ಬೆಂಗಳೂರು : ಕ್ರಿಕೆಟ್ ಆಡುವಾಗ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡ ಬೆಳವಂಗಳ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಹುಡುಗರು ಕ್ರಿಕೆಟ್ ಆಡುತ್ತಿದ್ದಾಗ ಯಾವುದೋ ವಿಚಾರಕ್ಕೆ ಜಗಳ ನಡೆದಿದೆ. ನಂತರ ಜಗಳ ವಿಕೋಪಕ್ಕೆ ತಿರುಗಿದ್ದು, ದುಷ್ಕರ್ಮಿಗಳು ಇಬ್ಬರಿಗೆ ಚಾಕು ಇರಿದು ಹತ್ಯೆ ಮಾಡಿದ್ದಾರೆ ನಂತರ ಪರಾರಿಯಾಗಿದ್ದಾರೆ. ಕೊಲೆಯಾದವರನ್ನು ಭರತ್, ಪ್ರತೀಕ್ ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈ ಕುರಿತು ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗುತ್ತಿದೆ. ದೊಡ್ಡ ಬೆಳವಂಗಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Author: main-admin
ಉಡುಪಿ: ಪೊಲೀಸ್ ಅಧಿಕಾರಿಗಳ ವಸತಿ ಗೃಹದಲ್ಲಿಯೇ ಸೈಕಲ್ ಕಳವಾದ ಘಟನೆ ನಡೆದಿದೆ. ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಯ ನಿರೀಕ್ಷಕರಾದ ರಫೀಕ್ ಎಂ.ಅವರು ಉಡುಪಿ ನಗರ ಪೊಲೀಸ್ ಠಾಣೆಯ ಪಕ್ಕದಲ್ಲಿರುವ ಪೊಲೀಸ್ ಅಧಿಕಾರಿಗಳ ವಸತಿ ಗೃಹದಲ್ಲಿ ತನ್ನ ಸಂಸಾರದೊಂದಿಗೆ ವಾಸವಾಗಿದ್ದರು. ಇವರ ಕಾರು, ಸ್ಕೂಟಿ ಹಾಗೂ ಎರಡು ಸೈಕಲ್‌ಗಳನ್ನು ವಸತಿಗೃಹದ ಪಕ್ಕದಲ್ಲಿನ ಶೆಡ್‌ನಲ್ಲಿ ನಿಲ್ಲಿಸಿದ್ದರು. ಫೆ.13ರಿಂದ ಫೆ.14ರ ನಡುವೆ ಯಾರೋ ಕಳ್ಳರು ಸೈಕಲ್ ಗಳಿಗೆ ಅಳವಡಿಸಿದ ಬೀಗವನ್ನು ಮುರಿದು ಒಟ್ಟು 16,100 ರೂ.ಮೌಲ್ಯದ ಎರಡು ಸೈಕಲ್‌ಗಳನ್ನು ಕಳ್ಳತನ ಮಾಡಿದ್ದಾರೆ. ಎರಡು ದಿನ ಕಳೆದರೂ ಪತ್ತೆಯಾಗದ ಕಾರಣ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಪುತ್ತೂರು: ರೈಲಿನಲ್ಲಿ ಸಂಚರಿಸುತ್ತಿರುವ ಸಂದರ್ಭ ಹೃದಯಾಘಾತದಿಂದ ವಕೀಲರೊಬ್ಬರು ಸಾವನಪ್ಪಿರುವ ಘಟನೆ ಮಲಬಾರ್ ಎಕ್ಸ್ ಪ್ರೆಸ್ ರೈಲಿನಲ್ಲಿ ನಡೆದಿದೆ.ಪುತ್ತೂರಿನ ಎಪಿಎಂಸಿ ರಸ್ತೆಯ ನೆಲ್ಲಿಕಟ್ಟೆ ನಿವಾಸಿ, ವಕೀಲ ಕೆ.