Author: main-admin

ಲಕ್ನೋ: ಕನಿಷ್ಠ 15 ವಿದ್ಯಾರ್ಥಿಗಳ ಸಾವಿಗೆ ಕಾರಣವಾದ ಲಕ್ನೋದ ಅಲಿಗಂಜ್ ಕೋಚಿಂಗ್ ಸೆಂಟರ್‌ನಲ್ಲಿ ನಡೆದ ಭೀಕರ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ನಾಲ್ವರು ಹಿರಿಯ ಅಧಿಕಾರಿಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದ್ದು, ಕೋಚಿಂಗ್ ಸೆಂಟರ್ ಮಾಲೀಕರು ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಸಿಎಂ ಯೋಗಿ ಆದಿತ್ಯನಾಥ್ ಅವರ ಸೂಚನೆಯ ಮೇರೆಗೆ, ಇಬ್ಬರು ಸದಸ್ಯರ ವಿಶೇಷ ತನಿಖಾ ತಂಡ ರಚಿಸಲಾಗಿದೆ. 7 ದಿನಗಳಲ್ಲಿ ತನ್ನ ವರದಿಯನ್ನು ಸಲ್ಲಿಸುವಂತೆ ತಂಡಕ್ಕೆ ಸೂಚಿಸಲಾಗಿದೆ.ಅಗ್ನಿ ಅವಘಡದ ಬೆನ್ನಲ್ಲೇ ಲಕ್ನೋ ಅಭಿವೃದ್ಧಿ ಪ್ರಾಧಿಕಾರ ಮಾಲೀಕರಿಗೆ ಕಟ್ಟಡವನ್ನು ತೆರವುಗೊಳಿಸುವಂತೆ ಆದೇಶ ಹೊರಡಿಸಿದೆ. ಒಂದು ವೇಳೆ ತೆರವುಗೊಳಿಸದಿದ್ದರೆ ಖುದ್ದು ಪ್ರಾಧಿಕಾರವೇ ಕಟ್ಟಡವನ್ನು ನೆಲಸಮಗೊಳಿಸುವುದಾಗಿ ತಿಳಿಸಿದೆ.

Read More

ಮಂಗಳೂರು: ಬಾಲಿವುಡ್‌ನ ಖ್ಯಾತ ನಟ ಹಾಗೂ ಜಾಗತಿಕ ಮಟ್ಟದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಶಾರುಖ್ ಖಾನ್ ಅವರು ಜೂನ್ 25ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಕರಾವಳಿಯ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಶನ್ ಆಯೋಜಿಸಿರುವ ‘ಆನ್ ಈವಿನಿಂಗ್ ವಿತ್ ಶಾರುಖ್ ಖಾನ್’ ಕಾರ್ಯಕ್ರಮದಲ್ಲಿ ಅವರು ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಂಗಳೂರಿನ ಅಡ್ಯಾ‌ರ್ ಗಾರ್ಡನ್‌ನಲ್ಲಿ ನಡೆಯಲಿರುವ ಈ ವಿಶೇಷ ಕಾರ್ಯಕ್ರಮಕ್ಕೆ ಸಂಜೆ 4 ಗಂಟೆಯಿಂದ ಪ್ರವೇಶ ಆರಂಭವಾಗಲಿದ್ದು, ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು, ಸಾರ್ವಜನಿಕ ಪ್ರತಿನಿಧಿಗಳು ಹಾಗೂ ಪೂರ್ವ ನೋಂದಣಿ ಮಾಡಿಕೊಂಡಿರುವ ಅತಿಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕುರಿತು ಮಾತನಾಡಿದ ರೋಹನ್ ಕಾರ್ಪೊರೇಶನ್ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಡಾ. ರೋಹನ್ ಮೊಂತೇರೊ, “ಭಾರತದ ಅತ್ಯಂತ ಜನಪ್ರಿಯ ಕಲಾವಿದರಲ್ಲಿ ಒಬ್ಬರಾದ ಶಾರುಖ್ ಖಾನ್ ಅವರನ್ನು ಮಂಗಳೂರಿನ ನೆಲದಲ್ಲಿ ಸ್ವಾಗತಿಸುವ ಅವಕಾಶ ದೊರೆತಿರುವುದು ನಮಗೆ ಹೆಮ್ಮೆಯ ವಿಷಯ. ಈ ಕಾರ್ಯಕ್ರಮವು ರೋಹನ್ ಕಾರ್ಪೊರೇಶನ್ ಸಂಸ್ಥೆಯ ಬೆಳವಣಿಗೆಯಲ್ಲಿ ಮಹತ್ವದ ಕ್ಷಣವಾಗಿದ್ದು, ಭಾಗವಹಿಸುವ ಪ್ರತಿಯೊಬ್ಬರಿಗೂ ವಿಶಿಷ್ಟ ಅನುಭವವನ್ನು…

