ನವದೆಹಲಿ : ಬೆಂಗಳೂರು ವಿಮಾನ ನಿಲ್ದಾಣದಲ್ಲಿ(Bengaluru airport) 55 ಪ್ರಯಾಣಿಕರನ್ನು ಬಿಟ್ಟಿದ್ದಕ್ಕಾಗಿ DGCA ಗೋ ಫಸ್ಟ್ (Go First) ವಿಮಾನದಲ್ಲಿ ಬರೋಬ್ಬರಿ 10 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದೆ. ಈ ಸುದ್ದಿ ಈಗ ತಾನೆ ಬಂದಿದೆ. ಹೆಚ್ಚಿನ ಮಾಹಿತಿ ಸಿಕ್ಕ ಕೂಡಲೇ ಅಪ್ ಡೇಟ್ ಮಾಡಲಾಗುವುದು. ಪುನಃ ನಮ್ಮ ಪೇಜಿಗೆ ಭೇಟಿ ನೀಡಿ.
Author: main-admin
ಮಂಗಳೂರು: ಗಣ ರಾಜ್ಯೋತ್ಸವ ಸಂಭ್ರಮದ ಸಂದರ್ಭದಲ್ಲಿ ಗುರುವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ಪಡೆ ಸಿಐಎಸ್‌ಎಫ್ ಶ್ವಾನದಳಕ್ಕೆ ಬೆಲ್ಜಿಯನ್ ಮೆಲಿನೊಯ್ಸ ತಳಿಯ ಮ್ಯಾಕ್ಸ್ ಮತ್ತು ರೇಂಜರ್ ಹೆಸರಿನ ಎರಡು ಶ್ವಾನಗಳು ಸೇರ್ಪಡೆಗೊಂಡಿವೆ. ಬೆಂಗಳೂರಿನ ತರಳುವಿನಲ್ಲಿ ಸಿಐಎಸ್‌ಎಫ್‌ನ ಶ್ವಾನ ಸಂತಾನೋತ್ಪತ್ತಿ ಮತ್ತು ತರಬೇತಿ ಕೇಂದ್ರದಲ್ಲಿ ನಡೆದ ತರಬೇತಿಯಲ್ಲಿ ಮ್ಯಾಕ್ಸ್ ಪ್ರಥಮ ಮತ್ತು ರೇಂಜರ್ ದ್ವಿತೀಯ ಸ್ಥಾನ ಪಡೆದಿದೆ.ಗಣರಾಜ್ಯೋತ್ಸವ ಸಮಾರಂಭದ ಸಂದರ್ಭ ಸಿಐಎಸ್‌ಎಫ್‌ನ ಏರ್‌ಪೋರ್ಟ್ ಸೆಕ್ಯುರಿಟಿ ಗಾರ್ಡ್ಸ್ (ಎಎಸ್‌ಜಿ) ವಿಭಾಗದಿಂದ ನಾಯಿಗಳನ್ನು ಭವ್ಯವಾಗಿ ಸ್ವಾಗತಿಸಲಾಯಿತು. ಸಿಬಂದಿಗಳು ರಕ್ಷಣಾ ತಂತ್ರಗಳ ಬಗ್ಗೆ ಪ್ರಾತ್ಯಕ್ಷಿಕೆಯನ್ನೂ ನೀಡಿದರು.
