ಕಾಸರಗೋಡು: ಮೈಸೂರುನಿಂದ ಕೇರಳಕ್ಕೆ ಪ್ರವಾಸಕ್ಕೆಂದು ಹೊರಟಿದ್ದ ಬಸ್ಸೊಂದು ಪನತ್ತಡಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗುಚಿ ಬಿದ್ದ ಪರಿಣಾಮ 40 ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಕಾಸರಗೊಂಡಿನಲ್ಲಿ ವರದಿಯಾಗಿದೆ. ಘಟನೆಯಿಂದ ಗಾಯಗೊಂಡವರನ್ನು ಪೂಡಂಕಲ್ಲು ತಾಲೂಕಿನ ಆಸ್ಪತ್ರೆ ಹಾಗೂ ಕಞಂಗಾಡ್ ನಲ್ಲಿರುವ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೈಸೂರಿನ ಬಾಬಾ ಅಟಾಮಿಕ್ ರಿಸರ್ಚ್ ಸೆಂಟರ್ ನ ಸಿಬ್ಬಂದಿಗಳು ಕೇರಳದ ರಾಣಿಪುರಕ್ಕೆ ತೆರಳುತ್ತಿದ್ದಾಗ ಈ ಅಪಘಡ ಸಂಭವಿಸಿದೆ ಎನ್ನಲಾಗಿದೆ. ಬಸ್ಸಿನಲ್ಲಿ 49 ಮಂದಿ ಪ್ರಯಾಣಿಕರಿದ್ದರೆನ್ನಲಾಗಿದೆ. ಬಸ್ಸಿನಲ್ಲಿ ಸಿಲುಕಿದವರನ್ನು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ಸಾಗಿಸಲಾಯಿತು.
Author: main-admin
ಮಂಗಳೂರು : ಹೊಸ ವರ್ಷದ ಹಿಂದಿನ ದಿನ ಆನ್ಲೈನ್ ಮೂಲಕ ತರಿಸಿದ ಊಟ ತಿಂದು 19 ವರ್ಷ ವಯಸ್ಸಿನ ವಿಧ್ಯಾರ್ಥಿನಿ ಸಾವನಪ್ಪಿರುವ ಘಟನೆ ಕಾಸರಗೋಡಿನ ಪೆರುಂಬಳ ಬೇನೂರಿನಲ್ಲಿ ನಡೆದಿದೆ. ಬೇನೂರು ತಲಕ್ಲಾಯಿಯ ಅಂಜುಶ್ರಿ ಪಾರ್ವತಿ ( 19) ಮೃತಪಟ್ಟ ವಿದ್ಯಾರ್ಥಿನಿ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಶಾಲೆಯ ಬಿ .ಕಾಂ ವಿದ್ಯಾರ್ಥಿನಿಯಾಗಿದ್ದಳು . ಆರು ದಿನಗಳ ಹಿಂದೆ ಹೋಟೆಲೊಂದರಿಂದ ಆನ್ ಲೈನ್ ಮೂಲಕ ಖರೀದಿಸಿದ್ದ ಆಹಾರವನ್ನು ಸೇವಿಸಿದ್ದು, ಬಳಿಕ ಅಸ್ವಸ್ಥ ಗೊಂಡಿದ್ದರು ಕಾಸರಗೋಡಿನ ಆಸ್ಪತ್ರೆಗೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಿಗ್ಗೆ ಮೃತಪಟ್ಟಿದ್ದಾಳೆ. ಹೊಸವರ್ಷದ ಹಿನ್ನಲೆಯಲ್ಲಿ ಹೋಟೆಲ್ ನಿಂದ ಆನ್ ಲೈನ್ ಮೂಲಕ ಆಹಾರ ಖರೀದಿಸಿ ಕುಟುಂಬದವರ ಜೊತೆ ಸೇವಿಸಿದ್ದು ಆಹಾರ ಸೇವಿಸಿದ್ದ ಎಲ್ಲರಲ್ಲಿ ಅಸ್ವಸ್ಥತೆ ಕಂಡುಬಂದಿತ್ತು . ಆದರೆ ಅಂಜುಶ್ರಿ ತೀವ್ರ ಅಸ್ವಸ್ಥತೆ ಗೊಂಡ ಹಿನ್ನಲೆಯಲ್ಲಿ ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು . ಆದರೆ ಸ್ಥಿತಿ…
