ಮಂಗಳೂರು :- ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ತಾಯಿಗೆ ರಿಕ್ಷಾ ಡಿಕ್ಕಿ ಆಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತಕ್ಷಣವೇ ಧಾವಿಸಿ ಬಂದು ರಕ್ಷಿಸಿದ ಬಾಲಕಿ ವೈಭವಿಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಮಂಗಳವಾರ ತಮ್ಮ ಕಚೇರಿಗೆ ಕರೆಸಿ ಸನ್ಮಾನಿಸಿದರು.7ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ವೈಭವಿ ಅವರಿಗೆ ಜಿಲ್ಲಾಧಿಕಾರಿ ಕಚೇರಿಯ ತಮ್ಮ ಕೊಠಡಿಯಲ್ಲಿ ಪೇಟ, ಹಾರ ತೊಡಿಸಿ ಸನ್ಮಾನಿಸಿದ ಜಿಲ್ಲಾಧಿಕಾರಿಗಳು ಬಾಲಕಿಯ ಸಮಯ ಪ್ರಜ್ಞೆ ಮತ್ತು ಧೈರ್ಯವನ್ನು ಶ್ಲಾಘಿಸಿದರು. ವೈಭವಿಯ ಈ ಪ್ರಜ್ಞೆ ಎಲ್ಲರಿಗೂ ಮಾದರಿಯಾಗಿದೆ. ಶಾಲಾ ಹಂತದಲ್ಲಿ ಮಕ್ಕಳಿಗೆ ಇಂತಹ ಸಮಯ ಪ್ರಜ್ಞೆ ಮತ್ತು ಧೈರ್ಯ ಮೂಡಿ ಬರಬೇಕಿದೆ ಎಂದು ಅವರು ಹೇಳಿದರುವೈಭವಿಯ ಧೈರ್ಯವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೂ ಸಾಮಾಜಿಕ ಜಾಲತಾಣದಲ್ಲಿ ಶ್ಲಾಘಿಸಿದ್ದರು.
Author: main-admin
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯ ಪೊಲೀಸ್ ಕಾನ್ಸ್ ಟೇಬಲ್ ಸುನೀಲ್ (50) ಅವರು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕರಿಯಾಗದೇ ನಗರ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೂಲತಃ ಕಾಸರಗೋಡಿನವರಾದ ಸುನೀಲ್ ಅವರು 1996 ರಲ್ಲಿ ಪೊಲೀಸ್ ಸೇವೆಗೆ ಭರ್ತಿಯಾಗಿದ್ದರು ಬಳಿಕ ಉಡುಪಿ ಹಾಗೂ ಮಂಗಳೂರಿನ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಪ್ರಸ್ತುತ ಮಂಗಳೂರು ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಸುನೀಲ್ ಅವರ ನಿಧನಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು, ಸಹೋದ್ಯೋಗಿಗಳು ಸಂತಾಪ ಸೂಚಿಸಿದ್ದಾರೆ.
ಮಂಗಳೂರು: ಉಳ್ಳಾಲ ಠಾಣಾ ಕಾನ್‌ಸ್ಟೇಬಲ್ ಒಬ್ಬರನ್ನು ಕೊಲೆಗೆ ಯತ್ನಿಸಿದ್ದ ಇಬ್ಬರು ಅಪರಾಧಿಗಳಿಗೆ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10ವರ್ಷ ಜೈಲು ಶಿಕ್ಷೆ ಮತ್ತು ತಲಾ 16ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. ಉಳ್ಳಾಲದ ನಿವಾಸಿಗಳಾದ ಮುಸ್ತಾಕ್ (32) ಮತ್ತು ಜಾಕೀರ್ (36) ಶಿಕ್ಷೆಗೊಳಗಾದ ಅಪರಾಧಿಗಳು. ಪ್ರಕರಣದ 2ನೇ ಆರೋಪಿ ಯಾಸೀನ್ ಮತ್ತು 3ನೇ ಆರೋಪಿ ಅಶ್ರಫ್(50) ತಲೆಮರೆಸಿಕೊಂಡಿದ್ದಾರೆ. 