Author: main-admin

ವಿಟ್ಲ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಹಿಂಬಾಗಿಲನ್ನು ಯಾರೋ ಕಳ್ಳರು ಮುರಿದು ಒಳಪ್ರವೇಶಿಸಿ ಮನೆಯ ಗೋದ್ರೇಜನ್ನು ತೆರೆದು ಅದರಲ್ಲಿದ್ದ ನಗ-ನಗದು ಕಳವುಗೈದ ಘಟನೆ ಬಂಟ್ವಾಳ ತಾಲೂಕು, ಮಾಣಿ ಗ್ರಾಮದ ಪಲಿಕೆ ಎಂಬಲ್ಲಿ ನಡೆದಿದೆ. ಜಯರಾಜ್ ರವರು ನೀಡಿದ ದೂರಿನಂತೆ, ದಿನಾಂಕ 15-06-2024 ರಂದು ಬೆಳಿಗ್ಗೆ, ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಮಾಣಿ ಪಲಿಕೆ ಎಂಬಲ್ಲಿರುವ ಮನೆಯನ್ನು, ಜಯರಾಜ್ ತಮ್ಮ ಸುಜಯ್‌ರವರು ಭದ್ರಪಡಿಸಿ ಹೋಗಿದ್ದು, ಜಯರಾಜ್ ರವರು ಮಧ್ಯಾಹ್ನ ಮನೆಗೆ ಬಂದಾಗ, ಮನೆಯ ಹಿಂಬಾಗಿಲನ್ನು ಯಾರೋ ಕಳ್ಳರು ಮುರಿದು ಒಳಪ್ರವೇಶಿಸಿ ಮನೆಯ ಗೋದ್ರೇಜನ್ನು ತೆರೆದು ಅದರ ಲಾಕರನ್ನು ಮುರಿದು, ಅದರಲ್ಲಿದ್ದ ಜಯರಾಜ್ ರವರ ಬಾಬ್ತು 12 ಗ್ರಾಂ ತೂಕದ (ಅಂದಾಜು ಮೌಲ್ಯ 78000/-) ಚಿನ್ನದ ಚೈನ್‌ ಮತ್ತು ತಾಯಿಯ ಒಟ್ಟು 4 ಗ್ರಾಂ ತೂಕದ ಕಿವಿಯ ಆಭರಣ (ಅಂದಾಜು ಅಂದಾಜು ಮೌಲ್ಯ ಸುಮಾರು 26,000/- ರೂಪಾಯಿಗಳು) ಹಾಗೂ ಜಯರಾಜ್ ರವರ ಬಾಬ್ತು ಪಾಸ್‌ ಪೋರ್ಟ್‌ ಹಾಗೂ 15000/- ಹಣವನ್ನು ಕಳ್ಳತನ…

Read More

ಮಂಗಳೂರು : ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ‌ ಸುಳ್ಳು ಸಂದೇಶ ರವಾನಿಸುತ್ತಿರುವ ಬಗ್ಗೆ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಉದ್ಯಮಿ, ನಳಿನ್ ಆಪ್ತ ಸೀತಾರಾಮ ರೈ ಕೆದಂಬಾಡಿಗುತ್ತು ದೂರು ನೀಡಿದ್ದಾರೆ. ಅಝೀಜ್ ಹಾಗೂ ಇನ್ನಿತರರು ನಳಿನ್ ಕುಮಾರ್ ಕಟೀಲು ಅವರ ವಿರುದ್ಧ ವಾಟ್ಸ್ಆ್ಯಪ್‌ನಲ್ಲಿ ತಪ್ಪು ಸಂದೇಶ ರವಾನಿಸುತ್ತಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.‌ ಮೇ 14ರಿಂದ ವಾಟ್ಸ್ಆ್ಯಪ್‌ನಲ್ಲಿ ನಿರಂತರವಾಗಿ ನಳಿನ್ ಕುಮಾರ್ ಕಟೀಲು ವಿರುದ್ಧ ಮಾನಹಾನಿಯಾಗುವಂತೆ ಸಂದೇಶವನ್ನು ಹರಿಯಬಿಡಲಾಗಿದೆ. ಅಜೀಜ್ ಎಂಬಾತ “ಪ್ರವೀಣ್ ನೆಟ್ಟಾರ್ ಹತ್ಯೆಗೆ ಬಿಗ್ ಟ್ವಿಸ್ಟ್ – ಹಣ ನೀಡಿ ಕೊಲೆ ಮಾಡಿಸಿದ ನಳಿನ್ ಕುಮಾರ್ ಕಟೀಲು” ಎಂಬಿತ್ಯಾದಿ ಸಂದೇಶಗಳನ್ನು ರವಾನಿಸುತ್ತಿದ್ದಾನೆ. ಪ್ರಸಾದ್ ಕೆ. ಎಂಬಾತನಿಂದಲೂ ಈ ವಿಚಾರದ ಬಗ್ಗೆ ಪ್ರಚಾರವಾಗುತ್ತಿದೆ. ನಳಿನ್ ಕುಮಾರ್ ಕಟೀಲು ಅವರ ತೇಜೋವಧೆ ಮಾಡಲು ಪ್ರಯತ್ನಿಸುತ್ತಿರುವುದು ಕಂಡು ಬರುತ್ತಿದೆ. ಇದು ಅವರ ಅಭಿಮಾನಿ ಬಳಗಕ್ಕೆ ತುಂಬಾ ನೋವುಂಟಾಗಿರುತ್ತದೆ. ಈ ಬಗ್ಗೆ ತಕ್ಷಣ ಪ್ರಕರಣ ದಾಖಲಿಸಿ ಮಾನಹಾನಿಕರ ಸಂದೇಶಗಳನ್ನು ರವಾನಿಸುವವರ…

