ಗಾಜಿಯಾಬಾದ್;ಕೋರ್ಟ್ ಆವರಣದಲ್ಲಿ ವಕೀಲರು, ಪೊಲೀಸರು ಮತ್ತು ಶೂ ಪಾಲೀಶ್ ಮಾಡುತ್ತಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ನಡೆದಿದೆ. ಶೂ ಪಾಲಿಶ್ ಮಾಡುತ್ತಿದ್ದ ವ್ಯಕ್ತಿಯ ಕಿವಿಯನ್ನು ಚಿರತೆ ಹರಿದು ಹಾಕಿದೆ.ಆತ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿರತೆ ಪ್ರವೇಶಿಸಿದ ಕೂಡಲೇ ಹಳೆ ಕಟ್ಟಡದ ಕೋರ್ಟ್ ಕೋಣೆಗಳನ್ನು ಖಾಲಿ ಮಾಡಲಾಗಿತ್ತು.ಚಿರತೆ ದಾಳಿ ಬಳಿಕ ಬಂದ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಚಿರತೆ ದಾಳಿಯಿಂದ ಇಡೀ ನ್ಯಾಯಾಲಯದಲ್ಲಿ ಆತಂಕ ಹಾಗೂ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
Author: main-admin
ಬೆಂಗಳೂರು : ಫೆ. 10 ರಿಂದ 24 ರವರೆಗೆ ರಾಜ್ಯ ಬಜೆಟ್ ಅಧಿವೇಶನ ನಡೆಯಲಿದ್ದು, ಈ ಹಿನ್ನೆಲೆ ವಿಧಾನಸೌಧದ ಸುತ್ತಾಮುತ್ತಾ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ವಿಧಾನಸೌಧದ ಸುತ್ತಾಮುತ್ತಾ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದ್ದು, 5 ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ. ಮೆರವಣಿಗೆ, ಪ್ರತಿಭಟನೆಗೆ, ಸಭೆ ಆಯೋಜನೆಗೆ ನಿಷೇಧ ಹೇರಲಾಗಿದೆ. ಈ ವೇಳೆ ಯಾವುದೇ ಪ್ರತಿಕೃತಿಗಳ ದರ್ಶನ ಹಾಗೂ ದಹನ ಮಾಡುವಂತಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಫೆ.10 ರಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಫೆ.17 ಕ್ಕೆ ಬಜೆಟ್ ಮಂಡನೆಯಾಗಲಿದೆ. ಅಧಿವೇಶನದ ಕಾರ್ಯಕಲಾಪಗಳಿಗೆ ಅಡಚಣೆ, ಸಾರ್ವಜನಿಕ ನೆಮ್ಮದಿಗೆ ಭಂಗ, ಸುಗಮ ಸಂಚಾರಕ್ಕೆ ತೊಂದರೆಯಾಗದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸಿ.ಹೆಚ್. ಪ್ರತಾಪ್ ರೆಡ್ಡಿಯವರು ಐಪಿಸಿ ಸೆಕ್ಷನ್ 144 ರ ಪ್ರಕಾರ ಪ್ರತಿಬಂಧಕಾಜ್ಞೆ ಜಾರಿಮಾಡಿ ಆದೇಶಿಸಿದ್ದಾರೆ.
ಪುತ್ತೂರು: ಸಿ ಮತ್ತು ಡಿ ದರ್ಜೆ ಸ್ಥಾನಮಾನಕ್ಕೆ ಒತ್ತಾಯಿಸಿ ಫೆ.6ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಗ್ರಾ.ಪಂ.ನೌಕರರ ಬೆಂಗಳೂರು ಚಲೋ ಕಾರ್ಯಕ್ರಮಕ್ಕೆ ಸರಕಾರ ಸ್ಪಂದಿಸದೇ ಇದ್ದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಪ್ರತೀ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿಯೂ ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್ ಮುಖಂಡರಾದ ಕೋಡಿಂಬಾಡಿ ರೈ ಎಸ್ಟೇಟ್ ಮಾಲಕ ಅಶೋಕ್ ಕುಮಾರ್ ರೈ ಎಚ್ಚರಿಸಿದ್ದಾರೆ. ಗ್ರಾಮ ಪಂಚಾಯಿತಿ ನೌಕರರಿಂದ ಫ್ರೀಡಂ ಪಾರ್ಕ್ನಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ನನ್ನ ಬೆಂಬಲ ಇದೆ, ಗ್ರಾಮೀಣ ಮಟ್ಟದಲ್ಲಿ ಸರಕಾರದ ಅಭಿವೃದ್ಧಿ ಕೆಲಸಗಳಿಗೆ ಕೈ ಜೋಡಿಸುವುದೇ ಗ್ರಾಮ ಪಂಚಾಯತ್ ಮಟ್ಟದಲ್ಲಿ ಕಾರ್ಯ ನಿರ್ವಹಿಸುವ ಗ್ರಾಮ ಪಂಚಾಯತ್ ಕೆಲಸಗಾರರು. ಹಳ್ಳಿಗಳಲ್ಲಿ ಇವರನ್ನೆಲ್ಲಾ ಸರಕಾರಿ ನೌಕರರೆಂದೇ ಜನ ಪರಿಗಣಿಸುತ್ತಾರೆ. ಆದರೆ ಕಳೆದ ಮೂವತ್ತು ಮೂವತ್ತೈದು ವರ್ಷಗಳಿಂದಲೂ ಈ ನೌಕರರ ಪಾಡು ಕೇಳುವವರಿಲ್ಲ. ಗ್ರಾಮ ಪಂಚಾಯತ್ ಗಳಲ್ಲಿ ಕೆಲಸ ನಿರ್ವಹಿಸಿ ಪಂಚಾಯತ್ ಸುಸೂತ್ರವಾಗಿ ಕೆಲಸ ನಿರ್ವಹಿಸಲು ನೆರವಾಗುತ್ತಿರುವ ಕ್ಲರ್ಕ್ ಗಳು, ಡಾಟಾ ಎಂಟ್ರಿ ಆಪರೇಟರ್ ಗಳು, ನೀರು ಬಿಡುವವರು, ಬಿಲ್…
ಮಂಗಳೂರು: ನಗರದ ಸಿಟಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿಯರ ಫುಡ್ ಪಾಯಿಸನ್ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಕಾಲೇಜು ಆಡಳಿತ ಮಂಡಳಿಯ ನಿರ್ಲಕ್ಷ್ಯ ಕಂಡುಬಂದ ಹಿನ್ನೆಲೆಯಲ್ಲಿ ದ.ಕ ಆರೋಗ್ಯ ಇಲಾಖೆ ಕಾಲೇಜು ಆಡಳಿತ ಮಂಡಳಿ ವಿರುದ್ಧ ಎಫ್‌ಐಆರ್ ದಾಖಲಿಸಿದೆ. ಆಸ್ಪತ್ರೆಗೆ ದಾಖಲಾಗಿದ್ದ 137 ಮಂದಿ ವಿದ್ಯಾರ್ಥಿನಿಯರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಮನೆಯ ಕಡೆಗೆ ಹೆಜ್ಜೆ ಹಾಕಿದ್ದಾರೆ. ಮಂಗಳೂರು ನಗರದ ಸಿಟಿ ನರ್ಸಿಂಗ್ ಕಾಲೇಜು ಹಾಸ್ಟೆಲ್‌ನ 137 ಕ್ಕೂ ಅಧಿಕ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆಗೆ ಸಂಬಂಧಿಸಿದಂತೆ ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಕದ್ರಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಗದೀಶ್ ಅವರು ನೀಡಿರುವ ದೂರಿನಂತೆ ಈ ಪ್ರಕರಣ ದಾಖಲು ಮಾಡಲಾಗಿದೆ. ಯಾವುದೋ ಸಂಶಯಾಸ್ಪದ ವಿಷಹಾರಿ ಆಹಾರವನ್ನು ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ನೀಡಲಾಗಿದೆ ಮತ್ತು ಆಹಾರ ತಯಾರಿಕೆ ಹಾಗೂ ಪೂರೈಕೆಯಲ್ಲಿ ಶುಚಿತ್ವ ಕಾಪಾಡದೆ ನಿರ್ಲಕ್ಷ್ಯ ವಹಿಸಲಾಗಿದೆ. ಜಿಲ್ಲಾಡಳಿತಕ್ಕೆ ಮಾಹಿತಿ ನೀಡದ ಕಾಲೇಜು ಆಡಳಿತ ಮಂಡಳಿ ಆಸ್ವತ್ರೆಗೆ ದಾಖಲಿಸುವ ಸಂದರ್ಭ ಸೂಕ್ತ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ವರದಿ ಮಾಡದೇ ಲೋಪ…
ಟರ್ಕಿ : ಸತತ ಭೂಕಂಪನದಿಂದ ಟರ್ಕಿ ಹಾಗೂ ಸಿರಿಯಾ ದೇಶಗಳು ಸಂಪೂರ್ಣ ನಾಶವಾಗಿದ್ದು, ಭೂಕಂಪನದಿಂದಾಗಿ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರ ಆಕ್ರಂದನ ಮುಗಿಲು ಮುಟ್ಟಿದೆ. ಆದರೆ ಮತ್ತೆ ಮತ್ತೆ ಭೂಕಂಪನ ಉಂಟಾಗುತ್ತಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡಿಸಿದೆ.ಈ ನಡುವೆ ಸೋಮವಾರದ ಭೂಕಂಪದಿಂದ ದೇಶ ಚೇತರಿಸಿಕೊಳ್ಳುವ ಮೊದಲೇ ಮಂಗಳವಾರ ಮತ್ತೆ ರಿಕ್ಟರ್ ಮಾಪಕದಲ್ಲಿ 7.6 ಮತ್ತು 6 ತೀವ್ರತೆ ಹೊಂದಿದ್ದ ಎರಡು ಭೂಕಂಪ ಸಂಭವಿಸಿದ್ದು, ಪತನದ ಅಂಚಿನಲ್ಲಿದ್ದ ಮತ್ತಷ್ಟು ಕಟ್ಟಡಗಳನ್ನು ನೆಲಸಮ ಮಾಡಿವೆ.