ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಭಾನುವಾರ ತಡರಾತ್ರಿ ಕುತ್ತಿಗೆ ಹಿಸುಕಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಅಪ್ರಾಪ್ತ ವಯಸ್ಕ ಬಾಲಕನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 15 ದಿನಗಳಾವಧಿಗೆ ರಿಮಾಂಡ್ ಹೋಮ್ ಗೆ ಕಳುಹಿಸಿದೆ. ಹೇಮಾವತಿ ಅವರ ಮನೆಯಲ್ಲಿ ಘಟನೆಯ ರಾತ್ರಿ ತಂಗಿದ್ದ ಅಕ್ಕನ ಮಗ, ಹತ್ತನೇ ತರಗತಿ ವಿದ್ಯಾರ್ಥಿ, ಅಪ್ರಾಪ್ತ ಬಾಲಕ ಹೇಮಾವತಿ ಮಲಗಿದಲ್ಲಿಗೆ ಹೋಗಿ ದೇಹ ಸುಖ ಬಯಸಿದ್ದು, ಇದಕ್ಕೆ ಹೇಮಾವತಿಯವರು ಪ್ರತಿರೋಧ ವ್ಯಕ್ತಪಡಿಸಿದ್ದರೆನ್ನಲಾಗಿದೆ. ನಾಳೆ ತನ್ನ ಕೃತ್ಯವನ್ನು ನೆರೆಹೊರೆಯವರಿಗೆ ತಿಳಿಸಿದರೆ ತಾನು ಅವಮಾನಿತನಾಗುವ ಸಾಧ್ಯತೆ ಇದೆ ಎಂದು ಅಂಜಿಕೆಯಿಂದ ಈ ಬಾಲಕ ಆಕೆಯನ್ನು ಕೊಲ್ಲುವ ನಿರ್ಧಾರ ತಾಳಿದ್ದ. ಸುಮಾರು ಅರ್ಧ ಗಂಟೆಯ ಬಳಿಕ ನಿದ್ರೆಗೆ ಜಾರಿದ್ದ ಚಿಕ್ಕಮ್ಮನ ಕುತ್ತಿಗೆ ಹಿಸುಕಿ ಉಸಿರುಗಟ್ಟಿಸಿ ಕೊಲೆಗೈದಿದ್ದ. ಚಿಕ್ಕಮ್ಮ ಮೃತಪಟ್ಟಿರುವುದು ದೃಢವಾದೊಡನೆ ಆಕೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆಂದು ತಾನೇ ಮೊದಲಾಗಿ ತನ್ನ ತಂದೆಗೆ ತಿಳಿಸಿ ಪಾರಾಗಲು ಯತ್ನಿಸಿದ್ದ. ಆದರೆ ಕುತ್ತಿಗೆ ಹಿಸುಕಿದ ವೇಳೆ ಆಕೆ ಪ್ರಾಣ ರಕ್ಷಣೆಗಾಗಿ…
Author: main-admin
ಬೆಂಗಳೂರು: ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಪೊಲೀಸರು ಡಿಎನ್‌ಎ ಪರೀಕ್ಷೆಗೆ ಒಳಪಡಿಸಿದ್ದಾರೆ. ಅವರ ಮಾದರಿಯನ್ನು ವೈದ್ಯರು ಸಂಗ್ರಹಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾ ಗೌಡ, ಎ2 ಆರೋಪಿ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ಕರೆದೊಯ್ದಿದ್ದಾರೆ. ಅಲ್ಲಿನ ವೈದ್ಯರು ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಎಲ್ಲಾ ಆರೋಪಿಗಳ ರಕ್ತ, ಕೂಲದಿನ ಮಾದರಿಯನ್ನು ಸಂಗ್ರಹಿಸುತ್ತಿದ್ದಾರೆ.
