ಕಾರವಾರ: ಸಮಸ್ಯೆಯನ್ನು ಹೇಳಿಕೊಂಡ ಬಂದ ವಿವಾಹಿತ ಮಹಿಳೆಯ ಮೇಲೆಯೇ ಕಣ್ಣಾಕಿದ ದೈವ ನರ್ತಕ ಆಕೆಯನ್ನು ಮದುವೆ ಆಗೋದಾಗಿ ಹೇಳಿದ್ದು ವೈರಲ್ ಆಗಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಅಂಬಾರಕೊಡ್ಲ ಗ್ರಾಮದಲ್ಲಿ ದೈವ ನರ್ತಕ ಚಂದ್ರಹಾಸ್ ಮಹಿಳೆಗೆ ಮೋಸ ಮಾಡಲು ಮುಂದಾಗಿದ್ದಾನೆ ಎನ್ನಲಾಗಿದೆ. ಅಂಬಾರಕೊಡ್ಲದಲ್ಲಿ ದೇವಸ್ಥಾನ ನಿರ್ಮಿಸಿ ಕಾಳಿ, ದುರ್ಗೆ, ಅರ್ಧನಾರೀಶ್ವರ ದೈವ ಮೈಮೇಲೆ ಬರುತ್ತದೆ ಎಂದು ಜನರನ್ನು ನಂಬಿಸಿದ್ದ. ಇದನ್ನು ನಂಬಿದ್ದ ಜನರು ಇಲ್ಲಿಗೆ ಬಂದು ಸಮಸ್ಯೆ ಹೇಳಿಕೊಳ್ಳುತ್ತಿದ್ದರು ಎನ್ನಲಾಗಿದೆ. ಅದರಂತೆ ಬೆಳಗಾವಿ ಮೂಲದ ಮಹಿಳೆಯೋರ್ವರು ತನ್ನ ಕಷ್ಟ ಪರಿಹಾರಕ್ಕಾಗಿ ದೈವ ನರ್ತಕ ಬಳಿ ಬಂದಿದ್ದರು. ಸಮಸ್ಯೆ ಹೇಳಿಕೊಂಡ ಮಹಿಳೆಯನ್ನ ತಾನೇ ವರಿಸುವುದಾಗಿ ಈ ದೈವ ನರ್ತಕ ಪಾತ್ರಿ ಚಂದ್ರಹಾಸ್ ಬಹಿರಂಗವಾಗಿಯೇ ವಾಗ್ದಾನ ಮಾಡಿದ್ದಾನೆ. ಮಾತ್ರವಲ್ಲ, ಇತ್ತೀಚೆಗೆ ಭಾರೀ ಸದ್ದು ಮಾಡಿದ ‘ಕಾಂತಾರ’ ಚಿತ್ರದ ಸ್ಟೈಲ್‌ನಲ್ಲಿ ‘ಈ ಬಾಲಕಿಯನ್ನ ಈ ಬಾಲಕ ಮದುಗೆ ಆಗ್ತಾನೆ’ ಎಂದು ದೈವ ನರ್ತಕ ಪಾತ್ರಿ ಹೇಳಿದ್ದಾನೆ. ಈವತ್ತಿನಿಂದ ಈ ಬಾಲಕಿ ನನ್ನ…
Author: main-admin
ಮಂಗಳೂರು: ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಪತ್ರಕರ್ತರು ಮತ್ತು ಜನಸಾಮಾನ್ಯರ ಮೇಲೆ ಹಲ್ಲೆ, ದೌರ್ಜನ್ಯ ನಡೆಯುತ್ತಿರುವುದನ್ನು ಖಂಡಿಸಿ, ಪತ್ರಕರ್ತರಿಗೆ ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಲು ಸೂಕ್ತ ರಕ್ಷಣೆ ನೀಡುವಂತೆ ಆಗ್ರಹಿಸಿ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರಿಗೆ ಶುಕ್ರವಾರ ಪತ್ರಕರ್ತರ ನಿಯೋಗ ಮನವಿ ಸಲ್ಲಿಸಿತು. ಟೋಲ್‌ಗೇಟ್‌ಗಳಲ್ಲಿ ಸಿಬ್ಬಂದಿಗಳು ಪತ್ರಕರ್ತರು ಸಹಿತ ಸಾರ್ವಜನಿಕರ ಮೇಲೆ ಹಲ್ಲೆ ನಡೆಸುತ್ತಿರುವ ಕೃತ್ಯಗಳು ಹೆಚ್ಚಿವೆ. ಪೊಲೀಸ್ ಇಲಾಖೆ ಈ ಕುರಿತು ಸೂಕ್ತ ಕ್ರಮ ಜರುಗಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮನವಿ ಮಾಡಿದರು.
ಮೂಢನಂಬಿಕೆಗೆ ಒಳಗಾಗಿ ಕೆಲವರು ತಮ್ಮ ಮಕ್ಕಳ ಪ್ರಾಣವನ್ನೇ ಪಣವಾಗಿಟ್ಟ ಹಲವು ಘಟನೆಗಳು ಈ ಹಿಂದೆ ನಡೆದಿವೆ. ಚಿಕ್ಕ ಮಕ್ಕಳು ತೀವ್ರ ಅನಾರೋಗ್ಯದಿಂದ ಬಳಲುತ್ತಿರುವಾಗ ಆಸ್ಪತ್ರೆಗೆ ಹೋಗುವ ಬದಲು ಮಂತ್ರವಾದಿಯ ಮೊರೆ ಹೋಗುವುದು ಹಾಗೂ ತಮಗೆ ತಿಳಿದ ಮದ್ದು ನೀಡಲು ಯತ್ನಿಸುವುದು ಮಾಡಿ ಮಕ್ಕಳ ಪ್ರಾಣಕ್ಕೆ ಸಂಚಕಾರ ತರುತ್ತಾರೆ. ಈಗ ಮಧ್ಯಪ್ರದೇಶದ ಶಾಡೋಲ್ ಜಿಲ್ಲೆಯಲ್ಲಿ ಅಂತವುದೇ ಒಂದು ಘಟನೆ ನಡೆದಿದ್ದು, ನ್ಯುಮೋನಿಯಾದಿಂದ ಬಳಲುತ್ತಿದ್ದ ಮೂರು ತಿಂಗಳ ಹೆಣ್ಣು ಮಗುವಿಗೆ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಬದಲು ಕಾದ ಕಬ್ಬಿಣದಿಂದ ಹೊಟ್ಟೆಯ ಮೇಲೆ 51 ಬಾರಿ ಬರೆ ಹಾಕಲಾಗಿದೆ. ಕಾದ ಕಬ್ಬಿಣದ ಬರೆ ಹಾಕಿದರೆ ಗುಣಮುಖವಾಗುತ್ತದೆ ಎಂಬ ಮೂಢನಂಬಿಕೆಯಿಂದ ಈ ಕೆಲಸ ಮಾಡಲಾಗಿದೆ. ಮಗುವಿನ ಆರೋಗ್ಯ ಪರಿಸ್ಥಿತಿ ಬಿಗಡಾಯಿಸಿದಾಗ ಆಸ್ಪತ್ರೆಗೆ ಕರೆದುಕೊಂಡು ಹೋದ ವೇಳೆ ಕೃತ್ಯ ಬೆಳಕಿಗೆ ಬಂದಿದೆ. ಸಕಾಲಕ್ಕೆ ಚಿಕಿತ್ಸೆ ಸಿಗದ ಹಿನ್ನೆಲೆಯಲ್ಲಿ ಮಗು ಮೃತಪಟ್ಟಿದ್ದು, ಇದೀಗ ಮಕ್ಕಳ ಕಲ್ಯಾಣ ಇಲಾಖೆಯಿಂದ ಆರೋಪಿ ಮಹಿಳೆ ವಿರುದ್ಧ ದೂರು ನೀಡಲಾಗಿದೆ.
