ಯುನೈಟೆಡ್ ಕಿಂಗಡಮ್‌ನ ನಾರ್ತ್ ವೇಲ್ಸ್‌ನ ಜೈಲಿನಲ್ಲಿ ಪುರುಷ ಕೈದಿಗಳೊಂದಿಗೆ ದೈಹಿಕ ಸಂಬಂಧ ಹಾಗೂ ಅವರಿಗೆ ಸಹಾಯ ಸೌಲಭ್ಯ ನೀಡಲು ನೆರವಾದ 18 ಮಹಿಳಾ ಗಾರ್ಡ್‌ಗಳನ್ನು ಕೆಲಸದಿಂದ ವಜಾ ಮಾಡಲಾಗಿದೆ. ಈ ಕುರಿತು ಸ್ಥಳೀಯ ನ್ಯಾಯಾಲಯ ತೀರ್ಪು ನೀಡಿದೆ ಎಂದು ಯುಕೆ ಡೈಲಿಪೋಸ್ಟ್ ವರದಿ ಮಾಡಿದೆ. ನಾರ್ತ್ ವೇಲ್ಸ್‌ನ ರೆಕ್ಸ್‌ಹ್ಯಾಮ್‌ನ ಎಚ್‌ಎಂಪಿ ಬರ್ವಿನ್‌ನ ಜೈಲಿನಲ್ಲಿ 18 ಮಹಿಳಾ ಗಾರ್ಡ್‌ಗಳು ಅನೇಕ ಪುರುಷ ಕೈದಿಗಳೊಂದಿಗೆ ದೈಹಿಕ ಸಂಬಂಧ ಹೊಂದಿದ್ದರು. ಅಲ್ಲದೇ ಪರಸ್ಪರ ವಾಟ್ಸಪ್‌ನಲ್ಲಿ ನಗ್ನಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದರು ಎಂದು ವರದಿಯಲ್ಲಿ ತಿಳಿಸಲಾಗಿದೆ. ಈ ಮಹಿಳಾ ಗಾರ್ಡ್‌ಗಳು ಕಳೆದ ಆರು ವರ್ಷದಿಂದ ಈ ರೀತಿಯ ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರೆಂದು ಆರೋಪಿಸಲಾಗಿದೆ. ಜೈಲಾಧಿಕಾರಿಗಳ ಅಸೋಸಿಯೇಷನ್‌ನ ಅಧ್ಯಕ್ಷ ಮಾರ್ಕ್ ಫೇರ್‌ಹರ್ಸ್ಟ್ ಅವರು ‘ಸರಿಯಾದ ಮಹಿಳೆಯರನ್ನು ಗಾರ್ಡ್‌ಗಳಾಗಿ ನೇಮಿಸಿಕೊಳ್ಳಲಾಗಿಲ್ಲ’ ಎಂದು ಆರೋಪಿಸಿದ್ದಾರೆ. ನೇಮಕಾತಿಯಾಗುತ್ತಿರುವ ಸಿಬ್ಬಂದಿಗೆ ಮುಖಾಮುಖಿ ಸಂದರ್ಶನಗಳಿಲ್ಲ. ಎಲ್ಲವನ್ನೂ ಆನ್‌ಲೈನ್‌ನಲ್ಲಿ ಮಾಡಲಾಗುತ್ತದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 2019 ರಿಂದ, ಇಂಗ್ಲೆಂಡ್ ಮತ್ತು ವೇಲ್ಸ್‌ನಲ್ಲಿ ಸುಮಾರು 31 ಮಹಿಳಾ ಜೈಲು ಅಧಿಕಾರಿಗಳನ್ನು, ಸಿಬ್ಬಂದಿಗಳನ್ನು…
Author: main-admin
ಮಂಗಳೂರು: ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ದಸ್ತಗಿರಿ ಮಾಡಿ 13 ಕೆಜಿ ಗಾಂಜಾವನ್ನು ಮಂಗಳೂರು ಸಿಸಿಬಿ ಪೊಲೀಸರು ಸ್ವಾಧೀನಪಡಿಸಿದ್ದಾರೆ. ಬಂಟ್ವಾಳ ಪಾಣೆಮಂಗಳೂರು ಅಲಡ್ಕ ನಿವಾಸಿ ಅಬ್ದುಲ್ ಸಾದಿಕ್ (35), ಬೆಳ್ತಂಗಡಿ ತಾಲೂಕು