ಉಡುಪಿ : ಮಣಿಪಾಲದ ಐನಾಕ್ಸ್ (ಸಿನಿ ಗ್ಯಾಲಕ್ಸಿ) ಚಿತ್ರಮಂದಿರದ ಮುಂಭಾಗ ಗುರುವಾರ ಬೆಳಿಗ್ಗೆ ಶಾಲಾ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಮೇಲೇರಿ ನಿಂತಿದ್ದು, ಅದೃಷ್ಟವಶಾತ್ ಭಾರಿ ಅನಾಹುತವೊಂದು ತಪ್ಪಿದೆ. ಅಲ್-ಇಬಾದಾದ್ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್ ಈ ಅಪಘಾತಕ್ಕೀಡಾಗಿದೆ. ಗುರುವಾರ ಬೆಳಿಗ್ಗೆ ಮಣಿಪಾಲ ಟ್ರಾಫಿಕ್ ಸಿಗ್ನಲ್‌ನಿಂದ ಲಕ್ಷ್ಮೀಂದ್ರನಗರ ಕಡೆಗೆ ಸಾಗುವ ತಿರುವಿನಲ್ಲಿ ಚಲಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ತಿರುವಿನಲ್ಲಿ ಹಠಾತ್ ನಿಯಂತ್ರಣ ಕಳೆದುಕೊಂಡ ಬಸ್, ಹೆದ್ದಾರಿಯ ಮಧ್ಯದಲ್ಲಿದ್ದ ಡಿವೈಡರ್ ಮೇಲೇರಿ ನಿಂತಿದೆ. ಅಪಘಾತದ ರಭಸಕ್ಕೆ ಹೆದ್ದಾರಿಯ ತಡೆಬೇಲಿ (ಬ್ಯಾರಿಕೇಡ್/ಫೆನ್ಸಿಂಗ್) ಹಾಗೂ ಬಸ್‌ನ ಮುಂಭಾಗ ತೀವ್ರವಾಗಿ ಹಾನಿಗೊಳಗಾಗಿದೆ. ಅಪಘಾತಕ್ಕೆ ತಾಂತ್ರಿಕ ದೋಷ ಕಾರಣವೇ ಅಥವಾ ಚಾಲಕನ ಅಜಾಗರೂಕತೆಯೇ ಎಂಬ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಮಣಿಪಾಲ ಸಂಚಾರಿ ಠಾಣೆಯ ಪೊಲೀಸರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
Author: main-admin
ನವದೆಹಲಿ: ಭಾರತೀಯ ಪಾಸ್‌ಪೋರ್ಟ್ ಪ್ರಯಾಣದ ದಾಖಲೆಯಷ್ಟೇ. ಅದು ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ಸಚಿವಾಲಯ ಸ್ಪಷ್ಟಪಡಿಸಿದೆ. ಪೌರತ್ವ ಮತ್ತು ಸರ್ಕಾರಿ ಸೌಲಭ್ಯಗಳಿಗೆ ಅರ್ಹತೆಯ ಪುರಾವೆಯಾಗಿ ಪಾಸ್‌ಪೋರ್ಟ್‌ಗಳ ಬಳಕೆಯ ಬಗ್ಗೆ ಹೆಚ್ಚುತ್ತಿರುವ ಸಾರ್ವಜನಿಕ ಗೊಂದಲದ ಮಧ್ಯೆ ವಿದೇಶಾಂಗ ಸಚಿವಾಲಯ (MEA) ಈ ಸ್ಪಷ್ಟನೆ ನೀಡಿದೆ. ಭಾರತೀಯ ಪಾಸ್‌ಪೋರ್ಟ್ ಪ್ರಯಾಣ ದಾಖಲೆಯಾಗಿದೆ. ಅದನ್ನು ಪೌರತ್ವದ ನಿರ್ಣಾಯಕ ಪುರಾವೆಯಾಗಿ ಪರಿಗಣಿಸಬಾರದು ಎಂದು ತಿಳಿಸಿದೆ. ಭಾರತೀಯ ನಾಗರಿಕರಿಗೆ ಪಾಸ್‌ಪೋರ್ಟ್‌ಗಳನ್ನು ನೀಡಲಾಗುತ್ತದೆ. ಈ ದಾಖಲೆಯ ಪ್ರಾಥಮಿಕ ಉದ್ದೇಶ ಅಂತರರಾಷ್ಟ್ರೀಯ ಪ್ರಯಾಣವನ್ನು ಸಕ್ರಿಯಗೊಳಿಸುವುದು ಮತ್ತು ವಿದೇಶದಲ್ಲಿ ಗುರುತನ್ನು ಸ್ಥಾಪಿಸುವುದು ಎಂದು ಅಧಿಕಾರಿಗಳು ಒತ್ತಿ ಹೇಳಿದ್ದಾರೆ. ಆಧಾರ್ ಮತ್ತು ಮತದಾರರ ಗುರುತಿನ ಚೀಟಿಗಳು ಸೇರಿದಂತೆ ಪೌರತ್ವದ ಪುರಾವೆಯಾಗಿ ಇತರ ದಾಖಲೆಗಳ ಬಗ್ಗೆ ಈ ಹಿಂದೆ ಪ್ರಶ್ನೆಗಳು ಎದ್ದಿದ್ದವು.
ಮಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್ ಅವರ ಮಂಗಳೂರು ಭೇಟಿ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸರು ಸಾರ್ವಜನಿಕರಿಗೆ ವಿಶೇಷ ಸಲಹೆ ಹಾಗೂ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಕಾರ್ಯಕ್ರಮವು ಸಂಪೂರ್ಣವಾಗಿ ಆಹ್ವಾನಿತರಿಗೆ ಮಾತ್ರ ಮೀಸಲಾಗಿರುವ ಖಾಸಗಿ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಪೊಲೀಸರು ಬಿಡುಗಡೆ ಮಾಡಿದ ಸಾರ್ವಜನಿಕ ಸಲಹೆಯ ಪ್ರಕಾರ, ಬಾಲಿವುಡ್ ನಟ ಶಾರುಖ್ ಖಾನ್ ಭಾಗವಹಿಸುವ ಕಾರ್ಯಕ್ರಮಕ್ಕೆ ಪ್ರವೇಶ ಪಾಸ್ ಹೊಂದಿರುವವರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತದೆ. ಪಾಸ್ ಇಲ್ಲದ ವ್ಯಕ್ತಿಗಳಿಗೆ ಕಾರ್ಯಕ್ರಮದ ಸ್ಥಳಕ್ಕೆ ಪ್ರವೇಶ ನಿರಾಕರಿಸಲಾಗುವುದು ಎಂದು ತಿಳಿಸಲಾಗಿದೆ. ಕಾರ್ಯಕ್ರಮದ ಸ್ಥಳದಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಜಾರಿಗೊಳಿಸಲಾಗಿದ್ದು, ಪ್ರವೇಶದ್ವಾರಗಳಲ್ಲಿ ತಪಾಸಣೆ ನಡೆಸಲಾಗುತ್ತದೆ. ಅನಗತ್ಯ ತೊಂದರೆ ತಪ್ಪಿಸಲು ಸಾರ್ವಜನಿಕರು ನಿಯಮಗಳನ್ನು ಪಾಲಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಶಾರುಖ್ ಖಾನ್ ಭೇಟಿ ಹಿನ್ನೆಲೆ ಸಂಚಾರ ದಟ್ಟಣೆ ಉಂಟಾಗದಂತೆ ಪೊಲೀಸರು ವಿಶೇಷ ಸಂಚಾರ ನಿರ್ವಹಣಾ ಕ್ರಮಗಳನ್ನು ಕೈಗೊಂಡಿದ್ದಾರೆ. ಹೆದ್ದಾರಿ ಮತ್ತು ಕಾರ್ಯಕ್ರಮ ನಡೆಯುವ ಸ್ಥಳದ ಸುತ್ತಮುತ್ತ ವಾಹನ ಸಂಚಾರ ಸುಗಮವಾಗಿರುವಂತೆ ಭದ್ರತಾ ಸಿಬ್ಬಂದಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತ ಬಾಲಕರು ಲೈಂಗಿಕ ದೌರ್ಜನ್ಯ ಎಸಗಿ, ಜೀವಬೆದರಿಕೆ ಒಡ್ಡಿರುವುದು ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ತಮ್ಮ ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ದೂರುದಾರರಿಗೆ ಇತ್ತೀಚೆಗೆ ಮಾಹಿತಿ ಸಿಕ್ಕಿರುತ್ತದೆ. ಈ ಹಿನ್ನೆಲೆ ದೂರುದಾರರು ತನ್ನ ಮಗಳನ್ನು ವಿಚಾರಿಸಿದಾಗ, ಅವರ ಸಂಬಂಧಿಕ ಅಪ್ರಾಪ್ತ ಬಾಲಕ ಹಾಗೂ ಆತನ ಸ್ನೇಹಿತನಾದ ಮತ್ತೋರ್ವ ಅಪ್ರಾಪ್ತ ಬಾಲಕ ಇಬ್ಬರೂ ಅತ್ಯಾಚಾರ ಎಸಗಿರುವುದು ತಿಳಿದುಬಂದಿರುತ್ತದೆ.ಈ ಇಬ್ಬರು ಅಪ್ರಾಪ್ತ ಬಾಲಕರು ಸೇರಿ 2023 ರಲ್ಲಿ, ಬೆಳ್ತಂಗಡಿಯಲ್ಲಿರುವ ಡ್ಯಾಂ ಒಂದರ ಬಳಿಯಿರುವ ಕಟ್ಟಡಕ್ಕೆ ಸಂತ್ರಸ್ತ ಬಾಲಕಿಯನ್ನು ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿರುವುದು ಹಾಗೂ ಬಾಲಕಿಗೆ ಜೀವಬೆದರಿಕೆ ಒಡ್ಡಿರುವುದು ತಿಳಿದುಬಂದಿರುತ್ತದೆ.ಈ ಕುರಿತು ಜೂ. 23ರಂದು ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ದೂರಿನ ಮೇರೆಗೆ ಮೇರೆಗೆ ಕಲಂ: 376, 376AB, 376DB, 506 ಜೊತೆಗೆ 34 ಐ.ಪಿ.ಸಿ ಮತ್ತು ಕಲಂ: 6 ಪೋಕ್ಸೋ ಕಾಯಿದೆ- 2012, ರಂತೆ ಪ್ರಕರಣ ದಾಖಲಿಸಿಕೊಂಡು…
ಮಂಗಳೂರು, ಜೂನ್. 24 : 114 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್, 31 ಮಾರ್ಚ್ 2026ಕ್ಕೆ ಅಂತ್ಯಗೊಂಡ ಹಣಕಾಸು ವರ್ಷದಲ್ಲಿ ಎಲ್ಲಾ ಪ್ರಮುಖ ವ್ಯವಹಾರ ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ. ಬ್ಯಾಂಕ್ ಒಟ್ಟು ವ್ಯವಹಾರ ವಹಿವಾಟಿನಲ್ಲಿ 22.89% ಬೆಳವಣಿಗೆಯೊಂದಿಗೆ ರು. 1535 ಕೋಟಿ ಮೈಲಿಗಲ್ಲನ್ನು ತಲುಪಿದೆ. ಬ್ಯಾಂಕಿನ ನಿವ್ವಳ ಮೌಲ್ಯ ರು. 83.76 ಕೋಟಿಯಿಂದ ರು. 91.80 ಕೋಟಿಗೆ ಏರಿಕೆಯಾಗಿದ್ದು, ಎನ್ಆರ್ಐ ಗ್ರಾಹಕರ ಬೆಂಬಲ ಬ್ಯಾಂಕಿನ ಬೆಳವಣಿಗೆಗೆ ಪ್ರಮುಖ ಶಕ್ತಿಯಾಗಿದೆ. ಪ್ರಸ್ತುತ ಆಡಳಿತ ಮಂಡಳಿಯ ನೇತೃತ್ವದಲ್ಲಿ ಎಂಸಿಸಿ ಬ್ಯಾಂಕಿನ ಕಾರ್ಯವ್ಯಾಪ್ತಿ ಸಂಪೂರ್ಣ ಕರ್ನಾಟಕ ರಾಜ್ಯಕ್ಕೆ ವಿಸ್ತರಿಸಿದ್ದು, ಬ್ಯಾಂಕ್ ಸಂಪೂರ್ಣ ಕೋರ್ ಬ್ಯಾಂಕಿಂಗ್ ತಂತ್ರಜ್ಞಾನದ ಮೂಲಕ ಕಾರ್ಯನಿರ್ವಹಿಸುತ್ತಿದೆ. ಖಾಸಗಿ ಮತ್ತು ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ ಸಮಾನವಾಗಿ ವಿವಿಧ ಹಣಕಾಸು ಉತ್ಪನ್ನಗಳು ಹಾಗೂ ಸೇವೆಗಳನ್ನು ಒದಗಿಸುತ್ತಿರುವ ಬ್ಯಾಂಕ್, ರಾಜ್ಯಾದ್ಯಂತ ಶಾಖಾ ಜಾಲ ವಿಸ್ತರಣೆಗೆ ಆದ್ಯತೆ ನೀಡುತ್ತಿದೆ. 2018ರಲ್ಲಿ ಸಹಕಾರ ರತ್ನ ಅನಿಲ್ ಲೋಬೊ ಮತ್ತು ಅವರ ತಂಡ ಆಡಳಿತ ವಹಿಸಿಕೊಂಡ ನಂತರ…
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯೊಬ್ಬಳನ್ನು ಗರ್ಭಿಣಿಯಾಗಿಸಿ, ಬಳಿಕ ಮದುವೆಯಾಗಲು ನಿರಾಕರಿಸಿ ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಮನನೊಂದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಘಟನೆಗೆ ಸಂಬಂಧಿಸಿದಂತೆ ಗಂಜಿಮಠ ಮೂಲದ ಮನೀಶ್ ಪೂಜಾರಿ ಎಂಬಾತನ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ದೂರು ದಾಖಲಾಗಿದೆ. ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಆರೋಪಿ ಮನೀಶ್ ಪೂಜಾರಿ ಅಪ್ರಾಪ್ತ ಬಾಲಕಿಗೆ ಪ್ರೀತಿಯ ನಂಬಿಕೆ ಮೂಡಿಸಿ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದನು. ಇದರ ಪರಿಣಾಮವಾಗಿ ಬಾಲಕಿ ಗರ್ಭಿಣಿಯಾಗಿದ್ದಳು. ಈ ವಿಷಯವನ್ನು ಬಾಲಕಿಯು ಮನೀಶ್‌ಗೆ ತಿಳಿಸಿ ತನ್ನನ್ನು ಮದುವೆಯಾಗುವಂತೆ ಕೋರಿದಾಗ, ಆರೋಪಿಯು ಆಕೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಜವಾಬ್ದಾರಿಯಿಂದ ನುಣುಚಿಕೊಂಡು