ಟರ್ಕಿ ಮತ್ತು ಸಿರಿಯಾದಲ್ಲಿ ಭೂಕಂಪನ ಪರಿಣಾಮ ಮೃತರ ಸಂಖ್ಯೆ ಕನಿಷ್ಠ 7,926ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಟರ್ಕಿಯಲ್ಲಿ ಕನಿಷ್ಠ 5,894 ಜನರು ಸಾವನ್ನಪ್ಪಿದ್ದು, 34,810 ಜನರು ಗಾಯಗೊಂಡಿದ್ದಾರೆ ಎಂದು ಟರ್ಕಿಯ ಉಪಾಧ್ಯಕ್ಷ ಫುವಾಟ್ ಒಕ್ಟೇ ಹೇಳಿದ್ದಾರೆ. ಟರ್ಕಿ ಮತ್ತು ಸಿರಿಯಾದ ದುರಂತವು 5,600ಕ್ಕೂ ಹೆಚ್ಚು ಕಟ್ಟಡಗಳು ನೆಲಕಚ್ಚುವಂತೆ ಮಾಡಿದೆ. ಅನೇಕ ನಗರಗಳಲ್ಲಿ ಕಟ್ಟಡಗಳು ನಾಮಾವಶೇಷವಾಗಿವೆ. ದಕ್ಷಿಣ ಟರ್ಕಿ ಮತ್ತು ಉತ್ತರ ಸಿರಿಯಾ ನಡುವಿನ 250 ಮೈಲು ಉದ್ದದ ಪ್ರದೇಶದಲ್ಲಿ…
ಮೂಲ್ಕಿ:ಕಾಲೇಜು ಉಪನ್ಯಾಸಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಡಿ ಎಂಬಲ್ಲಿನಡೆದಿದೆ. ಅಮಿತಾ ಬಿವಿ (34) ಆತ್ಮಹತ್ಯೆ ಮಾಡಿಕೊಂಡವರು. ಇವರಿಗೆ ಓರ್ವ ಮಗಳಿದ್ದಾಳೆ.ಅಮಿತಾ ಅವರಿಗೆ ವಿವಾಹವಾಗಿ 12 ವರ್ಷಗಳಾಗಿದ್ದು ತಾಯಿ ಮನೆಯಿಂದ ಬಂದು ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ತಮ್ಮ ಬೆಡ್ ರೂಮ್ ನ ಫ್ಯಾನ್ ಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮುಲ್ಕಿ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಅಮಿತಾ ವಾಮದಪದವು ಕಾಲೇಜಿನಲ್ಲಿ ಅತಿಥಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.
ಬೆಳ್ತಂಗಡಿ: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಗಾಯಾಳು ಚಿಕಿತ್ಸೆಗೆ ಚೇತರಿಸಿಕೊಳ್ಳದೆ ಅಸುನೀಗಿದ ಘಟನೆ ನಡೆದಿದೆ. ಮೃತ ಯುವಕನನ್ನು ಕೊಕ್ಕಡ ಸೌತಡ್ಕ ನಿವಾಸಿ ಸಿರಾಜ್ ಎಂದು ಗುರುತಿಸಲಾಗಿದೆ. ಕೆಲ ದಿನಗಳ ಹಿಂದೆ ಟಿಪ್ಪರ್ ಮತ್ತು ಸಿರಾಜ್ ಸಂಚರಿಸುತ್ತಿದ್ದ ಬೈಕ್ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಸಮೀಪದ ಕೆಂಪಕೋಡಿ ಎಂಬಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮಸಿರಾಜ್ ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯರು ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅಪಘಾತದ ತೀವ್ರತೆಗೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಿರಾಜ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ದಾವಣಗೆರೆ;ಮಕ್ಕಳಿಗೆ ಪಾಠ ಮಾಡುವಾಗಲೇ ಶಿಕ್ಷಕ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಭಾನುವಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಘಟನೆ ನಡೆದಿದ್ದು ಇಂಗ್ಲೀಷ್ ವಿಷಯದ ಶಿಕ್ಷಕ ವಿಜಯ್ ಕುಮಾರ್ (54) ಮೃತರು. ವಿಜಯ್ ಕುಮಾರ್ ಬೆಳಗ್ಗೆ ಶಾಲೆಯಲ್ಲಿ ಪ್ರಾರ್ಥನೆ ಮುಗಿಸಿ ಮಕ್ಕಳಿಗೆ ಪಾಠ ಮಾಡುತ್ತಿದ್ದರು. ಈ ವೇಳೆ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದಿದ್ದು ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.
