ಮಂಗಳೂರು : ಊಟ ಸೇವಿಸಿದ ಬಳಿಕ 137 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ಮಂಗಳೂರಿನ ಶಕ್ತಿನಗರದಲ್ಲಿರುವ ನರ್ಸಿಂಗ್ ಹಾಸ್ಟೆಲ್ ನಲ್ಲಿ ನಡೆದಿದೆ. ಮಂಗಳೂರಿನ ಶಕ್ತಿನಗರದಲ್ಲಿರುವ ಸಿಟಿ ನರ್ಸಿಂಗ್ ಹಾಸ್ಟೆಲ್ ನಲ್ಲಿ ಫುಡ್ ಪಾಯಿಸನ್ ನಿಂದಾಗಿ 137 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು, ವಿದ್ಯಾರ್ಥಿನಿಯರನ್ನು ಮಂಗಳೂರಿನ ವಿವಿಧ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯಾರ್ಥಿನಿಯರು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿದ್ದು, ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ್ದಾರೆ. ಕಾಲೇಜು ಆಡಳಿತ ಮಂಡಳಿ ವಿರುದ್ಧ ನಿರ್ಲಕ್ಷ್ಯ ಆರೋಪ ಕೇಳಿ ಬಂದಿದೆ.
Author: main-admin
ಕಾಪು: ಪಾಂಗಾಳದಲ್ಲಿ ನಡೆದ ಶರತ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಗೆ ಆರೋಪಿಗಳ ಬಗ್ಗೆ ಮಹತ್ವದ ಸುಳಿವು ಲಭಿಸಿದೆ ಎನ್ನಲಾಗಿದ್ದು, ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಉಡುಪಿ ಎಸ್ಪಿ ಅಕ್ಷಯ್ ಮಚ್ಚೀಂದ್ರ, ಕಾರ್ಕಳ ಡಿವೈಎಸ್ಪಿ ಅರವಿಂದ್ ನೇತೃತ್ವದ ಮೂರು ಪೊಲೀಸ್ ತಂಡಗಳು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದೆ.ಕೊಲೆಯಾದ ಶರತ್ ಅವರ ಮೊಬೈಲ್ ಮಾಹಿತಿ ಮತ್ತು ಸಿಸಿಟಿವಿ ವಿಡಿಯೋ ಆಧಾರದಲ್ಲಿ ತನಿಖೆ ನಡೆಯುತ್ತಿದೆ.ಕೊಲೆಗೆ ಸಂಬಂಧಿಸಿ ಹಲವು ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎನ್ನಲಾಗಿದೆ. ಶರತ್ ಶೆಟ್ಟಿ ಭೂ ವ್ಯವಹಾರ ನಡೆಸಿಕೊಂಡಿರುವುದರಿಂದ ಪೊಲೀಸರು ಈ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಉಡುಪಿ ಎಸ್ಪಿ ಅಕ್ಷಯ್ ಮಚ್ಚೀಂದ್ರ ತಿಳಿಸಿದ್ದಾರೆ.
ಉಡುಪಿ: ಸಾರ್ವಜನಿಕರ ದೈನಂದಿನ ಜೀವನದಲ್ಲಿ ಹಾಸುಹೊಕ್ಕಿರುವ ಪ್ಲಾಸ್ಟಿಕ್ ನ ಬಳಕೆಯ ನಂತರ, ಅದರ ತ್ಯಾಜ್ಯ ವಿಲೇವಾರಿ ಸಮಸ್ಯೆ ಎಲ್ಲೆಡೆ ಕಂಡುಬರುತ್ತಿದೆ. ಪ್ಲಾಸ್ಟಿಕ್ ನಿಂದ ಉಂಟಾಗುವ ದುಷ್ಪರಿಣಾಮಗಳನ್ನು ತಡೆಗಟ್ಟಬೇಕಾದ ಬೃಹತ್ ಸಮಸ್ಯೆಯೂ ನಮ್ಮ ಮುಂದಿದೆ. ಪ್ಲಾಸ್ಟಿಕ್ ಅನ್ನು ಒಂದು ತ್ಯಾಜ್ಯವೆಂದು