ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ನಾಲ್ವರು ವಾರಂಟ್ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮುಂದಿನ ಕ್ರಮಕ್ಕಾಗಿ ಅವರನ ಪಣಂಬೂರು, ಕೊಣಾಜೆ ಹಾಗೂ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. ಕುದ್ರೋಳಿ ನಡುಪಳ್ಳಿ ನಿವಾಸಿ ಮುನಾವರ್ ಮುಸ್ತಾಕ್(40) ಬಂಧಿತ ಆರೋಪಿ. ಈತ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ಕೊಲೆಯತ್ನ, ದನಗಳವು ಹಾಗೂ ಬರ್ಕೆ ಠಾಣಾ ವ್ಯಾಪ್ತಿಯಲ್ಲಿ ಮಾದಕದ್ರವ್ಯ ಸೇವನೆ ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಯಾಗಿದ್ದ. ಬಳಿಕ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ಆತನನ್ನು ಮುಂದಿನ ಕ್ರಮಕ್ಕೆ ಕೊಣಾಜೆ ಠಾಣೆಗೆ ಹಸ್ತಾಂತರಿಸಲಾಗಿದ್ದಾರೆ. ಕಣ್ಣೂರು, ಅಡ್ಯಾರ್ ನಿವಾಸಿ ಮೊಹಮ್ಮದ್ ರಫೀಜ್(23) ಎಂಬಾತ ದ.ಕ.ಜಿಲ್ಲೆ, ಕಮಿಷನರೇಟ್ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ಕಳವು, ಕೊಲೆಯತ್ನ, ಹಲ್ಲೆ ಸೇರಿದಂತೆ ಸುಮಾರು 9ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ. ಬಳಿಕ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆತನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ…
Author: main-admin
ಉಡುಪಿ: ಆನ್ ಲೈನ್ ಟ್ರೇಡಿಂಗ್ ವಂಚನೆ ಪ್ರಕರಣದ ಇನ್ನೊಬ್ಬ ಆರೋಪಿಯನ್ನು ಉಡುಪಿ ನಗರದ ಸೆನ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕೇರಳ ನಿವಾಸಿ ಅಜ್ಮಲ್ ಸುಹೈಲ್ ಸಿ(19) ಎಂದು ತಿಳಿದು ಬಂದಿದೆ. ಬಂಧನವಾದ ಆರೋಪಿಯಿಂದ 80,000/- ನಗದು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ವಿವರ: ಪಿರ್ಯಾದಿದಾರರಾದ ಉಪೇಂದ್ರ ಅಂಬಲಪಾಡಿ ಉಡುಪಿ ರವರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ WhatsApp ನಲ್ಲಿ ಮೋತಿಲಾಲ್ ಒಸ್ವಾಲ್ ಪ್ರೈವೇಟ್ ಲಿಮಿಟೆಡ್ ಮ್ಯಾನೇಜ್‌ಮೆಂಟ್ ಗ್ರೂಪ್ ಸೇರಿಸಿದ್ದು. ಪಿರ್ಯಾದಿದಾರಿಗೆ ಮೋತಿಲಾಲ್ ಒಸ್ವಾಲ್ ಪ್ರೈವೇಟ್ ಲಿಮಿಟೆಡ್ ಮ್ಯಾನೇಜ್‌ಮೆಂಟ್ ಗ್ರೂಪ್‌ನ VIP-203-845 ಎಂಬ ಅಕೌಂಟ್ ನ್ನು ನೀಡಿರುತ್ತಾರೆ. ಪಿರ್ಯಾದಿದಾರರಿಗೆ ಮೊ.