Read More

ಪುತ್ತೂರು; ವಿವಾಹಿತ ಮಹಿಳೆ ನಾಪತ್ತೆಯಾಗಿರುವ ಘಟನೆ ಕಡಬ ತಾಲೂಕಿನ ಸರ್ವೆ ಗ್ರಾಮದ ಭಕ್ತಕೋಡಿಯ ಹರೀಶ್ ಎಂಬವರ ಪತ್ನಿ ದೀಪಿಕಾ (23) ನಾಪತ್ತೆಯಾದವರು. ಇನ್ನು ದೀಪಿಕಾ ನಾಪತ್ತೆಯಾಗುವ ವೇಳೆ ಮದುವೆ ವೇಳೆ ಪತಿ ಕಟ್ಟಿದ ತಾಳಿಯನ್ನು ಮನೆಯಲ್ಲೇ ಬಿಚ್ಚಿಟ್ಟಿದ್ದಾರೆ. ಜೂನ್ 13 ರಂದು ದೀಪಿಕಾ ನಾಪತ್ತೆಯಾಗಿದ್ದಾರೆ. ಇನ್ನು ಮೂರು ತಿಂಗಳ ಹಿಂದೆ ದೀಪಿಕಾ ಕಡಬದ ಪ್ರಶಾಂತ್ ಎಂಬವರ ಜೊತೆ ಹೋಗಿದ್ದರು. ಬಳಿಕ ಮಂಗಳೂರಿನಲ್ಲಿ ಸಿಕ್ಕಿ ಬಿದ್ದಿದ್ದರು. ಇದೀಗ ಮತ್ತೆ ಅವರೊಂದಿಗೆ ಹೋಗಿರಬಹುದು ಎಂದು  ಪತಿ ಹರೀಶ್ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ದೀಪಿಕಾ ಪತಿ ಹರೀಶ್ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಮೆಯಲ್ಲಿ ದೂರು ದಾಖಲಿಸಿದ್ದಾರೆ.

Read More

ತ್ರಿಶೂರ್: ಶನಿವಾರ ಬೆಳಗ್ಗೆ ತ್ರಿಶೂರ್ ಹಾಗೂ ಪಾಲಕ್ಕಾಡ್ ಜಿಲ್ಲೆಯ ಕೆಲವು ಭಾಗಗಳಲ್ಲಿ ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆಯ ಲಘು ಭೂಕಂಪನ ಸಂಭವಿಸಿದೆ ಎಂದು ಅಧಿಕೃತ ಮೂಲಗಳು ಮಾಹಿತಿ ನೀಡಿವೆ. ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರದ ಪ್ರಕಾರ, ಈ ಪ್ರಾಂತ್ಯಗಳಲ್ಲಿ ಇಂದು ಬೆಳಗ್ಗೆ 8.15ರ ಸುಮಾರಿಗೆ 3.0 ತೀವ್ರತೆಯ ಭೂಕಂಪನವು ದಾಖಲಾಗಿದೆ. ನಾಲ್ಕು ಸೆಕೆಂಡ್ ಗಳ ಕಾಲ ನಡುಕದ ಅನುಭವವಾಗಿದೆಯಾದರೂ, ತಕ್ಷಣಕ್ಕೆ ಯಾವುದೇ ಹಾನಿ ಅಥವಾ ಗಾಯದ ವರದಿಗಳಾಗಿಲ್ಲ ಎಂದು ತ್ರಿಶೂರ್ ಜಿಲ್ಲಾಡಳಿತವು ತಿಳಿಸಿದೆ ಎಂದು PTI ಸುದ್ದಿ ಸಂಸ್ಥೆ ವರದಿ ಮಾಡಿದೆ. ಇದೇ ವೇಳೆ, ಕುನ್ನಂಕುಲಂ, ಎರುಮಪ್ಪೆಟ್ಟಿ ಹಾಗೂ ಪಝಂಜಿ ಪ್ರಾಂತ್ಯಗಳು ಹಾಗೂ ಪಾಲಕ್ಕಾಡ್ ಜಿಲ್ಲೆಯ ಭಾಗಗಳಲ್ಲಿ ನಡುಕದ ಅನುಭವವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಕುರಿತು ಮತ್ತಷ್ಟು ಅಧ್ಯಯನ ನಡೆಸಲು ರಾಜ್ಯ ಭೌಗೋಳಿಕ ಇಲಾಖೆ ಹಾಗೂ ಇನ್ನಿತರರರು ಭೂಕಂಪ ಸಂಭವಿಸಿದ ಪ್ರಾಂತ್ಯಗಳಿಗೆ ಧಾವಿಸಿದ್ದಾರೆ ಎಂದು ಹೇಳಲಾಗಿದೆ.

Read More

ಮಂಗಳೂರು: ನಗರ ಸಮೀಪ ಬಜಪೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಕೆಲವು ದಿನಗಳಲ್ಲಿ ಬಜಪೆ, ಪೆರ್ಮುದೆ, ಕೈಕಂಬ, ಸೂರಲ್ಪಾಡಿ, ಕಂದಾವರ ಮುಂತಾದ ಕಡೆಗಳಲ್ಲಿ ಸಣ್ಣ ಪುಟ್ಟ ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರನ್ನು ಪತ್ತೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಅವರಿಂದ ಕಳವು ಮಾಡಿದ್ದ ಒಂದು ಪಲ್ಸರ್‌ ಬೈಕ್‌ ಹಾಗೂ ಪೆರ್ಮುದೆಯ ಮನೆಯಲ್ಲಿ ಕಳ್ಳತನ ಮಾಡಿದ್ದ 30 ಸಾವಿರ ರೂಪಾಯಿ ಮೌಲ್ಯದ ಬೆಳ್ಳಿಯ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಇಬ್ಬರು ಬಾಲಕರನ್ನು ಬಾಲ ನ್ಯಾಯ ಮಂಡಳಿಯ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. ಕಳವು ಮಾಡಿದವರ ಪತ್ತೆ ಕಾರ್ಯದಲ್ಲಿ ಬಜಪೆ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ನಂದೇಶ್‌ ಬಿ. ಕುಂಬಾರ್‌ ಅವರ ನೇತೃತ್ವದ ತಂಡ ಯಶಸ್ವಿಯಾಗಿದೆ.

Read More

ಉಡುಪಿ: ಎರಡೇ ದಿನ ಅಂತರದಲ್ಲಿ ಉಡುಪಿಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಉಡುಪಿ ಮಣಿಪಾಲ ಮಧ್ಯದ ಇಂದ್ರಾಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ತಡರಾತ್ರಿ ಸಂಭವಿಸಿದೆ. ಮಣಿಪಾಲದಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರು ಇಂದ್ರಾಳಿಯಲ್ಲಿ ರಸ್ತೆ ವಿಭಜಕವಾಗಿ ಇರಿಸಲಾಗಿದ್ದ ಕಲ್ಲುಗಳಿಗೆ ಡಿಕ್ಕಿ ಹೊಡೆದು ಪಲ್ಟಿಯಾಯ್ತು.ಪರಿಣಾಮವಾಗಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡರು. ಕಾರು ಪಲ್ಟಿಯಾಗುವ ಸಂದರ್ಭ ದೊಡ್ಡ ಕಲ್ಲೊಂದು ಬೈಕಿನತ್ತ ಚಿಮ್ಮಿ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದ ಓರ್ವ ಪ್ರಯಾಣಿಕನ ಸ್ಥಿತಿ ಚಿಂತಾ ಜನಕವಾಗಿದೆ ಎಂದು ತಿಳಿದುಬಂದಿದೆ. ರಾಷ್ಟ್ರೀಯ ಹೆದ್ದಾರಿ ಇಂದ್ರಾಳಿಯಲ್ಲಿ ರಸ್ತೆ ಮಧ್ಯೆ ವಿಭಜಕವಾಗಿ ಕಲ್ಲುಗಳನ್ನು ಇರಿಸಲಾಗಿದೆ. ಇತ್ತೀಚೆಗೆ ಆ ಕಲ್ಲುಗಳನ್ನು ಎಲ್ಲೆಂದರಲ್ಲಿ ಇರಿಸಲಾಗಿತ್ತು. ಇದರಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಟ್ರಾಫಿಕ್ ಪೊಲೀಸ್ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಈ ನಿರ್ಲಕ್ಷಕ್ಕೆ ಜನರು ಅಕ್ರೋಶ ವ್ಯಕ್ತಪಡಿಸಿದ್ದಾರೆ.

Read More

ಕಾರ್ಕಳ : ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶಕ್ಕೆ ಹೋಗಿ ತಲೆಮರೆಸಿಕೊಂಡಿದ್ದ ದನ ಕಳ್ಳತನ ಪ್ರಕರಣದ ಆರೋಪಿ ಕುಕ್ಕುಂದೂರು ಜಯಂತಿ ನಗರ ನಾಲ್ಕನೇ ಕ್ರಾಸ್‌ನ ನಿವಾಸಿ ಮೊಹಮ್ಮದ್ ರಫೀಕ್ (33) ಎಂಬಾತನನ್ನು ಕಾರ್ಕಳ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 2021ರಲ್ಲಿ ವಿದೇಶಕ್ಕೆ ಪಲಾಯನ ಮಾಡಿದ್ದ ರಫೀಕ್ ವಿರುದ್ಧ ನ್ಯಾಯಾಲಯ ಬಂಧನ ವಾರಂಟ್ ಜಾರಿ ಮಾಡಿತ್ತು. ಇತ್ತೀಚೆಗೆ ಈತವಿದೇಶದಿಂದ ಬಂದಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಪೊಲೀಸ್ ನಿರೀಕ್ಷಕ ನಾಗೇಶ್ ಕೆ. ಹಾಗೂ ಉಪನಿರೀಕ್ಷಕಧನಂಜಯ್ ಮತ್ತು ಲೋಲಾಕ್ಷ ಅವರ ಮಾರ್ಗದರ್ಶನದಲ್ಲಿ ಕಾರ್ಕಳ ನಗರ ಠಾಣೆ ಸಿಬ್ಬಂದಿ ರಮೇಶ್ ಹಾಗೂ ವಿಶ್ವಜಿತ್ ಬ್ರಹ್ಮಾವರಪೊಲೀಸರ ಸಹಾಯದೊಂದಿಗೆ ಬ್ರಹ್ಮಾವರ ಬೈಕಾಡಿಯಿಂದ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ 14ದಿನಗಳವರೆಗೆ ನ್ಯಾಯಾಂಗ ಬಂಧಿನ ವಿಧಿಸಿದೆ.ರಫೀಕ್ ವಿರುದ್ಧ ಹೆಬ್ರಿ ಠಾಣೆಯಲ್ಲಿ 1, ಬಜ್ಪೆ ಠಾಣೆಯಲ್ಲಿ 2 ದನ ಕಳ್ಳತನ ಪ್ರಕರಣ ಹಾಗೂ ಚಿಕ್ಕಮಗಳೂರಿನ ಲಿಂಗದಹಳ್ಳಿ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.

