Author: main-admin

ಉಳ್ಳಾಲ : ಕಳೆದೆರಡು ದಿವಸಗಳಿಂದ ತಲೆನೋವು, ಜ್ವರದಿಂದ ಬಳಲುತ್ತಿದ್ದ ಶಾಲಾ ಬಾಲಕನೋರ್ವ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಶ್ವಿತ್ ಮೃತ ಬಾಲಕನಾಗಿದ್ದು ಈತ ಮೆದುಳು ಜ್ವರದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಎರಡು ದಿನಗಳಿಂದ ಜ್ವರ, ತಲೆನೋವು ಎನ್ನುತ್ತಿದ್ದ ಅಶ್ವಿತ್ ನಾಳೆ ನಡೆಯಲಿರುವ ಶಾಲಾ ವಾರ್ಷಿಕೋತ್ಸವದ ಸ್ಕಿಟ್ ನಲ್ಲೂ ಭಾಗವಹಿಸಲು ತಯಾರಿ ನಡೆಸಿದ್ದ. ವಿದ್ಯಾರ್ಥಿಯ ಅಕಾಲಿಕ ಮರಣದಿಂದ ಶಾಲಾ ಆಡಳಿತ ಮಂಡಳಿ ,ಕುಟುಂಬ ಹಾಗೂ ಸ್ಥಳೀಯರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಎರಡು ವರ್ಷಗಳ ಹಿಂದೆ ಅಶ್ವಿತ್ ನ ತಂದೆ ಅವಘಡವೊಂದರಲ್ಲಿ ಸಾವನ್ನಪ್ಪಿದ್ದರು.ಕೊಲ್ಯ ಸಾರಸ್ವತ ಕಾಲನಿಯ ಮನೆಯಲ್ಲಿ ಅಶ್ವಿತ್ ತಾಯಿಯೊಂದಿಗೆ ವಾಸವಿದ್ದ. ಅಶ್ವಿತ್ ಶಾಲೆಯಲ್ಲೂ ಪ್ರತಿಭಾನ್ವಿತನಾಗಿದ್ದು ಶಿಕ್ಷಕರ ಪ್ರೀತಿ ಪಾತ್ರನಾಗಿದ್ದ. ಮೃತ ಅಶ್ವಿತ್ ಗೆ ಕೊನೆಯ ಕ್ಷಣದಲ್ಲಿ ಮಿದುಳು ಜ್ವರದ ಲಕ್ಷಣ ಇತ್ತೆಂದು ಹೇಳಲಾಗಿದೆ. ಆತನಿಗೆ ಮಿದುಳು ಜ್ವರದ ವ್ಯಾಕ್ಸಿನೇಷನ್‌ ಆಗಿದೆಯೇ ಎಂದು ಇನ್ನೂ ಧೃಡಪಟ್ಟಿಲ್ಲ. ಈ ಬಗ್ಗೆ…

Read More

ಮಂಗಳೂರು: ಪೌರ ಕಾರ್ಮಿಕರಿಗೆ ಪ್ರತಿ ತಿಂಗಳ 5ನೇ ತಾರೀಖಿನೊಳಗೆ ಕಡ್ಡಾಯವಾಗಿ ವೇತನ ಪಾವತಿಸಬೇಕು, ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಜಿಲ್ಲಾ ಖಜಾನೆ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅವರು ಡಿ.29ರ ಗುರುವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಫಾಯಿ ಕರ್ಮಚಾರಿ/ಮ್ಯಾನಯುಯಲ್ ಸ್ಕ್ಯಾವೆಂಜರ್‍ಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲಾ ಖಜಾನೆಯ ಉಪ ನಿರ್ದೇಶಕರು ಈ ಸಂಬಂಧ ಕೂಡಲೇ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು, ಮಂಗಳೂರು ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಕಡ್ಡಾಯವಾಗಿ ಆಯಾ ಮಾಹೆಯ 5ರೊಳಗೆ ವೇತನ ಪಾವತಿ ಆಗಬೇಕು, ನಗರವನ್ನು ಸ್ವಚ್ಛಗೊಳಿಸುವ ಪೌರ ಕಾರ್ಮಿಕರು ಉತ್ತಮ ಆರೋಗ್ಯದಿಂದಿರುವುದು ಅತಿ ಮುಖ್ಯ, ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ, ಜಿಲ್ಲೆಯಲ್ಲಿರುವ ಮೆಡಿಕಲ್ ಹಾಗೂ ನರ್ಸಿಂಗ್ ಕಾಲೇಜುಗಳ ಸಹಯೋಗದಲ್ಲಿ ಪ್ರತಿ ತಿಂಗಳು ಪೌರಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಬೇಕು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ದುಡಿಯುವ ಎಲ್ಲಾ ಪೌರಕಾರ್ಮಿಕರಿಗೆ ಮೂಲಭೂತ ಸೌಕರ್ಯ, ಸ್ನಾನ ಗೃಹ, ಶೌಚಾಲಯ, ವಿಶ್ರಾಂತಿ…