ಸುಳ್ಯ: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಓರ್ವ ವೃದ್ಧ ಹಾಗೂ ಗರ್ಭಿಣಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ-1: ಸುಳ್ಯದ ಅಜ್ಜಾವರ ಗ್ರಾಮದ ಪಡ್ಡಂಬೈಲು ಸಮೀಪದ ನಾಂಗುಳಿ ಎಂಬಲ್ಲಿ ಗರ್ಭಿಣಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶರತ್ ಎಂಬವರ ಪತ್ನಿ ಮಲ್ಲಿಕಾ (26) ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿರುವ ಗರ್ಭಿಣಿ. ಮೃತ ಮಹಿಳೆ ಮಲ್ಲಿಕಾ ಅವರು ಕೆ.ವಿ.ಜಿ. ಆಯುರ್ವೇದಿಕ್ ನಲ್ಲಿ ಉದ್ಯೋಗಿಯಾಗಿದ್ದು, ಗಣರಾಜ್ಯೋತ್ಸವ ರಜೆ ಹಿನ್ನಲೆ ಮಲ್ಲಿಕಾ ಮನೆಯಲ್ಲಿದ್ದರು. ಸಂಜೆ ವೇಳೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದು ಬಂದಿದೆ. ಪ್ರಕರಣ.2: ವೃದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯದ ಜಟ್ಟಿಪಳ್ಳದಲ್ಲಿ ನಡೆದಿದೆ.ವಿಶ್ವನಾಥ ಭಂಡಾರಿ(72ವ) ಎಂಬುವವರು ಮೃತ ದುರ್ದೈವಿ. ಮನೆಯ ಜಗಲಿಯಲ್ಲಿ ಕಬ್ಬಿಣದ ರಾಡ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇವರು ಕೆಲ ದಿನಗಳಿಂದ ಕಾಲು ನೋವಿನಿಂದ ಬಳಲುತ್ತಿದ್ದು ಮನೆಯಲ್ಲೇ ಇದ್ದರು. ಹೀಗಾಗಿ…
ಮಂಗಳೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪದ ಮೇಲೆ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳೂರು ತಾಲೂಕಿನ ಮರವೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಉತ್ತರ ಪ್ರದೇಶ ಮೂಲದ ಗೋಪಾಲ್ ಬಿಂದಾ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೂಲಿ ಕಾರ್ಮಿಕರಾಗಿರುವ ಬಾಲಕಿಯ ಪೋಷಕರ ದೂರಿನ ಪ್ರಕಾರ, ವ್ಯಕ್ತಿ ಕಾರ್ಮಿಕರ ಕೋಣೆಗೆ ನುಸುಳಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ. ಘಟನೆ ಜನವರಿ 23 ರಂದು ವರದಿಯಾಗಿದೆ. ಆರೋಪಿಯ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ (ಪೊಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಡಬ: ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ ಹತ್ತು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಕಡಬ ತಾಲೂಕಿನ ಕುಂತೂರು ಗ್ರಾಮದ ಸಾಲೆತ್ತಡ್ಕದ ರಝಿಕ್ ಬಂಧಿತ ಯುವಕನಾಗಿದ್ದಾನೆ. ಈತನ ವಿರುದ್ದ ಪುತ್ತೂರು ನಗರ ಠಾಣೆ,ಉಪ್ಪಿನಂಗಡಿ,ಸುಳ್ಯ,ಕೊಣಾಜೆ ಹಾಗೂ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಜನವರಿ 25 ರಂದು ಈತನನ್ನು ಪತ್ತೆ ಹಚ್ಚಿ ಠಾಣೆಗೆ ಕರೆದುಕೊಂಡು ಬಂದು ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಮಾನ್ಯ ನ್ಯಾಯಾಲವು ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿದೆ. ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಬಿಎಸ್ , ಕಡಬ ಠಾಣಾ ಎಸ್.ಐ ಆಂಜನೇಯ ರೆಡ್ಡಿ ರವರ ಮಾರ್ಗದರ್ಶನದಲ್ಲಿ ಕಡಬ ಠಾಣಾ ಎ ಎಸ್ ಐ ಸುರೇಶ್ ಮತ್ತು ಇಲಾಖೆ ಜೀಪಿನ ಚಾಲಕ ನಾರಾಯಣ ಪಾಟಾಳಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ನವದೆಹಲಿ: ಇಂದು ದೇಶದಲ್ಲಿ 74ನೇ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ಪರೇಡ್‌ನಲ್ಲಿ ವಿವಿಧ ರಾಜ್ಯಗಳ ಟ್ಯಾಬ್ಲೋ(ಸ್ತಬ್ಧಚಿತ್ರ)ಗಳ ಪ್ರದರ್ಶನ ನಡೆಯುತ್ತಿದೆ. ಈ ಬಾರಿಯ ಕರ್ನಾಟಕದ ಸ್ತಬ್ಧಚಿತ್ರ ʻನಾರಿಶಕ್ತಿ(Nari Shakti)ʼ ಎಲ್ಲರ ಗಮನ ಸೆಳೆದಿದೆ. ಈ ಮೂಲಕ ಕರ್ನಾಟಕದ ಟ್ಯಾಬ್ಲೋ ರಾಜ್ಯದ 3 ಮಹಿಳಾ ಸಾಧಕರ ಅಸಾಧಾರಣ ಸಾಧನೆಗಳನ್ನು ಸಾಂಕೇತಿಕವಾಗಿ ಅನಾವರಣಗೊಳಿಸಿದೆ.ಸೂಲಗಿತ್ತಿ ನರಸಮ್ಮ – ಸೂಲಗಿತ್ತಿ, ತುಳಸಿ ಗೌಡ ಹಾಲಕ್ಕಿ – ‘ವೃಕ್ಷ ಮಾತೆ’ ಮತ್ತು ಸಾಲುಮರದ ತಿಮ್ಮಕ್ಕ ಅವರು ಸಮಾಜಕ್ಕೆ ಸಲ್ಲಿಸಿದ ಅವರ ನಿಸ್ವಾರ್ಥ ಕೊಡುಗೆಯಿಂದಾಗಿ ಹೆಸರುವಾಸಿಯಾಗಿದ್ದಾರೆ.
