ಕಾರ್ಕಳ: ಪೊಲೀಸರ ಎಚ್ಚರಿಕೆಯನ್ನು ಲೆಕ್ಕಿಸದೆ ಗೂಡ್ಸ್ ವಾಹನದಲ್ಲಿ ಸೆಂಟ್ರಿಂಗ್ ಮೆಷೀನ್‌ಗಳೊಂದಿಗೆ ಕೂಲಿ ಕಾರ್ಮಿಕರನ್ನು ಸಾಗಿಸುವ ಕೆಲಸ ನಿರಂತರ ಹಾಗೂ ನಿರಾತoಕವಾಗಿ ನಡೆಯುತ್ತಿದ್ದು, ಪೊಲೀಸರು ವಾಹನವನ್ನು ಬೆನ್ನಟ್ಟಿ ಹಿಡಿದು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಾರ್ಕಳ ನ್ಯಾಯಾಲಯವು ವಾಹನದ ಮಾಲೀಕ ನಾಗಪ್ಪ ಎಂಬವರಿಗೆ 10 ಸಾವಿರ ರೂ. ದಂಡ ವಿದಿಸಿದೆ. ಕಾರ್ಕಳ ಪರಿಸರದಲ್ಲಿ ಮಾತ್ರವಲ್ಲದೆ, ಜಿಲ್ಲೆಯದ್ಯಂತ ಬೆಳಿಗ್ಗೆ ಹಾಗೂ ಸಾಯಂಕಾಲ ಕೂಲಿ ಕಾರ್ಮಿಕರನ್ನು ಸಿಮೆಂಟ್ ಕಾಂಕ್ರೀಟ್ ಮೆಷಿನ್‌ನೊಟ್ಟಿಗೆ ತುಂಬಿಕೊಂಡು ಹೋಗುತ್ತಿರುವುದು ಸರ್ವೇ ಸಾಮಾನ್ಯವಾಗಿದೆ. ಪೊಲೀಸರು ಈ ಬಗ್ಗೆ ಹಲವಾರು ಬಾರಿ ಖಡಕ್ ಎಚ್ಚರಿಕೆ ನೀಡಿದ್ದರೂ ಕ್ಯಾರೇ ಎನ್ನದ ಕಾಂಟಾಕ್ಟ್‌ದಾರರು ಮತ್ತದೇ ಚಾಳಿಯನ್ನು ಮುಂದುವರಿಸುತಿದ್ದು, ವಾಹನದಲ್ಲಿ ಇಷ್ಟಬಂದಂತೆ ಕಾರ್ಮಿಕರನ್ನು ತುಂಬಿಸಿಕೊಂಡು, ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ವಾಹನ ಚಲಾಯಿಸುವುದಲ್ಲದೇ, ದಾರಿಯಲ್ಲಿ ಓಡಾಡುವ ಇತರ ವಾಹನಗಳಿಗೂ ತೊಂದರೆಯಾಗುವ ಬಗ್ಗೆ ಹಲವಾರು ದೂರುಗಳು ಕೇಳಿ ಬರುತ್ತಿತ್ತು. ಈ ಬಗ್ಗೆ ಕಾರ್ಯಪ್ರವೃತ್ತರಾದ ಕಾರ್ಕಳ ನಗರ ಪೊಲೀಸರು ವಾಹನವನ್ನು ಬೆನ್ನಟ್ಟಿ ಕಾರ್ಕಳ ಪುರಸಭಾ ವ್ಯಾಪ್ತಿಯ ಶಿವತಿಕೆರೆ ಎಂಬಲ್ಲಿ ವಾಹನವನ್ನು ತಡೆದು ನಿಲ್ಲಿಸಿ ಕಾರ್ಕಳ ನ್ಯಾಯಾಲಯಕ್ಕೆ…
Author: main-admin
ಮಂಗಳೂರು: ನೆಹರೂ ಮೈದಾನ ಬಳಿಯ ಆರ್‌ಟಿಒ ಕಚೇರಿಗೆ ಭಾನುವಾರ (ಡಿಸೆಂಬರ್ 14) ರಾತ್ರಿ ಬಾಂಬ್ ಬೆದರಿಕೆಯ ಇಮೇಲ್ ಬಂದಿದೆ. ಈ ಮೇಲ್‌ನಲ್ಲಿ ಐದು ವಿಭಿನ್ನ ಸ್ಥಳಗಳಲ್ಲಿ ಸ್ಫೋಟಕ ವ್ಯವಸ್ಥೆ ಇಟ್ಟಿರುವಂತೆ ಕಿಡಿಗೇಡಿಗಳು ಬೆದರಿಕೆ ನೀಡಿದ್ದಾರೆ. ಕಚೇರಿಯ ಅಧಿಕಾರಿಗಳು ಸೋಮವಾರ ಮಧ್ಯಾಹ್ನ ಈ ಮೆಸೇಜ್‌ನ್ನು ಗಮನಿಸಿ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಇದೀಗ ಮಂಗಳೂರು ಪೊಲೀಸ್ ಎಎಸ್‌ಸಿ ಮತ್ತು ಬಿಡಿಡಿಎಸ್ ತಂಡ ಕಚೇರಿ ಹಾಗೂ ಅದರ ಸುತ್ತಲೂ ತಪಾಸಣೆ ನಡೆಸುತ್ತಿದ್ದಾರೆ. ಪ್ರಾಥಮಿಕ ಪರಿಶೀಲನೆಯಿಂದ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ. ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ ಮತ್ತು ಸಾರ್ವಜನಿಕರಿಗೆ ಯಾವುದೇ ಆತಂಕ ಪಡಬಾರದೆಂದು ಸೂಚಿಸಿದ್ದಾರೆ. ತಪಾಸಣೆ ಪ್ರಕ್ರಿಯೆ ಮುಂದುವರಿಯುತ್ತಿದ್ದು, ಬೆದರಿಕೆಯ ಹಿನ್ನೆಲೆ ಹಾಗೂ ಕಿಡಿಗೇಡಿಗಳ ಗುರುತು ಹುಡುಕಲು ಕಾರ್ಯಾಚರಣೆ ಮುಂದಾಗಿದೆ.
ಬಂಟ್ವಾಳದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರು ಸಾಗಾಟ ಮಾಡಿದ ಪ್ರಕರಣಕ್ಕೆ ಸಂಬOಧಿಸಿ ಜಾನುವಾರು ನೀಡಿದ ವ್ಯಕ್ತಿಯೊಬ್ಬರ ಮನೆ ಹಾಗೂ ಹಟ್ಟಿಯನ್ನು ಪುಂಜಾಲಕಟ್ಟೆ ಪೊಲೀಸರು ಜಪ್ತಿ ಮಾಡಿದ್ದಾರೆ. ಜಾನುವಾರು ನೀಡಿದ ಆರೋಪಿ ಭೋಜ ಮೂಲ್ಯ ಅವರ ಬಂಟ್ವಾಳ ತಾಲೂಕಿನ ಸರಪ್ಪಾಡಿ ಗ್ರಾಮದಲ್ಲಿರುವ ಮನೆ ಹಾಗೂ ಜಾನುವಾರುಹಟ್ಟಿಯನ್ನು ಕಾನೂನು ಪ್ರಕ್ರಿಯೆಯಂತೆ ಜಪ್ತಿ ಮಾಡಲಾಗಿದೆ. ಬಂಟ್ವಾಳ ಉಳಿ ಗ್ರಾಮದ ಮಣಿನಾಲ್ಕೂರು-ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಆಟೋದಲ್ಲಿ ಹಿಂಸಾತ್ಮಕವಾಗಿ ಜಾನುವಾರನ್ನು ಸಾಗಾಟ ಮಾಡಲಾಗುತ್ತಿತ್ತು. ಪುಂಜಾಲಕಟ್ಟೆ ಪೊಲೀಸರು ಗೂಡ್ಸ್ ಆಟೋವನ್ನು ತಡೆದು ಚಾಲಕ ಶೀಧರ ಪೂಜಾರಿಯನ್ನು ವಿಚಾರಿಸಿದಾಗ ಸರಪ್ಪಾಡಿಯ ಭೋಜ ಮೂಲ್ಯ ಅವರಿಂದ ಜಾನುವಾರು ಪಡೆದಿರುವುದಾಗಿ ಒಪ್ಪಿಕೊಂಡಿದ್ದರು. ಯಾವುದೇ ಪರವಾನಿಗೆ ಇಲ್ಲದೇ ಮಾಂಸ ಮಾಡುವ ಉದ್ದೇಶದಿಂದ ಜಾನುವಾರನ್ನು ಮಾರಾಟ ಮಾಡಿದ ಪ್ರಕರಣದಲ್ಲಿ ಭೋಜ ಮೂಲ್ಯ ಅವರ ಮನೆಯನ್ನು ಜಪ್ತಿ ಮಾಡಲಾಗಿದೆ. ಪ್ರಕರಣಕ್ಕೆ ಸಂಬOಧಿಸಿ ಜಾನುವಾರು, ಆಟೋ, ಹಾಗೂ ಮೊಬೈಲ್ ಫೋನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೃಹ ಇಲಾಖೆ ಇದೀಗ ಬೆಚ್ಚಿ ಬೀಳಿಸುವ ಅಂಕಿ ಅಂಶ ಬಹಿರಂಗಗೊಳಿಸಿದ್ದು ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 9369 ಮಕ್ಕಳು ಅಪಹರಣಕ್ಕೆ ಒಳಗಾಗಿದ್ದಾರೆ ಇನ್ನು ಆತಂಕಕಾರಿ ವಿಚಾರ ಏನೆಂದರೆ ಅದರಲ್ಲಿ ಶೇಕಡ 71 ರಷ್ಟು ಬಾಲಕೇರಿ ಇದ್ದಾರೆ ಎನ್ನುವುದು ತೀವ್ರ ಕಳವಳಕಾರಿಯಾಗಿದೆ. ಹೌದು ಕಳೆದ ಮೂರು ವರ್ಷಗಳಲ್ಲಿ, 2023, 2024 ಹಾಗೂ 2025ರ ನವೆಂಬರ್ 15ರ ವರೆಗೆ ರಾಜ್ಯದಲ್ಲಿ ಒಟ್ಟು 9,639 ಮಕ್ಕಳು ಅಪಹರಣಕ್ಕೊಳಗಾಗಿರುವ ವರದಿಯಾಗಿದೆ ಎಂದು ಗೃಹ ಇಲಾಖೆ ಅಂಕಿ-ಅಂಶ ನೀಡಿದೆ. 2023ರಲ್ಲಿ ರಾಜ್ಯದಲ್ಲಿ 3,039 ಮಕ್ಕಳು, 2024ರಲ್ಲಿ 3,411 ಮಕ್ಕಳು ಹಾಗೂ 2025ರಲ್ಲಿ ಇದುವರೆಗೆ 3,189 ಮಕ್ಕಳು ಅಪಹರಣಕ್ಕೊಳಗಾಗಿದ್ದಾರೆ. ಮೂರು ವರ್ಷ ವರದಿಯಾಗಿರುವ ಅಪಹರಣ, ನಾಪತ್ತೆಯಾದ ಒಟ್ಟು ಮಕ್ಕಳಲ್ಲಿ ಹೆಣ್ಣುಮಕ್ಕಳ ಪ್ರಮಾಣವೇ ಹೆಚ್ಚಿರುವುದು ಆಘಾತಕಾರಿ ವಿಚಾರವಾಗಿದೆ. ಈ ಅವಧಿಯಲ್ಲಿ ಸುಮಾರು 6,891 ಬಾಲಕಿಯರು ಅಪಹರಣ, ನಾಪತ್ತೆಯಾಗಿದ್ದಾರೆ. ಅಂದರೆ ಒಟ್ಟಾರೆ ಮಕ್ಕಳ ಅಪಹರಣದಲ್ಲಿ 71.50%ರಷ್ಟು ಬಾಲಕಿಯರಿದ್ದಾರೆ. ಅಲ್ಲದೆ, ಒಟ್ಟು 2,748 ಗಂಡು ಮಕ್ಳಳು ಕಣ್ಮರೆ, ಅಪಹರಣಗೊಂಡಿದ್ದಾರೆ ಎಂದು ಗೃಹ ಇಲಾಖೆ ಮಾಹಿತಿ…
ಸುಳ್ಯ: ದೇವಚಳ್ಳ ಗ್ರಾಮದ ಮುಂಡೋಡಿಯಲ್ಲಿ ಅಕ್ರಮವಾಗಿ ಕಡಿದು ಸಾಗಿಸುತ್ತಿದ್ದ ಅಂದಾಜು 10 ಲಕ್ಷ ರೂ. ಮೌಲ್ಯದ ಮರದ ದಿಮ್ಮಿಗಳನ್ನು ಮತ್ತು ಸಾಗಾಟಕ್ಕೆ ಬಳಸಿದ ವಾಹನಗಳನ್ನು ಡಿಸೆಂಬರ್ 13 ರಂದು ಅರಣ್ಯ ಇಲಾಖೆ ಅಧಿಕಾರಿಗಳು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ವಶಪಡಿಸಿಕೊಂಡಿದ್ದಾರೆ. ಮುಂಡೋಡಿಯ ನಾಗೇಶ್ ಎಂಬುವವರಿಗೆ ಸೇರಿದ ಜಾಗದಿಂದ ಒಂದು ಹೆಬ್ಬಲಸಿನ ಮರ ಮತ್ತು ಒಂದು ಮಾವಿನ ಮರವನ್ನು ಅಕ್ರಮವಾಗಿ ಕಡಿದು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಉಪ ವಲಯ ಅರಣ್ಯಾಧಿಕಾರಿ ಸೌಮ್ಯಾ ಪಿ. ಎನ್. ಅವರ ನೇತೃತ್ವದಲ್ಲಿ ನೆಲ್ಲೂರು-ಕೆಮ್ರಾಜೆ ವಲಯದ ಅಧಿಕಾರಿಗಳು ಸ್ಥಳಕ್ಕೆ ದಾಳಿ ನಡೆಸಿದರು. ಕಾರ್ಯಾಚರಣೆಯ ಸಮಯದಲ್ಲಿ, ತಂಡವು ಹಲಸು ಮತ್ತು ಮಾವಿನ ಮರದ 10 ದಿಮ್ಮಿಗಳ ಜೊತೆಗೆ ಮರದ ದಿಮ್ಮಿಗಳನ್ನು ಸಾಗಿಸಲು ಬಳಸಿದ ಲಾರಿ ಮತ್ತು ಕ್ರೇನ್ ಅನ್ನು ವಶಪಡಿಸಿಕೊಂಡಿದೆ.