ಕನ್ನಡದಲ್ಲಿ ಕೆಲ ಸಿನಿಮಾಗಳನ್ನು ಮಾಡಿ ಜನಪ್ರಿಯರಾಗಿದ್ದ ಧನುಷ್ ಸಾವನ್ನಪ್ಪಿದ್ದು, ಸ್ಯಾಂಡಲ್ವುಡ್ಗೆ ಅಘಾತ ಉಂಟುಮಾಡಿದೆ. ಪ್ಯಾರ್ ಕಾ ಗೋಲ್ ಗುಂಬಜ್, ಕೊಟ್ಲಲ್ಲಪ್ಪೋ ಕೈ, ಸಂಪಿಗೆ ಹಳ್ಳಿ, ಲೀಡರ್ ,ಸ್ನೇಹಿತ ಚಿತ್ರಗಳಲ್ಲಿ ನಟ ಧನುಷ್ ಅಭಿನಯಸಿದ್ದಾರೆ. ಕಳೆದವಾದ ಲಡಾಕ್ ಗೆ ಶೂಟಿಂಗ್ ಗೆ ಹೋಗಿದ್ದ ವೇಳೆ ಅನಾರೋಗ್ಯಕ್ಕೆ ತುತ್ತಾಗಿದ್ದ ನಟ ಧನುಷ್ ಆಸ್ಪತ್ರೆಗೆ ದಾಖಲಾಗಿದ್ರು. ಲಡಾಕ್ ವಾತಾರಣದಿಂದ ನಟ ಧನುಷ್ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ನಟ ಧನುಷ್ ನ್ಯೂಮೋನಿಯಾದಿಂದ ಬಳಲುತ್ತಿದ್ದರು. ನ್ಯೂಮೋನಿಯಾಗೆ ಬಲಿಯಾದ ನಟ ಧನುಷ್ ಆಗಿದ್ದಾರೆ. ನಿನ್ನೆ ರಾತ್ರಿ 10:45ಕ್ಕೆ ಚಿಕಿತ್ಸೆ ಫಲಿಸದೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಸ್ಯಾಂಡಲ್ವುಡ್ ನ ಅನೇಕ ನಟ-ನಟಿಯರು ಧನುಷ್ ಸಾವಿಗೆ ಸಂತಾಪ ಸೂಚಿಸಿದ್ದಾರೆ.
Author: main-admin
ವಿಟ್ಲ;ಮನೆಯೊಂದಕ್ಕೆ ಬೆಂಕಿ ತಗುಲಿ ಮನೆ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ಮಾಣಿ ಕಾಪಿಕಾಡು ಬಳಿ ನಡೆದಿದೆ. ದೀಪಾ ಎಂಬವರ ಮನೆ ಬೆಂಕಿಗೆ ಆಹುತಿಯಾಗಿದೆ.ದೀಪಾ ಅವರು ಮನೆಯಲ್ಲಿ ಒಬ್ಬರೇ ಇದ್ದಾಗ ಘಟನೆ ನಡೆದಿದೆ. ಬೆಂಕಿಯ ಕೆನ್ನಾಲಿಗೆ ಗ್ಯಾಸ್ ಸಿಲಿಂಡರ್ ಬ್ಲಾಸ್ಟ್ ಆಗಿದ್ದು ಸಿಲಿಂಡರ್ ಸ್ಪೋಟದ ಶಬ್ಧದಿಂದ ಜನರು ಕೆಲ ಕಾಲ ಆತಂಕಿತರಾಗಿದ್ದರು. ಸ್ಥಳಕ್ಕೆ ಪುತ್ತೂರು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ತೆರಳಿ ಬೆಂಕಿ ನಂದಿಸುವ ಕೆಲಸವನ್ನು ಮಾಡಿದ್ದಾರೆ.
