ಮಂಗಳೂರು: ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಯುವತಿ ತನ್ನ ಪ್ರಿಯಕರನೊಂದಿಗೆ ಮದುವೆಯಾಗಿ ಪತ್ತೆಯಾಗಿದ್ದಾಳೆ. ನಾಪತ್ತೆಯಾಗಿದ್ದ ಕಮಲಾಕ್ಷ ಎಂಬವರ ಪುತ್ರಿ, ನಗರದ ಫೈನಾನ್ಸ್ ಕಂಪನಿಯೊಂದರ ಉದ್ಯೋಗಿ ಶಿವಾನಿ (20)ತನ್ನ ಪ್ರಿಯಕರನೊಂದಿಗೆ ಮದುವೆಯಾಗಿದ್ದು, ಪೊಲೀಸರು ತಂತ್ರಜ್ಞಾನ ಮಾಹಿತಿ ಆಧಾರದಲ್ಲಿ ಪತ್ತೆ ಮಾಡಿ ಕರೆ ತಂದಿದ್ದಾರೆ.ಜ.24ರಂದು ನಗರದ ಕಂಕನಾಡಿ ಠಾಣೆಯ ಪೊಲೀಸ್ ಆಧಿಕಾರಿಗಳ ಮುಂದೆ ಹಾಜರಾಗಿ ತಾನು ಪ್ರೀತಿಸಿದವನನ್ನು ಸ್ವಯೇಚ್ಚೆಯಿಂದ ಮದುವೆಯಾಗಿದ್ದಾಗಿ ಹೇಳಿಕೆ ನೀಡಿದ್ದು ಪತಿಯೊಂದಿಗೆ ಬಾಳುವುದಾಗಿ ಲಿಖಿತ ಹೇಳಿಕೆ ನೀಡಿದ್ದಾಳೆ. ಜಿಹಾದ್ ಆತಂಕದ ನಡುವೆ ಒಂದುವಾರ ಪೊಲೀಸರು ಪತ್ತೆಗೆ ಪ್ರಯತ್ನಿಸಿದ್ದರು. ಗೋವಾ, ಮುಂಬೈಗೆ ತೆರಳಿದ್ದ ಜೋಡಿ ಹಣದ ಸಮಸ್ಯೆ ಎದುರಾದಾಗ ಎರಡು ಮೊಬೈಲ್ ಮಾರಿ ಅದರ ಹಣದಿಂದ ಸ್ವಲ್ಪ ಸಮಯ ಕಳೆದಿದ್ದರು. ಸ್ನೇಹಿತರ ಜತೆ ಸಂಪರ್ಕ ಹೊಂದಿದ್ದನ್ನು ಪತ್ತೆ ಹಚ್ಚಿದ ಪೊಲೀಸರು ಯುಪಿಐ ಹಣವನ್ನು ಹಾಕಿದ ವಿಳಾಸ ಪತ್ತೆ ಮಾಡಿ ಈ ಜೋಡಿಯ ಸಂಪರ್ಕ ಸಾಧಿಸಿದ್ದರು.
Author: main-admin
ಪುತ್ತೂರು: ನಗರದಲ್ಲಿ ನಡೆಯುತ್ತಿರುವ ಕೋಟಿ-ಚೆನ್ನಯ ಕಂಬಳದಲ್ಲಿ ಚಿತ್ರ ನಟಿ ಸಾನಿಯಾ ಅಯ್ಯರ್ ಗೆ ಅಭಿಮಾನಿಯೊಬ್ಬ ಕಿರಿಕ್ ಮಾಡಿರುವ ಘಟನೆ ನಡೆದಿದೆ. ಚಿತ್ರನಟಿ ಸಾನಿಯಾ ಅಯ್ಯರ್ ಪುತ್ತೂರು ಕೋಟಿ-ಚೆನ್ನಯ ಕಂಬಳಕ್ಕೆ ಅತಿಥಿಯಾಗಿ ಆಗಮಿಸಿದ್ದು, ವೇದಿಕೆಯಿಂದ ಇಳಿದು ಬರುವ ಸಂದರ್ಭದಲ್ಲಿ ಅಭಿಮಾನಿಯೊಬ್ಬ ಸೆಲ್ಫಿ ಕೆಳುವ ನೆಪದಲ್ಲಿ ಸಾನಿಯಾ ಅಯ್ಯರ್ ಕೈ ಹಿಡಿದು ಎಳೆದಿರುವ ಆರೋಪ ಎದುರಾಗಿದೆ, ಇದರಿಂದ ಸಾನಿಯ ಅಯ್ಯರ್ ಮುಜುಗರಕ್ಕೊಳಗಾಗಿದ್ದರೆ. ಇದೇ ಅಭಿಮಾನಿ ಸಾನಿಯಾ ಅಯ್ಯರ್ ಭಾಷಣ ಮಾಡುತ್ತಿದ್ದ ಸಮಯದಲ್ಲಿ ಐ ಲವ್ ಯೂ ಹೇಳುತ್ತಿದ್ದ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಯಾವುದೇ ದೂರು ದಾಖಲಾಗಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಋಷೀಕೇಶ್ ಸೊನವಣೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಬೆಂಗಳೂರು : ಸ್ಯಾಂಡಲ್ ವುಡ್ ನ ಹಿರಿಯ ಹಾಸ್ಯ ನಟ ಮಂದೀಪ್ ರೈ (73) ಅವರು ತಡರಾತ್ರಿ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ಭೈರಸಂಧ್ರದ ನಿವಾಸದಲ್ಲಿ ಮಧ್ಯರಾತ್ರಿ 1.45 ರ ಸುಮಾರಿಗೆ ಮಂದೀಪ್ ರೈ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.ಇಂದು ಸಂಜೆ ಮಂದೀಪ್ ರಾಯ್ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.ಕಳೆದ ವರ್ಷದ ಡಿಸೆಂಬರ್ ನಲ್ಲಿ ಮಂದೀಪ್ ರಾಯ್ ಅವರು ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಅನಂತ್ ನಾಗ್ ಹಾಗೂ ಶಂಕರ್ ನಾಗ್ ಜೊತೆ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಟ್ಟು ಮಿಂಚಿನ ಓಟ, ಬೆಂಕಿಯ ಬಲೆ, ಏಳು ಸುತ್ತಿನ ಕೋಟೆ, ಆಕಸ್ಮಿಕ, ರೇ, ಆಪ್ತ ರಕ್ಷಕ, ಅಮೃತಧಾರೆ, ಕುರಿಗಳು ಸಾರ್ ಕುರಿಗಳು ಸೇರಿದಂತೆ 500 ಕ್ಕೂ ಹೆಚ್ಚು ಸಿನಿಮಗಳಲ್ಲಿ ನಟಿಸಿದ್ದಾರೆ.