ಮುಂಬೈ: ಅಪ್ಪಂದಿರ ದಿನದ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಸುನೀಲ್ ಶೆಟ್ಟಿಯವರು ತಮ್ಮ ತಂದೆ ವೀರಪ್ಪ ಶೆಟ್ಟಿಯವರ ಬಗ್ಗೆ ಭಾವನಾತ್ಮಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ’ಆಗ ಅವರ ವಯಸ್ಸು 9, ಚಿಕ್ಕ ವಯಸ್ಸಿನಲ್ಲೇ ಮಂಗಳೂರು ಬಿಟ್ಟು ಮುಂಬೈಗೆ ಓಡಿ ಬಂದ ನನ್ನ ಅಪ್ಪ ದಕ್ಷಿಣ ಭಾರತದ ಹೋಟೆಲ್ ವೊಂದರಲ್ಲಿ ಟೇಬಲ್ ಕ್ಲೀನರ್ ಆಗಿ ಕೆಲಸ ಆರಂಭಿಸಿದ್ದರು. ಆಗ ಅಪ್ಪ ಕೆಲಸ ಮಾಡ್ತಿದ್ದ ಮೂರು ಹೋಟೆಲ್‌ಗಳಿಗೆ ಇಂದು ನಾನು ಮಾಲೀಕನಾಗಿದ್ದೇನೆ ಮಂಗಳೂರು ಮೂಲದ ಖ್ಯಾತ ಬಾಲಿವುಡ್ ನಟ ಸುನೀಲ್ ಶೆಟ್ಟಿ ತಮ್ಮ ತಂದೆಯ ಬಗ್ಗೆ ಹಂಚಿಕೊಂಡಿದ್ದಾರೆ. ಚಿಕ್ಕವಯಸ್ಸಿನಲ್ಲೇ ನನ್ನ ಅಪ್ಪನ ತಂದೆ ಮರೆಯಾಗಿದ್ದು, ಕುಟುಂಬಕ್ಕೆ ಆಸರೆಯಾಗಿದ್ದರು. 9ನೇ ವಯಸ್ಸಿನಲ್ಲೇ ಮುಂಬೈಗೆ ಓಡಿ ಬಂದ ನನ್ನ ತಂದೆ ಮೊದಲಿಗೆ ದಕ್ಷಿಣ ಭಾರತದ ಹೋಟೆಲ್‌ವೊಂದರಲ್ಲಿ ಟೇಬಲ್ ಕ್ಲೀನರ್ ಆಗಿ ಕೆಲಸಕ್ಕೆ ಸೇರಿಕೊಂಡರು. ನಮ್ಮ ಸಮುದಾಯದಲ್ಲಿ ಆಗ ಪರಸ್ಪರ ಒಬ್ಬರಿಗೊಬ್ಬರು ಸಹಾಯ ಮಾಡ್ತಾ ಇದ್ದರು. ಹೀಗಾಗಿ ಹೋಟೆಲ್‌ನಲ್ಲಿ ಕ್ಲೀನರ್ ಆಗಿ ಕೆಲಸ ಸಿಕ್ಕಿತ್ತು. ಹೋಟೆಲ್ ಕೆಲಸ ಅಲ್ಲೇ ಕೆಲಸ ಮುಗಿಸಿ…
ಉಪ್ಪಿನಂಗಡಿ : ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಎಂಬವರು ರವಿವಾರ ತಡರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಇದೀಗ ಮೃತ ಮಹಿಳೆಯ ಸಂಬಂಧಿ ಎಸ್ಎಸ್ಎಲ್‌ಸಿ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ. ಹೇಮಾವತಿ ಅವರ ಮನೆಗೆ ಬಂದಿದ್ದ ಅವರ ಸಹೋದರಿಯ ಪುತ್ರ, ಎಸ್ಎಸ್ಎಲ್‌ಸಿ ವಿದ್ಯಾರ್ಥಿ ರವಿವಾರ ರಾತ್ರಿ ತಂಗಿದ್ದ. ತಡರಾತ್ರಿ ವೇಳೆ ಈ ಅಪ್ರಾಪ್ತ ಹೇಮಾವತಿ ಮಲಗಿದಲ್ಲಿಗೆ ಹೋಗಿ ದೇಹಸುಖ ಬಯಸಿದ್ದಾನೆ. ಇದಕ್ಕೆ ಹೇಮಾವತಿ ಪ್ರತಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಆರೋಪಿ ಬಾಲಕ ಅವರ ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ತನಿಖೆ ವೇಳೆ ಬಾಲಕ ಬಾಯಿ ಬಿಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಘಟನೆ ಬಗ್ಗೆ ಹೇಮಾವತಿಯವರ ಪತಿ ವಿಠಲ ಪೈ ಉಪ್ಪಿನಂಗಡಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. “ನನ್ನ ಪತ್ನಿ ಹೇಮಾವತಿ ಆಕೆಯ ತವರು ಮನೆಯಲ್ಲಿ ವಾಸ್ತವ್ಯವಿದ್ದಾಳೆ. ಆಕೆ ಮಲಗಿದಲ್ಲಿಯೇ ಮೃತಪಟ್ಟಿದ್ದಾಳೆ ಎಂದು ತನಗೆ ಮಾಹಿತಿ ಬಂದಿತ್ತು. ಆದರೆ ಪತ್ನಿಯ ಮೃತ ದೇಹದಲ್ಲಿ ಗಾಯದ ಗುರುತು ಬಗ್ಗೆ ಸಂಶಯ…
ಉತ್ತರ ಪ್ರದೇಶ: ಅಯೋಧ್ಯೆಯಲ್ಲಿ ರಾಮ ಮಂದಿರದ ಭದ್ರತೆಗೆ ನಿಯೋಜನೆಗೊಂಡಿದ್ದ ಎಸ್‌ಎಸ್‌ಎಫ್ ಯೋಧ ಗುಂಡಿನ ದಾಳಿಗೆ ಬಲಿಯಾಗಿರುವ ಘಟನೆ ಇಂದು ಬೆಳಗ್ಗೆ 5.25ಕ್ಕೆ ನಡೆದಿದೆ. ಶತ್ರುಘ್ನ ವಿಶ್ವಕರ್ಮ (25) ಮೃತಪಟ್ಟ ಸೈನಿಕ. ಅಂಬೇಡ್ಕರ್ ನಗರದ ನಿವಾಸಿ, ಗುಂಡಿನ ಸದ್ದು ಕೇಳಿದ ಬಳಿಕ ಸಹ ಸಿಬ್ಬಂದಿ ಅಲ್ಲಿಗೆ ಓಡೋಡಿ ಬಂದಿದ್ದಾರೆ, ಅಷ್ಟರಲ್ಲಾಗಲೆ ಯೋಧ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು. ಯೋಧನ ಸಾವು ಅಯೋಧ್ಯೆ ದೇಗುಲ ಸಂಕೀರ್ಣದಲ್ಲಿ ಸಂಚಲನ ಮೂಡಿಸಿದೆ. ಘಟನಾ ಸ್ಥಳಕ್ಕೆ ಐಜಿ ಮತ್ತು ಎಸ್‌ಪಿ ಆಗಮಿಸಿದರು. ಅವರೇ ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿದರು. ಫೋರೆನ್ಸಿಕ್ ತಂಡ ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿತು. ಪ್ರಾಥಮಿಕ ತನಿಖೆಯಲ್ಲಿ ಇದನ್ನು ಆತ್ಮಹತ್ಯೆ ಎಂದು ಪರಿಗಣಿಸಲಾಗಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ಸಾವಿಗೆ ನಿಜವಾದ ಕಾರಣ ತಿಳಿಯಲಿದೆ. ಶತ್ರುಘ್ನ ವಿಶ್ವಕರ್ಮ 2019 ರ ಬ್ಯಾಚ್‌ನವರು. ಅವರು ಅಂಬೇಡ್ಕರ್ ನಗರದ ಸಮ್ಮನಪುರ ಪೊಲೀಸ್ ಠಾಣೆಯ…
ಸುಳ್ಯ : ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕಾಂತಮಂಗಲ ಶಾಲಾ ಜಗಲಿಯಲ್ಲಿ ವ್ಯಕ್ತಿಯ ಕೊಲೆ ಪ್ರಕರಣವನ್ನು ಸುಳ್ಯ ಪೊಲೀಸರು ಭೇದಿಸಿದ್ದಾರೆ. ಕೃತ್ಯ ಎಸಗಿದ ಕಡಬ ತಾಲೂಕಿನ ಎಡಮಂಗಲದ ಉದಯ ಕುಮಾರ್ ನಾಯ್ಕ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ರವಿವಾರ ರಾತ್ರಿ ವಿರಾಜಪೇಟೆಯ ವಸಂತ (45) ಎಂಬ ವ್ಯಕ್ತಿಯ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆಗೈಯಲಾಗಿತ್ತು. ರವಿವಾರ ರಾತ್ರಿ ಕಾಂತಮಂಗಲಕ್ಕೆ ಆಟೋದಲ್ಲಿ ಬಂದು ಶಾಲಾ ಜಗಲಿಯಲ್ಲಿ ವಸಂತ ಮಲಗಿದ್ದ. ವಸಂತ ಬಳಿ 800 ರೂ. ಹಣ ಇರುವುದನ್ನು ಗಮನಿಸಿದ್ದ ಉದಯ, ಆತನ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಹಣ ಹಾಗೂ ಮೊಬೈಲ್‌ನೊಂದಿಗೆ ಪರಾರಿಯಾಗಿದ್ದನು. ತನಿಖೆಗಿಳಿದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಎಸ್.ಪಿ.ರಿಷ್ಯಂತ್ ಸಿ.ಬಿ., ಎ.ಎಸ್.ಪಿ. ರಾಜೇಂದ್ರ ಡಿ.ಎಸ್., ಪುತ್ತೂರು ಡಿವೈಎಸ್ಪಿ ಅರುಣ್ ನಾಗೇಗೌಡ ಮಾರ್ಗದರ್ಶನದಲ್ಲಿ ಸುಳ್ಯ ವೃತ್ತ ನಿರೀಕ್ಷಕ ಸತ್ಯನಾರಾಯಣ ನೇತೃತ್ವದಲ್ಲಿ ಕೊಲೆ ಪ್ರಕರಣ ಭೇದಿಸಲಾಗಿದೆ.
ಪುತ್ತೂರು : ನಗರದ ಹೊರವಲಯದ ಜಿಡೆಕಲ್ಲು ಕಾಲೇಜು ಸಮೀಪದ ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಪೋಟಗೊಂಡ ಘಟನೆ ಸಂಭವಿಸಿದೆ. ಜಿಡೆಕಲ್ಲು ಕಾಲೇಜು ಸಮೀಪದ ಮೋನಪ್ಪ ಅವರ ಮನೆಯಲ್ಲಿ ಘಟನೆ ನಡೆದಿದೆ. ರೆಫ್ರಿಜರೇಟರ್ ಸ್ಫೋಟಗೊಂಡ ಹಿನ್ನೆಲೆ ಅಗ್ನಿ ಅವಘಡ ಸಂಭವಿಸಿದ್ದು, ಮನೆಯಲ್ಲಿ ಯಾರು ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಅಗ್ನಿಶಾಮಕ ದಳದವರೂ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ.
ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ರೇಣುಕಸ್ವಾಮಿ ಎನ್ನುವ ವ್ಯಕ್ತಿಯೊರ್ವ ಅಶ್ಲೀಲ ಸಂದೇಶ ಕಳಿಸಿದ್ದಾನೆ ಎಂದು ಹತ್ಯೆ ಮಾಡಿದ ಆರೋಪ ನಟ ದರ್ಶನ್ ಮತ್ತು ಅವರ ಗ್ಯಾಂಗ್ ಮೇಲಿದೆ. ಸದ್ಯ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಆದರೆ ಈ ಪ್ರಕರಣದ ಬೆನ್ನಲ್ಲೆ ದರ್ಶನ್ ಅವರ ಸುತ್ತ ಮತ್ತೊಂದು ಪ್ರಕರಣವು ಸುತ್ತಿಕೊಂಡಿದೆ ಎನ್ನಲಾಗಿದೆ. ನಟ ದರ್ಶನ್ ಅವರಿಗೆ ಸೇರಿದ್ದೆನ್ನಲಾದ ಫಾರ್ಮ್ ಹೌಸ್ ನಲ್ಲಿ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದರ್ಶನ್ರ ಮ್ಯಾನೇಜರ್ ಆಗಿ ಕೆಲಸ ಮಾಡಿದ್ದ, ದರ್ಶನ್ರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಶ್ರೀಧರ್ ಎಂಬುವರು ಏಪ್ರಿಲ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಮೃತ ಮ್ಯಾನೇಜರ್ ಶ್ರೀಧರ್ ಆಗಿದ್ದಾರೆ. ಕಳೆದ ಏಪ್ರಿಲ್ ತಿಂಗಳಿನಲ್ಲಿ ಮ್ಯಾನೇಜರ್ ಶ್ರೀಧರ್ ಆತ್ಮಹತ್ಯೆಗೆ ಶರಣಾಗಿದ್ದ. ಬಗ್ಗನದೊಡ್ಡಿಯಲ್ಲಿನ ದುರ್ಗ ಫಾರ್ಮ್ ಹೌಸ್‌ನಲ್ಲಿ ಶ್ರೀಧರ್ ಮ್ಯಾನೇಜರ್ ಆಗಿ ಕೆಲಸ ಮಾಡಿಕೊಂಡಿದ್ದನು. ಆತ, ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದನು. ಇನ್ನು ಶ್ರೀಧರ್ ಮೃತ ದೇಹವನ್ನು ನೋಡಿದ್ದ ಆತನ ಶ್ನೇಹಿತ ಪೊಲೀಸರಿಗೆ ಮಾಹಿತಿ ನೀಡಿದ್ದನು.…