ತಿರಸ್ಕರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿಯಿಂದ ತೀವ್ರ ಅವಮಾನ ಹಾಗೂ ವಂಚನೆಗೆ ಒಳಗಾದ ಬಾಲಕಿಯು, ಜೂನ್ 22ರಂದು ತನ್ನ ತಾಯಿಗೆ ನಡೆದಿರುವ ಎಲ್ಲಾ ವಿಚಾರಗಳನ್ನು ತಿಳಿಸಿ ಕಣ್ಣೀರು ಹಾಕಿದ್ದಳು. ಈ ವೇಳೆ ತಾಯಿ ಆಕೆಗೆ ಧೈರ್ಯ ತುಂಬಿ, ಸಮಾಧಾನಪಡಿಸಿದ್ದರು.…
ತುಮಕೂರು: ಎಲ್‌ಐಸಿ ಪಾಲಿಸಿಯಿಂದ ಸಿಗುವ 30 ಲಕ್ಷ ರೂ. ಆಸೆಗೆ ಸ್ವಂತ ತಮ್ಮನನ್ನೇ ಅಣ್ಣ ಕೊಲೆ ಮಾಡಿದ್ದ ವಿಲಕ್ಷಣ ಘಟನೆ ಬೆಳಕಿಗೆ ಬಂದಿದೆ. ಬೈಕ್ ಅಪಘಾತದ ಪ್ರಕರಣ ಭೇದಿಸಿದ ತುಮಕೂರು ಜಿಲ್ಲೆ ಪಟ್ಟನಾಯಕನಹಳ್ಳಿ ಪೊಲೀಸರು ಅಸಲಿ ಕಹಾನಿ ಬಿಚ್ಚಿಟ್ಟಿದ್ದಾರೆ. ದುಡ್ಡು ಅಂದರೆ ಹೆಣನೂ ಬಾಯಿ ಬಿಡುತ್ತೆ ಅನ್ನೋ ಗಾದೆ ಮಾತಿದೆ. ಅಂಥ ದುಡ್ಡಿಗಾಗಿ ಎಂಥ ಹೇಯ ಕೃತ್ಯ ಮಾಡಲು ಜನ ಹಿಂದೂ ಮುಂದೂ ನೋಡಲ್ಲ. ಇಲ್ಲೊಬ್ಬ ಅಣ್ಣ, ತಮ್ಮನ ಹೆಸರಲ್ಲಿ ಇರುವ ಎಲ್‌ಐಸಿ ಪಾಲಿಸಿ ಹಣ ಲಪಟಾಯಿಸಲು ಸ್ವಂತ ತಮ್ಮನನ್ನೇ ಕೊಲೆ ಮಾಡಿ ಬೈಕ್ ಅಪಘಾತ ಎಂದು ಕಥೆ ಕಟ್ಟಿದ್ದಾನೆ. ತುಮಕೂರು ಜಿಲ್ಲೆ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂಥದೊಂದು ಘಟನೆ ನಡೆದಿದೆ. 35 ವರ್ಷದ ರಮೇಶ್‌ನನ್ನು ಅಣ್ಣ ಹನುಮಂತರಾಜು ಕೊಲೆ ಮಾಡಿ ನಾಟಕವಾಡಿದ್ದಾನೆ. ಮೃತ ರಮೇಶ್ ಮೂಲತಃ ಆಂಧ್ರಪ್ರದೇಶದವನು. ಕಳೆದ 6 ವರ್ಷದಿಂದ ಬೆಂಗಳೂರಿನಲ್ಲಿ ಎಳನೀರು ವ್ಯಾಪಾರ ಮತ್ತು ಮಂಡ್ಯದಲ್ಲಿ ಕಬ್ಬಿನ ಜ್ಯೂಸ್ ವ್ಯಾಪಾರ ಮಾಡಿಕೊಂಡಿದ್ದ. ಹೆಂಡತಿಯಿಂದ ದೂರವಾಗಿ ಮಾಟಮಂತ್ರ…
