ನವದೆಹಲಿ: ಭಾರತೀಯ ವಾಯುಪಡೆಯು ಗ್ರೂಪ್ ಕ್ಯಾಪ್ಟನ್ ಶಾಲಿಜಾ ಧಾಮಿ ಅವರನ್ನ ಪಶ್ಚಿಮ ವಲಯದ ಮುಂಚೂಣಿ ಯುದ್ಧ ಘಟಕದ ಕಮಾಂಡ್ ಆಗಿ ಆಯ್ಕೆ ಮಾಡಿದೆ. ಐಎಎಫ್ ಇತಿಹಾಸದಲ್ಲಿ ಮೊದಲ ಬಾರಿಗೆ, ಮಹಿಳಾ ಅಧಿಕಾರಿಗೆ ಮುಂಚೂಣಿ ಯುದ್ಧ ಘಟಕದ ಕಮಾಂಡ್ ನೀಡಲಾಗಿದೆ. ಅದ್ರಂತೆ, ಸಧ್ಯ ಪಶ್ಚಿಮ ವಲಯದಲ್ಲಿ ಕ್ಷಿಪಣಿ ಸ್ಕ್ವಾಡ್ರನ್ ನೇತೃತ್ವವನ್ನ ಕ್ಯಾಪ್ಟನ್ ಶಾಲಿಜಾ ಧಾಮಿ ಹೊತ್ತಿದ್ದಾರೆ. ಈ ತಿಂಗಳ ಆರಂಭದಲ್ಲಿ, ಸೇನೆಯು ಮೊದಲ ಬಾರಿಗೆ ವೈದ್ಯಕೀಯ ವಿಭಾಗದ ಹೊರಗೆ ಮಹಿಳಾ ಅಧಿಕಾರಿಗಳನ್ನ ಕಮಾಂಡ್ ಪಾತ್ರಗಳಿಗೆ ನಿಯೋಜಿಸಲು ಪ್ರಾರಂಭಿಸಿತು. ಅವುಗಳಲ್ಲಿ ಸುಮಾರು 50 ಫಾರ್ವರ್ಡ್ ಸೇರಿದಂತೆ ಕಾರ್ಯಾಚರಣೆಯ ಪ್ರದೇಶಗಳಲ್ಲಿನ ಘಟಕಗಳ ಮುಖ್ಯಸ್ಥರಾಗಲಿದ್ದಾರೆ. ಇದು ಉತ್ತರ ಮತ್ತು ಪೂರ್ವ ಕಮಾಂಡ್’ಗಳಲ್ಲಿ ಸಂಭವಿಸುತ್ತದೆ. ಗ್ರೂಪ್ ಕ್ಯಾಪ್ಟನ್ ಧಾಮಿ ಅವರನ್ನ 2003ರಲ್ಲಿ ಹೆಲಿಕಾಪ್ಟರ್ ಪೈಲಟ್ ಆಗಿ ನಿಯೋಜಿಸಲಾಯಿತು. ಇನ್ನಿವ್ರು 2,800 ಗಂಟೆಗಳ ಹಾರಾಟದ ಅನುಭವವನ್ನ ಹೊಂದಿದ್ದು, ಅರ್ಹ ಫ್ಲೈಯಿಂಗ್ ಬೋಧಕರಾಗಿರುವ ಅವರು ಪಶ್ಚಿಮ ವಲಯದಲ್ಲಿ ಹೆಲಿಕಾಪ್ಟರ್ ಘಟಕದ ಫ್ಲೈಟ್ ಕಮಾಂಡರ್ ಆಗಿ ಸೇವೆ ಸಲ್ಲಿಸಿದ್ದಾರೆ. ಐಎಎಫ್’ನಲ್ಲಿ ಗ್ರೂಪ್ ಕ್ಯಾಪ್ಟನ್…
Author: main-admin
ಮಂಗಳೂರು: ಸ್ಕೂಟರ್ ಹಾಗೂ ಟ್ಯಾಂಕರ್ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹೆಜಮಾಡಿ ಟೋಲ್ ಗೇಟ್ ಸಮೀಪ ಇಂದು ಮಧ್ಯಾಹ್ನ ನಡೆದಿದೆ. ತೀರ್ಥಹಳ್ಳಿ ಮೂಲದ ಮಧ್ಯ ವಯಸ್ಕ ಮಹಿಳೆ ಹಾಗೂ ಗಂಡಸು ಸ್ಕೂಟರ್ ನಲ್ಲಿ ಹೋಗುತ್ತಿದ್ದಾಗ ಟ್ಯಾಂಕರ್ ಗೆ ಗುದ್ದಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರೂ ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮೂಲ್ಕಿ ಠಾಣಾ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.