Author: main-admin

ಮಂಗಳೂರು : ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿರುವ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್‌ಸಿ-2 ಪೋಕ್ಸೊ ವಿಶೇಷ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ. ಬೆಳ್ತಂಗಡಿ ತಾಲೂಕು ಕೊಕ್ರಾಡಿಯ ಯೋಗೀಶ (26) ಶಿಕ್ಷೆಗೊಳಗಾದವನು. 2020ರಲ್ಲಿ ಆರೋಪಿ ಬಾಲಕಿಯನ್ನು ಪುಸಲಾಯಿಸಿ ಕಾಡು ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದನು. ಪರಿಣಾಮ ಬಾಲಕಿ ಗರ್ಭಿಣಿಯಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾ‌ರ್ ಬಿ. ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣವನ್ನು ಕೈಗೆತ್ತಿಕೊಂಡ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್‌ಸಿ-2 ಪೋಕ್ಸೊ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿತ್ತು. 13 ಸಾಕ್ಷಿದಾರರನ್ನು ವಿಚಾರಿಸಿ 29 ದಾಖಲೆಗಳನ್ನು ಗುರುತಿಸಲಾಗಿತ್ತು. ಡಿಎನ್ಎ ವರದಿಗಳು, ಸಾಕ್ಷ್ಯ, ಪೂರಕ ಸಾಕ್ಷ್ಯಪರಿಗಣಿಸಿ ಹಾಗೂ ವಾದ ವಿವಾದ ಆಲಿಸಿದ ನ್ಯಾಯಾಲಯವು ಆರೋಪಿ ವಿರುದ್ಧ ಅಪರಾಧ ಸಾಬೀತಾಗಿದೆ ಎಂದು ತೀರ್ಮಾನಿಸಿದೆ. ಆ.2ರಂದು ನ್ಯಾಯಾಧೀಶರಾದ…

Read More

ನವದೆಹಲಿ:ವಾಯು, ರಸ್ತೆ, ರೈಲ್ವೆ ಮತ್ತು ಜಲಮಾರ್ಗಗಳಂತಹ ವಿವಿಧ ಪ್ರಯಾಣ ವಿಧಾನಗಳ ಮೂಲಕ ಮಾನವ ಅಂಗಗಳನ್ನು ತಡೆರಹಿತವಾಗಿ ಸಾಗಿಸಲು ಕೇಂದ್ರ ಆರೋಗ್ಯ ಸಚಿವಾಲಯವು ಮೊದಲ ಬಾರಿಗೆ ಎಸ್‌ಒಪಿಗಳನ್ನು ಹೊರತಂದಿದೆ. ಸರ್ಕಾರ ಹೊರಡಿಸಿದ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ ದೇಶಾದ್ಯಂತ ಅಂಗಾಂಗ ಕಸಿಯಲ್ಲಿ ತೊಡಗಿರುವವರಿಗೆ ಮಾರ್ಗದರ್ಶಿ ದಾಖಲೆಯಾಗಿ ಕಾರ್ಯನಿರ್ವಹಿಸುತ್ತದೆ. “ಅಂಗಾಂಗ ಸಾಗಣೆ ಪ್ರಕ್ರಿಯೆಯನ್ನು ಸುವ್ಯವಸ್ಥಿತಗೊಳಿಸುವ ಮೂಲಕ, ಅಮೂಲ್ಯ ಅಂಗಗಳ ಬಳಕೆಯನ್ನು ಗರಿಷ್ಠಗೊಳಿಸುವ ಗುರಿಯನ್ನು ನಾವು ಹೊಂದಿದ್ದೇವೆ ಮತ್ತು ಜೀವ ಉಳಿಸುವ ಕಸಿಗಾಗಿ ಕಾಯುತ್ತಿರುವ ಅಸಂಖ್ಯಾತ ರೋಗಿಗಳಿಗೆ ಭರವಸೆಯನ್ನು ನೀಡುತ್ತೇವೆ. “ಈ ಎಸ್‌ಒಪಿಗಳು ದೇಶಾದ್ಯಂತ ಅಂಗಾಂಗ ಮರುಪಡೆಯುವಿಕೆ ಮತ್ತು ಕಸಿ ಸಂಸ್ಥೆಗಳಿಗೆ ಮಾರ್ಗಸೂಚಿಯಾಗಿದ್ದು, ಉತ್ತಮ ಅಭ್ಯಾಸಗಳು ಮತ್ತು ಗುಣಮಟ್ಟದ ಮಾನದಂಡಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳುತ್ತವೆ” ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ಅಪೂರ್ವ ಚಂದ್ರ ಹೇಳಿದರು. ಅಂಗಾಂಗ ದಾನಿ ಮತ್ತು ಅಂಗ ಸ್ವೀಕರಿಸುವವರು ಇಬ್ಬರೂ ಒಂದೇ ನಗರದೊಳಗಿನ ಅಥವಾ ವಿಭಿನ್ನ ನಗರಗಳಲ್ಲಿನ ವಿಭಿನ್ನ ಆಸ್ಪತ್ರೆಗಳಲ್ಲಿದ್ದಾಗ ಜೀವಂತ ಅಂಗವನ್ನು ಆಸ್ಪತ್ರೆಗಳ ನಡುವೆ ಸಾಗಿಸಬೇಕಾಗುತ್ತದೆ. ವಿಮಾನದ ಮೂಲಕ ಸಾಗಿಸುವ ಎಸ್‌ಒಪಿಗಳ ಪ್ರಕಾರ, ಮಾನವ…