Read More

ಅಹಮದಾಬಾದ್: ಕಳೆದ ಎರಡು ದಿನಗಳಿಂದ ಅಹ್ಮದಾಬಾದ್ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಂತ ಪ್ರಧಾನಿ ನರೇಂದ್ರ ಮೋದಿಯವರ ( Prime Minister Narendra Modi ) ತಾಯಿ ಹೀರಾ ಬೇನ್ ಮೋದಿ ( Heeraben Modi )ಅವರು, ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿರೋದಾಗಿ ತಿಳಿದು ಬಂದಿದೆ. ಈ ಬಗ್ಗೆ ಟ್ವಿಟ್ ಮಾಡಿರುವಂತ ಪ್ರಧಾನಿ ಮೋದಿಯವರು, ತಮ್ಮ ತಾಯಿ ಹೀರಾಬೇನ್ ಮೋದಿಯವರು 100ನೇ ವಯಸ್ಸಿನಲ್ಲಿ ನಿಧನರಾಗಿರೋದಾಗಿ ತಿಳಿಸಿದ್ದಾರೆ. ಅಂದಹಾಗೇ ಅಹ್ಮದಾಬಾದ್ ನ ಆಸ್ಪತ್ರೆಗೆ ಅನಾರೋಗ್ಯದಿಂದಾಗಿ ಎರಡು ದಿನಗಳ ಹಿಂದೆ ಪ್ರಧಾನಿ ಮೋದಿಯವರ ತಾಯಿ ಹೀರಾಬೇನ್ ದಾಖಲಾಗಿದ್ದರು. ತಮ್ಮ ತಾಯಿಯ ಆರೋಗ್ಯವನ್ನು ಮೋದಿಯವರು ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿದ್ದರು. ಅವರ ಆರೋಗ್ಯ ಸುಧಾರಿಸುತ್ತಿದೆ. ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವುದಾಗಿಯೂ ವೈದ್ಯರು ಹೇಳಿದ್ದರು. ಈ ಬೆನ್ನಲ್ಲೆ ಇದೀಗ ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬೇನ್ ಮೋದಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

Read More

ತಿರುವನಂತಪುರ:ನಿಷೇಧಿತ ಪಿಎಫ್ ಐ ನಾಯಕರ‌‌ ಮನೆಗಳಿಗೆ ಮತ್ತೆ ಎನ್ ಐಎ ಅಧಿಕಾರಿಗಳು ದಾಳಿ‌ ನಡೆಸಿ ಪರಿಶೀಲನೆ‌ ನಡೆಸಿದ್ದಾರೆ. ಕೇರಳದ ಪಾಲಕ್ಕಾಡ್, ಕೊಲ್ಲಂ, ಕೋಝಿಕ್ಕೋಡು, ಆಲಪ್ಪುಝ, ಪಟ್ಟನಂತಿಟ್ಟ, ಎರ್ನಾಕುಲಂ, ಮಲಪ್ಪುರಂ, ತಿರುವನಂತಪುರಂ ಮುಂತಾದ 28 ಕಡೆಗಳಲ್ಲಿ ಎನ್’ಐಎ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ. ‌‌‌ಬೆಳ್ಳಂಬೆಳಿಗ್ಗೆ ಸ್ಥಳೀಯ ಪೊಲೀಸರ ನೆರವಿನೊಂದಿಗೆ ಎನ್ ಐಎ ಅಧಿಕಾರಿಗಳು ಈ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ.