ಮೃತಪಟ್ಟವರ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಪತ್ತನಂತಿಟ್ಟ: ವಿಷಪೂರಿತ ಕೀಟ ಕಚ್ಚಿ ಪುಟ್ಟ ಬಾಲಕಿ ಮೃತ ಪಟ್ಟಿರುವ ದಾರುಣ ಘಟನೆ ಕೇರಳದ ಪತ್ತನಂತಿಟ್ಟದ ತಿರುವಲ್ಲಾದಲ್ಲಿ ನಡೆದಿದೆ. ಪೆರಿಂಗಾರ ಕೊಚಾರಿಮುಕ್ಕಂನ ಪನಾರ ಮನೆ ನಿವಾಸಿ ಅನೀಶ್ ಮತ್ತು ಶಾಂತಿ ಕೃಷ್ಣನ್ ದಂಪತಿಯ ಪುತ್ರಿ ಅಂಜಿತಾ ಅನೀಶ್ ಮೃತಪಟ್ಟ ಬಾಲಕಿ. ಮಾ.5ರಂದು ಸಂಜೆ ಮನೆಯ ಸಮೀಪದ ಹೊಲದಲ್ಲಿ ಸ್ನೇಹಿತೆಯರೊಂದಿಗೆ ಆಟವಾಡುತ್ತಿದ್ದಾಗ ಕಿವಿಯ ಕೆಳಗೆ ಕೀಟವೊಂದು ಕಚ್ಚಿದೆ. ನೊಣದಂತಹ ಜೀವಿ ಕಚ್ಚಿರುವುದಾಗಿ ಬಾಲಕಿ ಮನೆಯಲ್ಲಿ ಹೇಳಿದ್ದಾಳೆ. ಕೀಟ ಕಚ್ಚಿದ 30 ನಿಮಿಷದಲ್ಲಿ ಬಾಲಕಿಯ ಇಡೀ ದೇಹದಲ್ಲಿ ತುರಿಕೆ ಆರಂಭವಾಗಿದೆ. ಕೂಡಲೇ ಬಾಲಕಿಯನ್ನು ತಿರುವಲ್ಲಾ ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪ್ರಥಮ ಚಿಕಿತ್ಸೆ ಪಡೆದು ಮನೆಗೆ ಹಿಂದಿರುಗುವಷ್ಟರಲ್ಲಿ ಬಾಲಕಿ ಕುಸಿದು ಬಿದ್ದಿದ್ದಾಳೆ. ಮತ್ತೆ ಅವಳನ್ನು ತಿರುವಲ್ಲಾದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಯಿತು. ಶ್ವಾಸಕೋಶಕ್ಕೆ ಸೋಂಕು ಹರಡಿದ ಹಿನ್ನಲೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿದ್ದಾಳೆ. ತಿರುವಲ್ಲಾದ ಎಂಜಿಎಂ ಶಾಲೆಯ ವಿದ್ಯಾರ್ಥಿನಿಯಾಗಿರುವ ಅಂಜಿತಾ ಅನೀಶ್ ಗೆ ಪ್ರಬಲ ವಿಷಕಾರಿ ಕೀಟ ಕಚ್ಚಿರಬಹುದೆಂದು ವೈದ್ಯಾಧಿಕಾರಿಗಳು ಅಭಿಪ್ರಾಯ ಪಟ್ಟಿದ್ದಾರೆ.