Read More

ಪುತ್ತೂರು : ದಶಕದ ಹಿಂದೆ ಮಹಿಳೆಯೋರ್ವರ ಕತ್ತಿನಲ್ಲಿದ್ದ ಚಿನ್ನದ ಆಭರಣವನ್ನು ಎಗರಿಸಿದ್ದ ಸರಗಳ್ಳನ( chain snatcher) ನ್ನು 12 ವರ್ಷಗಳ ಬಳಿಕ ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. 2012 ನೇ ಇಸವಿಯಲ್ಲಿ ದಕ್ಷಿಣ ಕನ್ನಡದ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿತೊಟ್ಟು ಎಂಬಲ್ಲಿ ಮಹಿಳೆಯೋರ್ವರ ಕತ್ತಿನಲ್ಲಿದ್ದ ಚಿನ್ನದ ಆಭರಣವನ್ನು ಆರೋಪಿ ಎಳೆದೊಯ್ದಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಬಂಧನಕ್ಕೊಳಗಾಗಿದ್ದ ಆರೋಪಿ ಮಹ್ಮದ್ ಶಾಫಿ ಬಳಿಕ ನ್ಯಾಯಾಲಯದಲ್ಲಿನ ವಿಚಾರಣೆಗೆ ಹಾಜರಾಗದೆ ತಲೆ ಮರೆಯಿಸಿಕೊಂಡಿದ್ದ . ತಲೆ ಮರೆಯಿಸಿಕೊಂಡಿದ್ದ ಮಹಮ್ಮದ್ ಶಾಫಿಯನ್ನು 12 ವರ್ಷಗಳ ಬಳಿಕ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸುರತ್ಕಲ್ ಬೊಕ್ಕಬೆಟ್ಟು ಗ್ರಾಮದ ಕೃಷ್ಣಾಪುರ 8 ನೇ ಬ್ಲಾಕ್ ನಿವಾಸಿಯಾಗಿರುವ ಆರೋಪಿ ಮಹಮ್ಮದ್ ಶಾಫಿ 12 ವರ್ಷಗಳ ಹಿಂದೆ ಗೋಳಿತೊಟ್ಟು ಎಂಬಲ್ಲಿ ಬೈಕಿನಲ್ಲಿ ಬಂದು ಪಾದಾಚಾರಿ ಮಹಿಳೆಯ ಚಿನ್ನಾಭರಣವನ್ನು ಎಳೆದೊಯ್ದಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಬಂಧನಕ್ಕೊಳಗಾಗಿದ್ದ ಈತ ಬಳಿಕ ನ್ಯಾಯಾಲಯದಲ್ಲಿನ ವಿಚಾರಣೆಗೆ ಹಾಜರಾಗದೆ ತಲೆ ಮರೆಯಿಸಿಕೊಂಡಿದ್ದ .ಆರೋಪಿಯ ಜಾಡು ಹಿಡಿದ ಪೊಲೀಸರು…