Read More

ನವದೆಹಲಿ: ಪ್ರಾಣಿಗಳ ಮೇಲೆ ಕ್ರೌರ್ಯ ಮೆರೆದಿರುವ ಆಘಾತಕಾರಿ ಘಟನೆಯೊಂದು ದೆಹಲಿಯಲ್ಲಿ ನಡೆದಿದೆ. ಎರಡು ಬೀದಿ ನಾಯಿಗಳ ಮರಿಗಳನ್ನು ಕತ್ತು ಹಿಸುಕಿ ಕೊಂದು ದೆಹಲಿಯ ದ್ವಾರಕಾ ನೆರೆಹೊರೆಯ ಖಾಲಿ ಜಾಗದಲ್ಲಿ ನೇತು ಹಾಕಿರುವ ಘಟನೆ ನಡೆದಿದೆ. ಘಟನೆ ಸಂಬಂಧ ದ್ವಾರಕಾ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 429 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಫೇಸ್‌ಬುಕ್ ಗ್ರೂಪ್ ‎SGACC (ಸಂಜಯ್ ಗಾಂಧಿ ಅನಿಮಲ್ ಕೇರ್ ಸೆಂಟರ್) ಪೋಸ್ಟ್‌ ಪ್ರಕಾರ, ನಾಯಿಮರಿಗಳನ್ನು ಡಿಸೆಂಬರ್ 27 ರ ಸಂಜೆ ದ್ವಾರಕಾದ ಸೆಕ್ಟರ್ 9 ರ ಆಜಾದ್ ಹಿಂದ್ ಅಪಾರ್ಟ್‌ಮೆಂಟ್‌ನ ಪಕ್ಕದ ಖಾಲಿ ಪ್ಲಾಟ್‌ನಲ್ಲಿ ತೆಗೆದುಕೊಂಡು ಹೋಗಲಾಗಿದೆ ಎನ್ನಲಾಗುತ್ತಿದೆ. ನಾಯಿಮರಿಗಳು ಆರೋಗ್ಯವಾಗಿದ್ದವು, ಅವು ಖಾಲಿ ಪ್ಲಾಟ್‌ನಲ್ಲಿಯೇ ಇರುತ್ತಿದ್ದವು. ಆದರೆ ಯಾರೋ ಕೃತ್ಯವೆಸಗಿದ್ದಾರೆ. ಕ್ರಮಿನಾಶಕವನ್ನು ನೀಡಿ ಕೊಲ್ಲಲಾಗಿದೆ ಎನ್ನಲಾಗುತ್ತಿದೆ. ಉಳಿದ ನಾಲ್ಕು ಮರಿಗಳನ್ನು ಸ್ಥಳೀಯ ಆಶ್ರಯಕ್ಕೆ ಸ್ಥಳಾಂತರಿಸಲಾಗಿದೆ ಎಂದು ಫೇಸ್ ಬುಕ್ ಪೋಸ್ಟ್ ನಲ್ಲಿ ಹೇಳಲಾಗಿದೆ. ಬದುಕುಳಿದ ಅವರ ನಾಲ್ಕು ಒಡಹುಟ್ಟಿದವರನ್ನು ಕ್ರಿಮಿನಾಶಕ ನಂತರ ಅವರ ತಾಯಿ ಹಿಂದಿರುಗುವವರೆಗೆ…

