ಭಟ್ಕಳ;ತಾಲೂಕಿನ ಹಾಡವಳ್ಳಿಯ ಓಣಿಬಾಗಿಲು ಗ್ರಾಮದಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಭಟ್ಕಳ ಪೊಲೀಸರು ಶಿವಮೊಗ್ಗದಲ್ಲಿ ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೊದಲು ಕೊಲೆಯಾದವರ ಸೊಸೆ ವಿದ್ಯಾ ಭಟ್ ಹಾಗೂ ಶ್ರೀಧರ್ ಭಟ್ರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಆರೋಪಿ ವಿನಯ್ ಭಟ್ ಪರಾರಿಯಾಗಿದ್ದ. ನಿನ್ನೆ ಆತ ಇರುವ ಖಚಿತ ಮಾಹಿತಿ ಮೇರೆಗೆ ಆರೋಪಿ ವಿನಯ್ ಭಟ್ನನ್ನು ಭಾನುವಾರ ಶಿವಮೊಗ್ಗದಲ್ಲಿ ಬಂಧಿಸಿ ಭಟ್ಕಳಕ್ಕೆ ಕರೆತಂದಿದ್ದಾರೆ. ಫೆಬ್ರವರಿ 24ರಂದು ಆಸ್ತಿ ವಿಚಾರಕ್ಕಾಗಿ ಹಾಡವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು.
Author: main-admin
ಸುರತ್ಕಲ್: ಸುರತ್ಕಲ್ ನ ಚಿತ್ರಾಪುರ ಸಮೀಪದ ಪಣಂಬೂರು ಮೋಗವೀರ ಮಹಾಸಭಾ ವ್ಯಾಪ್ತಿಯ ಸಮುದ್ರ ತೀರದಲ್ಲಿ ಇಬ್ಬರ ತಂಡವೊಂದು ರಿಕ್ಷಾ ಚಾಲಕ ಸೇರಿ ಗ್ರಾಮಸ್ಥರಿಗೆ ತಲವಾರು ಝಳಪಿಸಿ ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಘಟನೆ ಭಾನುವಾರ ಸಂಜೆ ನಡೆದಿದೆ. ಗಾಂಜಾ ಸೇವಿಸಿದ ಅಮಲಿನಲ್ಲಿ ಈ ಕೃತ್ಯ ಎಸಗಿದ್ದು, ಸುನಿಲ್ ಎಂಬ ರಿಕ್ಷಾ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ರಿಕ್ಷಾ ಪುಡಿಗೈಯಲಾಗಿದೆ. ಹಲ್ಲೆ ನಡೆಸಿದ ಆರೋಪಿಯನ್ನು ಪೊಲೀಸರು ಸ್ಥಳೀಯರ ಸಹಕಾರದಿಂದ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೋರ್ವ ಸ್ಥಳದಿಂದ ಪರಾರಿಯಾಗಿದ್ದು ಆತನಿಗಾಗಿ ಶೋಧ ನಡೆಸಲಾಗುತ್ತಿದೆ.ಕಡಲು ಕೊರೆತ ತಡೆಗೆ ಹಾಕಲಾಗಿದ್ದ ಕಲ್ಲುಗಳಲ್ಲಿ ಕಳೆದ ಹಲವು ತಿಂಗಳಿನಿಂದ ಮಾದಕ ವ್ಯಸನಿಗಳು ಅನೈತಿಕ ಚಟುವಟಿಕೆ ನಡೆಸುತ್ತಿದ್ದು, ಈ ಕುರಿತು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದರು ಎಂದು ತಿಳಿದು ಬಂದಿದೆ. ಇದೇ ದ್ವೇಷದಿಂದ ಈ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ.ಸುರತ್ಕಲ್ ಠಾಣಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು: ಅಪಾರ್ಟ್‌ಮೆಂಟ್‌ನ 11ನೇ ಮಹಡಿಯಿಂದ ಜಿಗಿದು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಚಾಲುಕ್ಯ ಸರ್ಕಲ್ ಬಳಿ ನಡೆದಿದೆ. ಸೋಫಿಯ ಕಾಲೇಜಿನ ವಿದ್ಯಾರ್ಥಿನಿ ಪ್ರಕೃತಿ (18) ಸಾವನ್ನಪ್ಪಿದವಳು ಎಂದು ತಿಳಿದುಬಂದಿದೆ. ಹೈ ಪಾಯಿಂಟ್ ಅಪಾರ್ಟ್‌ಮೆಂಟ್‌ನ 11ನೇ ಮಹಡಿಯಿಂದ ಕಳೆಗೆ ಹಾರಿದ ಯುವತಿ ಕೆಂಪು ಬಣ್ಣದ ಕಾರಿನ ಮೇಲೆ ಅಪ್ಪಳಿಸಿ ನೆಲಕ್ಕೆ ಬಿದ್ದು ಸಾವನ್ನಪ್ಪಿದ್ದಾಳೆ.ಯುವತಿ ಮೇಲಿನಿಂದ ಬಿದ್ದಿದ್ದರಿಂದ ಕಾರಿನ ಹಿಂಭಾಗದ ಗಾಜು ಪುಡಿಪುಡಿಯಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಹೈಗ್ರೌಂಡ್ಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಲ್ಲಿ ಯುವತಿ ಮೊಬೈಲ್ ಒಡೆದು ಹೋಗಿದ್ದು, ಆಕೆಯ ಜೇಬಲ್ಲಿ 300 ರೂಪಾಯಿ ಪತ್ತೆಯಾಗಿದೆ.