ಪಿ. ಜೇಮ್ಸ್ ಅವರು ತಮಿಳುನಾಡು ಕಡೆ ತೆರಳುತ್ತಿದ್ದ ಮಲಬಾರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬುಧವಾರ ರಾತ್ರಿ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಕೆ.ಪಿ.ಜೇಮ್ಸ್ ಅವರು ಪತ್ನಿಯೊಂದಿಗೆ ಚೆಂಗನೂರಿನ ಧಾರ್ಮಿಕ ಕ್ಷೇತ್ರಕ್ಕೆ ರೈಲಿನಲ್ಲಿ ತೆರಳುತ್ತಿದ್ದರು. ಹವಾನಿಯಂತ್ರಿತ ಕೋಚ್‌ನಲಿದ್ದ ಅವರು ರಾತ್ರಿ ವೇಳೆ ಶೌಚಾಲಯಕ್ಕೆ ಹೋದವರು ನಾಪತ್ತೆಯಾಗಿದ್ದರು. ಜೇಮ್ಸ್ ವಾಪಸ್ ಬರದ ಕಾರಣ ಅವರ ಪತ್ನಿ ಹುಡುಕಾಡಿದ್ದಾರೆ. ಎಲ್ಲೂ ಕಾಣದಿದ್ದಾಗ ಕಿರುಚಾಡಿದ್ದಾರೆ. ವ್ಯಕ್ತಿಯೊಬ್ಬರು ರೈಲಿನಿಂದ ಕೆಳಗೆ ಬಿದ್ದಿರುವ ವಿಚಾರವನ್ನು ರೈಲಿನಲ್ಲಿದ್ದ ಪ್ರಯಾಣಿಕರು ಅವರ ಗಮನಕ್ಕೆ ತಂದರು. ಈ ಮಧ್ಯೆ ತಲ್ವೇರಿ ಬಳಿಯ ಧರ್ಮಡಮ್ ಎಂಬಲ್ಲಿ ರೈಲ್ವೆ ಹಳಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಜೇಬಿನಲ್ಲಿ ಗುರುತುಚೀಟಿ ಮತ್ತು ಭಾವಚಿತ್ರ ಆಧರಿಸಿ ಅದು ಕೆ.ಪಿ. ಜೇಮ್ಸ್ ಅವರದ್ದು ಎಂದು ಶಂಕಿಸಲಾಗಿತ್ತು. ಬಳಿಕ ಸಂಬಂಧಿಕರು ಸ್ಥಳಕ್ಕೆ ತೆರಳಿ ದೃಢಪಡಿಸಿದ್ದಾರೆ. ಕೆ.ಪಿ. ಜೇಮ್ಸ್ ದಂಪತಿ ಪ್ರಯಾಣಿಸುತ್ತಿದ್ದ ರೈಲಿನಲ್ಲಿ…
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು(ಫೆ.17) ರಾಜ್ಯ ಸರ್ಕಾರದ ಕೊನೆಯ ಬಜೆಟ್ ಅನ್ನು ಮಂಡಿಸಲಿದ್ದಾರೆ. ಮೇ ತಿಂಗಳಿನಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯಲಿದ್ದು, ಈ ನಿಟ್ಟಿನಲ್ಲಿ ಅವರು ತಮ್ಮ ಬಜೆಟ್ ನಲ್ಲಿ ಹಲವು ಜನಪ್ರಿಯ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಇಂದು ಬೆಳಗ್ಗೆ 10.15ಕ್ಕೆ ವಿಧಾನಮಂಡಲದಲ್ಲಿ ಸಿಎಂ ಬೊಮ್ಮಾಯಿ ಬಜೆಟ್ ಮಂಡಿಸಲಿದ್ದಾರೆ. ಈ ಬಜೆಟ್ ನಲ್ಲಿ ಹಾಲಿನ ಪ್ರೋತ್ಸಾಹಧನ ಹೆಚ್ಚಳ, ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ, ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಸೇರಿದಂತೆ ಮಹತ್ವದ ಯೋಜನೆಗಳನ್ನು ಘೋಷಿಸುವ ನಿರೀಕ್ಷೆ ಇದೆ. ಈ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯ ಹೊಸ್ತಿಲಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಲಿರುವ ಕೊನೆಯ ಬಜೆಟ್ ರಾಜ್ಯದ ಜನತೆಯಲ್ಲಿ ಕುತೂಹಲ ಮೂಡಿಸಿದೆ. ಮಹಿಳಾ ಸ್ವಸಹಾಯ ಸಂಘಗಳಿಗೆ ಶೂನ್ಯ ಬಡ್ಡಿ ದರದಲ್ಲಿ ಅಥವಾ ಕಡಿಮೆ ಬಡ್ಡಿ ದರದಲ್ಲಿ ಹೆಚ್ಚು ಅನುದಾನ, ಇಲ್ಲವೇ ಮಹಿಳಾ ಸ್ವಸಹಾಯ ಸಂಘಗಳ ಸಾಲಮನ್ನಾ ಮಾಡುವ ಬಗ್ಗೆ ಕೂಡ ತಿಳಿಸುವ ಸಾಧ್ಯತೆ ಇದೆ. ಗಾಣಿಗ, ಮಡಿವಾಳ, ಮೇದಾರ, ನೇಕಾರ,…
ಉಡುಪಿ: ಗೂಡ್ಸ್ ವಾಹನವೊಂದರಲ್ಲಿ ವ್ಯಕ್ತಿಯೊಬ್ಬರ ಮೃತದೇಹವನ್ನು ತಂದು ರಸ್ತೆ ಬದಿಯ ಕಸದ ಕೊಂಪೆಗೆ ಎಸೆದು ಹೋದ ಅಮಾನವೀಯ ಘಟನೆ ಕೆಮ್ಮಣ್ಣು ಸಂತೆ ಮಾರುಕಟ್ಟೆಯ ಬಳಿ ಇಂದು ಮಧ್ಯಾಹ್ನ ನಡೆದಿದೆ. ಮೃತ ವ್ಯಕ್ತಿಯನ್ನು ಹನುಮಂತ ಎಂದು ಗುರುತಿಸಲಾಗಿದೆ. ಈತ ವಾರದ ಸಂತೆ ಹಿನ್ನೆಲೆಯಲ್ಲಿ ಕೆಮ್ಮಣ್ಣು ಮಾರುಕಟ್ಟೆಗೆ ವ್ಯಾಪಾರ ನಡೆಸಲು ಬಂದಿದ್ದ ಎನ್ನಲಾಗಿದೆ. ಆದರೆ ವಿಪರೀತ ಮದ್ಯಪಾನ ಮಾಡಿ ಅಲ್ಲೆ ಮೃತಪಟ್ಟಿದ್ದನು. ಇದನ್ನು ಕಂಡು ಇತರ ಇಬ್ಬರು ವ್ಯಾಪಾರಿಗಳು ಹನುಮಂತನ ಮೃತದೇಹವನ್ನು ಗೂಡ್ಸ್ ವಾಹನದಲ್ಲಿ ಸಾಗಿಸಿಕೊಂಡು ಹೋಗಿ ಕೆಮ್ಮಣ್ಣು ಸಂತೆಮಾರುಕಟ್ಟೆ ಬಳಿಯ ರಸ್ತೆಬದಿ ಕಸದ ಕೊಂಪೆಯಲ್ಲಿ ಎಸೆದು ಹೋಗಿದ್ದಾರೆ. ಮಾಹಿತಿ ತಿಳಿದ ಸಮಾಜ ಸೇವಕ ಈಶ್ವರ್ ಮಲ್ಪೆ ಅವರು ಮೃತದೇಹವನ್ನು ಉಡುಪಿ ಅಜ್ಜರ ಕಾಡು ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಪ್ಪಳ;ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕುಕನೂರು ಪೊಲೀಸ್ ಠಾಣೆ ವ್ಯಾಪ್ತಿಯ ಬನ್ನಿಕೊಪ್ಪದ ಬಳಿ ನಡೆದಿದೆ. ಹೈದರಾಬಾದ್ ಮೂಲದವರು ಗದಗಕ್ಕೆ ಸಂಚರಿಸುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದು ಸೇತುವೆಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಪೇಶಾವರ : ಪಂಜಾಬ್‌ನ ಚಿಚಾವಟ್ನಿಯಲ್ಲಿ ಗುರುವಾರ ಬೆಳಗ್ಗೆ ಕ್ವೆಟ್ಟಾಗೆ ಹೋಗುವ ಜಾಫರ್ ಎಕ್ಸ್‌ಪ್ರೆಸ್‌ನಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಕನಿಷ್ಠ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಡಾನ್ ವರದಿ ಮಾಡಿದೆ. ಕ್ವೆಟ್ಟಾಗೆ ಹೋಗುವ ಜಾಫರ್ ಎಕ್ಸ್‌ಪ್ರೆಸ್ ಚಿಚಾವಟ್ನಿ ರೈಲು ನಿಲ್ದಾಣದಿಂದ ಹಾದು ಹೋಗುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ ಜಾಫರ್ ಎಕ್ಸ್‌ಪ್ರೆಸ್, ಪೇಶಾವರದಿಂದ ಬರುತ್ತಿತ್ತು. ಫೋನ್‌ನಲ್ಲಿ ಡಾನ್‌ನೊಂದಿಗೆ ಮಾತನಾಡಿದ ಪಾಕಿಸ್ತಾನ ರೈಲ್ವೇಸ್ ವಕ್ತಾರ ಬಾಬರ್ ಅಲಿಗೆ ಸಣ್ಣ ಪುಟ್ಟ ಗಾಯ ಸಂಭವಿಸಿದೆ ಎಂದು ವರದಿಯಾಗಿದೆ. ಕ್ವೆಟ್ಟಾದಿಂದ ಪೇಶಾವರಕ್ಕೆ ಪ್ರಯಾಣಿಸುತ್ತಿದ್ದವೇಲೆ ರೈಲಿನ ನಾಲ್ಕನೇ ಸಂಖ್ಯೆಯ ಬೋಗಿಯೊಳಗೆ ಸಿಲಿಂಡರ್ ಸ್ಫೋಟ ಸಂಭವಿಸಿದೆ ಎಂದಿದ್ದಾರೆ. ಎಸ್‌ಪಿ ರೈಲ್ವೇಸ್ ಸ್ಫೋಟದ ಸ್ಥಳಕ್ಕೆ ಆಗಮಿಸಿದ್ದು, ಶೀಘ್ರದಲ್ಲೇ ಘಟನೆಯ ಬಗ್ಗೆ ವಿವರಗಳನ್ನು ನೀಡಿದ್ದಾರೆ
ಕಡಬ: ಮೊಟ್ಟೆ ಸಾಗಾಟ ಲಾರಿಯೊಂದು ಚಾಲನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಘಟನೆ ದಕ್ಷಿಣ ಕನ್ನಡದ ಕಡಬ ತಾಲೂಕಿನ ಆಲಂಕಾರು ಶರವೂರು ದೇವಾಲಯದ ಬಳಿ ನಡೆದಿದೆ. ಮೊಟ್ಟೆಗಳನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಚರಂಡಿಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಲಾರಿಯಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ. ಮೈಸೂರಿನಿಂದ ನೆಟ್ಟಣಕ್ಕೆ ಮೊಟ್ಟೆ ತಲುಪಿಸಿ ಉಳಿದ ಮೊಟ್ಟೆಗಳನ್ನು ಪುತ್ತೂರಿಗೆ ಕೊಂಡೊಯ್ಯುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಉಡುಪಿ: ಫೆ. 