ಬ್ರಹ್ಮಾವರ: ಮದುವೆಗೆಂದು ಲಾಕರ್‌ನಿಂದ ತಂದಿದ್ದ 180.5 ಗ್ರಾಂ ತೂಕದ 7.26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಹೂಡೆಯ ಅಫ್ರೀನ್ ಬಾನು ಅವರು ಹೊನ್ನಾಳದ ತಾಯಿ ಮನೆ ಸಮೀಪ ಸಂಬಂಧಿಕರ ಮನೆಯಲ್ಲಿ ಮದುವೆ ಸಮಾರಂಭ ಮುಗಿಸಿ ಮನೆಗೆ ಹೊರಡುವಾಗ ಚಿನ್ನಾಭರಣವಿದ್ದ ಬ್ಯಾಗನ್ನು ಕಾರಿನಲ್ಲಿ ಇಟ್ಟಿದ್ದರು. ಇನ್ನು ತಾಯಿ ಮನೆಯಲ್ಲಿ ಚಹಾ ಕುಡಿದು 15 ನಿಮಿಷದಲ್ಲಿ ಹಿಂದಿರುಗಿದ್ದರು. ಮನೆಗೆ ಮರಳಿ ಸ್ವಲ್ಪ ಸಮಯದಲ್ಲಿ ಬ್ಯಾಗ್ ತೆರೆದು ನೋಡುವಾಗ ಚಿನ್ನಾಭರಣ ಕಾಣೆಯಾಗಿತ್ತು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: main-admin
ಕೇರಳ : ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರಿನಲ್ಲಿದ್ದ ಗರ್ಭಿಣಿ ಮಹಿಳೆ ಮತ್ತು ಆಕೆಯ ಪತಿ ಸಜೀವ ದಹನವಾಗಿರುವ ದಾರುಣ ಘಟನೆ ಕಣ್ಣೂರಿನ ಜಿಲ್ಲಾ ಸರಕಾರಿ ಆಸ್ಪತ್ರೆ ಬಳಿ ನಡೆದಿದೆ. ಮೃತ ದಂಪತಿಗಳನ್ನು ಕುಟ್ಟಿಯತ್ತೂರು ಕರಂಬುವಿನ ಪ್ರಜಿತ್(32) ಮತ್ತು ಅವರ ಪತ್ನಿ ರೀಶಾ (26) ಎಂದು ಗುರುತಿಸಲಾಗಿದೆ. ಇಬ್ಬರೂ ಕುಟ್ಟಿಯತ್ತೂರಿನಿಂದ ಜಿಲ್ಲಾ ಆಸ್ಪತ್ರೆಗೆ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.ಪ್ರಜಿತ್ ಮತ್ತು ರೀಶಾ ಇಬ್ಬರೂ ಕಾರಿನ ಮುಂದಿನ ಸೀಟ್ ನಲ್ಲಿ ಕುಳಿತಿದ್ದರು. ಕಾರಿನ ಹಿಂದಿನ ಸೀಟಿನಲ್ಲಿ ಮಗು ಸೇರಿದಂತೆ ಇನ್ನೂ ನಾಲ್ವರು ಪ್ರಯಾಣಿಕರಿದ್ದರು. ಕಾರಿಗೆ ಬೆಂಕಿ ಹೊತ್ತಿಕೊಂಡಾಗ ಆ ನಾಲ್ವರು ಕಾರಿನಿಂದ ಜಿಗಿದಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಬೆಂಕಿ ಹೊತ್ತಿಕೊಂಡಾಗ ಕಾರು ಚಲಾಯಿಸುತ್ತಿದ್ದ ಪ್ರಜಿತ್ ಹಿಂಬಾಗಿಲು ತೆರೆದು ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಪ್ರಯಾಣಿಕರು ಪಾರಾಗಲು ಸಹಾಯ ಮಾಡಿದ್ದಾರೆ. ಆದರೆ ತಾವು ಪಾರಾಗಲು ಮುಂದಿನ ಬಾಗಿಲು ತೆರೆಯಲು ಯತ್ನಿಸಿ ವಿಫಲವಾಗಿದ್ದಾರೆ ಎಂದು…