ಮಂಗಳೂರು : ಒಎಲ್‌ಎಕ್ಸ್ (OLX) ಆನ್‌ಲೈನ್ ಮಾರುಕಟ್ಟೆಯಲ್ಲಿ ಐಷಾರಾಮಿ ‘ಕಾಂಟಿನೆಂಟಲ್ ಜಿಟಿ 650’ ಮೋಟಾರು ಸೈಕಲ್ ಮಾರಾಟಕ್ಕಿದೆ ಎಂದು ನಕಲಿ ಜಾಹೀರಾತು ನೀಡಿ, ತಂದೆ-ಮಗನಿಗೆ ಬರೋಬ್ಬರಿ ₹5,58,710 ಹಣ ವಂಚಿಸಿ, ಬಳಿಕ ಜೀವ ಬೆದರಿಕೆ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಸಂತ್ರಸ್ತರು ನೀಡಿದ ದೂರಿನ ಮೇರೆಗೆ ಪೊಲೀಸರು ವಂಚಕನ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ದೂರುದಾರರು ತಮ್ಮ ಮಗ ಬೈಕ್ ಕೊಡಿಸುವಂತೆ ಕೇಳಿದ ಕಾರಣಕ್ಕಾಗಿ OLX ನಲ್ಲಿ ಹುಡುಕಾಟ ನಡೆಸಿದ್ದರು. ಈ ವೇಳೆ ರಾಯಲ್ ಎನ್‌ಫೀಲ್ಡ್ ಸಂಸ್ಥೆಯ ಕಾಂಟಿನೆಂಟಲ್ ಜಿಟಿ 650 ಬೈಕ್ ಮಾರಾಟಕ್ಕಿರುವ ಮಾಹಿತಿ ಲಭ್ಯವಾಗಿತ್ತು. ಬೈಕ್ ಮಾರಾಟಗಾರ ತನ್ನನ್ನು ಬೆಂಗಳೂರಿನ ವಿ.ವಿ.ಪುರಂನಲ್ಲಿರುವ ‘ಉಸ್ಮಾನ್ ಆಟೋ ಕನ್ಸಲ್ಟೆಂಟ್ಸ್’ ಏಜೆನ್ಸಿಯ ಸೈಯದ್ ತೌಸಿಫ್ ಪಾಷಾ ಎಂದು ಪರಿಚಯಿಸಿಕೊಂಡಿದ್ದನು. ಆರಂಭದಲ್ಲಿ ರಿಜಿಸ್ಟ್ರೇಷನ್ ಮೊತ್ತವಾಗಿ ₹5,000 ಹಾಗೂ ಕಮಿಷನ್ ಆಗಿ ₹10,000 ನೀಡಬೇಕು ಎಂದು ನಂಬಿಸಿದ್ದನು. ಇದನ್ನು ನಂಬಿದ ತಂದೆ-ಮಗ ಬೈಕ್ ಖರೀದಿಗೆ ಒಪ್ಪಿದಾಗ, ಆರೋಪಿಯು ₹57,000 ಮುಂಗಡ ಹಣ ಕೇಳಿದ್ದಾನೆ. ಅದರಂತೆ ಫೆಬ್ರವರಿ…
ಮುಂಬೈ: ಪ್ರಿ-ವೆಡ್ಡಿಂಗ್ ಫೋಟೋಶೂಟ್ ನೆಪದಲ್ಲಿ ಮಹಿಳೆ ಪ್ರಿಯಕರನೊಂದಿಗೆ ಸೇರಿ ಭಾವಿ ಪತಿಯನ್ನು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿನಡೆದಿದ್ದು, ಮದುವೆಗಾಗಿ 17 ಕೋಟಿ ಮೌಲ್ಯದ ಅರಮನೆಯನ್ನು ಬುಕ್ ಮಾಡಲಾಗಿತ್ತು ಎಂಬುದು ತಿಳಿದುಬಂದಿದೆ. ಮಹಾರಾಷ್ಟ್ರದ ಉದ್ಯಮಿ ವಿಶಾಲ್ ಅಗರ್ವಾಲ್ ಅವರ ಪುತ್ರ ಕೇತನ್ ಅಗರ್ವಾಲ್ ಮೃತ ವ್ಯಕ್ತಿ. ಜೂನ್ 18ರಂದು ಲೋನಾವಾಲಾ ಸಮೀಪದ ಲೋಹಗಢ ಕೋಟೆಗೆ ಭಾವಿ ಪತ್ನಿ ಸಿಯಾ ಗೋಯಲ್ ಜೊತೆ ಪ್ರಿ-ವೆಡ್ಡಿಂಗ್ ಶೂಟ್‌ಗೆ ತೆರಳಿದ್ದ. ಅಲ್ಲಿಯೇ ಸಿಯಾ ಗೋಯಲ್, ಕೇತನ್‌ನನ್ನು ಕಂದಕಕ್ಕೆ ತಳ್ಳಿ ಕೊಲೆ ಮಾಡಿದ್ದಾಳೆ.