Read More

ಬೆಂಗಳೂರು : ಲಿವ್-ಇನ್ ರಿಲೇಷನ್‌ಶಿಪ್ ಹಾಗೂ ಪ್ರೇಮ ವಿವಾಹಕ್ಕೆ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಹೆತ್ತ ಮಗಳೇ ತನ್ನ ಪ್ರಿಯಕರನೊಂದಿಗೆ ಸೇರಿ ತಂದೆ, ತಾಯಿ ಹಾಗೂ ಒಡಹುಟ್ಟಿದ ಕಿರಿಯ ತಂಗಿಯನ್ನು ಚಾಕುವಿನಿಂದ ಮನಸೋಇಚ್ಛೆ ಇರಿದು ಭೀಕರವಾಗಿ ಕೊಲೆ ಮಾಡಿರುವ ಮೈನಡುಗಿಸುವ ಘಟನೆ ಬೆಂಗಳೂರಿನ ಕೆ.ಆರ್. ಪುರದ ಸಿಗೇಹಳ್ಳಿಯಲ್ಲಿ ತಡರಾತ್ರಿ ನಡೆದಿದೆ.ಸೋಮಸುಂದರ್ (55), ಮುತ್ತುಲಕ್ಷ್ಮಿ (48) ಹಾಗೂ ಇವರ ಕಿರಿಯ ಮಗಳು ಸುಪ್ರಿಯಾ (20) ಕೊಲೆಯಾದ ದುರ್ದೈವಿಗಳು. ಕೊಲೆ ಕೃತ್ಯ ಎಸಗಿದ ಸೋಮಸುಂದರ್ ಅವರ ಹಿರಿಯ ಮಗಳು ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಸದ್ಯ ತಲೆಮರೆಸಿಕೊಂಡಿದ್ದಾರೆ.ಆರೋಪಿ ಶ್ವೇತಾ, ಕೆನತ್ ಎಂಬಾತನ ಜೊತೆ ಮದುವೆಯಾಗದೆ ಲಿವ್-ಇನ್ ರಿಲೇಷನ್‌ಶಿಪ್‌ನಲ್ಲಿದ್ದಳು. ಮಗಳ ಈ ನಡವಳಿಕೆಯನ್ನು ವಿರೋಧಿಸಿದ್ದ ತಂದೆ ಸೋಮಸುಂದರ್, ಆಕೆಗೆ ಬುದ್ಧಿವಾದ ಹೇಳಿ ಮನೆಗೆ ವಾಪಸ್ ಕರೆದೊಯ್ಯಲು ಪತ್ನಿ ಮುತ್ತುಲಕ್ಷ್ಮಿ ಹಾಗೂ ಕಿರಿಯ ಮಗಳು ಸುಪ್ರಿಯಾಳೊಂದಿಗೆ ಸಿಗೇಹಳ್ಳಿಯ ಡಾಮ್ನಿಕದ ಲೇಔಟ್‌ನಲ್ಲಿರುವ ‘ಸಾಯಿ ಗ್ರೀನ್ ಅಪಾರ್ಟ್‌ಮೆಂಟ್’ಗೆ ಬಂದಿದ್ದರು. ಈ ವೇಳೆ ಅಪಾರ್ಟ್‌ಮೆಂಟ್‌ನಲ್ಲಿ ಪೋಷಕರು ಹಾಗೂ ಶ್ವೇತಾ-ಕೆನತ್…