ಮುಂಬೈ: ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಬಂದಿದೆ. ಬೆದರಿಕೆ ಹಾಕಿರುವ ವ್ಯಕ್ತಿ ಇಂಡಿಯನ್ ಮುಜಾಹಿದ್ದೀನ್ ಎಂಬ ಭಯೋತ್ಪಾದಕ ಸಂಘಟನೆ ಹೆಸರಿನಲ್ಲಿ ಬೆದರಿಕೆ ಹಾಕಿದ್ದಾನೆ. ಈ ಬೆದರಿಕೆ ಕರೆ ನಂತರ, ಮುಂಬೈ ಪೊಲೀಸರು ಸೇರಿದಂತೆ ಎಲ್ಲಾ ಏಜೆನ್ಸಿಗಳು ಅಲರ್ಟ್ ಆಗಿವೆ. ಮುಂಬೈ ಪೊಲೀಸರ ಪ್ರಕಾರ, ಸೋಮವಾರ ವಿಮಾನ ನಿಲ್ದಾಣದಲ್ಲಿ ಈ ಬೆದರಿಕೆ ಕರೆ ಬಂದಿದೆ. ಇದಾದ ಬಳಿಕ ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದಾರೆ. ವಿಮಾನ ನಿಲ್ದಾಣದ ಎಲ್ಲಾ ಏಜೆನ್ಸಿಗಳಿಗೂ ಎಚ್ಚರಿಕೆಯನ್ನು ಕಳುಹಿಸಲಾಗಿದೆ. ಮುಂಬೈನ ಸಹರ್ ಪೊಲೀಸರು ಅಪರಿಚಿತರ ವಿರುದ್ಧ ಐಪಿಸಿ ಸೆಕ್ಷನ್ 505(1) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಶುಕ್ರವಾರ ಮುಂಜಾನೆ ಮುಂಬೈನಲ್ಲಿ ಉಗ್ರರ ದಾಳಿಯ ಭೀತಿ ಎದುರಾಗಿತ್ತು. ತನಿಖಾ ಸಂಸ್ಥೆ ಎನ್‌ಐಎಗೆ ಬೆದರಿಕೆ ಮೇಲ್ ಕಳುಹಿಸಲಾಗಿದೆ. ಈ ಮೇಲ್ ಅನ್ನು ಎನ್‌ಐಎ ಇಮೇಲ್ ಐಡಿಯಲ್ಲಿ ಸ್ವೀಕರಿಸಲಾಗಿದೆ. ಇದರಲ್ಲಿ ಮುಂಬೈನಲ್ಲಿ ದಾಳಿಯ ಬೆದರಿಕೆ ಇತ್ತು. ಇದಾದ ನಂತರ ಮುಂಬೈ ಪೊಲೀಸರು ಮತ್ತು ಏಜೆನ್ಸಿಗಳು ಅಲರ್ಟ್…
ಬೆಳ್ತಂಗಡಿ : ಲಾಡ್ಜ್ ಗಳಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದ ಹಿನ್ನಲೆ ಉಜಿರೆಯ ವಸತಿ ಗೃಹಗಳ ಮೇಲೆ ಜಿಲ್ಲಾ ಎಸ್.ಪಿ ಅವರ ಸೂಚನೆಯಂತೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.ಸೋಮವಾರ ರಾತ್ರಿಯ ವೇಳೆ ಐದು ವಿಶೇಷ ಪೊಲೀಸ್ ತಂಡಗಳು ಏಕಕಾಲದಲ್ಲಿ ಲಾಡ್ಜ್ ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಆದರೆ ಪರಿಶೀಲನೆಯ ವೇಳೆ ಯಾವುದೇ ಅನೈತಿಕ ಚಟುವಟಿಕೆಗಳು ನಡೆದಿರುವುದು ಕಂಡುಬಂದಿಲ್ಲ ಎಂದು ತಿಳಿದು ಬಂದಿದೆ. ಉಜಿರೆಯ ಲಾಡ್ಜ್ ಗಳಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಆರೋಪಗಳು ಕೇಳಿ ಬಂದಿದ್ದವು ಈ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಎಲ್ಲ ಲಾಡ್ಜ ಗಳಿಗೂ ದಾಖಲೆಗಳನ್ನು ಸಮರ್ಪಕವಾಗಿ ಇರಿಸುವಂತೆ ಹಾಗೂ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.