ನಂ 7842874635 ಮತ್ತು 6391854496 ನೇದರಿಂದ Whats App ನಲ್ಲಿ ಟ್ರೇಡಿಂಗ್ ಬಗ್ಗೆ ಹಾಗೂ ಲಾಭಾಂಶಗಳ ಬಗ್ಗೆ ಮಾಹಿತಿ ತಿಳಿಸಿ ಪಿರ್ಯಾದಿದಾರರನ್ನುನಂಬಿಸಿ, ಹೆಚ್ಚಿನ ಲಾಭಾಂಶ ಪಡೆಯಬಹುದೆಂದು ಆಸೆ ತೋರಿಸಿ,ಒಟ್ಟು 33,10,000/- ಹಣವನ್ನು ಡಿಪಾಸಿಟ್ ಮಾಡಿಸಿಕೊಂಡಿರುತ್ತಾರೆ. ತದನಂತರ ಪಿರ್ಯಾದಿದಾರಿಗೆ ಹೂಡಿಕೆ ಮಾಡಿದ ಹಣ ಮತ್ತು ಲಾಭಾಂಶವನ್ನು ನೀಡದೇ ಮೋಸ ಮಾಡಿರುವುದಾಗಿದೆ. ಈ ಪ್ರಕರಣಕ್ಕೆ ಸಂಬಂದಿಸಿದಂತೆ ಇಗಾಗಲೆ…
ಉಡುಪಿ: ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ವ್ಯಾಪಕ ಬಂದೋಬಸ್ತ್ ಮಾಡಲಾಗಿದ್ದು, ಎಲ್ಲ ಠಾಣೆ ವ್ಯಾಪ್ತಿಗಳಲ್ಲಿ ಶಾಂತಿ ಸಭೆಗಳನ್ನು ಆಯೋಜನೆ ಮಾಡಿದ್ದೇವೆ ಎಂದು ಉಡುಪಿ ಎಸ್ಪಿ ಡಾ.ಅರುಣ್ ಕುಮಾರ್ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮೂರ್ತಿ ಪ್ರತಿಷ್ಠಾಪನೆಗೂ ಮುನ್ನ ಇಲಾಖೆಯಿಂದ ಅನುಮತಿ ಕಡ್ಡಾಯ. ರಾತ್ರಿ 10 ಗಂಟೆಯ ಒಳಗೆ ಡಿಜೆಗೆ ಅವಕಾಶ ಇದ್ದು, ಹತ್ತರ ನಂತರ ಡಿಜೆ ಸೌಂಡ್ ಕಡಿಮೆ ಮಾಡುವಂತೆ ಸೂಚನೆ ನೀಡಿದ್ದೇವೆ. ಹಬ್ಬಕ್ಕೆ ಸಂಬಂಧಪಟ್ಟಂತೆ ಬಂಟಿಂಗ್ ಮತ್ತು ಬ್ಯಾನರ್‌ಗಳಿಗೆ ಪೂರ್ವಾನುಮತಿ ಕಡ್ಡಾಯವಾಗಿದೆ ಎಂದು ಹೇಳಿದ್ದಾರೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ 472 ಕಡೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. 62 ಸ್ಥಳಗಳನ್ನು ಈದ್ ಮಿಲಾದ್ ಹಬ್ಬಕ್ಕೆ ಗುರುತಿಸಲಾಗಿದೆ. ಬಂದೋಬಸ್ತ್ ಗಾಗಿ ಕೆಎಸ್‌ಆರ್‌ಪಿ ಮತ್ತು ಡಿಆರ್ ಪೊಲೀಸ್ ಸೇರಿದಂತೆ ಭದ್ರತೆಗಾಗಿ 200 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ
ಮಂಗಳೂರು: ಜಿಲ್ಲಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾಗಳ (ಇ-ಆಟೋ) ಪ್ರದೇಶ ನಿರ್ಬಂಧಗಳಿಲ್ಲದೆ ಸಂಚರಿಸಲು ಅನುಮತಿ ನೀಡಿ ಜುಲೈ 26ರಂದು ಹೊರಡಿಸಿರುವ ಆದೇಶವನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಪಷ್ಟಪಡಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಆಟೋ-ರಿಕ್ಷಾ ಮಾಲೀಕರು ಮತ್ತು ಚಾಲಕರೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, ‘ಕೇಂದ್ರ ಸರ್ಕಾರದ ಮಾರ್ಗಸೂಚಿಗಳು ಮತ್ತು ಹೈಕೋರ್ಟ್ ನ ನಿರ್ದೇಶನದ ಮೇರೆಗೆ ಈ ಆದೇಶವನ್ನು ಕಾನೂನು ಚೌಕಟ್ಟಿನಲ್ಲಿ ಹೊರಡಿಸಲಾಗಿದೆ. ಸಂಬಂಧಪಟ್ಟವರು ಮೇಲ್ಮನವಿಯ ಮೂಲಕ ಹೆಚ್ಚಿನ ಸ್ಪಷ್ಟೀಕರಣವನ್ನು ಪಡೆಯಬಹುದು’ ಎಂದಿದ್ದಾರೆ. ‘ಯಾವುದೇ ನಗರ (ವಲಯ-1) ಅಥವಾ ಗ್ರಾಮಾಂತರ (ವಲಯ-2) ನಿರ್ಬಂಧಗಳಿಲ್ಲದೆ ಇ-ಆಟೋಗಳು ಕಾರ್ಯನಿರ್ವಹಿಸಲು ಕೇಂದ್ರ ಸರ್ಕಾರವು ಉಚಿತ ಪರವಾನಗಿಗಳನ್ನು ನೀಡಿದೆ. ಇದನ್ನು ಮಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಜಾರಿಗೆ ತರಲಾಗುತ್ತಿದೆ. ಆದರೆ, ತಮಿಳುನಾಡಿನಲ್ಲಿ ನಿರ್ಬಂಧ ಹೇರಲಾಗಿದೆ. ಇಲ್ಲಿ ಅಂತಹ ನಿರ್ಬಂಧಗಳು ಜಾರಿಯಾಗಬೇಕಾದರೆ ರಾಜ್ಯ ಮಟ್ಟದಲ್ಲಿ ಜಾರಿಯಾಗಬೇಕು. ಚಿಕ್ಕಮಗಳೂರಿನ ಆಟೋ ರಿಕ್ಷಾ ಚಾಲಕರು ಈಗಾಗಲೇ ತಮಿಳುನಾಡಿನಲ್ಲಿರುವಂತಹ ನಿರ್ಬಂಧಗಳು ಜಾರಿಗೆ ತರುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ’ ಎಂದು ಹೇಳಿದರು.
ಮಂಗಳೂರು ನಗರದ ಯೆಯ್ಯಾಡಿ ಏರ್ಪೋರ್ಟ್ ರೋಡಲ್ಲಿ ತಡ ರಾತ್ರಿ ಬೈಕೊಂದು ಸ್ಕಿಡ್ ಆಗಿ ಇಬ್ಬರು ಸವಾರರೂ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಗುರುವಾರ ತಡರಾತ್ರಿ ಯೆಯ್ಯಾಡಿ ಸಮೀಪದ ಹರಿಪದವು ಎಂಬಲ್ಲಿ ಈ ಅವಘಡ ಸಂಭವಿಸಿದ್ದು ಕೋಡಿಕಲ್ ನಿವಾಸಿ ಕಾಶೀನಾಥ್(17) ಮತ್ತು ಉಪ್ಪಿನಂಗಡಿಯ ಚೇತನ್(24) ಮೃತ ದುರ್ದೈವಿಗಳಾಗಿದ್ದಾರೆ.ಇವರಿಬ್ಬರಿದ್ದ ಬೈಕ್ ಲಾರಿಯೊಂದಕ್ಕೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಉರುಳಿಬಿದ್ದಿದೆ. ಇದರಿಂದ ರಸ್ತೆಗೆ ಎಸೆಯಲ್ಪಟ್ಟ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸಂಚಾರಿ ಪೊಲೀಸರು ಪ್ರಕರಣ ದಾಖಲು ಮಾಡಿ ತನಿಖೆ ನಡೆಸುತ್ತಿದ್ದಾರೆ.
