ಮಂಗಳೂರು: ಪೊಲೀಸ್ ಎಂದು ಹೇಳಿಕೊಂಡು ಮಹಿಳೆಗೆ ಬೆದರಿಕೆ ಹಾಕಿ ಹಣ ಪಡೆದು ವಂಚನೆ ಎಸಗಿದ ಆರೋಪಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಕಾವೂರು ಈಶ್ವರನಗರ ಸರಕಾರಿ ಗುಡ್ಡೆಯ ಶಿವರಾಜ್ ದೇವಾಡಿಗ ಬಂಧಿತ ಆರೋಪಿ. ಈತ ಮಹಿಳೆಯೊಬ್ಬರಿಗೆ ಬೆದರಿಕೆ ಹಾಕಿ ಹಣ ಪಡೆದು ವಂಚಿಸಿದ್ದ. ನೀವು ಮಸಾಜ್ ಪಾರ್ಲರ್ ನಡೆಸುತ್ತಿರುವುದುಕ್ಕೆ ಹಾಗೂ ಹಣ, ಬಂಗಾರ ಹೆಚ್ಚು ಇರಿಸಿಕೊಂಡಿರುವ ವಿಚಾರವಾಗಿ ನಮಗೆ ದೂರು ಬಂದಿದೆ. ಪ್ರಕರಣವನ್ನು ಮುಚ್ಚಿ ಹಾಕಬೇಕಾದರೆ ಹಣ ನೀಡಬೇಕು. ಇಲ್ಲವಾದಲ್ಲಿ ನಿಮ್ಮ ಪಾರ್ಲರ್ ಮತ್ತು ಮನೆಗೆ ದಾಳಿ ನಡೆಸಲಾಗುವುದು ಎಂದು ಬೆದರಿಕೆ ಹಾಕಿದ್ದ.ಅಲ್ಲದೆ ಮಹಿಳೆಗೆ ಬೆದರಿಕೆ ಹಾಕಿ ಆಕೆಯಿಂದ 38 ಸಾವಿರ ರೂಪಾಯಿಗಳನ್ನು ಪಡೆದುಕೊಂಡಿದ್ದಾನೆ. ಘಟನೆ ಸಂಬಂಧ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತ ಈ ಹಿಂದೆ ಗೃಹರಕ್ಷದ ದಳದಲ್ಲಿ ಕರ್ತವ್ಯ ನಿರ್ವಹಿಸಿದ್ದು, ಅದೇ ಸಮವಸ್ತ್ರ ಧರಿಸಿ ಮಹಿಳೆಗೆ ಬೆದರಿಕೆ ಹಾಕಿ ಪೊಲೀಸ್ ಎಂದು ನಂಬಿಸಿದ್ದ ಎಂದು ತಿಳಿದು ಬಂದಿದೆ.
Author: main-admin
ಘಾಜಿಯಾಬಾದ್ : ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯಲ್ಲಿ ಪತ್ನಿಯೊಂದಿಗೆ ಜಗಳವಾಡಿದ ಬಳಿಕ ವ್ಯಕ್ತಿಯೊಬ್ಬ ಮನೆಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಮನೆಯಲ್ಲಿದ್ದವರಿಗೆ ಏನಾಗ್ತಿದೆ ಎಂದು ಅರ್ಥವಾಗುವಷ್ಟರಲ್ಲಿ ಬೆಂಕಿ ದೈತ್ಯ ರೂಪ ಪಡೆದಿದೆ. ಅಪಘಾತದಲ್ಲಿ 10 ಜನರಿಗೆ ಸುಟ್ಟ ಗಾಯಾಗಳಾಗಿದ್ದು, ಸುತ್ತಮುತ್ತಲಿನವರು ಪೊಲೀಸ್ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೇ ಸಮಯದಲ್ಲಿ, ಪೊಲೀಸ್ ತಂಡದ ಸಹಾಯದಿಂದ, ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಲಾಯಿತು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರ ಪ್ರಕಾರ, ನಿನ್ನೆ ತಡರಾತ್ರಿ ಲೋಣಿ ಪ್ರದೇಶದ ತಿಲಕ್ ನಗರ ಕಾಲೋನಿಯಲ್ಲಿ ಸುರೇಶ್ (40) ಎಂಬುವರ ಪತ್ನಿ ರಿತು (36) ಅವರೊಂದಿಗೆ ಜಗಳವಾಡಿದ್ದಾರೆ. ಸುರೇಶ್ ತನ್ನ ಪತ್ನಿಯನ್ನ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದು, ಕೋಪದ ಭರದಲ್ಲಿ ಸ್ಟವ್ನಿಂದ ಎಲ್ಪಿಜಿ ಗ್ಯಾಸ್ ಪೈಪ್ ಎಳೆದಿದ್ದಾನೆ, ಅದು ಕೊಠಡಿಯಲ್ಲಿ ಗ್ಯಾಸ್ ತುಂಬಿವಂತೆ ಮಾಡಿತ್ತು. ಗ್ಯಾಸ್ ಲೈಟರ್ ಹೊತ್ತಿಸಿದ್ದೇ ಬೆಂಕಿ ಹೊತ್ತಿಕೊಂಡಿತು.!ಕೊಠಡಿಗೆ ಗ್ಯಾಸ್ ತುಂಬಿಸುವಾಗ, ರಿತು ಸಹಾಯಕ್ಕಾಗಿ ಕೂಗಿದ್ದು,…
ಮಂಗಳೂರು: ನಗರದಿಂದ ಹೊರಟಿದ್ದ ಸರಕು ಸಾಗಾಟದ ರೈಲಿನ ಗ್ಯಾಸ್ ಟ್ಯಾಂಕ್‌ನಿಂದ ಅನಿಲ ಸೋರಿಕೆಯಾದ ಅನುಮಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಜೋಕಟ್ಟೆ ಬಳಿ ರೈಲ್ವೆ ಹಳಿ ಸುತ್ತಮುತ್ತ ಜನಸಂಚಾರ ನಿರ್ಬಂಧ ಮಾಡಲಾಗಿರುವ ಘಟನೆ ಶುಕ್ರವಾರ ಸಂಜೆ ವೇಳೆಗೆ ನಡೆದಿದೆ. ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ (ಹೆಚ್‌ಪಿಸಿ) ಲಿಮಿಟೆಡ್‌ನಿಂದ ರೈಲು ಗ್ಯಾಸ್ ಟ್ಯಾಂಕರ್‌ಗಳಲ್ಲಿ ಅನಿಲ ತುಂಬಿಸಿ ಕಳುಹಿಸಲಾಗಿತ್ತು. ಆದರೆ ರೈಲು ಏಳು ಕಿ.ಮೀ. ತಲುಪಿದ ಬಳಿಕ ಗ್ಯಾಸ್ ಸೋರಿಕೆಯ ಬಗ್ಗೆ ಅನುಮಾನ ವ್ಯಕ್ತವಾಗಿದೆ. ರೈಲು ವಾಪಸ್ ಹೆಚ್ ಪಿಸಿಎಲ್‌ಗೆ ಆಗಮಿಸಿದೆ. ಗ್ಯಾಸ್ ಸೋರಿಕೆಯಾದ ಅನುಮಾನದ ಹಿನ್ನಲೆಯಲ್ಲಿ ಜೋಕಟ್ಟೆ ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿತ್ತು. ಅಲ್ಲದೆ ರೈಲ್ವೆ ಗೇಟ್ ಬಳಿ ಅಗ್ನಿಶಾಮಕ ವಾಹನ ನಿಯೋಜನೆ ಮಾಡಲಾಗಿದ್ದು, ರೈಲ್ವೆ ಹಳಿ ಸುತ್ತಮುತ್ತಲೂ ನಾಗರಿಕರು ಬಾರದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗಿದೆ. ಘಟನೆಯಿಂದ ಜೋಕಟ್ಟೆ ಪ್ರದೇಶದ ಜನರು ಆತಂಕಿತರಾಗಿದ್ದರು.