ಮಂಗಳೂರು: ಪ್ರಸ್ತುತ ದೇಶದಲ್ಲಿ ಸರಕಾರದಿಂದ ಮಂಜೂರಾಗುವ 100 ರೂ. ಅನುದಾನದಲ್ಲಿ 15 ಪೈಸೆ ಮಾತ್ರ ಅಭಿವೃದ್ಧಿಗೆ ಬಳಕೆಯಾಗುತ್ತಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದ್ದಾರೆ. ರೋಟರಿ ಜಿಲ್ಲೆ 3181ರ ವತಿಯಿಂದ ಶನಿವಾರ ಮಂಗಳೂರಿನಲ್ಲಿ ಆಯೋಜಿಸಿದ ಜಿಲ್ಲಾ ಸಮಾವೇಶ “ಪರಿಕಲ್ಪನೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 1985ರಲ್ಲಿ ರಾಜೀವ್ ಗಾಂಧಿಯವರು ಪ್ರಧಾನಿಯಾಗಿದ್ದಾಗ ಸರಕಾರದಿಂದ ಮಂಜೂರಾಗುವ ಪ್ರತೀ 1 ರೂ. ಅನುದಾನದಲ್ಲಿ 15 ಪೈಸೆ ಮಾತ್ರ ಅಭಿವೃದ್ಧಿಗಾಗಿ ಬಳಕೆಯಾಗುತ್ತದೆ ಎನ್ನುವ ಮಾತು ಚಾಲ್ತಿಯಲ್ಲಿತ್ತು. ಇಂದಿನ ಪರಿಸ್ಥಿತಿ ಅದನ್ನೂ ಮೀರಿ ಹೋಗಿದ್ದು, ನಮ್ಮ ದುರಾಸೆ ಮಾತ್ರ ವೃದ್ಧಿಯಾಗಿದೆ. ಅಭಿವೃದ್ಧಿ ಹೆಸರಿನಲ್ಲಿ ಕೇಂದ್ರ, ರಾಜ್ಯ ಸರಕಾರಗಳು ಬೊಕ್ಕಸದಿಂದ ಕೋಟ್ಯಂತರ ರೂಪಾಯಿ ವ್ಯಯಿಸುತ್ತವೆ. ಆದರೆ ನಾವು ಯಾವ ರೀತಿಯ ಅಭಿವೃದ್ಧಿ ಕಾಣುತ್ತಿದ್ದೇವೆ ಎಂದು ಪ್ರಶ್ನಿಸಿದರು. ದೇಶದಲ್ಲಿ ಶ್ರೀಮಂತರಾಗಲು ಪೈಪೋಟಿ ಉಂಟಾಗಿದ್ದು, ಇದು ಸಮಾಜದಲ್ಲಿ ಬಿಕ್ಕಟ್ಟು ಸೃಷ್ಟಿಸಲಿದೆ. ದುರಾಸೆ ಎಂಬ ರೋಗ ಎಲ್ಲೆಡೆ ಹರಡುತ್ತಿದೆ. ಇದು ಎಲ್ಲಿಗೆ ತಲುಪುತ್ತದೆ ಎಂದು ಯೋಚಿಸುವಾಗ ಭಯವಾಗುತ್ತದೆ ಎಂದರು.
ಪುತ್ತೂರು: ಪ್ರವೀಣ್ ನೆಟ್ಟಾರು ಹಂತಕರಿಗೆ ನೆರವು ನೀಡಿದ್ದ ಆರೋಪಿಗಳಿಬ್ಬರು ವಿದೇಶದಲ್ಲಿ ಅಡಗಿರುವ ವಿಚಾರವನ್ನು ಎನ್‌ಐಎ ಪತ್ತೆ ಹಚ್ಚಿದ್ದು, ಅವರನ್ನು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿಯೊಂದು ಲಭ್ಯವಾಗಿದೆ. ಹಂತಕರಿಗೆ ನೆರವು ನೀಡಿದವರಿಬ್ಬರು ವಿದೇಶದಲ್ಲಿ ಅಡಗಿರುವ ಬಗ್ಗೆ ಎನ್‌ಐಎಗೆ ಸುಳಿವು ದೊರೆತ ಹಿನ್ನೆಲೆಯಲ್ಲಿ ಅಲ್ಲಿಗೆ ತೆರಳಿದ ತಂಡ ಇಬ್ಬರನ್ನು ವಶಕ್ಕೆ ಪಡೆದಿದೆ. ಈ ಇಬ್ಬರು ಆರೋಪಿಗಳನ್ನು ಭಾರತಕ್ಕೆ ಕರೆ ತರುವ ನಿಟ್ಟಿನಲ್ಲಿ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ತಿಳಿದು ಬಂದಿದೆ.ಒಟ್ಟು ಆರು ಮಂದಿ ಆರೋಪಿಗಳು ವಿದೇಶಕ್ಕೆ ಪರಾರಿಯಾಗಿದ್ದು, ಈ ಪೈಕಿ ಐವರನ್ನು ಎನ್‌ಐಎ ಈಗಾಗಲೇ ವಶಕ್ಕೆ ಪಡೆದಿದೆ ಎನ್ನಲಾಗುತ್ತಿದೆ. ಆದರೆ ಇವರೆಲ್ಲರನ್ನು ವಿದೇಶದಿಂದಲೇ ಪತ್ತೆ ಹಚ್ಚಿ ವಶಕ್ಕೆ ಪಡೆದರೇ ಅಥವಾ ಭಾರತದಲ್ಲೇ ವಶಕ್ಕೆ ಪಡೆದರೇ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಶರೀಫ್ ಮತ್ತು ಕೆ.ಎ. ಮಸೂದ್ ಸೌದಿಯಲ್ಲಿ ಅಡಗಿರುವ ಸುಳಿವು ಎನ್‌ಐಎಗೆ ಲಭ್ಯವಾಗಿದೆ. ಅವರನ್ನು ಪತ್ತೆ ಹಚ್ಚಿ ಭಾರತಕ್ಕೆ ಕರೆ ತರುವ ಪ್ರಯತ್ನಗಳು ನಡೆಯುತ್ತಿವೆ. ಇನ್ನೂ ಒಬ್ಬ ಆರೋಪಿ ಪತ್ತೆಯಾಗಬೇಕಿದೆ.ನಿಷೇಧಿತ ಪಿಎಫ್‌ಐ ಸದಸ್ಯರಾಗಿರುವ ಮೊಹಮ್ಮದ್ ಮುಸ್ತಫಾ ಎಸ್.,…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜೀವ ನದಿ ನೇತ್ರಾವತಿಯ ನೀರು ಕುಡಿಯಲು ಯೋಗ್ಯವಲ್ಲ ಎಂಬ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ. ರಾಷ್ಟ್ರೀಯ ನೀರಿನ ಗುಣಮಟ್ಟ ಯೋಜನೆ ಅಡಿಯಲ್ಲಿ ನದಿ ಮತ್ತು ಕೆರೆಗಳ ನೀರಿನ ಗುಣಮಟ್ಟದ ವರದಿಯನ್ನು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಕಟಿಸಿದೆ.ಅದರಲ್ಲಿ ಧರ್ಮಸ್ಥಳದಲ್ಲಿ ಸಂಗ್ರಹಿಸಿದ ನೇತ್ರಾವತಿ ನದಿ ನೀರಿನ ಮಾದರಿಯನ್ನು ಪರೀಕ್ಷಿಸಿದಾಗ ನೀರು ಅಕ್ಟೋಬರ್ ತಿಂಗಳವರೆಗೆ ಸ್ನಾನಕ್ಕೆ ಯೋಗ್ಯವಾಗಿತ್ತು.ಆದರೆ ನವೆಂಬರ್ ತಿಂಗಳಲ್ಲಿ ಅದರ ಗುಣಮಟ್ಟ ಕುಸಿದು ಬಿ ವರ್ಗದಿಂದ ಸಿ ವರ್ಗಕ್ಕೆ ಇಳಿದಿದೆ. ಇದರನ್ವಯ ನೀರು ಸ್ನಾನಕ್ಕೂ ಯೋಗ್ಯವಿಲ್ಲ. ನೇತ್ರಾವತಿ ನದಿ ಮಂಗಳೂರು ನಗರ ಮತ್ತು ನದಿ ದಂಡೆಯ ಪಟ್ಟಣ ಹಾಗು ಹಳ್ಳಿಗಳಿಗೆ ಕುಡಿಯುವ ನೀರಿನ ಮೂಲವಾಗಿದೆ. ಕೆಲವೆಡೆ ಈ ನೀರನ್ನು ಶುದ್ದೀಕರಿಸಿ ಪೂರೈಕೆ ಮಾಡಲಾಗುತ್ತಿದ್ದರೆ ಆ ಸವಲತ್ತು ಇಲ್ಲದ ಊರುಗಳಿಗೆ ನೇರ ಸರಬರಾಜು ಆಗುತ್ತಿದೆ.