ನವೆಂಬರ್‌ನಲ್ಲಿ ರಾಜಸ್ಥಾನದ ಉದಯಪುರದಲ್ಲಿ ಕೇತನ್ ಮತ್ತು ಸಿಯಾ ಗೋಯಲ್ ಅವರ ಅದ್ಧೂರಿ ಮದುವೆ ನಿಗದಿಯಾಗಿತ್ತು. ಮದುವೆಗಾಗಿ 17 ಕೋಟಿ ರೂ. ವೆಚ್ಚದ ಅರಮನೆಯನ್ನು ಬುಕ್ ಮಾಡಲಾಗಿತ್ತು. ಅತಿಥಿಗಳಿಗಾಗಿ ಎರಡು ಖಾಸಗಿ ವಿಮಾನಗಳ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಆದರೆ, ಸಿಯಾಗೆ ಈ ಮದುವೆ ಇಷ್ಟವಿರಲಿಲ್ಲ. ಆದ್ದರಿಂದ ತನ್ನ ಪ್ರಿಯಕರ ಚೇತನ್ ಚೌಧರಿ ಜೊತೆ ಜೀವನ ಸಾಗಿಸಲು ಕೇತನ್ ಅಡ್ಡಿಯಾಗಿದ್ದಾನೆ ಎಂದು ಭಾವಿಸಿ ಹತ್ಯೆಗೆ ಸಂಚು ರೂಪಿಸಿದ್ದಳು.ಗೋಯಲ್ ತನ್ನ ಹುಟ್ಟುಹಬ್ಬದ ನೆಪದಲ್ಲಿ…
ಹಿರಿಯಡ್ಕ : ಆನ್‌ಲೈನ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಬರುತ್ತದೆ ಎಂದು ನಂಬಿಸಿ, ಮಹಿಳೆಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಳೆದ ಎರಡು ತಿಂಗಳ ಹಿಂದೆ ಅಪರಿಚಿತರು ಸಾಮಾಜಿಕ ಜಾಲತಾಣ ಅಥವಾ ಸಂದೇಶದ ಮೂಲಕ ಸಂಪರ್ಕಿಸಿ, ‘Stake JP’ ಎಂಬ ವೆಬ್‌ಸೈಟ್ ಬಗ್ಗೆ ಮಾಹಿತಿ ನೀಡಿದ್ದರು. ಈ ವೆಬ್‌ಸೈಟ್‌ನಲ್ಲಿ ಹಣವನ್ನು ಡಿಪಾಸಿಟ್ ಮಾಡಿದರೆ ಹೆಚ್ಚಿನ ಹಣ ಬರುತ್ತದೆ ಎಂದು ನಂಬಿಕೆ ಬರುವಂತೆ ಮಾತನಾಡಿದ್ದರು.ವಂಚಕರ ಮಾತನ್ನು ನಂಬಿದ ಮಹಿಳೆ ಅವರು, ಹಂತ ಹಂತವಾಗಿ ಒಟ್ಟು ₹4,02,000 ಹಣವನ್ನು ಡಿಪಾಸಿಟ್ ಮಾಡಿದ್ದಾರೆ. ಆರಂಭದಲ್ಲಿ ವಂಚಕರು ನಂಬಿಕೆ ಹುಟ್ಟಿಸಲು ಅಲ್ಪಸ್ವಲ್ಪ ಹಣವನ್ನು ವಾಪಸ್ ನೀಡಿದ್ದಾರೆ. ಆದರೆ, ಹೆಚ್ಚಿನ ಹಣವನ್ನು ಜಮೆ ಮಾಡಿದ ಬಳಿಕ, ಯಾವುದೇ ಲಾಭ ನೀಡದೆ ಅಥವಾ ಜಮೆ ಮಾಡಿದ ಹಣವನ್ನು ಮರಳಿಸದೆ ಸತಾಯಿಸಿದ್ದಾರೆ. ಒಟ್ಟಾರೆಯಾಗಿ ಶೀಲಾವತಿ ಅವರು ₹3,50,000 ಹಣವನ್ನು ಕಳೆದುಕೊಂಡು ವಂಚನೆಗೆ ಒಳಗಾಗಿದ್ದಾರೆ.ಈ ಕುರಿತು ಮಹಿಳೆ ನೀಡಿದ ದೂರಿನ…