ಉಳ್ಳಾಲ: ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಸಹಪ್ರಾಧ್ಯಾಪಕ ಡಾ. ವೇದವ ಪಿ. ವಿರುದ್ಧ ಕನ್ನಡ ವಿಭಾಗದ ಕೊಡವ ಅಧ್ಯಯನ ಕೇಂದ್ರದ ಸಂಶೋಧನಾ ಸಹಾಯಕಿ ದಾಖಲಿಸಿದ್ದ ಅತ್ಯಾಚಾರ ಪ್ರಕರಣದಿಂದ ಕ್ಲೀನ್ ಚಿಟ್ ನೀಡಿ ನಿರಪರಾಧಿ ಎಂದು ಸಾಬೀತುಪಡಿಸಿದೆ. 2004ರಲ್ಲಿ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಕೊಡವ ಅಧ್ಯಯನ ಕೇಂದ್ರದ ಸಂಶೋಧನಾ ಸಹಾಯಕಿ ಪೂರ್ಣಿಮಾ ಎಂಬವರು ಸಹಪ್ರಾಧ್ಯಾಪಕ ಡಾ.ವೇದವ .ಪಿ ವಿರುದ್ಧ ಅತ್ಯಾಚಾರ ಪ್ರಕರಣವನ್ನು ದಾಖಲಿಸಿದ್ದರು. 2013ರ ಜೂ.6 ರಂದು ಅತ್ಯಾಚಾರ ನಡೆಸಿ ಜೀವಬೆದರಿಕೆಯನ್ನು ಒಡ್ಡಿದ್ದರು ಎಂದು ದೂರಿನಲ್ಲಿ ತಿಳಿಸಿದ್ದರು. ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ಸಾಕ್ಷ್ಯಗಳು ಪತ್ತೆಯಾಗದೇ, ಜಿಲ್ಲಾ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ ಆರೋಪ ಪಟ್ಟಿಯನ್ನು ಪರಿಗಣಿಸಿ ಸಮನ್ಸ್ ಜ್ಯಾರಿಗೊಳಿಸಿದ್ದರು. ಹಿಯರಿಂಗ್ ಬಿಫೋರ್ ಚಾರ್ಜ್ ಹಂತದಲ್ಲಿ ಆರೋಪದಿಂದ ಬಿಡುಗಡೆಗೊಳಿಸಲು ಕಲಂ 227ರ ಪ್ರಕಾರ ಡಾ| ವೇದವ್ ಡಿಸ್ಚಾರ್ಜ್ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯ ಅರ್ಜಿಯನ್ನು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಡಾ| ವೇದವ್ ಹೈಕೋರ್ಟ್ ನಲ್ಲಿ 482ರಡಿ ಕ್ರಿಮಿನಲ್ ಅರ್ಜಿಯನ್ನು ಸಲ್ಲಿಸಿದ್ದರು. 2012…
ಬಂಟ್ವಾಳ: ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ದ ತಂಡವು ಮಾ. 5ರಂದು ನಂದಾವರದ ನಾಲ್ಕೈದು ಮನೆಗಳಿಗೆ ದಾಳಿ ನಡೆಸಿದ್ದು, ನಾಲ್ವರನ್ನು ವಶಕ್ಕೆ ಪಡೆದು ತಡರಾತ್ರಿಯ ವರೆಗೂ ತೀವ್ರ ಸ್ವರೂಪದ ತನಿಖೆ ನಡೆಸಿ, ನಗದು ಸಹಿತ ಕೆಲವು ಸೊತ್ತುಗಳನ್ನು ವಶಪಡಿಸಿಕೊಂಡಿದೆ. ಬಿಹಾರದ ಪಟ್ನಾದಲ್ಲಿ ಪ್ರಧಾನಿ ಮೋದಿ ಅವರ ಕಾರ್ಯಕ್ರಮದಲ್ಲಿ ಬಾಂಬ್ ಇರಿ ಸಿದ ಆರೋಪಕ್ಕೆ ಸಂಬಂಧಿಸಿ ಬಂಧಿತ ರಾಗಿರು ವವರಿಗೆ ಹಣಕಾಸಿನ ನೆರವು ಒದಗಿಸಿದ್ದಾರೆ ಎಂಬ ಆರೋಪದಲ್ಲಿ ಈ ದಾಳಿ ನಡೆದಿದ್ದು, ನಂದಾವರದ ಒಬ್ಟಾತ ವಿವಿಧ ಖಾತೆಗಳಿಗೆ ಹಣ ವರ್ಗಾವಣೆ ಮಾಡಿದ್ದಾನೆ. ಉಳಿದವರು ಆತನಿಗೆ ನೆರವಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ನಂದಾವರ ಭಾಗಕ್ಕೆ ಸಂಜೆಯ ವೇಳೆಗೆ ಪೊಲೀಸ್ ವಾಹನಗಳು ತೆರಳಿದ್ದವಾದರೂ ಎನ್‌ಐಎ ಅಧಿಕಾರಿಗಳು ಆರೋಪಿಗಳನ್ನು ಅದಕ್ಕೂ ಮೊದಲೇ ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದರು. ನಂದಾವರ ನಿವಾಸಿ ಮಹಮ್ಮದ್ ಸಿನಾನ್, ಇಕ್ಬಾಲ್, ಸರ್ಪಾಜ್ ನವಾಜ್, ನೌಫಲ್‌ನನ್ನು ವಶಕ್ಕೆ ಪಡೆದು ಬಂಟ್ವಾಳ ನಿರೀಕ್ಷಣ ಮಂದಿರದಲ್ಲಿ ತಡರಾತ್ರಿ 12ರ ವರೆಗೂ ವಿಚಾರಣೆ ನಡೆಸಲಾಗಿತ್ತು. ಆರೋಪಿಗಳನ್ನು ಅಧಿಕಾರಿಗಳು ತಮ್ಮ ವಶದಲ್ಲಿಯೇ ಇರಿಸಿಕೊಂಡಿದ್ದಾರೆಯೇ ಅಥವಾ ಮನೆಗೆ ಕಳು ಹಿಸಿ ದ್ದಾರೆಯೇ ಎಂಬ…
ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಪರೀಕ್ಷೆ ನಿಯಮಗಳನ್ನು ಬದಲಾವಣೆ ಮಾಡಲಾಗಿದೆ. ಫಲಿತಾಂಶವನ್ನು ಸುಧಾರಿಸು ನಿಟ್ಟಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೆಲವು ನಿಯಮಗಳನ್ನು ಬದಲಾವಣೆ ಮಾಡಲಾಗಿದ್ದು, ಒಂದು ಭಾಷೆಯಲ್ಲಿ ಮತ್ತು ಇನ್ನೊಂದು ಪ್ರಮುಖ ವಿಷಯದಲ್ಲಿ. ವಿದ್ಯಾರ್ಥಿಗಳು ಯಾವುದೇ ಎರಡು ವಿಷಯಗಳಲ್ಲೂ ಒಂದೇ ರೀತಿ ಗ್ರೇಸ್ ಮಾರ್ಕ್ಸ್ ಪಡೆಯುತ್ತಾರೆ. ಒಟ್ಟು 600 ಅಂಕಗಳಲ್ಲಿ 210 ಪಡೆಯುವ ವಿದ್ಯಾರ್ಥಿಯು ಗ್ರೇಸ್ ಅಂಕಗಳನ್ನು ಪಡೆಯಲು ಅರ್ಹನಾಗಿರುತ್ತಾನೆ ಎಂದು ಕೆಎಸ್‌ಇಎಬಿಯ ನಿರ್ದೇಶಕ ಗೋಪಾಲಕೃಷ್ಣ ತಿಳಿಸಿದ್ದಾರೆ. ಮಾರ್ಚ 9 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ದ್ವಿತೀಯ ಪಿಯುಸಿ ಫಲಿತಾಂಶವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಇಲಾಖೆ ಈ ಬಾರಿಯ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆಯಲ್ಲಿ ಎಲ್ಲ ವಿಷಯಗಳಲ್ಲೂ 1 ಅಂಕದ 20 ಪ್ರಶ್ನೆಗಳನ್ನು ಕೇಳಿದೆ. ಈ 20 ಪ್ರಶ್ನೆಗಳಲ್ಲಿ 12 ಬಹುಆಯ್ಕೆ ಪ್ರಶ್ನೆಗಳು, ಕೆಲವು ಬಿಟ್ಟಸ್ಥಳ ತುಂಬಿರಿ ಮತ್ತು ಹೊಂದಿಸಿ ಬರೆಯಿರಿ ಇತ್ಯಾದಿ ಪ್ರಶ್ನೆಗಳನ್ನು…
ಬಂಟ್ವಾಳ: ಪಾಟ್ನಾ ಬಾಂಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಮೂಲದ ನಾಲ್ವರು ಆರೋಪಿಗಳ ಮನೆಗೆ ಎನ್.ಐ.ಎ ತಂಡ ದಾಳಿ ನಡೆಸಿದೆ. ನಂದಾವರ ನಿವಾಸಿಗಳಾದ ಮಹಮ್ಮದ್ ಸಿನಾನ್, ಇಕ್ಬಾಲ್, ಸರ್ಪಾಜ್ ನವಾಜ್, ನೌಫಲ್ ಮನೆಗೆ ದಾಳಿ ನಡೆದಿದ್ದು, ಈ ಆರೋಪಿಗಳು ಪಾಟ್ನಾದ ಪ್ರಧಾನಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಭಯೋತ್ಪಾದಕರ ಜೊತೆ ಸಂಪರ್ಕ ಹೊಂದಿ ಹಣಕಾಸಿನ ನೆರವು ಒದಗಿಸಿದ್ದರು ಎನ್ನಲಾಗಿದೆ.ಈ ಕೃತ್ಯಕ್ಕೆ ಸಂಬಂಧಿಸಿದಂತೆ ಭಯೋತ್ಪಾದಕರ ವಿವಿಧ ಖಾತೆಗಳಿಗೆ ಕೋಟ್ಯಾಂತರ ರೂಪಾಯಿ ಹಣದ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪ ಇವರ ಮೇಲಿದೆ ಎನ್ನಲಾಗಿದೆ.ಈ ಹಿನ್ನೆಲೆಯಲ್ಲಿ ಎನ್.ಐ.ಎ ತಂಡ ನಿನ್ನೆ ಸಂಜೆ ವೇಳೆ ದಾಳಿ ನಡೆದಿದೆ ಎನ್ನಲಾಗಿದೆ.
