ಬೆಳ್ತಂಗಡಿ; ತಾಲೂಕಿನ ಕಡಿರುದ್ಯಾವರದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದ ಆರೋಪಿಗೆ ಮಂಗಳೂರಿನ ನ್ಯಾಯಾಲಯವು 20 ವರ್ಷ ಕಠಿಣ ಸಜೆ ಹಾಗೂ ರೂ 50 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. ಶಿಕ್ಷೆಗೆ ಒಳಗಾಗಿರುವ ಆರೋಪಿ ಕಡಿರುದ್ಯಾವರ ಗ್ರಾಮದ ಎರ್ಮಾಳಪಳ್ಕೆ ನಿವಾಸಿ ಬಾಬಿ(48) ಎಂಬಾತನಾಗಿದ್ದಾನೆ. ಈತ 2021ರ ಡಿಸೆಂಬರ್ ನಿಂದ 2022ರ ಫೆಬ್ರವರಿಯವರೆಗೆ ತನ್ನ ಪರಿಚಯದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಹಲವಾರು ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದ. ಈ ಬಗ್ಗೆ ಬಾಲಕಿ 2022ರ ಮಾರ್ಚ್ ಮೂರರಂದು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಬೆಳ್ತಂಗಡಿ ವೃತ್ತನಿರೀಕ್ಷಕ ಶಿವಕುಮಾರ್ ಅವರ ನೇತೃತವದಲ್ಲಿ ಪೊಲೀಸರು ಪ್ರಕರಣದ ತನಿಖೆ ನಡೆಸಿ ಆರೋಪಿ ಬಾಬಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇದೀಗ ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ಅರೋಪಿ ಮಾಡಿರುವ ಆರೋಪ ಸಾಬೀತಾಗಿದ್ದು, ನ್ಯಾಯಾಲಯದ ನ್ಯಾಯಾಧೀಶರಾದ ರಾಧಾಕೃಷ್ಣ ಅವರು ಜ 24 ರಂದು ಆರೋಪಿಗೆ …
Author: main-admin
ಧರ್ಮಸ್ಥಳ: ವ್ಯಕ್ತಿಯೊಬ್ಬರು ನೇತ್ರಾವತಿ ಸೇತುವೆ ಮೇಲಿನಿಂದ ನೀರಿಗೆ ಹಾರಿ ಸಾವಿಗೆ ಶರಣಾಗಲು ಯತ್ನಿಸಿದ ಘಟನೆ ಧರ್ಮಸ್ಥಳ ಕನ್ಯಾಡಿ ಸಮೀಪ ನಡೆದಿದೆ ಮೈಸೂರಿನ ಮಂಜು (52) ಎಂಬವರು ಈ ಕೃತ್ಯ ಎಸಗಿದವರಾಗಿದ್ದು, ಇವರು ಕೆಲವು ದಿನಗಳ ಹಿಂದೆ ಯಾವುದೋ ಕಾರಣಕ್ಕೆ ಮನೆಯವರೊಂದಿಗೆ ಗಲಾಟೆ ಮಾಡಿ ಮಾನಸಿಕವಾಗಿ ನೊಂದು ಕನ್ಯಾಡಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಜ.24ರಂದು ಸಂಜೆ ನೇತ್ರಾವತಿ ಸೇತುವೆ ಮೇಲಿನಿಂದ ನದಿಗೆ ಹಾರಿದಾಗ ಸ್ಥಳೀಯರು ರಕ್ಷಿಸಿದ್ದಾರೆ.