ಮಂಗಳೂರು: ಯುವತಿಯೊಬ್ಬಳು ನಾಪತ್ತೆಯಾಗಿರುವ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಯುವತಿ ತಡಂಬೈಲ್ ಗ್ರಾಮದ ಜಯಶ್ರೀ ಶೆಟ್ಟಿ ಎಂಬವರ ಮಗಳು ಕಾವೇರಿ(19) ಎಂದು ತಿಳಿದು ಬಂದಿದೆ. ಜ.27ರಂದು ಮನೆಯಿಂದ ಕೆಲಸಕ್ಕೆಂದು ತೆರಳಿದವರು ಮರಳಿ ಬಾರದೇ ಕಾಣೆಯಾಗಿದ್ದಾರೆ. ತಡಂಬೈಲ್ ನಿವಾಸಿ ಮಾಂತೇಶ ಎಂಬಾತನನ್ನು ಪ್ರೀತಿಸುತ್ತಿದ್ದು, ಆತನೊಂದಿಗೆ ತೆರಳಿರುವ ಸಾಧ್ಯತೆ ಇದೆ ಎಂದು ಜಯಶ್ರೀ ಶೆಟ್ಟಿ ಅವರು ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಕಾವೇರಿ ಅವರು, 163 ಸೆ.ಮೀ. ಉದ್ದ, ಎಣ್ಣೆ ಮೈಬಣ್ಣ ಹೊಂದಿದ್ದು, ಮನೆಯಿಂದ ಹೋಗುವಾಗ ಗುಲಾಬಿ ಬಣ್ಣದ ಕಪ್ಪು ಚುಕ್ಕೆಗಳಿಂದ ಕೂಡಿದ ಚೂಡಿದಾರ ಧರಿಸಿದ್ದರು. ಇವರು ಹಿಂದಿ, ಕನ್ನಡ ಮತ್ತು ತುಳು ಭಾಷೆಯನ್ನು ಬಲ್ಲವರಾಗಿದ್ದಾರೆ ಎಂದು ಪೊಲೀಸ್ ಇಲಾಖೆಯ ಪ್ರಕಟಣೆ ತಿಳಿಸಿದೆ.
ಮುಲ್ಕಿ: ಮುಲ್ಕಿ ಸಮೀಪದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ನಡೆದ ಹಿಟ್ ಆಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತುಳು ಸ್ಟ್ಯಾಂಡ್ ಆಫ್ ಕಾಮಿಡಿಯನ್ ಅರ್ಪಿತ್ ರನ್ನು ಪೊಲೀಸರು ಬಂಧಿಸಿದ್ದಾರೆ.ಮಧ್ಯಪ್ರದೇಶದ ಇಂದೋರ್‌ನಿಂದ ಕೇರಳ ಕಡೆಗೆ ಹೋಗುತ್ತಿದ್ದ ಲಾರಿ ಪಡುಪಣಂಬೂರು ಬಳಿ ಟಯರ್ ಪಂಚರ್ ಆಗಿದ್ದು ಲಾರಿಯಲ್ಲಿದ್ದ ಮಧ್ಯಪ್ರದೇಶ ನಿವಾಸಿಗಳಾದ ಬಬುಲು(23), ಆಚಲ್ ಸಿಂಗ್ (30) ಹಾಗೂ ಕೇರಳ ನಿವಾಸಿ ಅನೀಶ್(42) ಎಂಬವರು ಕೆಳಗಿಳಿದು ಹೆದ್ದಾರಿ ಬದಿಯಲ್ಲಿ ಟಯರ್ ತೆಗೆದು ದುರಸ್ತಿ ಮಾಡುತ್ತಿದ್ದರು. ಈ ವೇಳೆ ಹೆದ್ದಾರಿಯಲ್ಲಿ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಅತೀ ವೇಗದಿಂದ ಚಲಿಸಿದ ಕಾರು ಲಾರಿಯ ಟಯರ್ ದುರಸ್ತಿ ಮಾಡುತ್ತಿದ್ದ ಮೂವರಿಗೆ ಢಿಕ್ಕಿ ಹೊಡೆದು ಪರಾರಿಯಾಗಿತ್ತು. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದರು. ಇದೀಗ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಕಾರು ಸಮೇತ ಆರೋಪಿ ಕಾರು ಚಾಲಕನನ್ನು ಹಳೆಯಂಗಡಿ ಇಂದ್ರ ನಗರ ನಿವಾಸಿ ಅರ್ಪಿತ್ ಎಂದು ಗುರುತಿಸಲಾಗಿದ್ದು, ಈತ ತುಳು ಸ್ಟ್ಯಾಂಡ್ ಆಫ್ ಕಾಮಿಡಿ ಯೂಟ್ಯೂಬರ್ ಎಂದು ತಿಳಿದು ಬಂದಿದೆ.