ಉಳ್ಳಾಲ : ಇಬ್ಬರು ಸಿಟಿ ಬಸ್ ಕಂಡೆಕಟ್ಟರ್ ಗಳು ಸಾರ್ವಜನಿಕರ ಎದುರೇ ಪರಸ್ಪರ ಹೊಡೆದಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ತಲಪಾಡಿ – ಮಂಗಳೂರು ನಡುವೆ ಸಂಚರಿಸುವ ಪದ್ಮ ಟ್ರಾವೆಲ್ಸ್ ಬಸ್ ಮತ್ತು ಹೊಸಂಗಡಿ ಜಂಕ್ಷನ್ ನಿಂದ ಮಂಗಳೂರು ನಡುವೆ ಸಂಚರಿಸುವ ಅಸರ್ ಟ್ರಾವೆಲ್ಸ್ ಬಸ್ ನಿರ್ವಾಹಕರ ನಡುವೆ ಜಗಳ ನಡೆದಿದ್ದು, ಇದರ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಸ್ ನಿರ್ವಾಹಕರಾದ ಅಜಯ್ ಮತ್ತು ವಿಷ್ಣು ಎಂಬವರು ಪರಸ್ಪರ ಹೊಡೆದಾಡಿಕೊಂಡಿದ್ದು,ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ಸಂಜೆ ವೇಳೆ ತೊಕ್ಕೊಟ್ಟು ಸಮೀಪ ಈ ಘಟನೆ ನಡೆದಿದೆ. ತಲಪಾಡಿಯಿಂದ ಮಂಗಳೂರಿಗೆ ಹೋಗುತ್ತಿದ್ದ ಬಸ್ಸನ್ನು ಬೆನ್ನಟ್ಟಿದ ಇನ್ನೊಂದು ಬಸ್ಸು ಚಾಲಕ ಓವರ್ ಬ್ರಿಡ್ಜ್ ಬಸ್ಸು ನಿಲ್ದಾಣದಲ್ಲಿ ಅಡ್ಡಲಾಗಿ ಇಟ್ಟಿದ್ದ. ಈ ವೇಳೆ ಎರಡು ಬಸ್ಸು ನಿರ್ವಾಹಕರ ನಡುವೆ ಮಾತಿನ ಚಕಮಕಿ ನಡೆದು ಹೊಯ್ ಕೈಯಾಗಿ ಬೀದಿ ಕಾಳಗ ಆಗಿದೆ ಎಂದು ತಿಳಿದುಬಂದಿದೆ. ಈ ವೇಳೆ ಓವರ್ ಬ್ರಿಡ್ಜ್ ಆಟೋ ರಿಕ್ಷಾ…
ಉಡುಪಿ : ಕರ್ನಾಟಕ ಸರ್ಕಾರದ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ವೀಕ್ಷಣಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಒಬ್ಬ ಖಾಸಗಿ ಲಾಡ್ಜ್ ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಕುಂದಾಪುರದ ಜೆಕೆ ಟವರ್ಸ್ ಎಂಬಲ್ಲಿ ನಡೆದಿದೆ. ಸಾವನ್ನಪ್ಪಿದ ವ್ಯಕ್ತಿಯನ್ನು ಕುಂದಾಪುರ ತಾಲೂಕಿನ ಕೊರ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶಿವಮೊಗ್ಗ ಮೂಲದ ಪ್ರಶಾಂತ್ (37) ಎಂದು ಗುರುತಿಸಲಾಗಿದೆ. ಶಿವಮೊಗ್ಗ ಮೂಲದ ಪ್ರಶಾಂತ್ ವಿವಾಹಿತನಾಗಿದ್ದು, ಒಂದು ಪುಟ್ಟ ಮಗುವಿದೆ. ಈತನಿಗೆ ಕುಡಿತದ ಚಟವಿತ್ತು ಎನ್ನಲಾಗಿದೆ. 