Author: main-admin

ಕಡಬ: ರೆಂಜಿಲಾಡಿ ಗ್ರಾಮದ ನೈಲ ಎಂಬಲ್ಲಿ ಕಾಡಂಚಿನ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ಕಾಡನೆ ದಾಳಿ ನಡೆಸಿದ್ದು ಯುವತಿ ಸಹಿತ ಇಬ್ಬರು ಮೃತಪಟ್ಟಿದ್ದಾರೆ. ಪೇರಡ್ಕ ಹಾಲು ಸೊಸೈಟಿಯಲ್ಲಿ ಸಿಬ್ಬಂದಿಯಾಗಿರುವ ರಂಜಿತಾ(21) ಎಂಬವರು ಸೊಸೈಟಿ ಗೆ ಮನೆಯಿಂದ ಕಾಡಂಚಿನ ದಾರಿಯಲ್ಲಿ ಹೋಗುತ್ತಿದ್ದ ವೇಳೆ ನೈಲ ಎಂಬಲ್ಲಿ ಆನೆ ದಾಳಿ ನಡೆಸಿದೆ. ಯುವತಿ ಬೊಬ್ಬೆ ಕೇಳಿ ಸ್ಥಳಕ್ಕೆ ಬಂದ ಸ್ಥಳೀಯ ನಿವಾಸಿ ರಮೇಶ್ ರೈ ಎಂಬವರ ಮೇಲೆ ಆನೆ ಅಟ್ಟಹಾಸ ಮೆರೆದಿದೆ. ರಮೇಶ್ ರೈ (55) ಸ್ಥಳದಲ್ಲಿ ಮೃತಪಟ್ಟರೆ ರಂಜಿತ ಅವರು ನೆಲ್ಯಾಡಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ .

Read More

ಹೊಟ್ಟೆ ಹುಳಗಳ ಸಮಸ್ಯೆ ಬಹುತೇಕ ಎಲ್ಲರಲ್ಲೂ ಇದೆ. ಜಂತು ಹುಳಗಳು ಹೊಟ್ಟೆಯಲ್ಲಿ ಸೇರಿಕೊಂಡಾಗ ಆಹಾರದ ಮೂಲಕ ನಾವು ಪಡೆಯಬೇಕಾದ ಎಲ್ಲಾ ಪೋಷಕಾಂಶಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಈ ಕಾರಣದಿಂದಾಗಿ, ಹೊಟ್ಟೆಯಲ್ಲಿ ಸಮಸ್ಯೆ ಉಂಟಾಗುತ್ತದೆ, ಕ್ರಮೇಣ ದೇಹವು ದುರ್ಬಲಗೊಳ್ಳಲು ಪ್ರಾರಂಭಿಸುತ್ತದೆ. ಶುಚಿತ್ವದ ಬಗ್ಗೆ ಕಾಳಜಿ ವಹಿಸದೇ ಇದ್ದಾಗ ಜಂತು ಹುಳಗಳಾಗುತ್ತವೆ. ಜೊತೆಗೆ ಅನಾರೋಗ್ಯಕರ ಆಹಾರ ಸೇವನೆಯೂ ಇದಕ್ಕೆ ಕಾರಣ. ಅದರಲ್ಲೂ ಚಿಕ್ಕ ಮಕ್ಕಳಿಗೆ ಜಂತು ಹುಳಗಳ ತೊಂದರೆ ಸಾಮಾನ್ಯ. ಇದಕ್ಕೆ ಕೆಲವೊಂದು ಮನೆಮದ್ದುಗಳಲ್ಲಿ ಪರಿಹಾರವಿದೆ. ಕಲೋಂಜಿ : ನಮ್ಮ ಹೊಟ್ಟೆಗೆ ಪ್ರಯೋಜನಕಾರಿ ಎಂದು ಪರಿಗಣಿಸಲಾದ ಅನೇಕ ಆಯುರ್ವೇದ ಗುಣಗಳು ಕಲೋಂಜಿಯಲ್ಲಿ ಕಂಡುಬರುತ್ತವೆ. 10 ಗ್ರಾಂ ಕಲೋಂಜಿ ಪುಡಿಯನ್ನು 3 ಚಮಚ ಜೇನುತುಪ್ಪದೊಂದಿಗೆ ಬೆರೆಸಿ ರಾತ್ರಿ ಮಲಗುವ ಮುನ್ನ ತಿಂದರೆ ಹುಳಗಳು ನಿವಾರಣೆಯಾಗುತ್ತವೆ. ಕಾಳುಮೆಣಸು: ಆಯುರ್ವೇದ ಔಷಧಗಳಲ್ಲಿ ಮಾತ್ರವಲ್ಲ ನಿತ್ಯದ ಅಡುಗೆಗೂ ನಾವು ಕಾಳುಮೆಣಸು ಬಳಸುತ್ತೇವೆ. ಈ ಮಸಾಲೆ ಪದಾರ್ಥ ಅತ್ಯಂತ ಪರಿಣಾಮಕಾರಿ ಔಷಧಗಳಲ್ಲೊಂದು. ಒಂದು ಲೋಟ ಮಜ್ಜಿಗೆಗೆ ಸ್ವಲ್ಪ ಕಾಳುಮೆಣಸಿನ ಪುಡಿಯನ್ನು ಬೆರೆಸಿ ರಾತ್ರಿ ಕುಡಿದರೆ ಹೊಟ್ಟೆ…