ಮಂಗಳೂರು; ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿರುವ ಕಾರಣ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ನಿಟ್ಟಿನಲ್ಲಿ ಗಮನ ಹರಿಸಿರುವ ದ.ಕ ಜಿಲ್ಲಾಧಿಕಾರಿ ರವಿ ಕುಮಾರ್ ಅಪರಾಧ ಹಿನ್ನೆಲೆಯುಳ್ಳ ಹನ್ನೊಂದು ಮಂದಿಯನ್ನು 6 ತಿಂಗಳ ಕಾಲ ದ.ಕ.ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯ ಆಧಾರದ ಮೇಲೆ ತನಿಖೆ ನಡೆಸಿರುವ ಜಿಲ್ಲಾಧಿಕಾರಿ, ಅಪರಾಧ ಪ್ರವೃತ್ತಿಯುಳ್ಳ, ಸಮಾಜದ ಸ್ವಾಸ್ಥ್ಯಕ್ಕೆ ಗಂಡಾಂತರಕಾರಿಯಾಗಿರುವ ಆರೋಪದಲ್ಲಿ ಇವರನ್ನು ಗಡಿಪಾರು ಮಾಡಿದ್ದಾರೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಜಯರಾಜ್ ರೈ ಯಾನೆ ಜಯರಾಜ ಶೆಟ್ಟಿ, ಪುತ್ತೂರು ನಗರ ಠಾಣಾ ವ್ಯಾಪ್ತಿಯ ಇಬ್ರಾಹಿಂ ಯಾನೆ ಇಬ್ಬಿ , ಹಕೀಂ ಕೂರ್ನಡ್ಕ ಯಾನೆ ಅಬ್ದುಲ್, ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಅಬೂಬಕ್ಕರ್ ಸಿದ್ದೀಕ್ ಯಾನೆ ಜೆಸಿಬಿ ಸಿದ್ದೀಕ್ ಯಾನೆ ಸಿದ್ದೀಕ್ 34ನೆಕ್ಕಿಲಾಡಿ, ಉಬೈದ್ ಬಿ.ಎಸ್.ಯಾನೆ ಉಬೈದ್ ಕುಪ್ಪೆಟ್ಟಿ, , ತಸ್ಲೀಂ ಯಾನೆ ತಸಲೀಂ ತಣ್ಣೀರುಪಂಥ, ಬೆಳ್ಳಾರೆ ಠಾಣಾ ವ್ಯಾಪ್ತಿಯ ರೋಷನ್, ಪ್ರಸಾದ್…
ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಸಂಸದ ಆರ್. ಧ್ರುವ ನಾರಾಯಣ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಹಠಾತ್ ಹೃದಯಾಘಾತ ಸಂಭವಿಸಿದ ಕೂಡಲೇ ಅವರನ್ನು ಮೈಸೂರಿನ ಡಿಆರ್ಎಂಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ. 1961 ಜುಲೈ 31ರಂದು ಚಾಮರಾಜನಗರ ಜಿಲ್ಲೆಯ ಹೆಗ್ಗವಾಡಿ ಗ್ರಾಮದಲ್ಲಿ ಜನನಿಸಿದ್ದ ಧ್ರುವನಾರಾಯಣ, ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಬಿಎಸ್ಸಿ ಕೃಷಿ ಪದವಿ ಪಡೆದುಕೊಂಡಿದ್ದರು. ನಂತರ ಸ್ನಾತಕೋತ್ತರ ಪದವಿ ಪಡೆದು, 1983ರಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದರು. 2004ರಲ್ಲಿ ಸಂತೇಮರಹಳ್ಳಿ ವಿಧಾನ ಸಭಾ ಕ್ಷೇತ್ರ ಹಾಗೂ 2008ರಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳಿಂದ ಸತತ ಎರಡು ಬಾರಿ ಶಾಸಕರಾಗಿ ಜಯ ಗಳಿಸಿದ್ದರು. 1999ರಲ್ಲಿ ಸಂತೇಮರಹಳ್ಳಿ ಕ್ಷೇತ್ರದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಎ.ಆರ್. ಕೃಷ್ಣಮೂರ್ತಿ ಅವರ ಎದುರು ಪರಾಜಿತರಾದರು. ಆದರೆ ಇದೇ ಕೃಷ್ಣಮೂರ್ತಿ ಅವರನ್ನು 2004ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 1 ಮತದಿಂದ ಧೃವನಾರಾಯಣ ಸೋಲಿಸಿದ್ದರು. ಹಾಗೆಯೇ 2009 ಹಾಗೂ 2014ರ ಲೋಕಸಭಾ ಚುನಾವಣೆಯಲ್ಲಿ ಕೂಡ ಕೃಷ್ಣಮೂರ್ತಿ ಅವರನ್ನು ಸೋಲಿಸಿ…
ಬೆಂಗಳೂರು : 5 ಮತ್ತು 8 ನೇ ತರಗತಿಯ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಈ ಬಾರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ರಾಜ್ಯದ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ನಡೆಸಲು ನಿರ್ಧರಿಸಿತ್ತು, ಆದರೆ ಇದೀಗ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್ ಪರೀಕ್ಷೆ ರದ್ದುಗೊಳಿಸಿ ಆದೇಶ ಹೊರಡಿಸಿದೆ.ಮುಂದಿನ ವರ್ಷದಿಂದ ಪರೀಕ್ಷೆ ನಡೆಸಬಹುದು, ಆಯಾ ನಿಯಮಗಳಿಗನುಸಾರವಾಗಿ ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. 2022-23ನೇ ಸಾಲಿನಿಂದ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿತ್ತು, ರಾಜ್ಯ ಪಠ್ಯಕ್ರಮವನ್ನು ಅನುಸರಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿತ್ತು, ಶಿಕ್ಷಣ ಇಲಾಖೆಗೆ ನಿರ್ಧಾರಕ್ಕೆ…
ಕೇರಳ: ದೇಶದೆಲ್ಲೆಡೆ ತಾಪಮಾನ ಭಾರೀ ಏರಿಳಿತಗೊಂಡಿದ್ದು ಇದೀಗ ಪ್ರವಾಸಿ ತಾಣಗಳಲ್ಲಿ ಒಂದಾಗ ಕೇರಳದಲ್ಲೂ ತಾಪಮಾನ ದಾಖಲೆ ಮಟ್ಟದಲ್ಲಿ ಹೆಚ್ಚಳವಾಗಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ. ಚಳಿಗಾಲದಲ್ಲಿ ಭಾರೀ ಚಳಿಯಲ್ಲಿದ್ದ ಜನರಿಗೆ ಇದೀಗ ಬೇಸಿಗೆಯ ಬಿಸಿಲಿನ ತಾಪಕ್ಕೆ ದಿಢೀರ್ ಏರಿಕೆ ಗೊಂಡಿದ್ದು,ತಿರುವನಂತಪುರಂ, ಕೊಲ್ಲಂ, ಕೊಟ್ಟಾಯಂ,ಕೋಳಿಕ್ಕೋಡ್, ಕಣ್ಣೂರಿನಲ್ಲಿ 45-54 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು ಎಂದು ವರದಿಯಾಗಿದೆ.ಕರಾವಳಿ ಭಾಗದಲ್ಲಿ ಕೂಡ ಶಾಖದ ಹೆಚ್ಚಾಗಿದ್ದು, ಹವಮಾನ ಇಲಾಖೆ ಈಗಾಗಲೇ ಎಚ್ಚರಿಕೆ ಸಂದೇಶವನ್ನು ನೀಡಿದೆ. ಬೇಸಿಗೆಯ ಬಿಸಿಲಿಗೆ ಮೈಒಡ್ಡುವುದರಿಂದ ಆರೋಗ್ಯ ಸಮಸ್ಯೆಗಳು ಕಾಡುವುದು ಸಹಜವಾಗಿದೆ. ವಿಶೇಷವಾಗಿ ಮಧ್ಯಾಹ್ನ 12.00 ರಿಂದ 3.00 ರವರೆಗೆ ತಾಪಮಾನ ಭಾರೀ ಹೆಚ್ಚಾಗಿರುತ್ತದೆ. ನಗರದಲ್ಲಿ ಓಡಾಡುವ ಜನರು ಬಿರುಬಿಸಿಲಿಗೆ ತತ್ತರಿಸಿ ಹೋಗಿದ್ದಾರೆ. ಈ ನಿಟ್ಟಿನಲ್ಲಿ ಜನರು ಮನೆಯಿಂದ ಆಚೆ ತೆರಳುವಾಹ ಕೆಲವೊಂದು ಎಚ್ಚರಿಕೆ ಕ್ರಮಗಳನ್ನು ಅನುಸರಿಸುವುದು ಅತ್ಯಗತ್ಯವಾಗಿದೆ .ಯತ್ತೇಚ್ಚವಾಗಿ ನೀರು ಕುಡಿಯುವುದನ್ನು ರೂಢಿಸಿಕೊಳ್ಳಿ, ಜತೆಗೆ ಹಣ್ ಹಂಪಲುಗಳನ್ನು ಸೇವಿಸು ಆಯಾಸವನ್ನು ತಪ್ಪಿಸಬಹುದಾಗಿದೆ.
ಕಾಸರಗೋಡು: ಕಸಾಯಿಖಾನೆಗೆಂದು ತಂದ ಎಮ್ಮೆಯೊಂದು ರೊಚ್ಚಿಗೆದ್ದು ಯುವಕನನ್ನು ತಿವಿದು ಬಲಿ ಪಡೆದುಕೊಂಡ ಘಟನೆ ಗುರುವಾರ ಸಂಜೆ ಕಾಸರಗೋಡಿನ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ. ಮೃತನನ್ನು ಮೊಗ್ರಾಲ್ ಪುತ್ತೂರಿನಲ್ಲಿ ಕೆಲಸ ಮಾಡುತ್ತಿದ್ದ ಚಿತ್ರದುರ್ಗ ಮೂಲದ ಸಾದಿಕ್ (22) ಎಂದು ಗುರುತಿಸಲಾಗಿದೆ. ಮೊಗ್ರಾಲ್ ಪುತ್ತೂರಿನ ಕಸಾಯಿಖಾನೆಗೆ ತರಲಾಗಿದ್ದ ಎಮ್ಮೆಯನ್ನು ವಾಹನದಿಂದ ಇಳಿಸುವಾಗ ಹಗ್ಗ ತುಂಡಾಗಿ ಎಮ್ಮೆ ತಪ್ಪಿಸಿಕೊಂಡಿದೆ. ಓಡುತ್ತಿರುವ ಎಮ್ಮೆಯನ್ನು ಹಿಡಿಯಲು ಪ್ರಯತ್ನಿಸುತ್ತಿದ್ದಾಗ ಸಾದಿಕ್ ಗೆ ಎಮ್ಮೆ ಕೊಂಬಿನಿಂದ ಹೊಟ್ಟೆ ಭಾಗಕ್ಕೆ ಚುಚ್ಚಿದೆ. ಗಂಭೀರ ಗಾಯಗೊಂಡ ಯುವಕನನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ. ಎಮ್ಮೆ ಮೊಗ್ರಾಲ್ ಪುತ್ತೂರಿನಿಂದ ಮೊಗ್ರಲ್ ಹತ್ತಿರದ ಪ್ರದೇಶಕ್ಕೆ ಓಡಿ ಅಲ್ಲಿಯೂ ದಾಳಿ ಮಾಡಿದೆ. ಈ ವೇಳೆ ಎರಡು ಅಂಗಡಿಗಳಿಗೆ ಹಾನಿಯಾಗಿದೆ. ಸುಮಾರು 25 ಜನರನ್ನು ಕೊಂಬಿನಿಂದ ಚುಚ್ಚಿ ಗಾಯಗೊಳಿಸಿದೆ ಎಂದು ತಿಳಿದು ಬಂದಿದೆ. ರೊಚ್ಚಿಗೆದ್ದ ಎಮ್ಮೆಯನ್ನು ಹತೋಟಿಗೆ ತರಲು ಸ್ಥಳೀಯರಿಗೆ ಸಾಧ್ಯವಾಗದೇ, ಕೊನೆಗೆ ಪೊಲೀಸರು ಮತ್ತು ಅಗ್ನಿಶಾಮಕದಳದ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಸೆರೆ ಹಿಡಿದರು.