ಕಕ್ಕಿಂಜೆ ಗ್ರಾಮದ ನಿವಾಸಿ ನವಾಜ್(24) ಬಂಧಿತ ಆರೋಪಿಗಳು. ಮಾರ್ಚ್ 11ರಂದು ಸಂಜೆ ನಗರದ ಕಂಕನಾಡಿ ರೈಲ್ವೆ ಸ್ಟೇಷನ್ ನ ಅಳಪೆ ಪರಿಸರದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗಡೆಯವರ ನೇತೃತ್ವದ ಸಿಸಿಬಿ ಪೊಲೀಸರು ಗಾಂಜಾವನ್ನು ಹೊಂದಿದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇವರು ಆಂಧ್ರಪ್ರದೇಶದಿಂದ ಬೆಂಗಳೂರು ಮೂಲಕ ಮಂಗಳೂರಿಗೆ ಗಾಂಜಾವನ್ನು ಸಾಗಾಟ ಮಾಡುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ಪೊಲೀಸರು ಅವರಿಂದ 3.90 ಲಕ್ಷ ರೂ. ಮೌಲ್ಯದ 13 ಕೆ ಜಿ ಗಾಂಜಾ, 2 ಮೊಬೈಲ್ ಫೋನ್ ಗಳು, 5,610 ರೂ. ನಗದು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ…
ಉಪ್ಪಿನಂಗಡಿ;ಮನೆಗೆ ನುಗ್ಗಿ ಬಾಲಕಿಗೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. ಕಡಬ ಕೊಯಿಲ ಗ್ರಾಮದ ನಿವಾಸಿಗಳಾದ ಹಸೈನಾರ್ (24) ಹಾಗೂ ಅಬ್ಬಾಸ್ (30) ಬಂಧಿತ ಆರೋಪಿಗಳು. ಇವರು ಮರ ತುಂಡರಿಸುವ ಕೆಲಸದ ನಿಮಿತ್ತ ಕರಾಯ ಗ್ರಾಮದಲ್ಲಿ ಕೆಲಸ ಮಾಡುತ್ತಿದ್ದರು.ನೀರು ಕೇಳುವ ನೆಪದಲ್ಲಿ ಸಂತ್ರಸ್ತ ಬಾಲಕಿಯ ಮನೆಗೆ ಹೋಗಿದ್ದರು.ಮನೆಯಲ್ಲಿನಸ್ಥಿತಿಗತಿ ಗಮನಸಿದ ಹಸೈನಾರ್ ಶುಕ್ರವಾರ ಸಂಜೆ ಸಂತ್ರಸ್ತೆಯ ಮನೆಗೆ ಬಂದು ಬಾಲಕಿಯ ಕೈಗೆ ಚೀಟಿಯೊಂದನ್ನು ನೀಡಿ ಈ ನಂಬರಿಗೆ ಫೋನ್ ಮಾಡು ಎಂದು ಬೆದರಿಕೆ ಹಾಕಿ ಹೋಗಿದ್ದ ಎನ್ನಲಾಗಿದೆ. ಮರು ದಿನ ರಾತ್ರಿ 8 ಗಂಟೆಯ ಸುಮಾರಿಗೆ ದ್ವಿಚಕ್ರ ವಾಹನದಲ್ಲಿ ಅಬ್ಬಾಸ್ ಎಂಬಾತನೊಂದಿಗೆ ಬಂದ ಆರೋಪಿಯು ಮನೆಯ ಒಳಗೆ ಪ್ರವೇಶ ಮಾಡಿ, ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ಸ್ಥಳೀಯರ ಸಹಕಾರದಿಂದ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ.
