Author: main-admin

ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರ ಕೃತ್ಯಗಳಿಗೆ ಬಳಸುತ್ತಿದ್ದ ಕಮ್ಯುನಿಟಿ ಹಾಲ್ ಅನ್ನು ಎಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಎನ್ ಐಎ ಅಧಿಕಾರಿಗಳು ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಿತ್ತೂರಿನ ಫ್ರೀಡಂ ಕಮ್ಯುನಿಟಿ ಹಾಲ್ ಅನ್ನು ಎನ್ ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಜುಲೈ 26ರಂದು ಹತ್ಯೆ ಮಾಡಲಾಗಿತ್ತು.

Read More

ಉಳ್ಳಾಲ:ಕೆಟ್ಟು ನಿಂತಿದ್ದ ಲಾರಿಗೆ ಎರಡು ಸ್ಕೂಟರ್ ಗಳು ಢಿಕ್ಕಿ ಹೊಡೆದು ಒಂದು ಸ್ಕೂಟರಿನಲ್ಲಿದ್ದ ಸವಾರ ಸಾವನ್ನಪ್ಪಿ ಸಹಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಅಂಗರಗುಂಡಿ ನಿವಾಸಿ ಮೊಹಮ್ಮದ್ ನೌಫಾಲ್ (26)ಮೃತ ಯುವಕ.ಸಹಸವಾರ ಉಮ್ಮರ್ ಫಾರುಕ್ ಎಂಬವರು ಗಾಯಗೊಂಡಿದ್ದಾರೆ. ಕಲ್ಲಾಪು ಮಾರುಕಟ್ಟೆಗೆ ಪಂಪ್ವೆಲ್ ಕಡೆಯಿಂದ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ.ಈ ಕುರಿತು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Read More