ಉಳ್ಳಾಲ: ಉಳ್ಳಾಲದ ಮುಕ್ಕಚ್ಚೇರಿ ಸಮುದ್ರ ಕಿನಾರೆಯಲ್ಲಿ ಅಪರಿಚಿತ ವೃದ್ಧ ಮಹಿಳೆಯ ಮೃತದೇಹ ಇಂದು ಪತ್ತೆಯಾಗಿದೆ. ವಾರೀಸುದಾರರಿದ್ದಲ್ಲಿ ಉಳ್ಳಾಲ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಕೋರಲಾಗಿದೆ. ಸುಮಾರು 60-70 ರ ಹರೆಯದ ಮಹಿಳೆ ಮೃತದೇಹ ಇದಾಗಿದೆ. ಸೀರೆ ಉಟ್ಟಿರುವ ಮಹಿಳೆ ಇಂದೇ ಸಮುದ್ರಕ್ಕೆ ಬಿದ್ದಿರುವ ಶಂಕೆಯಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಮ್ಮರ್ ಸ್ಯಾಂಡ್ ಹಿಂಭಾಗದಲ್ಲಿ ಶವ ತೇಲುತ್ತಿರುವುದನ್ನು ಕಂಡು ಸ್ಥಳೀಯರು ಉಳ್ಳಾಲ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಅದರಂತೆ ಪೊಲೀಸರು ಗೃಹರಕ್ಷಕ ದಳದ ಸಿಬ್ಬಂದಿ ಮೊಗವೀರಪಟ್ನ ನಿವಾಸಿ ಪ್ರಸಾದ್ ಸುವರ್ಣ ಅವರಿಗೆ ಮಾಹಿತಿ ನೀಡಿದ್ದು, ಅವರು ಖುದ್ದಾಗಿ ಸಮುದ್ರದಲ್ಲಿ ಈಜಿ ಮೃತದೇಹವನ್ನು ದಡಕ್ಕೆ ಸೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ. ವಿಕ್ರಮ್ ಅಮ್ಟೆ ಅಧಿಕಾರ ಸ್ವೀಕರಿಸಿದರು. ರಾಜ್ಯ ಸರಕಾರ ದ.ಕ. ಜಿಲ್ಲಾ ಎಸ್ಪಿಯಾಗಿದ್ದ ಸೋನಾವಾನೆ ಋಷಿಕೇಶ್ ಭಗವಾನ್ ಅವರನ್ನು ಗುಪ್ತಚರ ಎಸ್ಪಿಯಾಗಿ ವರ್ಗಾಯಿಸಿತ್ತು. ಗುಪ್ತಚರ ಎಸ್ಪಿಯಾಗಿದ್ದ ವಿಕ್ರಮ್ ಅವರನ್ನು ದ.ಕ. ಎಸ್ಪಿಯಾಗಿ ಮಂಗಳವಾರ ನಿಯೋಜಿಸಿತ್ತು. ಎಸ್ಪಿ ವಿಕ್ರಮ್ ಅಮ್ಟೆ ಅವರು ಈ ಹಿಂದೆ ದ.ಕ. ಮತ್ತು ಶಿವಮೊಗ್ಗದಲ್ಲಿ ಜಿಲ್ಲಾ ಹೆಚ್ಚುವರಿ ಎಸ್ಪಿಯಾಗಿ, ಬೆಳಗಾವಿ ಡಿಸಿಪಿಯಾಗಿ ಸೇವೆ ಸಲ್ಲಿಸಿದ್ದಾರೆ.
ಬಂಟ್ವಾಳ : ಎಲೆಕ್ಟ್ರಾನಿಕ್ಸ್ ಅಂಗಡಿಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಬಂಟ್ವಾಳ ಬಿಸಿರೋಡಿನ ಅನ್ನಪೂರ್ಣೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಇರುವ ಪ್ರಿಯಾ ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ನಡೆದಿದೆ. ಪ್ರೀತಂ ಎಂಬವರಿಗೆ ಸೇರಿದ ಪ್ರಿಯಾ ಎಲೆಕ್ಟ್ರಾನಿಕ್ಸ್ ಮಳಿಗೆಯ ಮೇಲಿನ ಅಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ .ಎಲೆಕ್ಟ್ರಾನಿಕ್ಸ್ ಜೊತೆಗೆ ಕೊಮಾಕಿ ಕಂಪೆನಿಗೆ ಸೇರಿದ ದ್ವಿಚಕ್ರವಾಹನಗಳ ದಾಸ್ತಾನು ಇರಿಸಲಾಗಿರುವ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಕೊಮಾಕಿ ಕಂಪೆನಿಯ ಬ್ಯಾಟರಿ ಚಾಲಿತ ಸ್ಕೂಟರ್ ಗಳು ಇಲ್ಲಿದ್ದು, ಇದರ ಬ್ಯಾಟರಿ ಸ್ಪೋಟಗೊಂಡು ಬೆಂಕಿ ಹಚ್ಚಿಕೊಂಡಿದೆಯಾ ಎಂಬ ಸಂಶಯ ವ್ಯಕ್ತವಾಗಿದೆ. ಸಾರ್ವಜನಿಕರು ಬೆಂಕಿಯನ್ನು ನೋಡಿ ಅಗ್ನಿಶಾಮಕ ದಳದ ವರಿಗೆ ಸಂಪರ್ಕ ಮಾಡಿದ್ದಾರೆ.ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿಯನ್ನು ನಂದಿಸುವ ಪ್ರಯತ್ನ ಮಾಡುತ್ತಿದ್ದಾರೆ.
ಮಂಗಳೂರು: ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಫಲಾನುಭವಿಗಳೆಂದು ನೋಂದಾಯಿತರಾಗಿ ವಿವಿಧ ಧನಸಹಾಯಗಳನ್ನು ಪಡೆಯುತ್ತಿರುವ ಅನರ್ಹ ಕಾರ್ಮಿಕರು ಮತ್ತು ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸ ನಿರ್ವಹಿಸದೇ ಇರುವ ಕಾರ್ಮಿಕರ ನೋಂದಣಿಯನ್ನು ರದ್ದುಪಡಿಸಲು ಇದೇ ಫೆ.25ರವರೆಗೆ ಬೋಗಸ್ ಕಾರ್ಡು ರದ್ದತಿ ಅಭಿಯಾನವನ್ನು ಕೈಗೊಳ್ಳಲಾಗಿದೆ. ಅಭಿಯಾನದಲ್ಲಿ ಗುರುತಿನ ಚೀಟಿ ಪಡೆದಿರುವ ಅನರ್ಹ ಕಾರ್ಮಿಕರ ನೋಂದಣಿಯನ್ನು ರದ್ದುಪಡಿಸಿ, ಮಂಡಳಿಯ ಯಾವುದೇ ಸೌಲಭ್ಯಗಳನ್ನು ನೀಡದಂತೆ ತಡೆಹಿಡಿಯಲು ಕ್ರಮವಹಿಸಲಾಗುವುದು.ಅನರ್ಹ ಫಲಾನುಭವಿಗಳು ನೋಂದಾಯಿಸಿಕೊಂಡಿದ್ದಲ್ಲಿ ಅಥವಾ ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸ ಹೊರತುಪಡಿಸಿ ಅನ್ಯವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಫಲಾನುಭವಿಗಳು ಕೂಡಲೇ ಕಟ್ಟಡ ಕಾರ್ಮಿಕರ ಗುರುತಿನ ಚೀಟಿಯನ್ನು ಸ್ವಯಂ ಇಚ್ಛೆಯಿಂದ ಫೆ.25ರೊಳಗೆ ಸಂಬಂಧಪಟ್ಟ ಹಿರಿಯ ಕಾರ್ಮಿಕ ನಿರೀಕ್ಷಕರು/ಕಾರ್ಮಿಕ ನಿರೀಕ್ಷಕರ ಕಚೇರಿಗೆ ಹಿಂತಿರುಗಿಸಿ ಸದಸ್ಯತ್ವ ರದ್ದುಗೊಳಿಸಬೇಕು.