ಕಾರ್ಕಳ : ವಿಷ ಸೇವಿಸಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ, ಮೃತ ಯುವಕನನ್ನು ಹಿರಿಯಂಗಡಿಯ ಪ್ರಜ್ವಲ್ ದೇವಾಡಿಗ(18) ಎಂದು ಗುರುತಿಸಲಾಗಿದೆ. ಪ್ರಜ್ವಲ್ ಮಾರ್ಚ್ 12ರಂದು ಮನೆಯಲ್ಲಿ ಒಬ್ಬನೇ ಇದ್ದ ಸಂದರ್ಭ ವಿಷ ಸೇವಿಸಿದ್ದ ಎಂದು ಹೇಳಲಾಗಿದೆ. ಪ್ರಜ್ವಲ್ ಗೆಳೆಯ ಈ ಬಗ್ಗೆ ಮನೆಯವರಿಗೆ ಮಾಹಿತಿ ನೀಡಿದ್ದಾನೆ. ಕೂಡಲೇ ಪ್ರಜ್ವಲ್‌ನನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಪ್ರಜ್ವಲ್ ಮಂಗಳವಾರ ಸಾವನಪ್ಪಿದ್ದಾರೆ. ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: main-admin
ಬೆಂಗಳೂರು : 5 ಮತ್ತು 8 ನೇ ತರಗತಿ ಪಬ್ಲಿಕ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಗ್ರೀನ್ ಸಿಗ್ನಲ್ ನೀಡಿದೆ. 5 ಮತ್ತು 8 ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದ್ದು, ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ 5 ಮತ್ತು 8 ನೇ ತರಗತಿ ಪಬ್ಲಿಕ್ ಪರೀಕ್ಷೆ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಈ ಸಂಬಂಧ ನಿನ್ನೆ ವಿಚಾರಣೆ ನಡೆಸಿದ ಹೈಕೋರ್ಟ್ ಸುತ್ತೋಲೆ ರದ್ದುಪಡಿಸಿದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿ ವಿಚಾರಣೆ ಇಂದಿಗೆ ಮುಂದೂಡಿತ್ತು. ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ ನೀಡಿ, ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ಇಂದಿಗೆ ಮುಂದೂಡಿತ್ತು. ಅಂತೆಯೇ ಇಂದು ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ರಾಜ್ಯದ 5 ಮತ್ತು 8 ನೇ ತರಗತಿ…
ಉಡುಪಿ : ವೀಸಾ ಮಾಡಿಕೊಡುವ ನೆಪದಲ್ಲಿ ವ್ಯಕ್ತಿಯೋರ್ವರಿಂದ ಲಕ್ಷಾಂತರ ರೂ. ಹಣ ವರ್ಗಾಯಿಸಿಕೊಂಡ ಘಟನೆ ನಡೆದಿದೆ. ಜಯರಾಜ ಆಚಾರ್ಯ ಅವರು ವಿದೇಶದಲ್ಲಿ ಉದ್ಯೋಗಕ್ಕಾಗಿ ವಾಟ್ಸ್ ಆ್ಯಪ್ ನಲ್ಲಿ ಕಂಡು ಬಂದ ವೀಸಾ ಮಾಡಿಕೊಡುವ ಪ್ರಕಟನೆಯನ್ನು ಓದಿ ಅದರಲ್ಲಿದ್ದ ಮೊಬೈಲ್ ಸಂಖ್ಯೆಗೆ ಕರೆ ಮಾಡಿದಾಗ ಆ ವ್ಯಕ್ತಿ ತಾನು ಪಾಸ್‌ಪೋರ್ಟ್ ಮತ್ತು ವೀಸಾ ಮಾಡಿಕೊಡುವ ಏಜೆಂಟ್ ಎಂದು ನಂಬಿಸಿ ವಂಚನೆ ಮಾಡಿದ್ದಾನೆ. ಆನ್‌ಲೈನ್ ಮೂಲಕ ಇಂಟರ್ ವ್ಯೂ ನಡೆಸಿ, ವೀಸಾ ಮಾಡಿಸಲು ಚಾರ್ಜ್ ಮತ್ತು ಇನ್ನಿತರ ಖರ್ಚುಗಳ ನೆಪ ಹೇಳಿ ಜನವರಿ 9ರಿಂದ ಫೆಬ್ರವರಿ 8ರವರೆಗೆ ಒಟ್ಟು 6,90,343 ರೂ.ಗಳನ್ನು ಆರೋಪಿಗಳ ವಿವಿಧ ಖಾತೆಗೆ ಆನ್‌ಲೈನ್ ಮೂಲಕ ವರ್ಗಾಯಿಸಿಕೊಂಡಿದ್ದಾರೆ. ಬಳಿಕ ವೀಸಾವನ್ನೂ ನೀಡದೆ ಹಣವನ್ನೂ ವಾಪಸು ನೀಡದೇ ಮೋಸ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಟ್ಲ: ಉಮ್ರಾ ಯಾತ್ರೆಗೆ ತೆರಳಿದ್ದ ವಿಟ್ಲದ ವ್ಯಕ್ತಿಯೋರ್ವರು ಸೌದಿ ಅರೇಬಿಯಾದಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ವಿಟ್ಲ ಕೊಳಂಬೆ ನಿವಾಸಿ ಹಸನಬ್ಬ ಮೃತರು ಎಂದು ತಿಳಿದು ಬಂದಿದೆ. ಅವರು ಕಳೆದ ವಾರ ಕುಟುಂಬಸ್ಥರ ಜೊತೆ ಉಮ್ರಾ ಯಾತ್ರೆ ನಿರ್ವಹಿಸಲು ಸೌದಿ ಅರೇಬಿಯಾಗೆ ತೆರಳಿದ್ದರು. ನಿನ್ನೆ ಸೌದಿ ಅರೇಬಿಯಾದಲ್ಲಿ ಮಗನ ರೂಂನಲ್ಲಿ ಮಲಗಿದ್ದ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅವರು ಪತ್ನಿ ಮತ್ತು ಮಕ್ಕಳ ಜೊತೆ ಸೌದಿಗೆ ತೆರಳಿ ಉಮ್ರಾ ನಿರ್ವಹಿಸುವ ಉದ್ದೇಶವನ್ನು ಹೊಂದಿದ್ದರು.ಇದೀಗ ಅವರ ಅಕಾಲಿಕ ಮರಣದಿಂದ ಕುಟುಂಬಸ್ಥರಲ್ಲಿ ದುಃಖ ಉಂಟು ಮಾಡಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಮಂಗಳೂರು: ವಿಧಾನಸಭಾ ಚುನಾವಣೆ ಸದ್ಯದಲ್ಲೇ ಘೋಷಣೆಯಾಗುವ ಸಾಧ್ಯತೆಯಿದೆ. ಆದ್ದರಿಂದ ನಿಷ್ಪಕ್ಷ ಚುನಾವಣೆ ನಡೆಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಅನಧಿಕೃತ ಜಾಹೀರಾತು ಫಲಕಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ಅದೇರೀತಿ ಸಾರ್ವಜನಿಕರ ಸಭೆ ಸಮಾರಂಭಗಳ ಮೇಲೆ ನಿಗಾ ಇರಿಸುವಂತೆ ಜಿಲ್ಲಾಧಿಕಾರಿ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಅನುಮತಿ ಪಡೆಯದೆ ಹಾಕಲಾಗಿರುವ ಬ್ಯಾನರ್- ಬಂಟಿಂಗ್ಸ್ ಮತ್ತು ಫ್ಲೆಕ್ಸ್, ಗೋಡೆ ಬರಹ ಮತ್ತು ಇತರ ಜಾಹೀರಾತುಗಳನ್ನು ತೆರವುಗೊಳಿಸಿ ಪ್ರತೀ ದಿನ ವರದಿ ಸಲ್ಲಿಸಬೇಕು ಎಂದು ಸೂಚಿಸಿರುವ ಜಿಲ್ಲಾಧಿಕಾರಿ, ನಗರ ಮತ್ತು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳು ಮತ್ತು ಸಂಬಂಧಪಟ್ಟ ಇಲಾಖೆಗಳ ಅನುಮತಿ ಪಡೆಯದೆ ರಾಜಕೀಯ ಪಕ್ಷ ಮತ್ತು ರಾಜಕೀಯ ವ್ಯಕ್ತಿಗಳು ಸಾರ್ವಜನಿಕ ಔತಣಕೂಟ ಏರ್ಪಡಿಸುವಂತಿಲ್ಲ. ಒಂದು ವೇಳೆ ಉಲ್ಲಂಘಿಸಿದಲ್ಲಿ ಸ್ಥಳೀಯ ಪ್ರಾಧಿಕಾರಗಳು, ಪೊಲೀಸ್ ಇಲಾಖೆ, ಅಬಕಾರಿ ಇಲಾಖೆ ಹಾಗೂ ಆರೋಗ್ಯ ಇಲಾಖೆಗಳು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, ಐಪಿಸಿ ಕಲಂ 171 ರಡಿಯಲ್ಲಿ ಹಾಗೂ ಸಂಬಂಧಪಟ್ಟ ಇತರ ಕಾಯ್ದೆಗಳ ಅಡಿಯಲ್ಲಿ ಸೂಕ್ತ…
ಕಾರ್ಕಳ : ವಿಷ ಸೇವಿಸಿದ್ದ ಯುವಕ ಚಿಕಿತ್ಸಗೆ ಸ್ಪಂದಿಸದೇ ಇಹ ಲೋಕ ತ್ಯಜಿಸಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಸಂಭವಿಸಿದೆ. ಹಿರಿಯಂಗಡಿಯ ಪ್ರಜ್ವಲ್ ದೇವಾಡಿಗ(18) ಎಂಬ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟ ಯುವಕನಾಗಿದ್ದಾನೆ. ಮಾ. 12ರಂದು ರಾತ್ರಿ ಪ್ರಜ್ವಲ್‌ನ ಅಣ್ಣ ಉಜ್ವಲ್ ತಂದೆ ತಾಯಿ ಜತೆ ಕಾರ್ಕಳ ಮಾರಿಗುಡಿಯ ಕಾರ್ಯಕ್ರಮಕ್ಕೆ ಹೋಗಿದ್ದರು. ಮನೆಯಲ್ಲಿ ಒಬ್ಬನೇ ಇದ್ದ ಪ್ರಜ್ವಲ್ ವಿಷ ಸೇವಿಸಿದ್ದ. ಪ್ರಜ್ವಲ್‌ನ ಗೆಳೆಯ ಮಲ್ಲಿಕಾರ್ಜುನ ಈ ಕುರಿತು ಕರೆ ಮಾಡಿ ಉಜ್ವಲ್‌ಗೆ ವಿಷಯ ತಿಳಿಸಿದ್ದರು. ಪ್ರಜ್ವಲ್‌ನನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಪ್ರಜ್ವಲ್ ಮಂಗಳವಾರ ಅಸುನೀಗಿದ್ದಾರೆ. ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚೆನ್ನೈ : ವಂಚಿಸಿದ ಪ್ರಿಯಕರನ ಮೇಲೆ ಯುವತಿಯೊಬ್ಬಳು ಕುದಿಯುವ ಎಣ್ಣೆ ಸುರಿದ ಘಟನೆ ತಮಿಳುನಾಡಿನ ಈರೋಡ್ನಲ್ಲಿ ನಡೆದಿದೆ.ಕಾರ್ತಿ (27) ತಮಿಳುನಾಡಿನ ಭವಾನಿಯ ವರ್ಣಪುರಂ ನಿವಾಸಿಯಾಗಿದ್ದು, ಪೆರುಂದುರೈನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ. ಈತ ತನ್ನ ಸಂಬಂಧಿ ಮೀನಾ ದೇವಿಯೊಂದಿಗೆ ಸಂಬಂಧ ಹೊಂದಿದ್ದ. ಜೊತೆಗೆ ಮದುವೆಯಾಗುವುದಾಗಿಯೂ ಭರವಸೆ ನೀಡಿದ್ದ. ಆದರೆ ಕಾರ್ತಿ ಬೇರೊಬ್ಬ ಮಹಿಳೆಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿರುವ ವಿಷಯವನ್ನು ಮೀನಾದೇವಿ ತಿಳಿದಿದ್ದಾಳೆ. ಅದಾದ ಬಳಿಕ ಈ ವಿಚಾರವಾಗಿ ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಅದಾದ ಬಳಿಕ ಮೀನಾದೇವಿಯನ್ನು ಕಾರ್ತಿ ಭೇಟಿಯಾಗಲು ಹೋದಾಗ ಮತ್ತೆ ಜಗಳ ನಡೆದಿದೆ. ಇದರಿಂದ ಕೋಪಗೊಂಡ ಮೀನಾ ದೇವಿ ಆತನ ಮೇಲೆ ಕುದಿಯುವ ಎಣ್ಣೆಯನ್ನು ಸುರಿದಿದ್ದಾಳೆ.