Read More

ಕುಂದಾಪುರ: ಗಂಗೊಳ್ಳಿಯ ಸಮುದ್ರತೀರದಲ್ಲಿ ಗೋಣಿಚೀಲದಲ್ಲಿ ಕಟ್ಟಿ ಎಸೆಯಲಾದ ಗೋವಿನ ಅವಶೇಷಗಳು ಪತ್ತೆಯಾಗಿದ್ದು, ಇಲ್ಲಿನ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಗಂಗೊಳ್ಳಿಯ ಕಡಲ ತೀರದಲ್ಲಿ ಗೋಣೆ ಚೀಲದಲ್ಲಿ ದನದ ಅವಶೇ? ತೇಲಿಕೊಂಡು ಬಂದಿದ್ದು, ಚೀಲದಲ್ಲಿ ದನದ ತಲೆಯ ಭಾಗ ಹಾಗೂ ದವಡೆಯ ಮೂಳೆ ಹಾಗೂ ದನದ ಕಳೆಬರಗಳು ಪತ್ತೆಯಾಗಿದೆ. ಗೋವನ್ನು ವಧೆ ಮಾಡಿ ಅದರ ಕಳೆಬರವನ್ನು ಚೀಲದಲ್ಲಿ ಹಾಕಿ ಸಮುದ್ರಕ್ಕೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಪದೇ ಪದೇ ಗೋವನ್ನು ಕಳ್ಳತನ ಮಡಿ, ಗೋವನ್ನು ವಧೆ ಮಾಡಿ ಅವರ ಕಳೆಬರವನ್ನು ಸಮುದ್ರ ಹಾಗೂ ನದಿಯಲ್ಲಿ ಎಸೆದು ವಿಕೃತಿ ಮೆರೆದು ಹಿಂದುಗಳ ಭಾವನೆಗೆ ನೋವುಂಟು ಮಾಡುತ್ತಿರುವ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಹಿಂದು ಪರ ಸಂಘಟನೆಗಳು ಆಗ್ರಹಿಸಿವೆ. ಈ ಬಗ್ಗೆ ಮೋಹನ್ ಎಂಬುವರು ನೀಡಿದ ದೂರಿನಂತೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು:- ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಆಶ್ರಯ ನೀಡಿದ್ದ ಇಬ್ಬರು ಆರೋಪಿಗಳ ವಿರುದ್ಧ ಎನ್​​ಐಎ ಚಾರ್ಜ್​​ಶೀಟ್​​ ಸಲ್ಲಿಸಿದೆ. ಆರೋಪಿ ಮುಸ್ತಫಾ ಪೈಚಾರ್​ಗೆ ಆಶ್ರಯ ನೀಡಿದ್ದ ಹಿನ್ನೆಲೆ ಮನ್ಸೂರ್ ಪಾಷಾ ಮತ್ತು ಹೆಚ್​ವೈ ರಿಯಾಜ್ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಲಾಗಿದೆ. ಆರೋಪಿಗೆ ಮನ್ಸೂರ್, ರಿಯಾಜ್​ ಆಶ್ರಯ ನೀಡಿದ್ದರು. ಮೇ 5ರಂದು ಸಕಲೇಶಪುರದಲ್ಲಿ ಮುಸ್ತಫಾ ನನ್ನು ಬಂಧಿಸಿದ್ದು, ವಿದೇಶಕ್ಕೆ ಪರಾರಿಯಾಗುಲು ಯತ್ನಿಸಿದ್ದ ರಿಯಾಜ್​ ನನ್ನು ಜೂ.3ರಂದು ಮುಂಬೈ ಏರ್​​ಪೋರ್ಟ್​ನಲ್ಲಿ ಬಂಧಿಸಲಾಗಿತ್ತು. ನನ್ನ ಪತಿಯ ಹತ್ಯೆಯಲ್ಲಿ ಮುಸ್ತಫಾ ಪೈಚಾರ್​ನೇ ಪ್ರಮುಖ ಆರೋಪಿಯಾಗಿದ್ದಾನೆ. ಅವನನ್ನು ಬಂಧಿಸಿದ್ದಕ್ಕೆ ನಮಗೆ ತುಂಬಾ ಖುಷಿಯಾಗಿದೆ ಎಂದು ಪ್ರವೀಣ ನೆಟ್ಟಾರು ಪತ್ನಿ ನೂತನಾ ಹೇಳಿದ್ದರು. ಈ ಪ್ರಕರಣದ ಎಲ್ಲ ಆರೋಪಿಗಳಿಗೂ ಮರಣ ದಂಡನೆಯಾಗಬೇಕು. ಸಮಾಜದಲ್ಲಿ ಇಂತಹ ಪ್ರಕರಣ ಮರುಕಳಿಸಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ‌ ಪ್ರವೀಣ್ ನೆಟ್ಟಾರು ಕೊಲೆ ಕೇಸ್​ನಲ್ಲಿ ಇದುವರೆಗೆ ಎನ್​ಐಎ 21 ಆರೋಪಿಗಳನ್ನು ಅರೆಸ್ಟ್ ಮಾಡಿ ಆರೋಪಿಗಳ ವಿರುದ್ದ ಚಾರ್ಶೀಟ್ ಸಲ್ಲಿಕೆ ಮಾಡಿತ್ತು.

