ವಿಟ್ಲ: ಬಂಟ್ವಾಳ ತಾಲೂಕು ಪುಣಚ ಗ್ರಾಮದ ಗುರ್ಮೆ ಎಂಬಲ್ಲಿರುವ ಗಣೇಶ್ ಗೌಡ ಎಂಬವರ ಮನೆಯ ಬಳಿಯ ಕಟ್ಟಡದಲ್ಲಿ ದುರಸ್ತಿಗಾಗಿ ಇರಿಸಿದ್ದ ಅಂದಾಜು 1 ಲಕ್ಷ 81 ಸಾವಿರ ರೂ ಮೌಲ್ಯದ ಒಟ್ಟು 16 ಬೋರ್‌ವೆಲ್ ಪಂಪುಗಳ ಕಳ್ಳತನ ಮಾಡಿದ್ಧ ಆರೋಪಿಯ ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. https://youtu.be/zSqdn5efZys?si=TFX-tIY7gh2uoy_w ಬುಧವಾರ ಪೊಲೀಸರ ವಿಶೇಷ ತಂಡವು ಪ್ರಕರಣಕ್ಕೆ ಸಂಬಂಧಿಸಿ ಕಡಬ ತಾಲೂಕಿನ ಪೆರಬೆ, ಕೋಚಕಟ್ಟೆ ನಿವಾಸಿ ಆರೋಪಿ ಮಹಮ್ಮದ್ ಶಾಕೀರ್ ನನ್ನು ಬಂಧಿಸಿದೆ . ವಿಟ್ಲ ಠಾಣೆಯಲ್ಲಿ ದಾಖಲಾದ ಪ್ರಕರಣದ ಅನ್ವಯ ಪತ್ತೆಗಾಗಿ ವಿಶೇಷ ತಂಡ ರಚಿಸಿತ್ತು ಬಂಧನದ ವೇಳೆ ಆರೋಪಿಯಿಂದ 1 ಲಕ್ಷ 81 ಸಾವಿರ ರೂ ಮೌಲ್ಯದ 16 ಬೋರ್ ವೆಲ್ ಪಂಪ್ ಗಳು ಹಾಗೂ ಕಳವಿಗೆ ಉಪಯೋಗಿಸಿದ 2ಲಕ್ಷ ಮೌಲ್ಯದ ವಾಹನವಶಪಡಿಸಿಕೊಳ್ಳಲಾಗಿದೆ ಸ್ವಾಧೀನ ಪಡಿಸಿದ ಸೊತ್ತುಗಳ ಒಟ್ಟು ಮೌಲ್ಯವು 3,81,000 ರೂ ಆಗಬಹುದು ಎಂದು ಅಂದಾಜಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಆರೋಪಿ ಪತ್ತೆಯ ಕಾರ್ಯಾಚರಣೆಯಲ್ಲಿ ಬಂಟ್ವಾಳ ಉಪವಿಭಾಗದ…
Author: main-admin
ಮಂಗಳೂರು: ವಿದೇಶದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಗಳೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಏರ್ಟೆಲ್ ಕಂಪೆನಿಯ 86 ಸಿಮ್ ಕಾರ್ಡ್‌ಗಳು, 2 ಮೊಬೈಲ್ ಫೊನ್‌ಗಳು,, ಸ್ವಿಫ್ಟ್ ಕಾರು ಸಹಿತ 5,49,300 ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. https://youtu.be/zSqdn5efZys?si=TFX-tIY7gh2uoy_w ಬೆಳ್ತಂಗಡಿಯ ಶಮದ್ ಮಹಮ್ಮದ್ ಸಮರ್ (26) ಮತ್ತು ಮಹಮ್ಮದ್ ಅಜೀಂ (19) ಬಂಧಿತ ಆರೋಪಿಗಳು. ಶಮದ್ ನಗರದ ಕಾಲೇಜೊಂದರ ಬಿಬಿಎ ವಿದ್ಯಾರ್ಥಿಯಾಗಿದ್ದು, ನಗರದಲ್ಲೇ ಬಾಡಿಗೆ ಮನೆಯಲ್ಲಿದ್ದರು. ಇವರು ಬೆಳ್ತಂಗಡಿಯ ಮುಸ್ತಾಫ ಮತ್ತು ಮಡಂತ್ಯಾರ್ನ ಸಾಜೀದ್ನ ಸೂಚನೆಯಂತೆ ತಮ್ಮ ಗೆಳೆಯರು,ಪರಿಚಿತರಿಗೆ ಸ್ವಲ್ಪ ಹಣ ನೀಡಿ ಪುಸಲಾಯಿಸಿ ಅವರಿಂದ ಸಿಮ್ಕಾರ್ಡ್‌ಗಳನ್ನು ಪಡೆದುಕೊಳ್ಳುತ್ತಿದ್ದರು.