ಮಂಗಳೂರು: ಕಬಕ ಪುತ್ತೂರು ರೈಲ್ವೇ ಯಾರ್ಡ್‌ನಲ್ಲಿ ಹೊಸದಾಗಿ ನಿರ್ಮಿಸಿರುವ ಸೇತುವೆ ಸ್ತಂಭದಲ್ಲಿ ಎರಡು ತಾತ್ಕಾಲಿಕ ಗರ್ಡರ್‌ಗಳನ್ನು ಅಳವಡಿಸುವ ಕಾಮಗಾರಿಯಿಂದ ಕೆಲವು ರೈಲು ಸೇವೆ ವ್ಯತ್ಯಯವಾಗಲಿದೆ. ನಂ. 06489 ಮಂಗಳೂರು ಸೆಂಟ್ರಲ್ -ಸುಬ್ರಹ್ಮಣ್ಯ ರೋಡ್ ಎಕ್ಸ್‌ಪ್ರೆಸ್ ರೈಲು ಹಾಗೂ ನಂ.06488 ಸುಬ್ರಹ್ಮಣ್ಯ ರೋಡ್-ಮಂಗಳೂರು ಸೆಂಟ್ರಲ್ ರೈಲು ಜ. 7ರಂದು ರದ್ದಾಗಲಿವೆ. ನಂ. 06485 ಮಂಗಳೂರು ಸೆಂಟ್ರಲ್- ಕಬಕ ಪುತ್ತೂರು ಎಕ್ಸ್‌ಪ್ರೆಸ್ ನೇರಳಕಟ್ಟೆ ಹಾಗೂ ಕಬಕ ಪುತ್ತೂರು ಮಧ್ಯೆ ಜ. 7ರಂದು ರದ್ದು. ನಂ. 06484 ಕಬಕ ಪುತ್ತೂರು -ಮಂಗಳೂರು ಸೆಂಟ್ರಲ್ ರೈಲು ಜ.7ರಂದು ನೇರಳಕಟ್ಟೆಯಿಂದ ಬೆಳಗ್ಗೆ 8.10ಕ್ಕೆ ಪ್ರಯಾಣ ಆರಂಭಿಸಲಿದೆ. ನಂ. 10107 ಮಡಗಾಂವ್ ಜಂಕ್ಷನ್ -ಮಂಗಳೂರು ಸೆಂಟ್ರಲ್ ಡೆಮು ಎಕ್ಸ್ ಪ್ರಸ್ ರೈಲನ್ನು ಜ. 7ರಂದು ತೋಕೂರು ಹಾಗೂ ಮಂಗಳೂರು ಸೆಂಟ್ರಲ್ ಮಧ್ಯೆ ರದ್ದುಗೊಳಿಸಲಾಗಿದೆ. ನಂ. 10108 ಮಂಗಳೂರು ಸೆಂಟ್ರಲ್ -ಮಡಗಾಂವ್ ಜಂಕ್ಷನ್ ಮೆಮು ರೈಲು ಮಂಗಳೂರು ಸೆಂಟ್ರಲ್-ತೋಕೂರು ಮಧ್ಯೆ 7ರಂದು ರದ್ದಾಗಲಿದ್ದು, ರೈಲು ತೋಕೂರಿನಿಂದ ಅಪರಾಹ್ನ 3.40ಕ್ಕೆ ಹೊರಡಲಿದೆ. ನಂ. 07377…
ಮಂಗಳೂರು : ಮಂಗಳೂರು ನಗರದ ಪಚ್ಚನಾಡಿಯಲ್ಲಿರುವ ಮಹಾನಗರ ಪಾಲಿಕೆ ತಾಜ್ಯ ವಿಲೇವಾರಿ ಘಟಕ (ಡಂಪಿಂಗ್ ಯಾರ್ಡ್) ಸಮೀಪ ಇಂದು ಅಪರಾಹ್ನ 2 ಗಂಟೆ ಸುಮಾರಿಗೆ ಅಗ್ನಿ ಅವಘಡ ಕಾಣಿಸಿಕೊಂಡ ಹಿನ್ನಲೆ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ. ಸದ್ಯ ಬೆಂಕಿ ಆರಿಸಲು ಅಗ್ನಿಶಾಮಕ ದಳ ಎನ್ ಎಮ್ ಪಿಟಿ, ಕದ್ರಿ ಹಾಗು ಪಾಂಡೇಶ್ವರದ ಏಳೆಂಟು ಅಗ್ನಿಶಾಮಕದಳದ ವಾಹನಗಳು ಸ್ಥಳಕ್ಕೆ ಆಗಮಿಸಿ ಕಾರ್ಯಾಚರಿಸಿ ಬೆಂಕಿ ನಂದಿಸುತ್ತಿದ್ದಾರೆ. ಸುತ್ತಮುತ್ತಲಿನ ಪ್ರದೇಶ ಸಂಪೂರ್ಣವಾಗಿ ಹೊಗೆಯಿಂದ ಆವೃತ್ತವಾಗಿದ್ದು ಕಣ್ಣು ಉರಿ, ಉಸಿರಾಟದ ಸಮಸ್ಯೆ ಕೂಡಾ ಪ್ರಾರಂಭವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ. ಹತ್ತಿರದಲ್ಲೇ ಶಿಕ್ಷಣ ಸಂಸ್ಥೆಗಳು ಕೂಡಾ ಇದೆ. ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಹಾಕುವ ರಾಸಾಯಿನಿಕಗಳಿಂದ ಕೂಡಾ ಅನೇಕ ರೀತಿಯ ತೊಂದರೆ ಎದುರಾಗುತ್ತಿದೆ. ಸ್ಥಳಕ್ಕೆ ಶಾಸಕ ಭರತ್ ಶೆಟ್ಟಿ, ಮೇಯರ್ ಜಯಾನಂದ ಅಂಚನ್, ಆಯುಕ್ತ ಶ್ರೀಧರ್ ಭೇಟಿ ನೀಡಿದ್ದಾರೆ. ಬೆಂಕಿ ದುರಂತದಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಶಾಸಕ ಭರತ್ ಶೆಟ್ಟಿ ಬೇಟಿ ಮಾಡಿದ್ದು, ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ…
ದಾವಣಗೆರೆ: ನಿನ್ನೆಯಿಂದ ಶಿವಮೊಗ್ಗ ತುಂಗಾ ತೀರದ ಟ್ರಯಲ್ ಬ್ಲಾಸ್ಟ್ ಹಾಗೂ ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್ ಸಂಬಂಧದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ. ನಿನ್ನ ಶಿವಮೊಗ್ಗ ಮತ್ತು ಮಂಗಳೂರಿನಲ್ಲಿ ತಲಾ ಒಬ್ಬರನ್ನು ವಶಕ್ಕೆ ಪಡೆದಿದ್ದಂತ ಎನ್‌ಐಎ ಅಧಿಕಾರಿಗಳು, ಇಂದು ಹೊನ್ನಾಳಿಯಲ್ಲಿ ಯುವಕನೋರ್ವನನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದ ತುಂಗಾ ತೀರದಲ್ಲಿ ನಡೆದಂತ ಟ್ರಯಲ್ ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧ ಎನ್‌ಐಎ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ನಿನ್ನೆ ರಾಜ್ಯಾಧ್ಯಂತ 6 ಕಡೆಯಲ್ಲಿ ದಾಳಿ ನಡೆಸಿ, ಮಹತ್ವದ ಮಾಹಿತಿ, ದಾಖಲೆಗಳನ್ನು ಪತ್ತೆ ಹಚ್ಚಿದ್ದರು. ಇಂದು ತನಿಖೆ ಮುಂದುವರೆಸಿರುವಂತ ಎನ್‌ಐಎ ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಯುವಕ ನದೀಮ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ಮೂಲಕ ಶಂಕಿತ ಆರೋಪಿಯ ಜೊತೆಗೆ ಸಂಪರ್ಕ ಹೊಂದಿದ್ದ ಹಿನ್ನಲೆಯಲ್ಲಿ ಎನ್‌ಐಎ ನದೀಮ್ ನನ್ನು ಹೊನ್ನಾಳಿಯಲ್ಲಿ ವಶಕ್ಕೆ ಪಡೆದಿದೆ. ಈ ಬಳಿಕ ಅಜ್ಞಾನತ ಸ್ಥಳಕ್ಕೆ ಕರೆದೊಯ್ದು ಆತನನ್ನು ವಿಚಾರಣೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ.