Read More

ಮಂಜೇಶ್ವರ: ವರ್ಕಾಡಿ ಗ್ರಾಮ ಪಂಚಾಯತ್ ಗೋಳಪಟ್ಟ 7 ನೇ ವಾರ್ಡ್ ಬಾಕ್ರಬೈಲ್ ಬಳಿಯ ಕಜೆ ಎಂಬಲ್ಲಿ ಮಳೆಗೆ ಸುಮಾರು 2 ಫೀಟ್ ನೆಲ ಕುಸಿದು ಹೋಗಿದೆ. ಬಜಿಲಾಡಿ ಎಂಬ ಎತ್ತರದ ಗುಡ್ಡ ಪ್ರದೇಶದ ಕೆಳಗಡೆ ಹಲವಾರು ಮನೆಗಳಿವೆ. ಅಲ್ಲದೆ ಪಕ್ಕದಲ್ಲಿರುವ ಗುಡ್ಡೆ ಕೂಡಾ ಕುಸಿಯುವ ಭೀತಿಯಲ್ಲಿದ್ದು, ಈ ಪರಿಸರ ಪ್ರದೇಶ ಇದೀಗ ಅಪಾಯದಲ್ಲಿದ್ದೆ. ಇಲ್ಲಿ 5 ಮನೆಗಳಿದ್ದು, ಮನೆಮಂದಿ ಆತಂಕದಿಂದ ದಿನ ಕಳೆಯುವಂತಾಗಿದೆ. ಈ ಬಗ್ಗೆ ವರ್ಕಾಡಿ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ, ಸದಸ್ಯರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿದುಬಂದಿದೆ. ಪಂಚಾಯತ್ ಅಧಿಕಾರಿಗಳು ಇವರಿಗೆ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಲಿದ್ದಾರೆ ಎಂಬುದು ಇನ್ನಷ್ಟೇ ತಿಳಿದುಬರಬೇಕಾಗಿದೆ.

Read More

ಬೆಳ್ತಂಗಡಿ : ಮನೆಯ ಬಾವಿಗೆ ಜಾರಿ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಬೆಳ್ತಂಗಡಿ ನಗರದ ಗುರುದೇವ ಕಾಲೇಜ್ ರಸ್ತೆಯಲ್ಲಿನ ಸೀಡ್ ಫಾರ್ಮ್ ಬಳಿ ಶುಕ್ರವಾರ ಸಂಜೆ ನಡೆದಿದೆ. ಸುಮಾಲಿನಿ ಜೈನ್ (63) ಮನೆಯ ಬಾವಿಗೆ ಬಿದ್ದು ಮೃತಪಟ್ಟವರು. ಮಹಿಳೆ ಬಾವಿಗೆ ಬಿದ್ದಿರುವುದನ್ನು ಅವರ ಪತಿ ಗಮನಿಸಿ ತಕ್ಷಣ ಆಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಆ್ಯಂಬುಲೆನ್ಸ್ ಸಿಬ್ಬಂದಿ ಜಲೀಲ್ ಹಾಗೂ ಅಲ್ಪಾಸ್ ಲಾಯಿಲ ಸೇರಿ ಬಾವಿಗೆ ಹಗ್ಗ ಹಾಕಿ ಸುಮಾಲಿನಿ ಜೈನ್‌ರನ್ನು ಮೇಲಕ್ಕೆತ್ತಿದ್ದಾರೆ. ಆ ತಕ್ಷಣವೇ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಿದರೂ ಆ ವೇಳೆಗೆ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು: ವಿದ್ಯಾರ್ಥಿಗಳ ಗುಂಪೊಂದು ನಡುರಸ್ತೆಯಲ್ಲಿಯೇ ಪರಸ್ಪರ ಹೊಡೆದಾಡಿಕೊಂಡ ಘಟನೆ ಮಂಗಳೂರಿನ ಪ್ರತಿಷ್ಠಿತ ಅಲೋಶಿಯಸ್ ಕಾಲೇಜು ಬಳಿ ನಡೆದಿದೆ. ಕಾಲೇಜು ಗೇಟ್ ಮುಂಭಾಗದ ರಸ್ತೆಯಲ್ಲಿ ಎರಡು ಪ್ರತ್ಯೇಕ ಬಣ್ಣದ ಯುನಿಫಾರಂ ಧರಿಸಿರುವ ವಿದ್ಯಾರ್ಥಿಗಳ ಗುಂಪಿನ ನಡುವೆ ಹೊಡೆದಾಟ ನಡೆದಿದೆ. ಕಾಲೇಜು ಬಿಟ್ಟ ಬಳಿಕ ಕ್ಷುಲ್ಲಕ ಕಾರಣಕ್ಕಾಗಿ ವಿದ್ಯಾರ್ಥಿಗಳ ಗುಂಪಿನ ನಡುವೆ ಹೊಡೆದಾಟ ನಡೆದಿದೆ ಎನ್ನಲಾಗಿದೆ. ಆದರೆ ವಿದ್ಯಾರ್ಥಿಗಳ ನಡುವೆ ಹಿಗ್ಗಾಮುಗ್ಗಾವಾಗಿ ಹಲ್ಲೆ ನಡೆಸುತ್ತಿರುವುದು ವೀಡಿಯೋದಲ್ಲಿ ದಾಖಲಾಗಿದೆ. ಸದ್ಯ ಹೊಡೆದಾಟದ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗುತ್ತಿದೆ.

Read More

ಮಂಗಳೂರು: ಪ್ರವಾಹ ಪೀಡಿತವಾಗಿರುವ ಪ್ರದೇಶಗಳಿಗೆ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರತಿ ವರ್ಷ ಅದ್ಯಪಾಡಿಯಲ್ಲಿ ಫಲ್ಗುಣಿ ನದಿಯ ನೆರೆ ಪ್ರವಾಹದಿಂದ ಸಂತ್ರಸ್ತರಾಗುತ್ತಿರುವ ಬಗ್ಗೆ ಸ್ಥಳೀಯರು ಸಚಿವರ ಗಮನ ಸೆಳೆದರು. ಅಕ್ಕ ಪಕ್ಕದ ಗ್ರಾಮಗಳು ಜಲಾವೃತವಾಗಿರುವ ಬಗ್ಗೆಯೂ ಮಾಹಿತಿ ನೀಡಿದರು. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಕೆತ್ತಿಕಲ್ ಗುಡ್ಡ ಪ್ರದೇಶಕ್ಕೆ ಭೇಟಿ ನೀಡಿದ ದಿನೇಶ್ ಗುಂಡೂರಾವ್ ಅಲ್ಲಿನ ಸ್ಥಿತಿ ನೋಡಿ ಶಾಕ್ ಆದರು. ಈ ವೇಳೆ ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಇಲ್ಲಿನ ಸ್ಥಿತ ನೋಡಿದರೆ ಭಯದ ವಾತಾವರಣ ನಿರ್ಮಾಣವಾಗಿದೆ. ಹೆದ್ದಾರಿ ಕಾಮಗಾರಿ ಹೆಸರಿನಲ್ಲಿ ಮಣ್ಣು ಗಣಿಗಾರಿಕೆ ಮಾಡಲಾಗಿದೆ. ದೊಡ್ಡ ಪ್ರಮಾಣದ ಲೋಪದೋಷವಾಗಿರುವುದು ಕಂಡು ಬಂದಿದೆ ಎಂದು ಸಚಿವರು ಹೇಳಿದರು. ಇಲ್ಲಿ ಗುಡ್ಡ ಅಪಾಯಕಾರಿಯಾಗಿರುವ ಬಗ್ಗೆ ಫೆಬ್ರವರಿ ತಿಂಗಳಲ್ಲೇ ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ಮುನ್ಸೂಚನೆ ನೀಡಿತ್ತು. ಪಾಲಿಕೆ ಯಾವ ಕ್ರಮ ಕೈಗೊಂಡಿದೆ ಎಂದು ಪರಿಶೀಲನೆ ನಡೆಸಲಾಗುವುದು. ಗಣಿ ಭೂ ವಿಜ್ಞಾನ ಇಲಾಖೆ…