ಪರಿಗಣಿಸುವ ಬದಲಿಗೆ ಅದನ್ನು ಸೂಕ್ತ ರೀತಿಯಲ್ಲಿ ಮರುಬಳಕೆ ಮಾಡಿದರೆ ಅದು ಒಂದು ಸಂಪನ್ಮೂಲವಾಗುತ್ತದೆ ಎಂಬುದಕ್ಕೆ ಉಡುಪಿ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯದಿಂದ ನಿರ್ಮಿಸಿದ ರಸ್ತೆ ಸಾಕ್ಷಿಯಾಗಿದೆ. ಪ್ಲಾಸ್ಟಿಕ್ ತ್ಯಾಜ್ಯದ ಮರುಬಳಕೆ ಕುರಿತಂತೆ 2019 ರ ಡಿಸೆಂಬರ್ 10 ರಂದು ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಅಡಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಬಳಸಿ ರಸ್ತೆ ನಿರ್ಮಾಣ ಮಾಡುವ ಕಾರ್ಯಾಗಾರವನ್ನು ಉಡುಪಿ ಜಿಲ್ಲಾ ಪಂಚಾಯತ್ ನಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಾಗಾರದಲ್ಲಿ ಪದ್ಮಶ್ರೀ ಪ್ರಶಸ್ತಿ ವಿಜೇತ ಹಾಗೂ ಪ್ಲಾಸ್ಟಿಕ್ ಮ್ಯಾನ್ ಖ್ಯಾತಿ ಪಡೆದ ತಮಿಳುನಾಡಿನ ಡಾ.ವಾಸುದೇವನ್ ಇವರು ಜಿಲ್ಲೆಯ ವಿವಿಧ ಇಲಾಖೆ ಹಾಗೂ ಸಂಸ್ಥೆಗಳ ಇಂಜಿನಿಯರ್ ಗಳು ಮತ್ತು ಅಧಿಕಾರಿಗಳಿಗೆ ತರಬೇತಿ ನೀಡಿದ್ದರು.ಉಡುಪಿ ಜಿಲ್ಲೆಯ ಎಸ್‌ಎಲ್‌ಆರ್‌ಎಂ(SLRM) ಕೇಂದ್ರಗಳಲ್ಲಿ ಶೇಖರಣೆಯಾಗಿದ್ದ ಪ್ಲಾಸ್ಟಿಕ್…
ಬೆಳ್ತಂಗಡಿ: ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಅಂಜುಮಖಾನ್ (41)ಎಂಬಾತನಾಗಿದ್ದಾನೆ. ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಈತ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ನಿಂದ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ವಿಟ್ಲ: ವಿಟ್ಲ ಸಮೀಪದ ಕಾಂತಡ್ಕದಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ನಡೆದಿದೆ. ರಹೀಮ್ ಶಾನ್ ಅವರ ಮನೆಯಲ್ಲಿ ಕುಟುಂಬ ಸದಸ್ಯರು ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದು, ರಾತ್ರಿ ಗಂಟೆ 8 ರಿಂದ 11 ಗಂಟೆಯ ಒಳಗೆ ಮನೆಗೆ ನುಗ್ಗಿ ಸುಮಾರು ಹದಿನೈದು ಪವನ್ ಚಿನ್ನ ಹಾಗೂ ಒಂದು ಲಕ್ಷ ನಗದನ್ನು ದರೋಡೆ ಮಾಡಿ ಪರಾರಿಯಾಗಿರುವುದಾಗಿ ವರದಿಯಾಗಿದೆ.ಇನ್ನು ಮನೆಮಂದಿ ರಾತ್ರಿ 12 ಗಂಟೆಗೆ ಬಂದಾಗ ಹಿಂಬದಿಯ ಬಾಗಿಲು ಮುರಿಯಲಾಗಿದ್ದು, ಕಳವು ನಡೆದ ಬಗ್ಗೆ ಬೆಳಕಿಗೆ ಬಂದಿದೆ.ಸ್ಥಳಕ್ಕಾಗಮಿಸಿದ ವಿಟ್ಲ ಪೋಲಿಸರು ಪರಿಶೀಲನೆ ನಡೆಸಿದ್ದಾರೆ.
ಮಂಗಳೂರು: ನಗರದ ಹಂಪನ ಕಟ್ಟೆಯ ಜುವೆಲ್ಯರಿಯೊಂದರಲ್ಲಿ ಕಳೆದ ಶುಕ್ರವಾರ ಹಾಡುಹಗಲೇ ನಡೆದ ಸಿಬ್ಬಂದಿ ಕೊಲೆ, ಅಂಗಡಿ ದರೋಡೆ ಪ್ರಕರಣದ ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ, ಆರೋಪಿ ಪರಾರಿಯಾಗಿರುವ ಹಿನ್ನಲೆಯಲ್ಲಿ ಆಟೋ ರಿಕ್ಷಾ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಅಂಗಡಿಯ ಸಿಬ್ಬಂದಿಯಾಗಿದ್ದ ಅತ್ತಾವರ ನಿವಾಸಿ ರಾಘವೇಂದ್ರ ಆಚಾರ್ಯ (55) ಅವರಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿ, ಬಳಿಕ ಅಂಗಡಿ ದರೋಡೆ ನಡೆಸಿ , ಮುಸುಕುಧಾರಿಯಾಗಿದ್ದ ಆರೋಪಿ ಅನಂತರ ಸ್ವಲ್ಪ ದೂರಕ್ಕೆ ಓಡಿ ಹೋಗಿ ಆಟೋರಿಕ್ಷಾವೊಂದರಲ್ಲಿ ಹೋಗಿದ್ದು ಸಿಸಿ ಟಿವಿ ಕೆಮರಾದಲ್ಲಿ ದಾಖಲಾಗಿತ್ತು.ಆರೋಪಿ ಯಾವ ಕಡೆ ಹೋಗಿದ್ದ ಎಂಬ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು: ರಾಜ್ಯ ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ, ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವಂತ ನೌಕರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಇಂದಿನಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ತಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸೋವರೆಗೆ ಮುಷ್ಕರ ನಿಲ್ಲಿಸುವುದಿಲ್ಲ ಎಂಬುದಾಗಿ ಎಚ್ಚರಿಕೆಯನ್ನು ನೀಡಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ರಾಜ್ಯ ಆರೋಗ್ಯ, ವೈದ್ಯಕೀಯ ಇಲಾಖೆಯ ಗುತ್ತಿಗೆ-ಹೊರಗುತ್ತಿಗೆ ನೌಕರರ ರಾಜ್ಯಾಧ್ಯಕ್ಷ ವಿಶ್ವರಾಧ್ಯ ಎಚ್. ಯಮೋಜಿ ಅವರು, ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ KSHCOEA ಸಂಘವು ಹಲವಾರು ವರ್ಷಗಳಿಂದ, ಹಲವು ಹಂತಗಳಲ್ಲಿ ಹೋರಾಟ ಮತ್ತು ಸರ್ಕಾರದ ಗಮನ ಸೆಳೆದು ಸರ್ಕಾರವೆ ಆರೋಗ್ಯ ಇಲಾಖೆಯ ಗುತ್ತಿಗೆ ಹೊರಗುತ್ತಿಗೆ ನೌಕರರ ಸಮಸ್ಯೆಗಳನ್ನು ಪರಿಹರಿಸಲು ಶ್ರೀನಿವಾಸಚಾರ ಸಮೀತಿ ರಚಿಸಿ ವರದಿ ಪಡೆದಿದ್ದು ವರ್ಷಗಳೆ ಕಳೆದು ಹೋಗಿದೆ. ಹತ್ತು ಹಲವು ಸಾರಿ ಸದರಿ ನೌಕರರ ಮೇಲಿನ ಅನ್ಯಾಯವನ್ನು ಅತ್ಯಂತ ಜವಾಬ್ದಾರಿಯುತವಾಗಿ ಸರ್ಕಾರಕ್ಕೆ ಮುಜಗರವಾಗದಂತೆ ಬಹಳ ಸಂಯಮದಿಂದ ರಾಷ್ಟ್ರದ ಅತಿದೊಡ್ಡ ಕಾರ್ಮಿಕ ಸಂಘಟನೆ ಭಾರತೀಯ ಮಜ್ದೂರ್ ಸಂಘ ಹಾಗೂ ಶಾಸಕರು ಮತ್ತು…