ಉಪ್ಪಿನಂಗಡಿ: ನದಿಯಲ್ಲಿ ಸ್ನಾನ ಮಾಡಲೆಂದು ನೀರಿಗಿಳಿದ ಬಾಲಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ರವಿವಾರ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಳಿಯೂರಿನಲ್ಲಿ ಸಂಭವಿಸಿದೆ. ಮೂಲತಃ ಬಂಟ್ವಾಳ ತಾಲೂಕಿನ ಮಾಣಿ ನಿವಾಸಿ ದಿ| ಮಹಮ್ಮದ್ ತಾಹೀರ್ ಅವರ ಮಗ ಮಾಣಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಯಾಗಿದ್ದ ಮಹಮ್ಮದ್ ಸಲ್ಮಾನ್ (16) ಮೃತ ಬಾಲಕ. ಈತ ತನ್ನ ಸೋದರ ಸಂಬಂಧಿ ಬಾಲಕ ಮಹಮ್ಮದ್ ಇರ್ಫಾರ್ (16) ಜತೆಗೂಡಿ ಪೆರ್ನೆಯಲ್ಲಿನ ತನ್ನ ಚಿಕ್ಕಮ್ಮನ ಮನೆಗೆ ಬಂದಿದ್ದು, ನದಿಯಲ್ಲಿ ಸ್ನಾನ ಮಾಡುವ ಬಯಕೆಯಿಂದ ಬಿಳಿಯೂರಿನ ಅಣೆಕಟ್ಟಿನ ಬಳಿ ನದಿಗಿಳಿದಾತ ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿದ್ದಾನೆ. ಈತನ ಜತೆಗಿದ್ದ ಮಹಮ್ಮದ್ ಇರ್ಫಾರ್ ರಕ್ಷಿಸಲ್ಪಟ್ಟಿದ್ದಾನೆ.
ಕಲ್ಲಡ್ಕ; ಕಾರಿನೊಳಗೆ ಯುವಕನೋರ್ವ ಕುಳಿತ ಸ್ಥಿತಿಯಲ್ಲಿ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಗೋಳ್ತಮಜಲು ಗ್ರಾಮದ ನಿವಾಸಿ ಜಗದೀಶ್ ಮೃತಪಟ್ಟ ಯುವಕ. ಜಗದೀಶ್ ನಿನ್ನೆ ಬೆಳಿಗ್ಗೆ ತರವಾಡು ಮನೆಗೆ ಮಕ್ಕಳ ಜೊತೆ ದೈವದ ಕಾರ್ಯಕ್ಕೆ ಹೋಗಿದ್ದರು.ವಾಪಾಸು ಮನೆಗೆ ಬರುವ ವೇಳೆ ಕಲ್ಲಡ್ಕ ಬಳಿ 2 ಗಂಟೆ ಸುಮಾರಿಗೆ ಕಾರು ಚಲಾಯಿಸಲು ಕಷ್ಟವಾಗುತ್ತಿದೆ ಎಂದು ಬಾವನಲ್ಲಿ ಹೇಳಿದ್ದು ನಾನು ಮತ್ತೆ ಮನೆಗೆ ಬರುತ್ತೇನೆ ನೀವು ಮಕ್ಕಳ ಜೊತೆ ಮನೆಗೆ ಹೋಗಿ ಎಂದು ಕಳುಹಿಸಿ ಕಾರಿನ ಸೀಟಿನಲ್ಲಿಯೇ ಮಲಗಿದ್ದರು. ಆದರೆ ರಾತ್ರಿ 7 ಗಂಟೆಯಾದರೂ ಈತ ಮನೆಗೆ ಬಾರದ ಹಿನ್ನೆಲೆಯಲ್ಲಿ ಮತ್ತೆ ಬಂದು ನೋಡಿದಾಗ ಕಾರಿನ ಸೀಟಿನಲ್ಲಿ ಜಗದೀಶ್ ಕುಳಿತು ಮಲಗಿದ ಸ್ಥಿತಿಯಲ್ಲಿರುವುದು ಹೊರಗಿನಿಂದ ಕಂಡುಬಂದಿದೆ.ಕಾರಿನ ಡೋರ್ ತೆಗೆದು ನೋಡಿದಾಗ ಜಗದೀಶ್ ಮೃತಪಟ್ಟಿರುವುದು ಕಂಡು ಬಂದಿದೆ. ಜಗದೀಶ್ ಹೃದಯಾಘಾತ ಸಂಭವಿಸಿದೆಯಾ? ಅಥವಾ ಗಾಳಿ ಸಮಸ್ಯೆ ಉಂಟಾಗಿದೆಯಾ? ಎಂದು ಸಾವಿಗೆ ಕಾರಣ ತನಿಖೆಯಿಂದ ತಿಳಿದು ಬರಬೇಕಿದೆ.