Read More

ಉಡುಪಿ: ಅಪಾರ್ಟ್ ಮೆಂಟ್‌ನ ಫ್ಲಾಟ್‌ವೊಂದಕ್ಕೆ ನಾಲ್ವರು ಮುಸುಕುಧಾರಿಗಳು ನುಗ್ಗಲು ಯತ್ನಿಸಿ, ವಿಫಲರಾಗಿ ಸ್ಥಳದಿಂದ ಹಿಂತಿರುಗಿದ ಘಟನೆ ಉಡುಪಿಯ ಬ್ರಹ್ಮಗಿರಿಯಲ್ಲಿ ನಡೆದಿದೆ. ನಾಲ್ವರು ಮುಸುಕುಧಾರಿ ವ್ಯಕ್ತಿಗಳು ರಾಡ್‌ಗಳನ್ನು ಹಿಡಿದು ಶಸ್ತ್ರಸಜ್ಜಿತವಾಗಿ ಅಪಾರ್ಟ್ ಮೆಂಟ್‌ಗೆ ನುಗ್ಗಲು ಯತ್ನಿಸಿದ್ದಾರೆ. ಈ ಘಟನೆಯ ಸಿಸಿಟಿವಿ ದೃಶ್ಯಗಳು ಲಭ್ಯವಾಗಿದ್ದು, ಇದರಲ್ಲಿ ನಾಲ್ವರು ವ್ಯಕ್ತಿಗಳು ತಮ್ಮ ಮುಖವನ್ನು ಬಟ್ಟೆಯಿಂದ ಮುಚ್ಚಿಕೊಂಡು ಫ್ಲಾಟ್‌ನ ಒಳಗೆ ನುಗ್ಗಲು ಯತ್ನಿಸಿರುವುದು, ಅಪಾರ್ಟ್ ಮೆಂಟ್‌ಗೆ ಪ್ರವೇಶಿಸಲು ವಿಫಲರಾಗಿ ಸ್ಥಳದಿಂದ ಹಿಂತಿರುಗಿರುವುದು ಕಂಡುಬಂದಿದೆ. ಮುಸುಕುಧಾರಿಗಳು ಒಳನುಗ್ಗಲು ಯತ್ನಿಸಿದ ಫ್ಲಾಟ್‌ನಲ್ಲಿ ವಯಸ್ಸಾದ ದಂಪತಿಗಳು ವಾಸಿಸುತ್ತಿದ್ದರು. ಈ ದಂಪತಿಗಳು ಒಂದು ವಾರದ ಹಿಂದಷ್ಟೇ ಮುಂಬೈಗೆ ಪ್ರಯಾಣ ಬೆಳೆಸಿದ್ದರು. ಇದೀಗ ಈ ದಂಪತಿಗಳ ಫ್ಲಾಟ್‌ಗೆ ಮುಸುಕುಧಾರಿಗಳು ನುಗ್ಗಲು ಪ್ರವೇಶಿಸುತ್ತಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ನಾಲ್ವರು ಶಸ್ತ್ರಸಜ್ಜಿತ ಮುಸುಕುಧಾರಿಗಳು ಹಲವಾರು ಖಾಲಿ ಅಪಾರ್ಟ್ ಮೆಂಟ್‌ಗಳಿಗೆ ನುಗ್ಗಿ ಬೆಲೆಬಾಳುವ ವಸ್ತುಗಳ ಹುಡುಕಾಡುವ ಜೊತೆಗೆ ಅಪಾರ ಹಾನಿಯನ್ನುಂಟು ಮಾಡಿರುತ್ತಾರೆ. ಇನ್ನು ಈ ನಾಲ್ವರು ಒಂದೇ ಬಡಾವಣೆಯ ಒಟ್ಟು ಮೂರು ಅಪಾರ್ಟ್ ಮೆಂಟ್‌ ಕಟ್ಟಡಗಳಲ್ಲಿ ದರೋಡೆಗೆ…

Read More