ಆರೋಪಿಗಳು ಕಳೆದ ಜನವರಿ ಯಿಂದಲೇ ಈ ದಂಧೆ ನಡೆಸುತ್ತಿದ್ದು, ಇದುವರೆಗೆ 400ರಿಂದ 500 ಸಿಮ್ ಗಳನ್ನು ಸಂಗ್ರಹಿಸಿಕೊಟ್ಟಿದ್ದಾರೆ. ತನ್ನ ಗೆಳೆಯರು, ಪರಿಚಿತರಿಗೆ 200ರಿಂದ 300 ರೂ. ನೀಡಿ ಸಿಮ್ ಕಾರ್ಡ್‌ಗಳನ್ನು ಖರೀದಿಸಿ ಅದನ್ನು ಮುಸ್ತಾಫ ಮತ್ತು ಸಾಜೀದ್ಗೆ ನೀಡುತ್ತಿದ್ದರು ಎಂದು ತಿಳಿದುಬಂದಿದೆ. ಧರ್ಮಸ್ಥಳ ಪೊಲೀಸರು ಕಳೆದ ಫೆಬ್ರವರಿಯಲ್ಲಿ ಐವರನ್ನು ಬಂಧಿಸಿ ಅವರಿಂದ…
ಮಂಗಳೂರು : ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಪ್ರಧಾನ ಮಾಡುವ ವಿಶಿಷ್ಟ ಸೇವಾ ಪದಕಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಕಚೇರಿಯ ಸಿ.ಸಿ.ಆರ್.ಬಿ ಘಟಕದಲ್ಲಿ ಎಸಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ರವೀಶ್ ಎಸ್ ನಾಯಕ್ ಆಯ್ಕೆಯಾಗಿದ್ದಾರೆ. https://youtu.be/zSqdn5efZys?si=TFX-tIY7gh2uoy_w ಈ ಹಿಂದೆ ಬಿಜಾಪುರ, ಕಲಬುರ್ಗಿ, ಯಾದಗಿರಿ ಜಿಲ್ಲೆ ಸೇರಿದಂತೆ ಉಡುಪಿಯ ಕರಾವಳಿ ಕಾವಲು ಪಡೆ ಘಟಕ, ಇಮಿಗ್ರೇಷನ್ ಹಾಗೂ ಮಂಗಳೂರು ನಗರ ಉರ್ವ ಮತ್ತು ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಸೇವೆ ಸಲ್ಲಿಸಿದ್ದರು. ಆ ಬಳಿಕ ಪದೋನ್ನತಿ ಹೊಂದಿ ಸಿ.ಸಿ.ಆರ್.ಬಿ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ನವದೆಹಲಿ : ದೇಶಾದ್ಯಂತ ಇಂದು ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆ ಮಾಡಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸತತ 11 ನೇ ಬಾರಿಗೆ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿದ್ದಾರೆ. https://youtu.be/zSqdn5efZys?si=TFX-tIY7gh2uoy_w ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಿಂದ 78 ನೇ ಸ್ವಾತಂತ್ರ್ಯ ದಿನಾಚರಣೆಗೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸತತ 11 ನೇ ಬಾರಿಗೆ ಕೆಂಪು ಕೋಟೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿದ್ದಾರೆ. ಜವಾಹರಲಾಲ್ ನೆಹರು ಮತ್ತು ಇಂದಿರಾ ಗಾಂಧಿ ನಂತರ ಸತತ ಹನ್ನೊಂದು ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಮೂರನೇ ಪ್ರಧಾನಿಯಾಗಿದ್ದಾರೆ.