ಮಂಗಳೂರು: ನಂತೂರು ಜಂಕ್ಷನ್‌ನಲ್ಲಿ ಪಿಕ್-ಅಪ್ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಅಲ್ಯೂಮಿನಿಯಂ ಪಟ್ಟಿಗಳು ಜಾರಿ ಕಾರಿನ ಒಳಗೆ ಹೊಕ್ಕು ಕಾರು ಚಾಲಕ ಪವಾಡ ಸದೃಶವಾಗಿ ಪಾರಾದ ಘಟನೆ ನಗರದ ಬುಧವಾರ ಸಂಜೆ ಸಂಭವಿಸಿದೆ. ಅಲ್ಯೂಮಿನಿಯಂ ಪಟ್ಟಿಗಳನ್ನು ಹೊತ್ತ ಪಿಕ್-ಅಪ್ ಕಾರಿನ ಹಿಂದೆ ಇತ್ತು. ಎರಡೂ ವಾಹನಗಳು ಕೆಪಿಟಿಯಿಂದ ಪಂಪ್‌ವೆಲ್ ಕಡೆಗೆ ಚಲಿಸುತ್ತಿದ್ದವು.ನಂತೂರು ಜಂಕ್ಷನ್‌ನಲ್ಲಿ ಕಾರು ಚಾಲಕ ಬ್ರೇಕ್‌ ಹಾಕಿದಾಗ ಪಿಕ್‌ಅಪ್‌ನಲ್ಲಿದ್ದ ಪಟ್ಟಿಗಳು ಕಾರಿನ ಹಿಂಭಾಗದಿಂದ ಒಳಗೆ ಹೊಕ್ಕಿವೆ. ಕಾರಿನಲ್ಲಿ ಚಾಲಕ ಮಾತ್ರವಿದ್ದರು. ಪಟ್ಟಿಗಳು ಹಿಂಭಾಗದ ಸೀಟುಗಳನ್ನು ದಾಟಿ ಬಂದು ಚಾಲಕನ ಸೀಟಿಗೆ ತಾಗಿ ನಿಂತಿವೆ. ಕಾರಿಗೆ ಹಾನಿಯಾಗಿದೆ. ಪಿಕ್‌ಅಪ್‌ ವಾಹನದ ಚಾಲಕನ ನಿರ್ಲಕ್ಷ್ಯದ ಬಗ್ಗೆ ಸಂಚಾರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಸೋಷಿಯಲ್‌ ಮೀಡಿಯಾದಲ್ಲಿ ಬರುವ ಜಾಹಿರಾತುಗಳನ್ನು ನಂಬಿ ಕೆಲಸಕ್ಕೆ ಅರ್ಜಿ ಹಾಕುವ ಹುಷಾರ್‌ ಆಗಿರುವುದು ಮುಖ್ಯವಾಗಿದೆ. ಕರಾವಳಿಯ ಯುವಕನೊಬ್ಬ ಇಂತಹ ಜಾಲಕ್ಕೆ ಬಲಿಯಾಗಿ ಲಕ್ಷಾಂತರ ಹಣವನ್ನು ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ನಿವಾಸಿ ಯುವನೊಬ್ಬ ವರ್ಕಫ್ರಮ್‌ ಹೋಂನಲ್ಲಿ ಕಂಪನಿಯ ಉದ್ಯೋಗದಲ್ಲಿದ್ದು, ಮತ್ತೊಂದು ಹೊಸ ಉದ್ಯೋಗ ಪಡೆಯುವ ಆಸೆಯಲ್ಲಿ ಆತ ಫೇಸ್​​ಬುಕ್ ಕಂಡ ​ ಜಾಹಿರಾತು ನಂಬಿ ಅದಕ್ಕೆ ವಾಟ್ಸ್‌ಆಪ್‌ ಮೂಲಕ ಸಂಪರ್ಕಿಸಿದ್ದಾನೆ. ಆರೋಪಿ ಕೆಲಸದ ಫಾರ್ಮ್​​ನ್ನು ತುಂಬುವಂತೆ ಸಂತ್ರಸ್ತನಿರಿಗೆ ಕಳುಹಿಸಿದ್ದಾರೆ. ಯುವಕನಿಂದ ವಿವಿಧ ಬ್ಯಾಂಕ್​ ಅಕೌಂಟ್​​ಗಳಿಗೆ ವೀಸಾ ಕೆಲಸಕ್ಕಾಗಿ ಹಣ ಹಾಕಿಸಿಕೊಂಡಿದ್ದಾನೆ. ಕಸ್ಟಮ್ಸ್ ಕ್ಲಿಯರೆನ್ಸ್ ಮತ್ತು ಇತರ ಬದಲಾವಣೆಗಾಗಿ ಎಟಿಎಂ ಮೂಲಕ, ಫೋನ್​ ಪೇ ಮೂಲಕ ಹಣ ಹಾಕಿಸಿಕೊಂಡಿದ್ದು ಬರೊಬ್ಬರಿ 9.79 ಲಕ್ಷ ರೂ. ಪಡೆದು ವಂಚನೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಈ ವಂಚನೆ ಬಗ್ಗೆ ಸಿಇಎನ್​ ಪೊಲೀಸ್​ ಠಾಣೆಯಲ್ಲಿ ​ಐಟಿ ಕಾಯ್ದೆಯ ಸೆಕ್ಷನ್ 66 (ಡಿ) ಮತ್ತು ಐಪಿಸಿಯ ಸೆಕ್ಷನ್ 419…

