ಕಡಬ: ಮಹಿಳೆಯೋರ್ವರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದಲ್ಲಿ ನಡೆದಿದೆ. ಕೊಣಾಲು ಗ್ರಾಮದ ದಿವಗಂತ ವೆಂಕಪ್ಪಗೌಡ ಅವರ ಪತ್ನಿ ಚೆನ್ನಮ್ಮ (70) ಎಂಬವರು ಬಾವಿಗೆ ಬಿದ್ದು ಮೃತಪಟ್ಟ ಮಹಿಳೆಯಾಗಿದ್ದಾರೆ. ಚೆನ್ನಮ್ಮ ಅವರು ತೋಟಕ್ಕೆ ತೆರಳುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದಿದ್ದಾರೆ ಎನ್ನಲಾಗಿದೆ. ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮಹಜರು ನಡೆಸಿ,ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಮೃತರು ಇಬ್ಬರು ಗಂಡು ಮತ್ತು ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: main-admin
ಮಂಗಳೂರು: ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಯಗೊಂಡಿರುವ ಜನತೆ ಬೂಸ್ಟರ್ ಲಸಿಕೆ ಪಡೆಯಲು ಮುಂದಾಗಿದ್ದಾರೆ. ಹೇಗೂ ಕೊರೊನಾ ಕಡಿಮೆಯಾಗಿದೆ ಎಂದು ಬೂಸ್ಟರ್ ಲಸಿಕೆ ಪಡೆಯಲು ಜನರು ಹಿಂದೇಟು ಹಾಕಿದ್ದರು. ಆದರೆ ಮತ್ತೆ ಇದೀಗ ಜನ ಲಸಿಕೆ ಪಡೆಯುವತ್ತ ಒಲವು ತೋರಿದರೂ ಲಸಿಕೆ ಕೊರತೆ ಎದುರಾಗಿದೆ. ದ.ಕ. ಜಿಲ್ಲೆಯ ಶೇ. 80ರಷ್ಟು ಅರ್ಹರು ಲಸಿಕೆ ಪಡೆದುಕೊಳ್ಳಲು ಇನ್ನೂ ಬಾಕಿ ಇದ್ದಾರೆ. ಕೋವಿಶೀಲ್ಡ್ ಲಸಿಕೆ ಪಡೆದ ಮಂದಿ, ಎರಡನೇ ಡೋಸ್ ಮತ್ತು ಬೂಸ್ಟರ್ ಡೋಸ್ ಲಸಿಕೆಯನ್ನು ಕೋವಿಶೀಲ್ಡ್ ಮಾತ್ರವೇ ಪಡೆಯಬೇಕಾಗುತ್ತದೆ. ಆದರೆ ಲಸಿಕೆ ಪಡೆಯುವ ಅವಧಿ ಕಳೆದರೂ ಲಸಿಕೆ ಸಿಗುತ್ತಿಲ್ಲ ಎನ್ನುತ್ತಾರೆ ಸಾರ್ವಜನಿಕರು.ಆರೋಗ್ಯ ಇಲಾಖೆ ಅಧಿಕಾರಿಗಳು ಈ ಕುರಿತು ಪ್ರತಿಕ್ರಿಯಿಸಿದ್ದು, ಉಡುಪಿ ಹಾಗೂ ದ.ಕ ಜಿಲ್ಲೆಯಲ್ಲಿ ಮಾತ್ರವಲ್ಲ ರಾಜ್ಯಾದ್ಯಾಂತ ಲಸಿಕೆ ಕೊರತೆ ಎದುರಾಗಿದೆ. ಶೀಘ್ರವೇ ಹೊಸ ಲಸಿಕೆ ಬರಲಿದೆ. ಲಸಿಕೆ ಬಂದ ತಕ್ಷಣ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.ಇನ್ನೊಂದೆಡೆ ವಿದೇಶದಲ್ಲಿ ಕೊವೀಡ್ ಏರಿಕೆಯಾಗುತ್ತಿರುವುದರಿಂದ ಮತ್ತೆ ಲಸಿಕೆ ಆರಂಭಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.
ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಲ್ಮಂಜ ಗ್ರಾಮದ ಕಜೆ ಸಮೀಪದ ನಿವಾಸಿ ವಿವಾಹಿತ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಲ್ಮಂಜ ಕಜೆ ನಿವಾಸಿ ಸುರೇಶ್ ಅವರ ಪತ್ನಿ, ಸುಂದರಿ(25) ಮೃತಪಟ್ಟ ಮಹಿಳೆ ಎಂದು ತಿಳಿದು ಬಂದಿದೆ.ಮದ್ಯ ಸೇವನೆಯ ಚಟ ಹೊಂದಿದ್ದರು ಎನ್ನಲಾಗಿದ್ದು, ವಿಷ ಸೇವಿಸಿದ್ದು ಡಿ 27ರಂದು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ
ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಸಿನಿಮಾವೊಂದಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಕನ್ನಡದ ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ವೀರ ಕಂಬಳ’ ಸಿನಿಮಾದಲ್ಲಿ ಅವರು ಅತಿಥಿ ಪಾತ್ರವನ್ನು ಮಾಡುತ್ತಿದ್ದಾರೆ. ಈ ಸಿನಿಮಾ ಕನ್ನಡ, ತುಳು ಸೇರಿದಂತೆ ಹಲವು ಭಾಷೆಗಳಲ್ಲಿ ಮೂಡಿ ಬರಲಿರುವುದು ವಿಶೇಷ. ಸಂಪೂರ್ಣವಾಗಿ ಕಂಬಳ ಕ್ರೀಡೆಯನ್ನು ಹಿನ್ನೆಲೆಯಾಗಿಟ್ಟುಕೊಂಡು ಮೂಡಿ ಬರುತ್ತಿರುವ ಸಿನಿಮಾ ಇದಾಗಿದೆ. ಈ ಚಿತ್ರದಲ್ಲಿ ಹಲವು ವಿಶೇಷತೆಗಳಿವೆ. ಕಂಬಳ ಕೋಣ ಓಡಿಸುವುದರಲ್ಲೇ ಪರಿಣಿತಿ ಹೊಂದಿರುವ ಶ್ರೀನಿವಾಸ್ ಗೌಡ ಕೂಡ ಈ ಸಿನಿಮಾದಲ್ಲಿ ಪಾತ್ರ ಮಾಡಿದ್ದಾರೆ. ಇವರೊಂದಿಗೆ ಕಲಾವಿದ ಸ್ವರಾಜ್ ಶೆಟ್ಟಿ ಕೂಡ ಕಂಬಳದ ಕೋಣ ಓಡಿಸುವ ದೃಶ್ಯದಲ್ಲಿ ಕಾಣಿಸಿಕೊಳ್ಳುತ್ತಿರುವುದು ಮತ್ತೊಂದು ವಿಶೇಷ. ಪ್ರಕಾಶ್, ರವಿಶಂಕರ್, ರಾಧಿಕಾ ಚೇತನ್, ನವೀನ್ ಪಡೀಲ್ ಸೇರಿದಂತೆ ಸಾಕಷ್ಟು ಕಲಾವಿದರು ಈ ಚಿತ್ರದ ತಾರಾಗಣದಲ್ಲಿ ಇದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬರಲಿದ್ದು, ವೀರ ಕಂಬಳ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ಈಗ ನಡೆಯುತ್ತಿದೆ. ಈ ಭಾಗದ…
ಮಂಗಳೂರು: ಪೊಲೀಸರು ಬಾಲಕನ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಭಾನುವಾರ ರಾತ್ರಿ ನಗರದ ತಣ್ಣೀರುಬಾವಿ ಬೀಚ್ ಸಮೀಪದಲ್ಲಿ ನಡೆದಿದೆ. ನಗರದ ತಣ್ಣೀರುಬಾವಿ ಬೀಚ್ ಸಮೀಪದಲ್ಲಿ ಕ್ರಿಕೆಟ್ ಆಟ ಆಡುತ್ತಿದ್ದ ತಂಡವೊಂದು ಕ್ರಿಕೆಟ್‌ನಲ್ಲಿ ಜಯಗಳಿಸಿ ವಾಪಸ್ಸು ತೆರಳುವ ಸಂದರ್ಭದಲ್ಲಿ ಜಯಘೋಷಗಳನ್ನು ಮೊಳಗಿಸಿ ಹೋಗುತ್ತಿದ್ದರು. ಈ ಸಂದರ್ಭ ಕೆಲವು ಪೊಲೀಸರು ಯುವಕರನ್ನು ತಡೆ ಹಿಡಿದು ವಿಚಾರಣೆ ನಡೆಸಿದ್ದಾರೆ. ಪೊಲೀಸ್ ಸಿಬ್ಬಂದಿಯೊಬ್ಬ ಪುಟ್ಟ ಬಾಲಕನ ಮೇಲೆ ಬಾಸುಂಡೆ ಬರುವ ಹಾಗೆ ಎಡಕೈಗೆ ಲಾಠಿಯಿಂದ ಹೊಡೆದು ಹಲ್ಲೆ ನಡೆಸಿದ್ದಾರೆ. ಕೆಳಕ್ಕೆ ಬಿದ್ದ ಬಾಲಕನನ್ನು ಸ್ಥಳೀಯರೇ ಹೊತ್ತುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ಸ್ಥಳೀಯರು ಹಲ್ಲೆ ನಡೆಸಿದ ಪೊಲೀಸ್ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರಲ್ಲದೇ, ಬಳಿಕ ಪಣಂಬೂರು ಪೊಲೀಸ್ ಠಾಣೆ ಮುಂದೆ ಜಮಾಯಿಸಿದ್ದಾರೆ. ಈ ಘಟನೆ ಬಗ್ಗೆ ಸ್ಥಳೀಯರು ಹೇಳುವಂತೆ ‘ಈ ಬಾಲಕನ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದು ದೌರ್ಜನ್ಯ ಅಂತಾನೇ ಹೇಳಬಹುದು. ಆ ಬಾಲಕನಿಗೆ ಮೊದಲೇ…
ನೆಲ್ಯಾಡಿ: ಕಾಡಾನೆ ದಾಳಿಯಿಂದ ತಂದೆ ಮೃತಪಟ್ಟು ಮಗ ತೀವ್ರವಾಗಿ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಅರಣ್ಯ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 75ರ ಬಳಿ ಇರುವ ಶಿರಾಡಿಯ ಕೊಟ್ಟಿಕ್ಕಲ್ ಎಂಬಲ್ಲಿ ನಡೆದಿದೆ. ತಿಮ್ಮಪ್ಪ (45) ಮೃತರು. ಇವರ ಮಗ ಶರಣ್ (18) ಅವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಿಮ್ಮಪ್ಪ ಅವರು ಶಿರಾಡಿ ಜನತಾ ಕಾಲೋನಿಯ ನಿವಾಸಿ ಎಂದು ತಿಳಿದುಬಂದಿದೆ. ಕಾರ್ಯದ ನಿಮಿತ್ತ ಕೊಟ್ಟಿಕ್ಕಲ್ ಸಮೀಪ ಮಗನ ಜೊತೆ ಹೋಗುತ್ತಿದ್ದಾಗ ಕಾಡಾನೆ ದಾಳಿ ಮಾಡಿದೆ. ಶಿರಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ 75ರ ರಸ್ತೆ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಫೋಟಕ ಬಳಸಿ ಬಂಡೆ ಹೊಡೆಯುವ ಶಬ್ದಕ್ಕೆ ಬೆದರಿದ ಒಂಟಿ ಸಲಗ ಇವರ ಮೇಲೆ ದಾಳಿ ಮಾಡಿರಬಹುದು ಎಂದು ಸಾರ್ವಜನಿಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾಸರಗೋಡು: ಖಾಸಗಿ ಬಸ್ ಢಿಕ್ಕಿಯಾಗಿ ಮಗು ದಾರುಣವಾಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಚೆರ್ಕಳದಲ್ಲಿ ನಿನ್ನೆ ಸಂಜೆ ನಡೆದಿದೆ. ಸೀತಾಂಗೋಳಿಯ ಆಶಿಕ್ – ಝುಬೈದಾ ದಂಪತಿ ಪುತ್ರ ಅಬ್ದುಲ್ ವಾಹಿದ್ (3) ಮೃತಪಟ್ಟ ಬಾಲಕ. ಜೊತೆಗಿದ್ದ ತಾಯಿ ಸುಬೈದಾ ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ. ಚೆರ್ಕಳ ಬಸ್ಸು ನಿಲ್ದಾಣದಲ್ಲಿ ಬಸ್ ಹಿಂದಕ್ಕೆ ಚಲಿಸುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ತಾಯಿ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಗಂಭೀರ ಗಾಯಗೊಂಡ ಮಗುವನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.
