ಬಂಟ್ವಾಳ: ಪಾಣೆಮಂಗಳೂರು ಗ್ರಾಮದ ಬೋಳಂಗಡಿ ಎಂಬಲ್ಲಿ ಒಣಗಲು ಹಾಕಿದ್ದ ಅಡಿಕೆಯನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಬಾಳ್ತಿಲ ಗ್ರಾಮದ ಕಸೆಕೋಡಿ ಮನೆ ನಿವಾಸಿ ಮಂಜುನಾಥ ಭೋವಿ(50) ಬಂಧಿತ ಆರೋಪಿಯಾಗಿದ್ದಾನೆ. ಈತನಿಂದ 105 ಕೆ.ಜಿ. ಅಡಿಕೆ, ಕಳವು ಕೃತ್ಯಕ್ಕೆ ಬಳಸಿದ ಸ್ಕೂಟರ್ ಹಾಗೂ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೋಳಂಗಡಿ ನಿವಾಸಿ ಐವನ್ ಥೋರಸ್ ಎಂಬವರು ತನ್ನ ಅಡಿಕೆ ತೋಟದ ಮಧ್ಯೆದಲ್ಲಿರುವ ಅಂಗಳದಲ್ಲಿ ಅಡಿಕೆ ಒಣಗಲು ಹಾಕಿದ್ದರು. ಡಿ.24 ಮತ್ತು ಡಿ.29ರ ಮಧ್ಯದ ಅವಧಿಯಲ್ಲಿ ಇದರಿಂದ 100-120 ಕೆ.ಜಿ ಅಡಿಕೆಯನ್ನು ಯಾರೋ ಕಳವುಗೈದಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಬಂಟ್ವಾಳ ನಗರ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಡಿ.30ರಂದು ಬಂಧಿಸಿದ್ದಾರೆ. ಬಂಧಿತ ಆರೋಪಿ ಮಂಜುನಾಥ ಭೋವಿ ವಿರುದ್ಧ ಕೊಣಾಜೆ, ಉಳ್ಳಾಲ ಪೊಲೀಸ್ ಠಾಣೆಗಳಲ್ಲಿ ಅಲ್ಲದೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ, ಕಾರವಾರ, ಹೊನ್ನಾವರ ಠಾಣಾ ವ್ಯಾಪ್ತಿಯಲ್ಲಿ ಕಳವು ಕೃತ್ಯಗಳಲ್ಲಿ ಭಾಗಿಯಾಗಿದ ಪ್ರಕರಣಗಳು…
Author: main-admin
ಹೊಸ ವರ್ಷದ ಮೊದಲ ದಿನವೇ ಶ್ರೀಸಾಮಾನ್ಯನಿಗೆ ದೊಡ್ಡ ಶಾಕ್ ಕಾದಿದೆ. ಜನವರಿ 1, 2023 ರಿಂದ ಗ್ಯಾಸ್ ಸಿಲಿಂಡರ್‌ಗಳ ಬೆಲೆಗಳು ಹೆಚ್ಚಾಗಿದೆ. ಇಂದಿನಿಂದ ಸಿಲಿಂಡರ್ ಖರೀದಿ ದುಬಾರಿಯಾಗಿದೆ. ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಮತ್ತಷ್ಟು ಏರಿಕೆಯಾಗಿದ್ದು, ಗ್ರಾಹಕರಿಗೆ ಸಂಕಷ್ಟ ಎದುರಾಗುವಂತೆ ಮಾಡಿದೆ. ಇನ್ನು ದೆಹಲಿ, ಮುಂಬೈನಿಂದ ಪಾಟ್ನಾವರೆಗಿನ ಎಲ್ಲಾ ನಗರಗಳಲ್ಲಿ ಗ್ಯಾಸ್ ಸಿಲಿಂಡರ್ ಖರೀದಿ ದುಬಾರಿಯಾಗಿದೆ. ಯಾವ ನಗರದಲ್ಲಿ ಸಿಲಿಂಡರ್ ದರ ಎಷ್ಟಿದೆ ಎಂದು ತಿಳಿಯೋಣ. ಜನವರಿ 1, 2023 ರಿಂದ ವಾಣಿಜ್ಯ ಸಿಲಿಂಡರ್‌ಗಳ ಬೆಲೆಗಳು ಹೆಚ್ಚಾಗಿದೆ. ದೇಶೀಯ ಗ್ಯಾಸ್ ಸಿಲಿಂಡರ್ಗಳ ಬೆಲೆಗಳಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ. ಆದರೆ ವಾಣಿಜ್ಯ ಸಿಲಿಂಡರ್‌ಗಳ ಬೆಲೆಯಲ್ಲಿ ಬರೋಬ್ಬರಿ 25 ರೂ. ಹೆಚ್ಚಳವಾಗಿದೆ. ವಾಣಿಜ್ಯ ಸಿಲಿಂಡರ್ ದರಗಳು: (ರೂ.ಗಳಲ್ಲಿ) ದೆಹಲಿ – 1769 ರೂ. ಮುಂಬೈ – 1721 ರೂ. ಕೊಲ್ಕತ್ತಾ – 1870 ರೂ. ಚೆನ್ನೈ – 1917 ರೂ. ದೇಶೀಯ ಸಿಲಿಂಡರ್ ದರಗಳು- (ರೂ.ಗಳಲ್ಲಿ) ದೆಹಲಿ – 1053 ರೂ. ಮುಂಬೈ – 1052.5 ರೂ.…
ಬೆಂಗಳೂರು : ಕಲರ್ಸ್ ಕನ್ನಡದ ಈ ಬಾರಿಯ ಬಿಗ್ ಬಾಸ್ 9 ರ ವಿಜೇತರಾಗಿ ಕರಾವಳಿಯ ಪ್ರತಿಭಾನ್ವಿತ ನಟ ರೂಪೇಶ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಗಿರಿಗಿಟ್ ಚಿತ್ರದ ತುಳುನಾಡಿನ ಪ್ರೇಕ್ಷಕರ ಮನಗೆದ್ದ ನಟ ಈಗ ಬಿಗ್ ಬಾಸ್ ವಿನ್ನರ್ ಆಗಿದ್ದಾರೆ. ಒಟಿಟಿ ಮೂಲಕ ಕಾಲಿಟ್ಟ ರೂಪೇಶ್ ಶೆಟ್ಟಿ, ಟಿವಿ ಬಿಗ್ ಬಾಸ್‌ನಲ್ಲಿಯೂ ಸ್ಪರ್ಧಿಯಾಗಿ ಪೈಪೋಟಿ ನೀಡಿದ್ದರು. ಒಟಿಟಿ ಟಾಪರ್ ಆಗಿದ್ದ ರೂಪೇಶ್ ಶೆಟ್ಟಿ ಈಗ ಬಿಗ್ ಬಾಸ್ ಸೀಸನ್ 9ರ ವಿನ್ನರ್ ಆಗಿದ್ದಾರೆ. ರಾಕೇಶ್ ಅಡಿಗಗೆ ಟಫ್ ಫೈಟ್ ಕೊಟ್ಟು, ಬಿಗ್ ಬಾಸ್ ವಿನ್ನರ್ ಟೈಟಲ್ ಅನ್ನ ತಮ್ಮದಾಗಿಸಿಕೊಂಡಿದ್ದಾರೆ. ರಾಕೇಶ್ ಅಡಿಗ ರನ್ನರ್ ಅಪ್ ಆಗಿದ್ದಾರೆ. 2ನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ಒಟ್ನಲ್ಲಿ ರೂಪೇಶ್ ಶೆಟ್ಟಿ ಗೆಲವು ಕನ್ನಡಿಗರಿಗೆ, ತುಳುನಾಡಿನ ಸಮಸ್ತ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ.
ಆಡುಗಳಿಗೆ ಹೊಂಚು ಹಾಕಿ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ. ಸಾಲೆತ್ತೂರು ನಿವಾಸಿಗಳಾದ ಅಜೀಮ್ (19), ಅನಸ್ (19) ಪೊಲೀಸ್ ವಶವಾದವರು. ಪೆರುವಾಯಿ, ಅಡ್ಯನಡ್ಕ, ಕೇಪು, ಮರಕ್ಕಿಣಿ, ಅಳಿಕೆ ಮುಂತಾದ ಪ್ರದೇಶಗಳಿಂದ ಗುಡ್ಡಕ್ಕೆ ಮೇಯಲೆಂದು ಬಿಡುತ್ತಿದ್ದ ಆಡುಗಳು ನಾಪತ್ತೆಯಾಗುತ್ತಿದ್ದವು. ಆಡುಗಳ ನಾಪತ್ತೆ ಹಿಂದೆ ಖದೀಮರ ಕೈಚಳಕವನ್ನು ಪತ್ತೆ ಹಚ್ಚುವ ಸಲುವಾಗಿ ಆಡು ಮಾಲಕರು ಕಾಯುತ್ತಿದ್ದರು. ಶುಕ್ರವಾರ ಮುಂಜಾನೆ ಕಳ್ಳರ ಪತ್ತೆಗಾಗಿ ಮಾಲಕರು ಕಾಯುತ್ತಿದ್ದ ವೇಳೆ ಕೇಪು ಕಲ್ಲಂಗಳ ದ್ವಾರದ ಸಮೀಪ ಆಡು ಕಳ್ಳರಿಬ್ಬರು ಸಾರ್ವಜನಿಕರಿಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.ಕೂಡಲೇ ಇಬ್ಬರನ್ನು ಹಿಡಿದುಕೊಂಡು ಸಾರ್ವಜನಿಕರು ಪೊಲೀಸರಿಗೊಪ್ಪಿಸಿದ್ದಾರೆ. ಆದರೆ ಠಾಣೆಯಲ್ಲಿ ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಸುಳ್ಯ : ನಿಂತಿದ್ದ ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆ ಕಾಣಿಸಿಕೊಂಡಿದ್ದು, ಪೈಲಟ್ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದ ಘಟನೆ ನೆಟ್ಟಣ ರೈಲ್ವೆ ನಿಲ್ದಾಣದಲ್ಲಿ ಇಂದು ನಸುಕಿನ ಜಾವ ನಡೆದಿದೆ. ಮಂಗಳೂರು, ಪುತ್ತೂರು, ಸುಳ್ಯ ಅಗ್ನಿಶಾಮಕದಳ ಮತ್ತು ರೈಲ್ವೆ ಇಲಾಖೆಯ ಸಹಕಾರದೊಂದಿಗೆ ಅನಿಲ ಸೋರಿಕೆ ತಡೆಯುವ ಕಾರ್ಯಾಚರಣೆ ನಡೆದಿದೆ. ಸುಳ್ಯ, ಬೆಳ್ತಂಗಡಿ, ಮಂಗಳೂರು, ಪುತ್ತೂರು ಅಗ್ನಿಶಾಮಕ ದಳದ ನಾಲ್ಕು ಅಗ್ನಿ ಶಮನ ಯಂತ್ರಗಳು ಹಾಗೂ ರೈಲ್ವೆ ಇಲಾಖೆಯ ಸಹಕಾರದೊಂದಿಗೆ ಅನಿಲ ಸೋರಿಕೆ ತಡೆಯುವ ಕಾರ್ಯಾಚರಣೆ ನಡೆದಿದೆ. ಮಂಗಳೂರಿನಿಂದ ಮಹರಾಷ್ಟ್ರಕ್ಕೆ ಅನಿಲ ತುಂಬಿಕೊಂಡು ಹೋಗುತ್ತಿದ್ದ ಗೂಡ್ಸ್ ರೈಲನ್ನು ಸುಬ್ರಮಣ್ಯ ರೋಡ್ ರೈಲ್ವೆ ನಿಲ್ದಾಣದಲ್ಲಿ ರಾತ್ರಿ ಗಂಟೆ 2.30 ರ ಸುಮಾರಿಗೆ ನಿಲ್ಲಿಸಲಾಗಿತ್ತು. ಈ ಸಮಯದಲ್ಲಿ ಲೋಕೊ ಪೈಲಟ್ ಕೆಳಗಿಳಿದಾಗ ಸುಮಾರು 43 ಗೂಡ್ಸ್ ಪ್ಯಾನೆಲ್‌ಗಳ ಪೈಕಿ ನಾಲ್ಕನೇ ಟ್ಯಾಂಕ್‌ನಿಂದ ಅನಿಲ ಸೋರಿಕೆಯಾಗುತ್ತಿರುವುದು ತಿಳಿದು ಬಂದಿದೆ. ತಕ್ಷಣವೇ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ರೈಲ್ವೆ ನಿಲ್ದಾಣದಿಂದ ಪುತ್ತೂರು ಅಗ್ನಿಶಾಮಕ ದಳಕ್ಕೆ ಕರೆ ಮಾಹಿತಿ ನೀಡಲಾಯಿತು.…
ಮಂಗಳೂರು: ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. ಹೊಸ ವರ್ಷಾಚರಣೆಯ ಸಂಧರ್ಭದಲ್ಲಿ ಮಂಗಳೂರು ನಗರದಾದ್ಯಂತ ಕಟ್ಟುನಿಟ್ಟಿನ ನಿಯಮ ಜಾರಿ ಮಾಡಲಾಗಿದೆ. ಈ ಬಗ್ಗೆ ಮಾಧ್ಯಮಗಳಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಹೇಳಿಕೆ ನೀಡಿದ್ದು, ಕಾನೂನು ಮೀರಿ ತಿರುಗಾಡುವವರನ್ನು ವಶಕ್ಕೆ ಪಡೆಯುವ ಎಚ್ಚರಿಕೆ ನೀಡಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಜಿಲ್ಲಾಧಿಕಾರಿಗಳ ಸಭೆಯಂತೆ ನಿಯಮಾವಳಿ ರೂಪಿಸಲಾಗಿದೆ. 12.30ಕ್ಕೆ ಕಾರ್ಯಕ್ರಮ ಮುಗಿಸಿ 10 ಗಂಟೆಗೆ ಧ್ವನಿ ವರ್ಧಕ ಬಂದ್ ಮಾಡಬೇಕು. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 32 ಚೆಕ್ ಪೋಸ್ಟ್ ಹಾಕಲಾಗಿದೆ. ಯಾವುದೇ ತೊಂದರೆ ಇಲ್ಲದೇ ಸಂಭ್ರಮಾಚರಣೆಗಳನ್ನು ಮಾಡಬೇಕು ಎಂದು ಹೇಳಿದ್ದಾರೆ. ಬೀಚ್ ಅಥವಾ ಯಾವುದೇ ಜಾಗದಲ್ಲಿ ಸಂಭ್ರಮಾಚರಣೆ ಮಾಡಲು ಅನುಮತಿ ಪಡೆದು ಮಾಡಬೇಕು. ಅನುಮತಿ ಇಲ್ಲದೇ ಯಾವುದೇ ಆಚರಣೆಗೆ ಅವಕಾಶ ಇಲ್ಲ. ರಾತ್ರಿ 12.30ಗೆ ಎಲ್ಲವೂ ಕ್ಲೋಸ್ ಆಗುವಾಗ ಆ ಬಳಿಕ ಯಾರೂ ರಸ್ತೆಯಲ್ಲಿ ಇರಬಾರದು. ತ್ರಿಬಲ್ ರೈಡ್ ಅಥವಾ ಕುಡಿದು ವಾಹನ ಚಾಲನೆಗೆ ಅವಕಾಶ ಇಲ್ಲ ಎಂದು ಶಶಿಕುಮಾರ್ ತಿಳಿಸಿದ್ದಾರೆ. ಕಮಿಷನರ್…
