Author: main-admin

ಉಡುಪಿ: ಗೃಹೋಪಯೋಗಿ ಮಳಿಗೆಯೊಂದರ ಮ್ಯಾನೇಜರ್‌ಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಸೆಕ್ಯುರಿಟಿ ಗಾರ್ಡ್‌ನ್ನು ಉಡುಪಿ ನಗರ ಪೊಲೀಸರು ಬಂಧಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಗೃಹೋಪಯೋಗಿ ಮಳಿಗೆಯ ಸೆಕ್ಯೂರಿಟಿ ಗಾರ್ಡ್, ಪ್ರಸಾದ್ ಹಾಗೂ ಇರಿತಕ್ಕೊಳಗಾದ ಹರ್ಷ ಮಳಿಗೆಯ ಕ್ಲಸ್ಟರ್ ಮ್ಯಾನೇಜರ್ ರೋನ್ಸನ್ ಎವರೆಸ್ಟ್ ಡಿಸೋಜ(36) ಎಂದು ಗುರುತಿಸಲಾಗಿದೆ. ಇರಿತದಿಂದ ತೀವ್ರವಾಗಿ ಗಾಯಗೊಂಡ ರೋನ್ಸನ್ ಎವರೆಸ್ಟ್ ಡಿಸೋಜ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆ.9ರಂದು ಕೆಲಸಕ್ಕೆ ಬಂದಿದ್ದ ಪ್ರಸಾದ್, ಮಧ್ಯಾಹ್ನದವರೆಗೆ ಮಾತ್ರ ಕೆಲಸ ಮಾಡಿ ಹೋಗಿದ್ದನು. ಈ ಕುರಿತು ಸೆಕ್ಯೂಟಿರಿ ಗಾರ್ಡ್ ಕಂಪನಿಯ ಮ್ಯಾನೇಜರ್‌ಗೆ ತಿಳಿಸಲಾಗಿತ್ತು. ಆ.10ರಂದು ಪ್ರಸಾದ್ ಕೆಲಸಕ್ಕೆ ಹಾಜರಿದ್ದು, ಸಂಜೆ ವೇಳೆ ರೋನ್ಸನ್ ಡಿಸೋಜ ಅವರನ್ನು ಪ್ರಸಾದ್ ಉಡುಪಿಯ ಸಿಟಿ ಬಸ್ ನಿಲ್ದಾಣದ ಬಳಿಯ ಶೋರೂಂಗೆ ಬರಲು ತಿಳಿಸಿದ್ದನು. ಅದರಂತೆ ಬಂದ ರೋನ್ಸನ್ ಅವರಲ್ಲಿ ನನ್ನನ್ನು ಕೆಲಸದಿಂದ ತೆಗೆಯಬೇಡಿ ಎಂದು ಪ್ರಸಾದ್ ಹೇಳಿದನು. ಅದಕ್ಕೆ ಮರುದಿನ ಅಧಿಕಾರಿಗಳೊಂದಿಗೆ ಮೀಟಿಂಗ್‌ನಲ್ಲಿ ಚರ್ಚಿಸಿ ತಿಳಿಸುತ್ತೇನೆ ಎಂದು ಹೇಳಿದ್ದರು. ಇದರಿಂದ…