Read More

ಉಡುಪಿ: ಕೆಲಸದ ಸಮಯದಲ್ಲಿ ಶಾಲಾ ಆವರಣದಲ್ಲಿ ಮದ್ಯಪಾನ ಮಾಡಿ ಮಲಗಿದ್ದ ಪೆರ್ಡೂರು ಸಮೀಪದ ಅಲಂಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೃಷ್ಣಮೂರ್ತಿ ನಾಯಕ್ ಅವರನ್ನು ಅಮಾನತುಗೊಳಿಸಲಾಗಿದೆ. ಬಡ ಮಕ್ಕಳ ಭವಿಷ್ಯ ರೂಪಿಸಬೇಕಾದ ಶಿಕ್ಷಕ ಮದ್ಯ ಸೇವಿಸಿ ಅಮಲಿನಲ್ಲಿ ತೇಲುತ್ತಾ ಶಾಲೆಯ ಜಗಲಿ ಮೇಲೆ ಸುಖ ನಿದ್ದೆ ಮಾಡಿದ್ದು, ಈ ಘಟನೆಗೆ ಪೆರ್ಡೂರು ಗ್ರಾ.ಪಂ. ಅಧ್ಯಕ್ಷರು, ಶಾಲಾಭಿವೃದ್ಧಿ ಸಮಿತಿ, ಗ್ರಾಮಸ್ಥರು ಹಾಗೂ ಸಾಮಾಜಿಕ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಕ್ರಮಕ್ಕೆ ಆಗ್ರಹಿಸಿದ್ದರು. ಘಟನೆಯ ಸತ್ಯಾಸತ್ಯತೆಯ ವರದಿ ಪರಿಶೀಲಿಸಿದ ಡಿಡಿಪಿಐ ಗಣಪತಿ ಕೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಕುಡುಕ ಶಿಕ್ಷಕ ಕೃಷ್ಣಮೂರ್ತಿ ನಾಯಕ್ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

Read More

ಉಜಿರೆ: ಬೊಲೋರೊ ವಾಹನವೊಂದು ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿದ್ದು ಆಟೋದಲ್ಲಿದ್ದ ನಾಲ್ಕು ಜನರಿಗೆ ಗಂಭೀರ ಗಾಯಗೊಂಡ ಘಟನೆ ಉಜಿರೆಯ ಓಡಲ ಕ್ರಾಸ್ ನಲ್ಲಿ ಡಿ.28 ರಂದು ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಓಡಲ ಕ್ರಾಸ್ ನಲ್ಲಿ ಬೆಳಾಲು ಕಡೆಯಿಂದ ಉಜಿರೆ ಕಡೆಗೆ ಹೋಗುತ್ತಿದ್ದ ಆಟೋ ರಿಕ್ಷಾಕ್ಕೆ ಉಜಿರೆ ಕಡೆಯಿಂದ ಬರುತ್ತಿದ್ದ ಕಾರ್ಯತಡ್ಕ ನಿವಾಸಿ ಚಾಲಕ ಸಾಂತಪ್ಪ ಎಂಬವರ ಬೊಲೋರೊ ವಾಹನ ಓವರ್ ಟೇಕ್ ಮಾಡುವ ರಭಸದಲ್ಲಿ ಡಿ.28 ರಂದು ರಾತ್ರಿ ಸುಮಾರು 8:30 ಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ರಿಕ್ಷಾದಲ್ಲಿದ್ದ ಚಾಲಕ ಸೇರಿ ನಾಲ್ಕು ಮಂದಿಗೆ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ರಿಕ್ಷಾ ಚಾಲಕ ಗುರಿಪಳ್ಳ ನಿವಾಸಿ ಪ್ರವೀಣ್(42) , ಕುಪ್ಪೆಟ್ಟಿ ನಿವಾಸಿ ರಫೀಕ್(55) ಕೊಟ್ಟಿಗೆಹಾರ ನಿವಾಸಿಗಳಾದ ಸುಹೈಲ್ (30) ಹಾಗೂ ಚೇತನ್(27) ಗಂಭೀರವಾಗಿ ಗಾಯಗೊಂಡಿದ್ದರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಇದರಲ್ಲಿ ಸುಹೈಲ್ ಅವರ…