ಗೋರಖ್‌ಪುರ: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ 62 ವರ್ಷದ ತಂದೆಯನ್ನು ಕೊಂದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಆರೋಪಿಯ ತಂದೆ ಮುರಳಿ ಧಾರ್ ಗುಪ್ತಾ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಸಂತೋಷ್ ಕುಮಾರ್ ಗುಪ್ತಾ ಅಲಿಯಾಸ್ ಪ್ರಿನ್ಸ್ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆರೋಪಿ ತನ್ನ ತಂದೆಯನ್ನು ಸುತ್ತಿಗೆಯಿಂದ ಹೊಡೆದು ಕೊಂದಿದ್ದಾನೆ. ನಂತ್ರ, ದೇಹವನ್ನು ತುಂಡರಿಸಿ ಸೂಟ್‌ಕೇಸ್‌ಗೆ ತುಂಬಿ ಮನೆಯ ಹಿಂದಿನ ರಸ್ತೆಯಲ್ಲಿ ಬಚ್ಚಿಟ್ಟಿದ್ದ. ಆರೋಪಿಯ ಸಹೋದರ ಪ್ರಶಾಂತ್ ಗುಪ್ತಾ ಪೊಲೀಸರಿಗೆ ದೂರು ನೀಡಿದ ನಂತರ ಪೊಲೀಸರು ಭಾನುವಾರ ಪ್ರಕರಣ ದಾಖಲಿಸಿದ್ದಾರೆ. ಕುಟುಂಬದಲ್ಲಿನ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎಂದು ಅವರು ಹೇಳಿದ್ದಾರೆ. ಆರೋಪಿಯ ಸಹೋದರನ ಮಾಹಿತಿಯ ಮೇರೆಗೆ, ಪೊಲೀಸರು ದೇಹದ ಭಾಗಗಳನ್ನು ವಶಪಡಿಸಿಕೊಂಡರು ಮತ್ತು ಅವುಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ಅಧಿಕಾರಿ ಹೇಳಿದರು. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಸೌದಿಅರೇಬಿಯಾ: ಉಮ್ರಾ ನೆರವೇರಿಸಲು ಹೋಗಿದ್ದ ಉಡುಪಿಯ ಇಬ್ಬರು ಮಹಿಳೆಯರು ಅನಾರೋಗ್ಯದಿಂದ ಮೃತಪಟ್ಟ ಘಟನೆ ಸೌದಿ ಅರೇಬಿಯಾದ ಮೆಕ್ಕಾದಲ್ಲಿ ನಡೆದಿದೆ. ಬ್ರಹ್ಮಾವರದ ಮರಿಯಮ್ಮ(66) ಮಾ.9 ರಂದು ಹೃದಯಾಘಾತದಿಂದ ಮೃತಪಟ್ಟರೆ, ಅಚ್ಲಾಡಿಯ ಖತಿಜಮ್ಮ (68) ಮಾರ್ಚ್ 11 ರಂದು ಅನಾರೋಗ್ಯದಿಂದ ಮೃತಪಟ್ಟರು ಎಂದು ತಿಳಿದು ಬಂದಿದೆ. ಇಬ್ಬರ ಮೃತದೇಹವನ್ನು ಮೆಕ್ಕಾದಲ್ಲಿ ಧಪನ ಮಾಡಲಾಗಿದೆ ಎಂದು ತಿಳಿದುಬಂದಿದೆ. ಮಂಗಳೂರಿನ ಟ್ರಾವೆಲ್ ಏಜೆನ್ಸಿ ವತಿಯಿಂದ 23 ಮಹಿಳೆಯರು ಹಾಗೂ 11 ಪುರುಷರು ಸೇರಿ 34 ಮಂದಿಯ ತಂಡವು ಮಾರ್ಚ್ 1ರಂದು ಮಂಗಳೂರಿನಿಂದ ಉಮ್ರಾ ನೆರವೇರಿಸಲು ಮೆಕ್ಕಾಗೆ ತೆರಳಿದ್ದರು.
ಮಂಡ್ಯ: ಮಂಡ್ಯ ತಾಲೂಕಿನ ಹನಕೆರೆ ಗ್ರಾಮದ ಬಳಿ 118 ಕಿ.ಮೀ. ಉದ್ದದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇಯನ್ನು ಪ್ರಧಾನಿ ಮೋದಿ ಅಧಿಕೃತವಾಗಿ ಉದ್ಘಾಟನೆ ಮಾಡಿದ್ದಾರೆ. ಮಂಡ್ಯದ ಗೆಜ್ಜಲಗೆರೆಯಲ್ಲಿ ಬಿಜೆಪಿ ಬೃಹತ್ ಸಮಾವೇಶ ನಡೆಸಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಭಾಷಣ ಆರಂಭಿಸಿದ್ದಾರೆ. ತಾಯಿ ಭುವನೇಶ್ವರಿಗೆ ನಮಸ್ಕಾರಗಳು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ನಿಮ್ಮ ಪ್ರೀತಿಯ ಋಣವನ್ನು ಬಡ್ಡಿ ಸಮೇತ ನಮ್ಮ ಸರ್ಕಾರ ತೀರಿಸಲಿದೆ. ಕೆಲವು ದಿನಗಳಿಂದ ಎಕ್ಸ್ ಪ್ರೆಸ್ ಹೈವೇ ಬಗ್ಗೆ ಸಾಕಷ್ಟ ಚರ್ಚೆ ನಡೆಯುತ್ತಿತ್ತು. ಸಾಮಾಜಿಕ ಜಾಲತಾಣದಲ್ಲಿ ದಶಪಥ ಹೆದ್ದಾರಿ ಬಗ್ಗೆ ಚರ್ಚೆ ನಡೆಯುತ್ತಿದ್ದವು. ಮೈಸೂರು- ಬೆಂಗಳೂರು ಎಕ್ಸ್ ಪ್ರೆಸ್ ಹೈವೇ ಫೋಟೋಗಳು ವೈರಲ್ ಆಗಿದೆ. ಮೈಸೂರು-ಕುಶಾಲನಗರ 4 ಪಥದ ರಸ್ತೆಗೆ ಶಿಲಾನ್ಯಾಸ ನೆರೆವೇರಿಸಿದ್ದೇವೆ ಎಂದರು. ಇನ್ನು ದಶಪಥ ಹೆದ್ದಾರಿಯಿಂದ ಈ ಭಾಗದಲ್ಲಿ ಸಾಕಷ್ಟು ಅನುಕೂಲವಾಗಲಿದೆ. ಈ ಪುಣ್ಯ ಭೂಮಿಯಲ್ಲಿ ಒಡೆಯರ್ , ವಿಶ್ವೇಶ್ವರಯ್ಯರನ್ನು ದೇಶಕ್ಕೆ ನೀಡಿದೆ. ಭಾರತ ಇಂದು ಸಾಕಷ್ಟು ಬದಲಾವಣೆ ಆಗುತ್ತಿದೆ. ಭಾರತ ಮಾಲಾ,…
ನವದೆಹಲಿ: ಧಾರ್ಮಿಕ ಕಟ್ಟಡಗಳ ಮೇಲೆ ನಡೆಯುವ ಯಾವುದೇ ತೀವ್ರವಾದ ಕ್ರಮಗಳು ಮತ್ತು ದಾಳಿಗಳನ್ನು ಆಸ್ಟ್ರೇಲಿಯಾ ಸಹಿಸುವುದಿಲ್ಲ ಮತ್ತು ಹಿಂದೂ ದೇವಾಲಯಗಳ ವಿರುದ್ಧ ಅಂತಹ ಕ್ರಮಕ್ಕೆ ಯಾವುದೇ ಸ್ಥಾನವಿಲ್ಲಎಂದು ಪ್ರಧಾನ ಮಂತ್ರಿ ಆಂಟನಿ ಅಲ್ಬನೀಸ್ ಹೇಳಿದ್ದಾರೆ. ಕಳೆದ ಕೆಲವು ದಿನಗಳಿಂದ ಆಸ್ಟ್ರೇಲಿಯಾದಲ್ಲಿ ಹಿಂದೂ ದೇವಾಲಯಗಳನ್ನು ಗುರಿಯಾಗಿಸಲಾಗುತ್ತಿದೆ. ಪ್ರಧಾನಿ ಮೋದಿ ಅವರು ಶನಿವಾರ (ಮಾರ್ಚ್ 11) ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಿದರು. ಈ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಕೂಡ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ʻಆಸ್ಟ್ರೇಲಿಯಾ ಜನರ ನಂಬಿಕೆಯನ್ನು ಗೌರವಿಸುವ ದೇಶ. ನಾವು ತೀವ್ರವಾದ ಕ್ರಮಗಳು ಮತ್ತು ದಾಳಿಗಳನ್ನು ಸಹಿಸುವುದಿಲ್ಲ. ನಾವು ಹಿಂದೂ ದೇವಾಲಯಗಳು, ಮಸೀದಿಗಳು, ಸಿನಗಾಗ್‌ಗಳು ಅಥವಾ ಚರ್ಚ್‌ಗಳ ಮೇಲೆ ಧಾರ್ಮಿಕ ಕಟ್ಟಡಗಳನ್ನು ನೋಡಿದ್ದೇವೆ. ಆಸ್ಟ್ರೇಲಿಯಾದಲ್ಲಿ ಧರ್ಮಾಂಧತೆಗೆ ಸ್ಥಾನವಿಲ್ಲʼ ಎಂದಿದ್ದಾರೆ. ನಾವು ಅದನ್ನು ಖಚಿತಪಡಿಸಿಕೊಳ್ಳಲು ನಮ್ಮ ಪೊಲೀಸ್ ಮತ್ತು ನಮ್ಮ ಭದ್ರತಾ ಏಜೆನ್ಸಿಗಳ ಮೂಲಕ ನಾವು ಪ್ರತಿ…
ಬೆಳ್ತಂಗಡಿ: ಮಿಯಾರು ಮೀಸಲು ಅರಣ್ಯ ಸಹಿತ ಶಿಬಾಜೆಯಲ್ಲಿ ವಾರದಿಂದ ಸುಡುತ್ತಿದ್ದ ಕಾಳ್ಗಿಚ್ಚು ಶಾಂತರೂಪ ಪಡೆದಿದೆ. ಆದರೆ ಮತ್ತೆ ಅರಣ್ಯವನ್ನು ಆಹುತಿ ಪಡೆಯುವ ಮುನ್ನ ಗೋವಾದ ನೌಕಾಪಡೆ ತಂಡವು ಅರಣ್ಯ ಸಮೀಕ್ಷೆ ನಡೆಸಿ ಜಿಲ್ಲಾ ಕೇಂದ್ರದಲ್ಲಿ ಬೆಂಕಿ ನಂದಿಸಲು ಕನಿಷ್ಠ 2 ಹೆಲಿಕಾಪ್ಟರ್‌ಗಳನ್ನು ನಿಯೋಜಿಸುವಂತೆ ಸಾರ್ವಜನಿಕ ವಲಯದಿಂದ ಆಗ್ರಹ ಕೇಳಿಬಂದಿದೆ. ಕುದುರೆಮುಖ ವನ್ಯಜೀವಿ ವಿಭಾಗ ಸಹಿತ ಶಿಶಿಲ, ಶಿಬಾಜೆ, ಮಿಯಾರು, ಸವಣಾಲು, ಶಿರ್ಲಾಲು ವ್ಯಾಪ್ತಿಯ ಮೇಲ್ಭಾಗದ ಅರಣ್ಯ ಬೆಂಕಿಯ ಜ್ವಾಲೆಗೆ ಅಕ್ಷ ರಶಃ ಸುಟ್ಟು ಕರಕಲಾಗಿದೆ. ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳ, ಸ್ಥಳೀಯ ತಂಡಗಳ ನಿರಂತರ ಕಾರ್ಯಾ ಚರಣೆಯಿಂದ ಬೆಂಕಿ ಶಮನದ ಹಂತದಲ್ಲಿದೆ. ಹೆಲಿಕಾಪ್ಟರ್ ಬಳಕೆ: ಅಭಿಯಾನ ಮುಂದುವರಿಕೆಮಂಗಳೂರು: ಹೆಲಿಕಾಪ್ಟರ್ ಬಳಸಿ ಕಾಳ್ಗಿಚ್ಚು ನಂದಿಸುವಂತೆ ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಮುಂದುವರಿದಿದೆ. ಈ ಕುರಿತು ಮಾ. 10ರಂದು “ಉದಯವಾಣಿ’ ವರದಿ ಮಾಡಿದ್ದು, ಬಹಳಷ್ಟು ಮಂದಿ ವರದಿಯನ್ನು ಟ್ವೀಟ್ ಮಾಡಿದ್ದರು. ಪ್ರಧಾನಿ ಮತ್ತು ಮುಖ್ಯಮಂತ್ರಿ ಕಚೇರಿಗೂ ಟ್ಯಾಗ್ ಮಾಡಿದ್ದರು. ಸಿಎಂ ಕಚೇರಿ ಯಿಂದಲೇ ಈ ಕುರಿತು…