Author: main-admin

ಮಂಗಳೂರು : ಹಳೆ ಮನೆ ಕೆಡವುತ್ತಿದ್ದಾಗ ಗೋಡೆ ಸಮೇತ ಲಿಂಟಲ್ ಬಿದ್ದು ಇಬ್ಬರು ಮೃತಪಟ್ಟ ದಾರುಣ ಘಟನೆ ಮಂಗಳೂರು ನಗರದ ಜೈಲ್ ರೋಡಿನಲ್ಲಿ ಗುರುವಾರ ಸಂಭವಿಸಿದೆ. ಜೇಮ್ಸ್ ಜತ್ತಣ್ಣ ಮತ್ತು ಎಡ್ವಿನ್ ಮಾಬೇನ್ ಮೃತ ದುರ್ದೈವಿಗಳಾಗಿದ್ದಾರೆ. ಜೇಮ್ಸ್‌ ಜತ್ತನ್ನ ಪೂರ್ವಜರ ಮನೆ ಇದಾಗಿದ್ದು, ಪಾಲಿನಲ್ಲಿ ಅವರಿಗೆ ಈ ಮನೆ ಸಿಕ್ಕಿತ್ತು. ಮನೆಗೆ ತಾಗಿಕೊಂಡಂತೆ ಅಡ್ವಿನ್‌ ಅವರ ಮನೆ ಇದೆ. ಜೇಮ್ಸ್‌ ಅವರು ತನ್ನ ಹಳೆ ಮನೆಯನ್ನು ಕೆಡವಿ ಅದೇ ಜಾಗದಲ್ಲಿ ಹೊಸ ಮನೆ ಕಟ್ಟಲು ಉದ್ದೇಶಿಸಿದ್ದು, ಅದರಂತೆ ಜೆಸಿಬಿ ಮೂಲಕ ಮನೆ ಕೆಡಹುವ ಕಾರ್ಯ ಬುಧವಾರ ಆರಂಭವಾಗಿತ್ತು.ಗುರುವಾರ ಬೆಳಗ್ಗೆ ಮತ್ತೆ ಕೆಲಸ ಆರಂಭವಾಗಿದ್ದು, ಈ ವೇಳೆ ಜೇಮ್ಸ್‌ ಸ್ಥಳದಲ್ಲೇ ಇದ್ದು ಉಸ್ತುವಾರಿ ನೋಡಿಕೊಂಡಿದ್ದರು. ಈ ಮನೆಗೆ ತಾಗಿಕೊಂಡೇ ಅಡ್ವಿನ್‌ ಮನೆ ಇರುವುದರಿಂದ ಕೆಡಹುವ ಸಮಯದಲ್ಲಿ ಅಡ್ವಿನ್‌, ತಮ್ಮ ಮನೆಗೆ ಹಾನಿಯಾಗಿದೆಯೇ ಎಂಬುದನ್ನು ನೋಡಲು ಜೇಮ್ಸ್‌ ಮನೆ ಕಂಪೌಂಡಿಗೆ ಬಂದಿದ್ದರು. ಈ ಸಂದರ್ಭ ಜೇಮ್ಸ್‌ ಅವರು ಪಕ್ಕದ ಇನ್ನೊಂದು ಮನೆಯ ಜಗುಲಿಯಲ್ಲಿದ್ದು, ಅಡ್ವಿನ್‌…

