ಕಾಪು: ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಬೈಕ್‌ವೊಂದು ಕಾರಿಗೆ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಶನಿವಾರ (ಜು.20) ಕೊಪ್ಪಲಂಗಡಿಯಲ್ಲಿ ನಡೆದಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುವಾಗ ಅದೇ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ -ಕಾರು ಪರಸ್ಪರ ಮುಖಾಮುಖಿ ಢಿಕ್ಕಿಯಾದ ಪರಿಣಾಮ ರಭಸಕ್ಕೆ ಕಾರು ನಜ್ಜುಗುಜ್ಜು ಆಗಿದೆ. ಮೃತಪಟ್ಟ ಬೈಕ್ ಸವಾರ ತಮಿಳುನಾಡು ಮೂಲದ ಯುವಕನಾಗಿದ್ದು, ಈ ಘಟನೆಯಲ್ಲಿ ಕಾರು ಚಾಲಕನಿಗೂ ಗಂಭೀರ ಗಾಯಗಳಾಗಿವೆ. ಅಪಘಾತದ ಹೊಡೆತಕ್ಕೆ ಸ್ಥಳದಲ್ಲಿದ್ದ ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ. ಸ್ಥಳಕ್ಕೆ ಕಾಪು ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.
Author: main-admin
ಮಡಿಕೇರಿ: ದಂಪತಿಯ ಕಲಹ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ವಿರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬೇಟೋಳಿ ಗ್ರಾಮದಲ್ಲಿ ಜು.20ರ ಶನಿವಾರ ನಡೆದಿದೆ. ಶಿಲ್ಪಾ ಸೀತಮ್ಮ (38) ಗುಂಡೇಟಿನಿಂದ ಮೃತಪಟ್ಟಿರುವ ಮಹಿಳೆಯಾಗಿದ್ದು, ಗುಂಡು ಹಾರಿಸಿದ ಪತಿ ನಾಯಕಂಡ ಸಿ.ಬೋಪಣ್ಣ (43) ಬಂದೂಕಿನೊಂದಿಗೆ ಪೊಲೀಸರಿಗೆ ಶರಣಾಗಿದ್ದಾರೆ. ಪತಿ-ಪತ್ನಿ ನಡುವೆ ಕಳೆದ ಕೆಲ ದಿನಗಳಿಂದ ಕೌಟುಂಬಿಕ ಕಲಹ ನಡೆಯುತ್ತಿದ್ದು, ಇಂದು (ಜು.20ರ ಶನಿವಾರ) ಬೆಳಿಗ್ಗೆ ಇದು ವಿಕೋಪಕ್ಕೆ ತಿರುಗಿ ಬೋಪಣ್ಣ ಅವರು ಶಿಲ್ಪಾ ಸೀತಮ್ಮ ಅವರ ಮೇಲೆ ಗುಂಡು ಹಾರಿಸಿರುವುದಾಗಿ ತಿಳಿದು ಬಂದಿದೆ. ನಾಯಕಂಡ ಸಿ.ಬೋಪಣ್ಣ ಅವರು ವಿರಾಜಪೇಟೆ ಪೊಲೀಸರಿಗೆ ಶರಣಾಗಿದ್ದು, ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ. ಕೊಲೆ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ವಿರಾಜಪೇಟೆ ನಗರ ಪೊಲೀಸ್ ಠಾಣಾ ಅಧಿಕಾರಿಗಳು ಹಾಗೂ ಅಪರಾಧ ಪತ್ತೆ ದಳದ ತಜ್ಞರ ತಂಡ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
ಮಂಗಳೂರು: ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕರಾವಳಿಯನ್ನು ಹೊರ ಜಿಲ್ಲೆಗಳ ಜತೆಗೆ ಬೆಸೆಯುವ ಎಲ್ಲ ಘಾಟಿ ರಸ್ತೆಗಳಲ್ಲಿ ಗುಡ್ಡ ಕುಸಿತ ಉಂಟಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನೈರುತ್ಯ ರೈಲ್ವೆ ಜನರಲ್ ಮ್ಯಾನೇಜರ್ ಮತ್ತು ಮೈಸೂರು ಡಿಆರ್‌ಎಮ್ ಅವರಿಗೆ ಮಂಗಳೂರು- ಬೆಂಗಳೂರು ನಡುವೆ ಹೆಚ್ಚುವರಿ ರೈಲು ಸೇವೆಯನ್ನು ತುರ್ತಾಗಿ ಪ್ರಾರಂಭಿಸುವಂತೆ ಪತ್ರ ಬರೆದು ವಿನಂತಿಸಿದ್ದರು. ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಮನವಿಗೆ ಸ್ಪಂದಿಸಿದ ರೈಲ್ವೆ ಅಧಿಕಾರಿಗಳು ಬೆಂಗಳೂರು ಮಂಗಳೂರು ನಡುವೆ ವಿಶೇಷ ರೈಲು ಓಡಿಸಲು ನಿರ್ಧರಿಸದ್ದಾರೆ. ಸಂಚರಿಸಲಿರುವ ರೈಲುಗಳು : ಜುಲೈ 19ರಂದು ರೈಲು ಸಂಖ್ಯೆ 06547 ಎಸ್‌ಬಿಸಿ ಬೆಂಗಳೂರಿನಿಂದ ಹೊರಡಲಿದೆ. ಜುಲೈ 20ರಂದು ರೈಲು ಸಂಖ್ಯೆ 06548 ಮಂಗಳೂರು ಜಂಕ್ಷನ್‌ನಿಂದ ಯಶವಂತಪುರಕ್ಕೆ ತೆರಳಲಿದೆ. ಜುಲೈ 21 ಹಾಗೂ 22ರಂದು ರೈಲು ಸಂಖ್ಯೆ 06549 ಯಶವಂತಪುರದಿಂದ ಮಂಗಳೂರು ಜಂಕ್ಷನ್‌ಗೆ ಬರಲಿದೆ. ಜುಲೈ 21 ಹಾಗೂ 22 ರಂದು ರೈಲು ಸಂಖ್ಯೆ 06550 ಮಂಗಳೂರು…
ಮಂಗಳೂರು : ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ಘಟನೆ ಗುರುಪುರ ಎಂಬಲ್ಲಿ ನಡೆದಿದೆ. ಆಶ್ನಿ (21) ಮೃತ ವಿದ್ಯಾರ್ಥಿನಿ. ಆಶ್ನಿ ತಂದೆಯ ಜೊತೆ ಗದ್ದೆಗೆ ದನ ಕಟ್ಟಲು ಹೋದ ವೇಳೆ ಈ ಘಟನೆ ನಡೆದಿದೆನ್ನಲಾಗಿದೆ. ಮೊದಲಿಗೆ ಮನೆಯ ಸಾಕು ನಾಯಿಗೆ ವಿದ್ಯುತ್ ಶಾಕ್ ಹೊಡೆದಿದ್ದು, ನಾಯಿ ಹೊರಳಾಡುವುದನ್ನು ನೋಡಿ ರಕ್ಷಣೆಗೆ ಮುಂದಾದ ಆಶ್ನಿ, ತುಂಡಾಗಿ ಬಿದ್ದ ವಿದ್ಯುತ್ ತಂತಿಯನ್ನು ಗಮನಿಸದೆ ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.
ಮಂಗಳೂರು ನಗರದ ಪಣಂಬೂರು ಸಮೀಪದ ತೋಟಬೆಂಗ್ರೆಯಲ್ಲಿ ಯುವತಿಯೊಬ್ಬಳು ಸ್ನಾನ ಮಾಡುತ್ತಿದ್ದಾಗ ಮನೆಯ ಹಿಂಭಾಗದಿಂದ ಯುವಕನೊಬ್ಬ ವೀಡಿಯೋ ಮಾಡುತ್ತಿದ್ದಾಗ ಸಿಕ್ಕಿಬಿದ್ದು, ಸ್ಥಳೀಯರಿಂದ ಏಟು ತಿಂದ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಬೆಂಗ್ರೆ ನಿವಾಸಿ ಮೊಹಮ್ಮದ್ ರಂಶಿದ್ (21)ಆರೋಪಿ ಎಂದು ಗುರುತಿಸಲಾಗಿದೆ ಈತ ಮಾದಕ ದ್ರವ್ಯ ವ್ಯವಸನಿಯೂ ಆಗಿದ್ದ ಎನ್ನಲಾಗಿದೆ. ಈತನನ್ನು ಪಣಂಬೂರು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಪೊಲೀಸರು ಆರೋಪಿಯ ವಿಚಾರಣೆ ನಡೆಸಿದ್ದಾರೆ.
ಬೆಂಗಳೂರು : ಗಂಧದ ಮರ ಕಡಿದ ವ್ಯಕ್ತಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ದಂಡ ವಿಧಿಸಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಗಂಧದ ಮರ ಕಡಿದು ಕಳುವು ಮಾಡಲು ಯತ್ನಿಸಿದ ಆರೋಪಿಗೆ 10 ಸಾವಿರ ದಂಡ ವಿಧಿಸಿದ್ದ ಹೈಕೋರ್ಟ್ ದಂಡದ ಮೊತ್ತವನ್ನು 50 ಸಾವಿರಕ್ಕೆ ಹೆಚ್ಚಿಸಿ 5 ವರ್ಷ ಶಿಕ್ಷೆ ಖಾಯಂಗೊಳಿಸಿದೆ. ಮಂಡ್ಯ ಜಿಲ್ಲೆಯ ಬಲ್ಲೇನಹಳ್ಳಿ ಗ್ರಾಮದ ದೇವಾರಾಜಾಚಾರಿ ಎಂಬುವವರಿಗೆ ಈ ಶಿಕ್ಷೆನೀಡಲಾಗಿದೆ. ಸೆಕ್ಷನ್ 86 ಹಾಗೂ 87 ಅಡಿಯಲ್ಲಿ ತಲಾ 50 ಸಾವಿರ ದಂಡಕ್ಕೆ ಏರಿಕೆ ಆದೇಶಿಸಿದೆ. ಹಾಗೂ ಕೃತ್ಯ ಎಸಗಿದವರಿಗೆ 5 ವರ್ಷಕ್ಕಿಂತ ಕಡಿಮೆ ಶಿಕ್ಷೆ ಮತ್ತು 50 ಸಾವಿರಕ್ಕಿಂತ ಕಡಿಮೆ ದಂಡ ವಿಧಿಸುವಂತಿಲ್ಲ ಎಂದು ಹೇಳಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ದಿನಾಂಕ: 20-07-2024 ರಂದು ರಜೆಯನ್ನು ಘೋಷಿಸಲಾಗಿದೆ.