Read More

ಮಂಗಳೂರು: ತುಳು ಚಲನಚಿತ್ರ ” ಪಿಲಿ ” ಬಿಡುಗಡೆ ಸಂಬಂಧ ಇಂದು (ದಿನಾಂಕ 22-02-2023) ಬುಧವಾರ ಸಂಜೆ 4 ಗಂಟೆಗೆ ಮಂಗಳೂರು ನಗರದ ವುಡ್ ಲಾಂಡ್ಸ್ ಹೋಟೆಲ್ ನಲ್ಲಿ ಪತ್ರಿಕಾಗೋಷ್ಠಿ ನಡೆಯಿತು. ಕಾರಣಾಂತರಗಳಿಂದ ನವಂಬರ್ 10 ರಂದು ಅದ್ದೂರಿಯಾಗಿ ಕರಾವಳಿಯಾದ್ಯಂತ ತೆರೆ ಕಾಣಬೇಕಿದ್ದ ಎನ್. ಎನ್. ಎಂ.ಪ್ರೊಡಕ್ಷನ್ ಲಾಂಛನದಲ್ಲಿ ಆತ್ಮಾನಂದ ರೈ ನಿರ್ಮಾಣದ ಪಿಲಿ ತುಳು ಚಿತ್ರ ಬಿಡುಗಡೆಗೆ ತಡೆಯುಂಟಾಗಿದ್ದ ಕಾರಣ ಸಮಸ್ತ ಚಿತ್ರತಂಡಕ್ಕೆ ಅಪಾರ ನೋವು ಹಾಗೂ ಸಿನಿಪ್ರಿಯರಿಗೆ ಅಗಾಧ ನಿರಾಸೆಯಾಗಿತ್ತು… ಕಷ್ಟ ಪಟ್ಟು ತುಳು ಭಾಷೆಯ ಅಭಿಮಾನದಿಂದ ಚಿತ್ರವನ್ನು ತಯಾರಿಸಿ ಅದನ್ನು ಪ್ರದರ್ಶನಕ್ಕೆ ಸಜ್ಜುಗೊಳಿಸಿದಾಗ ಅದಕ್ಕೆ ಅಡ್ಡಿ ಪಡಿಸಿರುವುದು ಒಂದು ಬಹಳ ಬೇಸರದ ಸಂಗತಿಯಾಗಿದೆ . ಈ ಎಲ್ಲ ಅಡಚಣೆಗೆ ಸಮಸ್ತ ಪಿಲಿ ಚಿತ್ರತಂಡ ವಿಷಾದ ವ್ಯಕ್ತ ಪಡಿಸುತ್ತದೆ. ಪ್ರತಿ ಸಂದರ್ಭದಲ್ಲಿ ತುಳು ಚಲನಚಿತ್ರ ರಂಗಕ್ಕೆ ಬೆನ್ನೆಲುಬಾಗಿ ನಿಂತಿರುವ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅದ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು , ಸೇರಿದಂತೆ ಹಲವಾರು ತುಳುನಾಡಿನ ಗಣ್ಯರ ಬೆಂಬಲದೊಂದಿಗೆ…

Read More

ಮಂಗಳೂರು- ಪುತ್ತೂರು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕರ್ತವ್ಯ ನಿರತ ನಿರ್ವಾಹಕಿ ಮೇಲೆ ಹಲ್ಲೆಗೈದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಸ್ ನಿರ್ವಾಹಕಿ ವಿಜಯಾ ಅವರು ನೀಡಿದ ದೂರಿನ ಮೇರೆಗೆ ಪ್ರಯಾಣಿಕ ಹಸನ್‌ನನ್ನು ಪುತ್ತೂರು ಮಹಿಳಾ ಪೊಲೀಸರು ಬಂಧಿಸಿದ್ದಾರೆ. ಫೆಬ್ರವರಿ 20ರಂದು ಸಂಜೆ ಪುತ್ತೂರು ನಿಲ್ದಾಣದಿಂದ ಬಸ್‌ ಹೊರಟು ನಗರದ ಮಾರುಕಟ್ಟೆ ಬಳಿಯ ತಂಗುದಾಣ ತಲುಪಿದಾಗ ಅಂಗವಿಕಲ ಪ್ರಯಾಣಿಕರೋರ್ವರಿಗೆ ಸೀಟು ಬಿಟ್ಟುಕೊಡುವಂತೆ ನಿರ್ವಾಹಕಿ ಕೇಳಿದ್ದು, ಆಕ್ಷೇಪಿಸಿದ ಆರೋಪಿಯು ಅವ್ಯಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಿ ಬಸ್‌ನಿಂದ ಇಳಿದು ಓಡಿ ಪರಾರಿಯಾಗಿದ್ದ. ನಿರ್ವಾಹಕಿ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಬಳಿಕ ಕಾರ್ಯಾಚರಣೆ ನಡೆಸಿದ ಪುತ್ತೂರು ಮಹಿಳಾ ಠಾಣಾ ಪೊಲೀಸರು ಆರೋಪಿ ಹಸನ್‌ನನ್ನು ಬಂಧಿಸಿದ್ದಾರೆ.

