Author: main-admin

ಹೊಸಪೇಟೆ : ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕಲುಷಿತ ನೀರು ಸೇವಿಸಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, 40 ಕ್ಕು ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆಯ ರಾಣಿಪೇಟೆಯಲ್ಲಿ ಕಲುಷಿತ ನೀರು ಸೇವಿಸಿ ಲಕ್ಷ್ಮೀ (55) ಸಾವನ್ನಪ್ಪಿದ್ದು, ಕಲುಷಿತ ನೀರು ಸೇವಿಸಿರುವ 40 ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೊಸಪೇಟೆ ನಗರದ ರಾಣಿಪೇಟೆ, ಚಲವಾದಿಕೇರಿ ಸೇರಿದಂತೆ ಹಲವಡೆ ಪೈಪ್ ಲೈನ್ ಕಾಮಗಾರಿ ನಡೆಯುತ್ತಿದ್ದು, ಪೈಪ್ ಲೈನ್ ಕಾಮಗಾರಿ ವೇಳೆ ನೀರು ಕಲುಷಿತಗೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

Read More

ಮಂಗಳೂರು : ಅತ್ಯಂತ ಅಘಾತಕಾರಿ ಘಟನೆಯೊಂದರಲ್ಲಿ ನಗರದಲ್ಲಿ ನಡೆಯುತ್ತಿದ್ದ ಗಾಂಜಾ ದಂಧೆ ಪ್ರಕರಣದಲ್ಲಿ ಹತ್ತು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರ ಪೈಕಿ ಒಂಬತ್ತು ಮಂದಿ ವೈದ್ಯಕೀಯ ವಿದ್ಯಾರ್ಥಿಗಳಾಗಿದ್ದಾರೆ ಎನ್ನುವ ವಿಚಾರ ಕಳವಳಕಾರಿಯಾಗಿದೆ. ಬಂಧನದ ಕುರಿತು ನಗರ ಪೊಲೀಸ್ ಕಮಿಷನರ್ ಎನ್ . ಶಶಿಕುಮಾರ್ ಅವರು ಬುಧವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ್ದು, ದೂರಿನ ಆಧಾರದ ಮೇಲೆ ನೀಲ್ ಕಿಶೋರಿಲಾಲ್ ರಾಮ್ ಜಿ ಶಾ ಎಂಬಾತನನ್ನು ಮೊದಲು ಬಂಧಿಸಲಾಗಿದೆ. ಈತ ಯುಕೆಯ ಪ್ರಜೆಯಾಗಿದ್ದು, ಎನ್ ಆರ್ ಐ ಕೋಟಾದಲ್ಲಿ ಡೆಂಟಲ್ ವಿದ್ಯಾರ್ಥಿಯಾಗಿದ್ದು ಕಳೆದ ಹದಿನೈದು ವರ್ಷಗಳಿಂದಲೂ ವಿದ್ಯಾಭ್ಯಾಸ ಮಾಡುತ್ತಿದ್ದು,ಆತನಿಗೆ ಶಿಕ್ಷಣ ಇನ್ನೂ ಪೂರ್ಣ ಗೊಳಿಸಲು ಸಾಧ್ಯವಾಗಿಲ್ಲ. ಗಾಂಜಾ ಪೆಡ್ಲರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿಸಿದ್ದಾರೆ. ನೀಲ್ ಕಿಶೋರಿಲಾಲ್ ವಿದ್ಯಾರ್ಥಿನಿಯರು ಮತ್ತು ವೈದ್ಯರಿಗೆ ಗಾಂಜಾ ಸರಬರಾಜು ಮಾಡುತ್ತಿದ್ದು, ಸಾಕಷ್ಟು ಪೂರಕ ಸಾಕ್ಷಧಾರಗಳಿಂದ ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ಬಂಧಿತ ಆರೋಪಿಗಳು,ಕೇರಳ ಮೂಲದ ಡಾ ಸಮೀರ್ (32), ಡಾ. ನಾಡಿಯಾ…