Read More

ಕೊಲ್ಲಂ : ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯೊಂದು ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಮೂವರು ಸ್ಥಳೀಯರು ಸಾವನ್ನಪ್ಪಿ, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಡುವತ್ತೂರಿನ ನೀಲೇಶ್ವರಂನ ಮುಕ್ಕೋಣಿಮುಕ್ಕು ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ. ಬೆಳಿಗ್ಗೆ ಸುಮಾರು 7.15 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಲಾರಿಯಲ್ಲಿದ್ದ ಭಾರಿ ಪ್ರಮಾಣದ ಮರಳು ಬಸ್ ನಿಲ್ದಾಣದ ಮೇಲೆ ಉರುಳಿ ಬಿದ್ದಿದ್ದರಿಂದ, ಬಸ್‌ಗಾಗಿ ಕಾಯುತ್ತಿದ್ದ ಪ್ರಯಾಣಿಕರು ಮರಳಿನ ರಾಶಿಯ ಅಡಿಯಲ್ಲಿ ಸಿಲುಕಿಕೊಂಡಿದ್ದರು ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ತಿಳಿಸಿದ್ದಾರೆ. ಅಪಘಾತದಲ್ಲಿ ಇಬ್ಬರು ಹಿರಿಯ ನಾಗರಿಕರು ಮತ್ತು ಒಂದು ಮಗು ಸಾವನ್ನಪ್ಪಿದ್ದಾರೆ. ಮೃತ ಮೂವರನ್ನು ಹರಿಲಾಲ್ (52), ಪಾರ್ಥಿಪ್ (15) ಮತ್ತು ಅಜಯ ಕುಮಾರ್ (45) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಕೊಟ್ಟಾರಕ್ಕರ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಗಾಯಗಳು ಗಂಭೀರವಾಗಿಲ್ಲ. ಕೊಟ್ಟಾರಕ್ಕರ ಅಗ್ನಿಶಾಮಕ ದಳದ ಅಧಿಕಾರಿಗಳ ಮಾಹಿತಿ ಪ್ರಕಾರ, ಅತಿ ವೇಗವಾಗಿ ಬಂದ ಟಿಪ್ಪರ್ ಲಾರಿಯು ಮುಕ್ಕೋಣಿಮುಕ್ಕು ಜಂಕ್ಷನ್‌ನಲ್ಲಿ ಬೈಕೊಂದನ್ನು ಹಿಂದಿಕ್ಕಲು (Overtake) ಯತ್ನಿಸಿದೆ.…

Read More

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ಅದೃಷ್ಟವಶಾತ್, ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.zಮೂಡುಮಾರ್ನಾಡು ನಿವಾಸಿ ಅವಿನಾಶ್ ಎಂಬುವರಿಂದ ಕೋಟೆಕಾರಿನ ಮಸೂದ್ ಎಂಬವರು ಈ ಕಾರನ್ನು ಇತ್ತೀಚೆಗೆ ಖರೀದಿಸಿದ್ದರು. ಮಸೂದ್ ಅವರು ತಮ್ಮ ಕುಟುಂಬದೊಂದಿಗೆ ಮೂಡುಬಿದಿರೆಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ವಾಹನವು ಹಳೆ ಪುರಸಭೆ ಕಟ್ಟಡದ ಬಳಿ ತಲುಪುತ್ತಿದ್ದಂತೆ, ಕಾರಿನಿಂದ ಹೊಗೆ ಬರುವುದನ್ನು ಗಮನಿಸಿದ ಪ್ರಯಾಣಿಕರು ತಕ್ಷಣವೇ ಕಾರನ್ನು ನಿಲ್ಲಿಸಿ, ಮಹಿಳೆಯರು ಮತ್ತು ಮಕ್ಕಳನ್ನು ಹೊರಕ್ಕೆ ಕರೆತಂದರು. ಕೆಲವೇ ಕ್ಷಣಗಳಲ್ಲಿ ಕಾರು ದಗದಗನೆ ಹೊತ್ತಿ ಉರಿದಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿಯನ್ನು ನಂದಿಸಿದರು. ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು ತಿಂಗಳ ಹೆಣ್ಣು ಮಗುವನ್ನು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ನಗರದ ಖಾಸಗಿ ಆಸ್ಪತ್ರೆಯ ವೈದ್ಯ ಹಾಗೂ ಮಗುವನ್ನು ಪಡೆದ ವ್ಯಕ್ತಿಯನ್ನು ಜಿಲ್ಲಾ ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಡಾ। ಸುರೇಂದ್ರ ಕಾಮತ್, ಸಂತೆಕಟ್ಟೆ ನೇಜಾರು ನಿವಾಸಿಗಳಾದ ಪ್ರಕಾಶ್ ಹಾಗೂ ಪೂರ್ಣಿಮಾ ದಂಪತಿ, ಇತರರ ವಿರುದ್ದ ಪ್ರಕರಣ ದಾಖಲಾಗಿದ್ದು, ವೈದ್ಯರು ಮತ್ತು ಪ್ರಕಾಶ್ ಅವರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ. ಜೂ.19ರಂದು ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾ ಕಚೇರಿ (CDPO) ಅಧಿಕಾರಿಯೊಬ್ಬರು ಮಕ್ಕಳ ರಕ್ಷಣ ಘಟಕಕ್ಕೆ ಕರೆ ಮಾಡಿ, ಸಂತೆಕಟ್ಟೆಯ ನೇಜಾರಿನಲ್ಲಿ ಪ್ರಕಾಶ್ ಹಾಗೂ ಪೂರ್ಣಿಮಾ ದಂಪತಿ ಸುಮಾರು ಒಂದು ತಿಂಗಳ ಹೆಣ್ಣುಮಗುವನ್ನು ತಂದು ಅನಧಿಕೃತವಾಗಿ ಸಾಕುತ್ತಿದ್ದಾರೆ ಎಂದು ದೂರು ನೀಡಿದ್ದರು.ದೂರು ಆಧರಿಸಿ ಮಕ್ಕಳ ರಕ್ಷಣ ಘಟಕದ ರಕ್ಷಣಾಧಿಕಾರಿ ಯೋಗೀಶ್, ಸುರಕ್ಷಾ ಜತೆ ವಲಯ ಮೇಲ್ವಿಚಾರಕಿ ದೂರು ನೀಡಿದ ಅಧಿಕಾರಿಯೊಂದಿಗೆ ನೇಜಾರಿಗೆ ತೆರಳಿದಾಗ ಅಲ್ಲಿ ದಂಪತಿ ಇರಲಿಲ್ಲ. ಬಳಿಕ ಮಾಹಿತಿ ಮೇರೆಗೆ ಸಂತೆಕಟ್ಟೆಯ ಸುಬ್ರಹ್ಮಣ್ಯನಗರದ ಮನೆಗೆ ತೆರಳಿದಾಗ ಪೂರ್ಣಿಮಾ,…