ಕಲ್ಲುಗುಂಡಿಯ ಅನ್ಯಕೋಮಿನ ಹುಡುಗನೊಬ್ಬ ಸುಬ್ರಹ್ಮಣ್ಯದ ಹಿಂದೂ ಹುಡುಗಿ ಜತೆ ಇನ್ ಸ್ಟಾಗ್ರಾಂನಲ್ಲಿ ಪರಿಚಯವಾಗಿ ಸುಬ್ರಹ್ಮಣ್ಯ ಬಸ್ ಸ್ಟ್ಯಾಂಡ್ ನಲ್ಲಿ ಭೇಟಿಯಾಗಿರುವ ಘಟನೆ ನಡೆದಿದೆ.ಗುಂಪಿನಿಂದ ಹಲ್ಲೆಯಾಗಿದ್ದು ಅನ್ಯಕೋಮಿನ ಯುವಕನಿಗೆ ಹಿಗ್ಗಾ ಮುಗ್ಗಾ ಥಳಿಸಲಾಗಿದೆ. ಆತ ಗಂಭೀರ ಗಾಯಗೊಂಡು ಸುಳ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದು ಬಂದಿದೆ. ಇನ್ ಸ್ಟಾಗ್ರಾಂ ಮೂಲಕ ಇಬ್ಬರಿಗೂ ಪರಿಚಯವಾಗಿದ್ದು, ಇವರಿಬ್ಬರೂ ಸುಬ್ರಹ್ಮಣ್ಯ ಬಸ್ ಸ್ಟಾಂಡ್ ನಲ್ಲಿ ಭೇಟಿಯಾಗಿದ್ದಾರೆ.ಈ ಸಂದರ್ಭ ಕುಮಾರಧಾರ ಹತ್ತಿರ ಗುಂಪಿನಿಂದ ಹಲ್ಲೆ ನಡೆದಿದ್ದು, ಯುವಕನ ತಲೆಗೆ ಏಟು ಬಿದ್ದು, ಆತ ಗಂಭೀರ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು : ವಿಧಾನಸಭೆ ಚುನಾವಣೆ ಹೊತ್ತಲ್ಲೇ 1.9 ಕೋಟಿ ನಕಲಿ ಹಣ ಸಿಕ್ಕಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಸಂಬಂಧ ಪಿಚ್ಚಿ ಮುತ್ತು ಎಂಬಾತನನ್ನು ಪೊಲೀಸರು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಡಿಸೆಂಬರ್ 28 ರಂದು ಈತ ಬ್ಯಾಗ್ ನಲ್ಲಿ ನಕಲಿ ನೋಟುಗಳನ್ನು ತುಂಬಿಸಿಕೊಂಡು ಬರುತ್ತಿರುವ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ರೆಡ್ ಹ್ಯಾಂಡ್ ಆಗಿ ಈತನನ್ನು ಬಲೆಗೆ ಬೀಳಿಸಿದ್ದಾರೆ. 2000 ಮುಖ ಬೆಲೆಯ 623 ನಕಲಿ ನೋಟು ಹಾಗೂ 500 ಮುಖ ಬೆಲೆಗೆ 174 ನಕಲಿ ನೋಟುಗಳು ಪತ್ತೆಯಾಗಿದೆ. ಆರೋಪಿಯು ತಮಿಳುನಾಡಿನ ತೂತ್ತುಕುಡಿಯಿಂದ ನಕಲಿ ನೋಟುಗಳನ್ನು ತರುತ್ತಿದ್ದನು ಎನ್ನಲಾಗಿದೆ. ಈ ಕುರಿತು ಸಿದ್ದಾಪುರ ಪೊಲೀಸರು ಕೇಸ್ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಹಣ ಎಲ್ಲಿಂದ ಬಂತು ಎಂಬುದರ ಬಗ್ಗೆ ಆರೋಪಿ ಬಾಯ್ಬಿಟ್ಟಿಲ್ಲ ಎಂಬುದಾಗಿ ತಿಳಿದು ಬಂದಿದೆ. ತನಿಖೆ ಮುಂದುವರೆದಿದೆ.