ಕಲಬುರ್ಗಿ : ಸರ್ಕಾರಿ ಶಾಲೆಯೊಂದರಲ್ಲಿ 5ನೇ ತರಗತಿ ಓದುತ್ತಿರುವ 10 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಶಿಕ್ಷಕನೇ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಕಾಮುಕ ಶಿಕ್ಷಕನ ವಿರುದ್ದ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಧ್ಯಾಹ್ನ ಬಿಸಿಯೂಟ ಮಾಡಿದ ಬಳಿಕ ಬಾಲಕಿ ಶಾಲಾ ಕೋಣೆಗೆ ತೆರಳಿದ್ದಳು. ಶಾಲಾ ಕೋಣೆಯ ಬಾಗಿಲು ಹಾಕಿ ಒಳಗೆ ಬಂದ ಶಿಕ್ಷಕ ಮಲ್ಲಿಕಾರ್ಜುನ, ಬಾಲಕಿಯಿಂದ ಕಿಟಕಿಗಳನ್ನು ಮುಚ್ಚಿಸಿ ಆ ಬಳಿಕ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿ ಚೀರಾಡುತ್ತಿದ್ದಂತೆ ಅಲ್ಲಿಂದ ಓಡಿ ಹೋದ ಎಂದು ಪೊಲೀಸರು ತಿಳಿಸಿದ್ದಾರೆ. ಗಾಬರಿಗೊಂಡ ವಿದ್ಯಾರ್ಥಿನಿ ತನ್ನ ತಂಗಿಯೊಂದಿಗೆ ಮನೆಗೆ ಹೋಗಿ, ಪೋಷಕರಿಗೆ ನಡೆದ ಘಟನೆಯನ್ನು ತಿಳಿಸಿದ್ದಳು. ಪೋಷಕರು ಮುಖ್ಯಶಿಕ್ಷಕರ ಗಮನಕ್ಕೆ ತಂದ ಬಳಿಕ ದೂರು ನೀಡಿದ್ದಾರೆ. ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನವದೆಹಲಿ : ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ಸರ್ಕಾರ ಬುಧವಾರ (ಆಗಸ್ಟ್ 14, 2024) ವಿವಿಧ ಕೇಂದ್ರ ಮತ್ತು ರಾಜ್ಯ ಪಡೆಗಳ 1,037 ಪೊಲೀಸ್ ಸಿಬ್ಬಂದಿಗೆ ಸೇವಾ ಪದಕಗಳನ್ನು ಘೋಷಿಸಿದೆ. ಪೊಲೀಸ್, ಅಗ್ನಿಶಾಮಕ, ಗೃಹರಕ್ಷಕ ಮತ್ತು ನಾಗರಿಕ ರಕ್ಷಣೆ (ಎಚ್ಜಿ &ಸಿಡಿ) ಮತ್ತು ಸುಧಾರಣಾ ಸೇವೆಗಳ ಒಟ್ಟು 1037 ಸಿಬ್ಬಂದಿಗೆ 2024 ರ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಶೌರ್ಯ ಮತ್ತು ಸೇವಾ ಪದಕಗಳನ್ನು ನೀಡಲಾಗಿದೆ. ಶೌರ್ಯಕ್ಕಾಗಿ ರಾಷ್ಟ್ರಪತಿಗಳ ಪದಕ (ಪಿಎಂಜಿ) ಮತ್ತು ಶೌರ್ಯಕ್ಕಾಗಿ ಪದಕ (ಜಿಎಂ) ಅನ್ನು ಜೀವ ಮತ್ತು ಆಸ್ತಿಯನ್ನು ಉಳಿಸುವಲ್ಲಿ ಅಥವಾ ಅಪರಾಧವನ್ನು ತಡೆಗಟ್ಟುವಲ್ಲಿ ಅಥವಾ ಅಪರಾಧಿಗಳನ್ನು ಬಂಧಿಸುವಲ್ಲಿ ಅನುಕ್ರಮವಾಗಿ ಶೌರ್ಯ ಮತ್ತು ಶೌರ್ಯದ ಗಮನಾರ್ಹ ಕ್ರಿಯೆಯ ಆಧಾರದ ಮೇಲೆ ನೀಡಲಾಗುತ್ತದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸ್ನ 31 ಸಿಬ್ಬಂದಿ, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದ ತಲಾ 17 ಸಿಬ್ಬಂದಿ, ಛತ್ತೀಸ್ಗಢದ 15, ಮಧ್ಯಪ್ರದೇಶದ 12, ಜಾರ್ಖಂಡ್, ಪಂಜಾಬ್, ಕರ್ನಾಟಕದ 20 ಮತ್ತು ತೆಲಂಗಾಣದ ತಲಾ 07 ಸಿಬ್ಬಂದಿ, ಸಿಆರ್ಪಿಎಫ್ನ…
ಉಡುಪಿ: ಮುಂಬೈಯ ಕಸ್ಟಮ್ ಅಧಿಕಾರಿಗಳ ಹೆಸರಿನಲ್ಲಿ ವೈದ್ಯರೊಬ್ಬರಿಗೆ ಕೋಟ್ಯಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿಯ ವೈದ್ಯರಾಗಿರುವ ಡಾ.ಅರುಣ್ ಕುಮಾರ್ (53) ಎಂಬವರಿಗೆ ಜು.29ರಂದು ಅಪರಿಚಿತರು ಕಸ್ಟಮ್ಸ್‌ನಿಂದ ಕರೆ ಮಾಡಿ, ನಿಮ್ಮ ಆಧಾರ್ ನಂಬ್ರ ಬಳಸಿ ಬುಕ್ ಆಗಿರುವ ಕೊರಿಯರ್‌ನಲ್ಲಿ 5 ಪಾಸ್‌ಪೋರ್ಟ್, 5 ಎಟಿಎಂ ಕಾರ್ಡ್, 200ಗ್ರಾಂ ಎಂಡಿಎಂಎ ಹಾಗೂ 5000 ಯುಎಸ್ ಡಾಲರ್ ಇದ್ದು, ಕೋರಿಯರ್ ಮುಂಬಯಿ ಕಸ್ಟಮ್ಸ್‌ರವರ ವಶದಲ್ಲಿ ಇರುವುದಾಗಿ ತಿಳಿಸಿದರು. ಅಂತಹ ಬುಕಿಂಗ್ ಮಾಡಿಲ್ಲ ಎಂದು ಅರುಣ್ ಕುಮಾರ್ ನಿರಾಕರಿಸಿದಾಗ, ಕರೆ ಮಾಡಿದವರು ಅವರನ್ನು ಹಾಟ್‌ಲೈನ್ ಮೂಲಕ ಹಿರಿಯ ಅಧಿಕಾರಿಗೆ ಸಂಪರ್ಕಿಸಿದರು. ಹಾಟ್‌ಲೈನ್‌ನಲ್ಲಿದ್ದ ವ್ಯಕ್ತಿ ಪೊಲೀಸ್ ಅಧಿಕಾರಿ ಎಂದು ನಂಬಿಸಿ ಅರುಣ್ ಕುಮಾರ್ ಅವರ ಆಧಾರ್ ಕಾರ್ಡ್ ದುರ್ಬಳಕೆಯ ಬಗ್ಗೆ ದೂರನ್ನು ಸ್ವೀಕರಿಸಲಾಗಿದೆ ಎಂದು ತಿಳಿಸಿದರು. ನಿಮ್ಮ ಆಧಾರ್ ಕಾರ್ಡ್‌ನ್ನು ಭಯೋತ್ಪಾದಕರು ಸಿಮ್ ಖರೀದಿಸಲು ಬಳಸಿದ್ದು, ಈ ದೂರಿಗೆ ಸಂಬಂಧಿಸಿ ನಿಮ್ಮನ್ನು ವರ್ಚುವಲ್ ಆರೆಸ್ಟ್ ಮಾಡುವುದಾಗಿ ತಿಳಿಸಿದ್ದರು. ಜು.29ರಿಂದ…
ಉಡುಪಿ: ಮುಂಬೈಯ ಕಸ್ಟಮ್ ಅಧಿಕಾರಿಗಳ ಹೆಸರಿನಲ್ಲಿ ವೈದ್ಯರೊಬ್ಬರಿಗೆ ಕೋಟ್ಯಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿಯ ವೈದ್ಯರಾಗಿರುವ ಡಾ.