ಉಡುಪಿ : ತ್ಯಾಜ್ಯ ವಿಲೇವಾರಿಯಲ್ಲಿ ರಾಜ್ಯಕ್ಕೆ ಮಾದರಿಯಾಗುವಂತಹ ಯೋಜನೆಗಳನ್ನು ರೂಪಿಸಿ ಅವುಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡುತ್ತಿರುವ ಜಿಲ್ಲೆಯೆಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಉಡುಪಿ ಜಿಲ್ಲೆಯು ಪ್ರಸ್ತುತ ಮತ್ತೊಂದು ವಿನೂತನ ಸ್ವಚ್ಛತಾ ಕಾರ್ಯಕ್ರಮದ ಪ್ರಾಯೋಗಿಕ ಯೋಜನೆಗೆ ಜಿಲ್ಲಾಧಿಕಾರಿಗಳ ವಸತಿಗೃಹ ಸಾಕ್ಷಿಯಾಗಿದೆ. ಮನೆಯ ಕಾಂಪೌ0ಡ್ ನಲ್ಲಿ ಬೀಳುವ ಒಣಕಸವನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಣೆ ಮಾಡುವ ವಿಧಾನವನ್ನು ಉಡುಪಿ ಜಿಲ್ಲಾಧಿಕಾರಿಗಳ ವಸತಿಗೃಹದಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನ ಮಾಡಿದ್ದು, ವಸತಿಗೃಹದಲ್ಲಿನ ಕೈ ತೋಟದ ಒಣ ಹುಲ್ಲು, ತೋಟದ ಗಿಡಗಳಿಂದ ಬಿದ್ದಿದ್ದ ಗಿಡದ ಎಲೆಗಳು, ಮರದ ಮೇಲಿಂದ ಬಿದ್ದ ಒಣ ಎಲೆಗಳನ್ನು ಒಟ್ಟುಗೂಡಿಸಿ, “ಡ್ರೈ ಲೀವ್ಸ್ ಕಂಪೋಸ್ಟ್ ಬೆಡ್” ನಿರ್ಮಾಣ ಮಾಡಲಾಗಿದೆ. ಕಾಂಪೌ0ಡ್ ನಲ್ಲಿ ಸಂಗ್ರಹಿಸಲಾದ ಎಲೆ ಮತ್ತು ಹುಲ್ಲನ್ನು ಸೆಗಣಿಯೊಂದಿಗೆ ಮಿಶ್ರಣ ಮಾಡಿ, 10*6 ಅಳತೆಯ ಬೆಡ್ ಮಾದರಿಯಲ್ಲಿ ಜೋಡಿಸಲಾಗಿದ್ದು,ಗೋಣಿಚೀಲದ ಹೊದಿಕೆ ಹಾಕಲಾಗಿದೆ.ಪ್ರತಿ ದಿನ ದಿನ ಈ ಬೆಡ್ ಮೇಲೆ ನೀರಿನ ಸಿಂಪಡಣೆ ಮಾಡಬೇಕಿದ್ದು, ಇದು 45 ದಿನಗಳ ಬಳಿಕ ಅತ್ಯುತ್ತಮ ಸಾವಯವ ಗೊಬ್ಬರವಾಗಿ ಪರಿವರ್ತನೆಗೊಳ್ಳಲಿದೆ. ಇದನ್ನು ಕೈ ತೋಟದಲ್ಲಿನ ಗಿಡಗಳಿಗೆ…
ಹಾಲು, ಸಕ್ಕರೆ ಮತ್ತು ಟೀ ಎಲೆಗಳಿಂದ ತಯಾರಿಸಿದ ಚಹಾಕ್ಕಿಂತ ಗ್ರೀನ್ ಟೀ ಸೇವನೆ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂಬುದರಲ್ಲಿ ಎರಡು ಮಾತಿಲ್ಲ. ಹೆಚ್ಚಿನ ಆರೋಗ್ಯ ತಜ್ಞರು ತೂಕವನ್ನು ಕಡಿಮೆ ಮಾಡಲು ಮತ್ತು ಅನೇಕ ಸಮಸ್ಯೆಗಳನ್ನು ತೊಡೆದುಹಾಕಲು ಗ್ರೀನ್ ಟೀ ಕುಡಿಯಲು ಶಿಫಾರಸು ಮಾಡುತ್ತಾರೆ, ಆದರೆ ಗ್ರೀನ್ ಟೀಗೆ ಕೆಲವು ವಿಶೇಷ ವಸ್ತುಗಳನ್ನು ಸೇರಿಸಿದರೆ, ಅದರ ಗುಣಲಕ್ಷಣಗಳು ಬಹಳಷ್ಟು ಹೆಚ್ಚಾಗುತ್ತದೆ. ಹಸಿರು ಚಹಾದಲ್ಲಿ ಈ ವಸ್ತುಗಳನ್ನು ಮಿಶ್ರಣ ಮಾಡುವುದು ಪ್ರಯೋಜನಕಾರಿ ಶುಂಠಿ ಶುಂಠಿಯನ್ನು ಗ್ರೀನ್ ಟೀ ಜೊತೆ ಬೆರೆಸಿ ಸೇವಿಸಿದರೆ ಆರೋಗ್ಯಕ್ಕೆ ಹಲವಾರು ರೀತಿಯಲ್ಲಿ ಲಾಭವಾಗುತ್ತದೆ.. ಇದರ ಸಹಾಯದಿಂದ ರೋಗನಿರೋಧಕ ಶಕ್ತಿ ಹೆಚ್ಚುವುದಲ್ಲದೆ ಕ್ಯಾನ್ಸರ್ ನಂತಹ ಅಪಾಯಕಾರಿ ಮತ್ತು ಮಾರಣಾಂತಿಕ ಕಾಯಿಲೆಗಳನ್ನು ತಡೆಯುತ್ತದೆ. ಪುದೀನ ಎಲೆಗಳು , ಚಕ್ಕೆ ಕೆಲವರು ಗ್ರೀನ್ ಟೀಗೆ ಪುದೀನ ಎಲೆಗಳು ಮತ್ತು ದಾಲ್ಚಿನ್ನಿ ಸೇರಿಸುತ್ತಾರೆ, ಇದು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಇದನ್ನು ಸೇವಿಸಿದ ನಂತರ ದೀರ್ಘಕಾಲ ಹಸಿವು ಇರುವುದಿಲ್ಲವಾದ್ದರಿಂದ, ತೂಕವೂ ಕಡಿಮೆಯಾಗಲು ಪ್ರಾರಂಭಿಸುತ್ತದೆ.…
ಚೆನೈ : ಚಿತ್ರರಂಗದ ಖ್ಯಾತ ಗಾಯಕಿ ಹಾಗೂ ಪದ್ಮಭೂಷಣ ಪ್ರಶಸ್ತಿ ವಿಜೇತೆ ವಾಣಿ ಜೈರಾಮ್ ಅವರು ಶನಿವಾರ ಚೆನ್ನೈನ ತಮ್ಮ ನಿವಾಸದಲ್ಲಿ ನಿಗೂಢ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಾಯಕಿಯ ಸಾವನ್ನು ಥೌಸಂಡ್ ಲೈಟ್ಸ್ ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದು, ಐಪಿಸಿ ಸೆಕ್ಷನ್ 174ರಡಿ ಪ್ರಕರಣವನ್ನ ಆಯೂರ್ ಲಾನ್ಪರ ಪೊಲೀಸ್ ಠಾಣೆಯ ಪೊಲೀಸರು ದಾಖಲಿಸಿಕೊಂಡಿದ್ದಾರೆ. ಇನ್ನು ಈ ಖ್ಯಾತ ಗಾಯಕಿಯ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ ಎನ್ನಲಾಗಿದ್ದು, ಅವರಿಗೆ ನಿಖರವಾಗಿ ಏನಾಯಿತು ಎಂಬುದರ ಕುರಿತು ತನಿಖೆ ನಡೆಯಲಿದೆ. ಚೆನ್ನೈನಲ್ಲಿರುವ ನುಂಗಬಾಕಂ ಮನೆಯಲ್ಲಿ ವಾಣಿ ಅವರು ವಾಸವಾಗಿದ್ದರು. ಅವರ ಹಣೆಗೆ ಪೆಟ್ಟು ಬಿದ್ದಾಗ ಮನೆಯಲ್ಲಿ ಯಾರೂ ಇರಲಿಲ್ಲ. ಇಂದು ಎಂದಿನಂತೆ ಮನೆ ಕೆಲಸದವಳು ವಾಣಿ ಮನೆಗೆ ತೆರಳಿದ್ದರು. ಡೋರ್ ಲಾಕ್ ಆದ ಕಾರಣ ಕಾಲಿಂಗ್ ಬೆಲ್ ಒತ್ತಿದ್ದಾರೆ. ಆದರೆ, ಒಳಗಡೆ ಇಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಈ ಕಾರಣಕ್ಕೆ ಮನೆ ಕೆಲಸದವಳು ಪತಿಯ ಮೊಬೈಲ್ನಿಂದ ವಾಣಿ ಅವರಿಗೆ ಕರೆ…