ಮಂಗಳೂರು: ಮುಸ್ಲಿಂ ಸಮುದಾಯಕ್ಕೆ ಸೇರಿದ ಯುವಕನೊಬ್ಬ ಲಿಂಗ ಪರಿವರ್ತನೆ (Gender change) ಮಾಡಿಸಿಕೊಂಡು ಹೆಣ್ಣಾಗಿದ್ದಾನೆ. ಈ ನಡುವೆ ಆತ ತಾನು ಈ ರೀತಿ ಲಿಂಗ ಪರಿವರ್ತನೆ ಮಾಡಿಕೊಳ್ಳಲು ದೇರಳಕಟ್ಟೆಯ ಗೆಳೆಯನೊಬ್ಬ ಕಾರಣ ಎಂದು ಹೇಳಿದ್ದು, ಆ ಭಾಗದ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ವಿಚಾರವನ್ನು ಆತ ವಿಡಿಯೊ ಕ್ಲಿಪ್ ಒಂದರಲ್ಲಿ ಹೇಳಿಕೊಂಡಿದ್ದಾನೆ. ಯೂಟ್ಯೂಬ್ ಕ್ಲಿಪ್‌ನಲ್ಲಿ ಏನಿದೆ?ತುಮಕೂರಿನ ನಿಝಾಂ ಎಂಬ ಯುವಕ ಮನೆಗೆ ಬಾರದೇ ಹಲವು ತಿಂಗಳುಗಳು ಕಳೆದಿದೆ. ಇದರಿಂದ ತಾಯಿ ಸಂಬಂಧಿಕರ ಮೂಲಕ ಯುವಕನ ಮೊಬೈಲ್‌ಗೆ ಕರೆ ಮಾಡಿದಾಗ, ತಾನು ಹುಡುಗಿಯಾಗಲು ಬಯಸಿದವನು. ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೇನೆ. ತೃತೀಯ ಲಿಂಗಿಗಳ ಜತೆಗೆ ನೆಲೆಸಿದ್ದೇನೆ. ಈ ರೂಪದಲ್ಲಿ ಮರಳಿ ಊರಿಗೆ ಬಂದಲ್ಲಿ ತಾಯಿ ಹಾಗೂ ಸಂಬಂಧಿಕರಿಗೆ ನೋವಾಗುವುದು. ಅದಕ್ಕಾಗಿ ಬರಲು ಬೇಸರವಾಗುತ್ತಿದೆ ಎಂದಿದ್ದಾನೆ. ಇದೇ ವೇಳೆ ಯುವಕನ ಸಂಬಂಧಿಕರು ಇಂತಹ ಶಸ್ತ್ರಚಿಕಿತ್ಸೆ ನಡೆಸಲು ಕಾರಣ ಯಾರು? ಎಂಬುದನ್ನು ಪ್ರಶ್ನಿಸಿದಾಗ, ತನ್ನ ಗೆಳೆಯ ದೇರಳಕಟ್ಟೆಯವ. ತನ್ನನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸುವಂತೆ ಮಾಡಿದ್ದಾನೆ ಎಂದು ನಿಝಾಂ ಹೇಳಿದ್ದಾನೆ. ಸದ್ಯ…