Read More

ಉಜಿರೆ : ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ಆನುವಂಶಿಕ ಮೊಕ್ತೇಸರರು ಹಿರಿಯರೂ ಆಗಿದ್ದ ಯು.ವಿಜಯ ರಾಘವ ಪಡುವೆಟ್ನಾಯರು ಫೆ.19 ರಂದು ನಿಧನರಾದರು. ಮೃತರು ಹಲವಾರು ದೇವಸ್ಥಾನ, ಸಂಘ ಸಂಸ್ಥೆಗಳ ಮಾರ್ಗದರ್ಶಕರರಾಗಿ, ಸಮಾಜ ಸೇವಕರಾಗಿದ್ದರು.

Read More

ಕಾಸರಗೋಡು;ರ‍್ಯಾಗಿಂಗ್‌ ಪ್ರಕರಣವೊಂದು ಪೈವಳಿಕೆ ಸರಕಾರಿ ಶಾಲೆಯಲ್ಲಿ‌ ನಡೆದಿದ್ದು, 12ನೇ ತರಗತಿ ವಿದ್ಯಾರ್ಥಿಯೋರ್ವನ ಮೇಲೆ ವಿದ್ಯಾರ್ಥಿಗಳು ಹಲ್ಲೆ ಮಾಡಿರುವುದಾಗಿ ದೂರಲಾಗಿದೆ. ಪೈವಳಿಕೆ ಕಾಯರ್ ಕಟ್ಟೆ ಜಿ.ಎಚ್.ಎಸ್ ಶಾಲೆಯ ವಿದ್ಯಾರ್ಥಿ ಮುಹಮ್ಮದ್ ಅದ್ನಾನ್ (17) ಹಲ್ಲೆಗೆ ಒಳಗಾದ ವಿದ್ಯಾರ್ಥಿ.ಈತನ ತಲೆ ಮತ್ತು ಹಣೆಗೆ ಕಲ್ಲಿನಿಂದ ಹಲ್ಲೆ ಮಾಡಲಾಗಿದೆ ಎಂದು ದೂರಲಾಗಿದೆ. ಅದ್ನಾನ್ ಶುಕ್ರವಾರ ತರಗತಿ ಮುಗಿಸಿ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ವಿದ್ಯಾರ್ಥಿಗಳ ತಂಡ ಹಲ್ಲೆ ನಡೆಸಿರುವುದಾಗಿ ತಿಳಿದು ಬಂದಿದೆ.ಇದೀಗ ಆತನಿಗೆ ಕಾಸರಗೋಡು ಆಸ್ಪತ್ರೆಗೆ ದಾಖಲಿಸಲಾಗಿದೆ‌.

