Author: main-admin

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿದ್ದ ಋಷಿಕೇಷ್ ಸೋನಾವಾಣೆ ಭಗವಾನ್ ಅವರನ್ನು ವರ್ಗಾವಣೆ ಮಾಡಲಾಗಿದೆ ದಕ್ಷಿಣ ಕನ್ನಡ ಜಿಲ್ಲೆಗೆ ನೂತನ ಎಸ್ಪಿಯಾಗಿ ಅಮಾತೆ ವಿಕ್ರಮ್ ಅವರನ್ನು ಎಸ್ ಪಿಯಾಗಿ ನಿಯೋಜಿಸಿ ಸರಕಾರ ಆದೇಶ ಹೊರಡಿಸಿದೆ. 2015ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿರುವ ಋಷಿಕೇಶ್ ಸೋನವಾಣೆ ದಕ್ಷಿಣ ಕನ್ನಡ ಜಿಲ್ಲೆಯ ಎಸ್’ಪಿಯಾಗಿ ನೇಮಕಗೊಂಡಿದ್ದರು. ಇನ್ನು ಬೀದರ್ ಎಸ್ಪಿಯಾಗಿದ್ದ ಡೆಕ್ಕ ಕಿಶೋರ್ ಬಾಬು ಅವರನ್ನು ವೈರ್ ಲೆಸ್ ವಿಭಾಗದ ಎಸ್ಪಿಯಾಗಿ ಹಾಗೂ ಹುಬ್ಬಳ್ಳಿ ಹೆಸ್ಕಾಂ ಎಸ್ಪಿ ಆಗಿದ್ದ ಚೆನ್ನಬಸವಣ್ಣ ಅವರನ್ನು ಬೀದರ್ ಜಿಲ್ಲೆಯ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ.

Read More

ಬೆಳ್ತಂಗಡಿ: ಮಾಲಡಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಮಗುಚಿ ಬಿದ್ದು ಎಳೆಯ ಮಗುವೊಂದು ದಾರುಣವಾಗಿ ಮೃತಪಟ್ಟ ಘಟನೆ ಮಾಲಾಡಿಯಲ್ಲಿ ಸೋಮವಾರ ಸಂಭವಿಸಿದೆ. ಕಾರ್ಕಳ ನಿಟ್ಟೆ ನಿವಾಸಿಗಳಾಗಿರುವ ಸಂತೋಷ್ ಹಾಗೂ ಗೀತಾ ದಂಪತಿಗಳ ಒಂದು ವರ್ಷದ ಮಗುವೇ ಅಪಘಾತದಲ್ಲಿವಮೃತಪಟ್ಟ ಮಗುವಾಗಿದೆ. ಇವರು ಸಂಬಂಧಿಕರ ಮನೆಗೆಂದು ಬಂದವರಾಗಿದ್ದಾರೆ. ಕೊಲ್ಪೆದ ಬೈಲಿನಿಂದ ಗರ್ಡಾಡಿಗೆ ರಿಕ್ಷಾದಲ್ಲಿ ಹೋಗುತ್ತಿದ್ದ ವೇಳೆ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದು ಮಗುಚಿ ಬಿದ್ದಿದೆ. ಅಪಘಾತದ ತೀವ್ರತೆಗೆ ಮಗು ತಾಯಿಯ ಕೈಯಿಂದ ರಸ್ತೆಗೆ ಎಸೆಯಲ್ಪಟ್ಟಿದೆ. ರಿಕ್ಷಾದಲ್ಲಿದ್ದ ಮಗುವಿನ ತಾಯಿ ಗೀತಾ ಹಾಗೂ ರತ್ನ ಎಂಬವರಿಗೆ ಗಾಯಗಳಾಗಿದೆ. ರಿಕ್ಷಾ ಚಾಲಕನಿಗೂ ಗಾಯಗಳಾಗಿದೆ. ರಸ್ತೆಗೆ ಎಸೆಯಲ್ಪಟ್ಟ ಮಗುವಿಗೆ ಹೊರನೋಟಕ್ಕೆ ಯಾವುದೇ ಗಾಯಗಳಾಗಿರಲಿಲ್ಲ, ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಗಾಯಾಳುಗಳನ್ನು ಆಸ್ಪತ್ರೆಗೆ ಕೊಂಡೊಯ್ಯದರು. ಆದರೆ ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಮಗು ಮೃತಪಟ್ಟಿತ್ತು ಎನ್ನಲಾಗಿದೆ. ಘಟನೆಯ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು:ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪದವು ಎಂಬಲ್ಲಿ ನಡೆದಿದೆ ಜ್ಞಾನೇಶ್ (14) ಆತ್ಮಹತ್ಯೆ ಮಾಡಿಕೊಂಡ ಬಾಲಕ.ಈತ ಹೆಚ್ಚು ಮೊಬೈಲ್ ಪೋ‌ನ್ ಬಳಕೆ ಮಾಡುತ್ತಿದ್ದ.ಇದಕ್ಕೆ ತಾಯಿ ಮೊಬೈಲ್ ಬಳಸದಂತೆ ಬುದ್ದಿವಾದ ಹೇಳಿದ್ದಾರೆ. ಇದರಿಂದ ಮನನೊಂದು ಬಾಗಿಲು ಹಾಕಿಕೊಂಡು ಜ್ಞಾನೇಶ್ ಕುಳಿತುಕೊಂಡಿದ್ದ.ಕೆಲ ಸಮಯದ ಬಳಿಕ ಪೋಷಕರು ನೋಡಿದಾಗ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವುದು ಬಯಲಾಗಿದೆ. ತಕ್ಷಣ ಬಾಗಿಲು ತೆರೆದು ನೇಣನ್ನು ಕತ್ತರಿಸಿ ಕೆಳಗೆ ಇಳಿಸಿ ನೋಡಿದಾಗ ಬಾಲಕ ಮೃತಪಟ್ಟಿರುವುದು ಕಂಡು ಬಂದಿದೆ.