ಸ್ಥಳದ ಮಾಲಕ ನಾಗೇಶ್ ಮತ್ತು ಪ್ರಮುಖ ಆರೋಪಿ ಮರದ ವ್ಯಾಪಾರಿ ಮತ್ತು ಕ್ರೇನ್ ಮಾಲೀಕ, ಸುಳ್ಯ ಕಸಬಾ ನಾವೂರು ನಿವಾಸಿ ಮಹಮ್ಮದ್ ಅಶ್ರಫ್ ಡಿ. ಎಂ. ಅವರನ್ನು ವಶಕ್ಕೆ ತೆಗೆದುಕೊಂಡು…
ಸುರತ್ಕಲ್: ಪೊಲೀಸ್ ಠಾಣಾ ವ್ಯಾಪ್ತಿಯ ಚೇಳಾಯರು ಎಂಬಲ್ಲಿ 14ರ ಹರೆಯದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿ ವೃದ್ಧನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು ಸುರತ್ಕಲ್ ಚೇಳಾಯರು ನಿವಾಸಿ ಸುಂದರ ಪೂಜಾರಿ(60) ಎಂದು ಹೆಸರಿಸಲಾಗಿದೆ. ಘಟನೆ ಅಕ್ಟೋಬರ್ ತಿಂಗಳಲ್ಲಿ ನಡೆದಿದ್ದು ಮಾನಸಿಕ ಖಿನ್ನತೆಗೊಳಗಾಗಿದ್ದ ಬಾಲಕಿ ವೈದ್ಯರಲ್ಲಿ ತನ್ನ ಮೇಲಾದ ಲೈಂಗಿಕ ದೌರ್ಜನ್ಯ ವಿವರಿಸಿದ್ದು ಈ ಹಿನ್ನೆಲೆಯಲ್ಲಿ ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಬಾಲಕಿ ಹೊಸಬೆಟ್ಟುವಿನಲ್ಲಿ ಟ್ಯೂಶನ್ ಮುಗಿಸಿ ಬಸ್‌ನಲ್ಲಿ ಬಂದು ಮುಕ್ಕದಲ್ಲಿ ಇಳಿದು ತನ್ನ ಮನೆಗೆ ಒಳ ರಸ್ತೆಯಾಗಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಸುಂದರ ಪೂಜಾರಿ ಎದುರು ಬದಿಯಿಂದ ಬಂದು ಆಕೆಯ ಕೈಹಿಡಿದು ಎಳೆದು ಎದೆಗೆ ಕೈ ಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಬಾಲಕಿ ಸುರತ್ಕಲ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಟ್ವಾಳ : ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ, 810 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ಬಂಧಿತರು ಬಂಟ್ವಾಳ ತುಂಬೆ ನಿವಾಸಿ ಸಮೀರ್ (31) ಹಾಗೂ ಬಂಟ್ವಾಳ ಗೂಡಿನ ಬಳಿ ನಿವಾಸಿ ಮೊಹಮ್ಮದ್ ಅಸೀಫ್ (35) ಸೆರೆಯಾಗಿರುವ ಆರೋಪಿಗಳು. ಡಿಸೆಂಬರ್ 13ರ ಸಂಜೆ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಹನಮನಗರ ಪ್ರದೇಶದ ರಾಷ್ಟ್ರೀಯ ಹೆದ್ದಾರಿ ಬಳಿ ಗಾಂಜಾ ಮಾರಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಆಧಾರವಾಗಿ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಮಂಜುನಾಥ್ ಟಿ. ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದ್ದು, ಪರಿಶೀಲನೆಯ ವೇಳೆ ರಾಷ್ಟ್ರೀಯ ಹೆದ್ದಾರಿಯ ಪಕ್ಕದ ನಿರ್ಜನ ಪ್ರದೇಶದಲ್ಲಿ KA-19-MN-3664 ಸಂಖ್ಯೆಯ ಕಾರು ಹಾಗೂ KA-19-AE-0166 ಸಂಖ್ಯೆಯ ಆಟೋರಿಕ್ಷಾ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ಅವರು ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದುದಾಗಿ ಒಪ್ಪಿಕೊಂಡಿದ್ದಾರೆ. ತಪಾಸಣೆ ವೇಳೆ ಕಾರಿನಿಂದ 450 ಗ್ರಾಂ ಹಾಗೂ ಆಟೋರಿಕ್ಷಾದಿಂದ…
ಮಂಗಳೂರು: ಅಪ್ರಾಪ್ತ ಬಾಲಕ ಸ್ಕೂಟರ್ ಚಲಾಯಿಸಿ ಅಪಘಾತಕ್ಕೆ ಕಾರಣವಾದ ಆರೋಪದಡಿ ಸ್ಕೂಟರ್ ಮಾಲಕನಿಗೆ ನ್ಯಾಯಾಲಯದ ದಂಡ ವಿಧಿಸಿದೆ. ರಾಷ್ಟ್ರೀಯ ಹೆದ್ದಾರಿ 66ರ ನಂತೂರು ಪದವು ಬಳಿ 2025ರ ಮಾ.30ರಂದು ಮುಂಜಾವ 3:50ರ ವೇಳೆಗೆ ಅಪ್ರಾಪ್ತ ಬಾಲಕ ಸ್ಕೂಟರ್‌ನಲ್ಲಿ ತೆರಳುತ್ತಿದ್ದ. ಆ ವೇಳೆ ಅದೇ ದಿಕ್ಕಿನಲ್ಲಿ ಕುಂಟಿಕಾನ ಕಡೆಗೆ ಸಾಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಬಾಲಕ ಢಿಕ್ಕಿ ಹೊಡೆದಿದ್ದು, ಇದರಿಂದ ಎರಡೂ ವಾಹನದಲ್ಲಿದ್ದವರು ಗಾಯಗೊಂಡಿದ್ದರು. ಈ ಬಗ್ಗೆ ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಎಸ್ ಐ ರೋಸಮ್ಮ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಜೆಎಂಎಫ್‌ಸಿ ಎಂಟನೇ ನ್ಯಾಯಾಲಯದ ನ್ಯಾಯಾಧೀಶ ಫವಾಝ್ ಪಿ.ಎ. ಅವರು ಅಪ್ರಾಪ್ತನಿಗೆ ಚಲಾಯಿಸಲು ಸ್ಕೂಟರ್ ನೀಡಿದ ಮಾಲಕ ಅಬ್ದುಲ್ ಹಮೀದ್‌ಗೆ 25,000 ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.