Read More

ಪುತ್ತೂರು: ಚಾಲಕ ತನ್ನ ಕಾರನ್ನು ರಿವರ್ಸ್ ತೆಗೆಯುವಾಗ ಸಂದರ್ಭ ನಿಯಂತ್ರಣ ತಪ್ಪಿ ಸ್ಟಾಲ್‍ ಒಂದಕ್ಕೆ ನುಗ್ಗಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಕಿಲ್ಲೆ ಮೈದಾನದಲ್ಲಿ ನಡೆದಿದೆ. ಚುರುಮುರಿ ಅಂಗಡಿಯಲ್ಲಿದ್ದ ವ್ಯಕ್ತಿ ಹಾಗೂ ಇನ್ನೊಬ್ಬರು ಗಾಯಗೊಂಡವರು ಅವರಿಬ್ಬರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಗಣೇಶ ಉತ್ಸವದ ಪ್ರಯುಕ್ತ ತಾತ್ಕಲಿಕ ನೆಲೆಯಲ್ಲಿ ತೆರೆದಿದ್ದ ಅಂಗಡಿಗೆ ಕಾರು ಢಿಕ್ಕಿ ಹೊಡೆದಿದ್ದು, ಅಂಗಂಡಿ ಜಖಂ ಆಗಿದೆ. ಗಾಯಾಳುಗಳಿಬ್ಬರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಸರಗೋಡು ಮೂಲದ ವೆಂಕಟರಮಣ ಭಟ್ ಎಂಬವರಿಗೆ ಸೇರಿದ ಕೇರಳ ನೋಂದಣಿ ಹೊಂದಿದ್ದ ಕಾರು ಅಪಘಾತಕ್ಕಿಡಾದ ವಾಹನ. ಸಂಚಾರಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಕಾರನ್ನು ವಶಕ್ಕೆ ಪಡೆದಿದ್ದಾರೆ.

Read More

ಉಡುಪಿ: ಚಿನ್ನಾಭರಣ ಮಳಿಗೆಯಲ್ಲಿ ಚಿನ್ನ ಕದ್ದು ಪರಾರಿಯಾಗಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಸಾರ್ವಜನಿಕರು ಹಿಡಿದು ಥಳಿಸಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ಕಳವುಗೈದ ವ್ಯಕ್ತಿಯನ್ನು ಕಾರ್ಕಳ ತಾಲೂಕಿನ ಹೆರ್ಮುಂಡೆ ಗ್ರಾಮದ ನಿವಾಸಿ ಜಯರಾಮ ಎಂದು ಗುರುತಿಸಲಾಗಿದೆ. ಚಿನ್ನಾಭರಣ ಮಳಿಗೆಯೊಂದರಲ್ಲಿ ಸುಮಾರು ಹದಿನೆಂಟು ಗ್ರಾಂ ಕರಿಮಣಿ ಸರವನ್ನು ಎಗರಿಸಿದ್ದ ವ್ಯಕ್ತಿ ಪರಾರಿಯಾಗಲು ಪ್ರಯತ್ನಿಸಿದ್ದಾನೆ. ಪರಾರಿಯಾಗುತ್ತಿದ್ದ ವೇಳೆ ಕಳ್ಳ ಸಾರ್ವಜನಿಕರ ಕೈಗೆ ಸಿಕ್ಕಿ ಹಾಕಿಕೊಂಡಿದ್ದಾನೆ. ಬಳಿಕ ಸಾರ್ವಜನಿಕರು ಕಳ್ಳನನ್ನು ಕಾರ್ಕಳ ನಗರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.

Read More

ಮಂಡ್ಯ : ಗಣೇಶ ವಿಸರ್ಜನೆ ವೇಳೆ ಕೋಮುಗಲಭೆ ಸಂಭವಿಸಿದ ಹಿನ್ನೆಲೆಯಲ್ಲಿ ಶನಿವಾರದವರೆಗೆ ನಾಗಮಂಗಲ ಪಟ್ಟಣದಲ್ಲಿ 144 ಸೆಕ್ಷನ್‌ ಜಾರಿ ಮಾಡಲಾಗಿದೆ. ಬುಧವಾರ ರಾತ್ರಿಯಿಂದಲೇ 144 ಸೆಕ್ಷನ್‌ ಜಾರಿ ಮಾಡಲಾಗಿದ್ದು ಇಂದು ಪಟ್ಟಣ ವ್ಯಾಪ್ತಿಯ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪ್ರಕರಣ ಸಂಬಂಧ ಇಲ್ಲಿಯವರೆಗೆ 46 ಮಂದಿಯನ್ನು ಬಂಧಿಸಲಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ನಾಗಮಂಗಲ ಪಟ್ಟಣದ್ಯಾಂತ ಪೊಲೀಸರ ಸರ್ಪಗಾವಲು ಹಾಕಿದ್ದಾರೆ. ಅನ್ಯಕೋಮಿನ ಯುವಕರ ಕೃತ್ಯ ಖಂಡಿಸಿ ಇಂದು ನಾಗಮಂಗಲ ಬಂದ್‌ಗೆ ವಿಶ್ವಹಿಂದೂ ಪರಿಷತ್, ಭಜರಂಗ ದಳ ಹಾಗೂ ಇತರೇ ಹಿಂದೂಪರ ಸಂಘಟನೆಗಳು ಕರೆ ನೀಡಿವೆ.