Read More

ಉಡುಪಿ: ಗೂಗಲ್‌ನಲ್ಲಿ ವಿವರ ಹುಡುಕಾಡಿದಾಗ ಸಿಕ್ಕಿದ ಮೊಬೈಲ್‌ ಸಂಖ್ಯೆಗೆ ಕರೆ ಮಾಡಿದ ಮಹಿ ಳೆಯೊಬ್ಬರು 80 ಸಾವಿರ ರೂ. ಕಳೆದುಕೊಂಡಿದ್ದಾರೆ. ಬೀಜಾಡಿ ನಿವಾಸಿ ರೂಪಾಶ್ರೀ ಎಂಬುವರು ಪುಸ್ತಕಗಳನ್ನು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ್ದು, ಒಂದು ವಾರ ಕಳೆದರೂ ಪುಸ್ತಕಗಳು ಬಾರದೆ ಇರುವುದನ್ನು ಕಂಡು ಗೂಗಲ್‌ನಲ್ಲಿ ಕೊರಿಯ‌ ಸಂಸ್ಥೆ ವಿವರವನ್ನು ಹುಡುಕಾಡಿದ್ದರು. ಈ ಸಂದರ್ಭ ಲಭಿಸಿದ ಮೊಬೈಲ್‌ ಸಂಖ್ಯೆಗೆ ಕರೆ ಮಾಡಿದಾಗ ಆತ ತಾನು ಕೊರಿಯರ್ ಸಂಸ್ಥೆಯವನೆಂದು ನಂಬಿಸಿ, ರೂಪಶ್ರೀ ಅವರ ಮೊಬೈಲ್‌ಗೆ ಲಿಂಕ್‌ ಕಳುಹಿಸಿ, ವಿವರಗಳನ್ನು ಪಡೆದುಕೊಂಡಿದ್ದ. ಅದೇ ದಿನ ಹಲವು ಬಾರಿ ಒಟ್ಟು 80,602 ರೂ.ಗಳನ್ನು ಆನ್‌ಲೈನ್ ಮೂಲಕ ವರ್ಗಾವಣೆ ಮಾಡಿಸಿಕೊಂಡು ವಂಚಿಸಿದ್ದಾನೆ. ಸನ್ ಅಪರಾಧ ಪೊಲೀಸ್‌ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಪುತ್ತೂರು ತಾಲೂಕಿನ ಕಾಣಿಯೂರು ಸಮೀಪದ ಬೆಳಂದೂರಿನ ಅಮೈ ಎಂಬಲ್ಲಿ ಕುಟುಂಬದೊಳಗೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಇತ್ತಂಡಗಳಿಂದ ದೂರು ದಾಖಲಾಗಿದೆ. ಅಮೈ ನಿವಾಸಿ ಧರ್ಮಪಾಲ ಎಂಬವರಿಗೆ ಅವರ ಅಣ್ಣನ ಪತ್ನಿ ಹಾಗೂ ಮಗಳು ದೊಣ್ಣೆಯಿಂದ ತಲೆಗೆ ಹೊಡೆದು ನೋವುಂಟು ಮಾಡಿ ದೂಡಿ ಹಾಕಿ ನೆಲದಲ್ಲಿದ್ದ ಕಲ್ಲು ಮುಖಕ್ಕೆ ತಾಗಿ ಗುದ್ದಿರುವುದಾಗಿ ಆರೋಸಲಾಗಿದೆ. ಗಾಯಾಳು ಚಿಕಿತ್ಸೆಯ ಬಗ್ಗೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದಾರೆ. ಯಶೋದಾ ಅವರು ದೂರು ನೀಡಿ ಬೆಳಂದೂರು ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡಿಕೊಂಡಿರುವ ತಾನು ಫೆ. 20ರಂದು ಸಂಜೆ 5ರ ವೇಳೆಗೆ ಹೆತ್ತವರ ಯೋಗ ಕ್ಷೇಮ ವಿಚಾರಿಸಲು ಬೆಳಂದೂರಿನ ಅಮೈಯಲ್ಲಿರುವ ತವರು ಮನೆಗೆ ಬಂದಿದ್ದೆ. ಆಗ ಅಲ್ಲಿಗೆ ಬಂದಿದ್ದ ತನ್ನ ಅವಾಚ್ಯ ಶಬ್ದಗಳಿಂದ ಬೈದು, ಮರದ ಸಲಾಕೆಯಿಂದ ಕೈಗೆ, ಬೆನ್ನಿನ ಹಿಂಬದಿಗೆ ಹೊಡೆದು ಗಾಯಗೊಳಿಸಿರುವುದಾಗಿ ಆರೋಪಿಸಿದ್ದಾರೆ. ಗಾಯಗೊಂಡ ಯಶೋದಾ ಅವರು ಸುಳ್ಯ ಸರಕಾರಿ ಆಸ್ಪತ್ರೆ ಮತ್ತು ಕೆ.ವಿ.ಜಿ. ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಬೆಳ್ಳಾರೆ…