ಮಂಗಳೂರು ತಾ.ಪಂ/ ಜೋಕಟ್ಟೆ ಗ್ರಾ.ಪಂ: 74ನೇ ಗಣರಾಜ್ಯೋತ್ಸವದ ಅಂಗವಾಗಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅಮೃತ ಸರೋವರ ಯೋಜನೆಯಡಿ ಮಂಗಳೂರು ತಾಲೂಕಿನ ಜೋಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾನ್ವಿ ಕೆರೆ ದಂಡೆಯಲ್ಲಿ ಹಿರಿಯ ನಾಗರಿಕರಾದ ಶ್ರೀಮತಿ ಬೆನ್ನಿ ವೇಗಸ್ ಅವರು ಧ್ವಜಾರೋಹಣ ನೆರವೇರಿಸಿದರು. ಇತ್ತೀಚೆಗಷ್ಟೇ ಜೋಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ ಜಲ ಸಂರಕ್ಷಣೆಗೆ ಸಂಬಂಧಪಟ್ಟಂತೆ ಚಿತ್ರಕಲಾ ಸ್ಪರ್ಧೆ ಆಯೋಜಿಸಿದ್ದು, ವಿಜೇತ ವಿದ್ಯಾರ್ಥಿಗಳಿಗೆ ಈ ಸುಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು. ಈ ಸಂದರ್ಭ ಶ್ರೀ ಉಮ್ಮರ್ ಫಾರುಕ್ ಪಂಚಾಯತ್ ಅಧ್ಯಕ್ಷರು , ಶ್ರೀ ಅಬ್ದುಲ್ಲಾ ಆಸಫ್ ಪಂಚಾಯತ್ ಅಭಿವೃದ್ದಿ ಅಧಿಕಾರಿ , ಸದಸ್ಯರು ಪ್ರೆಸಿಲ್ಲಾ ಮೊಂತೇರೊ, ಶ್ರೀಮತಿ ನಿಶ್ಮಿತ. ಬಿ ತಾಲೂಕು ಪಂಚಾಯತ್ ಐಇಸಿ ಸಂಯೋಜಕರು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಕಾರ್ಕಳ: ತಮ್ಮನ ಮನೆಗೆ ಬೆಂಕಿ ಹಚ್ಚಿ ತಾನೂ ಕಾರಿನೊಳಗೆ ಸ್ವಯಂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಸಚ್ಚೇರಿಪೇಟೆಯಲ್ಲಿ ನಡೆದಿದೆ. ಕುದ್ರುಟ್ಟು ನಿವಾಸಿ ಕೃಷ್ಣ ಸಫಲಿಗ(46) ಕೃತ್ಯ ಎಸಗಿ ಆತ್ಮಹತ್ಯೆ ಮಾಡಿಕೊಂಡವರು.ವೃತ್ತಿಯಲ್ಲಿ ಕಾರು ಚಾಲಕನಾಗಿದ್ದ ಕೃಷ್ಣ ತನ್ನ ಮಾರುತಿ ಒಮಿನಿ ಕಾರಿನ ಒಳಗೆ ಕುಳಿತು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷ್ಣ ತನ್ನ ತಮ್ಮ ಶೇಖರ ಎಂಬವರ ಮನೆಗೆ ತಡರಾತ್ರಿ 3 ಗಂಟೆಗೆ ಬೆಂಕಿಯಿಟ್ಟು ತಾನು ತನ್ನ ಓಮಿನಿಯಲ್ಲಿ ಕುಳಿತು ಅದಕ್ಕೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳದಲ್ಲಿ ಡೆತ್ ನೋಟು ಸಿಕ್ಕಿದ್ದು, ಸ್ಥಳಕ್ಕೆ ಕಾರ್ಕಳ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ಬೆಳ್ತಂಗಡಿ: ಕಾಂಗ್ರೆಸ್ ಮುಖಂಡ ಅಬ್ದುಲ್ ಕರೀಂ ಅವರಿಗೆ ಎಸ್.ಡಿ.ಪಿ.