2010ರಲ್ಲಿ ಆರೋಗ್ಯ ಇಲಾಖೆಗೆ ಸೇರಿದ್ದ ಪ್ರಶಾಂತ್ ಕಾರ್ಕಳದಲ್ಲಿ ಸೇವೆಗೆ ಸೇರಿದ್ದರು. ಬಳಿಕ ಕುಂದಾಪುರ ತಾಲೂಕಿನ ಕೊರ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿರಿಯ ಆರೋಗ್ಯ ಶಿಕ್ಷಣಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ. ಬಳಿಕ ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆಯಾಗಿದ್ದ ಎಂದು ತಿಳಿದುಬಂದಿದೆ. ಮಾನಸಿಕವಾಗಿ ನೊಂದಿದ್ದು ತನ್ನ ಸ್ನೇಹಿತರ ಜೊತೆಗೆ ಜೀವನದಲ್ಲಿ ಜಿಗುಪ್ಸೆ ಉಂಟಾಗಿದೆ ಎಂದು ಆಗಾಗ ಹೇಳಿಕೊಳ್ಳುತ್ತಿದ್ದ ಎನ್ನಲಾಗಿದೆ. ಸ್ನೇಹಿತರು ಆತನಿಗೆ ಬುದ್ಧಿ ಹೇಳಿ ಸಮಾಧಾನಿಸುತ್ತಿದ್ದರು. ಆದರೆ…
ಮಣಿಪಾಲ : ಜಲ್ಲಿಕಲ್ಲು ಸಾಗಾಟಕ್ಕೆ ಸಂಬಂಧಿಸಿ ನಕಲಿ ಪರವಾನಿಗೆ ಸೃಷ್ಟಿಸಿದ ಕ್ರಷರ್ ಮಾಲಕಿಯ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಜುಲೈ 6ರಂದು ವಾಹನವೊಂದರಲ್ಲಿ ಜಿಪಿಎಸ್ ಷರತ್ತು ಉಲ್ಲಂಘನೆ ಮಾಡಿ ಜಲ್ಲಿಕಲ್ಲು ಸಾಗಾಟ ಮಾಡುತ್ತಿದ್ದು ಈ ಬಗ್ಗೆ ವಾಹನ ಮಾಲಕ ಸುಂದರ ಎಂಬವರಲ್ಲಿ ಉಡುಪಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಭೂ ವಿಜ್ಞಾನಿ ಹಾಜಿರಾ ಸಜನಿ ವಿಚಾರಿಸಿದಾಗ ಉಪ ಖನಿಜ ಸಾಗಾಣಿಕೆಯ ಪರವಾನಿಗೆಯನ್ನು ಪಡೆದು ಸಾಗಾಟ ಮಾಡುತ್ತಿರುವುದಾಗಿ ತಿಳಿಸಿದ್ದರು. ಅದರಂತೆ ಮಣಿಪಾಲ ಪೊಲೀಸರು ಪರವಾನಿಗೆ ಮತ್ತು ಬಾರ್ ಕೋಡ್ ಗಳನ್ನು ಪರಿಶೀಲಿಸಿದಾಗ ಐಎಲ್‌ಎಂಎಸ್ ತಂತ್ರಾಂಶದಲ್ಲಿ ಉಪಖನಿಜ ಸಾಗಾಣಿಕಾ ಪರವಾನಿಗೆಗಳನ್ನು ನೀಡಿರುವುದು ಕಂಡುಬಂದಿಲ್ಲ. ಇವುಗಳನ್ನು ಕ್ರಷರ್ ಮಾಲಕಿ ಕೆ. ರಾಧಿಕಾ ಹಿರೇಬೆಟ್ಟು ನಕಲಿ ಮಾಡಿ ಉಪಯೋಗಿಸಿ ರುವುದಾಗಿ ಉಡುಪಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಭೂ ವಿಜ್ಞಾನಿ ಹಾಜಿರಾ ಸಜನಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಇದೇ ರೀತಿಯ ನಕಲಿ ಪರವಾನಿಗೆ ಸೃಷ್ಟಿಸಿ ಕ್ರಷರ್ ಮಾಲೀಕರು, ಮರಳು ದಕ್ಕೆ,…
ಬೆಳ್ತಂಗಡಿ: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ನರ್ಸ್ ಒಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಗಂಡಿಬಾಗಿಲಿನ ದೇವಗಿರಿಯ ಬೈಕಾಟ್ ನಿವಾಸಿ ಜೋಸ್- ಮೆಡ್ಲಿ ದಂಪತಿ ಪುತ್ರಿ ಟಿನು(27) ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ನರ್ಸ್ ಆಗಿದ್ದ ಟಿನು ಅವರಿಗೆ ಶಿವಮೊಗ್ಗ ಜಿಲ್ಲೆಯ ಸಾಗರದ ಸೋಬಿಟ್ ಅವರೊಂದಿಗೆ ಎರಡೂವರೆ ವರ್ಷಗಳ ಹಿಂದೆ ವಿವಾಹವಾಗಿತ್ತು. ಒಂದು ವಾರದಿಂದ ಅಸ್ವಸ್ಥಗೊಂಡಿದ್ದ ಅವರನ್ನು ಬೆಂಗಳೂರಿನ ಸೈಂಟ್ ಜೋನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಮೃತದೇಹವನ್ನು ಪತಿಯ ಮನೆಗೆ ಕೊಂಡೊಯ್ಯಲಾಗುವುದು ಎಂದು ಮನೆಯವರು ತಿಳಿಸಿದ್ದಾರೆ. ಅವರು ತಂದೆ-ತಾಯಿ, ಪತಿ, ಸಹೋದರಿಯನ್ನು ಅಗಲಿದ್ದಾರೆ.
ಸುರತ್ಕಲ್: ಹಠಾತ್ ಬೆಂಕಿ ಕಾಣಿಸಿಕೊಂಡ ಪರಿಣಾಮ ಸಂಚಾರದಲ್ಲಿದ್ದ ಐಷಾರಾಮಿ ಕಾರು ಸುಟ್ಟು ಕರಕಲಾದ ಘಟನೆ ಸುರತ್ಕಲ್ ಎನ್ಐಟಿಕೆ ಹಳೆ ಟೋಲ್ ಗೇಟ್ ಬಳಿ ಗುರುವಾರ ಬೆಳಗ್ಗೆ ಸಂಭವಿಸಿದೆ. ಸುಟ್ಟು ಕರಕಲಾಗಿದ್ದು ಬಿಎಂಡಬ್ಲ್ಯೂ ಕಾರೆಂದು ಹೇಳಲಾಗುತ್ತಿದ್ದು, ಕಾರು ಉಡುಪಿಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಮಂಗಳೂರು ಕಡೆ ತೆರಳುತ್ತಿತ್ತು ಎನ್ನಲಾಗಿದೆ. ಎನ್ಐಟಿಕೆ ಬಳಿ ಬರುತ್ತಿದ್ದಾಗ ಏಕಾಏಕಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ ಎನ್ನಲಾಗಿದೆ. ಬೆಂಕಿ ಅವಘಡದಲ್ಲಿ ಸಾವು ನೋವು ಸಂಭವಿಸಿರುವ ಮಾಹಿತಿ ಲಭ್ಯವಾಗಿಲ್ಲ. ಮಂಗಳೂರು ಉತ್ತರ ಸಂಚಾರ ಪೊಲೀಸರು, ಸುರತ್ಕಲ್ ಠಾಣೆಯ ಪೊಲಿಸರು ಸ್ಥಳಕ್ಕೆ ದೌಡಾಯಿಸಿದ್ದು, ಅಗ್ನಿ ಶಾಮಕ ದಳಕ್ಕೆ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.