ಅರುಣ್ ಕುಮಾರ್ (53) ಎಂಬವರಿಗೆ ಜು.29ರಂದು ಅಪರಿಚಿತರು ಕಸ್ಟಮ್ಸ್‌ನಿಂದ ಕರೆ ಮಾಡಿ, ನಿಮ್ಮ ಆಧಾರ್ ನಂಬ್ರ ಬಳಸಿ ಬುಕ್ ಆಗಿರುವ ಕೊರಿಯರ್‌ನಲ್ಲಿ 5 ಪಾಸ್‌ಪೋರ್ಟ್, 5 ಎಟಿಎಂ ಕಾರ್ಡ್, 200ಗ್ರಾಂ ಎಂಡಿಎಂಎ ಹಾಗೂ 5000 ಯುಎಸ್ ಡಾಲರ್ ಇದ್ದು, ಕೋರಿಯರ್ ಮುಂಬಯಿ ಕಸ್ಟಮ್ಸ್‌ರವರ ವಶದಲ್ಲಿ ಇರುವುದಾಗಿ ತಿಳಿಸಿದರು. ಅಂತಹ ಬುಕಿಂಗ್ ಮಾಡಿಲ್ಲ ಎಂದು ಅರುಣ್ ಕುಮಾರ್ ನಿರಾಕರಿಸಿದಾಗ, ಕರೆ ಮಾಡಿದವರು ಅವರನ್ನು ಹಾಟ್‌ಲೈನ್ ಮೂಲಕ ಹಿರಿಯ ಅಧಿಕಾರಿಗೆ ಸಂಪರ್ಕಿಸಿದರು. ಹಾಟ್‌ಲೈನ್‌ನಲ್ಲಿದ್ದ ವ್ಯಕ್ತಿ ಪೊಲೀಸ್ ಅಧಿಕಾರಿ ಎಂದು ನಂಬಿಸಿ ಅರುಣ್ ಕುಮಾರ್ ಅವರ ಆಧಾರ್ ಕಾರ್ಡ್ ದುರ್ಬಳಕೆಯ ಬಗ್ಗೆ ದೂರನ್ನು ಸ್ವೀಕರಿಸಲಾಗಿದೆ ಎಂದು ತಿಳಿಸಿದರು. ನಿಮ್ಮ ಆಧಾರ್ ಕಾರ್ಡ್‌ನ್ನು ಭಯೋತ್ಪಾದಕರು ಸಿಮ್ ಖರೀದಿಸಲು ಬಳಸಿದ್ದು, ಈ ದೂರಿಗೆ ಸಂಬಂಧಿಸಿ ನಿಮ್ಮನ್ನು ವರ್ಚುವಲ್ ಆರೆಸ್ಟ್ ಮಾಡುವುದಾಗಿ ತಿಳಿಸಿದ್ದರು. ಜು.29ರಿಂದ…
ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದಲ್ಲಿ ಬಂಧಿಸಿ,ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಂಧಿತ ಆರೋಪಿಯನ್ನು ಅಫೀಕ್ ಯಾನೆ ಮಹಮ್ಮದ್ ಅಫೀಕ್ ( 19) ಎಂದು ಗುರುತಿಸಲಾಗಿದೆ. ಅಪ್ರಾಪ್ತ ಬಾಲಕಿಗೆ ಆಮಿಷ ತೋರಿಸಿ ಪಾರ್ಕ್ ಒಂದಕ್ಕೆ ಬರುವಂತೆ ಮಾಡಿ ಅಲ್ಲಿ ಮೂವರು ಆರೋಪಿಗಳು ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಈ ಪೈಕಿ ಇಬ್ಬರು ಆರೋಪಿಗಳ ಬಂಧನವಾಗಿದ್ದು ಇನ್ನೋರ್ವ ಪ್ರಮುಖ ಆರೋಪಿ ನಾಪತ್ತೆಯಾಗಿದ್ದ. ಇದೀಗ ನಾಪತ್ತೆಯಾಗಿದ್ದ ಪ್ರಮುಖ ಆರೋಪಿಯಾಗಿದ್ದ ಅಫೀಕ್ ಯಾನೆ ಮಹಮ್ಮದ್ ಅಫೀಕ್ ಎಂಬಾತನ ಬಂಧನವಾಗಿದೆ. ಈ ಪ್ರಕರಣದ ಇನ್ನೆರಡು ಆರೋಪಿಗಳಾದ ಮಹಮ್ಮದ್ ಫೈಝಲ್ ಹಾಗು ಲಿಖೇಶ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ,ಅವರು ಜಾಮೀನು ಮೇಲೆ ಬಿಡುಗಡೆಗೊಂಡಿದ್ದಾರೆ.ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮಹಮ್ಮದ್ ಅಫೀಕ್‌ನ ಬಂಧನಕ್ಕೆ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿತ್ತು.