ಮಂಗಳೂರು :ಸಾಮಾಜಿಕ ಜಾಲತಾಣದಲ್ಲಿ ಬಾಲಕನೊಬ್ಬನಿಗೆ ಥಳಿಸುತ್ತಿರುವ ಹಳೆಯ ವಿಡಿಯೋ ಒಂದು ವೈರಲ್ ಆಗಿದ್ದು, ಈ ಕುರಿತಂತೆ ಇದೀಗ ದಕ್ಷಿಣ ಕನ್ನಡ ಎಸ್ಪಿ ಡಾ. ಅಮಟೆ ವಿಕ್ರಂ ಸ್ಪಷ್ಟನೆ ನೀಡಿದ್ದು, ಹಳೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿಸಿ ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಎಸ್ಪಿ ಡಾ. ಅಮಟೆ ವಿಕ್ರಂ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮೂಲಕ ಸ್ಟಷ್ಟನೆ ನೀಡಿರುವ ಎಸ್ಪಿ ಡಾ. ಅಮಟೆ ವಿಕ್ರಂ, ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ಸಂಬಂಧಿಸಿದಂತೆ ಬಾಲಕನೋರ್ವನಿಗೆ ಕೆಲ ಯುವಕರು ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಘಟನೆಯು ದಿನಾಂಕ 27/10/2021ರಂದು ಸುಬ್ರಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಬಗ್ಗೆ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ 77/2021 ರಂತೆ ಪ್ರಕರಣ ದಾಖಲಿಸಿಕೊಂಡು 10 ಜನ ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಪ್ರಸ್ತುತ ಈ ಪ್ರಕರಣವು ನ್ಯಾಯಾಂಗ ವಿಚಾರಣೆಯಲ್ಲಿರುತ್ತದೆ. ಈ ರೀತಿಯ…
ಬಂಟ್ವಾಳ : ಒಣ ಹುಲ್ಲು ಸಾಗಾಟದ ಲಾರಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಶನಿವಾರ ಕಲ್ಲಡ್ಕ ಸಮೀಪದ ದಾಸಕೋಡಿಯಲ್ಲಿ ನಡೆದಿದೆ. ಹಾಸನದಿಂದ ಮಂಗಳೂರು ಕಡೆಗೆ ಆಗಮಿಸುತ್ತಿದ್ದ ಲಾರಿಯು ಹೆದ್ದಾರಿಯಲ್ಲಿ ಆಗಮಿಸುತ್ತಿರುವ ವೇಳೆ ಹೊತ್ತಿ ಉರಿದಿದ್ದು, ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದ ಉರಿದಿದೆ ಎನ್ನಲಾಗಿದ್ದು, ಬಂಟ್ವಾಳ ಅಗ್ನಿಶಾಮಕ ಠಾಣೆಯವರು ಬೆಂಕಿ ನಂದಿಸಿದ್ದಾರೆ. ಜತೆಗೆ ಶನಿವಾರ ತಾಲೂಕಿನ ಸಜೀಪಮೂಡದ ಬೊಳ್ಳಾಯಿ, ಮೊಡಂಕಾಪು ಸಮೀಪದ ಬಂಟಗುರಿ, ಪಲ್ಲಮಜಲಿನಲ್ಲೂ ಗುಡ್ಡ ಪ್ರದೇಶಕ್ಕೆ ಬೆಂಕಿ ಹಿಡಿದಿದೆ. ಬಂಟಗುರಿ, ಪಲ್ಲಮಜಲಿಗೆ ಬಂಟ್ವಾಳ ಅಗ್ನಿಶಾಮಕ ದಳ, ಬೊಳ್ಳಾಯಿಗೆ ಮಂಗಳೂರು ಅಗ್ನಿಶಾಮಕ ದಳದವರು ತೆರಳಿ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ.
ವಿಜಯಪುರ: ಗುಡಿಸಲಿಗೆ ಬೆಂಕಿ ಬಿದ್ದು ಇಬ್ಬರು ಸಜೀವ ದಹನವಾಗಿದ್ದಾರೆ. ಅಗ್ನಿ ಅವಘಡದಲ್ಲಿ ವೃದ್ಧ ದಂಪತಿ ಸಜೀವ ದಹನವಾಗಿದ್ದಾರೆ. ವಿಜಯಪುರ ಜಿಲ್ಲೆ ಚಡಚಣದ ಹೊರವಲಯದ ಜಮೀನಿನಲ್ಲಿ ಘಟನೆ ನಡೆದಿದೆ. 82 ವರ್ಷದ ಕರೀಂ ಸಾಬ್ ಟಪಾಲ ಮತ್ತು ಸಾಜನಬೀ ಟಪಾಲ(72) ಮೃತಪಟ್ಟವರು ಎಂದು ಹೇಳಲಾಗಿದೆ. ಜಮೀನಿನಲ್ಲಿರುವ ಗುಡಿಸಲಿನಲ್ಲಿ ಕರೀಂಸಾಬ್ ಮತ್ತು ಸಾಜನಬೀ ವಾಸವಾಗಿದ್ದರು. ಆಕಸ್ಮಿಕವಾಗಿ ಬೆಂಕಿ ತಗುಲಿ ಇಬ್ಬರೂ ಸಜೀವ ದಹನವಾಗಿದ್ದಾರೆ ಎನ್ನಲಾಗಿದೆ. ಘಟನೆ ಚಡಚಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಉಪ್ಪಿನಂಗಡಿ: ಇ- ಸಿಗರೇಟ್ ಮಾರಾಟ ಮಾಡುತ್ತಿದ್ದ ಮೊಬೈಲ್ ಅಂಗಡಿಯೊಂದಕ್ಕೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿದ ಘಟನೆ ಶನಿವಾರ ನಡೆದಿದೆ. ಇಲ್ಲಿನ ಪೃಥ್ವಿ ಕಾಂಪ್ಲೆಕ್ಸ್ ನ ಹಿಂಬದಿಯ ಒಳಸಂದಿನಲ್ಲಿರುವ ಮೊಬೈಲ್ ಅಂಗಡಿಯೊಂದರಲ್ಲಿ ಇ- ಸಿಗರೇಟ್ ಮಾರಲಾಗುತ್ತಿದೆ ಅನ್ನುವ ಖಚಿತ ಮಾಹಿತಿ ಪಡೆದ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕ ರಾಜೇಶ್ ಕೆ.ವಿ. ಅವರ ತಂಡ ಮೊಬೈಲ್ ಅಂಗಡಿಯಿಂದ ಇ- ಸಿಗರೇಟ್ ಗೆ ಬಳಸಲಾಗುವ ಅಮಲು ಪದಾರ್ಥ, ಸ್ಮೋಕ್ ಮಾಡಲು ಬೇಕಾದ ಟ್ಯೂಬ್ ಗಳನ್ನು ವಶಕ್ಕೆ ತೆಗೆದುಕೊಂಡಿದೆ. ಯುವ ಜನತೆಯನ್ನು ಆಕರ್ಷಿಸುವ ಇ- ಸಿಗರೇಟ್ ಮಾರಾಟ ಕಾನೂನು ಬಾಹಿರವಾಗಿದ್ದು, ಇದು ರಾಜ್ಯದಲ್ಲೇ ಅಪರೂಪದ ಪ್ರಕರಣವಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳ್ತಂಗಡಿ: ಉಜಿರೆಯ ಲಾಡ್ಜ್ ಗಳಲ್ಲಿ ಬೆಳ್ತಂಗಡಿ ಇನ್ಸ್ ಪೆಕ್ಟರ್ ಸತ್ಯನಾರಾಯಣ ಅವರ ನೇತೃತ್ವದಲ್ಲಿ ಪೊಲೀಸರು ಶನಿವಾರ ರಾತ್ರಿ ಪರಿಶೀಲನೆ ನಡೆಸಿ ವಸತಿಗೃಹದ ಮಾಲಕರುಗಳಿಗೆ ಎಚ್ಚರಿಕೆ ನೀಡಿದ್ದಾರೆ. ಕೆಲ ದಿನಗಳ ಹಿಂದೆ ಪೊಲೀಸರು ಪರಿಶೀಲನೆ ನಡೆಸಿದಾಗ ಉಜಿರೆಯ ಒಂದು ವಸತಿ ಗೃಹದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ಕಂಡು ಬಂದಿತ್ತು. ಐವರು ಮಹಿಳೆಯರನ್ನು ರಕ್ಷಿಸಲಾಗಿತ್ತು ಇಬ್ಬರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಇಂದು ಮತ್ತೆ ಪೊಲೀಸರು ಪರಿಶೀಲನೆ ನಡೆಸಿ ಎಚ್ಚರಿಕೆ ನೀಡಿದ್ದಾರೆ. ಪರಿಶೀಲನೆಯ ವೇಳೆ ಯಾವುದೇ ಅಕ್ರಮಗಳು ಕಂಡು ಬಂದಿಲ್ಲ ಎನ್ನಲಾಗಿದೆ.
