Author: main-admin

ಪುತ್ತೂರು: ಒಂದು ಕಡೆ ರಾಜ್ಯದಲ್ಲಿ ರಣಭೀಕರ ಮಳೆಗೆ ಜನ ತತ್ತರಿಸಿದ್ದು, ಕಳೆದ ಕೆಲವು ದಿನಗಳಿಂದ ಶಿರಾಡಿ ಘಾಟ್ ನಲ್ಲಿ 5 ಬಾರಿ ಭೂ ಕುಸಿತ ಉಂಟಾಗಿತ್ತು. ಇದೀಗ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಗುಡ್ಡ ಕುಸಿದ ಪರಿಣಾಮ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ. ಸದ್ಯ ಮಣ್ಣು ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ. ಹೌದು ಭಾರಿ ಮಳೆಯಿಂದಾಗಿ ದಕ್ಷಿಣ ಒಳನಾಡು, ಕರಾವಳಿ, ಉತ್ತರ ಕರ್ನಾಟಕ ಭಾಗದ ಬಹುತೇಕ ಕಡೆಗಳಲ್ಲಿ ಅವಾಂತರ ಸೃಷ್ಟಿಯಾಗಿದೆ. ಇದೀಗ ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲ ಎಂಬಲ್ಲಿ ಹೆದ್ದಾರಿ ಮೇಲೆ ಶುಕ್ರವಾರ ಮುಂಜಾನೆ ಗುಡ್ಡ ಕುಸಿದು ಬಿದ್ದಿದೆ. ಪರಿಣಾಮವಾಗಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಸದ್ಯ ಮಡಿಕೇರಿ ಹಾಗೂ ಮೈಸೂರು ಕಡೆಗೆ ಪ್ರಯಾಣಿಸುವವರಿಗೆ ಬದಲಿ ರಸ್ತೆಯಾಗಿ ಪುತ್ತೂರು ಸಿಟಿ ಮೂಲಕ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಒಂದು ಗುಡ್ಡ ಕುಸಿತವು, ನಸುಕಿನ ಜಾವದಲ್ಲಿ ನಡೆದಿದ್ದರಿಂದ ಈ ವೇಳೆ ವಾಹನ ಸಂಚಾರ ಅಷ್ಟಾಗಿರಲಿಲ್ಲ ಹಾಗಾಗಿ ಬಾರಿ ಅನಾಹುತ ಒಂದು ತಪ್ಪಿದೆ ಎಂದು ಹೇಳಲಾಗುತ್ತಿದೆ.ಸದ್ಯ…

Read More

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಅಪ್ರಾಪ್ತ ವಯಸ್ಕ ಬಾಲಕಿಯೋರ್ವಳನ್ನು ಪುಸಲಾಯಿಸಿ ಭಿನ್ನ ಕೋಮಿನ ಯುವಕರು ಪಾರ್ಕ್‌ವೊಂದಕ್ಕೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಘಟನೆ ಸಂಭವಿಸಿದೆ. ಈ ಘಟನೆಗೆ ಸಂಬಂಧಿಸಿ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಫೈಜಲ್‌ ಹಾಗೂ ಲಿಕೇಶ್‌ ಬಂಧಿತ ಆರೋಪಿಗಳಾಗಿದ್ದು, ಅಫೀಕ್‌ ತಲೆಮರೆಸಿಕೊಂಡಿದ್ದಾನೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬಾಲಕಿಯನ್ನು ಪಾರ್ಕಿಗೆ ಬರುವಂತೆ ಪುಸಲಾಯಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ದೂರಿನ ಆಧಾರದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದರು. ಪೊಲೀಸರು ಆರೋಪಿಗಳನ್ನು ವಿಚಾರಣೆ ನಡೆಸಿದ್ದಾರೆ.

Read More

ಮಂಗಳೂರು: ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ (ಆಗಸ್ಟ್ 2) ಶುಕ್ರವಾರದಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲೈ ಮುಗಿಲನ್ ರಜೆ ಘೋಷಿಸಿದ್ದಾರೆ.

