ಉಡುಪಿ : ಬ್ರೈನ್ ಟ್ಯೂಮರ್‌ನಿಂದಾಗಿ ರಾಜ್ಯ ಮಟ್ಟದ ಕ್ರಿಕೆಟ್ ಆಟಗಾರನೊಬ್ಬ ಸಾವನ್ನಪ್ಪಿದ ಘಟನೆ ಹೆಬ್ರಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಪೆಡೂ೯ರು ಬುಕ್ಕಿಗುಡ್ಡೆ ರಕ್ಷಿತ್ ಶೆಟ್ಟಿ (29) ಎಂದು ಗುರುತಿಸಲಾಗಿದೆ. ಗೆಳೆಯರ ಬಳಗ ಪೆರ್ಡೂರು ತಂಡದ ಮೂಲಕ ರಕ್ಷಿತ್ ಶೆಟ್ಟಿ ಕ್ರಿಕೆಟ್ ಆಟವನ್ನು ಪ್ರಾರಂಭಿಸಿದ್ದರು. ಬಳಿಕ ವಿವಿಧ ಜಿಲ್ಲಾ ಮಟ್ಟದ ತಂಡಗಳಲ್ಲಿ ಆಡಿ ಕ್ರಿಕೆಟ್‌ನಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ರಾಜ್ಯ ಮಟ್ಟದಲ್ಲಿಯೂ ರಕ್ಷಿತ್ ಗುರುತಿಸಿಕೊಂಡಿದ್ದರು. ಬೌಲಿಂಗ್‌ನಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದ ಅವರು, ತಮ್ಮ ಆಕರ್ಷಕ ಶೈಲಿಯ ಬೌಲಿಂಗ್ ಮೂಲಕ ಕ್ರಿಕೆಟ್ ಅಭಿಮಾನಿಗಳಿಂದ ಪ್ರಶಂಸೆ ಗಿಟ್ಟಿಸಿಕೊಂಡಿದ್ದರು. ಎಸ್.ಝಡ್.ಸಿ.ಸಿ ಮತ್ತು ಎಮ್.ಬಿ.ಸಿ.ಸಿ ತಂಡಗಳ ಪರವಾಗಿ ಆಡಿದ್ದರು.
Author: main-admin
ದೇಶದಲ್ಲಿ ರಣಹದ್ದುಗಳ ಸಂಖ್ಯೆ ತೀರಾ ಕಡಿಮೆಯಾಗುತ್ತಿದ್ದು, ಇದೀಗ ಅಪರೂಪದ ಬಿಳಿಯ ರಣಹದ್ದುವೊಂದನ್ನು ಉತ್ತರ ಪ್ರದೇಶದ ಕಾನ್ಪುರದ ಸ್ಥಳೀಯರು ಸೆರೆ ಹಿಡಿದಿದ್ದಾರೆ. ಹಿಮಾಲಯನ್ ಗ್ರಿಫನ್ ಎಂಬ ಜಾತಿಗೆ ಸೇರಿದ ರಣಹದ್ದು ಇದಾಗಿದ್ದು, ಕರ್ನಲ್ಗಂಜ್ನ ಈದ್ಗಾ ಸ್ಮಶಾನದಲ್ಲಿ ಸಿಕ್ಕಿದೆ. ಸುಮಾರು ಒಂದು ವಾರದಿಂದ ಈ ಪ್ರದೇಶದಲ್ಲಿ ಓಡಾಡುತ್ತಿತ್ತು ಎಂದು ಹೇಳಲಾಗುತ್ತಿದೆ. ಸ್ಥಳೀಯರೊಬ್ಬರು ಈ ಬಗ್ಗೆ ಮಾತನಾಡಿದ್ದು, ‘ರಣಹದ್ದು, ಒಂದು ವಾರದಿಂದ ಇಲ್ಲಿತ್ತು. ನಾವು ಅದನ್ನು ಹಿಡಿಯಲು ಪ್ರಯತ್ನಿಸಿದೆವು, ಆದರೆ ಯಶಸ್ವಿಯಾಗಲಿಲ್ಲ. ಆದರೆ ಅದು ಹಾರುತ್ತಾ ಕೆಳಗೆ ಬಂದಂತೆ ಸೆರೆ ಹಿಡಿದಿದ್ದೇವೆ. ಬಳಿಕ ಅರಣ್ಯ ಇಲಾಖೆಗೆ ಮಾಹಿತಿ ನೀಡಿ ಹಸ್ತಾಂತರಿಸಿದ್ದೇವೆ‘ ಎಂದರು. ಸ್ಥಳೀಯರು ಸಿಕ್ಕ ಅಪರೂಪದ ಹಿಮಾಲನ್ ಗ್ರಿಫನ್ ರಣಹದ್ದುವಿನ ಜೊತೆಗೆ ವಿಡಿಯೋ ಮಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಂಗಳೂರು : ಇತ್ತೀಚೆಗಷ್ಟೆ ಅಧಿಕಾರ ವಹಿಸಿಕೊಂಡ ಕರ್ನಾಟಕ ಲೋಕಾಯುಕ್ತದ ಮಂಗಳೂರು ಪೊಲೀಸ್ ಅಧೀಕ್ಷಕ ಲಕ್ಷ್ಮೀಗಣೇಶ್ ವರ್ಗಾವಣೆಯಾಗಿದ್ದಾರೆ. ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಬೆಂಗಳೂರಿನ ಕರ್ನಾಟಕ ಲೋಕಾಯುಕ್ತದ ಪ್ರಧಾನ ಕಚೇರಿಯಲ್ಲಿ ಖಾಲಿ ಇರುವ ಪೊಲೀಸ್ ಅಧೀಕ್ಷಕರ ಹುದ್ದೆಗೆ ಆಡಳಿತದ ಹಿತದೃಷ್ಟಿಯಿಂದ ಆಂತರಿಕ ವರ್ಗಾವಣೆಗೆ ಆದೇಶಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಸದರಿ ಹುದ್ದೆ ಪ್ರಭಾರವನ್ನು ಕರ್ನಾಟಕ ಲೋಕಾಯುಕ್ತದ ಪೊಲೀಸ್ ಉಪಾಧೀಕ್ಷಕರ ಚಲುವರಾಜು ಅವರಿಗೆ ನೀಡಲಾಗಿದೆ. ನೂತನ ಅಧೀಕ್ಷಕರಾಗಿ ಸಿ ಎ ಸೈಮನ್ ಕರ್ತವ್ಯಕ್ಕೆ ನಿಯೋಜನೆಗೊಂಡ ಬಳಿಕ ಹುದ್ದೆಯ ಪ್ರಭಾರವನ್ನು ಅವರಿಗೆ ಹಸ್ತಾಂತರಿಸಲು ಸೂಚಿಸಲಾಗಿದೆ.
ಹಿಂದೂ ಹುಡುಗಿಯ ಜೊತೆ ತಿರುಗಾಟ ನಡೆಸಿದ ಆರೋಪದಲ್ಲಿ ಮುಸ್ಲಿಂ ಯುವಕನೋರ್ವನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರಾಧಾಕೃಷ್ಣ (45), ವಿಶ್ವಾಸ್ ಎನ್. (19) ಎಂದು ಗುರುತಿಸಲಾಗಿದೆ. ಯುವತಿಯ ಜೊತೆ ತಿರುಗಾಡುತ್ತಿದ್ದ ಎಂದು ಆರೋಪಿಸಿ ಯುವಕನೋರ್ವನಿಗೆ ಹಿಂದೂ ಸಂಘಟನೆಗಳ ಕಾರ್ಯಕರ್ತರೆಂದು ಹೇಳಲಾದ ವ್ಯಕ್ತಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿತ್ತು. ಜ.5ರಂದು ಕಲ್ಲುಗುಂಡಿಯ ಹಫೀದ್ ಎಂಬಾತ ಸುಬ್ರಹ್ಮಣ್ಯಕ್ಕೆ ಬಂದಿದ್ದ ವೇಳೆ ಕುಮಾರಧಾರ ಬಳಿಯ ಹಳೆ ಕಟ್ಟಡದ ಕೋಣೆಯೊಳಗೆ ಕೂಡಿ ಹಾಕಿ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಘಟನೆಯಿಂದ ಗಾಯಗೊಂಡ ಹಫೀದ್ ಸುಳ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಹಫೀದ್ ದೂರು ನೀಡಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ವಿಟ್ಲ : ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣಚದಲ್ಲಿ ನಡೆದಿದೆ. ಮೃತ ಬಾಲಕನನ್ನು ಪುಣಚ ಮಣಿಲ ನಿವಾಸಿ, ದೇವಿನಗರ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಹೇಮಂತ್ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಹೇಮಂತ್ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ನೈಟ್ ಶಿಫ್ಟ್‌ನಲ್ಲಿ ಕೆಲಸ ಮಾಡುವ ಪೊಲೀಸರಿಗೆ ಬಿಗ್ ಶಾಕ್ ಎದುರಾಗಿದ್ದು, ಇನ್ಮುಂದೆ ಅಪ್ಪಿತಪ್ಪಿಯೂ ನಿದ್ರೆಗೆ ಜಾರುವಂತಿಲ್ಲ ಈ ಬಗ್ಗೆ ಮೇಲಾಧಿಕಾರಿಗಳು ಕ್ರಮ ಕೈಗೊಳ್ಳಲು ಹೊಸ ಪ್ಲ್ಯಾನ್ ಹಾಕಿದ್ದಾರೆ. ಈಗಾಗಲೇ ಬೆಂಗಳೂರಿನ ಆಗ್ನೇಯ ವಿಭಾಗ ಪೊಲೀಸರು ನಿದ್ದೆ ಮಾಡುತ್ತಾರೆ, ಬೇರೆ ಕಡೆ ಹೋಗಿ ಕಾಲಾಹರಣ ಮಾಡುತ್ತಾರೆ ಎನ್ನುವ ಗಂಭೀರ ಆರೋಪದ ಮೇರೆಗೆ ಪೊಲೀಸರಿಗೆ ಬಾಡಿವೋರ್ನ್ ಕ್ಯಾಮೆರಾ ಅಳವಡಿಸಲಾಗುತ್ತಿದೆ. ಪೊಲೀಸರು ರಾತ್ರಿ 11 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಬಾಡಿವೋರ್ನ್ ಕ್ಯಾಮೆರಾ ಆನ್‌ನಲ್ಲೇ ಇಟ್ಟು ಕೊಂಡಿರಬೇಕು. ಆ ಕ್ಯಾಮೆರಾ ಎಲ್ಲವನ್ನೂ ರೆಕಾರ್ಡ್ ಮಾಡಿಕೊಂಡು ಇರಬೇಕು. ಕ್ಯಾಮೆರಾದಲ್ಲಿ ಈ ಕೃತ್ಯಗಳು ಕಂಡು ಬಂದ್ರೆ ಅಂತಹ ಪೊಲೀಸರ ಮೇಲೆ ಮೇಲಾಧಿಕಾರಿಗಳು ಕ್ರಮ ಕೈಗೊಳ್ಳಲಾಗುತ್ತದೆ ಎಂದು ನೈಟ್ ಶಿಫ್ಟ್ ಪೊಲೀಸರಿಗೆ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ
ಮಡಿಕೇರಿ: ಹೃದಯಾಘಾತದಿಂದ 6ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿದ ದಾರುಣ ಘಟನೆ ಕೊಡಗಿನ ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಮದಲ್ಲಿ ನಡೆದಿದೆ. ಕೀರ್ತನ್(12) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಈತ ಕೊಪ್ಪ ಭಾರತ ಮಾತಾ ಶಾಲಾ ವಿದ್ಯಾರ್ಥಿಯಾಗಿದ್ದ. ಶನಿವಾರ ತಡ ರಾತ್ರಿ ವೇಳೆ ಎದೆ ನೋವೆಂದು ಬಾಲಕ ಹೇಳಿಕೊಂಡಿದ್ದು, ಪೋಷಕರು ಗಾಬರಿಯಿಂದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆ ವೇಳೆಗೆ ಕೀರ್ತನ್ ಮೃತಪಟ್ಟಿದ್ದ ಎಂದು ಹೇಳಲಾಗಿದೆ. ಕೀರ್ತನ್ ನ ತಂದೆ ಮಂಜಾಚಾರಿ ಕೀರ್ತನ್ ಓದುತ್ತಿದ್ದ ಶಾಲೆಯ ಬಸ್ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಘಟನೆ ಅವರ ಇಡೀ ಕುಟುಂಬವನ್ನೇ ಶೋಕ ಸಾಗರದಲ್ಲಿ ಮುಳುಗಿಸಿದೆ. ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದೆ. ಅದ್ರಲ್ಲೂ ಎಳೆಯ ಪ್ರಾಯದ ಮಕ್ಕಳು ಕೂಡ ಹೃದಯಾಘಾತದಿಂದ ಮೃತಪಡುತ್ತಿರುವುದು ಸಾಕಷ್ಟು ಆತಂಕಕ್ಕೆ ಕಾರಣವಾಗಿದೆ.
ಹಲ್ವಾ ಎಂದರೆ ಬಾಯಲ್ಲಿ ನೀರು ಬರುತ್ತದೆಯೇ.? ಹಾಗಾದ್ರೆ ಇಲ್ಲಿದೆ ನೋಡಿ ಒಂದು ರುಚಿಕರವಾದ ಕೊಕೊನಟ್ ಹಲ್ವಾ ಮಾಡುವ ವಿಧಾನ. ಮಕ್ಕಳಿಗಂತೂ ಇದು ತುಂಬ ಇಷ್ಟವಾಗುತ್ತೆ. ಬೇಕಾಗುವ ಸಾಮಗ್ರಿಗಳು: 1 ¼ ಕಪ್ – ತೆಂಗಿನಕಾಯಿ ಹಾಲು, 2/3 ಕಪ್ – ಹಾಲು, 2/3 ಕಪ್ – ಸಕ್ಕರೆ, ¼ ಕಪ್ – ತೆಂಗಿನಕಾಯಿ ತುರಿ, 2 ಟೇಬಲ್ ಸ್ಪೂನ್ – ಬೆಣ್ಣೆ, 2 ಟೇಬಲ್ ಸ್ಪೂನ್ – ಬಾದಾಮಿ, 2 ಟೇಬಲ್ ಸ್ಪೂನ್ – ಪಿಸ್ತಾ. ಮಾಡುವ ವಿಧಾನ: ಗ್ಯಾಸ್ ಮೇಲೆ ಒಂದು ಪ್ಯಾನ್ ಇಟ್ಟು ಅದಕ್ಕೆ ಹಾಲು ಹಾಕಿ ಹದ ಉರಿಯಲ್ಲಿ ಕುದಿಸಿಕೊಳ್ಳಿ. ನಂತರ ಇದಕ್ಕೆ ಸಕ್ಕರೆ ಹಾಗೂ ತೆಂಗಿನಕಾಯಿ ತುರಿ ಸೇರಿಸಿ ಈ ಮಿಶ್ರಣ ದಪ್ಪಗಾಗುವವರೆಗೆ ಚೆನ್ನಾಗಿ ಮಿಕ್ಸ್ ಮಾಡಿ. ನಂತರ ಬೆಣ್ಣೆ ಸೇರಿಸಿ ಮಿಕ್ಸ್ ಮಾಡಿ ಗ್ಯಾಸ್ ಆಫ್ ಮಾಡಿ. ಒಂದು ಪ್ಲೇಟ್ ಗೆ ತುಸು ತುಪ್ಪ ಸವರಿ ಈ ಮಿಶ್ರಣವನ್ನು ಹಾಕಿ ಇದರ ಮೇಲೆ ಬಾದಾಮಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ನೂತನವಾಗಿ 50 ತಾಲೂಕುಗಳನ್ನು ರಚಿಸಿ ಆದೇಶಿಸಿತ್ತು. ಈ ಬೆನ್ನಲ್ಲೇ 8 ತಾಲೂಕುಗಳಲ್ಲಿ ಹೊಸದಾಗಿ ಉಪ ನೋಂದಣಾಧಿಕಾರಿ ಕಚೇರಿ ಪ್ರಾರಂಭಿಸಲು ಆದೇಶಿಸಿದೆ. ಈ ಸಂಬಂಧ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ನೂತನವಾಗಿ ರಚಿಸಲಾಗಿರುವ 50 ತಾಲೂಕುಗಳ ಪೈಕಿ 34 ತಾಲೂಕುಗಳಲ್ಲಿ ಹೊಸದಾಗಿ ಉಪ ನೋಂದಣಿ ಕಚೇರಿಗಳನ್ನು ಪ್ರಾರಂಭಿಸಲು ಪ್ರಸ್ತಾಪಿಸಲಾಗಿರುತ್ತದೆ ಎಂದಿದ್ದಾರೆ. ಪ್ರಸ್ತುತ ಇರುವ ಮಾನದಂಡಗಳನ್ನು ಪೂರೈಸದಿದ್ದರೂ ಸಹ, ಹೊಸದಾಗಿ ರಚನೆಯಾಗಿರುವ ಹೊಸ ಉಪ ನೋಂದಣಿ ಕಚೇರಿಗಳನ್ನು ಪ್ರಾರಂಭಿಸಲು ಅನುಮತಿ ನೀಡುವಂತೆ ಹಾಗೂ ಪ್ರತಿ ಉಪ ನೋಂದಣಿ ಕಚೇರಿಗೆ ಹುದ್ದೆಗಳನ್ನು ಮಂಜೂರು ಮಾಡುವಂತೆ ನೋಂದಣಿ ಮಹಾಪರಿ ವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತರು ಕೋರಿರುತ್ತಾರೆ ಎಂದು ಹೇಳಿದ್ದಾರೆ. ಈ ಎಲ್ಲಾ ಪ್ರಸ್ತಾವನೆ ಹಿನ್ನಲೆಯಲ್ಲಿ ಹೊಸದಾಗಿ ರಚಿಸಲಾಗಿರುವ ತಾಲೂಕುಗಳ ಪೈಕಿ 8 ತಾಲೂಕುಗಳಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಹೊಸ ಉಪ ನೋಂದಣಾಧಿಕಾರಿಗಳ ಕಚೇರಿಗಳನ್ನು ಹೊಸದಾಗಿ ಪ್ರಾರಂಭಿಸಲು ಅನುಮೋದನೆ ನೀಡಿ ಆದೇಶಿಸಿದ್ದಾರೆ. ಈ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲೆಯ ಕಾಗವಾಡ,…
ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಪ್ರಯಾಣಿಕನಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನವೆಂಬರ್ 26ರಂದು ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕ ಶಂಕರ್ ಮಿಶ್ರಾ, ಸಹ ಪ್ರಯಾಣಿಕ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ. ಆರೋಪಿ ಶಂಕರ್ ಮಿಶ್ರಾನನ್ನು ದೆಹಲಿ ಪೊಲೀಸರು ನಿನ್ನೆ ಬೆಂಗಳೂರಿನಲ್ಲಿ ಬಂಧಿಸಿದ್ದರು. ಇಂದು ಶಂಕರ್ ಮಿಶ್ರಾನನ್ನು ಪೊಲೀಸರು ದೆಹಲಿಯ ಪಟಿಯಾಲಾ ಹೌಸ್ ಕೋರ್ಟ್ ಗೆ ಹಾಜರುಪಡಿಸಿದ್ದು, ಕೋರ್ಟ್ ಆರೋಪಿ ಮಿಶ್ರಾಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.