ಚೆನ್ನೈ : ಇತ್ತೀಚೆಗಷ್ಟೇ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯಾಗಿ ನೇಮಕಗೊಂಡ ಬಹುಭಾಷಾ ನಟಿ ಹಾಗೂ ರಾಜಕಾರಣಿ ಖುಷ್ಬೂ ಸುಂದರ್ ಅವರು ತಾವು ಬಾಲ್ಯದಲ್ಲಿ ಅನುಭವಿಸಿದ ನೋವನ್ನು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೊರಹಾಕಿದ್ದಾರೆ. “ನಾನು ತಂದೆಯಿಂದಲೇ ಲೈಂಗಿಕ ಮತ್ತು ದೈಹಿಕವಾಗಿ ಕಿರುಕುಳಕ್ಕೊಳಗಾಗಿದ್ದೆ. ನನಗೆ ಆಗ 8 ವರ್ಷ ವಯಸ್ಸಾಗಿತ್ತು. ಒಂದು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಬಳಿಕ ಆ ಗಾಯದ ಗುರುತು ಜೀವನ ಪರ್ಯಂತ ಉಳಿಯುತ್ತದೆ. ಮಗು ಗಂಡೋ ಅಥವಾ ಹೆಣ್ಣೋ ಎಂಬುದಿಲ್ಲಿ ಮುಖ್ಯವಲ್ಲ” ಎಂದು ಹೇಳಿದ್ದಾರೆ. “ನನ್ನ ತಾಯಿ ಅತ್ಯಂತ ಅಸಹನೀಯ ದಾಂಪತ್ಯ ಜೀವನ ಅನುಭವಿಸಿದ್ದರು. ಹೆಂಡತಿ ಮತ್ತು ಮಕ್ಕಳಿಗೆ ಹೊಡೆಯುವುದು ಹಾಗು ತನ್ನದೇ ಏಕೈಕ ಮಗಳನ್ನು ಲೈಂಗಿಕವಾಗಿ ಬಳಸಿಕೊಳ್ಳುವುದನ್ನು ನನ್ನ ತಂದೆ ಜನ್ಮಸಿದ್ಧ ಹಕ್ಕು ಎಂದು ಭಾವಿಸಿದ್ದರು. ನನ್ನ ಮೇಲೆ ನಡೆದ ದೌರ್ಜನ್ಯದ ನೋವು ನನ್ನನ್ನೂ ಕಾಡುತ್ತಲೇ ಇತ್ತು. ನನಗೆ 15 ವರ್ಷ ತುಂಬಿದಾಗ ತಂದೆ ನಡೆಸಿದ ದೌರ್ಜನ್ಯ, ನಿಂದನೆಯ ವಿರುದ್ಧ ಮಾತನಾಡುವ ಧೈರ್ಯ ಮಾಡಿದೆ” ಎಂದು ಖುಷ್ಬೂ…
ಮಂಗಳೂರು: ಕೆಲ ತಿಂಗಳ ಹಿಂದೆ ನಡೆದಿದ್ದಂತ ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟಕ ಪ್ರಕರಣ ಸಂಬಂಧ, ಇಂದು ಕೊನೆಗೂ ಪ್ರಕರಣದ ಹೊಣೆಗಾರಿಕೆಯನ್ನು ಐಎಸ್‌ಐಎಸ್ ತಾನೇ ನಡೆದಿರೋದಾಗಿ ಒಪ್ಪಿಕೊಂಡಿದೆ. ಈ ಕುರಿತಂತೆ ಮಾಹಿತಿಯನ್ನು ಬಿಡುಗಡೆ ಮಾಡಿರುವಂತ ಐಸಿಸ್ ಸಂಘಟನೆಯು, ಮಂಗಳೂರು ಮತ್ತು ಕೊಯಮತ್ತೂರು ಸ್ಪೋಟಕವನ್ನು ಮಾಡಿದ್ದು ತಾನೇ ಎಂಬುದಾಗಿ ಹೊಣೆ ಹೊತ್ತುಕೊಂಡಿದೆ. ಈ ಬಗ್ಗೆ ಐಎಸ್ ಕೆಪಿ ನಿಯತಕಾಲಿಕ ವಾಯ್ಸ್ ಆಫ್ ಕೋರಸನ್ ನಲ್ಲಿ ಪ್ರಕಟಿಸಲಾಗಿದೆ. ಇದರಲ್ಲಿ ಐಸಿಸ್ ವಕ್ತಾರರೊಬ್ಬರುಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಮಾಡಿಸಿದ್ದು ತಾವೇ ಎಂಬುದಾಗಿ ಹೇಳಿದ್ದಾರೆ ಎನ್ನಲಾಗಿದೆ. ಅಂದಹಾಗೇ ಮಂಗಳೂರಿನಲ್ಲಿ ನಡೆದಿದ್ದಂತ ಕುಕ್ಕಲ್ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಆಟೋ ಚಾಲಕ ಸೇರಿದಂತೆ ಆರೋಪಿ ಕೂಡ ಗಾಯಗೊಂಡಿದ್ದನು. ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದರು.
ಪುತ್ತೂರು: ಪುತ್ತೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ( ಎನ್.ಐ.ಎ) (NIA) ತಂಡ ಸಂಚರಿಸುತಿದ್ದ ಪೊಲೀಸ್ ವಾಹನ ಹಾಗೂ ಬೈಕ್ ಅಪಘಾತ ನಡೆದು ಬೈಕ್ ಸವಾರ ಮೃತಪಟ್ಟ ಘಟನೆ ಮಾ.5 ರಂದು ನಡೆದಿದೆ. ಮಾಣಿ ಮೈಸೂರು ರಸ್ತೆಯ ಸಂಪ್ಯ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಭಾನುವಾರ ರಾತ್ರಿ ವಿಶೇಷ ತನಿಖೆಯ ದೃಷ್ಠಿಯಿಂದ ಸಂಚರಿಸುತ್ತಿದ್ದ ಎನ್. ಐ. ಎ. ತಂಡದ ಪೊಲೀಸ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿದೆ. ಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಣ ನಾಯ್ಕ ಬಿ. (50) ಮೃತ ವ್ಯಕ್ತಿಯಾಗಿದ್ದಾರೆ. ಪೊಲೀಸ್ ವಾಹನ ಜಿಲ್ಲೆಯ ಡಿ. ಆರ್. ಗೆ ಸೇರಿದ್ದಾಗಿದ್ದು, ಸುಳ್ಯ ಕಡೆಯಿಂದ ಪುತ್ತೂರಿಗೆ ಆಗಮಿಸುತ್ತಿದ್ದ ಸಂದರ್ಭ ಪುತ್ತೂರಿನಿಂದ ಆರ್ಲಪದವು ಕಡೆಗೆ ಹೋಗುತ್ತಿದ್ದ ಬೈಕ್ ಪೊಲೀಸ್ ವಾಹನಕ್ಕೆ ಡಿಕ್ಕಿಯಾಗಿದೆ. ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ ಸಂಬಂಧ ಎನ್ಐಎ ಅಧಿಕಾರಿಗಳ ತಂಡ ಪುತ್ತೂರಿಗೆ ಆಗಾಗ ಆಗಮಿಸುತ್ತದೆ. ಆಗ ರಾಜ್ಯ ಪೊಲೀಸ್ ವಾಹನವನ್ನು ಅವರ ಸಂಚಾರಕ್ಕೆ ಬಳಸಿಕೊಳ್ಳಲಾಗುತ್ತದೆ ಎಂದು ಮಾಹಿತಿ ಲಬಿಸಿದೆ. ಪುತ್ತೂರು ಗ್ರಾಮಾಂತರ ಪೊಲೀಸರು…