Read More

ಉಡುಪಿ : ಸ್ಕೂಟರ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ನಿವೃತ್ತ ಮುಖ್ಯೋಪಾಧ್ಯಾಯರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಮಲ್ಪೆ ಕಲ್ಮಾಡಿಯಲ್ಲಿ ಇಂದು ಸಂಭವಿಸಿದೆ. ಮೃತರನ್ನು ಮಲ್ಪೆ ಕೊಪ್ಪಲತೋಟ ನಿವಾಸಿ ಭಾಸ್ಕರ್ ಎಂದು ಗುರುತಿಸಲಾಗಿದೆ. ಅವರು ಇಂದು ಮಧ್ಯಾಹ್ನ ತನ್ನ ದ್ವಿಚಕ್ರ ವಾಹನದಲ್ಲಿ ಆದಿಆಡುಪಿಯಿಂದ ಮಲ್ಪೆ ಕಡೆ ಹೋಗುತ್ತಿದ್ದರು. ಕಲ್ಮಾಡಿಗೆ ತಲುಪುತ್ತಿದ್ದಂತೆ ಬ್ರೇಕ್ ಫೈಲ್ ಆದ ಖಾಸಗಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಇದರಿಂದ ಬಸ್ ಹಿಂಬದಿಯ ಚಕ್ರಕ್ಕೆ ಸಿಲುಕಿದ ಭಾಸ್ಕರ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮಲ್ಪೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Read More

ಮಂಗಳೂರು: ಜಿಲ್ಲಾ ಕಾರಾಗೃಹದ 40 ಮಂದಿ ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವನೆ ಮಾಡಿರುವುದು ಪರೀಕ್ಷೆ ವೇಳೆ ಗೊತ್ತಾಗಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ತಿಳಿಸಿದ್ದಾರೆ. ಇತ್ತೀಚೆಗೆ ಜೈಲಿಗೆ ದಾಳಿ ನಡೆಸಿದಾಗ 25 ಮೊಬೈಲ್‌, ಗಾಂಜಾ ಸ್ಯಾಚೆಟ್‌ಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಕಾರಾಗೃಹದಲ್ಲಿರುವ 389 ವಿಚಾರಣಾಧೀನ ಕೈದಿಗಳ ಪೈಕಿ 110 ಮಂದಿಯನ್ನು ಡ್ರಗ್ಸ್‌ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ 40 ಮಂದಿಯಲ್ಲಿ ಪಾಸಿಟಿವ್‌ ಬಂದಿದೆ. ಉಳಿದವರನ್ನು ಕೂಡ ಪರೀಕ್ಷೆಗೆ ಒಳಪಡಿಸಲಾಗುವುದು ಎಂದವರು ತಿಳಿಸಿದ್ದಾರೆ.

Read More

ಬೆಂಗಳೂರು: ಆಗಸ್ಟ್‌ ತಿಂಗಳು ಆರಂಭವಾಗುತ್ತಲೆ ತೈಲ ಮಾರುಕಟ್ಟೆ ಕಂಪನಿಗಳು ಭಾರತೀಯ ಮನೆಗಳಿಗೆ ಅಡುಗೆ ಅನಿಲ ಅಥವಾ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಗಳನ್ನು ಏರಿಕೆ ಮಾಡಿದೆ. 14.2 ಕೆಜಿ LPG ಸಿಲಿಂಡರ್‌ಗಳ ಬೆಲೆಗಳು ಯಾವುದೇ ಬದಲಾವಣೆ ಮಾಡದಿದ್ದರೂ, ಆಗಸ್ಟ್ 1, 2024 ರಿಂದ ಜಾರಿಗೆ ಬರುವಂತೆ 19 ಕೆಜಿ ಸಿಲಿಂಡರ್‌ಗಳ ಬೆಲೆಗಳಲ್ಲಿ 8.50 ರೂ. ಏರಿಕೆ ಮಾಡಿದೆ. 14 ಕೆಜಿಯ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ದೆಹಲಿಯಿಂದ ಮುಂಬೈವರೆಗೆ ಎಲ್​ಪಿಜಿ ಗ್ಯಾಸ್ ಸಿಲಿಂಡರ್​ಗಳ ಬೆಲೆ ಏರಿಕೆಯಾಗಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ವೆಬ್​ಸೈಟ್ ಪ್ರಕಾರ, ದೇಶದ ರಾಜಧಾನಿ ದೆಹಲಿಯಲ್ಲಿ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಈಗ 1652.50 ರೂ.ಗೆ ಲಭ್ಯವಿದೆ. ಮೊದಲು ಈ ಬೆಲೆ 1646 ರೂ. ಇಲ್ಲಿ 6.50 ರೂ. ಇತ್ತು. ಈ ಸಿಲಿಂಡರ್ ಈಗ ಕೋಲ್ಕತ್ತಾದಲ್ಲಿ 1764.50 ರೂ.ಗೆ ಲಭ್ಯವಿದೆ. ಚೆನ್ನೈನಲ್ಲಿ 1817 ರೂ. ಆಗಿದೆ. 19 ಕೆಜಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಹಳೆಯ ಬೆಲೆ ಕೋಲ್ಕತ್ತಾದಲ್ಲಿ 1756…

Read More

ಬೆಂಗಳೂರು: ಯಾವುದೇ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಠಾಣೆಗೆ ಕರೆಸಿಕೊಳ್ಳುವಾಗ ನೀಡುವ ನೋಟಿಸ್‌ನಲ್ಲಿ ಎಫ್‌ಐಆರ್ ಪ್ರತಿ, ಅಪರಾಧ ಏನು ಎಂಬ ಬಗೆಗಿನ ಮಾಹಿತಿ, ದೂರಿನ ಸಂಕ್ಷಿಪ್ತ ರೂಪ ಮತ್ತು ಅಪರಾಧ ಸಂಖ್ಯೆ ಒಳಗೊಂಡ ಚೆಕ್‌ಲಿಸ್ಟ್‌ ಅನ್ನು ಕಡ್ಡಾಯವಾಗಿ ನಮೂದಿಸಿರಬೇಕು ಎಂದು ಕರ್ನಾಟಕ ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರ ಅವಗಾಹನೆಗಾಗಿ ರಾಜ್ಯ ಗೃಹ ಕಾರ್ಯದರ್ಶಿ ಮತ್ತು ರಾಜ್ಯ ಪೊಲೀಸ್‌ ಮಹಾನಿರ್ದೇಶಕರು ಸೂಕ್ತ ಮಾರ್ಗಸೂಚಿಗಳನ್ನು ಹೊರಡಿಸಬೇಕು ಎಂದು ನಿರ್ದೇಶಿಸಿದೆ. ಬೆಂಗಳೂರಿನ ಅಮೃತಹಳ್ಳಿ ಠಾಣೆಯ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಮೊಬೈಲ್‌ ಫೋನ್‌ನಲ್ಲಿ ವಾಟ್ಸ್‌ ಆಯಪ್‌ ಮೂಲಕ, ನಾಳೆ ನೀವು ಠಾಣೆಗೆ ಹಾಜರಾಗಬೇಕು ಎಂದು ಕಳುಹಿಸಿದ್ದ ಸಂದೇಶವನ್ನು ಪ್ರಶ್ನಿಸಿ ಪತ್ರಕರ್ತ ಟಿ ವಿ ಶಿವಪ್ರಸಾದ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಭಾರತೀಯ ನ್ಯಾಯ ಸಂಹಿತೆ-2023ರ ಸೆಕ್ಷನ್‌ 35ರ ಅನುಸಾರ ಆರೋಪಿಗೆ ಚೆಕ್‌ ಲಿಸ್ಟ್‌ ಒದಗಿಸದೇ ಹೋದಲ್ಲಿ ಅಂತಹ ಆರೋಪಿಯು ಠಾಣಾಧಿಕಾರಿ ಮುಂದೆ…