Read More

ಪ್ರಸಿದ್ಧ ವಿಹಾರ ತಾಣ ಪಣಂಬೂರು ಬೀಚ್ ನಲ್ಲಿ ಫೆ.19ರ ಸಂಜೆ 4:30ರಿಂದ ಡಿಜೆ ಪಾರ್ಟಿಯೊಂದನ್ನು ಆಯೋಜಿಸಲಾಗಿದ್ದು ಈಗಾಗಲೇ ಅದರ ಟಿಕೆಟ್ ಗಳು ಸೋಲ್ಡ್ ಔಟ್ ಆಗಿವೆ. ಈ ಮಧ್ಯೆ ಡಿಜೆ ಪಾರ್ಟಿ ಹೆಸರಲ್ಲಿ ಕಾಲೇಜ್ ವಿದ್ಯಾರ್ಥಿ ವಿದ್ಯಾರ್ಥಿನಿಯರು ದಾರಿ ತಪ್ಪುತ್ತಿದ್ದಾರೆ, ಪೊಲೀಸ್ ಇಲಾಖೆ ಅನುಮತಿ ನೀಡಿದ್ದಾದರೂ ಹೇಗೆ ಎಂದು ಹಿಂದೂ ಸಂಘಟನೆಗಳು ಕೆಂಗಣ್ಣು ಬೀರಿವೆ. ಬೀಚ್ ಪ್ರವಾಸೋದ್ಯಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಕಾಡೆ ಮಲಗಿದೆ. ಸಂಜೆ ಆರು ಗಂಟೆಯ ಬಳಿಕ ಜನಸಾಮಾನ್ಯರ ವಿಹಾರಕ್ಕೆ ಪೊಲೀಸರೇ ಇಲ್ಲಸಲ್ಲದ ಕಾರಣ ಹೇಳಿ ಅಡ್ಡಿಪಡಿಸುತ್ತಿದ್ದಾರೆ ಎಂಬ ಆರೋಪವಿದೆ. ಹೀಗಿರುವಾಗ 4:30ರಿಂದ ಬೀಚ್ ನಲ್ಲಿ ಓಪನ್ ಆಗಿ ಗುಂಡು ತುಂಡಿನ ಡಿಜೆ ಪಾರ್ಟಿ ಆಯೋಜನೆಗೆ ಅನುಮತಿ ನೀಡಲು ಕಾರಣವೇನು ಅನ್ನೋದು ಜನರ ಪ್ರಶ್ನೆ. ಮಂಗಳೂರಲ್ಲಿ ಪಬ್ ಗಳಲ್ಲಿ ಮ್ಯೂಸಿಕ್ ಹಾಕುವಂತಿಲ್ಲ ಎಂಬ ಹೊಸ ನಿಯಮವನ್ನು ಕೆಳದಿನಗಳಿಂದ ಪೊಲೀಸ್ ಇಲಾಖೆ ಹೊಸದಾಗಿ ಜಾರಿಗೆ ತಂದಿದೆ. ಇದರಿಂದ ಪಬ್ ಖಾಲಿಯಾಗಿ ಮಾಲಕರು ಕಂಗಲಾಗಿದ್ದು ಹೊರಗಿನ ಪ್ರವಾಸಿಗರು ಮಂಗಳೂರಿನ ಸಹವಾಸವೇ ಬೇಡ…

Read More

ಬಂಟ್ವಾಳ:ಯುವಕನೋರ್ವನಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಪಾಣೆ ಮಂಗಳೂರು ಬಳಿ ನಡೆದಿದೆ. ಪಾಣೆಮಂಗಳೂರು ನೆಹರು ನಗರ ನಿವಾಸಿ ಸುಲೈಮಾನ್ ಎಂಬವನಿಗೆ ಆತನ ಸ್ನೇಹಿತ ನಿಸಾರ್ ಎಂಬಾತ ಚೂರಿಯಿಂದ ಇರಿದಿದ್ದಾನೆ. ಕ್ಷುಲ್ಲಕ ಕಾರಣಕ್ಕಾಗಿ ಮಾತಿಗೆ ಮಾತು ಬೆಳೆದು ನಿಸಾರ್ ಸುಲೈಮಾನ್ ಗೆ ಚೂರಿಯಿಂದ ಹೊಟ್ಟೆಯ ಭಾಗಕ್ಕೆ ತಿವಿದಿದ್ದಾನೆ ಎನ್ನಲಾಗಿದೆ. ಗಾಯಗೊಂಡ ಸುಲೈಮಾನ್ ನನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೋಲೀಸರು ಭೇಟಿ ನೀಡಿದ್ದಾರೆ.

Read More

ಮಂಗಳೂರು: ರಾಜ್ಯ ಬಜೆಟ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವುದಾಗಿ ಹೇಳಿ ಬಿಲ್ಲವ ಸಮುದಾಯವನ್ನು ದಾರಿ ತಪ್ಪಿಸುವ ಕೆಲಸವನ್ನು ಮುಖ್ಯಮಂತ್ರಿ ಸಹಿತ ರಾಜ್ಯದ ಬಿಲ್ಲವ ಸಚಿವರು ಮಾಡಿದ್ದಾರೆ ಎಂದು ದಕ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಹೇಳಿದ್ದಾರೆ. ಇತ್ತೀಚೆಗೆ ಬಿಲ್ಲವ ಸಮುದಾಯದ ಮುಖಂಡರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ವೇಳೆ ಮುಂದಿನ ಬಜೆಟ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ ಬಗ್ಗೆ ಘೋಷಣೆ ಮಾಡುವುದಾಗಿ ಹೇಳಿದ್ದರು ಇದಕ್ಕೆ ಜಿಲ್ಲೆಯ ಬಿಲ್ಲವ ಶಾಸಕರು, ಸಚಿವರೂ ಕೂಡ ಸಾಕ್ಷಿಯಾಗಿದ್ದರು ಆದರೆ ನಿನ್ನೆ ಮಂಡಿಸಿದ ಬಜೆಟ್ ನಲ್ಲಿ ಇದರ ಬಗ್ಗೆ ಚಕಾರವೆತ್ತದಿರುವುದು ಸಮುದಾಯಕ್ಕೆ ಬಿಜೆಪಿ ಸರಕಾರ ಮಾಡಿದ ದ್ರೋಹವಾಗಿದೆ. ರಾಜ್ಯ ಸರ್ಕಾರ ಮಾಡಿದ ಈ ಮೋಸಕ್ಕೆ ಮುಂದಿನ ದಿನಗಳಲ್ಲಿ ಬಿಲ್ಲವ ಸಮುದಾಯ ತಕ್ಕ ಉತ್ತರ ನೀಡುತ್ತದೆ. ಮುಖ್ಯಮಂತ್ರಿಯವರು ಮಂಡಿಸಿದ ಬಜೆಟ್ ನಲ್ಲಿ ಬಿಲ್ಲವ ಸಮುದಾಯ ಮಾತ್ರವಲ್ಲದೆ ಇತರ ಸಮುದಾಯಗಳಾದ ಮೊಗವೀರ ಹಾಗೂ ಹಿಂದುಳಿದ…