Read More

ಕೇರಳ: ಓಣಂ ಹಬ್ಬದ ಹಿನ್ನೆಲೆಯಲ್ಲಿ ಶಬರಿಮಲೆಯ ಅಯ್ಯಪ್ಪಸ್ವಾಮಿ ದೇವಾಲಯವು ಸೆಪ್ಟೆಂಬರ್ 13ರಂದು ತೆರೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಂಜೆ 5 ಗಂಟೆಗೆ ದೇವಸ್ಥಾನದ ಬಾಗಿಲನ್ನು ತೆರೆಯಲಾಗುತ್ತದೆ, ಸೆಪ್ಟೆಂಬರ್ 17 ರಿಂದ ಐದು ದಿನಗಳ ಮಾಸಿಕ ಪೂಜೆ ನಡೆಯಲಿದೆ. ಸೆಪ್ಟೆಂಬರ್ 21 ರಂದು ರಾತ್ರಿ 10 ಗಂಟೆಗೆ ಅಥಾಜ ಪೂಜೆ ಮತ್ತು ಹರಿವರಾಸನದ ನಂತರ ದೇವಾಲಯವನ್ನು ಮುಚ್ಚಲಾಗುತ್ತದೆ. ಉದಯಾಸ್ತಮಾನ ಪೂಜೆ ಮತ್ತು ಅಷ್ಟಾಭಿಷೇಕಗಳು ದೇವಾಲಯದಲ್ಲಿ ನಡೆಯಲಿರುವ ಇತರ ಧಾರ್ಮಿಕ ವಿಧಿಗಳಾಗಿವೆ. ಸಮಾರಂಭದ ನಂತರ ಅನ್ನದಾನ ಸಭಾಂಗಣದಲ್ಲಿ ಭಕ್ತರಿಗೆ ಅನ್ನಸಂತರ್ಪಣೆ ನಡೆಯಲಿದೆ. ಹಬ್ಬದ ದಿನಗಳಲ್ಲಿ ಕಲಭಾಭಿಷೇಕ, ಪಡಿಪೂಜೆ, ಪುಷ್ಪಾಭಿಷೇಕ ಸೇರಿದಂತೆ ವಿಶೇಷ ಆಚರಣೆಗಳು ನಡೆಯಲಿವೆ. ದೇವರ ಹೆಸರಿನಲ್ಲಿ ದೀಪದ ಮುಂದೆ ಇಟ್ಟಿರುವ ಬಾಳೆ ಎಲೆಯ ಮೇಲೆ ಸಿಹಿತಿಂಡಿಗಳು ಸೇರಿದಂತೆ ಹಬ್ಬದ ಭಕ್ಷ್ಯಗಳನ್ನು ಇಡುತ್ತಾರೆ.