Read More

ಮಂಗಳೂರು: ತಂತ್ರಜ್ಞಾನವನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಂಡು ಅಪರಾಧ ಪತ್ತೆ, ನಿಯಂತ್ರಣ ಮತ್ತು ತ್ವರಿತ ತನಿಖೆಗೆ ಮುಂದಾಗಿರುವ ಪೊಲೀಸ್‌ ಇಲಾಖೆ ರಾಜ್ಯಾದ್ಯಂತ ಲಕ್ಷಾಂತರ ಸಿಸಿ ಕೆಮರಾಗಳನ್ನು ಜಿಯೋ ಟ್ಯಾಗಿಂಗ್‌ ಮಾಡಿಕೊಳ್ಳುತ್ತಿದೆ. ಸಾರ್ವಜನಿಕ ಸುರಕ್ಷೆ ಕಾಯಿದೆ ಯಡಿ ದಿನಕ್ಕೆ 500ಕ್ಕಿಂತ ಹೆಚ್ಚು ಬಾರಿ ಜನರ ಓಡಾಟವಿರುವ ಅಥವಾ ಒಂದೇ ಬಾರಿಗೆ 100 ಮಂದಿಯ ಓಡಾಟವಿರುವ ಕಟ್ಟಡ/ಮಳಿಗೆಗಳಲ್ಲಿ ಸಿಸಿ ಕೆಮರಾ ಕಡ್ಡಾಯಗೊಳಿಸಲಾಗಿದ್ದು ಈ ರೀತಿ ಅಳವಡಿಕೆಯಾಗಿರುವ, ಸಾರ್ವಜನಿಕ ಸ್ಥಳದ ಪಕ್ಕ ಇರುವ ಕೆಮರಾಗಳನ್ನು ಜಿಯೋ ಟ್ಯಾಗಿಂಗ್‌ಗೆ ಒಳಪಡಿಸಲಾಗುತ್ತಿದೆ. ಏನಿದು ಜಿಯೋ ಟ್ಯಾಗಿಂಗ್‌?ಜಿಯೋ ಟ್ಯಾಗಿಂಗ್‌ ಎಂಬುದು ಪೊಲೀಸ್‌ ಇಲಾಖೆಯ ಆಯಪ್‌ವೊಂದರಡಿ ಕಾರ್ಯಾಚರಿಸುತ್ತದೆ. ಇದು ಜಿಐಎಸ್‌ (ಜಿಯೋಗ್ರಾಫಿಕ್‌ ಇನ್‌ಫಾರ್ಮೇಷನ್‌ ಸಿಸ್ಟಂ) ಆಗಿದ್ದು ಸಿಸಿ ಕೆಮರಾಗಳು ನಿರ್ದಿಷ್ಟವಾಗಿ ಯಾವ ಕಟ್ಟಡದ, ಯಾವ ಭಾಗದಲ್ಲಿವೆ, ಯಾವ ಕಡೆ ಮುಖ ಮಾಡಿವೆ, ಅವುಗಳ ಸ್ಟೋರೇಜ್‌ ಸಾಮರ್ಥ್ಯ ಎಷ್ಟು ಎಂಬಿತ್ಯಾದಿ ಸ್ಪಷ್ಟ ಮಾಹಿತಿಗಳು ಆಯಪ್‌ನಲ್ಲಿ ಸಂಗ್ರಹಿಸಿ ಇಡಲಾಗುತ್ತದೆ. ಯಾವುದೇ ಸ್ಥಳದಲ್ಲಿ ಏನಾದರೂ ಅಹಿತರ ಘಟನೆ ನಡೆದರೆ ಅಲ್ಲಿರುವ ಕೆಮರಾಗಳ ಮಾಹಿತಿ ಕ್ಷಣಾರ್ಧದಲ್ಲಿ ಪೊಲೀಸರಿಗೆ ಲಭ್ಯವಾಗುತ್ತದೆ. ಅಲ್ಲದೆ…