ಮಂಗಳೂರು: ತಣ್ಣೀರುಬಾವಿ ಟೀ ಪಾರ್ಕ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಮಾರಾಟ ಮಾಡತ್ತಿದ್ದ ಆರೋಪದಲ್ಲಿ ಮೂವರನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಜಾಕೀರ್, ಮಹಮ್ಮದ್ ಹನೀಫ್ ಹಾಗೂ ಶಿಫಾನ್ ಪ್ರಕರಣದ ಆರೋಪಿಗಳು. ಡಿ. 12ರಂದು ಬೆಳಗ್ಗೆ 9.45ರ ವೇಳೆಗೆ ತಣ್ಣೀರುಬಾವಿ ಟೀ ಪಾರ್ಕ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮರದ ಕೆಳಗಡೆ ದ್ವಿಚಕ್ರ ವಾಹನವೊಂದರಲ್ಲಿ ಮೂವರು ಆರೋಪಿಗಳು ಲಾರಿ ಚಾಲಕರುಗಳಿಗೆ, ಉತ್ತರ ಭಾರತದ ಕೂಲಿ ಕಾರ್ಮಿಕರಿಗೆ ಹಾಗೂ ಸಾರ್ವಜನಿಕರಿಗೆ ಎಂಡಿಎಂಎ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ಪಣಂಬೂರು ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ರಾಜ್ಯ ಸರ್ಕಾರವು ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದು, ಪೊಲೀಸ್ ಇಲಾಖೆಯಿಂದ 3,600 ಕಾನ್ಸ್ಟೇಬಲ್ ನೇಮಕಾತಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಪರಿಶೀಲನೆಯಲ್ಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ನ ಡಿ.ಟಿ. ಶ್ರೀನಿ ವಾಸ್, ಬಿಜೆಪಿಯ ಕಿಶೋರ್ ಕುಮಾರ್ ಪುತ್ತೂರು ಪ್ರತ್ಯೇಕ ಪ್ರಶ್ನೆಗೆ ಉತ್ತರಿಸಿದ ಸಚಿವ ಡಾ.ಜಿ.ಪರಮೇಶ್ವರ್, , ಪೊಲೀಸ್ ಇಲಾಖೆಯಿಂದ 3,600 ಕಾನ್ಸ್ಟೇಬಲ್ ನೇಮಕಾತಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಪರಿಶೀಲನೆಯಲ್ಲಿದೆ. ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ಮಾಡಿಕೊಂಡು ಬರುತ್ತಿದೆ. ಸುಮಾರು 900 ಎಎಸ್ ಐ ನೇಮಕಾತಿ ಮಾಡಿದ್ದು, 10 ತಿಂಗಳ ತರಬೇತಿ ಪಡೆಯುತ್ತಿದ್ದಾರೆ. ಪೂರ್ಣಗೊಂಡ ನಂತರ ಹುದ್ದೆ ನೀಡಲಾಗುವುದು ಎಂದರು. ರಾಜ್ಯ ಸರ್ಕಾರದ ಬೇರೆ ಬೇರೆ ಇಲಾಖೆಯಲ್ಲಿ ನೇಮಕಾತಿ ಮತ್ತು ಮುಂಬಡ್ತಿ ಹುದ್ದೆಗಳು 50:50 ಅನುಪಾತದಲ್ಲಿದೆ, ಆದರೆ ಪೊಲೀಸ್ ಇಲಾಖೆಯಲ್ಲಿ 70:30 ಅನುಪಾತದಲ್ಲಿದೆ. ಯುವಕರು ಬರಬೇಕು ಎಂದು ಶೇ.70 ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.