Read More

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಸಿ ಹಿಂದೂ ದೇವತೆಗಳ ಅವಹೇಳನಕಾರಿ, ಅಶ್ಲೀಲ ಫೋಟೋ ಪೋಸ್ಟ್ ಮಾಡಿದ್ದು, ಈ ಬಗ್ಗೆ ಮಂಗಳೂರಿನ ಉರ್ವ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಎಂದು ಬರೆದ ಫ್ಯಾಕ್ಟ್ ವಿಡ್ ಫೇಸ್ ಬುಕ್ ಪೇಜ್ ನಲ್ಲಿ ಪ್ರತಿದಿನ ತಂತ್ರಜ್ಞಾನ ಬಳಸಿ ಹಿಂದೂ ದೇವತೆಗಳ ಅವಹೇಳನಕಾರಿ, ಅಶ್ಲೀಲ ಫೋಟೋ ಪೋಸ್ಟ್ ಮಾಡಲಾಗುತ್ತಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಫೋಟೋಗಳನ್ನು ಪ್ರತಿದಿನ ಈ ಪೇಜ್ ನಲ್ಲಿ ಪೋಸ್ಟ್ ಮಾಡುತ್ತಿದ್ದು, ಇದು ಹಿಂದೂಗಳನ್ನು ಕೆರಳಿಸುವ ಷಡ್ಯಂತ್ರವಾಗಿದೆ ಎಂದು ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಇಂತ ಪೋಟೋ ಪೋಸ್ಟ್ ಮಾಡುವ ಫ್ಯಾಕ್ಟ್ ವಿಡ್ ಫೇಸ್ ಬುಕ್ ಪೇಜ್ ಅಡ್ಮಿನ್, ಕಾಮೆಂಟ್ ಹಾಕುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ವಕೀಲರ ಒಕ್ಕೂಟ, ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮಂಗಳೂರಿನ ಸೈಬರ್ ಕ್ರೈಂ ವಿಭಾಗಕ್ಕೆ ದೂರು ನೀಡಲಾಗಿದೆ.

Read More

ಮಂಗಳೂರು : ‘Fact Vid’ ಹೆಸರಿನ ಫೇಸ್ಬುಕ್ ಪೇಜ್ ಒಂದರಲ್ಲಿ ಅನೇಕ ದಿನಗಳಿಂದ AI (Artificial Intelligence) ತಾಂತ್ರಿಕ ಸಹಾಯದಿಂದ ಹಿಂದೂ ದೇವತೆಗಳ ಅಪಮಾನಾತ್ಮಕ ಮತ್ತು ಅಶ್ಲೀಲ ಫೋಟೋಗಳನ್ನು ನಿರಂತರವಾಗಿ ಫೇಸ್ಬುಕ್ ಜಾಲತಾಣದ ಮುಖಾಂತರ ಪ್ರಸಾರ ಮಾಡಲಾಗುತ್ತಿದೆ. ಈ Al ಆಧಾರಿತ ಚಿತ್ರಗಳಿಂದ ಕೋಟ್ಯಂತರ ಹಿಂದೂ ಬಾಂಧವರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ಸಂಬಂಧಿತ ಸೈಬರ್ ಕ್ರೈಮ್ ವಿಭಾಗವು ಇದರ ಬಗ್ಗೆ ಕೂಡಲೇ ಎಚ್ಚೆತ್ತುಕೊಂಡು ಪೇಜ್ ನ ಅಡ್ಮಿನ್ ಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿಯ ದಕ್ಷಿಣ ಕನ್ನಡ ಜಿಲ್ಲಾ ಸಮನ್ವಯಕರಾದ ಶ್ರೀ. ವಿಜಯ ಕುಮಾರ ಇವರು ಆಗ್ರಹಿಸಿದ್ದಾರೆ. ಈ ಕುರಿತು 10 ಸೆಪ್ಟೆಂಬರ್ 2024 ಮಂಗಳವಾರದಂದು ಮಂಗಳೂರಿನ ಸೈಬರ್ ಕ್ರೈಮ್ ವಿಭಾಗಕ್ಕೆ ಸಮಿತಿಯ ಸಮನ್ವಯಕರು ಮತ್ತು ಧರ್ಮಪ್ರೇಮಿ ನ್ಯಾಯವಾದಿಗಳ ಒಕ್ಕೂಟವು ಸೇರಿ ದೂರು ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಉರ್ವ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅಭಿವ್ಯಕ್ತಿ ಸ್ವಾತಂತ್ರ‍್ಯ ಎಂದು ತಮ್ಮ ಬಗ್ಗೆ ಬರೆದುಕೊಂಡ ‘Fact Vid’ ಫೇಸ್ಬುಕ್…