Read More

ಪುತ್ತೂರು: ಲಾಡ್ಜ್‌ವೊಂದಕ್ಕೆ ಪೊಲೀಸರು ದಾಳಿ ನಡೆಸಿದ ಘಟನೆ ನೆಹರುನಗರದಲ್ಲಿ ನಡೆದಿದೆ. ನೆಹರುನಗರದಲ್ಲಿರುವ ಲಾಡ್ಜ್‌‌ಗೆ ಪೊಲೀಸರು ದಾಳಿ ನಡೆಸಿದ್ದು, ರಿಸೆಪ್ಶನಿಸ್ಟ್ ಹಾಗೂ ಲೆಡ್ಜರ್ ಪುಸ್ತಕವನ್ನು ವಶಕ್ಕೆ ಪಡೆದಿದ್ದಾರೆ. ಯುವಕ-ಯುವತಿಯಿಂದ ಯಾವುದೇ ದಾಖಲೆಗಳನ್ನು ತೆಗೆದುಕೊಳ್ಳದೆ ರೂಮ್ ನೀಡಲಾಗಿದೆ ಎನ್ನುವ ಆರೋಪದ ಮೇರೆಗೆ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ತಡ ರಾತ್ರಿ ಇನೋವಾ ಕಾರಿನಲ್ಲಿ ಬಂದ ತಂಡವೊಂದಕ್ಕೆ ರೂಂ ನೀಡಿರುವುದೆ ದಾಳಿಗೆ ಕಾರಣ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಆ ಇನೋವಾದಲ್ಲಿ ಬಂದ ವ್ಯಕ್ತಿಗಳ ಬಳಿ ಸರಿಯಾದ ದಾಖಲಾತಿ ಪಡೆದುಕೊಳ್ಳದೆ ರೂಂ ನೀಡಲಾಗಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪ ಮಾಡುತ್ತಿದ್ದಾರೆ. ಆ ಇನ್ನೊವಾದಲ್ಲಿ ಅನ್ಯಕೋಮಿನ ಜೋಡಿ ಇತ್ತು ಎಂದು ಹಿಂದೂ ಪರ ಸಂಘಟನೆಗಳು ಆರೋಪಿಸಿವೆ. ಪುತ್ತೂರಿನ ಹೊರವಲಯ ನೆಹರೂ ನಗರದಲ್ಲಿರುವ ಲಾಡ್ಜ್ ವೊಂದಕ್ಕೆ ಮಂಗಳವಾರ ಮಧ್ಯಾಹ್ನ ಪುತ್ತೂರು ನಗರ ಠಾಣೆ ಪೊಲೀಸರು ದಾಳಿ ನಡೆಸಿದರು. ಪುತ್ತೂರಿನ ನೆಹರೂ ನಗರದಲ್ಲಿರುವ ಕೀರ್ತನ ಲಾಡ್ಜ್ ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂಬ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ…

Read More

ಉಳ್ಳಾಲ: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿ ಉಳ್ಳಾಲದ ನಟೋರಿಯಸ್ ರೌಡಿ ಕಡಪ್ಪರ ಸಮೀರ್ (34) ಎಂಬಾತನನ್ನು ತೊಕ್ಕೊಟ್ಟು ಸಮೀಪದ ಕಲ್ಲಾಪು ಬಳಿ ತಂಡವೊಂದು ಭಾನುವಾರ ರಾತ್ರಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದೆ. ಇದರ ಹಿಂದೆ ಗೋಲ್ಡ್‌ ಮಾಫಿಯಾ ಶಂಕ ವ್ಯಕ್ತವಾಗಿದ್ದು , ಆ ನಿಟ್ಟಿನಲ್ಲೂ ತನಿಖೆ ನಡೆಯುತ್ತಿದೆ. ಪ್ರಕರಣವೊಂದರಲ್ಲಿ ಜೈಲು ಪಾಲಾಗಿದ್ದ ಸಮೀರ್ ಕೆಲ ದಿನಗಳ ಹಿಂದಷ್ಟೇ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದು ಈತನ ಚಲನವಲನಗಳ ಮೇಲೆ 4-5 ಮಂದಿ ದುಷ್ಕರ್ಮಿಗಳ ತಂಡ ಕಣ್ಣಿಟ್ಟಿತ್ತು. ಬಾನುವಾರ ರಾತ್ರಿ 10.15ರ ವೇಳೆಗೆ ಸಮೀರ್ ತನ್ನ ತಾಯಿ. ಪತ್ನಿ. ಮಕ್ಕಳ ಜತೆ ಕಾರಿನಲ್ಲಿ ಕಲ್ಲಾಪಿನ ಫಾಸ್ಟವುಡ್ ಸೆಂಟರ್‌ವೊಂದಕ್ಕೆ ಬಂದಿದ್ದಾರೆ. ಈ ವೇಳೆ ಮತ್ತೊಂದು ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಏಕಾಏಕಿ ದಾಳಿ ನಡೆಸಿದೆ. ಅಪಾಯವನ್ನರಿತ ಸಮೀರ್ ತಪ್ಪಿಸಿಕೊಂಡು ರೈಲ್ವೆ ಹಳಿ ಕಡೆಗೆ ಒಡಿದ್ದಾನೆ. ಆದರೆ ದುಷ್ಕರ್ಮಿಗಳು ಬೆನ್ನಟ್ಟಿ ಸಮೀರ್‌ನನ್ನು ಕೊಲೆಗೈದಿದ್ದಾರೆ. ಪೊಲೀಸರು ಕೆಲಹೊತ್ತು ಹುಡುಕಾಡಿದ ಬಳಿಕ ಸಮೀರ್ ಮೃತದೇಹ ಸಿಕ್ಕಿದೆ. ಘಟನಾ ಸ್ಥಳಕ್ಕೆ ದಕ್ಷಿಣ…

Read More

ಮೂಡುಬಿದಿರೆ: ದ‌.ಕ.ಜಿಲ್ಲೆಯ ಮೂಡುಬಿದಿರೆಯ ಖಾಸಗಿ ಕಾಲೇಜೊಂದರ ತರಗತಿಗೆ ಅಕ್ರಮವಾಗಿ ಪ್ರವೇಶಿಸಿರುವ ಯುವಕನೊಬ್ಬ ವಿದ್ಯಾರ್ಥಿನಿಯೊಬ್ಬಳ ಮುಖಕ್ಕೆ ಕತ್ತರಿಯಿಂದ ಚುಚ್ಚಿ ಹಲ್ಲೆಗೈದ ಘಟನೆ ಸೋಮವಾರ ನಡೆದಿದೆ. ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಮೂಲದ ಮಂಜುನಾಥ ಬಂಧಿತ ಆರೋಪಿ. ಆರೋಪಿ ಮತ್ತು ಕತ್ತರಿಯಿಂದ ಇರಿತಕ್ಕೊಳಗಾದ ವಿದ್ಯಾರ್ಥಿನಿ ತುಮಕೂರಿನವರಾಗಿದ್ದರು. ಇಬ್ಬರೂ ಆತ್ಮೀಯರಾಗಿದ್ದರು. ಆದರೆ ಇತ್ತೀಚೆಗೆ ವಿದ್ಯಾರ್ಥಿನಿಯು ಆರೋಪಿ ಮಂಜುನಾಥನ ಮೊಬೈಲ್ ಕರೆಗಳನ್ನು ನಿರ್ಲಕ್ಷಿಸುತ್ತಾ ಬಂದಿದ್ದಳು ಎಂದು ಹೇಳಲಾಗುತ್ತಿದೆ. ಇದರಿಂದ ಹತಾಶೆಗೊಂಡ ಆರೋಪಿ ಮಂಜುನಾಥ ವಿದ್ಯಾರ್ಥಿನಿಯನ್ನು ಹುಡುಕಿಕೊಂಡು ಬಂದಿದ್ದನು. ಅದರಂತೆ ಸೋಮವಾರ ಕಾಲೇಜಿಗೆ ಬಂದಿದ್ದ ಆತ ತರಗತಿಯೊಳಗೆ ಅಕ್ರಮವಾಗಿ ಪ್ರವೇಶಿಸಿ ಕತ್ತರಿಯಿಂದ ಚುಚ್ಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂಡುಬಿದಿರೆ ಠಾಣೆಯಲ್ಲಿ ಆರೋಪಿ ಮಂಜುನಾಥನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದು, ಇನ್‌ಸ್ಪೆಕ್ಟ‌ರ್ ಸಂದೇಶ್‌ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

Read More

ಮಂಗಳೂರು: ನಗರದ ಪಿಜಿಯೊಂದರಿಂದ 2 ಲ್ಯಾಪ್‌ಟಾಪ್‌ಗಳು, ಹಣ ಮತ್ತು ಎಟಿಎಂ ಕಾರ್ಡನ್ನು ಕಳವು ಮಾಡಿರುವ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಯೂರ್ ನಾಯ್ಕ ಮತ್ತು ಚರಣ್ ಎಂಬವರು ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಆ.9ರಂದು ರಾತ್ರಿ ಕಂಪೆನಿಯ ಕೆಲಸ ಮುಗಿಸಿ ಬೇರೆ ಬ್ಯಾಗ್‌ಗಳಲ್ಲಿ 2 ಲ್ಯಾಪ್‌ಟಾಪ್‌ಗಳನ್ನಿಟ್ಟು ಮಲಗಿದ್ದರು. ಮರುದಿನ ಬೆಳಗ್ಗೆ 8 ಗಂಟೆಗೆ ಎದ್ದು ನೋಡಿದಾಗ ಲ್ಯಾಪ್‌ಟಾಪ್‌ಗಳು, 800 ರೂ., ಎಟಿಎಂ ಕಾರ್ಡ್ ಸಹಿತ ಅಂದಾಜು 2,11,500 ರೂ. ಮೌಲ್ಯದ ಸೊತ್ತುಗಳು ಕಳವಾಗಿದ್ದವು ಎಂದು ದೂರಿನಲ್ಲಿ ತಿಳಿಸಲಾಗಿದೆ.

Read More

ಮಂಗಳೂರು: “ಆರೋಗ್ಯ ಕ್ಷೇತ್ರದಲ್ಲಿ ತನ್ನ ಉನ್ನತ ಛಾಪನ್ನು ಮೂಡಿಸಿದ ಇಂದಿರಾ ಆಸ್ಪತ್ರೆ ತನ್ನ 25ನೇ ವಾರ್ಷಿಕೋತ್ಸವವನ್ನು ಹೆಮ್ಮೆಯಿಂದ ಆಚರಿಸುತ್ತಿದೆ. 1999ರಲ್ಲಿ ಸ್ಥಾಪನೆಯಾದಾಗಿನಿಂದ ಆಸ್ಪತ್ರೆ ಅತ್ಯುತ್ತಮ ವೈದ್ಯಕೀಯ ಆರೈಕೆಯನ್ನು ನೀಡುವ ಮೂಲಕ ಸಮುದಾಯಕ್ಕೆ ಉನ್ನತ ಯೋಗಕ್ಷೇಮವನ್ನು ನೀಡುವಲ್ಲಿ ನಿರತವಾಗಿದೆ. ಕಳೆದ ಕಾಲು ಶತಮಾನದಲ್ಲಿ, ಇದು ತುರ್ತು ಆರೈಕೆ, ಶಸ್ತ್ರಚಿಕಿತ್ಸೆ, ಡಯಾಲಿಸಿಸ್, ಮೆಟರ್ನಿಟಿ, ಮೆಡಿಸಿನ್, ಫಿಸಿಯೋಥೆರಪಿ ಸೇರಿದಂತೆ ವಿಶಾಲವಾದ ಸೇವೆಗಳನ್ನು ಒದಗಿಸುವ ಅತ್ಯಾಧುನಿಕ ವೈದ್ಯಕೀಯ ಕೇಂದ್ರವಾಗಿ ಬೆಳೆದಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಸಯ್ಯದ್ ನಿಜಾಮುದ್ದಿನ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.ಇಂದಿರಾ ಎಜ್ಯುಕೇಶನಲ್ ಟ್ರಸ್ಟ್ – ನರ್ಸಿಂಗ್, ಅಲೈಡ್ ಆರೋಗ್ಯ ಮತ್ತು ಫಿಸಿಯೋಥೆರಪಿ ಕೋರ್ಸ್‌ಗಳನ್ನು ಒಳಗೊಂಡ ಪ್ರಮುಖ ಶೈಕ್ಷಣಿಕ ಸಂಸ್ಥೆಯಾಗಿ ಬೆಳೆದಿದೆ. ಉತ್ತಮ ಆರೋಗ್ಯ ವೃತ್ತಿಪರರನ್ನು ನಿರ್ಮಿಸುವಲ್ಲಿ ತನ್ನ ಬದ್ಧತೆಗೆ ಪ್ರಸಿದ್ಧವಾಗಿದೆ. ಈ ಪ್ರಮುಖ ಮೈಲಿಗಲ್ಲನ್ನು ನೆನಪಿಸಿಕೊಳ್ಳಲು, ಇಂದಿರಾ ಆಸ್ಪತ್ರೆ ತನ್ನ ಗೌರವಾನ್ವಿತ ವೈದ್ಯರು ಮತ್ತು ಸಿಬ್ಬಂದಿಯಕೊಡುಗೆಗಳನ್ನು ಗೌರವಿಸಲು ವಾರ್ಷಿಕೋತ್ಸವ ಸಂಭ್ರಮ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಹೆಚ್ಚುವರಿಯಾಗಿ, ಸಮುದಾಯದ ಆರೋಗ್ಯವನ್ನು ಬೆಂಬಲಿಸಲು ರಕ್ತದಾನ ಶಿಬಿರವನ್ನು…