ಅವರ ಕೈ,ಕಾಲಿಗೆ ಗಾಯವಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ಧರ್ಮಸ್ಥಳ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಕ್ಷ ಕಿರಣ ಸೇವೆ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ. ಏಕೆಂದರೆ, ಆರೋಗ್ಯ ಇಲಾಖೆಯ ಕ್ಷ ಕಿರಣ ವಿಕಿರಣ ಸುರಕ್ಷತಾ ನಿರ್ದೇಶನಾಲಯದ ನಿರ್ದೇಶಕರ ಹುದ್ದೆಗೆ ಅರ್ಹತೆ ಹೊಂದಿಲ್ಲದ ಅಧಿಕಾರಿಯನ್ನು ನಿಯೋಜಿಸಿರುವುದಕ್ಕೆ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಕೇಂದ್ರ ಸರ್ಕಾರದ ಪರಮಾಣು ಶಕ್ತಿ ನಿಯಂತ್ರಣ ಮಂಡಳಿಯ(ಎಇಆರ್‌ಬಿ) ನಿಯಮಗಳನ್ನು ಗಾಳಿಗೆ ತೂರಿ ಅನರ್ಹತೆ ಹೊಂದಿರುವ ಡಾ.ಎನ್.ರವಿ ಎಂಬುವರನ್ನು ನೇಮಿಸಿರುವುದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ನಿರ್ದೇಶಕರ ಹುದ್ದೆ ಗ್ರೂಪ್ ‘ಎ’ ಹುದ್ದೆಯಾಗಿದೆ. ಅರ್ಹತೆ ಇರುವವರನ್ನು ನೇಮಿಸು ಬದಲು ಅನರ್ಹತೆ ಇರುವ ರೇಡಿಯೇಷನ್ ಸೆಫ್ಟಿ ಅಧಿಕಾರಿಯನ್ನು ಕಾನೂನುಬಾಹಿರವಾಗಿ ನೇಮಿಸಲಾಗಿದೆ. ಇದರ ಬಗ್ಗೆ ಸರ್ಕಾರ ಎಚ್ಚೆತ್ತುಗೊಳ್ಳದಿದ್ದರೆ, ಬರುವ ದಿನಗಳಲ್ಲಿ ಕ್ಷ ಕಿರಣ ಸೇವೆಯೇ ರದ್ದಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಹುದ್ದೆಗೆ ನೇಮಿಸಲು ಆರೋಗ್ಯ ಇಲಾಖೆ ಮತ್ತು ಮಂಡಳಿ ನಡುವೆ ಪರಸ್ಪರ ಒಪ್ಪಂದ ಮಾಡಿಕೊಂಡಿವೆ. ಒಪ್ಪಂದ ಅನ್ವಯ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಭೌತಶಾಸದಲ್ಲಿ ಎಂಎಸ್ಸಿ ಪದವಿ ಪಡೆದಿರಬೇಕು. ರೇಡಿಯಾಲಜಿಕಲ್ ಭೌತಶಾಸ್ತ್ರದಲ್ಲಿ ಎಂಎಸ್ಸಿ ಡಿಪ್ಲೊಮಾ ಪಡೆದಿರಬೇಕು. ಜತೆಗೆ, ಪ್ರತಿಷ್ಠಿತ ಅಕಾಡೆಮಿಕ್…
ಮಂಗಳೂರು : ಸಶಸ್ತ್ರ ಸೀಮಾಬಲ್‌ನಲ್ಲಿ ಭೋಪಾಲ್‌ನಲ್ಲಿ ಸೇವಾ ನಿರತರಾಗಿದ್ದ ಮಂಗಳೂರು ಶಕ್ತಿನಗರದ ನಿವಾಸಿ ಹವಾಲ್ದಾರ್ ಮುರಳೀಧರ್ ರೈ (37) ಅವರು ಸೋಮವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ರವಿವಾರ ಭೋಪಾಲ್‌ನಲ್ಲಿ ಮಲಗಿದಲ್ಲೇ ಅವರಿಗೆ ಹೃದಯಾಘಾತವಾಗಿದ್ದು, ಸೋಮವಾರ ಬೆಳಗ್ಗೆ ಜತೆಗಿದ್ದವರು ಕರೆದಾಗ ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ವೈದ್ಯರು ಪರೀಕ್ಷಿಸಿದಾಗ ಹೃದಯಾಘಾತದಿಂದ ಮೃತಪಟ್ಟಿರುವುದು ದೃಢಪಟ್ಟಿದೆ. ಊರಿಗೆ ಬರುವವರಿದ್ದರುಮುರಳೀಧರ್ ರೈ ಅವರು 2007ರಲ್ಲಿ ಕಾನ್‌ಸ್ಟೆಬಲ್ ಆಗಿ ಸಶಸ್ತ್ರ ಸೀಮಾ ಬಲ್‌ಗೆ ಸೇರಿದ್ದರು. ರವಿವಾರ ರಾತ್ರಿ ವೀಡಿಯೋ ಕಾಲ್ ಮೂಲಕ ಪತ್ನಿ ಜತೆ ಮಾತನಾಡಿದ್ದರು. ಫೆ. 5ರಂದು ನಡೆಯಲಿದ್ದ ತಾಯಿಯ ನಿಧನದ ಮೊದಲ ವರ್ಷದ ಕಾರ್ಯಕ್ರಮಕ್ಕಾಗಿ ಎರಡು ವಾರದ ರಜೆಯಲ್ಲಿ ಮಂಗಳವಾರ ಹೊರಟು ಬುಧವಾರ ಊರಿಗೆ ಬರುವವರಿದ್ದರು. ಅವರು ಪತ್ನಿ ಹಾಗೂ ಏಳು ತಿಂಗಳ ಮಗುವನ್ನು ಅಗಲಿದ್ದಾರೆ. ಇಂದು ಅಂತ್ಯಸಂಸ್ಕಾರಭೋಪಾಲ್‌ನಿಂದ ವಿಮಾನದ ಮೂಲಕ ಮುರಳೀಧರ ಅವರ ಮೃತದೇಹವನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ತರಲಾಯಿತು. ಡಿಸಿ ರವಿ ಕುಮಾರ್ ಎಂ.ಆರ್., ಜಿ.ಪಂ. ಸಿಇಒ ಡಾ| ಕುಮಾರ್, ಸಹಾಯಕ ಆಯುಕ್ತ ಮದನ್ ಮೋಹನ್…
ತ್ರಿಸ್ಸೂರ್: ಬೆತ್ತಲೆಯಾಗಿ ದೇವಸ್ಥಾನಕ್ಕೆ ನುಗ್ಗಿದ ವ್ಯಕ್ತಿಯೊಬ್ಬ ಮೂಲಸ್ಥಾನದಲ್ಲಿದ್ದ ಪ್ರಮುಖ ದೇವರ ಮೂರ್ತಿಯನ್ನು ಧ್ವಂಸ ಮಾಡಿರುವ ಘಟನೆ ಕೇರಳದ ಕೊಡುಂಗಲ್ಲೂರಿನಲ್ಲಿರುವ ಶ್ರೀ ಕುರುಂಬಾ ಭಗವತಿ ದೇವಸ್ಥಾನದಲ್ಲಿ ನಡೆದಿದೆ. ಈ ಘಟನೆ ಇಂದು ಬೆಳಗ್ಗೆ 4.30 ಸುಮಾರಿಗೆ ನಡೆದಿದೆ. ಮೂಲಗಳ ಪ್ರಕಾರ ಆರೋಪಿಯು ಮಾನಸಿಕ ಅಸ್ವಸ್ಥ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಶಂಕಿತನನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ತನಿಖೆ ಮುಂದುವರಿದಿದೆ. ಈ ಘಟನೆಯನ್ನು ಖಂಡಿಸಿರುವ ಹಿಂದು ಐಕ್ಯ ವೇದಿ ಹೆಸರಿನ ಹಿಂದು ಸಂಘಟನೆ, ತಾಲೂಕಿನ ಮಟ್ಟದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ಆರೋಪಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ.
ಎರಡು ಲಾರಿಗಳ ನಡುವೆ ಉಂಟಾದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಚಾಲಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಆರಿಕ್ಕಾಡಿಯಲ್ಲಿ ಸಂಭವಿಸಿದೆ. ಗಾಯ ಗೊಂಡ ಚಾಲಕರನ್ನು ಕುಂಬಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಅಡುಗೆ ಅನಿಲ ಸಿಲಿಂಡರ್ ಹೇರಿಕೊಂಡು ತೆರಳುತ್ತಿದ್ದ ಲಾರಿ ಮತ್ತು ಇನ್ನೊಂದು ಸರಕು ಲಾರಿ ನಡುವೆ ಅಪಘಾತ ನಡೆದಿದೆ ಎನ್ನಲಾಗಿದೆ. ಢಿಕ್ಕಿಯ ರಭಸಕ್ಕೆ ನಿಯಂತ್ರಣ ತಪ್ಪಿದ ಸಿಲಿಂಡರ್ ಲಾರಿಯು ರಾಷ್ಟ್ರೀಯ ಹೆದ್ದಾರಿ ಬದಿ ಫಿಲ್ಲರ್ ನಿರ್ಮಾಣಕ್ಕೆ ತೊಡಲಾದ ಹೊಂಡಕ್ಕೆ ಬಿದ್ದಿದೆ. ಅಪಘಾತದ ಹಿನ್ನಲೆಯಲ್ಲಿ ಕೆಲ ಸಮಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
ಬೆಂಗಳೂರು : ಮಾಣೆಕ್ ಷಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ಧತೆ ನಡೆಸಲಾಗುತ್ತಿದ್ದ, ನಗರಾದ್ಯಂತ ಪೊಲೀಸರಿಂದ ಹೆಚ್ಚಿನ ಭದ್ರತೆಯೊಂದಿಗೆ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಲ್ಲಿ ಭದ್ರತೆಗೆ 1200ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. 9 ಡಿಸಿಪಿ, 16 ಎಸಿಪಿ.45 ಇನ್ಸ್‌ಪೆಕ್ಟರ್‌ಗಳು , 101 ಪಿಎಸ್‌ಐ, 14 ಮಹಿಳಾ ಪಿಎಸ್‌ಐ,83 ಎಎಸ್‌ಐ, 577 ಹೆಡ್ ಕಾನ್ಸ್‌ಟೇಬಲ್ 77 ಮಹಿಲಾ ಸಿಬ್ಬಂದಿ, ಮಪ್ತಿಯಲ್ಲಿ 172 ಸಿಬ್ಬಂದಿ ನಿಯೋಜನೆ ಹೆಚ್ಚುವರಿ ಭದ್ರತೆಗಾಗಿ 10 ಕೆಎಸ್‌ಆರ್‌ಪಿ ತುಕುಡಿ, ಸಿಎಆರ್ ತುಕುಡಿ, ಮಾಣಿಕ್ ಷಾ ಮೈದಾನದ ಸುತ್ತಮುತ್ತ 56 ಸಿಸಿ ಕ್ಯಾಮೆರಾ ಅಳವಡಿಸುವ ಮೂಲಕ ನಗರಾದ್ಯಂತ ಪೊಲೀಸರಿಂದ ಹೈಅಲರ್ಟ್ ಮಾಡಲಾಗಿದೆ.
ನವದೆಹಲಿ: ಪ್ರಸ್ತುತ 40 ದಿನಗಳ ಪೆರೋಲ್ ಮೇಲೆ ಹೊರಗಿರುವ ಅತ್ಯಾಚಾರ ಅಪರಾಧಿ, ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಕತ್ತಿಯಿಂದ ಕೇಕ್ ಕತ್ತರಿಸಿ ಸಂಭ್ರಮಿಸುತ್ತಿರುವುದು ಕಂಡುಬಂದಿದೆ. ಅತ್ಯಾಚಾರ ಮತ್ತು ಕೊಲೆಗಾಗಿ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ರಾಮ್ ರಹೀಮ್ ಶನಿವಾರ ಹರಿಯಾಣದ ರೋಹ್ಟಕ್ ಜಿಲ್ಲೆಯ ಸುನಾರಿಯಾ ಜೈಲಿನಿಂದ 40 ದಿನಗಳ ಪೆರೋಲ್ ಮೇಲೆ ಹೊರ ಬಂದಿದ್ದಾನೆ. ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿರುವ ಅವರ ಬರ್ನಾವಾ ಆಶ್ರಮಕ್ಕೆ ಆಗಮಿಸಿದ ರಾಮ್ ರಹೀಮ್ ಕೇಕ್ ಅನ್ನು ಕತ್ತಿಯಿಂದ ಕತ್ತರಿಸುವ ಮೂಲಕ ಜೈಲಿನಿಂದ ಹೊರ ಬಂದ ಖುಷಿಯನ್ನು ಸಂಭ್ರಮಿಸಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ರಾಮ್ ರಹೀಮ್ ‘ಐದು ವರ್ಷಗಳ ನಂತರ ಈ ರೀತಿ ಆಚರಿಸಲು ಅವಕಾಶ ಸಿಕ್ಕಿದೆ. ಹಾಗಾಗಿ, ಕನಿಷ್ಠ ಐದು ಕೇಕ್‌ಗಳನ್ನಾದರೂ ಕತ್ತರಿಸಬೇಕು. ಇದು ಮೊದಲ ಕೇಕ್’ ಎಂದು ಹೇಳುತ್ತಿರುವುದು ಕೇಳಿಬರುತ್ತಿದೆ. ವಾಸ್ತವವಾಗಿ, ಶಸ್ತ್ರಾಸ್ತ್ರಗಳ ಕಾಯಿದೆಯ ಅಡಿಯಲ್ಲಿ ಶಸ್ತ್ರಾಸ್ತ್ರಗಳ ಸಾರ್ವಜನಿಕ ಪ್ರದರ್ಶನವನ್ನು (ಕತ್ತಿಯಿಂದ ಕೇಕ್ ಕತ್ತರಿಸುವುದು)…
ಬೆಂಗಳೂರು : ಜನವರಿ 26 ರಂದು ನಡೆಯಲಿರುವ ಗಣರಾಜೋತ್ಸವ ಸಮಾರಂಭಗಳಲ್ಲಿ ಡಾ||ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜನವರಿ 26 ರಂದು ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಆಚರಿಸಲಾಗುವ ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ಸಂವಿಧಾನದ ಪಿತಾಮಹ, ಭಾರತರತ್ನ ಡಾ|| ಬಿ.ಆರ್. ಅಂಬೇಡ್ಕರ್ ರವರ ಭಾವ ಚಿತ್ರವನ್ನು ಕಡ್ಡಾಯವಾಗಿ ಇಟ್ಟು ಸಮಾರಂಭವನ್ನು ಆಚರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್.ಎಸ್.ಶಿವಲಿಂಗಯ್ಯ ಆದೇಶ ಹೊರಡಿಸಿದ್ದಾರೆ.
ಮಂಗಳೂರು: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ783 ಮಂದಿಯ ರೌಡಿ ಶೀಟ್ ತೆರವು ಮಾಡಲಾಗಿದೆ ಎಂದು ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ. ಮಂಗಳೂರಿನ ರೋಶನಿ ನಿಲಯ ಕಾಲೇಜಿನಲ್ಲಿ ನಡೆದ ಪರಿವರ್ತನಾ ಸಭೆಯಲ್ಲಿ ಮಾತನಾಡಿದ ಕಮಿಷನರ್ ಎನ್.ಶಶಿಕುಮಾರ್, ಕಮಿಷನರೇಟ್ ವ್ಯಾಪ್ತಿಯಲ್ಲಿ ಒಟ್ಟು 2305 ಮಂದಿ ರೌಡಿಗಳಿದ್ದಾರೆ. ಅದರಲ್ಲಿ 783 ಮಂದಿಯ ರೌಡಿ ಶೀಟ್ ತೆರವು ಮಾಡಲಾಗಿದೆ. ಇನ್ನೂ 1522 ಮಂದಿ ರೌಡಿ ಶೀಟರ್ ಗಳಿದ್ದಾರೆ ಎಂದು ಹೇಳಿದ್ದಾರೆ. ಕಳೆದ ವರ್ಷ ಒಂದು ಸಾವಿರಕ್ಕೂ ಅಧಿಕ ಮಂದಿಯ ರೌಡಿ ಶೀಟ್ ತೆರವುಗೊಳಿಸಲಾಗಿತ್ತು.ಮುಂದೆ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬದುಕಲು ಹಾಗೂ ಪೊಲೀಸ್ ಇಲಾಖೆಯೊಂದಿಗೆ ಸಂಪರ್ಕದಲ್ಲಿದ್ದು ಅಪರಾಧ ಪ್ರಕರಣಗಳನ್ನು ತಡೆಯಲು ನೆರವಾಬೇಕು ಎಂದು ಕಮಿಷನರ್ ಹೇಳಿದರು.