Read More

ಬೆಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆಯನ್ನು ನಡೆಸಿದ್ದು, ಐವರು ಕೇಂದ್ರದ ಜಿಎಸ್ಟಿ ಅಧಿಕಾರಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಉದ್ಯಮಿಯೊಬ್ಬರ ವಿರುದ್ಧದ ಕೇಸ್ ಮುಚ್ಚಿ ಹಾಕಲು 1.50 ಕೋಟಿ ಹಣವನ್ನು ಪಡೆದಿದ್ದಂತ ಐವರು ಜಿಎಸ್ಟಿ ಅಧಿಕಾರಿಗಳು ನಾಪತ್ತೆಯಾಗಿದ್ದರು. ಈ ಸಂಬಂಧ ಬೈಯಪ್ಪನಹಳ್ಳಿ ಠಾಣೆಯ ಪೊಲೀಸರಿಗೆ ಉದ್ಯಮಿ ದೂರು ನೀಡಿದ್ದರು. ಈ ದೂರು ಆಧರಿಸಿ ಕಾರ್ಯಾಚರಣೆಗೆ ಇಳಿದಂತ ಪೊಲೀಸರು ಮಹಿಳಾ ಅಧಿಕಾರಿ ಸೇರಿದಂತೆ ಐವರು ಕೇಂದ್ರದ ಜಿಎಸ್ಟಿ ಅಧಿಕಾರಿಗಳನ್ನು ಬಂಧಿಸಿದ್ದಾರೆ. ಈ ಮೂಲಕ ಬೈಯ್ಯಪ್ಪನಹಳ್ಳಿ ಠಾಣೆಯ ಪೊಲೀಸರು 1.50 ಕೋಟಿ ಹಣ ಪಡೆದು ಪರಾರಿಯಾಗಿದ್ದಂತ ಐವರು ಅಧಿಕಾರಿಗಳನ್ನು ಅರೆಸ್ಟ್ ಮಾಡಿದೆ. ಅಂದಹಾಗೇ ಉದ್ಯಮಿಯ ವಿರುದ್ಧ ಏನಿತ್ತು ಕೇಸ್? ಅವರು ಅಷ್ಟೊಂದು ಹಣ ಕೊಟ್ಟಿದ್ದೇಕೆ? ಸೇರಿದಂತೆ ಇತರೆ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. ಈ ಸಂಬಂಧ ಪೊಲೀಸರಿಂದ ತನಿಖೆ ನಡೆಯುತ್ತಿದ್ದು, ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.

Read More

ಮಂಗಳೂರು:ಹತ್ತು ದಿನಗಳ ಹಿಂದೆ ಗಡಿ ಭಾಗದ ಕಾಸರಗೋಡು ಜಿಲ್ಲೆಯ ಕಿಯೂರು ಅಳಿವೆಬಾಗಿಲಿನಲ್ಲಿ ಸಮುದ್ರ ಪಾಲಾಗಿದ್ದ ಚೆಮ್ನಾಡ್ ನಿವಾಸಿಯ ಮೃತದೇಹ ತ್ರಿಶೂರು ಸಮೀಪದ ಅಝಿಕ್ಕೋಡ್ ಸಮುದ್ರ ಕಿನಾರೆಯಲ್ಲಿ ಪತ್ತೆಯಾಗಿದೆ. ಚೆಮ್ನಾಡ್ ಕಲ್ಲುವಳಪ್ಪುವಿನ ಮುಹಮ್ಮದ್ ರಿಯಾಝ್(37) ಮೃತಪಟ್ಟವರು. ಆ.31ರಂದು ಮುಂಜಾನೆ 5:30ರ ಸುಮಾರಿಗೆ ಘಟನೆ ನಡೆದಿತ್ತು. ಕಿಯೂರು ಅಳಿವೆಬಾಗಿಲಿನಲ್ಲಿ ಗಾಳ ಹಾಕಿ ಮೀನು ಹಿಡಿಯಲು ತೆರಳಿದ್ದ ರಿಯಾಝ್ ನಾಪತ್ತೆಯಾಗಿದ್ದರು. ಬೆಳಗ್ಗೆ 9 ಗಂಟೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಮೊಬೈಲ್‌ಗೆ ಕರೆ ಮಾಡಿದರೂ ಕರೆ ಸ್ವೀಕರಿಸುತ್ತಿರಲಿಲ್ಲ. ಈ ಮಧ್ಯೆ ಕಿಯೂರು ಅಳಿವೆಬಾಗಿಲಿನಲ್ಲಿ ರಿಯಾಝ್ ನ ಸ್ಕೂಟರ್ ಹಾಗೂ ಗಾಳ ಹಾಕುವ ವಸ್ತುಗಳನ್ನು ಒಳಗೊಂಡ ಬ್ಯಾಗ್ ಪತ್ತೆಯಾಗಿತ್ತು. ಬಳಿಕ ಕುಟುಂಬಸ್ಥರು ಮೇಲ್ಪರಂಬ ಪೊಲೀಸರಿಗೆ ಮಾಹಿತಿ ನೀಡಿದ್ದು, ಅದರಂತೆ ಪೊಲೀಸರು, ಅಗ್ನಿ ಪೊಲೀಸ್, ಮೀನುಗಾರಿಕಾ ಇಲಾಖೆ ಹಾಗೂ ಮೀನುಗಾರರರು ರಿಯಾಝ್ ಅವರಿಗಾಗಿ ಶೋಧ ನಡೆಸಿದ್ದರು. ಆದರೆ ಅವರು ಪತ್ತೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಮುಳುಗುತಜ್ಞ ಈಶ್ವರ್ ಮಲ್ಪೆಯವರನ್ನು ಕರೆಸಿ ಗಂಟೆಗಳ ಕಾಲ ಶೋಧ ನಡೆಸಿದರೂ ಪ್ರಯೋಜವಾಗಲಿಲ್ಲ. ಬಳಿಕ ಎರಡು…

Read More

ಪುತ್ತೂರು : ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಬೆಳಗ್ಗಿನ ಜಾವ ಬೆಂ*ಕಿ ಕಾಣಿಸಿಕೊಂಡಿದ್ದು, ಅ*ಗ್ನಿಶಾಮಕ ದಳದವರು ಬೆಂ*ಕಿ ನಂದಿಸುವಲ್ಲಿ ಯಶಸ್ಸಿಯಾಗಿದ್ದಾರೆ. ಬೊಳುವಾರಿನ ಮುಖ್ಯ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗಿನ ಜಾವ 5 ಗಂಟೆ ಸುಮಾರಿಗೆ ವಿದ್ಯುತ್ ಮೀಟರ್ ಬೋರ್ಡ್‌ನ ಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದೆ. ಜಂಕ್ಷನ್ ಬಾಕ್ಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಆಸ್ಪತ್ರೆಯ ತುಂಬಾ ಹೊಗೆ ತುಂಬಿಕೊಂಡಿದ್ದು, ತಕ್ಷಣ ಆಗ್ನಿಶಾಮಕ ದಳದವರು ಆಗಮಿಸಿ ಮುನ್ನೆಚ್ಚರಿಕೆಯನ್ನು ತೆಗೆದುಕೊಂಡಿದ್ದಾರೆ. ರೋಗಿಗಳಿಗೆ ಯಾವುದೇ ಸಮಸ್ಯೆಯಾಗಿಲ್ಲ ಎಂದು ಹೇಳಲಾಗಿದೆ.

Read More