Read More

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮ ಪಂಚಾಯತ್‍ಗಳಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ, ಮತದಾನದ ದಿನದಂದು ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧಿಸಿದೆ. ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ ಪುದು–1 ರಿಂದ 10 ಕ್ಷೇತ್ರಗಳು, ಬಂಟ್ವಾಳ ತಾಲೂಕಿನ 43–ಅನಂತಾಡಿಯ ಗ್ರಾಮ ಪಂಚಾಯತ್‍ನ 2–ಅನಂತಾಡಿ, ಕಡಬ ತಾಲೂಕಿನ ಕಟ್ರುಪಾಡಿ ಗ್ರಾಮ ಪಂಚಾಯತ್‍ನ 1–ಬಲ್ಯ ಹಾಗೂ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮ ಪಂಚಾಯತ್ ವ್ಯಾಪ್ತಿಯ 4–ಆರ್ಯಾಪುವಿನಲ್ಲಿ 2023ರ ಫೆ.24ರ ಬೆಳಿಗ್ಗೆ 6 ಗಂಟೆಯಿಂದ ಫೆ.25ರ ಸಂಜೆ ಚುನಾವಣೆ ಮುಕ್ತಾಯಗೊಳ್ಳುವವರೆಗೆ ಮದ್ಯದಂಗಡಿಗಳನ್ನು ಮುಚ್ಚುವಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಆದೇಶಿಸಿದ್ದಾರೆ.

Read More

ಮೈಸೂರು: ಮಹಿಳಾ ಪೊಲೀಸ್​ ಕಾನ್ಸ್​​ಟೇಬಲ್​ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಕೆಎಸ್​ಆರ್​​ಪಿ ವಸತಿಗೃಹದ ಮನೆಯಲ್ಲಿ ನಡೆದಿದೆ. ಗೀತಾ (32) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಗೀತಾ, ನಜರಬಾದ್ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸಟೇಬಲ್ ಆಗಿದ್ದರು. ನಿನ್ನೆ (ಫೆ.19) ಗೀತಾ ಅನಾರೋಗ್ಯದ ಕಾರಣ ನೀಡಿ ಕೆಲಸದಿಂದ ಮನೆಗೆ ಬಂದಿದ್ದರು. ಮನೆಯಲ್ಲಿದ್ದ ಪತಿಯನ್ನು, ಎಟಿಎಂನಿಂದ ಹಣ ಡ್ರಾ ಮಾಡಿಕೊಂಡು ಬರಲು ಕಳುಹಿಸಿದ್ದಾರೆ. ಈ ವೇಳೆ ಪತಿ, ಪತ್ನಿ ಗೀತಾಗೆ ಕರೆ ಮಾಡಿದಾಗ ಗೀತಾ ಉತ್ತರಿಸಿಲ್ಲ. ನಂತರ ಮನೆಗೆ ವಾಪಸ್ಸು ಬಂದು ನೋಡಿದಾಗ ಗೀತಾ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More