ಐ ಕಾರ್ಯಕರ್ತರೆನ್ನಲಾದ ವ್ಯಕ್ತಿಗಳು ದೂರವಾಣಿ ಕರೆಮಾಡಿ ಬೆದರಿಕೆ ಹಾಕಿರುವುದಾಗಿ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಲಾಗಿರುವುದಾಗಿ ಬೆಳ್ತಂಗಡಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಮುಖಂಡರುಗಳ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಗಳನ್ನು ಹಾಕಲಾಗುತ್ತಿದ್ದು ಈ ಬಗ್ಗೆ ಅಲ್ಲಿಯೇ ಉತ್ತರ ನೀಡಿದ್ದೆ ಅದಕ್ಕೆ ಗ್ರೂಪಿನಲ್ಲಿಯೇ ಕೆಲವರು ಬೆದರಿಕೆ ಹಾಕಿದ್ದರು. ಇದಾದ ಬಳಿಕ ಕೆಲವು ಅಪರಿಚಿತ ನಂಬರ್ ಗಳಿಂದ ಕರೆ ಬಂದಿದ್ದು ಜೀವ ಬೆದರಿಕೆ ಹಾಕಿದ್ದಾರೆ. ಎಸ್.ಡಿ.ಪಿ.ಐಯವರಿಗೆ ಉತ್ತರ ನೀಡುತ್ತೀರಾ ಎಂದು ಕೇಳಿ ಮನೆಗೇ ಬಂದು ಕೊಲೆ ಮಾಡುವುದಾಗಿ ಕೊಲೆ ಬೆದರಿಕೆ ಹಾಕಿರುವುದಾಗಿ ಆರೋಪಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿರುವುದಾಗಿ ಅವರು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ನಗರ ಅಧ್ಯಕ್ಷ ಸಲೀಂ ಗುರುವಾಯನಕೆರೆ, ವಿನ್ಸೆಂಟ್ ಡಿಸೋಜ, ಮೆಹಬೂಬ್, ರಫಿ ಬೆಳ್ತಂಗಡಿ, ಲತೀಫ್, ಎ.ಕೆ ಅಹಮ್ಮದ್, ಕೆ.ಹೆಚ್ ಖಾಲೀದ್, ಪುಲಾಬೆ ಇದ್ದರು.
ಮಂಡ್ಯ : ಮಂಡ್ಯದಲ್ಲಿ ಘೋರ ಘಟನೆ ನಡೆದಿದ್ದು, ಪಾಪಿ ಪತಿಯೊಬ್ಬ ಮಗಳ ಎದುರೇ ತನ್ನ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಅರಳಕುಪ್ಪೆ ಗ್ರಾಮದ ಶೋಭಾ (43) ಕೊಲೆಯಾದ ದುರ್ದೈವಿ. ಮನೋಹರ್ (48) ಪತ್ನಿಯನ್ನೇ ಕೊಂದ ಕಿರಾತಕ ಪತಿ.ಕಂಠಪೂರ್ತಿ ಕುಡಿದು ಪ್ರತಿನಿತ್ಯ ಮನೆಗೆ ಬರುತ್ತಿದ್ದ ಮನೋಹರ್ ಪತ್ನಿ ಜೊತೆ ಪ್ರತಿನಿತ್ಯ ಗಲಾಟೆ ಮಾಡುತ್ತಿದ್ದನು. ಕುಡಿದ ಮತ್ತಿನಲ್ಲಿ ಪತ್ನಿಗೆ ಮನಬಂದಂತೆ ಬೈದು ಜಗಳ ತಾರಕಕ್ಕೆ ಏರಿದೆ. ಈ ವೇಳೆ ಕುಡಿದ ಅಮಲಿನಲ್ಲಿದ್ದ ಮನೋಹರ್ ಪತ್ನಿ ಮೇಲೆ ಕುಡುಗೋಲಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಮಗಳು ಅನುಷಾ ಸ್ಥಳೀಯರ ಬಳಿ ಸಹಾಯಕ್ಕೆ ಅಂಗಲಾಚಿದರೂ ಯಾರೂ ಕೂಡ ಬರಲಿಲ್ಲ ಎನ್ನಲಾಗಿದೆ. ನಂತರ ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.