Read More

ಮೈಸೂರು: ನೈರುತ್ಯ ರೈಲ್ವೆ ಮೈಸೂರು ವಿಭಾಗದ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಪ್ರಯಾಣಿಕರ ಸುರಕ್ಷತೆ, ಮಕ್ಕಳ ರಕ್ಷಣೆ ಹಾಗೂ ಸಾರ್ವಜನಿಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತಿದೆ.“ಜನ-ಜಾಗರಣ” ಅಭಿಯಾನದ ಅಂಗವಾಗಿ 18.06.2026 ರಂದು ಚಿಕ್ಕಜಾಜೂರು ರೈಲು ನಿಲ್ದಾಣದಲ್ಲಿ ಹಾಗೂ ರೈಲು ಸಂಖ್ಯೆ 56519 ಕೆಎಸ್‌ಆರ್ ಬೆಂಗಳೂರು–ಹೊಸಪೇಟೆ ಪ್ಯಾಸೆಂಜರ್ ರೈಲಿನಲ್ಲಿ ಆರ್‌ಪಿಎಫ್ ಸಿಬ್ಬಂದಿ ಮತ್ತು ಸಿಗ್ನಲ್ ವಿಭಾಗದ ಸಿಬ್ಬಂದಿಗಳಿಂದ ಪ್ರಯಾಣಿಕರ ಜಾಗೃತಿ ಕಾರ್ಯಕ್ರಮ ನಡೆಸಲಾಯಿತುಈ ಸಂದರ್ಭದಲ್ಲಿ ಅಪರಿಚಿತರಿಂದ ಆಹಾರ ಪದಾರ್ಥಗಳನ್ನು ಸ್ವೀಕರಿಸದಂತೆ, ತಮ್ಮ ಸಾಮಾನು-ಸರಂಜಾಮುಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕೆಂದು ಹಾಗೂ ಸರ ಕಳವು ಮತ್ತು ಇತರ ಕಳ್ಳತನಗಳ ಬಗ್ಗೆ ಜಾಗರೂಕರಾಗಿರಬೇಕೆಂದು ಪ್ರಯಾಣಿಕರಿಗೆ ತಿಳಿಸಲಾಯಿತು. ಅದೇ ರೀತಿ ಫುಟ್‌ಬೋರ್ಡ್‌ನಲ್ಲಿ ಪ್ರಯಾಣಿಸುವುದು, ರೈಲು ಹಳಿಗಳನ್ನು ಅಕ್ರಮವಾಗಿ ದಾಟುವುದು ಹಾಗೂ ಸುಲಭವಾಗಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ರೈಲಿನಲ್ಲಿ ಸಾಗಿಸುವುದರಿಂದ ಉಂಟಾಗುವ ಅಪಾಯಗಳ ಕುರಿತು ಅರಿವು ಮೂಡಿಸಲಾಯಿತು. ಯಾವುದೇ ಸಹಾಯ ಅಥವಾ ತುರ್ತು ಸಂದರ್ಭಗಳಲ್ಲಿ ರೈಲ್ವೆ ಸಹಾಯವಾಣಿ ಸಂಖ್ಯೆ 139 ಅನ್ನು ಬಳಸುವಂತೆ ಸಲಹೆ ನೀಡಲಾಯಿತು.…