ರಾಯಪುರ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ರಾಜಕೀಯ ನಿವೃತ್ತಿಯ ಸುಳಿವು ನೀಡಿದ್ದಾರೆ. ರಾಯ್ ಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶದಲ್ಲಿ ಅವರು ತಮ್ಮ ಮನದಾಳದ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಭಾರತ್ ಜೋಡೋ ಯಾತ್ರೆಯೊಂದಿಗೆ ನನ್ನ ರಾಜಕೀಯ ಇನ್ನಿಂಗ್ಸ್ ಅಂತ್ಯಗೊಂಡಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ. 2024ರ ಲೋಕಸಭೆ ಚುನಾವಣೆಯಲ್ಲಿ ಸೋನಿಯಾ ಗಾಂಧಿ ಸ್ಪರ್ಧಿಸುವ ಸಾಧ್ಯತೆ ಕಡಿಮೆ ಎಂಬ ಅಭಿಪ್ರಾಯ ಈ ಮೂಲಕ ವ್ಯಕ್ತವಾಗಿದೆ.ಈ ಹಿಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸಾಧನೆ ತೃಪ್ತಿ ತಂದಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.
ಮಧ್ಯಪ್ರದೇಶ: ಅಂಕಪಟ್ಟಿ ಕೊಡಲು ವಿಳಂಬ ಮಾಡಿದ್ರು ಎಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ಮಹಿಳಾ ಪ್ರಾಂಶುಪಾಲರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದಿರುವ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ಫೆಬ್ರವರಿ 20 ರಂದು ಬಿಎಂ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲರಾದ ವಿಮುಕ್ತ ಶರ್ಮಾ ಮೇಲೆ ಮಾಜಿ ವಿದ್ಯಾರ್ಥಿ ಅಶುತೋಷ್ ಶ್ರೀವಾಸ್ತವ (24) ಎಂಬಾತ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ. ಈ ವೇಳೆ, ವಿಮುಕ್ತಾರ ದೇಹ ಶೇ. 90ರಷ್ಟು ಸುಟ್ಟ ಗಾಯಗಳಾಗಿತ್ತು. ಕೂಡಲೇ ಅವರನ್ನು ಚೋಯಿತ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ವಿಮುಕ್ತ ಇಂದು (ಶನಿವಾರ) ಮುಂಜಾನೆ 4 ಗಂಟೆ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಅವರ ಸಹೋದರ ಅರವಿಂದ್ ತಿವಾರಿ ತಿಳಿಸಿದ್ದಾರೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕರ್ತವ್ಯ ನಿರ್ಲಕ್ಷ್ಯದ ಆರೋಪದ ಮೇಲೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ಪೊಲೀಸ್ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. ಏತನ್ಮಧ್ಯೆ, ಇಂದೋರ್ ಆಡಳಿತವು ಅಶುತೋಷ್ ಶ್ರೀವಾಸ್ತವ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಮೂಲಕ ವಿಚಾರಣೆ ಪ್ರಾರಂಭಿಸಿದೆ.…