Read More

ಶಿರ್ವ : ಕಾರು ಡಿಕ್ಕಿ ಹೊಡೆದು ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ  ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಳ್ಳೆ ಗ್ರಾಮದ ಪಾಜಕ ಕ್ಷೇತ್ರದ ದ್ವಾರದ ಬಳಿ ಸಂಭವಿಸಿದೆ. ಮೃತ ಮಹಿಳೆಯನ್ನು ಸುರೇಶ್‌ ಎಂಬವರ ಅಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಆಗ್ನೇಸ್‌ ನೊರೊನ್ಹಾ (76) ಎಂದು ಗುರುತಿಸಲಾಗಿದೆ.  ಆಗ್ನೇಸ್‌ ನೊರೊನ್ಹಾ  ತಮ್ಮ ಅಕ್ಕನ ಮಗಳಾದ ಜೆಸಿಂತಾ ಮೆನೇಜಸ್‌ ಅವರೊಂದಿಗೆ ಪಡುಬೆಳ್ಳೆಯಿಂದ ಸುಬಾಸ್‌ ನಗರಕ್ಕೆ ಹೋಗುತ್ತಿರುವಾಗ ಎದುರಿನಿಂದ ಪಡುಬೆಳ್ಳೆ ಕಡೆಗೆ ಹೋಗುತ್ತಿದ್ದ ಕಾರಿನ ಚಾಲಕ ಮನೋಜ್ ಎಂಬಾತ ವಾಹನವನ್ನು ಓವರ್‌ಟೇಕ್‌ ಮಾಡುವ ಭರದಲ್ಲಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಕಾರನ್ನು ಚಲಾಯಿಸಿಕೊಂಡು ಬಂದು ಬೆಳ್ಳೆ ಗ್ರಾಮದ ಪಾಜಕ ಕ್ಷೇತ್ರದ ದ್ವಾರದ ಬಳಿ ಅಟೋ ರಿಕ್ಷಾಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದ್ದಾನೆ. ಅಪಘಾತದ ಪರಿಣಾಮ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಆಗ್ನೇಸ್‌ ನೊರೊನ್ಹಾ ರಿಕ್ಷಾದಿಂದ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು ಉಡುಪಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಇತರೆ ಪ್ರಯಾಣಿಕರೂ ಹಾಗೂ ಚಾಲಕ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ಈ ಬಗ್ಗೆ ಶಿರ್ವಾ ಪೊಲೀಸ್‌ ಠಾಣೆಯಲ್ಲಿ…

Read More

ಉಪ್ಪಿನಂಗಡಿ: ಸೈಬರ್ ಕ್ರೈಮ್ ನಡಿ ಹಲವು ವಂಚನಾ ಜಾಲ ಕಾರ್ಯಾಚರಿಸುತ್ತಿದೆ. ಈಗ ‘ಮೀಶೋ’ ಹೆಸರಲ್ಲಿ ವಂಚನಾ ಜಾಲವೊಂದು ಇದೇ ಗುಂಪಿಗೆ ಸೇರಿಕೊಂಡಿದೆ. ಈ ಜಾಲವು ಈಗ ಉಪ್ಪಿನಂಗಡಿ ಸಮೀಪದ 34 ನೆಕ್ಕಿಲಾಡಿ ನಿವಾಸಿ, ಉದ್ಯಮಿ ಜಿ.ಎಂ. ಮುಸ್ತಾಫ ಅವರಿಗೂ ಜಾಲ ಬೀಸಿದೆ. ಆದರೆ ಅವರು ಜಾಗೃತರಾಗಿದ್ದರಿಂದಾಗಿ ಅಪಾಯದಿಂದ ತಪ್ಪಿಸಿಕೊಂಡರು. ಈ ಬಗ್ಗೆ ವಿವರಿಸಿರುವ ಮುಸ್ತಾಫ, ಎಲ್ಲರೂ ಇಂತಹ ವಂಚನಾ ಜಾಲಗಳ ಬಗ್ಗೆ ಜಾಗೃತರಾಗುವಂತೆ ಎಚ್ಚರಿಸಿದ್ದಾರೆ. ನನ್ನ ಪತ್ನಿಯ ಹೆಸರಿನಲ್ಲಿ ರಿಜಿಸ್ಟರ್ಡ್ ಪೋಸ್ಟ್ ವೊಂದು ಮನೆಗೆ ಬಂದಿತು. ಅದನ್ನು ತೆರೆದು ನೋಡಿದಾಗ’ಮೀಶೋ’ಸಂಸ್ಥೆಎಂಬ ಉಲ್ಲೇಖವಿತ್ತು. ಸಂಸ್ಥೆಯ 8ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ಕಂಪೆನಿಯು ನೋಂದಾಯಿತ ಗ್ರಾಹಕರಿಗೆ ಲಕ್ಕಿ ಡ್ರಾ ಸ್ಪರ್ಧೆಯನ್ನು ಆಯೋಜಿಸಿದ್ದು, ಅತ್ಯಾಕರ್ಷಕ 20 ಬಹುಮಾನಗಳಿವೆ. ಅವುಗಳಲ್ಲಿ ಮೂರು ದೊಡ್ಡ ಬಹುಮಾನಗಳಾಗಿದ್ದು, ಉಳಿದವು ಸಣ್ಣ ಬಹುಮಾನಗಳು. ನಿಮಗೆ ಕಳುಹಿಸಿದ ಕಾರ್ಡ್ ಅನ್ನು ಸ್ಕಾಚ್ ಮಾಡಿ ನೋಡಿ. ನೀವು ಬಹುಮಾನ ಗೆದ್ದರೆ ಪರಿಶೀಲನೆ ಪ್ರಕ್ರಿಯೆಗಾಗಿ ನೀವು ಕೆಲವು ದಾಖಲೆಗಳನ್ನು ಅದರಲ್ಲಿ ಕೊಟ್ಟಿರುವ ನಂಬರ್ಗೆಗೆ ಕಳುಹಿಸಬೇಕು ಎಂದು…