ಗುಜರಾತ್: ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತವಾದ ಪರಿಣಾಮ 9 ಮಂದಿ ದಾರುಣ ಅಂತ್ಯ ಕಂಡ ಘಟನೆ ಗುಜರಾತ್ ನಲ್ಲಿ ವರದಿಯಾಗಿದೆ. 28 ಮಂದಿಗೆ ಗಾಯಗಳಾಗಿದ್ದು, ಇದರಲ್ಲಿ 11 ಮಂದಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಎಂದು ತಿಳಿದು ಬಂದಿದೆ. ಬಸ್ಸಿನಲ್ಲಿದ್ದವರು ಸೂರತ್ ನಲ್ಲಿನ ಪ್ರಮುಖ್ ಸ್ವಾಮಿ ಮಹಾರಾಜ್ ಶತಾಬ್ದಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಾಸ್ ಆಗುತ್ತಿದ್ದ. ವೇಳೆ ಬಸ್ಸಿನ ಚಾಲಕನಿಗೆ ಹೃದಯಾಘಾತ ಸಂಭವಿಸಿ ಎಸ್ ಯುವಿ ಕಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ
ಉಳ್ಳಾಲ :ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿದ್ದ ಕುಂಬಳೆ ನಿವಾಸಿ ಗಣೇಶ್ ಶೆಟ್ಟಿ (45) ಮೃತದೇಹ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರು ಜಂಕ್ಷನ್ ಬಳಿಯ ಮಳೆನೀರು ಹರಿಯುವ ಚರಂಡಿಯಲ್ಲಿ ಪತ್ತೆಯಾಗಿದ್ದು, ಅಪರಿಚಿತ ವಾಹನ ಢಿಕ್ಕಿಯಾಗಿ ಅಪಘಾತ ಸಂಭವಿಸಿರುವ ಸಾಧ್ಯತೆಯ ಬಗ್ಗೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗಣೇಶ್ ಶೆಟ್ಟಿ ಸಂಜೆ ವೇಳೆಗೆ ಹೊಟೇಲ್‌ನಲ್ಲಿ ಅಡುಗೆ ಸಹಾಯಕರಾಗಿ ದುಡಿಯುತ್ತಿದ್ದರು. ದೇರಳಕಟ್ಟೆಯಲ್ಲಿ ಪತ್ನಿ ಮತ್ತು ಮಗುವಿನೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಗಣೇಶ್ ಶೆಟ್ಟಿ ಮೃತದೇಹ ಚರಂಡಿಯಲ್ಲಿ ಪತ್ತೆಯಾಗಿದ್ದು, ತಲೆ ಭಾಗಕ್ಕೆ ಗಾಯಗಳಾಗಿವೆ. ಅಪಘಾತದಲ್ಲಿ ಮೃತಪಟ್ಟರೋ ಅಥವಾ ಸಾವಿಗೆ ಯಾವುದೇ ಬೇರೆ ಕಾರಣದ ಬಗ್ಗೆ ಪೊಲೀಸರ ತನಿಖೆ ನಡೆಯುತ್ತಿದೆ.
ಮಂಗಳೂರು ನಗರ ಸಂಚಾರಿ ಪೊಲೀಸರು ಕಾರಿನಲ್ಲಿ ಸಂಚರಿಸಿದ ಪ್ರಯಾಣಿಕ ಹೆಲ್ಮೆಟ್ ಧರಿಸಿಲ್ಲವೆಂದು 500 ರೂಪಾಯಿಗಳ ದಂಡ ಕಟ್ಟುವಂತೆ ಸೂಚಿಸಿದ್ದಾರೆ. ನವೆಂಬರ್ 29ರಂದು ಮಂಗಳಾದೇವಿಯಲ್ಲಿ ನಡೆದ ಟ್ರಾಫಿಕ್ ಉಲ್ಲಂಘನೆಗೆ ಸಂಬಂಧಿಸಿದಂತೆ ಈ ನೋಟಿಸ್ ಜಾರಿಯಾಗಿದ್ದು, ಡಿ.22ರಂದು ಚಾಲಕನ ಕೈಸೇರಿದೆ. ನೋಟಿಸ್‌ನಲ್ಲಿ ಎಡವಟ್ಟಾಗಿ ಬೈಕ್ ಎಂಬುದರ ಬದಲು “ಕಾರು’ ಎಂದು ನಮೂದಿಸಲಾಗಿದ್ದು, ಉಲ್ಲಂಘನೆ ರೀತಿ ಕಾಲಂನಲ್ಲಿ “ಸಹಸವಾರ ಹೆಲ್ಮೆಟ್ ಧರಿಸಿಲ್ಲ’ ಎಂದಿದೆ. ನೋಟಿಸ್‌ನಲ್ಲಿ ಉಲ್ಲಂಘನೆ ನಡೆದ ಸ್ಥಳದ ಚಿತ್ರವಿದೆ. ಅದರಲ್ಲಿ ದ್ವಿಚಕ್ರ ವಾಹನವೊಂದರಲ್ಲಿ ಸಹ ಸವಾರ ಹೆಲ್ಮೆಟ್ ಇಲ್ಲದೆ ಸಂಚರಿಸುತ್ತಿರುವುದು ಕಾಣಿಸುತ್ತಿದ್ದು, ಸ್ವಲ್ಪ ದೂರದಲ್ಲಿ ಕಾರು ಕೂಡ ಇದೆ. ಮಂಗಳೂರು ನಗರ ಸಂಚಾರ ಪೊಲೀಸ್ ಆಟೋಮೇಶನ್ ಸೆಂಟರ್‌ನಿಂದ ನೋಟಿಸ್ ಕಳುಹಿಸುವ ಸಂದರ್ಭ ದ್ವಿಚಕ್ರ ವಾಹನ ಸವಾರನಿಗೆ ನೋಟಿಸ್ ಕಳುಹಿಸುವ ಬದಲು ಕಾರು ಚಾಲಕನ ವಿಳಾಸಕ್ಕೆ ಕಳುಹಿಸಿರುವ ಸಾಧ್ಯತೆ ಇದೆ. ಒಟ್ಟಿನಲ್ಲಿ ಪೊಲೀಸರು ಮಾಡಿರುವ ಎಡವಟ್ಟು ಮಾತ್ರ ನಗಪಾಟಲಿಗೆ ಈಡಾಗಿದೆ.
ಬೆಳ್ತಂಗಡಿ : ಕಾರು — ಬೈಕ್ ನಡುವೆ ಭೀಕರ ಅಪಘಾತ ನಡೆದಿದ್ದು, ಪರಿಣಾಮವಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳದ ಕನ್ಯಾಡಿಯಲ್ಲಿ ನಡೆದಿದೆ. ಅಪಘಾತದ ತೀವ್ರತೆಗೆ ಬೈಕ್ ನ ಮುಂಭಾಗದ ಚಕ್ರ ಕಳಚಿ ಹೋಗಿದೆ. ಧರ್ಮಸ್ಥಳದಿಂದ ಉಜಿರೆ ಕಡೆ ಬರುತ್ತಿದ್ದ ಬೈಕ್ ಹಾಗೂ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಕಾರು ನಡುವೆ ಧರ್ಮಸ್ಥಳ ಗ್ರಾಮದ ಕನ್ಯಾಡಿ ರಾಮಮಂದಿರದ ಬಳಿಯ ಕ್ರಾಸ್ ನಲ್ಲಿ ಅಪಘಾತ ನಡೆದಿದ್ದು ಬೈಕ್ ಸವಾರ ಧರ್ಮಸ್ಥಳ ನಿವಾಸಿ ನಿತೇಶ್(28) ಗಂಭೀರ ಗಾಯಗೊಂಡಿದ್ದು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದ ವೇಳೆ ಕಾರಿನ ಏರ್ ಬ್ಯಾಗ್ ಓಪನ್ ಅಗಿರುವ ಕಾರಣ ಕಾರಿನಲ್ಲಿದ್ದವರಿಗೆ ಯಾವುದೇ ಗಾಯವಾಗಿಲ್ಲ. ಬೈಕ್ ಸವಾರನ ಓವರ್ ಸ್ವೀಡ್ ಆಗಿ ಹೋಗುತ್ತಿದ್ದ ಎನ್ನಲಾಗಿದ್ದು ಕಾರು ಚಾಲಕ ತಿರುವಿನಲ್ಲಿ ಸಂಪೂರ್ಣ ರಸ್ತೆಯ ಬಲಭಾಗಕ್ಕೆ ವಾಹನವನ್ನು ತಂದಿದ್ದು ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಬೈಕ್ ನ ಮುಂಭಾಗದ ಚಕ್ರ ಕಳಚಿ ಹೋಗಿದ್ದು , ಕಾರಿಗೂ ಹಾನಿಯಾಗಿದೆ. ಈ ಬಗ್ಗೆ ಬೆಳ್ತಂಗಡಿ…