ಉಡುಪಿ : ಶಿವಮೊಗ್ಗದ ಟ್ರಯಲ್ ಬ್ಲಾಸ್ಟ್ ಮತ್ತು ಮಂಗಳೂರಿನ ಕುಕ್ಕರ್ ಬ್ಲಾಸ್ಟ್ ಆರೋಪಿಗಳ ಜೊತೆ ಲಿಂಕ್ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ತಂಡ ಎನ್‌ಐಎ ಇಂದು ಶಂಕಿತ ವಿದ್ಯಾರ್ಥಿ ರಿಹಾನ್ ಶೇಖ್ ನ ಉಡುಪಿ ಜಿಲ್ಲೆಯ ಬ್ರಹ್ಮಾವರದ ವಾರಂಬಳ್ಳಿಯಲ್ಲಿರುವ ಫ್ಲಾಟ್ ಮಹಜರು ನಡೆಸಿದ್ದಾರೆ. ಬೆಂಗಳೂರಿನಿಂದ ಆಗಮಿಸಿದ್ದ ಎನ್ ಐ ಎ ಅಧಿಕಾರಿಗಳ ತಂಡ ದಿನ ಪೂರ್ತಿ ಫ್ಲ್ಯಾಟ್ ನಲ್ಲಿ ಮಹಜರು ನಡೆಸಿ ಕೆಲ ಅಮೂಲ್ಯ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಇದೇ ಸಂದರ್ಭ ರಿಹಾನ್ ಕುಟುಂಬದ ಸದಸ್ಯರನ್ನು ವಿಚಾರಣೆ ನಡೆಸಿ ಕೆಲ ವಿಷಯಗಳನ್ನು ಸಂಗ್ರಹಿಸಿದ್ದಾರೆ. ಬಳಿಕ ಸಂಜೆ ಹೊತ್ತಿಗೆ ಶಂಕಿತ ಯುವಕನನ್ನು ಬೆಂಗಳೂರಿಗೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.
ಉಡುಪಿ: ಇಲ್ಲಿನ ಇಂದ್ರಾಳಿ ರೈಲ್ವೇ ಗೋಡೌನ್ ನ ಹಿಂಬದಿಯಲ್ಲಿ ದಾಸ್ತಾನು ಇರಿಸಲಾಗಿದ್ದ ರೈಲ್ವೇ ಹಳಿಗೆ ಬಳಸಾಗುವ ರಬ್ಬರ್ ಗೆ ಬೆಂಕಿ ಹತ್ತಿಕೊಂಡ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಪರಿಣಾಮ ಇಂದ್ರಾಳಿ ಪರಿಸರದಲ್ಲಿ ದಟ್ಟ ಹೊಗೆ ಎದಿದ್ದು ಆತಂಕ ಮೂಡಿಸಿದೆ. ಗೋಡೌನ್ ನ ಹಿಂಬದಿಯಲ್ಲಿ ದಾಸ್ತಾನು ಇರಿಸಲಾಗಿದ್ದ ಲಕ್ಷಾಂತರ ರೂ ಮೌಲ್ಯದ ರಬ್ಬರ್ ಬೆಂಕಿಗಾಹುತಿಯಾಗಿದೆ. ಎರಡು ಅಗ್ನಿಶಾಮಕ ದಳದ ವಾಹನಗಳು, ಹತ್ತಕ್ಕೂ ಹೆಚ್ಚು ಮಂದಿ ಬೆಂಕಿ ನಂದಿಸಲು ಶ್ರಮಿಸಿದ್ದಾರೆ. ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಸಂತ್ ಕುಮಾರ್ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.