2015ರ ಡಿ.17ರಂದು ರಾತ್ರಿ ನಾಲ್ವರು ಅಪರಾಧಿಗಳು ಉಳ್ಳಾಲದ ಸಾರ್ವಜನಿಕ ಸ್ಥಳದಲ್ಲಿ ಬಾಟಲಿಗಳನ್ನು ಎಸೆದು ಗಲಾಟೆ ಮಾಡುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ಉಳ್ಳಾಲ ಠಾಣೆಯ ಆಗಿನ ಹೆಡ್‌ಕಾನ್‌ಸ್ಟೇಬಲ್ ಉಮೇಶ್ ಮತ್ತು ಕಾನ್‌ಸ್ಟೇಬಲ್ ರವೀಂದ್ರ ಸ್ಥಳಕ್ಕೆ ತೆರಳಿ ಗಲಾಟೆ ಮಾಡುತ್ತಿದ್ದ ಬಗ್ಗೆ ಪ್ರಶ್ನಿಸಿದ್ದಾರೆ. ಇದರಿಂದ ಕುಪಿತಗೊಂಡ ದುಷ್ಕರ್ಮಿಗಳು ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಂದರ್ಭ ಮೊದಲ ಆರೋಪಿ ಮುಸ್ತಾಕ್ ನಿಮ್ಮಲ್ಲೊಬ್ಬರನ್ನು ಕೊಲೆ ಮಾಡಿದರೆ ಬುದ್ಧಿ ಬರುತ್ತದೆ ಎಂದು ತನ್ನ ಕೈಯಲ್ಲಿದ್ದ ಚಾಕುವಿನಿಂದ ರವೀಂದ್ರರಿಗೆ ಇರಿದು ಕೊಲೆಗೆ ಯತ್ನಿಸಿದ್ದ.…
ಬೆಂಗಳೂರು : ಭಾಗ್ಯಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಬಿ.ಎಸ್. ಯಡಿಯೂರಪ್ಪನವರ ಕನಸಿನ ಕೂಸು ಭಾಗ್ಯಲಕ್ಷ್ಮಿ ಯೋಜನೆಗೆ 18 ವರ್ಷ ತುಂಬಿದ್ದು, ಶೀಘ್ರವೇ ನೋಂದಾಯಿತಿ 2.30 ಲಕ್ಷ ಫಲಾನುಭವಿಗಳಿಗೆ ಮೆಚ್ಯುರಿಟಿ ಹಣ ಸಿಗಲಿದೆ. 18 ವರ್ಷಗಳ ಹಿಂದೆ ಭಾಗ್ಯಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಸಿದವರಿಗೆ ಏಪ್ರಿಲ್ ಮತ್ತು ಮೇ ತಿಂಗಳ ಅಂತ್ಯಕ್ಕೆ ಮೆಚ್ಯುರಿಟಿಗೆ ಅರ್ಹರಾಗಿದ್ದಾರೆ. ಹೀಗಾಗಿ ಶೀಘ್ರವೇ ನೋಂದಾಯಿತ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿದ್ಧತೆ ನಡೆಸಿದೆ. ಭಾಗ್ಯಲಕ್ಷ್ಮಿ ಯೋಜನೆಯ ಹಣ ಪಡೆಯಲು ಫಲಾನುಭವಿಗಳು ಬಿಪಿಎಲ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು. ಶಾಶ್ವತ ಕುಟುಂಬ ಯೋಜನೆ ಅಳವಡಿಸಿಕೊಂಡು ಮೂರು ಮಕ್ಕಳು ಮೀರದಂತಿರಬೇಕು. ಫಲಾನುಭವಿ ಮಗು ಕಡ್ಡಾಯವಾಗಿ 8 ನೇ ತರಗತಿ ವಿದ್ಯಾಭ್ಯಾಸ ಮಾಡಿದ ದೃಢೀಕರಣ, ಬಾಲ ಕಾರ್ಮಿಕ, ಬಾಲ್ಯ ವಿವಾಹಕ್ಕೆ ಒಳಗಾಗಿರಬಾರದು ಎನ್ನುವ ನಿಯಮ ಕಡ್ಡಾಯಗೊಳಿಸಲಾಗಿದೆ. ಬಡತನ ರೇಖೆಗಿಂದ ಕೆಳಗಿರುವ ಕುಟುಂಬಗಳಲ್ಲಿ ಜನಿಸಿದ ಹೆಣ್ಣು ಮಕ್ಕಳ ಭವಿಷ್ಯಕ್ಕೆ ನೆರವಾಗುವಂತೆ 2006-07 ರಲ್ಲಿ ಅಂದಿನ…
ಉಡುಪಿ : ಪ್ರಾಂಶುಪಾಲ ರಾಮಕೃಷ್ಣ ಬಿಜಿ ಅವರಿಗೆ ಘೋಷಿಸಿದ್ದ ರಾಜ್ಯಮಟ್ಟದ ಉತ್ತಮ ಪ್ರಾಂಶುಪಾಲ ಪ್ರಶಸ್ತಿಯನ್ನು ತಡೆದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ವೇಳೆ ಸಿಎಂ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದಿದ್ದಕ್ಕೆ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಪ್ರಕರಣ ದಾಖಲಾಗಿದೆ. ಹೌದು ಕಳೆದ 2 ದಿನಗಳ ಹಿಂದೆ ಉಡುಪಿಯಲ್ಲಿ ಪ್ರಾಂಶುಪಾಲರಿಗೆ ಘೋಷಿಸಿದ್ದ ಪ್ರಶಸ್ತಿ ತಡೆ ಹಿಡಿದಿದ್ದಕ್ಕೆ ಬಿಜೆಪಿ ನಾಯಕರು ಮಣಿಪಾಲದ ಸಿಂಡಿಕೇಟ್ ಸರ್ಕಲ್ನಲ್ಲಿ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ವೇಳೆ ರಸ್ತೆ ತಡೆದು ಮುಖ್ಯಮಂತ್ರಿಗಳ ಪ್ರತಿಕೃತಿ ಚಪ್ಪಲಿಯಿಂದ ಹೊಡೆದು ಬೆಂಕಿ ಹಚ್ಚಿದ್ದರು. ಹಿಂದೂ ವಿರೋಧಿ ಸಿದ್ದರಾಮಯ್ಯರನ್ನು ತೊಲಗಿಸಿ ಎಂದು ಘೋಷಣೆ ಕೂಗಿದ್ದರು. ಶಾಂತಿಗೆ ಭಂಗ ತರುವ ಉದ್ದೇಶದಿಂದ ಕೃತ್ಯ ಎಸಗಿದ್ದಾರೆ ಎಂದು ಎನ್ಎಸ್ಯುಐ ಮುಖಂಡ ಸೌರಭ್ ಬಲ್ಲಾಳ್ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ, ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಸದಸ್ಯರಾದ ಗಿರೀಶ್ ಅಂಚನ್, ವಿಜಯ ಕೊಡವೂರು, ಬಾಲಕೃಷ್ಣ ಶೆಟ್ಟಿ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ…
ಉಡುಪಿ: ಕಡಿಯಾಳಿಯ ಕೋಚಿಂಗ್ ಸೆಂಟರ್ ವೊಂದಕ್ಕೆ ಹೋಗಿದ್ದ ವೇಳೆ ನಾಪತ್ತೆಯಾಗಿದ್ದ ಬ್ರಹ್ಮಾವರ ಹಂದಾಡಿ ಬಾರಕೂರು ರಸ್ತೆಯ ನಿವಾಸಿ ಪ್ರಕಾಶ್ ಎಂಬುವರ ಪುತ್ರ ಆರ್ಯ (13) ಇಂದು ಬೆಳಗ್ಗೆ ಕೇರಳದ ಪಾಲ್ಘಾಟ್ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿರುವುದಾಗಿ ವರದಿಯಾಗಿದೆ. ಭಾನುವಾರ ಬೆಳಗ್ಗೆ ಉಡುಪಿ ಕಡಿಯಾಳಿಯಲ್ಲಿರುವ ಕೋಚಿಂಗ್ ಇನ್‌ಸ್ಟಿಟ್ಯೂಟ್ ಗೆಂದು ಹೋಗಿದ್ದ ಎಂಟನೇ ತರಗತಿಯ ವಿದ್ಯಾರ್ಥಿ ಆರ್ಯ, ಮನೆಗೆ ಹಿಂದಿರುಗದೆ ನಾಪತ್ತೆಯಾಗಿದ್ದ. ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಸಿಸಿಟಿವಿ ಕ್ಯಾಮರಾ ಪರಿಶೀಲಿಸಿದಾಗ ಆರ್ಯ, ಇಂದ್ರಾಳಿ ರೈಲು ನಿಲ್ದಾಣದಿಂದ ರೈಲಿನ ಮೂಲಕ ಕೇರಳದ ಕಡೆ ತೆರಳಿರುವುದು ಕಂಡುಬಂತು. ಅತ್ತ ಟಿಕೆಟ್ ಇಲ್ಲದೆ ಪ್ರಯಾಣಿಸಿದ ಆರ್ಯನನ್ನು ಪಾಲ್ಘಾಟ್ ರೈಲ್ವೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಮಾಹಿತಿ ತಿಳಿದ ಉಡುಪಿ ಪೊಲೀಸರು ಪಾಲ್ಘಾಟ್ ಗೆ ತೆರಳಿದ್ದಾರೆಂದು ತಿಳಿದುಬಂದಿದೆ.