ತಪ್ಪಿದಲ್ಲಿ ಇಲಾಖಾ ಅಧಿಕಾರಿಗಳು, ನಿರೀಕ್ಷಕರು ಖುದ್ದಾಗಿ ಪರಿಶೀಲಿಸಿ ಅನರ್ಹ ಕಾರ್ಮಿಕರು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪುತ್ತೂರು: ಸ್ಕೂಟರ್-ಮಾರುತಿ ವ್ಯಾನ್ ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಹೊರವಲಯದ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೋಳ್ಯದಲ್ಲಿ ನಡೆದಿದೆ. ಪುತ್ತೂರು ದ್ವಾರಕ ಕನ್‌ಸ್ಟ್ರಕ್ಷನ್‌ನ ಶರಣ್ ಗಾಯಗೊಂಡವರು. ಶರಣ್ ಸೈಟ್ ಇನ್‌ಸ್ಪೆಕ್ಷನ್ ಗೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಪೋಳ್ಯ ಸಮೀಪ ವಿರುದ್ಧ ದಿಕ್ಕಿನಿಂದ ಬಂದ ಮಾರುತಿ ವ್ಯಾನ್ ಡಿಕ್ಕಿ ಹೊಡೆದಿದ್ದು, ಈ ಪರಿಣಾಮ ಘಟನೆಯಿಂದ ತೀವ್ರ ಗಾಯಗೊಂಡ ಶರಣ್ ಅವರನ್ನು ಅದೇ ದಾರಿಯಲ್ಲಿ ಬರುತ್ತಿದ್ದ ಡಾ. ದೇವಿಪ್ರಸಾದ್ ಅವರು ಎಂಬವರು ತನ್ನ ವಾಹನದಲ್ಲಿ ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಉಡುಪಿ : ಯಕ್ಷಗಾನ ವಿದ್ವಾಂಸ ಹಾಗೂ ಸಂಶೋಧಕ ಡಾ.ಎಂ.ಪ್ರಭಾಕರ ಜೋಶಿ ಅವರ ಅಧ್ಯಕ್ಷತೆಯಲ್ಲಿ ಫೆಬ್ರವರಿ 11 ಮತ್ತು 12 ರಂದು ಉಡುಪಿಯ ಎಂ.ಜಿ.ಎA ಕ್ರೀಡಾಂಗಣದಲ್ಲಿ ನಡೆಯುವ ಪ್ರಥಮ ಯಕ್ಷಗಾನ ಸಮ್ಮೇಳನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಸಮ್ಮೇಳನದ ಕಾರ್ಯಾಧ್ಯಕ್ಷ ಡಾ.ಜಿ.ಎಲ್.ಹೆಗಡೆ ಹೇಳಿದರು. ಅವರು ಸೋಮವಾರ ನಗರದ ಎಂ.ಜಿ.ಎ. ಕಾಲೇಜಿನ ರವೀಂದ್ರ ಮಂಟಪದಲ್ಲಿ ಯಕ್ಷಗಾನ ಸಮ್ಮೇಳನದ ಪೂರ್ವಭಾವಿ ತಯಾರಿಯ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದರು. ಯಕ್ಷಗಾನ ಸಮ್ಮೇಳನವು ಸಾಹಿತ್ಯ ಸಮ್ಮೇಳನದ ಮಾದರಿಯಲ್ಲಿ ಅದ್ಧೂರಿ ಮೆರವಣಿಗೆಯೊಂದಿಗೆ ಪ್ರಾರಂಭವಾಗಲಿದ್ದು, ಮಾನ್ಯ ಮುಖ್ಯಮಂತ್ರ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಚಿವರು, ಶಾಸಕರು ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದರು. ಸಮ್ಮೇಳನದಲ್ಲಿ ಎರಡು ದಿನ ಗೋಷ್ಠಿ, ಸನ್ಮಾನ, ಹಾಗೂ ಯಕ್ಷಗಾನ ಪ್ರದರ್ಶನ ನಡೆಯಲಿದ್ದು, ಸಮ್ಮೇಳನದಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರಿಗೂ ಎರಡು ದಿನ ಊಟ, ಉಪಾಹಾರದ ವ್ಯವಸ್ಥೆಯನ್ನು ಮಾಡಲಾಗುವುದು ಎಂದರು. ಯಕ್ಷಗಾನ ಸಂಬAಧಿಸಿದ ಕರಕುಶಲ ವಸ್ತುಗಳು, ವೇಷಭೂಷಣ, ವಾದ್ಯ ಪರಿಕರ ಹಾಗೂ ಪುಸ್ತಕಗಳ ಮಳಿಗೆಗಳು ಸಮ್ಮೇಳನದ ಪ್ರಧಾನ…
ಉಳ್ಳಾಲ: ಯುವತಿ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿ ಬಾಡಿಗೆ ಮನೆಯಲ್ಲಿ ನಡೆದಿದ್ದು, ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದರೂ ಬಾಯಿಗೆ ಬಟ್ಟೆಯನ್ನು ಗಟ್ಟಿಯಾಗಿ ಕಟ್ಟಿರುವುದು ಕೊಲೆ ಸಂಶಯ ವ್ಯಕ್ತಪಡಿಸಿದೆ. ಛತ್ತೀಸಗಢ ಮೂಲದ ಸರಿತಾ ವರ್ಮ(23) ನಿಗೂಢ ರೀತಿಯಲ್ಲಿ ಸಾವನ್ನಪ್ಪಿದಾಕೆ. ಇಬ್ಬರು ಸಹೋದರರು ಹಾಗೂ ಅತ್ತಿಗೆ ಜೊತೆ ಸರಿತಾ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಜ.30 ರಂದು ಸಂಜೆ ಪ್ರಕರಣ ಬೆಳಕಿಗೆ ಬಂದಿತ್ತು. ಘಟನೆ ವೇಳೆ ಸಹೋದರರಿಬ್ಬರು ಕೆಲಸಕ್ಕೆ ತೆರಳಿದ್ದರೆ, ಅತ್ತಿಗೆ ಆಸ್ಪತ್ರೆಗೆ ತೆರಳಿದ್ದರು. ಬಾಡಿಗೆ ಮನೆ ಮಾಲೀಕರು ವೃದ್ದರಾಗಿದ್ದು ಅಸೌಖ್ಯದಿಂದಿದ್ದಾರೆ. ಕೆಳಗಿನ ಅಂತಸ್ತಿನಲ್ಲಿ ಮಾಲೀಕರಿದ್ದರೆ, ಮೇಲಿನ ಅಂತಸ್ತಿನಲ್ಲಿ ಬಾಡಿಗೆ ಕುಟುಂಬ ವಾಸ್ತವ್ಯವಿತ್ತು. ಸರಿತಾ ವರ್ಮ ವಿಶೇಷ ಚೇತನರಾಗಿದ್ದು, ಬಾಯಿ ಮತ್ತು ಕಿವಿ ಕೇಳದ ಸ್ಥಿತಿಯಲ್ಲಿದ್ದರು. ಸರಿತಾ ಬಾಯಿಗೆ ಬಟ್ಟೆಯನ್ನು ಬಿಗಿಯಾಗಿ ಕಟ್ಟಲಾಗಿದೆ. ಇದು ಸಂಶಯಕ್ಕೆ ಕಾರಣವಾಗಿದ್ದು, ಹತ್ಯೆ ನಡೆಸಿದ ಬಳಿಕ ಯುವತಿಯನ್ನು ನೇಣುಹಾಕಿದರೆ ಅನ್ನುವ ಸಂಶಯವನ್ನು ಉಳ್ಳಾಲ ಪೊಲೀಸರು ವ್ಯಕ್ತಪಡಿಸಿದ್ದಾರೆ. ಕೆಳಗಿನ…
ಮಂಗಳೂರು: ಚುನಾವಣೆ ಬೆನ್ನಲ್ಲೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಭಗವಾನ್ ಸೋನಾವಣೆ ಅವರನ್ನು ವರ್ಗಾವಣೆ ಮಾಡಲಾಗಿದ್ದು. ಇದೀಗ ಅವರ ಜಾಗಕ್ಕೆ ನೂತನ ಎಸ್‌ಪಿಯಾಗಿ ಗುಪ್ತಚರ ವಿಭಾಗದ ಅಮಾಟೆ ವಿಕ್ರಮ್ ಅವರನ್ನು ನಿಯೋಜಿಸಲಾಗಿದೆ. 2015ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಹೃಷಿಕೇಶ್ ಅವರು 2021ರ ಎಪ್ರಿಲ್‌ನಲ್ಲಿ ದ.ಕ. ಎಸ್‌ಪಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಕೊರೊನಾ ಸಂದರ್ಭ ಯಶಸ್ವಿ ನಿರ್ವಹಣೆ, ಕೋಮು ಸಾಮರಸ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅವರು ಭಾರೀ ಸವಾಲಾಗಿದ್ದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸೇರಿದಂತೆ ಹಕವು ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದರು.