ಉಡುಪಿ: ನಿಂತಿದ್ದ ಬಸ್ ಗೆ ದಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಕಿನ್ನಿಮುಲ್ಕಿಯ ಮಂಜುನಾಥ್ ಪೆಟ್ರೋಲ್ ಬಂಕ್ ಬಳಿ ಇಂದು ರಾತ್ರಿ ನಡೆದಿದೆ.ಗಾಯಗೊಂಡ ಯುವಕರ ವಿಳಾಸ ತಿಳಿದುಬಂದಿಲ್ಲ. ಅತೀ ವೇಗದಲ್ಲಿ ಸುಜುಕಿ ಆಕ್ಸಿಸ್ ನಲ್ಲಿ ಬಂದ ಯುವಕರಿಬ್ಬರು ರಸ್ತೆ ಬದಿ ನಿಂತಿದ್ದ ಬಸ್ ಗೆ ಡಿಕ್ಕಿ ಹೊಡೆದಿದ್ದಾರೆ. ಇದರ ಪರಿಣಾಮ ಸ್ಕೂಟರ್ ಸಮೇತ ರಸ್ತೆ ಬಿದ್ದ ಇಬ್ಬರಿಗೂ ಗಂಭೀರ ಗಾಯವಾಗಿದೆ. ಆ ಪೈಕಿ ಓರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಸ್ಥಳೀಯರು ಗಾಯಗೊಂಡ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟರ್ ನಜ್ಜುಗುಜ್ಜಾಗಿದೆ. ಉಡುಪಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
Author: main-admin
ಮಂಗಳೂರು : ಫೊರಮ್‌ಮಾಲ್‌ನಲ್ಲಿರುವ ಶೆರ್‌ಲಾಕ್ ಪಬ್‌ನಲ್ಲಿ ಯುವತಿಯ ಮಾನಭಂಗಕ್ಕೆ ಯತ್ನಿಸಿದ ಘಟನೆ ಆ.3 ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪುತ್ತೂರು ನಿವಾಸಿಗಳಾದ ಮಹೇಶ್, ವಿನಯ್,ನಿತೇಶ್,ಪ್ರೀತೆಶ್ ಅರೆಸ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಸುಮಾರು 22 ವರ್ಷದ ಯುವತಿ ತನ್ನ ಸ್ನೇಹಿತೆಯೊಂದಿಗೆ ಮಂಗಳೂರು ನಗರದ ಪಾಂಡೇಶ್ವರ ಫೊರಮ್‌ಮಾಲ್‌ನಲ್ಲಿ ಕಾರ್ಯಾಚರಿಸುತ್ತಿರುವ ಶೆರ್‌ಲಾಕ್ ಪಬ್‌ಗೆ ವೀಕೆಂಡ್ ಪಾರ್ಟಿಗೆ ಬಂದಿದ್ದು, ರಾತ್ರಿ 10.30ರ ಸುಮಾರಿಗೆ ಆರೋಪಿಗಳು ದೂರುದಾರೆ ಯುವತಿಯೊಂದಿಗೆ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸಿ ಮಾನಭಂಗ ಮಾಡಲು ಯತ್ನಿಸಿದ್ದು, ಆಕೆಯ ಸ್ನೇಹಿತೆಗೂ ಅವಾಚ್ಯ ಶಬ್ದಗಳಿಂದ ಬೈದು. ಬೀಯರ್ ಬಾಟ್ಲಿಯಲ್ಲಿ ಹಲ್ಲೆ ನಡೆಸಲು ಪ್ರಯತ್ನಿಸಿದ ಘಟನೆ ನಡೆದಿದೆ. ಸಂತ್ರಸ್ತ ಯುವತಿ ನೀಡಿದ ದೂರಿನಂತೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಉಡುಪಿ: ಖಾಲಿ ಮನೆಗೆ ನುಗ್ಗಿದ ಕಳ್ಳರು ಲ್ಯಾಪ್‌ಟಾಪ್, ಟ್ಯಾಬ್, ಸುಮಾರು ಅಂದಾಜು 1.5 ಲ.