ಲಕ್ನೋ: ವಿಮಾನದಲ್ಲಿ ವ್ಯಕ್ತಿಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ಸುದ್ದಿಯಾದ ಬಳಿಕ ಅಂಥದ್ದೇ ಮತ್ತೊಂದು ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ಇತ್ತೀಚೆಗೆ ನಡೆದಿರುವುದು ಬೆಳಕಿಗೆ ಬಂದಿದೆ. ಭಾನುವಾರ (ಮಾ.12 ರಂದು) ಅಮೃತಸರದಿಂದ ಕೋಲ್ಕತ್ತಾಕ್ಕೆ ತೆರಳುವ ರೈಲಿನಲ್ಲಿ ಈ ಘಟನೆ ನಡೆದಿದ್ದು, ಅಕಾಲ್ ತಖ್ತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಮಹಿಳೆ ತನ್ನ ಪತಿ ರಾಜೇಶ್ ಕುಮಾರ್ ಅವರೊಂದಿಗೆ ಇದ್ದರು. ದಂಪತಿಗಳು ಎ1 ಕೋಚ್ ನಲ್ಲಿದ್ದರು. ಮಧ್ಯರಾತ್ರಿ ರೈಲಿನ ಟಿಕೆಟ್ ಪರಿವೀಕ್ಷಕ (ಟಿಟಿಇ) ಬಿಹಾರ ಮೂಲದ ಮುನ್ನಾ ಕುಮಾರ್ ಕುಡಿದ ಮತ್ತಿನಲ್ಲಿ ಮಹಿಳೆಯ ತಲೆಯ ಮೇಲೆಯೇ ಮೂತ್ರ ವಿಸರ್ಜನೆ ಮಾಡಿದ್ದಾನೆ ಎಂದು ಸರ್ಕಾರಿ ರೈಲ್ವೆ ಪೊಲೀಸ್ ಹೇಳಿದ್ದಾರೆ. ಟಿಟಿಇಯ ಅಸಭ್ಯ ವರ್ತನೆಗೆ ಮಹಿಳೆ ಕಿರುಚಿದ್ದಾರೆ. ಈ ವೇಳೆ ಎಚ್ಚೆತ ಇತರ ಪ್ರಯಾಣಿಕರು ಒಟ್ಟು ಸೇರಿ ಕುಡಿದು ಟೈಟಾಗಿದ್ದ ಮುನ್ನಾ ಕುಮಾರ್ ನನ್ನು ಹಿಡಿದು ಥಳಿಸಿದ್ದಾರೆ. ಸೋಮವಾರ ರೈಲು ಲಕ್ನೋದ ಚಾರ್‌ಬಾಗ್ ರೈಲು ನಿಲ್ದಾಣವನ್ನು ತಲುಪಿದಾಗ ಟಿಟಿಇಯನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ ಎಂದು ವರದಿ…
ಮಂಗಳೂರು : ಶೆಡ್ ಕುಸಿದು ಬಿದ್ದು 10 ಮಂದಿ ಕೂಲಿ ಕಾರ್ಮಿಕರು ಗಾಯಗೊಂಡ ಘಟನೆ ಮಂಗಳೂರು ನಗರದ ಹಂಪನಕಟ್ಟೆಯಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಸೆಂಟ್ರಲ್ ಮಾರುಕಟ್ಟೆ ಕಟ್ಟಡ ನಿರ್ಮಾಣ ಸ್ಥಳದಲ್ಲಿ ಸಂಭವಿಸಿದೆ. ನಿನ್ನೆ ತಡ ರಾತ್ರಿ 11.30 ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು ಈ ಸಂದರ್ಭ ಕೂಲಿ ಕಾರ್ಮಿಕರು ಶೆಡ್ ನಲ್ಲಿ ಮಲಗಿದ್ದರು ಎನ್ನಲಾಗಿದೆ. ಏಕಾಏಕಿ ಶೆಡ್ ನ ತಳ ಭಾಗ ಕುಸಿದು ಬಿದ್ದ ಕಾರಣ ಈ ಅನಾಹುತ ಸಂಭವಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ಬಳಿಕ ಬಿಡುಗಡೆ ಮಾಡಲಾಗಿದೆ. ದುರ್ಘಟನೆಗೆ ಕಟ್ಟಡ ಕಾಮಾಗಾರಿ ಮಾಡುತ್ತಿರುವವರ ಬೇಜಾಬ್ದಾರಿ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಹೊಸ ಸೆಂಟ್ರಲ್ ಮಾರ್ಕೆಟ್ ಕಟ್ಟಡ ನಿರ್ಮಾಣಕ್ಕಾಗಿ ಕಾರ್ಮಿಕರು ಮಲಗಿದ್ದ ಶೆಡ್ ಗಳ ಅಡಿ ಭಾಗದಲ್ಲಿ ಸುಮಾರು 30 ಅಡಿಗಳಷ್ಟು ಆಳ ಮಣ್ಣನ್ನು ತೆಗೆಯಲಾಗಿದ್ದು ಈ ಸಂದರ್ಭ ಮೇಲ್ಭಾಗದಲ್ಲಿದ್ದ ಶೆಡ್ ಗಳ ಅಡಿ ಭಾಗ ಏಕಾಏಕಿ ಕುಸಿದು ಬಿದ್ದಿದೆ. ಅದೃಷ್ಟವಶತ್ ಯಾವುದೇ ಪ್ರಾಣಾಪಾಯ ವಾಗಿಲ್ಲ, ಘಟನಾ ಸ್ಥಳಕ್ಕೆ…
ಮೂಡಬಿದಿರೆ : ಶಂಕಿತ ಡೆಂಗ್ಯೂ ಜ್ವರಕ್ಕೆ ಪ್ರಥಮ ಪಿಯುಸಿ ಓದುತ್ತಿರುವ ವಿಧ್ಯಾರ್ಥಿನಿ ಸಾವನಪ್ಪಿರುವ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಜ್ಯೋತಿನಗರ ನಿವಾಸಿ ಮಿಸ್ರಿಯಾ (17) ಎಂದು ಗುರುತಿಸಲಾಗಿದೆ. ಮಿಸ್ರಿಯಾ ಆಳ್ವಾಸ್ ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದರು. ಮಿಸ್ರಿಯಾ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು, ಬಿಳಿ ರಕ್ತ ಕಣಗಳ ಕುಸಿತ ಕಂಡುಬಂದಿರುವುದರಿಂದ ಸಾವು ಸಂಭವಿಸಿದ್ದು, ಇದು ಡೆಂಗ್ಯೂ ಪ್ರಕರಣ ಎಂದು ಶಂಕಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಭಂಡಾರಿ, ಸರಕಾರಿ ಆಸ್ಪತ್ತೆಗಳಲ್ಲಿ ಡೆಂಗ್ಯೂ ಸಹಿತ ಮಲೇರಿಯಾ ಪ್ರಕರಣಗಳು ದಾಖಲಾಗಿದ್ದಲ್ಲಿ ಕೂಡಲೇ ಮಾಹಿತಿ ಲಭಿಸುತ್ತದೆ. ಖಾಸಗಿ ಆಸ್ಪತ್ರೆಗಳಿಂದ ಮಲೇರಿಯಾ ಕೇಂದ್ರಕ್ಕೆ ವರದಿ ಬಂದ ಬಳಿಕವಷ್ಟೇ ನಮಗೆ ಮಾಹಿತಿ ಸಿಗಲು ಸಾಧ್ಯ ಮತ್ತು ಆ ಕುರಿತು ಸೂಕ್ತ ಸಮೀಕ್ಷೆ, ಪರಿಶೀಲನೆ ನಡೆಸಲು ಸಾಧ್ಯವಾಗುತ್ತದೆ. ಮಿಸ್ರಿಯಾ ಪ್ರಕರಣ ಇನ್ನಷ್ಟೇ ಮಲೇರಿಯಾ ಕೇಂದ್ರಕ್ಕೆ ವರದಿಯಾಗಬೇಕಿದೆ. ಇದು ಡೆಂಗ್ಯೂ ನಿಂದಾದ ಸಾವು ಎಂದು ದೃಢಪಟ್ಟಲ್ಲಿ ಮೂಡುಬಿದಿರೆ ತಾಲೂಕಿನಲ್ಲಿ ಇದೇ…