Read More

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದು, 148 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಿ ಅದೇಶ ಹೊರಡಿಸಿದೆ. 2023 ರ ವಿಧಾನಸಭೆ ಚುನಾವಣೆ ಹಿನ್ನಲೆ 148 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ. ಚುನಾವಣಾ ಆಯೋಗ ಸೂಚನೆ ಮೇರೆಗೆ ವರ್ಗಾವಣೆ ಮಾಡಲಾಗಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಚಿನ್ನದ ವ್ಯಾಪಾರಿಗಳಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದು, 25 ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ತೆರಿಗೆ ವಂಚಿಸಿ ವ್ಯಾಪಾರ ಮಾಡುತ್ತಿದ್ದ ಚಿನ್ನದ ವ್ಯಾಪಾರಿಗಳ ಅಂಗಡಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಯನಗರ, ಬಸನಗೌಡ, ಯಶವಂತಪುರ, ಚಿಕ್ಕಪೇಟೆ ಸೇರಿದಂತೆ 25 ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಚಿನ್ನದ ಅಂಗಡಿಗಳ ಮಾಲೀಕರ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.

Read More

ದೆಹಲಿಯ ಪಶ್ಚಿಮ ವಿಹಾರ್‌ ನಲ್ಲಿ ಸೋಮವಾರ 32 ವರ್ಷದ ಮಹಿಳೆಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.ಪೊಲೀಸರ ಪ್ರಕಾರ, ಮೃತರನ್ನು ಜ್ಯೋತಿ ಎಂದು ಗುರುತಿಸಲಾಗಿದ್ದು, ಘಟನೆ ಸಂಭವಿಸಿದಾಗ ಸಂಜೆ 7:30 ರ ಸುಮಾರಿಗೆ ತನ್ನ ಕಚೇರಿಯಿಂದ ಹಿಂತಿರುಗುತ್ತಿದ್ದರು. ಮಹಿಳೆ ಫ್ಲಿಪ್‌ ಕಾರ್ಟ್‌ ನ ಕೊರಿಯರ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಮೃತಳ ಪತಿ ದೀಪಕ್ ಅವರು ತಮ್ಮ ಮನೆಗೆ ಹೋಗುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಬೈಕ್‌ ನಲ್ಲಿ ಬಂದಿದ್ದು, ಗುಂಡು ಹಾರಿಸಿದ್ದಾರೆ ಎಂದು ಹೇಳಿದ್ದಾರೆ.

Read More

ಮಂಗಳೂರು: ತುಳು ಚಿತ್ರರಂಗ ರಂಗಭೂಮಿ ಹಾಸ್ಯನಟ ಅರವಿಂದ್ ಬೋಳಾರ್‌ರವರ ವಾಹನ ಸ್ಕಿಡ್ ಆಗಿ ಅಪಘಾತಕ್ಕೊಳಗಾದ ಘಟನೆ ಮಂಗಳೂರು ಪಂಪ್‌ವೆಲ್ ಬಳಿ ನಡೆದಿದೆ. ತುಳುನಾಡ ಮಾಣಿಕ್ಯ ಖ್ಯಾತಿಯ ಹಾಸ್ಯ ನಟ ಅರವಿಂದ್ ಬೋಳಾರ್ ಅವರು ಚಲಾಯಿಸುತ್ತಿದ್ದ ಆಕ್ಟೀವಾ ಹೊಂಡಾ ಸ್ಕಿಡ್ ಹೊಡೆದು ಅಪಘಾತಕ್ಕೊಳಗಾಗಿದೆ. ಚಿಕಿತ್ಸೆಗಾಗಿ ಎನೆಪೋಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿಸಲಾಗಿದ್ದು, ಆಪರೇಷನ್ ನಡೆಸುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದ್ದು. ಹೆಚ್ಚಿನ ಮಾಹಿತಿ ಇನ್ನಷ್ಟು ತಿಳಿಯಬೇಕಿದೆ.

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 34 ಡಿವೈಎಸ್ಪಿಗಳನ್ನು ವರ್ಗಾವಣೆ ( DYSP Officer Transfer ) ಮಾಡಿ ಆದೇಶಿಸಲಾಗಿದೆ. ಈ ಸಂಬಂಧ ಆದೇಶ ಹೊರಡಿಸಲಾಗಿದ್ದು, ಚುನಾವಣಾ ಆಯೋಗದ ಸೂಚನೆಯ ಮೇರೆಗೆ ವಿವಿಧೆಡೆ ಕೆಲ ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಂತ 34 ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಅಂದಹಾಗೇ ಬಳ್ಳಆರಿ ನಗರ ಉಪ ವಿಭಾಗದ ಡಿವೈಎಸ್ಪಿಯಾಗಿದ್ದಂತ ಶೇಖರಪ್ಪ ಹೆಚ್ ಅವರನ್ನು ಗಂಗಾವತಿ ಉಪ ವಿಭಾಗಕ್ಕೆ, ಚಿಂಚೋಳಿ ಉಪ ವಿಭಾಗದ ಬಸವರಾಜು ಕೆ ಅವರನ್ನು ಬಳ್ಳಾರಿ ನಗರ ಉಪ ವಿಭಾಗಕ್ಕೆ, ವಿರೇಶ್ ಟಿ ದೊಡ್ಡಮನಿ ಅವರನ್ನು ಬಳ್ಳಾರಿ ವಲಯ ಐಜಿಪಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ಎಸ್ ವಿ ಗಿರೀಶ್ ಅವರನ್ನು ಹುಬ್ಬಳ್ಳಿ-ಧಾರವಾಡ ನಗರ ಸಿಸಿಬಿ ಡಿವೈಎಸ್ಪಿಯಾಗಿ, ಗೋಪಾಲಕೃಷ್ಣ ಬಿ ಗೌಡರ್ ಅವರನ್ನು ಬೆಳಗಾವಿ ಗ್ರಾಮಾಂತರ ಉಪ ವಿಭಾಗಕ್ಕೆ, ನಾರಾಯಣ ಬರಮನಿ ಅವರನ್ನು ಹುನಗುಂದ ಉಪ ವಿಭಾಗಕ್ಕೆ ಡಿವೈಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ.

Read More

ಉಳ್ಳಾಲ: ಮಂಗಳೂರು ಹೊರವಲಯದ ಉಳ್ಳಾಲದ ರಾ.ಹೆ. 66 ರಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡಿದ್ದು, ಇಬ್ಬರು ಯುವತಿಯರು ಸಣ್ಣ ಗಾಯಗಳೊಂದಿಗೆ ಪಾರಾಗಿರುವ ಘಟನೆ ಕೊಲ್ಯ- ಅಡ್ಕ ಬಳಿ ಸಂಭವಿಸಿದೆ. ಉಪ್ಪಳ ಹಿದಾಯತ್ ನಗರ ನಿವಾಸಿ ಬಷಾರ ಅಹಮ್ಮದ್ (22) ಮೃತರಾಗಿದ್ದಾರೆ. ಇನ್ನೋರ್ವ ಗಾಯಾಳು ಗುರುತು ಪತ್ತೆಯಾಗಿಲ್ಲ. ಕೇರಳ ಕಣ್ಣೂರು ನಿವಾಸಿ ಫಾತಿಮ ಹಾಗೂ ರೇವತಿ ಎಂಬವರಿಗೆ ಗಾಯಗಳಾಗಿವೆ. ನಾಲ್ವರಿದ್ದ ಕಾರು ಕೊಲ್ಯ- ಅಡ್ಕ ಬಳಿ ರಸ್ತೆ ವಿಭಜಕವನ್ನು ಏರಿ, ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಸಂಪೂರ್ಣ ನುಜ್ಜುಗುಜ್ಜಾಗಿದೆ. ಗಂಭೀರ ಗಾಯಾಳುವನ್ನು ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಗಾಯಾಳು ಪೈಕಿ ಫಾತಿಮ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯ ವಿದ್ಯಾರ್ಥಿ ನಿಯಾಗಿದ್ದಾರೆ. ನಾಲ್ವರು ಗೆಳೆಯರಾಗಿದ್ದರೆಂದು ತಿಳಿದುಬಂದಿದೆ. ಅಪಘಾತ ನಡೆದ ಸ್ಥಳಕ್ಕೆ ಸಂಚಾರಿ ಹಾಗೂ ಉಳ್ಳಾಲ ಠಾಣಾ ಪೊಲೀಸರು ತಡವಾಗಿ ಆಗಮಿಸಿದ್ದರು ಎಂದು ಆರೋಪಿಸಿ ಸಾರ್ವಜನಿಕರು ತರಾಟೆಗೆ ತೆಗೆದುಕೊಂಡರು.…

Read More

ಕರಾವಳಿಯ ಪುತ್ತೂರಿನಲ್ಲಿ ನಡೆಯುತ್ತಿರುವ ಕಂಬಳದಲ್ಲಿ ಬಿಗ್​ಬಾಸ್ ಖ್ಯಾತಿಯ ನಟಿ ಸಾನ್ಯಾ ಐಯ್ಯರ್ ಅವರ ಕೈ ಹಿಡಿದು ಎಳೆದ ಘಟನೆ ನಡೆದಿದೆ. ನಟಿ ಭಾಷಣ ಮಾಡುತ್ತಿದ್ದ ಸಮಯದಲ್ಲಿ ಐ ಲವ್ ಯೂ ಎಂದು ಹೇಳಿ ಕಿರುಚುತ್ತಿದ್ದ ಅಭಿಮಾನಿ ಬಳಿಕ ವೇದಿಕೆಯಿಂದ ಇಳಿದ ನಟಿಯ ಕೈ ಹಿಡಿದಿದ್ದಾನೆ. ಈ ದಿಢೀರ್ ಘಟನೆಯಿಂದ ನಟಿ ಮುಜುಗರಕ್ಕೊಳಗಾಗಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಅದ್ಧೂರಿ ಕಂಬಳ ನಡೆಯುತ್ತಿದೆ. ಜಾತ್ರೆಯಂತೆ ಅದ್ಧೂರಿಯಾಗಿ ನಡೆಯುತ್ತಿರುವ ಈ ಕಾರ್ಯಕ್ರಮವನ್ನು ವೀಕ್ಷಿಸಲು ನೆರೆಯ ಕೇರಳದಿಂದಲೂ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ನಟಿ ಸಾನ್ಯಾ ಐಯ್ಯರ್ ಅವರು ಬಿಗ್​ಬಾಸ್ ಕನ್ನಡ ಒಟಿಟಿ ಹಾಗೂ ಬಿಗ್​ಬಾಸ್ ಸೀಸನ್ 9ರಲ್ಲಿ ಭಾಗವಹಿಸಿ ಹೆಚ್ಚು ಫೇಮಸ್ ಆಗಿದ್ದರು. ಇವರು ಕನ್ನಡ ಕಿರುತೆರೆಗೆ ಬಾಲನಟಿಯಾಗಿ ಎಂಟ್ರಿ ಕೊಟ್ಟು ಹಲವಾರು ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

Read More