ನವದೆಹಲಿ : ರಾಜ್ಯ ಸರಕಾರದ ತರಗತಿಗಳಲ್ಲಿ ಹಿಜಬ್ ಧರಿಸುವುದನ್ನು ನಿರ್ಬಂಧಿಸಿ ಕೋರ್ಟ್ ಮೆಟ್ಟಿಲೇರಿರುವ ವಿಧ್ಯಾರ್ಥಿಗಳ ಪ್ರಕರಣವನ್ನು ಇತ್ಯರ್ಥಗೊಳಿಸಲು ಶೀಘ್ರದಲ್ಲಿ ತ್ರಿಸದಸ್ಯ ಪೀಠದಲ್ಲಿ ಆರಂಭಿಸಲಾಗುವುದು. ಅದಕ್ಕೆ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಭರವಸೆ ನೀಡಿದ್ದಾರೆ ಮುಂದಿನ ತಿಂಗಳಿನಿಂದ ಪರೀಕ್ಷೆಗಳು ಪ್ರಾರಂಭವಾಗುವ ಹಿನ್ನಲೆ ಹಿಜಬ್ ವಿವಾದದ ಪ್ರಕರಣದ ವಿಚಾರಣೆಯನ್ನು ಶೀಘ್ರ ಆರಂಭಿಸುವಂತೆ ವಿದ್ಯಾರ್ಥಿನಿಯರ ಪರ ವಕೀಲೆ ಮೀನಾಕ್ಷಿ ಅರೋರಾ ಮನವಿ ಮಾಡಿದ ಹಿನ್ನೆಲೆ ಸಿಜೆಐ ಈ ಭರವಸೆ ನೀಡಿದ್ದಾರೆ. ಇಂದು ಕಲಾಪ ಆರಂಭವಾಗುತ್ತಿದ್ದಂತೆ ಈ ಬಗ್ಗೆ ಕೋರ್ಟ್ ಗಮನಕ್ಕೆ ತರಲಾಯಿತು. ಮುಂದಿನ ತಿಂಗಳು ಪ್ರಾಯೋಗಿಕ ಪರೀಕ್ಷೆಗಳನ್ನು ನಿಗದಿಪಡಿಸಲಾಗಿದ್ದು, ಪರೀಕ್ಷೆಗೆ ಮುಸ್ಲಿಂ ವಿದ್ಯಾರ್ಥಿನಿಯರು ಹಾಜರಾಗಲು ನಿರ್ಧರಿಸಿದ್ದಾರೆ. ಸಂತ್ರಸ್ತ ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಲು ಮಧ್ಯಂತರ ನಿರ್ದೇಶನದ ಅಗತ್ಯವಿದೆ ಈ ಹಿನ್ನೆಲೆ ವಿಚಾರಣೆ ಆರಂಭಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಡಿವೈ ಚಂದ್ರಚೂಡ್, ಈ ಬಗ್ಗೆ ರಿಜಿಸ್ಟ್ರಾರ್ ನಲ್ಲಿ ಪ್ರಸ್ತಾಪಿಸುವಂತೆ ಸೂಚನೆ ನೀಡಿದರು ಮತ್ತು ಶೀಘ್ರದಲ್ಲಿ ತ್ರಿಸದಸ್ಯ ಪೀಠ ರಚಿಸಿ…
Author: main-admin
ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳ ಒಟ್ಟೆ ಕಾಯರ್ ಎಂಬಲ್ಲಿ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಉಳ್ಳಾಲ ಕೋಟೆಕಾರ್ ಮಾಡೂರು ನಿವಾಸಿ ಚಂದ್ರಶೇಖರ-ಗಿರಿಜಾ ದಂಪತಿ ಪುತ್ರಿ ದಿವ್ಯಾ(26) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈಕೆ ಒಂದೂವರೆ ವರ್ಷದ ಹಿಂದಷ್ಟೇ ಒಟ್ಟೆಕಾಯರ್ ನಿವಾಸಿ ಹರೀಶ್ ಎಂಬವರನ್ನು ಮದುವೆಯಾಗಿದ್ದರು.ದಂಪತಿ ಶನಿವಾರ ನೆರೆಮನೆಯಲ್ಲಿ ಜರುಗಿದ ಕಾರ್ಯಕ್ರಮವೊಂದಕ್ಕೆ ತೆರಳಿದ್ದರು. ಈ ವೇಳೆ ಜಗಳ ನಡೆದಿದ್ದು ದಿವ್ಯಾ ಬೇಸರಗೊಂಡು ವಾಪಸ್ ಮನೆಗೆ ಬಂದಿದ್ದರು. ಇದರಿಂದ ನೊಂದಿದ್ದ ದಿವ್ಯಾ ನಿನ್ನೆ ಸಂಜೆ ಬೆಡ್ ರೂಮ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುರತ್ಕಲ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಕರಾಚಿ: ಇಸ್ಲಾಂ ಧರ್ಮವನ್ನು ಸ್ವೀಕರಿಸಲು ನಿರಾಕರಿಸಿದ್ದಕ್ಕಾಗಿ ವಿವಾಹಿತ ಹಿಂದೂ ಮಹಿಳೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಘಟನೆ ಪಾಕಿಸ್ತಾನದ ದಕ್ಷಿಣ ಸಿಂಧ್ ಪ್ರಾಂತ್ಯದಲ್ಲಿ ನಡೆದಿದೆ. ಉಮರ್ಕೋಟ್ ಜಿಲ್ಲೆಯ ಸಮರೋ ಪಟ್ಟಣದಲ್ಲಿ ತನ್ನ ಮೇಲೆ ಅತ್ಯಾಚಾರವೆಸಗಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಲಾದ ವೀಡಿಯೊದಲ್ಲಿ ಮಹಿಳೆ ಹೇಳಿದ್ದಾಳೆ. ಸ್ಥಳೀಯ ಹಿಂದೂ ಮುಖಂಡರೊಬ್ಬರು ಮಾತನಾಡಿ, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸುವಲ್ಲಿ ಮಿರ್ಪುರ್ಖಾಸ್ ಪೊಲೀಸರು ವಿಫಲರಾಗಿದ್ದಾರೆ. ಸಂತ್ರಸ್ತ ಮಹಿಳೆ ಹಾಗೂ ಆಕೆಯ ಕುಟುಂಬದವರು ಠಾಣೆಯ ಹೊರಗೆ ಕುಳಿತಿದ್ದಾರೆ. ಆದರೆ, ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಆರೋಪಿಸಿದ್ದಾರೆ. ವರದಿಯ ಪ್ರಕಾರ, ಸಂತ್ರಸ್ತೆ ತನ್ನನ್ನು ಇಬ್ರಾಹಿಂ ಮ್ಯಾಂಗ್ರಿಯೊ, ಪುನ್ಹೋ ಮ್ಯಾಂಗ್ರಿಯೊ ಮತ್ತು ಅವರ ಸಹಚರರು ಅಪಹರಿಸಿದ್ದಾರೆ. ಅಪಹರಣಕಾರರು ನನ್ನನ್ನು ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಡ ಹೇರಿದರು. ಇದಕ್ಕೆ ಒಪ್ಪದಿದ್ದಕ್ಕೆ ನನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾರೆ.
ಕಾಸರಗೋಡು: ತಾಯಿ ಮತ್ತು ಮಗಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬೇಡಡ್ಕ ಕುಂಡಂಗುಯಿಯಲ್ಲಿ ನಡೆದಿದೆ. ಕುಂಡಂಗುಯಿ ಚಂದ್ರ ಎಂಬವರ ಪತ್ನಿ ನಾರಾಯಣಿ (46) ಮತ್ತು ಪುತ್ರಿ ಶ್ರೀನಂದಾ (12)ಮೃತದೇಹ ಪತ್ತೆಯಾಗಿದೆ.ಘಟನೆ ಬಗ್ಗೆ ಅನುಮಾನ ವ್ಯಕ್ತವಾಗಿದೆ. ನಾರಾಯಣಿರವರ ಮೃತದೇಹ ನೇಣು ಬಿಗಿದು ಹಾಗೂ ಶ್ರಿನಂದಾಳ ಮೃತದೇಹ ಮನೆಯ ಕೋಣೆಯಲ್ಲಿ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಸುರತ್ಕಲ್: ಅಪರಿಚಿತ ಯುವಕನೊಬ್ಬನ ಮೃತದೇಹವು ಕುಳಾಯಿಗುಡ್ಡೆ ರೈಲ್ವೆ ಸೇತುವೆಯಿಂದ ಸುರತ್ಕಲ್ ಕಡೆಗೆ 200 ಮೀಟರ್ ದೂರದಲ್ಲಿರುವ ರೈಲ್ ಹಳಿಗಳ ಮೇಲೆ ಪತ್ತೆಯಾಗಿದೆ. ವ್ಯಕ್ತಿಯ ವಯಸ್ಸು ಸುಮಾರು 30 ವರ್ಷ ಎಂದು ಅಂದಾಜಿಸಲಾಗಿದ್ದು, ಈತ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿಯು ಕಪ್ಪು ನೈಟ್ ಪ್ಯಾಂಟ್, ಹಳದಿ ಬಣ್ಣದ ಪೂರ್ಣ ತೋಳಿನ ಶರ್ಟ್ ಮತ್ತು ಕಪ್ಪು ಜರ್ಕಿನ್ ಧರಿಸಿರುತ್ತಾರೆ. ಮೃತ ವ್ಯಕ್ತಿಯ ಸಂಬಂಧಿಕರು ಸುರತ್ಕಲ್ ಪೊಲೀಸ್ ಠಾಣೆಯನ್ನು 0824-2220540 ಗೆ ಸಂಪರ್ಕಿಸಲು ಕೋರಲಾಗಿದೆ.