Read More

ಮಂಗಳೂರು: ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದ ಹಸುವೊಂದನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಸೇರಿ ಸುರಕ್ಷಿತವಾಗಿ ರಕ್ಷಿಸಿದ ಘಟನೆ ಪಚ್ಚನಾಡಿಯಲ್ಲಿ ಭಾನುವಾರ ಸಂಜೆ ನಡೆದಿದೆ.ಈ ಹಸು ಸ್ಥಳೀಯ ನಿವಾಸಿ ಫ್ರಾಂಕ್ಲಿನ್ ಫರ್ನಾಂಡಿಸ್ ಅವರಿಗೆ ಸೇರಿದ್ದಾಗಿದೆ. ಭಾನುವಾರ ಸಂಜೆ ಹಸು ಮನೆಯ ಸಮೀಪದ ಬಾವಿಯ ಬಳಿ ಮೇಯುತ್ತಿದ್ದಾಗ, ಆಯತಪ್ಪಿ ಬಾವಿಯೊಳಗೆ ಬಿದ್ದಿದೆ ಎಂದು ಮೂಲಗಳು ತಿಳಿಸಿವೆ. ಸುಮಾರು 25 ಅಡಿ ಆಳವಿದ್ದ ಆ ಬಾವಿಯಲ್ಲಿ ನೀರು ಇತ್ತು. ಘಟನೆ ಮನೆಯ ಸಮೀಪವೇ ನಡೆದಿದ್ದರಿಂದ, ಕುಟುಂಬದವರು ತಕ್ಷಣವೇ ಹಸು ಬಾವಿಗೆ ಬಿದ್ದಿರುವುದನ್ನು ಗಮನಿಸಿ ಕದ್ರಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ತಂಡವು ಕಾರ್ಯಾಚರಣೆ ಆರಂಭಿಸಿತು. ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯರ ಜಂಟಿ ಪ್ರಯತ್ನದಿಂದ ಹಸುವನ್ನು ಬಾವಿಯಿಂದ ಸುರಕ್ಷಿತವಾಗಿ ಮೇಲೆತ್ತಲಾಯಿತು. ಈ ರಕ್ಷಣಾ ಕಾರ್ಯಾಚರಣೆಯಲ್ಲಿ ಕದ್ರಿ ಅಗ್ನಿಶಾಮಕ ಠಾಣಾಧಿಕಾರಿ ಆಲ್ಬರ್ಟ್ ಮೋನಿಸ್, ಸಹಾಯಕ ಠಾಣಾಧಿಕಾರಿ ರಮೇಶ್ ದಯಾಕರ್, ಪ್ರಮುಖ ಅಗ್ನಿಶಾಮಕ ಸಿಬ್ಬಂದಿ ಚಂದ್ರಹಾಸ ಸಾಲಿಯಾನ್, ಚಾಲಕ ಸುರೇಶ್ ಕುಮಾರ್…