Read More

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಜಿಲ್ಲೆಯ 357539 ಪಿಹೆಚ್‍ಹೆಚ್ (ಬಿಪಿಎಲ್) ಮತ್ತು 42333 ಅಂತ್ಯೋದಯ ಅನ್ನ ಯೋಜನೆಯ ಪಡಿತರ ಚೀಟಿಗಳಿಗೆ ಜನವರಿ-2023ರ ಮಾಹೆಗೆ ಆಹಾರಧಾನ್ಯ ಬಿಡುಗಡೆಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ (ಪಿಎಂಜಿಕೆಎವೈ)ಯಲ್ಲಿ ಬಿಡುಗಡೆಗೊಳಿಸುತ್ತಿದ್ದ ಆಹಾರಧಾನ್ಯ ಹಂಚಿಕೆಯನ್ನು ಜನವರಿ-2023ರ ಮಾಹೆಯಲ್ಲಿ ಸ್ಥಗತಿಗೊಂಡಿದ್ದು, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ (ಎನ್‍ಎಫ್‍ಎಸ್‍ಎ) ಪಿಹೆಚ್‍ಹೆಚ್ ಪಡಿತರ ಚೀಟಿಯಲ್ಲಿನ ಪ್ರತಿ ಸದಸ್ಯರಿಗೆ ತಲಾ 5 ಕೆಜಿಯಂತೆ ಹಾಗೂ ಪ್ರತಿ ಅಂತ್ಯೋದಯ ಪಡಿತರ ಚೀಟಿಗೆ ತಲಾ 35 ಕೆ.ಜಿ ಅಕ್ಕಿಯನ್ನು ಬಿಡುಗಡೆಗೊಳಿಸಲಾಗಿದೆ. ಪಡಿತರ ಚೀಟಿದಾರರು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಆಹಾರಧಾನ್ಯವನ್ನು ಉಚಿತವಾಗಿ ಪಡೆಯಬಹುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Read More

ಫತೇಹಬಾದ್: 100ಕ್ಕೂ ಹೆಚ್ಚು ಮಹಿಳೆಯರ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿದ್ದ ಜಿಲೇಬಿ ಬಾಬಾನಿಗೆ ಹರ್ಯಾಣದ ಜಿಲ್ಲಾ ನ್ಯಾಯಾಲಯ 14 ವರ್ಷ ಜೈಲು ಶಿಕ್ಷೆ ನೀಡಿ ಆದೇಶಿಸಿದೆ. ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಬಲ್ವಂತ್ ಸಿಂಗ್ ಮಂಗಳವಾರ ಪೋಕ್ಸೋ ಕಾಯ್ದೆಯಡಿ 14 ವರ್ಷ, ಐಟಿ ಕಾಯ್ದೆ ಅಡಿಯಲ್ಲಿ 5 ವರ್ಷ ಹಾಗೂ ಅತ್ಯಾಚಾರ ಪ್ರಕರಣಗಳಲ್ಲಿ ಒಟ್ಟಾಗಿ 14 ವರ್ಷ ಶಿಕ್ಷೆ ವಿಧಿಸಿ ಆದೇಶ ನೀಡಿದರು. ಮಹಿಳೆಯರ ಮೇಲೆ ಅತ್ಯಾಚಾರ ಮಾಡುವುದು, ಅವರ ಅಶ್ಲೀಲ ವಿಡಿಯೊ ಸೆರೆ ಹಿಡಿಯುವುದು 63 ವರ್ಷದ ಜಿಲೇಬಿ ಬಾಬಾ ಅಲಿಯಾಸ್‌ ಅಮರವೀರ್‌ನ ನಿತ್ಯದ ಕಾಯಕವಾಗಿತ್ತು. ವಿಡಿಯೊ ಬಳಸಿಕೊಂಡು ಮಹಿಳೆಯರನ್ನು ಬ್ಲ್ಯಾಕ್‌ಮೇಲ್ ಮಾಡಿ ಶೋಷಿಸುತ್ತಿದ್ದ. ನಾಲ್ವರು ಹೆಣ್ಣುಮಕ್ಕಳು ಮತ್ತು ಇಬ್ಬರು ಗಂಡುಮಕ್ಕಳ ತಂದೆಯಾಗಿದ್ದ ಈತನ ಪತ್ನಿ ನಿಧನರಾಗಿದ್ದರು. ಮೂಲತಃ ಪಂಜಾಬ್‌ನವನಾದ ಈತ 23 ವರ್ಷಗಳ ಹಿಂದೆ ಮನ್ಸಾ ಪಟ್ಟಣದಿಂದ ತೋಹನಾಕ್ಕೆ ಬಂದು ಜಿಲೇಬಿ ಅಂಗಡಿ ತೆರೆದು ಪ್ರಸಿದ್ಧನಾಗಿದ್ದ. ಕೆಲವು ವರ್ಷಗಳ ಬಳಿಕ ತೋಹನಾದಿಂದಲೂ ನಾಪತ್ತೆಯಾಗಿ ದೇವಸ್ಥಾನವೊಂದನ್ನು ಕಟ್ಟಿ ಬಾಬಾ ಅವತಾರದಲ್ಲಿ ಮರಳಿದ್ದ. ಅಲ್ಲಿಂದ…

Read More

ಉಡುಪಿ: ರಾಜ್ಯದ ಮೊದಲ ಸಮಗ್ರ ಕರ್ನಾಟಕ ಯಕ್ಷಗಾನ ಸಮ್ಮೇಳನವು ಫೆಬ್ರವರಿ 11 ಮತ್ತು 12 ರಂದು ಉಡುಪಿಯ ಎಂ.ಜಿ.ಎ. ಕಾಲೇಜು ಆವರಣದಲ್ಲಿ ನಡೆಯಲಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಹಾಗೂ ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನದ ಸಲಹಾ ಸಮಿತಿಯ ಅಧ್ಯಕ್ಷ ವಿ.ಸುನಿಲ್ ಕುಮಾರ್ ಹೇಳಿದರು. ನಗರದ ಎಂ.ಜಿ.ಎ. ಕಾಲೇಜಿನ ಆವರಣ, ರವೀಂದ್ರ ಮಂಟಪದ ಹಿಂಭಾಗದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ತಾತ್ಕಾಲಿಕ ಕಚೇರಿಯ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಯಕ್ಷಗಾನಕ್ಕೆ ತನ್ನದೇ ಆದ ಹಿರಿಮೆ ಗರಿಮೆ ಇದ್ದು, ತುಳುನಾಡಿನಲ್ಲಿ ಇದಕ್ಕೆ ಇನ್ನೂ ಹೆಚ್ಚಿನ ಮಹತ್ವ ಇದೆ. ಯಕ್ಷಗಾನದಲ್ಲಿ ಪ್ರಸ್ತುತ ಇರುವ ಮತ್ತು ಮುಂದಿನ ದಿನದಲ್ಲಿ ಎದುರಾಗುವ ಹೊಸ ರೀತಿಯ ಸವಾಲುಗಳನ್ನು ಎದುರಿಸುವ ಬಗ್ಗೆ, ಹೊಸ ಪೀಳಿಗೆಗೆ ಯಕ್ಷಗಾನದ ಬಗ್ಗೆ ತಿಳಿಸಲು ಸೇರಿದಂತೆ ಯಕ್ಷಗಾನ ಬೆಳವಣಿಗೆ ಕುರಿತಂತೆ ಸಮ್ಮೇಳನದಲ್ಲಿ ಸಮಗ್ರ ಚರ್ಚೆ ನಡೆಯಲಿದೆ ಎಂದರು. ಯಕ್ಷಗಾನ ಕಲಾವಿದರು ಕನ್ನಡ ಸಾಹಿತ್ಯಕ್ಕೆ ತನ್ನದೇ ಆದ ಬಳುವಳಿಯನ್ನು ನೀಡಿದ್ದಾರೆ. ಯಕ್ಷಗಾನ ಪ್ರಸಂಗದಲ್ಲಿ ಯಾವುದೇ…

Read More

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯಲ್ಲಿ ಆಹಾರವನ್ನು ಸೇವಿಸಿದ ಹಲವಾರು ಶಾಲಾ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯ ಮಯೂರೇಶ್ವರ ಬ್ಲಾಕ್‌ ನ ಪ್ರಾಥಮಿಕ ಶಾಲೆಯ ಸುಮಾರು 30 ವಿದ್ಯಾರ್ಥಿಗಳು ಸೋಮವಾರ ಮಧ್ಯಾಹ್ನದ ಊಟದಲ್ಲಿ ಬಡಿಸಿದ ಆಹಾರವನ್ನು ಸೇವಿಸಿದ ನಂತರ ಅಸ್ವಸ್ಥರಾಗಿದ್ದಾರೆ ಎಂದು ಅವರು ಹೇಳಿದ್ದಾರೆ. ಭೋಜನ ಸಿದ್ಧಪಡಿಸಿದ್ದ ಶಾಲೆಯ ಸಿಬ್ಬಂದಿಯೊಬ್ಬರು, ಬೇಳೆ ತುಂಬಿದ ಕಂಟೈನರ್ ಒಂದರಲ್ಲಿ ಹಾವು ಕಂಡುಬಂದಿದೆ ಎಂದು ಹೇಳಿಕೊಂಡಿದ್ದಾರೆ. ಮಕ್ಕಳು ಅಸ್ವಸ್ಥರಾಗಲು ಇದೇ ಕಾರಣ ಎನ್ನಲಾಗಿದೆ. “ಮಕ್ಕಳು ವಾಂತಿ ಮಾಡಲು ಪ್ರಾರಂಭಿಸಿದ್ದರಿಂದ ನಾವು ಅವರನ್ನು ರಾಂಪುರಹತ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸಾಗಿಸಬೇಕಾಯಿತು” ಎಂದು ಅವರು ಹೇಳಿದರು. ಮಧ್ಯಾಹ್ನದ ಊಟ ತಿಂದು ಮಕ್ಕಳು ಅಸ್ವಸ್ಥರಾಗುತ್ತಿರುವ ಬಗ್ಗೆ ಹಲವಾರು ಗ್ರಾಮಸ್ಥರಿಂದ ದೂರುಗಳು ಬಂದಿವೆ ಎಂದು ಬ್ಲಾಕ್ ಅಭಿವೃದ್ಧಿ ಅಧಿಕಾರಿ ದೀಪಾಂಜನ್ ಜನಾ ಸುದ್ದಿಗಾರರಿಗೆ ತಿಳಿಸಿದರು. ಓರ್ವ ವಿದ್ಯಾರ್ಥಿಯನ್ನು ಹೊರತು ಪಡಿಸಿ, ಅಸ್ವಸ್ಥರಾದ ಉಳಿದೆಲ್ಲಾ ವಿದ್ಯಾರ್ಥಿಗಳನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಆ ವಿದ್ಯಾರ್ಥಿಯೂ ಅಪಾಯದಿಂದ ಪಾರಾಗಿದ್ದಾನೆ ಎಂದು…

Read More

ಬೆಂಗಳೂರು: ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್‌ ರಾಡುಗಳು ರಸ್ತೆಗೆ ಉರುಳಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ತಾಯಿ, ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ನಡೆದಿದೆ. ಎಚ್‍ಬಿಆರ್ ಲೇಔಟ್ ಬಳಿ ಮೆಟ್ರೋ ಕಾಮಗಾರಿ ನಡೆಯುತ್ತಿತ್ತು. ಆದರೆ ರಸ್ತೆಯಲ್ಲಿ ಪತಿ, ಪತ್ನಿ ಹಾಗೂ ಮಗು ಬೈಕ್‍ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಮೇಲೆ ಕಬ್ಬಿಣದ ಪಿಲ್ಲರ್‌ಗಳು ಬಿದ್ದಿದೆ . ಇದರ ಪರಿಣಾಮವಾಗಿ ಮಗು ಹಾಗೂ ಪತ್ನಿಯ ಸ್ಥಿತಿ ಗಂಭೀರವಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ತಾಯಿ, ಮಗು ಸಾವನ್ನಪ್ಪಿದ್ದಾರೆ. ಮೃತರನ್ನು ತೇಜಸ್ವಿನಿ (28) ಎರಡೂವರೆ ವರ್ಷದ ವಿಹಾನ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಸಾಗರ : ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ ಸಂಬಂಧ ಸಾಗರ ಪೊಲೀಸರು ಆರೋಪಿ ಸಮೀರ್ ನನ್ನು ಬಂಧಿಸಿದ್ದಾರೆ. ಸೋಮವಾರ ಸಾಗರ ಪಟ್ಟಣ ಬಿ.ಎಚ್ ರಸ್ತೆಯಲ್ಲಿ ನೆಹರು ನಗರ ನಿವಾಸಿ ಸುನೀಲ್ ಎಂಬಾತ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಮಚ್ಚಿನಿಂದ ಹಲ್ಲೆ ನಡೆಸಲು ಯತ್ನಿಸಲಾಗಿದೆ. ಕಿಡಿಗೇಡಿಗಳ ಈ ಕೃತ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಆರೋಪಿ ಸಮೀರ್ ನನ್ನು ಬಂಧಿಸಲು ಪೊಲೀಸರು ಮೂರು ವಿಶೇಷ ತಂಡ ರಚಸಿಸಲಾಗಿತ್ತು. ತಡರಾತ್ರಿ ಶಿವಮೊಗ್ಗದಲ್ಲಿ ಆರೋಪಿ ಸಮೀರ್ ನನ್ನು ಬಂಧಿಸಲಾಗಿದೆ. ಘಟನೆಯಿಂದ ಆಕ್ರೋಶಗೊಂಡಿರುವ ಹಿಂದೂಪರ ಸಂಘಟನೆಗಳು ಜನವರಿ 10 ರ ಇಂದು ಸಾಗರ್ ಬಂದ್ ಗೆ ಕರೆ ನೀಡಿವೆ.

Read More

ಮಂಗಳೂರು;ಶಾಲೆಗೆ ಹೊರಟಿದ್ದ 9ನೇ ತರಗತಿಯ ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಜ.10ರಂದು ನಡೆದಿದೆ. ಕೃಷ್ಣಾಪುರ 7ನೇ ಬ್ಲಾಕ್‌ ನಿವಾಸಿ ಮೊಹಮ್ಮದ್‌ ಹಸೀಮ್‌ (17) ಮೃತ ಬಾಲಕ. ಶಾಲೆಗೆ ಹೋಗಲು ಬೆಳಗ್ಗೆ ಸಿದ್ದನಾಗಿದ್ದ ಹಸೀಮ್‌ಗೆ ಏಕಾಏಕಿ ತಲೆ ಸುತ್ತಿ ಬಿದ್ದಿದ್ದಾನೆ ಮನೆಯವರು ತಕ್ಷಣ ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ವೈದ್ಯರು‌ ಪರೀಕ್ಷಿಸಿ ಮೃತಪಟ್ಟಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೂ ಬದುಕಿಸುವ ಆಸೆಯಿಂದ ಪೋಷಕರು ಮುಕ್ಕದ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದರು.ಅಲ್ಲಿ ವೈದ್ಯರು ಮರಣೋತ್ತರ ಪರೀಕ್ಷೆಗೆ ಪಟ್ಟು ಹಿಡಿದ ಹಿನ್ನೆಲೆ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.ಬಳಿಕ ಮಾಜಿ ಶಾಸಕ ಮೊಯ್ದೀನ್ ಬಾವ ಮಧ್ಯಸ್ಥಿಕೆಯಿಂದ ಪರಿಸ್ಥಿತಿ ತಿಳಿಗೊಳಿಸಲಾಗಿದೆ.

Read More

ಮೈಸೂರು: ವಿವಿಧ ಪ್ರಕರಣದಲ್ಲಿ ಭಾಗಿಯಾಗಿದ್ದಂತ ಸ್ಯಾಂಟ್ರೋ ರವಿ ಪತ್ತೆಗೆ ಮೈಸೂರು ಪೊಲೀಸರು ಮುಂದಾಗಿದ್ದು, . ಆತನ ಬಂಧನಕ್ಕೆ 11 ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಯಾಂಟ್ರೊ ರವಿ ವಿರುದ್ಧ ದಾಖಲಾಗಿರುವ ದೂರಿನ ತನಿಖೆ ನಡೆಸಲು ಮೈಸೂರು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ದೂರು ದಾಖಲಾದ ಬಳಿಕ ಸ್ಯಾಂಟ್ರೊ ರವಿ ನಾಪತ್ತೆಯಾಗಿದ್ದು, ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಸ್ಯಾಂಟ್ರೋ ರವಿ ವಿಚಾರ ರಾಜಕೀಯ ವಾಕ್ಸಮರಕ್ಕೂ ಕಾರಣವಾಗಿದೆ. ಬೆಂಗಳೂರಿನಲ್ಲಿ ‘ಸ್ಯಾಂಟ್ರೋ ರವಿ’ 3 ಫ್ಲಾಟ್ ಗಳ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಮೈಸೂರಿನ ವಿಜಯನಗರ ಠಾಣೆ ಪೊಲೀಸರು ಬೆಂಗಳೂರಿನ ಶೇಷಾದ್ರಿಪುರಂ, ಬಸವನಗುಡಿ, ಟ್ರಿನಿಟಿ ಸರ್ಕಲ್ ನಲ್ಲಿರುವ ಫ್ಲಾಟ್ ಗಳ ಮೇಲೆ ದಾಳಿನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಮಂಜುನಾಥ್ ಆಲಿಯಾಸ್ ಸ್ಯಾಂಟ್ರೋ ರವಿ ಕಳೆದ ನಾಲ್ಕು ತಿಂಗಳ ಹಿಂದೆಯೇ ಫ್ಲಾಟ್ ಖಾಲಿ ಮಾಡಿದ್ದನು, ಫ್ಲ್ಯಾಟ್ ನಲ್ಲಿ…

Read More