ಮುಂಬೈನಲ್ಲಿ ಭಯೋತ್ಪಾದನಾ ದಾಳಿ ನಡೆಸುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಮೇಲ್ ಸಂದೇಶ ಬಂದಿದೆ. ಪೊಲೀಸ್ ಮೂಲಗಳ ಪ್ರಕಾರ, ತಾಲಿಬಾನಿ ಸದಸ್ಯ ಎಂದು ಹೇಳಿಕೊಳ್ಳುವ ಅಪರಿಚಿತ ವ್ಯಕ್ತಿಯಿಂದ ಮೇಲ್ ಸ್ವೀಕರಿಸಲಾಗಿದೆ. ಹೀಗಾಗಿ ಮಹಾರಾಷ್ಟ್ರದ ವಿವಿಧ ನಗರಗಳಲ್ಲಿ ಅಲರ್ಟ್ ಆಗಿರಲು ಎನ್‌ಐಎ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದೆ. “ಬೆದರಿಕೆ ಮೇಲ್ ಕಳುಹಿಸಿದ ವ್ಯಕ್ತಿ ತನ್ನನ್ನು ತಾಲಿಬಾನಿ ಎಂದು ಹೇಳಿಕೊಂಡಿದ್ದಾನೆ. ಮುಂಬೈನಲ್ಲಿ ಭಯೋತ್ಪಾದಕ ದಾಳಿ ನಡೆಯಲಿದೆ ಎಂದು ಆತ ಹೇಳಿಕೊಂಡಿದ್ದಾನೆ ಎಂದು ಮುಂಬೈ ಪೊಲೀಸ್ ಮೂಲಗಳು ತಿಳಿಸಿವೆ. ಬೆದರಿಕೆ ಮೇಲ್ ಬಂದ ನಂತರ, ಮುಂಬೈ ಪೊಲೀಸರೊಂದಿಗೆ ಎನ್‌ಐಎ ಜಂಟಿ ತನಿಖೆಯನ್ನು ಪ್ರಾರಂಭಿಸಿದೆ. ಈ ವರ್ಷದ ಜನವರಿಯಲ್ಲಿ ಮುಂಬೈನ ಧೀರೂಭಾಯಿ ಅಂಬಾನಿ ಇಂಟರ್‌ನ್ಯಾಶನಲ್ ಸ್ಕೂಲ್‌ಗೆ ಬೆದರಿಕೆ ಕರೆ ಬಂದಿತ್ತು. ಅದರಲ್ಲಿ ಅಪರಿಚಿತ ಕರೆ ಮಾಡಿದವರು ಶಾಲೆಯನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದರು. ಕಳೆದ ವರ್ಷ ಅಕ್ಟೋಬರ್‌ನಲ್ಲಿ ನಗರದ ವಿವಿಧೆಡೆ ಬಾಂಬ್‌ಗಳನ್ನು ಇರಿಸಿರುವ ಬಗ್ಗೆ ಮಾಹಿತಿ ನೀಡುವ ಇದೇ ರೀತಿಯ ಕರೆ ಬಂದಿತ್ತು. ಪೊಲೀಸರ ಪ್ರಕಾರ, ಇನ್ಫಿನಿಟಿ ಮಾಲ್ ಅಂಧೇರಿ,…
ಬಂಟ್ವಾಳ:ಬಿಸಿರೋಡಿನ ರೈಲ್ವೆ ಓವರ್ ಬ್ರಿಡ್ಜ್‌ನಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ. ಸುಮಾರು 55 ಪ್ರಾಯದ ಅಪರಿಚಿತ ವ್ಯಕ್ತಿ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಇಂದು ಬೆಳಿಗ್ಗೆ ಸಾರ್ವಜನಿಕರು ಮೃತದೇಹವನ್ನು ನೋಡಿ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಎಸ್. ಐ.