ಉಡುಪಿ: ಕೋಚಿಂಗ್ ಸೆಂಟರ್‌ಗೆ ತೆರಳಿದ್ದ ಬಾಲಕನೋರ್ವ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ಪತ್ತೆಯಾದಲ್ಲಿ ಮಾಹಿತಿ ನೀಡುವಂತೆ ಪೋಷಕರು ಮನವಿ ಮಾಡಿದ್ದಾರೆ. ನಾಪತ್ತೆಯಾದ ಬಾಲಕ ಬ್ರಹ್ಮಾವರದ ಬಾರ್ಕೂರು ರೋಡ್ ಹಂದಾಡಿಯ ನಿವಾಸಿ ಪ್ರಕಾಶ್ ಎಂಬವರ ಪುತ್ರ ಆರ್ಯ (13) ಎಂದು ಗುರುತಿಸಲಾಗಿದೆ. ಭಾನುವಾರ ಬೆಳಗ್ಗೆ ಉಡುಪಿಯ ಕಡಿಯಾಳಿಯಲ್ಲಿರುವ ಆಕಾಶ್ ಇನ್‌ಸ್ಟಿಟ್ಯೂಟ್‌ಗೆ ತೆರಳಿದ್ದ ಆರ್ಯ ಮನೆಗೆ ವಾಪಸ್ ಬಂದಿಲ್ಲ ಎಂದು ಪೋಷಕರು ತಿಳಿಸಿದ್ದಾರೆ.ನಾಪತ್ತೆಯಾಗಿರುವ ಬಾಲಕ ಆರ್ಯ ಪತ್ತೆಯಾದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಗೆ (0820-2520444) ಮಾಹಿತಿ ನೀಡುವಂತೆ ಅಥವಾ 94810249622 ದೂರವಾಣಿ ಸಂಖ್ಯೆಗೆ ಸಂಪರ್ಕಿಸುವಂತೆ ಪೋಷಕರು ಮನವಿ ಮಾಡಿದ್ದಾರೆ.
ಸೆಪ್ಟೆಂಬರ್ 15ರೊಳಗೆ ನಗರದ ಎಲ್ಲಾ ರಸ್ತೆಗಳು ಗುಂಡಿಗಳಿಂದ ಮುಕ್ತವಾಗಿರಬೇಕು. ಇಲ್ಲದಿದ್ದರೆ ಆ್ಯಕ್ಷನ್ ಗ್ಯಾರಂಟಿ ಎಂದು ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಹಿರಿಯ ಅಧಿಕಾರಿಗಳೊಂದಿಗೆ ಭಾನುವಾರ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದ್ಯತೆ ಮೇರೆಗೆ ಎಲ್ಲ ವಾರ್ಡ್‌ಗಳಲ್ಲಿ ಗುಂಡಿಗಳನ್ನು ತುಂಬುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಉಳಿದ ಕಾಮಗಾರಿಗಳನ್ನು ಬದಿಗೊತ್ತಿ ನಗರದಲ್ಲಿ ಗುಂಡಿಗಳು ಬಾರದಂತೆ ಕಾಮಗಾರಿಗಳ ಕೈಗೊಳ್ಳುವಂತೆ ಸೂಚಿಸಲಾಗಿದೆ. ನಗರದ ರಸ್ತೆಗಳನ್ನು ಗುಂಡಿ ಮುಕ್ತ ಮಾಡಲು ವಾರ್ಡ್ ಮಟ್ಟದ ಎಲ್ಲಾ ಅಧಿಕಾರಿಗಳು, ಅವರ ಶ್ರೇಣಿಯನ್ನು ಲೆಕ್ಕಿಸದೆ, ಕೆಲಸಕ್ಕಿಳಿದು ಕಾಮಗಾರಿಗಳ ಮೇಲ್ವಿಚಾರಣೆ ಮಾಡಬೇಕು. ಸಾರ್ವಜನಿಕರಿಂದ ದೂರುಗಳು ಬಂದರೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಇತ್ತೀಚೆಗಷ್ಟೇ ಮರ ಬಿದ್ದು ಇಬ್ಬರು ಆಟೋ ಚಾಲಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಹೀಗಾಗಿ ಇನ್ನು ಮುಂದೆ ಮರ ಬೀಳದಂತೆ ಕ್ರಮ ವಹಿಸುವಂತೆಯೂ ಸೂಚಿಸಲಾಗಿದೆ ಸೆಪ್ಟೆಂಬರ್‌ನಲ್ಲಿ ಹಠಾತ್ ಮಳೆಯಾಗುವ ನಿರೀಕ್ಷೆಯಿರುವುದರಿಂದ ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ…
ಉಡುಪಿ: ಬಿಜೆಪಿ ಪ್ರತಿಭಟನೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆಪ್ಟೆಂಬರ್ 6ರಂದು ಬಿಜೆಪಿ ಕಾರ್ಯಕರ್ತರು ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಸಿಂಡಿಕೇಟ್ ಸರ್ಕಲ್ ಮಧ್ಯಭಾಗದಲ್ಲಿ ಮುಖ್ಯಮಂತ್ರಿಗಳ ಪ್ರತಿಕೃತಿಯನ್ನು ತಂದು ನಿಲ್ಲಿಸಿದ್ದು, ಆರೋಪಿಗಳಾದ ಗಿರೀಶ್ ಅಂಚನ್ ಹಾಗೂ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಅವರು ಮುಖ್ಯಮಂತ್ರಿಯವರ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದಿದ್ದಾರೆ. ಅನಂತರ ಆರೋಪಿ ಅಭಿರಾಜ್ ಶೆಟ್ಟಿಯು ಕೈಯಲ್ಲಿ ಪೆಟ್ರೋಲ್ ಬಾಟಲಿ ಹಿಡಿದುಕೊಂಡು ಪ್ರತಿಕೃತಿಗೆ ಬೆಂಕಿ ಹಚ್ಚಿದ್ದರು ಎಂದು ಕಾಂಗ್ರೆಸ್ ಮುಖಂಡ ಸೌರಭ್ ಬಲ್ಲಾಳ್ ದೂರು ನೀಡಿದ್ದರು. ಅದರಂತೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆ ಆರೋಪಿ ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ್ದು ಜೈಲು ಸಿಬ್ಬಂದಿಗಳೇ ಎಂಬುದಾಗಿ ಸ್ಪೋಟಕ ಮಾಹಿತಿ ತನಿಖೆಯಲ್ಲಿ ಸತ್ಯ ಬಯಲಾಗಿದೆ. ಈ ಕುರಿತಂತೆ ಪೊಲೀಸ್ ಇಲಾಖೆಯಿಂದ ತನಿಖೆಯನ್ನು ನಡೆಸಲಾಗಿತ್ತು. ತನಿಖಾ ಅಧಿಕಾರಿಗಳ ತಂಡ ಪರಪ್ಪನ ಅಗ್ರಹಾರದ 15 ರಿಂದ 20 ಮಂದಿಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಂತ ನಟ ದರ್ಶನ್ ಗೆ ಜೈಲು ಸಿಬ್ಬಂದಿಳೇ ರಾಜಾತಿಥ್ಯ ನೀಡಿದ್ದಾರೆ ಎಂಬುದಾಗಿ ಹಲವು ಸಿಬ್ಬಂದಿಗಳು ಹೇಳಿಕೆ ನೀಡಿದ್ದಾರೆ. ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಟೇಬಲ್, ಚೇರ್, ಮಗ್ ನಲ್ಲಿ ಟೀ ಕೊಟ್ಟು ರಾಜಾತಿಥ್ಯ ನೀಡಿದ್ದು ಜೈಲು ಸಿಬ್ಬಂದಿಗಳೇ ಎನ್ನುವ ಮಾಹಿತಿಯನ್ನು ಕಲೆ ಹಾಕಿದ್ದಾರೆ. ಒಟ್ಟಾರೆಯಾಗಿ ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ್ದು ಜೈಲು ಸಿಬ್ಬಂದಿಗಳೇ ಹೊರತು, ಬೇರೆಯಾರೂ ಅಲ್ಲ. ಇದರಲ್ಲಿ ಜೈಲು ಸಿಬ್ಬಂದಿಗಳ ಪಾತ್ರವೇ ಸಂಪೂರ್ಣವಾಗಿದೆ ಎಂಬುದಾಗಿ ತನಿಖೆಯಿಂದ ಸತ್ಯ ಬಹಿರಂಗವಾಗಿದೆ. ಈ ವರದಿಯನ್ನು ಆಧರಿಸಿ ರಾಜ್ಯ ಸರ್ಕಾರದ ತಪ್ಪೆಸಗಿದಂತ…