ವಿಟ್ಲ: ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಪರಿಣಾಮ ಮನೆ ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ಮಾಣಿ ಸಮೀಪ ನಡೆದಿದೆ. ಘಟನೆಯಿಂದ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ. ಮಾಣಿ ಗ್ರಾಮದ ಕಾಪಿಕಾಡು ದೀಪಾ ಎಂಬವರ ಮನೆ ಬೆಂಕಿಗಾಹುತಿಯಾಗಿದೆ. ದೀಪ ಅವರು ಮನೆಯಲ್ಲಿ ಒಬ್ಬರೆ ಇದ್ದಾಗ ಈ ಘಟನೆ ಸಂಭವಿಸಿದ್ದು, ಬೆಂಕಿ ಕಾಣಿಸುತ್ತಿದ್ದಂತೆ ಅವರು ಹೊರಗಡೆ ಓಡಿ ಹೋಗಿದ್ದಾರೆ. ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಘಟನೆಯಿಂದ ಮನೆಯಲ್ಲಿದ್ದ ವಿದ್ಯುತ್ ಉಪಕರಣಾ ವಸ್ತುಗಳು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದು, ಮನೆಯೂ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಪುತ್ತೂರು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಕಾರ್ಯಾಚರಣೆ ನಡೆಸುತ್ತಿದ್ದರೆ.
ಬೆಂಗಳೂರು: ಕರ್ನಾಟಕದಲ್ಲಿನ 2023ರ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಏಪ್ರಿಲ್ 4 ರಂದು ಮಹಾವೀರ ಜಯಂತಿ ರಜೆ ಇರುವ ಕಾರಣ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗಿದೆ. 2023ರ ಎಸ್ ಎಸ್ ಎಲ್ ಸಿ ಮುಖ್ಯಪರೀಕ್ಷೆ ದಿನಾಂಕ 31-03-2023 ರಿಂದ 15-04-2023ರವರೆಗೆ ನಡೆಯಲಿದೆ. ಮಾರ್ಚ್ 31- ಪ್ರಥಮ ಭಾಷೆ,ಏಪ್ರಿಲ್ 3- ಗಣಿತ, ಏಪ್ರಿಲ್ 6- ದ್ವಿತೀಯ ಭಾಷೆ, ಏಪ್ರಿಲ್ 10- ವಿಜ್ಞಾನ,ಏಪ್ರಿಲ್ 12- ತೃತೀಯ ಭಾಷೆ,ಏಪ್ರಿಲ್ 15- ಸಮಾಜ ವಿಜ್ಞಾನ ವಿಷಯಗಳ
ಮುಂಬೈ : ಮುಂಬೈ-ಗೋವಾ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಂದು ಬೆಳಿಗ್ಗೆ ಮುಂಬೈ-ಗೋವಾ ಹೆದ್ದಾರಿಯಲ್ಲಿ ಕಾರು ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ 9 ಮಂದಿ ಸ್ಥಳದಲ್ಲೇ ಮೃತಪಟ್ಟರೆ, 4 ವರ್ಷದ ಮಗು ಗಂಭೀರವಾಗಿ ಗಾಯಗೊಂಡಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತಲುಪಿ ಪರಿಹಾರ ಕಾರ್ಯಗಳನ್ನು ಪ್ರಾರಂಭಿಸಿದರು. ಸ್ಥಳೀಯರ ಸಹಾಯದಿಂದ ಗಾಯಗೊಂಡ ಮಗುವನ್ನು ಕಾರಿನಿಂದ ಹೊರತೆಗೆದು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಪಘಾತದ ಕಾರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಉಳ್ಳಾಲ: ಉಳ್ಳಾಲ ಠಾಣಾಧಿಕಾರಿ ಸಂದೀಪ್ ಅವರ ಹೆಸರಿನಲ್ಲಿ ಇನ್ಸ್ಟಾಗ್ರಾಂ ನಕಲಿ ಖಾತೆಯನ್ನು ತೆರೆದಿರುವ ಹ್ಯಾಕರ್ ಗಳು ಹಲವರಲ್ಲಿ ಹಣಕ್ಕಾಗಿ ಬೇಡಿಕೆಯನ್ನು ಇಡುತ್ತಿದ್ದಾರೆ. ಈ ಕುರಿತು ಠಾಣಾಧಿಕಾರಿ ತನ್ನ ಇನ್ಸ್ಟಾಗ್ರಾಂ ಹಾಗೂ ಫೇಸ್ ಬುಕ್ ಮುಖಪುಟದಲ್ಲಿ ದೂರು ಹಂಚಿಕೊಂಡಿದ್ದಾರೆ. ಕಳೆದ ಎರಡು ದಿನಗಳಿಂದ ನಕಲಿ ಇನ್ಸ್ಟಾಗ್ರಾಂ ಖಾತೆ ತೆರೆದು ಸಂದೀಪ್ ಅವರ ಸ್ನೇಹಿತರಲ್ಲಿ ಹಣಕ್ಕಾಗಿ ಬೇಡಿಕೆ ಇಡಲಾಗಿದೆ. ಎಲ್ಲಾ ಸ್ನೇಹಿತರಲ್ಲಿ ಕಷ್ಟದಲ್ಲಿರುವ ಕಾರಣ ಹೇಳಿ 7,500 ರೂ ಕೊಡುವಂತೆ ಸಂದೇಶ ಹಾಕಲಾಗುತ್ತಿದೆ. ಇದು ಠಾಣಾಧಿಕಾರಿ ಗಮನಕ್ಕೆ ಬಂದು ಸಾಮಾಜಿಕ ಜಾಲತಾಣಗಳಲ್ಲಿ ಹಣ ನೀಡದಂತೆ ಸಂದೇಶ ಹಾಕಿದ್ದಾರೆ.ಮಂಗಳೂರು ಪೊಲೀಸ್ ಕಮೀಷನರ್ ಶಶಿಕುಮಾರ್ ಸೇರಿದಂತೆ ಗಣ್ಯರು, ಪತ್ರಕರ್ತರ ಫೇಸ್ ಬುಕ್ ಅಕೌಂಟ್ ಗಳನ್ನು ಹ್ಯಾಕ್ ಮಾಡಿ ಸ್ನೇಹಿತರನ್ನು ಮತ್ತೆ ತನ್ನ ಖಾತೆಗೆ ಸೇರಿಸಿಕೊಂಡು ಹಣವನ್ನು ಕೇಳುವ ಜಾಲ ದ.ಕ ಜಿಲ್ಲೆಯಾದ್ಯಂತ ಹಲವು ತಿಂಗಳಿನಿಂದ ನಡೆಯುತ್ತಿದೆ. ಈ ಕುರಿತು ಸೈಬರ್ ಸೆಲ್‍ನಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ಹ್ಯಾಕರ್ ಗಳ ಪತ್ತೆ ಅಸಾಧ್ಯವಾಗುತ್ತಿದೆ. ಮೂಲವೊಂದರ ಪ್ರಕಾರ ಉತ್ತರಭಾರತ ಮೂಲದ ರೈತರುಗಳ…
ಉಪ್ಪಿನಂಗಡಿ: ಟಯರ್ ರಿಸೋಲ್ ಸಂಸ್ಥೆಯೊಂದರಲ್ಲಿ ಏರ್ ಕಂಪ್ರೈಸರ್ ಸ್ಫೋಟಗೊಂಡು ಓರ್ವ ಮೃತಪಟ್ಟ ಘಟನೆಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿ ನಡೆದಿದೆ. ಆಲಂಕಾರು ನಿವಾಸಿ ರಾಜೇಶ್ ಪೂಜಾರಿ (43) ಮೃತ ವ್ಯಕ್ತಿ. ಏರ್ ಕಂಪ್ರೆಸರ್ ಸ್ಫೋಟಗೊಂಡು ಗಂಭೀರ ಗಾಯಗೊಂಡಿದ್ದ ರಾಜೇಶ್ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆತರಲಾಗಿದೆ ಆದರೆ ಅವರು ಮೃತಪಟ್ಟಿದ್ದರು. ಇನ್ನು ಸ್ಫೋಟದಿಂದಾಗಿ ಅಂಗಡಿಯಲ್ಲೆ ಹೊಗೆ ಕಾಣಿಸಿದೆ. ಅಂಗಡಿಗೂ ಹಾನಿಯಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರು: ನಗರದ ಮಣಪ್ಪುರಂ ಫೈನಾನ್ಸ್‌ನ ಉದ್ಯೋಗಿಯಾಗಿದ್ದ ಯುವತಿಯೊಬ್ಬಳು ನಾಪತ್ತೆಯಾದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಮಲಾಕ್ಷ ಎಂಬವರ ಪುತ್ರಿ ಶಿವಾನಿ (20) ಕಾಣೆಯಾದ ಯುವತಿ. ಈಕೆ ಜ.16ರಂದು ಬೆಳಗ್ಗೆ 7ಕ್ಕೆ ಕೆಲಸಕ್ಕೆ ತೆರಳಿದ್ದು, ಸಂಜೆ 6 ಗಂಟೆಯಾದರೂ ಮರಳಿ ಬಂದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮೊಬೈಲ್ ಸ್ವಿಚ್ ಆಫ್ ಆಗಿದ್ದು ಸಂಸ್ಥೆಯ ಸಿಬ್ಬಂದಿಯವರಲ್ಲಿ ವಿಚಾರಿಸಿದಾಗಲೂ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ 5.6 ಅಡಿ ಎತ್ತರದ, ಬಿಳಿ ಮೈಬಣ್ಣದ, ದಪ್ಪಮುಖದ, ಸಾಧಾರಣ ಮೈಕಟ್ಟಿನ ಈಕೆ ತುಳು ಮತ್ತು ಕನ್ನಡ ಭಾಷೆ ಮಾತನಾಡುತ್ತಾರೆ.ಮನೆಯಿಂದ ಹೊರಟು ಹೋದಾಗ ಹಸಿರು ಬಣ್ಣದ ಟಾಪ್ ಹಾಗೂ ಗೋಲ್ಡನ್ ಕಲರ್ ಪ್ಯಾಂಟ್ ಧರಿಸಿರುತ್ತಾರೆ. ಈಕೆಯನ್ನು ಕಂಡವರು ಸುರತ್ಕಲ್ ಠಾಣೆ (0824-2220540, 9480805360, 9480802345) ಅಥವಾ ಮಂಗಳೂರು ನಗರ ಕಂಟ್ರೋಲ್ ರೂಮ್ (0824-2220800) ಮಾಹಿತಿ ನೀಡಬಹುದು ಎಂದು ಪ್ರಕಟನೆ ತಿಳಿಸಿದೆ.
ಲಾರಿ ಹಾಗೂ ಬೈಕ್ ಮಧ್ಯೆ ಉಡುಪಿಯ ಬ್ರಹ್ಮಾವರ ಮಂಜುನಾಥ್ ಪೆಟ್ರೋಲ್ ಬಂಕ್ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕೋಟದ ಸಮಿತ್ ಕುಮಾರ್ ಹಾಗೂ ವಾಗೀಶ್ ಎಂದು ಗುರುತಿಸಲಾಗಿದೆ ಇವರು ಉಡುಪಿಯ ಪೂರ್ಣ ಪ್ರಜ್ಜ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು. ಇವರು ಕಾಲೇಜು ಮುಗಿಸಿ ರಾತ್ರಿ ಮನೆಗೆ ಬೈಕಿನಲ್ಲಿ ವಾಪಸ್ ಹೋಗುತ್ತಿದ್ದ ವೇಳೆ ಎದುರಿನಲ್ಲಿದ್ದ ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಲಾರಿಗೆ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಇವರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಡಿಕೇರಿ : ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಾಂಗಲ ಗ್ರಾಮದಲ್ಲಿ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಕೆರೆಗೆ ಹಾರಿದ್ದ ತಿಮ್ಮಯ್ಯನ ಶವ ಪತ್ತೆಯಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಾಂಗಲ ಗ್ರಾಮದಲ್ಲಿ ಸೋಮವಾರ 23 ವರ್ಷದ ಆರತಿ ಎಂಬ ಯುವತಿಯನ್ನು ಬರ್ಬರವಾಗಿ ಹತ್ಯೆಗೈದು ಯುವತಿ ಮನೆಯ ಬಳಿಯ ಇರುವ ಕೆರೆಗೆ ಹಾರಿದ್ದ ಆರೋಪಿ ತಿಮ್ಮಯ್ಯ ಶವ 3 ದಿನಗಳ ಬಳಿಕ ಪತ್ತೆಯಾಗಿದೆ. ವಿರಾಜಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.