ರಾಮಕೃಷ್ಣ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದು, ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ನವದೆಹಲಿ: ಶೀಘ್ರದಲ್ಲೇ ಸುಪ್ರೀಂಕೋರ್ಟ್‌ಗೆ ಐವರು ನೂತನ ನ್ಯಾಯಾಧೀಶರನ್ನು ನೇಮಕ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಇಂದು ತಿಳಿಸಿದೆ. ಐವರು ನ್ಯಾಯಮೂರ್ತಿಗಳ ನೇಮಕಕ್ಕೆ ಕೊಲಿಜಿಯಂ ನೀಡಿರುವ ಶಿಫಾರಸುಗಳನ್ನು ಶೀಘ್ರವೇ ತೆರವುಗೊಳಿಸಲಾಗುವುದು ಎಂದು ಸರಕಾರ ಇಂದು ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದೆ. ಎಲ್ಲಾ ಐದು ಹೆಸರುಗಳನ್ನು ಡಿಸೆಂಬರ್‌ನಲ್ಲಿ ಶಿಫಾರಸು ಮಾಡಲಾಗಿತ್ತು. ಐವರು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಉನ್ನತ ನ್ಯಾಯಾಲಯದ ನ್ಯಾಯಮೂರ್ತಿಗಳ ಸಂಖ್ಯೆ 32 ಕ್ಕೆ ಏರಲಿದೆ. ಮುಖ್ಯ ನ್ಯಾಯಮೂರ್ತಿ ಸೇರಿದಂತೆ 34 ನ್ಯಾಯಾಧೀಶರು ಅಲ್ಲಿರಬಹುದು. ಪ್ರಸ್ತುತ ಇವರ ಸಂಖ್ಯೆ 27 ಇದೆ. ನ್ಯಾಯಾಧೀಶರ ನೇಮಕಾತಿ ವಿಳಂಬಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಇಂದು ನಡೆಸುತ್ತಿದೆ. ಕೊಲಿಜಿಯಂ ಶಿಫಾರಸು ಮಾಡಿರುವ ಐವರು ನ್ಯಾಯಮೂರ್ತಿಗಳ ಪದೋನ್ನತಿಯನ್ನು ಶೀಘ್ರವೇ ತೆರವುಗೊಳಿಸುವುದಾಗಿ ಸರ್ಕಾರ ಹೇಳಿದೆ. ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರು ನ್ಯಾಯಮೂರ್ತಿಗಳಾದ ಎಸ್ ಕೆ ಕೌಲ್ ಮತ್ತು ಎಎಸ್ ಓಕಾ ಅವರ ಪೀಠಕ್ಕೆ ಈ ಐದು ಹೆಸರುಗಳ ನೇಮಕಾತಿಯ ವಾರಂಟ್ ಅನ್ನು ಶೀಘ್ರದಲ್ಲೇ ಹೊರಡಿಸುವ…
ಪುತ್ತೂರು: ಕಾರಿಗೆ ಡಿಕ್ಕಿಯಾದ ನಾಯಿ ಕಾರ್‌ನ ಬಂಪರಿನೊಳಗೆ ಪ್ರತ್ಯಕ್ಷವಾದ ಘಟನೆ ಪುತ್ತೂರು ನಲ್ಲಿ ನಡೆದಿದೆ. ಬಂಪರಿನೊಳಗೆ ಸಿಲುಕಿಕೊಂಡಿದ್ದ ಈ ನಾಯಿ ಸುಮಾರು 70 ಕಿಲೋಮೀಟರ್ ಸಾಗಿ ಯಾವುದೇ ಗಾಯಗಳಾಗದೆ ಸುರಕ್ಷಿತವಾಗಿ ಬಂಪರ್ ಒಳಗಿನಿಂದ ಇಳಿದು ಹೋಗಿದೆ. ಪುತ್ತೂರಿನ ಕಬಕ ನಿವಾಸಿ ಸುಬ್ರಹ್ಮಣ್ಯ ದಂಪತಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ಪುತ್ತೂರಿಗೆ ವಾಪಸ್ ತೆರಳುತ್ತಿದ್ದರು. ದಾರಿ ಮಧ್ಯೆ ಬಳ್ಪ ಎಂಬಲ್ಲಿ ನಾಯಿಯೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ತಕ್ಷಣವೇ ಸುಬ್ರಹ್ಮಣ್ಯ ಅವರು ಕಾರನ್ನು ನಿಲ್ಲಿಸಿ ಸುತ್ತಮುತ್ತ ನಾಯಿಗಾಗಿ ಹುಡುಕಾಡಿದ್ದಾರೆ. ಆದರೆ ನಾಯಿ ಅಲ್ಲಿಂದ ಎಲ್ಲಿ ಹೋಗಿದೆ ಎನ್ನುವುದನ್ನು ಊಹಿಸಲೂ ಸುಬ್ರಹ್ಮಣ್ಯ ಅವರಿಗೆ ಕಷ್ಟವಾಗಿತ್ತು. ಅಲ್ಲಿಂದ ನೇರವಾಗಿ ಕಬಕದ ತನ್ನ ಮನೆಗೆ ಬಂದು ಕಾರನ್ನು ಪರಿಶೀಲಿಸಿದಾಗ ಬಂಪರ್‌ನ ಗ್ರಿಲ್ ತುಂಡಾಗಿರುವುದು ಗಮನಕ್ಕೆ ಬಂದಿತ್ತು. ತುಂಡಾದ ಗ್ರಿಲ್ ಮಧ್ಯೆ 70 ಕಿಲೋಮೀಟರ್ ಹಿಂದೆ ತನಗೆ ಡಿಕ್ಕಿಯಾದ ನಾಯಿ ಪ್ರತ್ಯಕ್ಷವಾಗಿದೆ. ನಾಯಿಯನ್ನು ಬಂಪರ್ ಒಳಗಿಂದ ತೆಗೆಯಲಾಗದ ಸ್ಥಿತಿಯಲ್ಲಿದ್ದ ಕಾರಣ ಪಕ್ಕದ ಗ್ಯಾರೇಜ್‌ಗೆ ತೆರಳಿ ನಾಯಿಯನ್ನು ಹೊರ ತೆಗೆಯಲು…
ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಲಭ್ಯವಾಗಿದೆ. 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದ್ದು, ಈ ವೇಳಾಪಟ್ಟಿಯ ಅನುಸಾರ ಫೆಬ್ರವರಿ 23 ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ನಡೆಯಲಿವೆ. ಫೆಬ್ರವರಿ 23 ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ಪ್ರಾರಂಭವಾಗಲಿದ್ದು, ಮಾರ್ಚ್ 01, 2023 ರಂದು ಕೊನೆಗೊಳ್ಳಲಿದೆ. ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಸಂಪೂರ್ಣ ವೇಳಾಪಟ್ಟಿ ಹೀಗಿದೆ: ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿ 23-02-2023 -ಪ್ರಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು , ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ. 24-02-2023 – ದ್ವಿತೀಯ ಭಾಷೆ -ಇಂಗ್ಲಿಷ್, ಕನ್ನಡ. 25-02-2023 – ತೃತೀಯ ಭಾಷೆ- ಹಿಂದಿ, ಕನ್ನಡ, ಇಂಗ್ಲಿಷ್, ತುಳು, ಕೊಂಕಣಿ, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ. 26-02-2023 –…