5ರಂದು ಪಾಂಗಾಳದಲ್ಲಿ ನಡೆದ ಶರತ್ ಶೆಟ್ಟಿ (39) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಇಬ್ಬರು ಆರೋಪಿಗಳನ್ನು ಪೊಲೀಸರು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗಳಾದ ಸುರತ್ಕಲ್‌ನ ಆಕಾಶ್ ಕರ್ಕೇರ (24) ಮತ್ತು ಪ್ರಸನ್ನ ಶೆಟ್ಟಿ (40) ಯನ್ನು ಪ್ರಕರಣದ ತನಿಖಾಧಿಕಾರಿ, ಕಾಪು ಪೊಲೀಸ್ ವೃತ್ತ ನಿರೀಕ್ಷಕ ಕೆ.ಸಿ. ಪೂವಯ್ಯ ನೇತೃತ್ವದಲ್ಲಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಇನ್ನು ಆಕಾಶ್ ಕರ್ಕೇರನನ್ನು ಒಂದು ವಾರಗಳ ಪೊಲೀಸ್ ಕಸ್ಟಡಿಗೆ ಹಾಗೂ ಪ್ರಸನ್ನ ಶೆಟ್ಟಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶಿಸಿದೆ.
ಲಿವಿಂಗ್ ಟುಗೆದರ್ ನಲ್ಲಿದ್ದ ಗೆಳತಿಯನ್ನು ಕೊಲೆ ಮಾಡಿ ಫಿಡ್ಜ್‌ನಲ್ಲಿಟ್ಟ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ವರ್ಷ ಇದೇ ರೀತಿ Shraddha Wakar ಎಂಬಾಕೆಯ ಕೊಲೆ ನಡೆದಿತ್ತು. ಆಕೆಯ ಶವವನ್ನು ಕತ್ತರಿಸಿ 35 ಭಾಗ ತುಂಡರಿಸಿ ಫ್ರಿಡ್ಜ್‌ನಲ್ಲಿರಿಸಿ ಬಳಿಕ ವಿಲೇವಾರಿ ಮಾಡಲಾಗಿತ್ತು. ಇದೀಗ ಅಂತದ್ದೇ ಇನ್ನೊಂದು ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯನ್ನು ಈಗ ಪೊಲೀಸರು ಬಂಧಿಸಿದ್ದಾರೆ. ಲೀವ್ ಇನ್ ರಿಲೇಷನ್‌ನಲ್ಲಿದ್ದ ತನ್ನ ಗೆಳತಿ ನಿಕ್ಕಿ ಯಾದವ್‌ಳನ್ನು ಸಾಹಿಲ್ ಗೆಹ್ಲೋಟ್ (24) ಕೊಲೆ ಮಾಡಿದ್ದ. ನಂತರ ಮೊಬೈಲ್ ಡೇಟಾ ಕೇಬಲ್ ಅನ್ನು ಆಕೆಯ ಕತ್ತಿಗೆ ಸುತ್ತಿ ಉಸಿರುಗಟ್ಟಿಸಿ ಸಾಯಿಸಿದ್ದ. ಬಳಿಕ ಆ ಶವವನ್ನು ಫ್ರಿಡ್ಜ್‌ನಲ್ಲಿಟ್ಟಿದ್ದ. ರಸ್ತೆ ಬದಿಯ ಡಾಬಾ ಕಂ ರೆಸ್ಟೂರೆಂಟ್‌ನ ಫ್ರಿಡ್ಜ್‌ನಲ್ಲಿ ಆಕೆಯ ಶವವು ಪತ್ತೆಯಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಇಂದು ಈತನನ್ನು ಕೋರ್ಟ್ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. 24 ವರ್ಷದ ಸಾಹಿಲ್ ಗೆಹ್ಲೋಟ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ತನ್ನ ಗೆಳತಿಯನ್ನು ಕೊಂದು ಆಕೆಯ…