ಮಂಗಳೂರು ನಗರದ ಉಳ್ಳಾಲ ಸಮೀಪ ಟಾರ್ಗೆಟ್ ಇಲ್ಯಾಸ್ ಕೊಲೆಗೆ ಪ್ರತಿಕಾರವಾಗಿ ಕೊಲೆಯ ಪ್ರಮುಖ ಆರೋಪಿಯಾಗಿದ್ದ ಕಡಪ್ಪರ ಸಮೀರ್ ಹತ್ಯೆಗೆ ಸಂಬಂಧಿಸಿದಂತೆ ಹಲವರನ್ನು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸಿದ ಪೊಲೀಸರಿಗೆ, ಈ ಕೊಲೆಯಲ್ಲಿ ಐವರು ಭಾಗಿಯಾಗಿರುವುದನ್ನು ಖಚಿತಪಡಿಸಿಕೊಂಡಿದ್ದು, ಇಲ್ಯಾಸ್ ಪತ್ನಿಯ ಸಹೋದರ ಮೊಹಮ್ಮದ್ ನೌಷದ್ ಈ ಕೊಲೆಯ ಪ್ರಮುಖ ರೂವಾರಿಯಾಗಿದ್ದು, ಆತನ ತಂಡ ಈ ಕೃತ್ಯ ಎಸಗಿರುವುದು ದೃಢಪಟ್ಟಿದೆ. ಕಡಪ್ಪರ ಸಮೀರ್ ತನ್ನ ತಾಯಿ ಮತ್ತು ಕುಟುಂಬದ ಸದಸ್ಯರೊಂದಿಗೆ ಪಂಪ್‌ವೆಲ್‌ನಲ್ಲಿರುವ ತನ್ನ ಫ್ಲ್ಯಾಟ್‌ಗೆ ತೆರಳುವ ಸಂದರ್ಭದಲ್ಲಿ ಕಲ್ಲಾಪುವಿನ ವಾಣಿಜ್ಯ ಸಂಕೀರ್ಣದ ಬಳಿ ಫೋನ್‌ನಲ್ಲಿ ಮಾತನಾಡುತ್ತಿದ್ದ ಸಮೀರ್‌ನನ್ನು ಕಾರಿನಲ್ಲಿ ಬಂದಿದ್ದ ಅಪರಿಚಿತರ ತಂಡ ತಲವಾರಿನಿಂದ ತಲೆ ಮತ್ತು ಕುತ್ತಿಗೆಗೆ ಕಡಿದು ಪರಾರಿಯಾಗಿತ್ತು.ಇಲ್ಯಾಸ್ ಹತ್ಯೆಗೆ ಪ್ರತಿಕಾರವಾಗಿ ಈ ಕೊಲೆ ನಡೆದಿತ್ತು ಎಂಬ ಪ್ರಾಥಮಿಕ ಮಾಹಿತಿಯಂತೆ ಕಮಿಷನರ್ ಅನುಪಮ ಅಗರವಾಲ್ ನೇತೃತ್ವದ ತಂಡ ಹಲವರನ್ನು ವಶಕ್ಕೆ ತೆಗೆದುಕೊಂಡು ಕೊಲೆ ಆರೋಪಿಗಳನ್ನು ಪತ್ತೆಹಚ್ಚಿದ್ದಾರೆ. ಕೊಲೆ ಕಣ್ಣಾರೆ ಕಂಡಿದ್ದ ನೌಷಾದ್: ದಾವೂದ್, ಸಮೀರ್ ಕಡಪ್ಪರ ನೇತೃತ್ವದಲ್ಲಿ 2018ರ ಜ. 13ರಂದು…