Read More

ಮಂಗಳೂರು: ಹಾಡಹಗಲೇ ನಗರದ ಜ್ಯುವೆಲ್ಲರಿ ಶಾಪ್ ನುಗ್ಗಿ ಜ್ಯುವೆಲ್ಲರಿ ನೌಕರನನ್ನು ಚಾಕುವಿನಿಂದ ಇರಿದು ಹತ್ಯೆಗೈದ ಪ್ರಕರಣ ನಡೆದು ಎರಡು ವಾರಗಳು ಕಳೆದರೂ ಆರೋಪಿಯ ಪತ್ತೆಯಾಗಿಲ್ಲ. ಮಾಲೀಕ ‌ಮಧ್ಯಾಹ್ನ ಊಟಕ್ಕೆ ಹೋಗಿದ್ದ ವೇಳೆ ಆಭರಣ ಮಳಿಗೆಗೆ ನುಗ್ಗಿದ್ದ ದುಷ್ಕರ್ಮಿ, ಸಿಬ್ಬಂದಿ ಅತ್ತಾವರ ನಿವಾಸಿ ರಾಘವೇಂದ್ರ ಆಚಾರ್ಯ (54) ಎಂಬವರನ್ನು ಇರಿದು ಕೊಂದು ಚಿನ್ನಾಭರಣದೊಂದಿಗೆ ಎಸ್ಕೇಪ್ ಆಗಿದ್ದ.ಆರೋಪಿಯ ಸುಳಿವು ಸಿಗದ ಹಿನ್ನಲೆಯಲ್ಲಿ ಸಿಸಿ ಟಿವಿಯಲ್ಲಿ ದಾಖಲಾದ ಭಾವಚಿತ್ರವನ್ನು ಬಿಡುಗಡೆ ಮಾಡಿ ಮಾಹಿತಿ ದೊರೆತಲ್ಲಿ ನೀಡುವಂತೆ ಸಾರ್ವಜನಿಕರಲ್ಲಿ ವಿನಂತಿಸಿದ್ದರು.ಇನ್ನೊಂದೆಡೆ ಪೊಲೀಸರು ಆರೋಪಿಯ ಪತ್ತೆಗೆ ಕಾಸರಗೋಡಿನಲ್ಲಿಯೂ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಸಿರಿಧಾನ್ಯ ಬಳಕೆ ಉತ್ತೇಜಿಸಲು ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯದ ಎಲ್ಲ ಸರ್ಕಾರಿ ಸಭೆ, ಸಮಾರಂಭಗಳಲ್ಲಿ ಸಿರಿಧಾನ್ಯ ಆಧಾರಿತ ತಿಂಡಿ ತಿನಿಸು, ಪಾನೀಯಗಳನ್ನು ಬಳಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವಿಶ್ವಸಂಸ್ಥೆಯಿಂದ ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷ ಘೋಷಣೆ ಮಾಡಲಾಗಿದ್ದು, ಸಿರಿಧಾನ್ಯ ಆಧಾರಿತ ತಿಂಡಿ, ತಿನಿಸು, ಪಾನೀಯ ಬಳಸುವಂತೆ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ಅಧೀನ ಕಚೇರಿಗಳು, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿಗಳಿಗೆ ಸುತ್ತೋಲೆ ಹೊರಡಿಸಲಾಗಿದೆ. ಎಲ್ಲಾ ಸಭೆಗಳಲ್ಲಿ ಸಿರಿಧಾನ್ಯ ಆಧಾರಿತ ತಿಂಡಿ, ತಿನಿಸು, ಪಾನೀಯ ಬಳಕೆ ಮಾಡುವಂತೆ ಸರ್ಕಾರ ಸೂಚಿಸಲಾಗಿದೆ. ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿಯಲ್ಲಿ ಸಿರಿಧಾನ್ಯಗಳ ಉತ್ಪಾದನೆ ಮತ್ತು ಬಳಕೆಯನ್ನು ಉತ್ತೇಜಿಸುವ ಸಲುವಾಗಿ ಹಾಗೂ ಸಿರಿಧಾನ್ಯಗಳಿಗೆ ದೇಶಿಯ ಹಾಗೂ ಜಾಗತಿಕ ಬೇಡಿಕೆಯನ್ನು ಸೃಷ್ಟಿಸಲು ಹಾಗೂ ಜನರಿಗೆ ಪೌಷ್ಟಿಕಾಂಶದ ಆಹಾರವನ್ನು ಒದಗಿಸಲು ಅಂತಾರಾಷ್ಟ್ರೀಯ ಸಿರಿಧಾನ್ಯಗಳು ವರ್ಷ ಎಂದು ಘೋಷಿಸಲು ವಿಶ್ವಸಂಸ್ಥೆಗೆ ಭಾರತ ಸರ್ಕಾರ 2021 ರಲ್ಲಿ ಪ್ರಸ್ತಾಪಿಸಿತ್ತು. ಹೀಗಾಗಿ ವಿಶ್ವಸಂಸ್ಥೆ 2023ನೇ ವರ್ಷವನ್ನು ಅಂತಾರಾಷ್ಟ್ರೀಯ…