ರೂ. ನಗದು, ಚಿನ್ನಾಭರಣಗಳನ್ನು ಕಳವು ಮಾಡಿ ಹೋದ ಘಟನೆ ನಗರದ ಬುಡ್ನಾರಿನಲ್ಲಿ ಶನಿವಾರ ತಡರಾತ್ರಿ ನಡೆದಿದೆ ಎಂದು ಮನೆಯ ಸಂಬಂಧಿಕರು ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸಿದ್ದು, ಕದ್ದ ಸೊತ್ತುಗಳ ನಿಖರ ಮೌಲ್ಯ ಇನ್ನಷ್ಟೇ ತಿಳಿದುಬರಬೇಕಿದೆ ಎಂದು ನಗರ ಠಾಣೆಯ ಪೊಲೀಸ್ ನಿರೀಕ್ಷಕರು ತಿಳಿಸಿದ್ದಾರೆ. ಕೆ. ಮೊಹಮ್ಮದ್ ಅವರು 6 ತಿಂಗಳ ಹಿಂದೆಯಷ್ಟೇ ನಿಧನ ಹೊಂದಿದ್ದರು. ಕೆ. ಮೊಹಮ್ಮದ್ ಅವರಿಗೆ ಸೇರಿದ ಗ್ರೀಮ್ ಹೌಸ್‌ನಲ್ಲಿ ಈ ಘಟನೆ ನಡೆದಿದೆ. ಕಳವು ನಡೆದ ಮನೆಯಲ್ಲಿ ತಾಯಿ ಹಾಗೂ ಮಗಳು ಇಬ್ಬರೇ ವಾಸಮಾಡಿಕೊಂಡಿದ್ದರು. ಶನಿವಾರ ಸಂಜೆ ತಾಯಿ ಹಾಗೂ ಮಗಳು ಮಂಗಳೂರಿನಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದರು. ಮನೆಯವರು ನಾವಿಲ್ಲದಿದ್ದರೂ ಹೊರ ಭಾಗದಲ್ಲಿ ಸ್ವಚ್ಛ ಮಾಡುವಂತೆ ತಿಳಿಸಿದ ಮೇರೆಗೆ ಕೆಲಸದಾಕೆ ರವಿವಾರ ಬೆಳಗ್ಗೆ ಬಂದಿದ್ದಾಗ ಬಾಗಿಲು ಒಡೆದಿತ್ತು. ಕೂಡಲೇ ಕೆಲಸದಾಕೆ ಈ ವಿಚಾರವನ್ನು ಪಕ್ಕದ ಮನೆಯವರ ಬಳಿ ತಿಳಿಸಿದ ಮೇರೆಗೆ…
ಮಂಗಳೂರು: ಧಕ್ಕೆಯಿಂದ ಆಳ ಸಮುದ್ರ ಮೀನುಗಾರಿಕೆ ತೆರಳಿದ್ದ ಬೋಟ್ ವೊಂದು ಇಂದು ಬೆಳಗಿನ ವೇಳೆ ಸಮುದ್ರ ಮಧ್ಯೆ ಬೆಂಕಿಗಾಹುತಿಯಾದ ಘಟನೆ ನಡೆದಿದ್ದು, ಬೋಟ್‌ನಲ್ಲಿದ್ದ 10 ಮೀನುಗಾರರನ್ನು ರಕ್ಷಿಸಲಾಗಿದೆ. ಮಂಗಳೂರು ಧಕ್ಕೆಯಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಹುಸೈನ್ ಎಂಬವರ ಮಾಲಕತ್ವದ ಬೋಟ್ ಬೆಂಕಿಗಾಹುತಿಯಾಗಿದೆ. ಇಂದು ಬೆಳಗ್ಗಿನ ಜಾವ ಸುಮಾರು 3 ರಿಂದ 4 ಗಂಟೆಯ ವೇಳೆಗೆ ಬೋಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಬೋಟ್‌ನಲ್ಲಿದ್ದ ಮೀನುಗಾರರನ್ನು ಇನ್ನೊಂದು ಬೋಟ್ ನಲ್ಲಿದ್ದವರು ರಕ್ಷಿಸಿದ್ದು, ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಘಟನೆಯ ಬಗ್ಗೆ ಮಾಹಿತಿ ನೀಡಿದ ಬೋಟ್ ಮಾಲಕರು, ಭಾನುವಾರ ಬೆಳಗ್ಗೆ 10 ಮಂದಿ ಮೀನುಗಾರರೊಂದಿಗೆ ನಮ್ಮ ಬೋಟ್ ಮೀನುಗಾರಿಕೆಗೆ ತೆರಳಿದ್ದು, ಸೋಮವಾರ ಬೆಳಗ್ಗಿನ ಹೊತ್ತು ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಧಕ್ಕೆಯಿಂದ ಸುಮಾರು 88 ನಾಟಿಕಲ್ ದೂರದಲ್ಲಿ ಬೋಟ್ ಮುಳುಗಿದೆ. ಜೊತೆಯಲ್ಲಿದ್ದ ಬೋಟ್ ನವರು ಅವಘಡ ಗಮನಿಸಿ ಮೀನುಗಾರರನ್ನು ರಕ್ಷಿಸಿದ್ದಾರೆ ಎಂದು ತಿಳಿಸಿದ್ದಾರೆ.
ಬಂಟ್ವಾಳ ಸಮೀಪ ಯುವಕರ ಎರಡು ತಂಡಗಳು ಹೊಡೆದಾಡಿಕೊಂಡು ಒಂದಷ್ಟು ಯುವಕರು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ಬೈಪಾಸ್‌ನಲ್ಲಿ ಸಂಭವಿಸಿದೆ. ಬಂಟ್ವಾಳ ಹಾಗೂ ಬಿ.ಸಿ. ರೋಡಿನ ಯುವಕರು ಹೊಡೆದಾಡಿಕೊಂಡಿದ್ದಾರೆ. ಮೂರರಿಂದ ನಾಲ್ಕು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಕೆಲವರು ಬಂಟ್ವಾಳ ಆಸ್ಪತ್ರೆಗೆ ದಾಖಲಾಗಿದ್ದು, ಒಂದಿಬ್ಬರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಯಿತು. ಗಾಯಾಳುಗಳ ಸ್ಪಷ್ಟ ವಿವರ ತಿಳಿದುಬಂದಿಲ್ಲ. ಹೊಡೆದಾಡಿಕೊಂಡ ಯುವಕರು ಒಂದೇ ಕೋಮಿಗೆ ಸೇರಿದವರಾಗಿದ್ದು, ಆದರೆ ಯಾವ ಕಾರಣಕ್ಕೆ ಗಲಾಟೆ ನಡೆದಿದೆ ಎಂಬುದು ಗೊತ್ತಾಗಿಲ್ಲ. ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕಾಗಮಿಸಿದ್ದು, ಈ ವೇಳೆ ಹೊಡೆದಾಡಿಕೊಂಡ ಯುವಕರ ಗುಂಪು ಚದುರಿದೆ. ಹೆತ್ತವರಿಗೆ ಬೈದ ವಿಚಾರಕ್ಕೆ ಸಂಬಂಧಿಸಿ ಮಾತುಕತೆಯ ವೇಳೆ ಸಂಘರ್ಷ ಉಂಟಾಗಿದೆ ಎಂದು ಮಾಹಿತಿ ತಿಳಿಯಲಾಗಿದೆ. ಈ ಘಟನೆಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ರಾಜ್ಯದಲ್ಲಿ ಮತ್ತೊಬ್ಬ ಪೊಲೀಸ್ ಇನ್ಸ್ ಪೆಕ್ಟರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ರಾಮನಗರ ಜಿಲ್ಲೆಯ ಬಿಡಿದಿ ಬಳಿ ಪೊಲೀಸ್ ಇನ್ಸ್ ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಿಮ್ಮೇಗೌಡರು ಬೆಂಗಳುರು ಸಿಸಿಬಿ ಆರ್ಥಿಕ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಇದೀಗ ಆತ್ಮಹತ್ಯೆಗೆ ಶರಣಾಗಿದ್ದು, ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬೆಳ್ಳಂ ಬೆಳಗ್ಗೆ ವಾಕಿಂಗ್ ಎಂದು ರಸ್ತೆ ಬದಿ ನಿಂತಿದ್ದ ಮಹಿಳೆಯನ್ನ ವಿಕೃತ ಕಾಮಿ ಯೊಬ್ಬ ಬಲವಂತವಾಗಿ ತಬ್ಬಿ ಹಿಡಿದು ಚುಂಬಿಸಿದ್ದಾನೆ.ನಂತರ ಆಕೆ ತಪ್ಪಿಸಿಕೊಂಡು ಬಂದರೂ ಸಹ ಹಿಂದೆ ಬಂದು ಹಿಂಸೆ ನೀಡಿದ್ದಾನೆ. ಈ ಘಟನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆಗಸ್ಟ್ 02ರ ಬೆಳಗಿನ ಜಾವ ಐದು ಘಂಟೆಗೆ ಕೋಣನಕುಂಟೆ ಬಳಿಯ ಕೃಷ್ಣಾನಗರದಲ್ಲಿ ನಡೆದಿದೆ. ಘಟನೆ ಬಳಿಕ ಸ್ಥಳಕ್ಕೆ ಕೋಣನಕುಂಟೆ ಪೊಲೀಸರು ಭೇಟಿ ನೀಡಿದ್ದಾರೆ. ಆದರೆ, ಪೊಲೀಸರು ಸರಿಯಾದ ರೀತಿ ಕ್ರಮ ತೆಗೆದುಕೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ ಸಿಲಿಕಾನ್ ಸಿಟಿ ಬೆಂಗಳೂರಿನ ಮಹಿಳೆಯರು ಒಂಟಿಯಾಗಿ ಮನೆಯಿಂದ ಹೊರ ಬರುವಂತೆ ಇಲ್ಲವಾ? ಎಂಬ ಪ್ರಶ್ನೆ ಮೂಡಿದೆ. ಹೌದು, ಬೆಳಗ್ಗೆ 5 ಘಂಟೆ ಸಮಯದಲ್ಲಿ ನಡೆದ ಒಂದು ಘಟನೆ ನಿಜಕ್ಕೂ ಭಯ ಹುಟ್ಟಿಸುತ್ತಿದೆ.
ಬಾಲ್ಯವಿವಾಹ ನಿಷೇಧ ಕಾಯಿದೆ -2006 ಈ ದೇಶದ ಪ್ರತಿಯೊಬ್ಬ ಪ್ರಜೆಗೂ ಅವನ ಅಥವಾ ಅವಳ ಧರ್ಮದ ಹೊರತಾಗಿ ಅನ್ವಯಿಸುತ್ತದೆ ಎಂದು ಕೇರಳ ಹೈಕೋರ್ಟ್ ತೀರ್ಪು ನೀಡಿದೆ. ಏಕೆಂದರೆ ಪ್ರತಿಯೊಬ್ಬ ಭಾರತೀಯನು ಮೊದಲು ನಾಗರಿಕನಾಗಿರುತ್ತಾನೆ ಮತ್ತು ನಂತರ ಒಂದು ಧರ್ಮದ ಸದಸ್ಯನಾಗುತ್ತಾನೆ ಎಂದು ಹೇಳಿದೆ. ಪಾಲಕ್ಕಾಡ್‌ನಲ್ಲಿ ಬಾಲ್ಯವಿವಾಹದ ವಿರುದ್ಧ 2012ರಲ್ಲಿ ದಾಖಲಾದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ಕುರಿತು ಇತ್ತೀಚೆಗೆ ನೀಡಿದ ಆದೇಶದಲ್ಲಿ ನ್ಯಾಯಮೂರ್ತಿ ಪಿ.ವಿ. ಕುಂಞಿಕೃಷ್ಣನ್ ಅವರು, ಯಾವುದೇ ಧರ್ಮದ ಭೇದವಿಲ್ಲದೆ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಪಾರ್ಸಿ ಹೀಗೆ ಎಲ್ಲರಿಗೂ ಕಾಯ್ದೆ ಅನ್ವಯವಾಗುತ್ತದೆ ಎಂದಿದ್ದಾರೆ. ಆಗಿನ ಅಪ್ರಾಪ್ತ ಬಾಲಕಿಯ ತಂದೆ ಸೇರಿದಂತೆ ಅರ್ಜಿದಾರರು ನ್ಯಾಯಾಲಯದ ಮುಂದೆ ವಾದಿಸಿದರು. ಮುಸ್ಲಿಂ ಆಗಿರುವ ಆಕೆ ಪ್ರೌಢಾವಸ್ಥೆಯನ್ನು ಪಡೆದ ನಂತರ ಅಂದರೆ 15 ನೇ ವಯಸ್ಸಿನಲ್ಲಿ ಮದುವೆಯಾಗುವ ಧಾರ್ಮಿಕ ಹಕ್ಕನ್ನು ಹೊಂದಿದ್ದಾಳೆ ಎಂದು ಹೇಳಿದ್ದಾರೆ. ಒಬ್ಬ ವ್ಯಕ್ತಿ ಮೊದಲು ಭಾರತದ ಪ್ರಜೆ. ನಂತರ ಅವನ ಧರ್ಮ ಬರುತ್ತದೆ. ಧರ್ಮವು ಗೌಣ ಮತ್ತು ಪೌರತ್ವವು ಮೊದಲು…
ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲ ಸಮೀಪ 80 ಬಡಗಬೆಟ್ಟು ಗ್ರಾಮದ ಖಾಸಗಿ ಲಾಡ್ಜ್ ಒಂದರಲ್ಲಿ ಅಕ್ರಮ, ಲಾಭಕ್ಕಾಗಿ ಬಲವಂತವಾಗಿ ಮಹಿಳೆಯನ್ನು ಇರಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ವಿರುದ್ಧ ಮಣಿಪಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ದಾಳಿಯ ವೇಳೆ ಆರೋಪಿಗಳು ತಪ್ಪಿಸಿಕೊಂಡಿದ್ದಾರೆ ಎಂದು ಮಾಹಿತಿ ತಿಳಿಯಲಾಗಿದೆ.ರೂಮ್‌ನಲ್ಲಿದ್ದ ಪಶ್ಚಿಮ ಬಂಗಾಲ ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ವಾಸವಿರುವ ಸಂತ್ರಸ್ತ ಯುವತಿಯನ್ನು ರಕ್ಷಿಸಲಾಗಿದೆ. ಈಕೆಯಿಂದ ಕೃತ್ಯದ ಬಗ್ಗೆ ಮಾಹಿತಿ ಕಲೆ ಹಾಕಿದ್ದು, ಸಂತ್ರಸ್ತೆ ನೀಡಿರುವ ಮಾಹಿತಿಯಂತೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು: ಅರಣ್ಯಾಧಿಕಾರಿ ರಾಘವ ಪಾಟಾಳಿ, ಅವರ ಪತ್ನಿ ಮತ್ತು ಪುತ್ರಿಯ ವಿರುದ್ದ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣವನ್ನು ವಜಾಗೊಳಿಸಿ ನ್ಯಾಯಾಲಯ ಆದೇಶ ನೀಡಿದೆ. 2016ರಲ್ಲಿ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯಾಗಿದ್ದ ರಾಘವ ಪಾಟಾಳಿ ಅವರ ಮನೆಯ ಮೇಲೆ ಇಡಿ ದಾಳಿ ನಡೆಸಿ ಅವರ ಹಾಗೂ ಅವರ ಪತ್ನಿ, ಪುತ್ರಿಯ ವಿರುದ್ಧ ಪ್ರಕರಣ ದಾಖಲಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ ನಗರದ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ವಿಶೇಷ ನ್ಯಾಯಾಧೀಶೆ ಸಂಧ್ಯಾ ಅವರು ಪ್ರಕರಣವನ್ನು ಸಾಬೀತುಪಡಿಸವಲ್ಲಿ ಜಾರಿ ನಿರ್ದೇಶನಾಲಯ ವಿಫಲವಾಗಿದೆಯೆಂದು ಪ್ರಕರಣವನ್ನು ವಜಾಗೊಳಿಸಿ ಆರೋಪಿಗಳನ್ನು ಬಿಡುಗಡೆಗೊಳಿಸಿ ಅದೇಶಿಸಿದ್ದಾರೆ ಹಾಗೂ ಜಪ್ತಿಪಡಿಸಿಕೊಂಡ ನಗದು ಮತ್ತು ಮುಟ್ಟುಗೊಲು ಮಾಡಿದ್ದ ಕಟ್ಟಡಗಳನ್ನು ರಾಘವ ಪಾಟಾಳಿ ಹಾಗೂ ಕುಟುಂಬದವರಿಗೆ ಹಸ್ತಾಂತರ ಮಾಡುವಂತೆ ಜಾರಿ ನಿರ್ದೆಶನಾಲಯಕ್ಕೆ ನಿರ್ದೇಶನ ನೀಡಿದ್ದಾರೆ. ರಾಘವ ಪಾಟಾಳಿ ಹಾಗೂ ಇತರರ ಪರವಾಗಿ ಬೆಂಗಳೂರಿನ ನ್ಯಾಯವಾದಿ ಶಂಕರ್ ಪಿ. ಹೆಗ್ಡೆ ಹಾಗೂ ಮಂಗಳೂರಿನ ನ್ಯಾಯಾವಾದಿ ಜಲಜಾಕ್ಷಿ ಎಂ. ಎಂ. ವಾದಿಸಿದ್ದರು.