Read More

ಜೇನುತುಪ್ಪವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದರ ಸೇವನೆಯಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ. ಜೇನುತುಪ್ಪದಲ್ಲಿರುವ ಆಯಂಟಿಆಕ್ಸಿಡೆಂಟ್‌ಗಳು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಜೇನುತುಪ್ಪದ ದೈನಂದಿನ ಬಳಕೆ ಹೃದಯಕ್ಕೆ ಒಳ್ಳೆಯದು. ಜೇನುತುಪ್ಪವು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ. ಅದರ ಕೆಲವು ಮುಖ್ಯ ಅನುಕೂಲಗಳು: ಬ್ಯಾಕ್ಟೀರಿಯಾ ವಿರೋಧಿ:ಜೇನುತುಪ್ಪವು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಇವು ಬ್ಯಾಕ್ಟೀರಿಯಾದ ಸೋಂಕನ್ನು ತಡೆಯಲು ಸಹಾಯ ಮಾಡುತ್ತವೆ. ನೋಯುತ್ತಿರುವ ಗಂಟಲು, ಕೆಮ್ಮು ಮತ್ತು ಶೀತದಂತಹ ಸಾಮಾನ್ಯ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಸಹ ಇದು ಸಹಾಯ ಮಾಡುತ್ತದೆ. ಜೀರ್ಣಕ್ರಿಯೆ:ಜೇನುತುಪ್ಪವು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದು ಕರುಳಿನಲ್ಲಿ ಉತ್ತಮ ಬ್ಯಾಕ್ಟೀರಿಯಾದ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಮಲಬದ್ಧತೆ ತಡೆಯಲು ಸಹಾಯ ಮಾಡುತ್ತದೆ. ಶಕ್ತಿ:ಜೇನುತುಪ್ಪವು ನೈಸರ್ಗಿಕ ಸಕ್ಕರೆಯಾಗಿದ್ದು ಅದು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ. ಇದು ಆಯಾಸವನ್ನು ಕಡಿಮೆ ಮಾಡಲು ಮತ್ತು ದೈಹಿಕ ಚಟುವಟಿಕೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ನಿದ್ರೆ:ಜೇನುತುಪ್ಪವು ಮೆಲಟೋನಿನ್ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ನಿದ್ರೆಯನ್ನು ಉತ್ತೇಜಿಸುವ ಹಾರ್ಮೋನ್ ಆಗಿದೆ.…

Read More

ಮಂಗಳೂರು: ಸ್ಕೀಮ್ ಹಾಗೂ ಸೇವಿಂಗ್ ಯೋಜನೆಯ ಇತಿಹಾಸದಲ್ಲೇ ಅತೀ ದೊಡ್ಡ ಬಹುಮಾನವನ್ನು ನೀಡುವ ಮಹತ್ತರ ಯೋಜನೆಗೆ ವಿಷನ್ 2 ಇಂಡಿಯಾ ಚಾಲನೆ ನೀಡಿದ್ದು ಇದೇ ಬರುವ ಆಗಸ್ಟ್ 15 ರಂದು ಮೊದಲ ಡ್ರಾ ನಡೆಯಲಿದೆ. ಕರ್ನಾಟಕದ ಇತಿಹಾಸದಲ್ಲೇ ಅತೀ ದೊಡ್ಡ ಮೊತ್ತದ ಬಹುಮಾನಗಳನ್ನು ಒಳಗೊಂಡ ಈ ಯೋಜನೆಯಲ್ಲಿ ಪಾಲ್ಗೊಳ್ಳಲು ಕೊನೆಯ ಮೂರು ದಿನಗಳ ಅವಕಾಶವಿದೆ.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9036790323 1ಕೋಟಿ ನಗದು ಹಾಗೂ ಚಿನ್ನಾಭರಣ, ಒಟ್ಟು ಹದಿನೇಳು ಕಾರು, ಹತ್ತು ಸುಸಜ್ಜಿತ ಮನೆ, ನೂರಕ್ಕಿಂತ ಹೆಚ್ಚು ದ್ವಿಚಕ್ರ ವಾಹನ, 50ಕ್ಕಿಂತ ಹೆಚ್ಚು ಐಪೋನ್, ವಿದೇಶ ಪ್ರಯಾಣ ಹಾಗೂ ಸಮಾಧಾನಕರ ಬಹುಮಾನವಾಗಿ ನಗದು, ಚಿನ್ನ ಹಾಗೂ ಇನ್ನಿತರ ಫರ್ನಿಚರ್, ಎಲೆಕ್ಟ್ರಾನಿಕ್, ಗೃಹೋಪಯೋಗಿ ವಸ್ತುಗಳನ್ನು ನೀಡಲಿದೆ ಎಂದು ಸಂಸ್ಥೆಯ ಸಂಸ್ಥಾಪಕರು ತಿಳಿಸಿದ್ದಾರೆ. ಪ್ರತಿ ತಿಂಗಳು ಸಾವಿರ ರೂಪಾಯಿಗಳಂತೆ ಪಾವತಿಸುವ ಉಳಿತಾಯ ಯೋಜನೆ ಇದಾಗಿದ್ದು, ಇದರಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳನ್ನು ಗೆಲ್ಲಬಹುದಾಗಿದೆ. ವಿಷನ್ ಇಂಡಿಯಾ ಮೂಲಕ ತಮ್ಮ ಕನಸಿನ ಮನೆ,…

Read More

ನವದೆಹಲಿ : ಜನರೊಂದಿಗೆ ಸ್ಪ್ಯಾಮ್ ಕರೆಗಳ ಹೆಸರಿನಲ್ಲಿ ನಿರಂತರ ವಂಚನೆ ಪ್ರಕರಣಗಳ ಬಗ್ಗೆ ಸರ್ಕಾರ ಕಟ್ಟುನಿಟ್ಟಾಗಿದೆ. ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (ಟ್ರಾಯ್) ಈ ಬಗ್ಗೆ ಹೊಸ ನಿಯಮವನ್ನು ಜಾರಿಗೆ ತರಲು ಹೊರಟಿದೆ. ಈ ಹೊಸ ನಿಯಮದ ಪ್ರಕಾರ, ಯಾರಾದರೂ ಖಾಸಗಿ ಮೊಬೈಲ್ ಸಂಖ್ಯೆಯಿಂದ ಟೆಲಿಮಾರ್ಕೆಟಿಂಗ್ ಕರೆಗಳನ್ನು ಮಾಡಿದರೆ, ಟೆಲಿಕಾಂ ಆಪರೇಟರ್ಗಳು ಅವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಟೆಲಿಕಾಂ ವಲಯದಲ್ಲಿ ಅನಗತ್ಯ ಕರೆಗಳ ಮೂಲಕ ವಂಚನೆಯನ್ನು ತಡೆಗಟ್ಟಲು ಸರ್ಕಾರ ದೀರ್ಘಕಾಲದಿಂದ ಕೆಲಸ ಮಾಡುತ್ತಿದೆ. ಟ್ರಾಯ್ ಹೊರಡಿಸಿದ ಈ ನಿಯಮವು ಸೆಪ್ಟೆಂಬರ್ 1, 2024 ರಿಂದ ಜಾರಿಗೆ ಬರಲಿದೆ. ದೇಶದ ಎಲ್ಲಾ ಟೆಲಿಕಾಂ ಕಂಪನಿಗಳಿಗೆ ಸರ್ಕಾರವು ಸೂಚನೆಗಳನ್ನು ನೀಡಿದೆ. ಟ್ರಾಯ್ ನ ಹೊಸ ನಿಯಮ ಏನು ಹೇಳುತ್ತದೆ? ಇತ್ತೀಚಿನ ದಿನಗಳಲ್ಲಿ, ಸ್ಪ್ಯಾಮ್ ಕರೆಗಳ ಹೆಸರಿನಲ್ಲಿ ನಿರಂತರ ವಂಚನೆಯ ಬಗ್ಗೆ ಸರ್ಕಾರಕ್ಕೆ ಸಾಕಷ್ಟು ದೂರುಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಹೊಸ ನಿಯಮ ತರಲಾಗಿದೆ. ಇದರಲ್ಲಿ, ಯಾರಾದರೂ ಖಾಸಗಿ ಮೊಬೈಲ್ ಸಂಖ್ಯೆಯಿಂದ ಟೆಲಿಮಾರ್ಕೆಟಿಂಗ್…

Read More

ಮಣಿಪಾಲ: ಮಣಿಪಾಲದಲ್ಲಿ ಹೊಟೇಲ್ ನೌಕರರೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಆ.9ರಂದು ರಾತ್ರಿ ವೇಳೆ ನಡೆದಿದೆ. ಮೃತನನ್ನು ಮಣಿಪಾಲದ ಯುವರ್ ಚಾಯ್ಸ್ ಎಂಬ ಹೋಟೆಲಿನಲ್ಲಿ ಕೆಲಸ ಮಾಡಿಕೊಂಡಿದ್ದ ಉಳ್ತೂರು ಗ್ರಾಮದ ನಿವಾಸಿ ಉದಯ (43) ಎಂದು ಗುರುತಿಸಲಾಗಿದೆ. ಹೋಟೆಲ್ ನಲ್ಲಿ ಅಸೌಖ್ಯದಿಂದ ಬಿದ್ದು ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರು, ಮಂಗಳೂರು ವೆನ್‌ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆದರೆ ಇವರ ಮರಣದಲ್ಲಿ ಸಂಶಯ ಇದೆ ಎಂದು ಮೃತರ ಸಹೋದರ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

Read More