ಮಂಗಳೂರು: ಗಾಂಜಾ ಸೇವಿಸಿ ನಶೆಯಲ್ಲಿದ್ದ ಇಬ್ಬರನ್ನು ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿದ್ದಾರೆ. ಕೇರಳ ರಾಜ್ಯದ ಕಣ್ಣೂರು ಅಲಿಕೋಡೆ ನಿವಾಸಿ ಮುಹಮ್ಮದ್ ಅಸ್ಕರ್ (26) ಎಂಬಾತ ಮಾದಕ ಸೇವನೆ ಪ್ರಕರಣದಲ್ಲಿ ಮಂಗಳೂರು ಪೊಲೀಸರಿಗೆ ಬೇಕಾಗಿದ್ದ. ಈತನನ್ನು ಕೇರಳದಲ್ಲಿ ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದರು. ಈ ವೇಳೆಯೂ ಆತ ಗಾಂಜಾ ನಶೆಯಲ್ಲಿರುವುದು ಪೊಲೀಸರ ಗಮನಕ್ಕೆ ಬಂದಿದೆ. ತಕ್ಷಣ ವೈದ್ಯಕೀಯ ತಪಾಸಣೆ ನಡೆಸಿದಾಗ ಮಾದಕ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಅಡ್ಯಾರ್ ಕಣ್ಣೂರು ಬಳಿಯ ಕೊಡಕ್ಕಲ್ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ವ್ಯಕ್ತಿಯೋರ್ವನು ನಿಂತುಕೊಂಡಿದ್ದ. ಈತನನ್ನು ಕಂಕನಾಡಿ ಪೊಲೀಸರು ವಶಕ್ಕೆ ಪಡೆದು ವಿಚಾರಿಸಿದಾಗ ಗಾಂಜಾ ಸೇವನೆ ಮಾಡಿರುವುದು ಪತ್ತೆಯಾಗಿದೆ. ಆಲ್ವಿನ್ ಸಿಕ್ವೆರಾ (37) ಎಂಬ ಹೆಸರಿನ ಈತ ಬಿಜೈ ಆನೆಗುಂಡಿಯ ನಿವಾಸಿಯಾಗಿದ್ದಾನೆ. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಮಂಗಳೂರು: ರೈಲು ಢಿಕ್ಕಿಯಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಮಂಗಳೂರು ಸಮೀಪದಲ್ಲಿ ಗುರುವಾರ ನಡೆದಿದೆ. ಉಳ್ಳಾಲಬೈಲು ಗೇರು ಕೃಷಿ ಸಂಶೋಧನಾ ಕೇಂದ್ರ ಬಳಿಯ ನಿವಾಸಿ, ಹಿರಿಯ ಸಿವಿಲ್ ಗುತ್ತಿಗೆದಾರ ಜನಾರ್ದನ ಆಚಾರಿ (78) ಮೃತ ದುರ್ದೈವಿ. ಜನಾರ್ದನ ಅವರು ಗುರುವಾರ ಬೆಳಗ್ಗೆ ಮನೆಯಿಂದ ಹೊರಟು ಹೊರ ಹೋಗಿದ್ದರು. ಈ ವೇಳೆ ಮನೆ ಸಮೀಪದ ಕಾಪಿಕಾಡಿನ ರೈಲ್ವೇ ಹಳಿಯಲ್ಲಿ ರೈಲು ಢಿಕ್ಕಿ ಹೊಡೆದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಸಿವಿಲ್ ಗುತ್ತಿಗೆದಾರರಾಗಿದ್ದ ಜನಾರ್ದನ ಅವರು ಹಲವು ಮಂದಿ ಕಾರ್ಮಿಕರಿಗೆ ಕೆಲಸ ನೀಡಿದ್ದರು. ಕಳೆದ ಕೆಲವು ವರ್ಷಗಳಿಂದ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.