Read More

ಮಂಗಳೂರು: ಚೀನಾ ಸೇರಿದಂತೆ ಕೆಲವು ದೇಶಗಳಲ್ಲಿ ಕೊರೋನ ರೂಪಾಂತರಿ ತಳಿಯ ಹಾವಳಿ ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮದ ಭಾಗವಾಗಿ ವಿದೇಶದಿಂದ ಆಗಮಿಸುವ ಪ್ರಯಾಣಿಕರಲ್ಲಿ ಕೋವಿಡ್ ಲಕ್ಷಣ ಕಂಡು ಬಂದಲ್ಲಿ ಅವರನ್ನು ಪ್ರತ್ಯೇಕಿಸುವ ನಿಟ್ಟಿನಲ್ಲಿ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ 25 ಹಾಸಿಗೆಯ ಐಸೊಲೇಶನ್‌ ವಾರ್ಡ್‌ ಸಿದ್ದಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ವಿದೇಶಗಳಲ್ಲಿ ಹೆಚ್ಚುತ್ತಿರುವ ಕೋವಿಡ್‌ ಪ್ರಕರಣಗಳನ್ನು ತಡೆಗಟ್ಟುವ ಸಲುವಾಗಿ ರಾಜ್ಯ ಸರಕಾರ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿದೆಯಲ್ಲದೆ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಆಗಮಿಸುವ ವಿದೇಶಿ ಪ್ರಯಾಣಿಕರನ್ನು ಕೋವಿಡ್‌ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಈ ವೇಳೆ ಕೋವಿಡ್‌ ದೃಢಪಟ್ಟರೆ ಆ ಮಾದರಿಯನ್ನು ಜಿನೋಮಿಕ್‌ ಸೀಕ್ವೆನ್ಸಿಂಗ್‌ ಲ್ಯಾಬ್‌ಗೆ ಕಳುಹಿಸಲಾಗುತ್ತದೆ. ಕೋವಿಡ್‌ ದೃಢಪಟ್ಟ ವ್ಯಕ್ತಿಗಳಿಗೆ ಐಸೊಲೇಶನ್‌ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ಸನ್ನದ್ಧವಾಗಿದೆ. ಕೋವಿಡ್‌ ಸೋಂಕನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಆರೋಗ್ಯ ಅಣಕು ಪ್ರದರ್ಶನವು ಮಂಗಳವಾರ ವೆನ್ಲಾಕ್ ಸಹಿತ ತಾಲೂಕು ಸರಕಾರಿ ಆಸ್ಪತ್ರೆಗಳಲ್ಲಿ ನಡೆಸಲಾಗಿದೆ.

Read More

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನೀಡಿರುವ ಹೇಳಿಕೆ ವಿಚಾರವಾಗಿ ಸಿ.ಟಿ.ರವಿ ಅವರು ಎತ್ತಿದ ಪ್ರಶ್ನೆ, ಸದನದಲ್ಲಿ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ನಡುವಿನ ವಾಕ್ಸಮರಕ್ಕೆ ಕಾರಣವಾಯ್ತು. ಈ ವೇಳೆ ಮಾತನಾಡಿದ ವಿಪಕ್ಷ ಉಪನಾಯಕ ಯು.ಟಿ.ಖಾದರ್, ಬೈಬಲ್, ಕುರಾನ್, ಭಗವದ್ಗೀತೆಯಲ್ಲಿ ಇನ್ನೊಬ್ಬರಿಗೆ ಅನ್ಯಾಯ ಮಾಡಬೇಕು ಎಂದು ಬರೆದಿಲ್ಲ. ತಾನು ವಾಸಿಸುವ ನೆಲದ ಕಾನೂನಿಗೆ ಗೌರವ ಕೊಡಬೇಕು ಎಂದು ಬರೆಯಲಾಗಿದೆ ಎಂದು ಯು.ಟಿ.ಖಾದರ್ ಹೇಳಿದರು. ಭಯೋತ್ಪಾದಕರು, ಅಪರಾಧಿಗಳು, ಕ್ರೈಮ್ ಮಾಡುವವರು ಎಲ್ಲ ಸಮುದಾಯದಲ್ಲಿಯೂ ಇದ್ದಾರೆ. ಅವರನ್ನು ಧರ್ಮದ ಆಧಾರದಲ್ಲಿ ಗುರುತಿಸುವುದು ದೊಡ್ಡ ತಪ್ಪು ಎಂದು ಖಾದರ್ ಅಭಿಪ್ರಾಯ ವ್ಯಕ್ತಪಡಿಸಿದರು. ಮಂಗಳೂರಿನಲ್ಲಿ ಬಾಂಬ್ ಬ್ಲಾಸ್ಟ್ ಗೆ ಬಂದಾತ ದೇವರ ದಯದಲ್ಲಿ ರಿಕ್ಷಾದಲ್ಲಿಯೇ ಬಾಂಬ್ ಸ್ಫೋಟವಾದ ಕಾರಣ ಸಿಕ್ಕಿ ಬಿದ್ದ ಎಂದು ಯು.ಟಿ.ಖಾದರ್ ಹೇಳಿದರು.

Read More