Read More

ನವದೆಹಲಿ: ನೀವು ಮನೆ ಖರೀದಿಸಲು ಬಯಸಿದರೆ ಮತ್ತು ಪ್ರಧಾನ್ ಮಂತ್ರಿ ಆವಾಸ್ ಯೋಜನೆಯ  ಲಾಭವನ್ನು ಪಡೆಯಲು ಬಯಸಿದರೆ ಅದು ತುಂಬಾ ಸುಲಭ. ಇದಕ್ಕಾಗಿ ನೀವು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಸರ್ಕಾರಿ ಯೋಜನೆಯಿಂದ ನೀವು ಅನೇಕ ಪ್ರಯೋಜನಗಳನ್ನು ಪಡೆಯುತ್ತೀರಿ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ನಿಮಗೆ ಆಧಾರ್ ಸಂಖ್ಯೆಯೂ ಅತ್ಯಗತ್ಯ. ಅಲ್ಲದೆ ಅರ್ಜಿದಾರನು ಸಂಪೂರ್ಣ ಮಾಹಿತಿಯನ್ನು ನಿಖರವಾಗಿ ನೀಡಬೇಕಾಗುತ್ತದೆ. ಎಲ್ಲ ಬಡವರಿಗೆ ಕೈಗೆಟುಕುವ ದರದಲ್ಲಿ ವಸತಿ ಒದಗಿಸುವ ಉದ್ದೇಶದಿಂದ ಕೇಂದ್ರ ಸರಕಾರ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ) ಆರಂಭಿಸಿದೆ. ಈ ಯೋಜನೆಯನ್ನು 2015ರ ಜೂನ್‌ 1ರಂದು ಮೊದಲ ಬಾರಿಗೆ ಪರಿಚಯಿಸಲಾಯಿತು. ಈ ಯೋಜನೆಯಡಿ ವಾರ್ಷಿಕ ಶೇ.6.50ರ ಬಡ್ಡಿದರದಲ್ಲಿ ಸಾಲ ಲಭ್ಯವಾಗುತ್ತದೆ. PMAY ಯೋಜನೆಯಡಿ ಪ್ರಯೋಜನಗಳೇನು? • PMAY ಯೋಜನೆಯಡಿ, ಎಲ್ಲಾ ಫಲಾನುಭವಿಗಳಿಗೆ ಕೇವಲ ವಾರ್ಷಿಕ ಶೇ. 6.50 ಬಡ್ಡಿದರದಲ್ಲಿ 20 ವರ್ಷಗಳವರೆಗೆ ವಸತಿ ಸಾಲ ನೀಡಲಾಗುತ್ತದೆ. • ನೆಲ ಮಹಡಿಯಲ್ಲಿರುವ ಮನೆಗಳು ಅಂಗವಿಕಲರಿಗೆ ಮತ್ತು ಹಿರಿಯ ನಾಗರಿಕರಿಗೆ ಮಾತ್ರ ಮೀಸಲಾಗಿದೆ •…

Read More