Read More

ವಿಜಯಪುರ: ಭೀಮಾತೀರದಲ್ಲಿ 6 ಜನರ ಹತ್ಯೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಪ್ರಕರಣದ ಮತ್ತೊಬ್ಬ ಮುಖ್ಯ ಆರೋಪಿ ಮಹೇಶ್ ತಳವಾರ್ ಮೇಲೆ ಫೈರಿಂಗ್ ನಡೆದಿದೆ.ಕಾಲಿಗೆ ಗುಂಡು ಹಾರಿಸಿ ಚಡಚಣ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇಟ್ಟಿಂಗಿಹಾಳ ಗ್ರಾಮದ ಹೊರವಲಯದಲ್ಲಿ ಮಹೇಶ್ ಕಾಲಿಗೆ ಫೈರಿಂಗ್ ಮಾಡಲಾಗಿದೆ. ಮಹೇಶನನ್ನ ಬಂಧಿಸಲು ಹೋದಾಗ ಓಡಿ ಹೋಗಲು ಯತ್ನಿಸಿದ ಮಹೇಶ್ ತಳವಾರ್ ಪೊಲೀಸರ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿದ್ದಾನೆ. ಪೊಲೀಸ್ ಸಿಬ್ಬಂದಿ ಮೇಲೆ ಕೂಡ ದಾಳಿಗೆ ಯತ್ನಿಸಿದ್ದಾನೆ. ಆಗ ಎರಡು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಸಿದ್ದಾರೆ. ಆದರೆ ಮಹೇಶ್ ಇದಕ್ಕೆ ಜಗ್ಗದೆ ಕಲ್ಲಿನ ದಾಳಿ ನಡೆಸಿದ್ದಾನೆ. ಹೀಗಾಗಿ ಕಾಲಿಗೆ ಗುಂಡು ಹಾರಿಸಿ ಮಹೇಶ್ ಬಂಧನ ಮಾಡಿದ್ದಾರೆ. ಮಹೇಶ್ ಬಲಗಾಲಿಗೆ ಚಡಚಣ ಸಿಪಿಐ ಪರಶುರಾಮ್ ಮನಗೂಳಿ ಗುಂಡು ಹಾರಿಸಿದ್ದಾರೆ. ಸದ್ಯ ಆರೋಪಿ ಮಹೇಶ್‌ನನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಘಟನೆ ವೇಳೆ ಚಡಚಣ ಠಾಣೆ ಸಿಬ್ಬಂದಿ ಶೇಖರ್ ಪವಾರ್, ವಿಜಯಕುಮಾರ್ ಬನಸೋಡೆಗೆ ಗಾಯಗಳಾಗಿವೆ. ಜಿಲ್ಲಾಸ್ಪತ್ರೆಯಲ್ಲಿ ಇಬ್ಬರು ಸಿಬ್ಬಂದಿಯನ್ನ…

Read More

ಮಂಗಳೂರು: ಚಲಿಸುತ್ತಿದ್ದ ಲಾರಿಯ ಹಿಂಭಾಗಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ, ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಜೂನ್ 21ರಂದು ಮಂಗಳೂರಿನ ಎಕ್ಕೂರು ರಾಷ್ಟ್ರೀಯ ಹೆದ್ದಾರಿ 66ರ ರೈಲ್ವೆ ಮೇಲ್ಸೇತುವೆಯ ಮೇಲೆ ನಡೆದಿದೆ.ಮೃತಪಟ್ಟ ಯುವಕನನ್ನು ಮಂಜೇಶ್ವರದ ಪಾನತ್ತೂರಿನ ನಿವಾಸಿ ಸುಧೀಶ್ ಸಿ.ಕೆ.(26) ಎಂದು ಗುರುತಿಸಲಾಗಿದೆ. ಇವರು ಎಸಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು. ಭಾನುವಾರ ಬೆಳಿಗ್ಗೆ ಸುಧೀಶ್ ಅವರು ತಮ್ಮ ಮನೆಯಿಂದ ಕೆಲಸದ ನಿಮಿತ್ತ ನಗರಕ್ಕೆ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅತಿಯಾದ ವೇಗವೇ ಅಪಘಾತಕ್ಕೆ ಮುಖ್ಯ ಕಾರಣವಾಗಿರಬಹುದು ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ಎಕ್ಕೂರು ರೈಲ್ವೆ ಮೇಲ್ಸೇತುವೆಯಲ್ಲಿ ಸುಧೀಶ್ ಅವರು ಚಲಾಯಿಸುತ್ತಿದ್ದ ಬೈಕ್, ತಮ್ಮ ಮುಂದೆಯೇ ಹೋಗುತ್ತಿದ್ದ ಲಾರಿಯ ಹಿಂಭಾಗಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಸುಧೀಶ್ ಅವರ ತಲೆಗೆ ಗಂಭೀರ ಗಾಯಗಳಾಗಿವೆ. ಸ್ಥಳೀಯರು ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಿದರಾದರೂ, ವಿಪರೀತ ರಕ್ತಸ್ರಾವದಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಂಗಳೂರು…

Read More