ಕುಂದಾಪುರ: ಶನಿವಾರ ಬೆಳಿಗ್ಗೆ ಮನೆಯಿಂದ ಕಾಲೇಜಿಗೆ ತೆರಳುತ್ತಿದ್ದ ವೇಳೆ ಬಸ್ಸಿನಿಂದ ಆಯತಪ್ಪಿ ಬಸ್ ಚಕ್ರದಡಿ ಬಿದ್ದು ಮೃತಪಟ್ಟ ಕಾಲೇಜು ವಿದ್ಯಾರ್ಥಿಯ ಕಣ್ಣುಗಳನ್ನು ದಾನ ಮಾಡುವ ಮೂಲಕ ಆತನ ಪೋಷಕರು ನೋವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಹೆಮ್ಮಾಡಿ ಸಮೀಪದ ಕಟ್ ಬೇಲ್ತೂರು ನಿವಾಸಿಗಳಾದ ನಾಗಪ್ಪ ಪೂಜಾರಿ ಜಲಜಾ ದಂಪತಿಗಳ ಪುತ್ರ ಸುದೀಪ್ ಪೂಜಾರಿ (20) ಯವರ ನೇತ್ರದಾನ ಮಾಡಲಾಗಿದೆ. ಶನಿವಾರ ಬೆಳಿಗ್ಗೆ ಕುಂದಾಪುರಕ್ಕೆ ತೆರಳುವ ಖಾಸಗಿ ಬಸ್ ನಲ್ಲಿ ಮನೆಯಾದ ಕಟ್ ಬೆಲ್ತೂರಿನಿಂದ ಸುದೀಪ್ ಸಂಚರಿಸುತ್ತಿದ್ದಾಗ ಹೆಮ್ಮಾಡಿ ಜಂಕ್ಷನ್ ಬಳಿ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಬಸ್ ಮುಂಬದಿಯ ಬಾಗಿಲಲ್ಲಿ ನಿಂತಿದ್ದ ಸುದೀಪ್ ಬಸ್ ನ ಮುಂದಿನ ಚಕ್ರದಡಿಯಲ್ಲಿ ಸಿಲುಕಿ ಗಂಭೀರ ಗಾಯಗೊಂಡು ಆತ ಮೃತಪಟ್ಟಿದ್ದ. ಬಸ್ ಅಪಘಾತದಲ್ಲಿ ಮೃತಪಟ್ಟ ಸುದೀಪ್ ಅವರ ಮೃತದೇಹವನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆ ಶವಾಗಾರದಲ್ಲಿರಿಸಿದ್ದು ನೇತ್ರ ತಜ್ಞೆ ಡಾ. ವಿಜಯಲಕ್ಷ್ಮಿ ಅವರು ನೇತ್ರದಾನದ ಮಹತ್ವದ ಬಗ್ಗೆ ಮೃತ ಸುದೀಪ್ ಪೂಜಾರಿ ಪೋಷಕರ ಬಳಿ ತಿಳಿಸಿದ್ದು ಇದಕ್ಕೆ ಪೋಷಕರು ಸಮ್ಮತಿ ಸೂಚಿಸಿದ…
ಉಡುಪಿ: ಹುಡುಗಿಯ ಜೊತೆ ಆಟವಾಡಿದ್ದಕ್ಕೆ ಕಾಲೇಜು ವಾರ್ಡನ್ ನಾಯಿಯನ್ನೇ ಕೊಂದಿರುವ ಅಮಾನವೀಯ ಘಟನೆ ಕಾಪು ತಾಲೂಕಿನ ಬಂಟಕಲ್ನ ಮಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆಂಡ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ನಡೆದಿದೆ. ರಾಜೇಶ್ ವಿಕೃತಿ ಮೆರೆದ ವಾರ್ಡನ್.ಹುಡುಗಿ ಜೊತೆ ಆಡಿದ್ದಕ್ಕೆ ನಾಯಿಯನ್ನೇ ಕೊಂದಿದ್ದಾನೆ. ಕೃತ್ಯದ ವಿಡಿಯೋ ಮೊಬೈಲ್ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪಾಪಿ ವಾರ್ಡನ್ ಕೃತ್ಯಕ್ಕೆ ಜಾಲತಾಣದಲ್ಲಿ ನೆಟ್ಟಿಗರು ಭಾರಿ ಆಕ್ರೋಶ ಹೊರಹಾಕಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ವಾರ್ಡನ್ ಮೇಲೆ ಪ್ರಕರಣ ದಾಖಲಿಸಲಾಗಿದೆ. ಮಂಜುಳಾ ಕರ್ಕೇರ ಎಂಬುವರು ಶಿರ್ವ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬೆಂಗಳೂರು: ಮಂಗಳೂರಿನ ಕಂಕನಾಡಿ ಬಳಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ರೂವಾರಿ ಶಾರೀಕ್ ಆರೋಗ್ಯದಲ್ಲಿ ಕೊನೆಗೂ ಸುಧಾರಣೆ ಕಂಡುಬಂದಿದೆ. ಕಳೆದ ಒಂದೂವರೆ ತಿಂಗಳುಗಳಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಸುಟ್ಟ ಗಾಯಗಳ ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾರೀಕ್ ಸದ್ಯದಲ್ಲೇ ಡಿಸ್ಚಾರ್ಜ್ ಮಾಡಲು ಸಿದ್ಧತೆಗಳು ನಡೆದಿವೆ. ಡಿಸ್ಚಾರ್ಜ್ ಬಳಿಕ ಎನ್‌ಐಎ ವಶಕ್ಕೆ: ಸ್ಫೋಟದ ಸಂದರ್ಭದಲ್ಲಿ ಶೇ 25 ರಷ್ಟು ಸುಟ್ಟ ಗಾಯಗಳಿಂದ ಬಚಾವಾಗಿದ್ದ ಶಾರೀಕ್ ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ಫೋಟದ ಪರಿಣಾಮದಿಂದಾಗಿ ಶಾರೀಕ್ ಮುಖ ಹಾಗೂ ಎದೆಯ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ. ಕಳೆದ ಒಂದೂವರೆ ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಶಾರೀಕ್ ಭಾಗಶಃ ಗುಣಮುಖನಾಗಿದ್ದು, ಬಹುತೇಕ ಸುಟ್ಟ ಗಾಯಗಳು ವಾಸಿಯಾಗಿವೆ. ಸಣ್ಣ ಪುಟ್ಟ ಗಾಯಗಳಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾನೆ. ಈಗಾಗಲೇ ಚಿಕಿತ್ಸೆಯ ಜೊತೆ ಜೊತೆಗೆ ಬಹುತೇಕ ವಿಚಾರಣೆ ನಡೆಸಿರೋ ಎನ್‌ಐಎ ಅಧಿಕಾರಿಗಳ ತಂಡ ಮುಂದಿನ ವಾರವೇ ಶಾರೀಕ್ನನ್ನು ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಸಿ ವಶಕ್ಕೆ ಪಡೆಯಲಿದೆ ಎಂದು ಎನ್‌ಐಎ ಮೂಲಗಳು ತಿಳಿಸಿವೆ.
ಮಂಗಳೂರು : ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರಣ್ಯಾಧಿಕಾರಿಗೆ ಭ್ರಷ್ಟಾಚಾರದಡಿ 1.5 ಕೋಟಿ ದಂಡ ಮತ್ತು 5 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಸತ್ರ (ವಿಶೇಷ) ನ್ಯಾಯಾಲಯ ತೀರ್ಪು ನೀಡಿದೆ. ಬೆಳ್ತಂಗಡಿ ಸೈಹಾದ್ರಿ ವಲಯದ ವಲಯ ಅರಣ್ಯಾಧಿಕಾರಿ ಆರೋಪಿ ಎಸ್.ರಾಘವ ಪಾಟಾಳಿ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿರುವ ಆರೋಪಿಯಾಗಿದ್ದಾರೆ. ಪಾಟಾಳಿ ಮೇಲೆ ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿಯನ್ನು ಹೊಂದಿರುವ ದೂರಿನ ಮೇರೆಗೆ ಮಂಗಳೂರು ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ D:21-07-2011 do da od 11/2011 o 13(1x) tad 13(2) ಭ್ರಷ್ಟಾಚಾರ ತಡೆ ಕಾಯ್ದೆ 1988, ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆಯನ್ನು ನಡೆಸಿದ ಮಂಗಳೂರಿನ 3 ನೇ ಹೆಚ್ಚುವರಿ ಜಿಲ್ಲಾ ಸತ್ರ (ವಿಶೇಷ) ನ್ಯಾಯಾಲಯದ ನ್ಯಾಯಾಧೀಶರಾದ ಮಾನ್ಯ ಬಿ.ಬಿ. ಜಕಾತಿ ಅವರು ಅಂತಿಮ ತೀರ್ಪು ನೀಡಿದ್ದು. ತೀರ್ಪಿನಲ್ಲಿ ಎಸ್.ರಾಘವ ಪಾಟಾಳಿ, ವಲಯ ಅರಣ್ಯಾಧಿಕಾರಿ, ಸಹ್ಯಾದ್ರಿ ವಲಯ, ಇವರ ವಿರುದ್ಧ ಕಲಂ 13(1)(ಇ) ಜೊತೆಗೆ 13(2)…