂದು ಹೋಗಿದ್ದ ಎಂಟನೇ ತರಗತಿಯ ವಿದ್ಯಾರ್ಥಿ ಆರ್ಯ, ಮನೆಗೆ ಹಿಂದಿರುಗದೆ ನಾಪತ್ತೆಯಾಗಿದ್ದ. ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಸಿಸಿಟಿವಿ ಕ್ಯಾಮರಾ ಪರಿಶೀಲಿಸಿದಾಗ ಆರ್ಯ, ಇಂದ್ರಾಳಿ ರೈಲು ನಿಲ್ದಾಣದಿಂದ ರೈಲಿನ ಮೂಲಕ ಕೇರಳದ ಕಡೆ ತೆರಳಿರುವುದು ಕಂಡುಬಂತು. ಅತ್ತ ಟಿಕೆಟ್ ಇಲ್ಲದೆ ಪ್ರಯಾಣಿಸಿದ ಆರ್ಯನನ್ನು ಪಾಲ್ಘಾಟ್ ರೈಲ್ವೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಮಾಹಿತಿ ತಿಳಿದ ಉಡುಪಿ ಪೊಲೀಸರು ಪಾಲ್ಘಾಟ್ ಗೆ ತೆರಳಿದ್ದಾರೆಂದು ತಿಳಿದುಬಂದಿದೆ.

Read More