ಬಂಟ್ವಾಳ : ಭಾರೀ ಗಾಳಿ ಮಳೆಗೆ ಕೋಳಿ ಸಾಕಣೆ ಮಾಡುವ ಶೆಡ್ ಏಕಾಏಕಿ ಕುಸಿದು ಬಿದ್ದ ಪರಿಣಾಮ ಸುಮಾರು ಒಂದುವರೆ ಸಾವಿರ ಕೋಳಿಗಳು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕು ಕುಳ ಗ್ರಾಮದ ಸೇಕೆಹಿತ್ಲು ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಬಂಟ್ವಾಳ ತಾಲೂಕು ಕುಳ ಗ್ರಾಮದ ಸೇಕೆಹಿತ್ಲು ನಿವಾಸಿ ರಾಘವ ಅವರ ಮಾಲಕತ್ವದ ಶೆಡ್ ಇದಾಗಿದೆ. ಸುಮಾರು 2,200 ಕೋಳಿಗಳನ್ನು ಅವರು ಸಾಕಣೆ ಮಾಡುತ್ತಿದ್ದರು. ಈ ಪೈಕಿ 700 ಕೋಳಿಗಳು ದೊಡ್ಡದಾಗಿದ್ದವು. ಈ ಹಿನ್ನೆಲೆ 700 ಕೋಳಿಗಳನ್ನು ಮಾರಾಟ ಮಾಡಲಾಗಿತ್ತು. ಶೆಡ್ಡಿನ ಮೇಲ್ಛಾವಣಿ ಏಕಾಏಕಿ ಕುಸಿದು ಬಿದ್ದ ಹಿನ್ನೆಲೆ ಸುಮಾರು 1,500 ಕೋಳಿಗಳು ಅದರಡಿಗೆ ಬಿದ್ದು ಮೃತಪಟ್ಟಿದೆ. ಘಟನೆಯಿಂದಾಗಿ ಶೆಡ್ ಸಂಪೂರ್ಣ ನಾಶವಾಗಿದ್ದು, ಅಪಾರ ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ.
ಮಂಗಳೂರು: ಮಂಗಳೂರಿನ ಕೋಡಿಕಲ್ ವಿವೇಕಾನಂದ ನಗರದಲ್ಲಿ ನಡೆದ ಮನೆಗಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗಂಗೌಡನಹಳ್ಳಿ ಎಂಬಲ್ಲಿ ಬಂಧಿಸಿದ್ದಾರೆ. ವೆಂಕಟೇಶ್ ಅಲಿಯಾಸ್ ವೆಂಕಿ(21), ಸಾಗರ್ (21), ರಂಜಿತ್(20) ಬಂಧಿತ ಆರೋಪಿಗಳು. ಜುಲೈ 6ರಂದು ಉರ್ವ ಠಾಣಾ ವ್ಯಾಪ್ತಿಯ ಕೋಡಿಕಲ್ ವಿವೇಕಾನಂದ ನಗರ ಎಂಬಲ್ಲಿ ಮನೆಗೆ ನುಗ್ಗಿ ಕಳ್ಳರು 80 ಗ್ರಾಂನಷ್ಟು ಚಿನ್ನಾಭರಣ ಕಳವು ಮಾಡಿದ್ದರು. ಸದ್ಯ ಪೊಲೀಸರು ಆರೋಪಿಗಳನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆದು ಕಳವುಗೈದ ಸುಮಾರು 4,64,750 ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಕೃತ್ಯಕ್ಕೆ ಬಳಸಿದ ಸ್ಕೂಟರ್ ಅನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ದಸ್ತಗಿರಿ ಮಾಡಿ ಘನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ ಕುಂಟಿಕಾನದಲ್ಲಿ ನಡೆದಿದೆ. ಕಾರಿನಲ್ಲಿ ತಂದೆ, ಮಗಳು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಸಣ್ಣ ಪುಟ್ಟ ಗಾಯವಾಗಿದ್ದು ಇಬ್ಬರನ್ನೂ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದು ಕೆಲ ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು, ವೇಗ ಹಾಗೂ ಅಜಾರುಕತೆಯ ಚಾಲನೆಯಿಂದ ರಸ್ತೆ ಅಪಘಾತಗಳು ಹೆಚ್ಚಾಗುತ್ತಿವೆ.