Read More

ಮಂಗಳೂರು: ಪಬ್‌ಜಿ ಆನ್‌ಲೈನ್ ಆಟವಾಡುವ ಹವ್ಯಾಸವಿದ್ದ ನಗರದ ಬಿಜೈ ನಿವಾಸಿ ಯುವತಿಯೊಬ್ಬಳು ನಾಪತ್ತೆಯಾಗಿರುವ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೆಲಿಸ್ತಾ ಫೆರಾವೊ (18) ನಾಪತ್ತೆಯಾದ ಯುವತಿ. ಎಸ್ಎಸ್ಎಲ್‌ಸಿ ಮುಗಿಸಿದ ಬಳಿಕ ಕೆಲಿಸ್ತಾ ಫೆರಾವೊ ಆಟೊಮೊಬೈಲ್ ಕೋರ್ಸ್‌ಗೆ ಸೇರ್ಪಡೆಗೊಂಡಿದ್ದಳು. ಈಕೆಗೆ ಮೊಬೈಲ್‌‌ನಲ್ಲಿ ಪಬ್ಜಿ ಆಟವಾಡುವ ಹುಚ್ಚು ಅಂಟಿಕೊಂಡಿತ್ತು. ಮಂಗಳವಾರ ಮಧ್ಯಾಹ್ನ 12.15ರ ಸುಮಾರಿಗೆ ಮನೆಯಿಂದ ಹೊರಗೆ ಹೋಗಿದ್ದಳು. ಈ ವಿಚಾರ ಮನೆಯವರ ಗಮನಕ್ಕೆ ಬಂದ ತಕ್ಷಣ ಹುಡುಕಾಟ ಆರಂಭಿಸಿದ್ದಾರೆ. ಸಿಸಿ ಕ್ಯಾಮರಾದಲ್ಲಿ ಪರಿಶೀಲಿಸಿದಾಗ ಆಕೆ ಆಟೋರಿಕ್ಷಾದಲ್ಲಿ ಹೋಗುತ್ತಿರುವ ದೃಶ್ಯ ದಾಖಲಾಗಿತ್ತು. ಈಕೆಗೆ 9ನೇ ತರಗತಿಯಿಂದಲೇ ಪಬ್‌ಜಿ ಆಡುತ್ತಿದ್ದಳು. ಶಾಲೆಯಿಂದ ಮನೆಗೆ ಬಂದ ತಕ್ಷಣ ವೈಫೈ ಬಳಸಿ ಮೊಬೈಲ್‌ನಲ್ಲಿ ಪಬ್‌ಜಿ ಆಡುತ್ತಿದ್ದಳು. ಈ ಬಗ್ಗೆ ಹೆತ್ತವರು ಹಲವಾರು ಬಾರಿ ಎಚ್ಚರಿಕೆ ನೀಡಿದ್ದರು. ಇದೇ ವಿಚಾರವಾಗಿ ಹಿಂದೊಮ್ಮೆ ಗಲಾಟೆ ಕೂಡ ನಡೆದಿತ್ತು. ಇತ್ತೀಚೆಗೆ ಮನೆಯವರು ಈಕೆಗೆ ಮೊಬೈಲ್ ಕೊಡಲು ನಿರ್ಧರಿಸಿ ಸಿಮ್ ಖರೀದಿಸಿದ್ದರು ಎಂದು ತಿಳಿದುಬಂದಿದೆ. ಕೆಲಿಸ್ತಾ ಕನ್ನಡ, ತುಳು, ಇಂಗ್ಲಿಷ್, ಕೊಂಕಣಿ…

Read More

ಮಂಗಳೂರು: ಭಾರಿ ಮಳೆಯ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ (ಆಗಸ್ಟ್ 1) ರಂದು ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶಿಸಿದೆ.

Read More

ಮಂಗಳೂರು: ಮಳೆಗಾಲದ ಸಂದರ್ಭ ಅಪಾಯಕಾರಿ ಪ್ರದೇಶಗಳಲ್ಲಿ ರೀಲ್ಸ್ ಮಾಡಿದರೆ ಅವರ ಮೇಲೆ ಎಫ್ಐಆರ್ ದಾಖಲಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಎಚ್ಚರಿಕೆ ನೀಡಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿರುವ ಪ್ರವಾಸಿ ತಾಣ, ಬೀಚ್ ಗಳಲ್ಲಿ ಅಪಾಯಕಾರಿ ಬೋರ್ಡ್ ಆಳವಡಿಸಲಾಗಿದೆ. ಬೋರ್ಡ್ ಜೊತೆ ಕೆಲವು ಕಾನೂನುಗಳು ಅನ್ವಯವಾಗುತ್ತದೆ. ಇಂತಹ ಬೋರ್ಡ್ ಇರುವ ಪ್ರದೇಶಗಳಲ್ಲಿ ಕಾನೂನು ಮೀರಿ ರೀಲ್ಸ್ ಮಾಡಿದರೆ ಅವರ ಮೇಲೆ ಎಫ್ಐಆರ್ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಕಾಡಿನ ಮಧ್ಯೆ ಹಾಗು ಇತರ ಅಪಾಯಕಾರಿ ಪ್ರದೇಶಗಳಲ್ಲಿ ವಿಡಿಯೋ ಮಾಡುವುದು ಡೆಂಜರ್ ಆಗಿದ್ದು, ಪ್ರಕೃತಿ ಯಾವಾಗ ಯಾವ ರೀತಿ ವರ್ತಿಸುತ್ತದೆ ಎನ್ನುವುದನ್ನು ಊಹಿಸಲು ಆಗುವುದಿಲ್ಲ, ಪ್ರಾಕೃತಿಕ ವಿಕೋಪ ಯಾವಾಗ,ಹೇಗೆ ನಡೆಯುತ್ತೆ ಅನ್ನೋದನ್ನು ಹೇಳೋಕಾಗಲ್ಲ ಈ ಹಿನ್ನಲೆ ನಾನು ಮಾಧ್ಯಮಗಳ ಮೂಲಕ ಈ ರೀತಿಯ ಸಾಹಸಕ್ಕೆ ಯಾವಾತ್ತೂ ಮುಂದಾಗಬೇಡಿ ಎಂದು ಮನವಿ ಮಾಡಿದರು.

Read More