ಬೆಳ್ತಂಗಡಿ: ತಾಲೂಕಿನ ಮದ್ದಡ್ಕ ಬಳಿ ಅಕ್ರಮವಾಗಿ ಗೋ ಮಾಂಸ ತಯಾರಿಸುತ್ತಿದ್ದ ಅಡ್ಡೆಗೆ ಪೊಲೀಸರು ದಾಳಿ ನಡೆಸಿದ ಘಟನೆ ಜ.20 ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕದ ಅನಿಲ ಎಂಬಲ್ಲಿಯ ಮನೆಯೊಂದರಲ್ಲಿ ಗೋ ವಧೆ ಮಾಡಿ ಅಕ್ರಮವಾಗಿ ಮಾಂಸ ತಯಾರಿಸುತ್ತಿರುವ ಬಗ್ಗೆ ಸ್ಥಳೀಯರಿಂದ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ಲಭಿಸಿದ್ದು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ರಾತ್ರಿ ವೇಳೆ ದಾಳಿ ನಡೆಸಿ ಸುಮಾರು 55 ಕೆಜಿ ಯಷ್ಟು ಗೋ ಮಾಂಸ ಹಾಗೂ ಮಾಂಸ ತಯಾರಿಸುತಿದ್ದ ಸೊತ್ತುಗಳು ಸೇರಿದಂತೆ ಆರೋಪಿಗಳನ್ನು ಬಂಧಿಸಿದ್ದಾರೆ. ಹಮೀದ್ , ಇಸ್ಮಾಯಿಲ್ ಮತ್ತು ಹಾರಿಸ್ ಎಂಬವರು ಬಂಧಿತ ಆರೋಪಿಗಳಾಗಿದ್ದಾರೆ. ಇವರ ವಿರುದ್ಧ ಕರ್ನಾಟಕ ಗೋವಧೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣ ಅಧಿನಿಯಮದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರು; ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಸಾರ್ವಜನಿಕರು ಥಳಿಸಿ ಆತನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಕಂಕನಾಡಿ ಬಳಿ ನಡೆದಿದೆ. ಉಳ್ಳಾಲದ ನಿವಾಸಿ ನವಾಜ್ (35)ಗೆ ಥಳಿಸಲಾಗಿದೆ. ಬಾಲಕಿ ಗಿಡವೊಂದರಿಂದ ಹಣ್ಣು ಕೀಳುತ್ತಿದ್ದಾಗ ಅಲ್ಲಿಯೇ ಸಮೀಪ ಗಾರೆ ಕೆಲಸ ಮಾಡುತ್ತಿದ್ದ ನವಾಜ್ ಲೈಂಗಿಕ ಕಿರುಕುಳ ನೀಡಿದ್ದು, ಈ ವೇಳೆ ಬಾಲಕಿ ಬೊಬ್ಬೆ ಹಾಕಿದ್ದಳು. ಇದನ್ನು ಕೇಳಿ ಅಲ್ಲಿದ್ದವರು ಬಂದು ನವಾಜ್ ಗೆ ಥಳಿಸಿದ್ದಾರೆಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ವರದಿಯಾಗಿದೆ.
ಮಂಗಳೂರು: ಹಣಕ್ಕಾಗಿ ಯುವಕನೊಬ್ಬನ ಅಪಹರಣ ಮತ್ತು ಪೊಲೀಸರ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅಬೂಬಕರ್ ಸಿದ್ದೀಕ್ ಯಾನೆ ಕರ್ವೆಲ್ ಸಿದ್ದಿಕ್ (39), ಕಲಂದರ ಶಾಫಿ ಗಡಿಯಾರ(22), ದೇರಳಕಟ್ಟೆಯ ಇರ್ಫಾನ್(38), ಪಾಂಡೇಶ್ವರದ ಮುಹಮ್ಮದ್ ರಿಯಾಝ್(33) ಮತ್ತು ಬೆಳ್ತಂಗಡಿಯ ಮುಹಮ್ಮದ್ ಇರ್ಷಾದ್(28) ಎಂದು ಗುರುತಿಸಲಾಗಿದೆ. ಆರೋಪಿಗಳು ಗೃಹಬಂಧನದಲ್ಲಿರಿಸಿದ್ದ ಕಡಬ ತಾಲೂಕಿನ ಕೊಯಿಲ ಗ್ರಾಮದ ಶಾರೂಕ್‌ನ್ನು ಪೊಲೀಸರು ರಕ್ಷಿಸಿದ್ದಾರೆ. ಶುಕ್ರವಾರ ಬೆಳಗ್ಗಿನ ಜಾವ ಗಸ್ತಿನಲ್ಲಿದ್ದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಮಲ್ಲಿಕಾರ್ಜುನ ಅಂಗಡಿ ಮತ್ತು ಪ್ರದೀಪ್ ಎಂಬವರು ಅರ್ಕುಳ ಗ್ರಾಮದ ತುಪ್ಪೆಕಲ್ಲು ಎಂಬಲ್ಲಿ ಕಾರೊಂದನ್ನು ನಿಲ್ಲಿಸಿ ಅನುಮಾನಾಸ್ಪದವಾಗಿ ನಿಂತಿದ್ದವರನ್ನು ಐವರನ್ನು ಪ್ರಶ್ನಿಸಿದ್ದರು. ಈ ವೇಳೆ ಐವರು ಪೊಲೀಸರತ್ತ ಕಲ್ಲು ತೂರಾಟ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿ ಪರಾರಿಯಾಗಿದ್ದರು. ಈ ಸಂಬಂಧ ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಕೊಂಡು ಕಾರ್ಯಾಚರಣೆ ನಡೆಸಿ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬೆಂಗಳೂರಿನ ರೌಡಿ ಶೀಟರ್…
ಬಿಹಾರ;ಇಬ್ಬರು ಮಹಿಳಾ ಪೊಲೀಸರು ರಸ್ತೆಯಲ್ಲೇ ವೃದ್ಧರೊಬ್ಬರಿಗೆ ಲಾಟಿಯಿಂದ ಥಳಿಸಿರುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನು ಪತ್ರಕರ್ತ ಮುಖೇಶ್ ಸಿಂಗ್ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದು, ವೃದ್ಧನನ್ನು ಇಬ್ಬರು ಪೊಲೀಸರು ಪಬ್ಲಿಕ್ ನಲ್ಲಿ ಥಳಿಸುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೊವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿರುವ ಸಿಂಗ್, ಈ ಇಬ್ಬರು ಮಹಿಳಾ ಪೊಲೀಸ್ ಆಧಿಕಾರಿಗಳು ಹೊಡೆಯುತ್ತಿರುವ 70 ವರ್ಷದ ವೃದ್ಧ ಹೆಸರು ಪಾಂಡೆ ಜಿ ಎಂದು ಹೇಳಿದ್ದಾರೆ. ಅವರು ನಿವೃತ್ತ ಶಿಕ್ಷಕರಾಗಿದ್ದರು. ಬೈಸಿಕಲ್ ನಲ್ಲಿ ಬಿದ್ದಾಗ ಎದ್ಧೇಳಲು ತಡವಾಗಿದ್ದಕ್ಕೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ. https://twitter.com/Mukesh_Journo/status/1616634771102388225?ref_src=twsrc%5Etfw%7Ctwcamp%5Etweetembed%7Ctwterm%5E1616634771102388225%7Ctwgr%5Ebe200da8310e5c2bd8ed7c87e7a549fb35107e27%7Ctwcon%5Es1_&ref_url=http%3A%2F%2Fkannadadainika.com%2Fbihara-police-teacher%2F
ಕಾಸರಗೋಡು:ನಾಪತ್ತೆಯಾಗಿದ್ದ ಅನ್ಯಕೋಮಿನ ಜೋಡಿ ಲಾಡ್ಜ್‌ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ರಾಜಾಪುರ ಕಲ್ಲಾರು ಒಕ್ಲಾವು ನಿವಾಸಿ ಮಹಮ್ಮದ್ ಶರೀಫ್ (40) ಮತ್ತು ಕಲ್ಲಾರು ಅಡಕಂ ಪುಲಿಕುಳಿಯ ಸಿಂಧು (36)ಮೃತರು ಎಂದು ಗುರುತಿಸಲಾಗಿದೆ. ಜನವರಿ 7ರಂದು ಇಬ್ಬರೂ ನಾಪತ್ತೆಯಾಗಿದ್ದರು.ಈ ಕುರಿತು ನಾಪತ್ತೆ ಪ್ರಕರಣ ದಾಖಲಿಸಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಇದೀಗ ಗುರುವಾಯೂರು ಪಡಿಯಾರ ನಾಡೆಯ ಲಾಡ್ಜ್‌ನ ಕೊಠಡಿಯೊಳಗೆ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರೂ ಪತ್ತೆಯಾಗಿದ್ದಾರೆ ಎಂದು ವರದಿ ತಿಳಿಸಿದೆ.