ಬೆಂಗಳೂರು : ಬಾಲ್ಯ ವಿವಾಹ ತಡೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮಹತ್ವದ ಕ್ರಮ ಕೈಗೊಂಡಿದ್ದು, ಮದುವೆಯ ಕಡ್ಡಾಯ ನೋಂದಣಿ ಅಧಿಕಾರ ಗ್ರಾಮಪಂಚಾಯಿತಿಗಳಿಗೆ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. ರಾಜ್ಯದಲ್ಲಿ ಬಾಲ್ಯ ವಿವಾಹಗಳು ಹೆಚ್ಚಳವಾಗುತ್ತಿದ್ದು, ಬಾಲ್ಯ ವಿವಾಹ ತಡೆಯಲು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮದುವೆಯ ನೋಂದಣಿಯನ್ನು ಗ್ರಾಮ ಪಂಚಾಯಿತಿ ಅಧಿಕಾರ ವ್ಯಾಪ್ತಿಗೆ ಒಳಪಡಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿಗಳಿಗೆ ವಿವಾಹ ನೋಂದಣಿ ಅಧಿಕಾರ ನೀಡಬೇಕು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ನೋಂದಣಿ ಜವಾಬ್ದಾರಿ ವಹಿಸಿ 250 ರೂ. ಒಳಗೆ ಶುಲ್ಕ ನಿಗದಿ ಮಾಡಿ ನೋಂದಣಿ ಕಡ್ಡಾಯಗೊಳಿಸಬೇಕು ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹೇಳಿದೆ ಎನ್ನಲಾಗಿದೆ.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆದ ಉಗ್ರರ ದಾಳಿಯಲ್ಲಿ ಗಾಯಗೊಂಡ ನಾಗರಿಕರೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ನಂತರ ಸಾವಿನ ಸಂಖ್ಯೆ ನಾಲ್ಕಕ್ಕೇರಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಒಂಬತ್ತು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಅವರಲ್ಲಿ ಕೆಲವರ ಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ರಾಜೌರಿಯ ಸರ್ಕಾರಿ ವೈದ್ಯಕೀಯ ಕಾಲೇಜಿನ ವೈದ್ಯರು ತಿಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡ ಕೆಲವರನ್ನು ವಿಮಾನದಲ್ಲಿ ಜಮ್ಮುವಿಗೆ ರವಾನಿಸಲಾಗಿದೆ. ಮೃತರನ್ನು ದೀಪಕ್ ಕುಮಾರ್, ಸತೀಶ್ ಕುಮಾರ್ ಮತ್ತು ಪ್ರೀತಮ್ ಲಾಲ್ ಮತ್ತು ಶಿವಪಾಲ್‌ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ಡಾಂಗ್ರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇಬ್ಬರು ಶಸ್ತ್ರಸಜ್ಜಿತ ಭಯೋತ್ಪಾದಕರು ಮೂರು ಮನೆಗಳಿಗೆ ನುಗ್ಗಿ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಉಗ್ರರ ಪತ್ತೆಗೆ ವ್ಯಾಪಕ ಶೋಧ ಕಾರ್ಯಾಚರಣೆ ಮುಂದುವರೆದಿದೆ. ನಿನ್ನೆ(ಭಾನುವಾರ) ಸಂಜೆ ಡಾಂಗ್ರಿ ಗ್ರಾಮದಲ್ಲಿ ಇಬ್ಬರು ಶಸ್ತ್ರಸಜ್ಜಿತ ಉಗ್ರರು ಮೂರು ಮನೆಗಳಿಗೆ ನುಗ್ಗಿ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಿಂದ…
ಕಾರ್ಕಳ: ವೇಗವಾಗಿ ಸಾಗುತಿದ್ದ ಮಾರುತಿ ಸ್ವಿಫ್ಟ್ ಕಾರೊಂದು ಪಲ್ಟಿಯಾದ ಘಟನೆ ಹೆಬ್ರಿ ತಾಲೂಕಿನ ಅಂಡಾರು ಕರಿಯಾಲು ಕ್ರಾಸ್ ಬಳಿ ನಡೆದೆ. ಜನವರಿ 1 ರಂದು ಭಾನುವಾರ ಮುಂಜಾನೆ ಈ ಅಪಘಾತ ನಡೆದಿದ್ದು, ಅಜೆಕಾರಿನ ವ್ಯಕ್ತಿಯೊಬ್ಬರಿಗೆ ಸೇರಿದ ಕಾರು ಇದಾಗಿದೆ. ಬೆಂಗಳೂರಿನಿಂದ ಕೆರ್ವಾಶೆಯ ಮೂಲಕ ಅಜೆಕಾರಿಗೆ ಬರುತ್ತಿದ್ದಾಗ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗವು ಸಂಪೂರ್ಣ ನಜ್ಜುಗುಜ್ಜಾಗಿದೆ.ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಪೈಕಿ ಇಬ್ಬರಿಗೆ ಗಾಯಗಳಾಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಆದರೆ ಈ ಅಪಘಾತದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.