Read More

ಹಾಸನ: ಭಾರತ ಸಾಂಸ್ಕೃತಿಕ ದೇಶ ಭವ್ಯ ಪರಂಪರೆ ಹೊಂದಿರುವ ದೇಶ ದೈವರಾದನೇ ನಮ್ಮಲ್ಲಿ ಹೆಚ್ಚಾಗಿ ಕಂಡುಬರುತ್ತದೆ ಭೂಮಿಗಾಳಿ ಆಕಾಶ ಪ್ರತಿಯೊಂದು ಕೂಡ ನಾವು ದೈವವನ್ನು ಕಾಣುತ್ತೇವೆ ಅದೇ ರೀತಿ ನಮ್ಮಲ್ಲಿ ದೇವಾಲಯಗಳು ಅತಿ ಹೆಚ್ಚಾಗಿ ಇದ್ದು ಹಲವಾರು ಪವಾಡಗಳನ್ನು ನಾವು ಕಾಣುತ್ತಿದ್ದೇವೆ. ವೈಜ್ಞಾನಿಕತೆಯಲ್ಲಿ ಅತಿ ಎತ್ತರಕ್ಕೆ ಬೆಳೆಯುತ್ತಿರುವ ಭಾರತದಲ್ಲಿ ಹಿಂದೂ ಕೂಡ ದೈವ ನಂಬಿಕೆ ಇದೆ ಎಂಬುದಕ್ಕೆ ಸಾಕ್ಷಿಯೇ ಈ ಚೌಡೇಶ್ವರಿ ಶಕ್ತಿ ಮಠ.ಹಾಸನ ಜಿಲ್ಲೆ ಚನ್ನರಾಯಪಟ್ಟಣದಿಂದ ಸರಿಸುಮಾರು 13 ಕಿಲೋ ಮೀಟರ್ ದೂರದಲ್ಲಿ ಇರುವ ಹೊಸಕೊಪ್ಪಲು ಗ್ರಾಮದಲ್ಲಿ ನೆಲೆಸಿರುವ ತಾಯಿ ಚೌಡೇಶ್ವರಿ ಹಲವಾರು ಪವಾಡಗಳಿಗೆ ಸಾಕ್ಷಿಯಾಗಿದ್ದಾಳೆ. ಸರಿ ಸುಮಾರು 450ಕ್ಕೂ ಹಿಂದಿನ ಹಳೆಯ ಇತಿಹಾಸವನ್ನು ಹೊಂದಿರುವ ಈ ತಾಯಿ ರಾಜ್ಯದ ಹಲವಾರು ಭಾಗಗಳಿಂದ ಬರುವ ಭಕ್ತರ ಕಷ್ಟಗಳನ್ನು ತನ್ನ ತ್ರಿಶೂದಲ್ಲಿ ಬರೆದು ತೋರಿಸಿ ಅದಕ್ಕೆ ಪರಿಹಾರವನ್ನು ತಾನೇ ನೀಡುತ್ತಾಳೆ. ನಂಬಿದ ಭಕ್ತರನ್ನು ಎಡಬಡದೆ ಕಾಯುವ ಈ ತಾಯಿ. ಹಿಂದೂ ರಾಜ್ಯದ ಮನೆಮಾತಾಗಿದ್ದಾಳೆ. ಚನ್ನರಾಯಪಟ್ಟಣದಿಂದ 13 ಕಿಲೋ ಮೀಟರ್ ದೂರದಲ್ಲಿರುವ ಮಟ್ಟನೆವಿಲಿ…

Read More