ಉಡುಪಿಯಲ್ಲಿ ಮತ್ತೊಂದು ಗ್ಯಾಂಗ್ ವಾರ್ ಪ್ರಕರಣ ಬೆಳಕಿಗೆ ಬಂದಿದ್ದು, ಉಡುಪಿಯ ಪುತ್ತೂರಿನ ಬಿರಿಯಾನಿ ಪಾಯಿಂಟ್ ಬಳಿ ಎರಡು ಗುಂಡುಪುಗಳ ನಡುವೆ ಮಾರಾಮಾರಿ ನಡೆದಿದೆ. ಪುತ್ತೂರು ಸಲೂನ್ ನೌಕರ ಚರಣ್, ಶಬರಿ ಎಂಬಾತನಿಗೆ ಬೈದ ಹಿನ್ನೆಲೆಯಲ್ಲಿ ಇದೇ ವಿಚಾರವಾಗಿ ಪ್ರವೀನ್ ಹಾಗೂ ಗ್ಯಾಂಗ್ ಚರಣ್ ನನ್ನು ಮಾತುಕತೆಗೆಂದು ಪುತ್ತೂರಿನ ಬಿರಿಯಾನಿ ಪಾಯಿಂಟ್ ಬಳಿ ಕರೆದಿದೆ. ಈ ವೇಳೆ ಚರಣ್ ತನ್ನ ಮೂವರು ಸ್ನೇಹಿತರೊಂದಿಗೆ ಬಂದಿದ್ದ. ಇದೇ ವೇಳೆ ಪ್ರವೀಣ್ ಹಾಗೂ ಗ್ಯಾಂಗ್ ಚರಣ್ & ಸ್ನೇಹಿತರ ಮೇಲೆ ತಲವಾರಿನಿಂದ ದಾಳಿ ನಡೆಸಿದೆ. ಘಟನೆ ಸಂಬಂಧ ಉಡುಪಿ ನಗರ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಶರು ಬಲೆ ಬೀಸಿದ್ದಾರೆ.
ಕಾಸರಗೋಡು: ಅವಳಿ ಸಹೋದರರಿಬ್ಬರು ಕಲ್ಲಿನ ಕ್ವಾರಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಚೀಮೇನಿ ಕನಿಯಾಂದಲದಲ್ಲಿ ನಡೆದಿದೆ.ಚೀಮೇನಿ ಕನಿಯಾಂದಲದಲ್ಲಿ ರಾಧಾಕೃಷ್ಣ ರವರ ಮಕ್ಕಳಾದ ಸುದೇವ್ ( 10) ಮತ್ತು ಶ್ರೀದೇವಿ ( 10) ಮೃತಪಟ್ಟವರು. ಚೀಮೇನಿ ಸರಕಾರಿ ಹಯರ್ ಸೆಕಂಡರಿ ಶಾಲೆಯ ಐದನೇ ತರಗತಿ ಯ ವಿದ್ಯಾರ್ಥಿಗಳಾಗಿದ್ದರು. ‘ಸಂಜೆ ಸುಮಾರು ಆರು ಗಂಟೆ ಸುಮಾರಿಗೆ ಘಟನೆ ಬೆಳಕಿಗೆ ಬಂದಿದೆ.ಮಧ್ಯಾಹ್ನ ಇಬ್ಬರೂ ಸೈಕಲ್ ನಲ್ಲಿ ಆಟವಾಡಲು ತೆರಳಿದ್ದು , ತಡವಾದರೂ ಆಗಮಿಸದ ಹಿನ್ನಲೆಯಲ್ಲಿ ಮನೆಯವರು ಹುಡುಕಾಟ ನಡೆಸಿದಾಗ ಕ್ವಾರಿಯ ಸಮೀಪ ಸೈಕಲ್ ಪತ್ತೆಯಾಗಿದೆ. ಸಂಶಯಗೊಂಡು ಮನೆಯವರು ಹಾಗೂ ಪರಿಸರವಾಸಿಗಳು ಶೋಧ ನಡೆಸಿದಾಗ ಕ್ವಾರಿಗೆ ಬಿದ್ದಿರುವುದು ಕಂಡುಬಂದಿದೆ.ಇಬ್ಬರನ್ನು ಮೇಲಕ್ಕೆತ್ತಿ ಸಮೀಪದ ಆಸ್ಪತ್ರೆಗೆ ತಲಪಿಸಿದರೂ ಇಬ್ಬರೂ ಮೃತಪಟ್ಟಿದ್ದರು.ಮೃತದೇಹವನ್ನು ಕಣ್ಣೂರು ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ










